Tag: ನಿರೀಕ್ಷಣಾ ಜಾಮೀನು

  • ಸ್ವಾಮಿ ಚೈತನ್ಯಾನಂದ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

    ಸ್ವಾಮಿ ಚೈತನ್ಯಾನಂದ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

    ನವದೆಹಲಿ: ಆರ್ಥಿಕ ಅಕ್ರಮಗಳ ಆರೋಪದ ತನಿಖೆ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ‌ (Swami Chaitanyanand Saraswati) ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

    ತನಿಖೆಯ ಈ ಹಂತದಲ್ಲಿ ಆರೋಪಗಳ ಸ್ವರೂಪವು ಕಸ್ಟಡಿ ವಿಚಾರಣೆಗೆ ಅರ್ಹವಾಗಿದೆ ಎಂದು ಹೇಳಿದ ಪಟಿಯಾಲ ಹೌಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಇದನ್ನೂ ಓದಿ: IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!

    ವಂಚನೆ, ಫೋರ್ಜರಿ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವನ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ದೆಹಲಿ ಕೋರ್ಟ್‌ನಿಂದ ಆದೇಶ ಹೊರಬಿದ್ದಿದೆ.

    ನಕಲಿ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಕಲಿಯಾಗಿ ಬಳಸಿ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳ ಅಡಿಯಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶಾರದಾ ಪೀಠದ ಆಸ್ತಿಗಳನ್ನು ಆರ್ಥಿಕ ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಮೂಲಕ ಸರಸ್ವತಿ ಸಂಸ್ಥೆಯ ಮೇಲಿನ ತನ್ನ ನಿಯಂತ್ರಣವನ್ನು ಬಿಗಿಗೊಳಿಸಿದ್ದಾರೆ ಎಂದು ದೆಹಲಿ ಪೊಲೀಸರು ತಮ್ಮ ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ

    ಇಂದಿನ ನಿರೀಕ್ಷಣಾ ಜಾಮೀನು ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದ್ದಾಗಿದೆ. ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಅವರ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ಕೂಡ ದಾಖಲಾಗಿದೆ.

  • ಅತ್ಯಾಚಾರ ಆರೋಪ ಕೇಸ್: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಅತ್ಯಾಚಾರ ಆರೋಪ ಕೇಸ್: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಬೀದರ್: ಅತ್ಯಾಚಾರ ಆರೋಪ ಹೊತ್ತಿರುವ ಬಿಜೆಪಿ (BJP) ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರ ಪ್ರತೀಕ್ ಚೌಹಾಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.

    ಚೌಹಾಣ್ ಪುತ್ರನ ಪರ ವಕೀಲ ಎಂ.ಎಂ.ಗೋಡ್ಬಲೆಯವರು ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ (ಜು.29) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್ ಗುರುವಾರಕ್ಕೆ (ಜು.31) ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಜಾಮೀನು ನೀಡದಂತೆ ಕೋರ್ಟ್‌ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.ಇದನ್ನೂ ಓದಿ: ಅತ್ಯಾಚಾರ ಆರೋಪ ಕೇಸ್;‌ ಜಾಮೀನಿಗಾಗಿ ಬಿಜೆಪಿ ಶಾಸಕ ಪ್ರಭು ಚೌಹಾಣ್‌ ಪುತ್ರ ಕೋರ್ಟ್‌ಗೆ ಅರ್ಜಿ

    ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಚೌಹಾಣ್ ಪುತ್ರನಿಗೆ ಬಂಧನ ಭೀತಿ ಹೆಚ್ಚಾಗಿದೆ. ಈಗಾಗಲೇ ಬೀದರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

    ಬಿಜೆಪಿ ಶಾಸಕರ ಪುತ್ರನ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಕೇಸ್ ದಾಖಲಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ

  • ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

    ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

    – ಕೊಲೆ ಮಾಡಿಲ್ವಲ್ಲಾ ಎಂದ ಸುಪ್ರೀಂ ಕೋರ್ಟ್ ನ್ಯಾ. ಬಿ.ವಿ.ನಾಗರತ್ನ

    ನವದೆಹಲಿ: 2022ರ ಐಎಎಸ್ ಹುದ್ದೆಗೆ ಅರ್ಹತೆ ಪಡೆಯಲು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿವಾದಿತ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್‌ಗೆ (Puja Khedkar) ಸುಪ್ರೀಂ ಕೋರ್ಟ್ (Supreme Court) ನಿರೀಕ್ಷಣಾ ಜಾಮೀನು ಮಂಜೂರು (Anticipatory bail) ಮಾಡಿದೆ.

