Tag: ನಿರೂಪಣೆ

  • ಇದು ನನ್ನ ಕೊನೆಯ ನಿರೂಪಣೆ, ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಸುದೀಪ್‌ ಭಾವುಕ ಪೋಸ್ಟ್‌

    ಇದು ನನ್ನ ಕೊನೆಯ ನಿರೂಪಣೆ, ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಸುದೀಪ್‌ ಭಾವುಕ ಪೋಸ್ಟ್‌

    ಬೆಂಗಳೂರು: ಬಿಗ್ ಬಾಸ್ (Bigg Boss) ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್‌ (Sudeep) ಹೇಳಿದ್ದಾರೆ.

    ಮುಂದಿನ ಭಾನುವಾರ ಬಿಗ್‌ಬಾಸ್‌ 11 (BBK11) ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್‌ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

    ಸುದೀಪ್‌ ಹೇಳಿದ್ದೇನು?
    ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್‌ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.

    ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಜತ್ ಕುಟುಂಬಕ್ಕೆ ಟ್ರೋಲ್ ಟೆನ್ಷನ್ – ಮಾಜಿ ಗೆಳತಿ ಜೊತೆಗಿನ ಫೋಟೋ ವೈರಲ್

    ಈ ಶೋ ನಡೆಯುವ ಮೊದಲು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು.

    ಮ್ಯಾಕ್ಸ್‌ ಸಿನಿಮಾದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್‌, ಎಷ್ಟು ಮಾಡುವುದು? ಎಲ್ಲರನ್ನೂ ರಿಪೇರಿ ಮಾಡುತ್ತಾ ಕುಳಿತುಕೊಳ್ಳಲು ನಾನು ಬಂದಿದ್ದೀನಾ? ಬೇರೆ ಕೆಲಸಗಳು ಇರುತ್ತವೆ. ತುಂಬ ಶ್ರಮ ಬೇಕು. ಅದು ಯಾರಿಗೂ ಅರ್ಥ ಆಗುತ್ತಿಲ್ಲ ಎಂದಿದ್ದರು.

    ಕಳೆದ ಬಿಗ್‌ ಬಾಸ್ ಸೀಸನ್​ ನಡೆಯುವಾಗ ನನ್ನ ಸಿನಿಮಾದ ಶೂಟಿಂಗ್​‌ ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯುತ್ತಿತ್ತು. ಚೆನ್ನೈನಿಂದ ಅಲ್ಲಿಗೆ ಹೋಗಲು ಒಂದೂವರೆ ಗಂಟೆ ಬೇಕು. ಬೆಂಗಳೂರಿನಿಂದ ನಾನು ಅಲ್ಲಿಗೆ ಹೋಗಿ, ಅಲ್ಲಿ ಶೂಟಿಂಗ್ ಮಾಡಿ, ಮಧ್ಯರಾತ್ರಿ ಶೂಟಿಂಗ್ ಮುಗಿಸಿ, ಖಾಸಗಿ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ಬಂದು ಬಿಗ್ ಬಾಸ್ ಎಪಿಸೋಡ್​ ನೋಡಿ, ವೀಕೆಂಡ್​ ಸಂಚಿಕೆ ಶೂಟ್ ಮಾಡಬೇಕು. ಇದರಿಂದ ನನಗೆ ತುಂಬ ಸುಸ್ತಾಗುತ್ತಿತ್ತು ಎಂದು ತಿಳಿಸಿದ್ದರು.

    ನಾನು ಬೆಂಗಳೂರಿನಲ್ಲಿ ಇದ್ದರೆ ಯಾವುದೇ ಸಮಸ್ಯೆ ಇಲ್ಲ. ಬೇರೆ ಕಡೆ ಸಿನಿಮಾ ಶೂಟಿಂಗ್‌ ಇದ್ದಾಗ ಈ ಶೋ ಮಾಡಲು ಕಷ್ಟ ಆಗುತ್ತದೆ. ನಾನು ಎಲ್ಲಿಯೇ ಇದ್ದರೂ ಗುರುವಾರ ಶೂಟಿಂಗ್ ಮುಗಿಸಿಕೊಂಡು ಶುಕ್ರವಾರ ಓಡಿಬರಬೇಕು. ಸಿನಿಮಾದಲ್ಲಿ ಸಾವಿರ ಜನರು ಶೂಟಿಂಗ್ ಮಾಡುತ್ತಿರುತ್ತಾರೆ. ಆದರೆ ಬಿಗ್ ಬಾಸ್​ ಸಲುವಾಗಿ ಶುಕ್ರವಾರ, ಶನಿವಾರ ಬ್ರೇಕ್ ಆಗುತ್ತದೆ. ಸಿನಿಮಾಗಳು ಇಲ್ಲದಿದ್ದಾಗ ಇದು ಓಕೆ. ಸಿನಿಮಾ ಶೂಟಿಂಗ್​ ಇದ್ದರೆ ತಡ ಆಗುತ್ತದೆ. ಇಷ್ಟು ವರ್ಷ ಖುಷಿಯಿಂದಲೇ ಮಾಡಿದ್ದೇನೆ. ಈಗ ಬೇರೆ ಯಾರಾದರೂ ಮಾಡಲಿ ಎಂದು ಹೇಳಿದ್ದರು.