    2022ರ ನಾಗರಿಕ ಸೇವೆಗಳ ಪ್ರವೇಶ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿ ಮತ್ತು ಒಬಿಸಿ ಕೋಟಾವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಪೂಜಾ ಖೇಡ್ಕರ್ ಮಾಜಿ ಐಎಎಸ್ ತರಬೇತಿ ಅಧಿಕಾರಿ, ಆಕೆ ಮಾದಕವಸ್ತು ಅಥವಾ ಭಯೋತ್ಪಾದನೆ ಕೇಸ್‌ನಲ್ಲಿ ಸಿಲುಕಿಕೊಂಡಿಲ್ಲ. ಅವರಿಗೆ ಹೈಕೋರ್ಟ್ ಜಾಮೀನು ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ: 50ಕ್ಕೂ ಹೆಚ್ಚು ಕೊಲೆ ಮಾಡಿ ಪರಾರಿಯಾಗಿದ್ದ ಸಿರಿಯಲ್‌ ಕಿಲ್ಲರ್‌ ʻಡಾಕ್ಟರ್‌ ಡೆತ್‌ʼ ಅರೆಸ್ಟ್‌!

    ಆದರೆ ಸುಪ್ರೀಂ ಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನನ್ನು ದೆಹಲಿ ಪೊಲೀಸರು ತೀವ್ರವಾಗಿ ವಿರೋಧಿಸಿದ್ದು, ಆರೋಪಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನೀವು ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿ ಈ ಪ್ರಕರಣದಿಂದಾಗಿ ಎಲ್ಲವನ್ನೂ ಕಳೆದುಕೊಂಡಿದ್ದಾಳೆ. ಆಕೆಗೆ ಎಲ್ಲಿಯೂ ಕೆಲಸ ಸಿಗುವುದಿಲ್ಲ. ಆದರೆ, ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ತಿಳಿಸಿತು.

    ಏನಿದು ಪ್ರಕರಣ?
    ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆ ಬರೆದಿದ್ದ ಖೇಡ್ಕರ್, ತಮ್ಮ ಕುಟುಂಬದ ಆದಾಯದ ಸ್ಥಿತಿ ಮತ್ತು ಇತರ ವಿವರಗಳನ್ನು ಸುಳ್ಳು ಮತ್ತು ತಪ್ಪಾಗಿ ನೀಡಿದ ಹಿನ್ನೆಲೆ ಆಕೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ದಾಖಲೆಗಳನ್ನು ನಕಲಿ ಮಾಡಿದ ಆರೋಪದ ಮೇಲೆ ಯುಪಿಎಸ್‌ಸಿ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಇನ್ಮುಂದೆ ಆಕೆಗೆ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗದಂತೆ ನಿರ್ಬಂಧ ವಿಧಿಸಿತು. ಒಂದು ತಿಂಗಳ ಬಳಿಕ ಕೇಂದ್ರ ಸರ್ಕಾರ ಆಕೆಯನ್ನು ಕರ್ತವ್ಯದಿಂದ ವಜಾ ಮಾಡಿತ್ತು.ಇದನ್ನೂ ಓದಿ: ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ

  • ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

    ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

    ಬೆಂಗಳೂರು: ಕೆ.ಆರ್‌. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ (Bhavani Revanna) ಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠವು, ಭವಾನಿ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ. ಇದನ್ನೂ ಓದಿ: ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ – ಕೋರ್ಟ್‌ ಮುಂದೆ ಹಾಜರು

    85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

    ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ಪೀಠವು ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು. ಇದನ್ನೂ ಓದಿ: ದರ್ಶನ್‌ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ

  • ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

    ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

    ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ (Anticipatory Bail) ಸಲ್ಲಿಸಿದ್ದಾರೆ.

    ಪ್ರಜ್ವಲ್ ಪರ ವಕೀಲ ಅರುಣ್ ಅವರು ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ಮೂಲಕ ಎಫ್‍ಐಆರ್ ದಾಖಲಾದ ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಸಿಐಡಿ ಕ್ರೈಂ ನಂ 20ರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಮೂರು ಅತ್ಯಾಚಾರ ಪ್ರಕರಣಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಜೆ ಪ್ರಜ್ವಲ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮುಂದೆ ಮನವಿ ಮಾಡಿದರು. ಈ ಮನವಿ ತಿರಸ್ಕರಿಸಿದ ಕೋರ್ಟ್, ಮೇ 31 ವಿಚಾರಣೆ  ನಿಗದಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್‌ ಜೊತೆ ಆಪ್‌ ಮದುವೆ ಮಾಡಿಕೊಂಡಿಲ್ಲ: INDIA ಒಕ್ಕೂಟದಿಂದ ಹೊರಬರ್ತಾರಾ ಕೇಜ್ರಿವಾಲ್‌?

    ಸೋಮವಾರ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ (Prajwal Revanna) ಕುಟುಂಬ ಜಾಗೂ ರಾಜ್ಯದ ಜನತೆಯ ಮುಂದೆ ಕ್ಷಮೆಯಾಚಿಸಿದ್ದರು. ಅಲ್ಲದೇ ಶುಕ್ರವಾರ ಎಸ್‍ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು.

  • ನಿರೀಕ್ಷಣಾ ಜಾಮೀನು ನಿರಾಕರಣೆ : ನಟಿ ರಾಖಿಗೆ ಸಂಕಷ್ಟ

    ನಿರೀಕ್ಷಣಾ ಜಾಮೀನು ನಿರಾಕರಣೆ : ನಟಿ ರಾಖಿಗೆ ಸಂಕಷ್ಟ

    ಅಶ್ಲೀಲ ವಿಡಿಯೋ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant)ಗೆ ಮುಂಬೈ ನ್ಯಾಯಾಲಯವು ನಿರೀಕ್ಷಣಾ ಜಾಮೀನು (Anticipatory Bail) ನೀಡಲು ನಿರಾಕರಿಸಿದೆ. ಈ ಹಿಂದೆ ತಮ್ಮ ಮಾಜಿಪತಿ ಅನಿಲ್ ದುರಾನಿ (Anil Durrani) ಅವರ ಅಶ್ಲೀಲ ವಿಡಿಯೋವನ್ನು ರಾಕಿ ಸೋಷಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡಿದ್ದರು. ಹಾಗಾಗಿ ದುರಾನಿ ಕೋರ್ಟ್ ಮೆಟ್ಟಿಲು ಏರಿದ್ದರು.

    ಮುಂಬೈಯ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಸ್ವತಃ ಮಾಜಿಪತ್ನಿಯ ವಿರುದ್ಧವೇ ದುರಾನಿ ದೂರು ನೀಡಿದ್ದರು. ತಮ್ಮ ಖಾಸಗಿ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಮಾನಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

     

    ದೂರು ದಾಖಲಾಗುತ್ತಿದ್ದಂತೆಯೇ ರಾಖಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶ್ರೀಕಾಂತ್ ವೈ ಭೋಂಸ್ಲೆ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ರಾಖಿ ಬಿಡುಗಡೆ ಮಾಡಿರುವ ವಿಡಿಯೋ ಅಶ್ಲೀಲವಾಗಿವೆ ಎಂದು ಕೋರ್ಟ್ ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟಿದೆ. ಹಾಗಾಗಿ ರಾಖಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

  • ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ – ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

    ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ – ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

    ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ಪ್ರಕರಣದ ತುರ್ತು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಸೋಮವಾರ ಹೈಕೋರ್ಟ್‌ಗೆ ವಿರೂಪಾಕ್ಷಪ್ಪ ಮನವಿ ಮಾಡಿಕೊಂಡಿದ್ದರು. ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.

    5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೇ ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    48 ಗಂಟೆಗಳ ಒಳಗೆ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿದೆ. ಹೀಗಾಗಿ ವಿರೂಪಾಕ್ಷಪ್ಪ ಗುರುವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

  • ಸಂಜಯ್ ರಾವತ್‌ಗೆ ಬೆಳಗಾವಿ ಕೋರ್ಟ್‌ನಿಂದ ಜಾಮೀನು ಮಂಜೂರು

    ಸಂಜಯ್ ರಾವತ್‌ಗೆ ಬೆಳಗಾವಿ ಕೋರ್ಟ್‌ನಿಂದ ಜಾಮೀನು ಮಂಜೂರು

    ಬೆಳಗಾವಿ: ಶಿವಸೇನೆ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ (Sanjay Raut) ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ (Belagavi Court) ನಿರೀಕ್ಷಣಾ ಜಾಮೀನು (Bail) ಮಂಜೂರಾಗಿದಾಗಿದೆ.

    50 ಸಾವಿರ ರೂ. ಬಾಂಡ್ ನಿಗದಿತ ಸಮಯದಲ್ಲಿ ಕೋರ್ಟ್‌ಗೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.

    ನಗರದಲ್ಲಿ 2018ರ ಮೇ 12 ರಂದು ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸಂಜಯ್ ರಾವತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಇತ್ತು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು ದೂರು ದಾಖಲಿಸಿದ್ದರು. ಇದನ್ನೂ ಓದಿ: ಮತ್ತೆ ರಮೇಶ್ ಜಾರಕಿಹೊಳಿ ದೆಹಲಿಗೆ ದಂಡಯಾತ್ರೆ – ಸಿಬಿಐ ತನಿಖೆಗೆ ತೀವ್ರ ಒತ್ತಾಯ

    2 ತಿಂಗಳ ಹಿಂದಷ್ಟೇ ಸಂಜಯ್ ರಾವತ್‌ಗೆ ಬೆಳಗಾವಿಯ 4ನೇ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಡಿಸೆಂಬರ್ 1ಕ್ಕೆ ಕೋರ್ಟ್‌ಗೆ ಹಾಜರಾಗಿ ಸಂಜಯ್ ರಾವತ್ ಪರ ವಕೀಲರು ಸಮಯ ಕೇಳಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಶ್ಲೀಲ ವೀಡಿಯೋ ಪ್ರಕರಣ: ಶಿಲ್ಪಾ ಶೆಟ್ಟಿ ಪತಿಗೆ ನಿರೀಕ್ಷಣಾ ಜಾಮೀನು ಮಂಜೂರು

    ಅಶ್ಲೀಲ ವೀಡಿಯೋ ಪ್ರಕರಣ: ಶಿಲ್ಪಾ ಶೆಟ್ಟಿ ಪತಿಗೆ ನಿರೀಕ್ಷಣಾ ಜಾಮೀನು ಮಂಜೂರು

    ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮೇಲೆ ಅಶ್ಲೀಲ ವೀಡಿಯೋ ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ದಾಖಲಾಗಿತ್ತು. ತಮಗೆ ನಿರೀಕ್ಷಣಾ ಜಾಮೀನು ಸಿಗುವತನಕ ಮುಖಮುಚ್ಚಿಕೊಂಡೇ ಓಡಾಡುವುದಾಗಿ ಶಪಥ ಮಾಡಿದ್ದರು. ಕೊನೆಗೂ ಇಂದು ಸುಪ್ರೀಂ ಕೋರ್ಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕೇವಲ ರಾಜ್ ಕುಂದ್ರಾಗೆ ಮಾತ್ರವಲ್ಲ, ನಟಿಯರಾದ ಶೆರ್ಲಿನಾ ಚೋಪ್ರಾ ಮತ್ತು ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ನಿರೀಕ್ಷಾ ಜಾಮೀನು ಮಂಜೂರು ಮಾಡಿರುವ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ ಆರೋಪಿಗಳು ತನಿಖೆಗೆ ಸಹಕರಿಸುವಂತೆ ಸೂಚಿಸಿದೆ. ಕುಂದ್ರಾ ಪರ ವಕೀಲರು ‘ಈಗಾಗಲೇ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳು ತನಿಖೆಗೂ ಸಹಕರಿಸುತ್ತಿದ್ದಾರೆ. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕುಂದ್ರಾ ಪರ ವಕೀಲರು ಮನವಿ ಮಾಡಿದ್ದರು. ಅವರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ. ಇದನ್ನೂ ಓದಿ: `ಕಾಂತಾರ’ ನೋಡಿ ತುಂಬಾ ಕಲಿತೆ: ರಿಷಬ್ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ

    ಅಶ್ಲೀಲ ವಿಡಿಯೋ ಹಂಚಿಕೆ ಕುರಿತಂತೆ ಭಾರತೀಯ ದಂಡ ಸಂಹಿತೆ, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನದ ಕಾಯ್ದೆಯ ಅಡಿಯಲ್ಲಿ ಕುಂದ್ರಾ ಮತ್ತು ಇತರ ನಟಿಯರ ಮೇಲೆ ಎಫ್‍.ಐ.ಆರ್ ದಾಖಲಾಗಿತ್ತು. ಈ ಹಿಂದೆಯೇ ಕುಂದ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈಗ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಯುವತಿ ಸ್ನೇಹಿತೆಯಾದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ – ಹೈಕೋರ್ಟ್

    ಮುಂಬೈ: ಯುವತಿಯೊಬ್ಬಳು ಸ್ನೇಹಿತೆಯಾದ ಮಾತ್ರಕ್ಕೆ ಆಕೆಯೊಂದಿಗೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆಯಿದೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

    ಮದುವೆಯಾಗುವ ನೆಪದಲ್ಲಿ ಯುವತಿ ಗರ್ಭ ಧರಿಸುವಂತೆ ಮಾಡಿ ಬಂಧನಕ್ಕೆ ಒಳಗಾಗಿರುವ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋಟ್ ತಿರಸ್ಕರಿಸಿದೆ. ಇದನ್ನೂ ಓದಿ: IND Vs SA T20 – ರದ್ದಾದ ಪಂದ್ಯದ ಶೇ.50 ರಷ್ಟು ಟಿಕೆಟ್ ಹಣ ಜುಲೈ 1ರಿಂದ ವಾಪಸ್

    court order law

    ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಮುಂಬೈ ನಗರದ ನಿವಾಸಿ ಆಶಿಷ್ ಚಾಕೋರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠವು ಜಾಮೀನು ನೀಡಲು ನಿರಾಕರಿಸಿದೆ.

    STOP RAPE

    ಸ್ನೇಹದಿಂದ ಇರುವುದನ್ನೇ ನೆಪವಾಗಿಟ್ಟುಕೊಂಡು ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ತಾನೆ ಅಂದುಕೊಳ್ಳುವಂತಿಲ್ಲ. ಹೀಗಾಗಿ ಆರೋಪಿಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ

    ಈ ಬಗ್ಗೆ ಹೇಳಿಕೆ ನೀಡಿರುವ ಸಂತ್ರಸ್ತೆ, ಚಾಕೋರ್ ಜೊತೆ ಸ್ನೇಹದಿಂದ ಇದ್ದೆ, ನಂತರದ ದಿನಗಳಲ್ಲಿ ಆತ ನನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ್ದಾನೆ. ನಾನು ಗರ್ಭಿಣಿ ಆಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಆರೋಪದಿಂದ ಮುಕ್ತಗೊಳ್ಳಲು ಆತ ನನಗೂ ಸಹ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಇದೆ ಎಂದು ಹೇಳಿರುವುದಾಗಿ ಹೇಳಿಕೆ ನೀಡಿದ್ದಾಳೆ.

    Live Tv