     

  • ಸುಷ್ಮಾ ನೀಡಿದ 250 ರೂ. ನೋಡಿ ಕಣ್ಣೀರಿಟ್ಟ ಅನುಶ್ರೀ

    ಸುಷ್ಮಾ ನೀಡಿದ 250 ರೂ. ನೋಡಿ ಕಣ್ಣೀರಿಟ್ಟ ಅನುಶ್ರೀ

    ಬೆಂಗಳೂರು: ನಿರೂಪಕಿ ಅನುಶ್ರೀ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ಚಿನಕುರಳಿ ಮಾತುಗಳಿಂದ ಮನೆ ಮಾತಾಗಿರುವ ಎಳ್ಳು ಹುರಿದಂತೆ ಮಾತನಾಡುವ ಅನುಶ್ರೀ ರಿಯಾಲಿಟಿ ಶೋನಲ್ಲಿ ಕಣ್ಣೀರು ಹಾಕಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಶೋನಲ್ಲಿ ಭಾಗವಹಿಸಿದ್ದಾಗ ಕಾರ್ಯಕ್ರಮದ ನಿರೂಪಕಿ ಸುಷ್ಮಾ, ಅತಿಥಿಯಾಗಿ ಆಗಮಿಸಿದ್ದ ಅನುಶ್ರೀ ಅವರಿಗೆ 250 ರೂ. ಹಣವಿರುವ ಲಕೋಟೆ ನೀಡುತ್ತಾರೆ. ಹಣ ನೋಡಿದ ಕೂಡಲೇ ಅನುಶ್ರೀ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

    ಯಾವುದೇ ಇವೆಂಟ್ ಇರಲಿ, ಸಿನಿಮಾ ಆಡಿಯೋ ರಿಲೀಸ್ ಕಾರ್ಯಕ್ರಮಗಳಿಗೆ ಅನುಶ್ರೀಯವರ ನಿರೂಪಣೆ ಇರಬೇಕು. ಹಾಗೆಯೇ ಖಾಸಗಿ ವಾಹಿನಿಯಲ್ಲಿ ಮೂಡಿ ಬರುವ ಸಂಗೀತ ಕಾರ್ಯಕ್ರಮಕ್ಕೂ ಅನುಶ್ರೀ ಆ್ಯಂಕರ್ ಆಗಿ ಕೆಲಸ ಮಾಡಿಕೊಂಡಿದ್ದಾರೆ.

    ಅದೇ ವಾಹಿನಿಯ ಮತ್ತೊಂದು ರಿಯಾಲಿಟಿ ಶೋನಲ್ಲಿ ತಮ್ಮ ಪ್ರೀತಿಯ ತಮ್ಮ ಸಿಂಗರ್ ಹನುಮಂತನ ಜೊತೆಯಲ್ಲಿ ಅನುಶ್ರೀ ಭಾಗವಾಹಿಸಿದ್ದರು. ಈ ಸ್ಪರ್ಧೆಯಲ್ಲಿ ಗೆದ್ದರೆ 10 ಲಕ್ಷ ರೂ. ಹಣ ಗಳಿಸಬಹುದು. ಈ ವೇಳೆ ಕಾರ್ಯಕ್ರಮದ ನಿರೂಪಕಿ ಸುಷ್ಮಾ 250 ರೂ. ಹಣದ ಲಕೋಟೆ ನೀಡುತ್ತಿದ್ದಂತೆ ಅನುಶ್ರೀ ತಮ್ಮ ಮೊದಲ ಸಂಬಳ ಇದಾಗಿತ್ತು ಎಂದು ಹೇಳುತ್ತಾ ಕಣ್ಣೀರು ಹಾಕಿದರು.

    ಮಂಗಳೂರಿನ ಸ್ಥಳೀಯ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಂಗಳಿಗೆ 800 ರೂ. ಸಂಬಳ ಸಿಗುತ್ತಿತ್ತು. ಬೆಂಗಳೂರಿನಲ್ಲಿ ಕಾರ್ಯಕ್ರಮ ನೀಡಿದ್ರೆ ಹೆಚ್ಚು ಹಣ ಸಿಗುತ್ತೆ ಅಂತ ಬಂದೆ. ಮೊದಲಿಗೆ ಬಂದ ಕೂಡಲೇ ಕಾರ್ಯಕ್ರಮದ ಆಯೋಜಕರು ಪ್ರತಿ ಸಂಚಿಕೆಗೆ 250 ರೂ. ಎಂದು ನಿಗದಿ ಮಾಡಿದರು. ನಾನು ಪ್ರತಿದಿನ ಸಂಚಿಕೆ ಸಿಗಬಹುದು ಅಂತ ತಿಳಿದಿದ್ದೆ. ಆದ್ರೆ ನನ್ನ ರೀತಿಯಲ್ಲಿ ಎಂಟು ಜನ ನಿರೂಪಕಿಯರಿದ್ದರು. ತಿಂಗಳಿಗೆ ನಾಲ್ಕು ಸಂಚಿಕೆ ಸಿಗೋದು. ಮೊದಲ ಸಂಚಿಕೆ ಮಾಡಿದಾಗ ನನಗೆ ಸಿಕ್ಕ ಸಂಭಾವನೆ ಇದೇ 250 ರೂಪಾಯಿ ಎಂದರು.

    ಈಗ ಎಷ್ಟೇ ಕಾರ್ಯಕ್ರಮ ಮಾಡಬಹುದು, ಎಷ್ಟೇ ಹಣದ ಚೆಕ್ ಪಡೆದ್ರೂ ಆವಾಗ 250 ರೂ. ಸಿಕ್ಕಾಗ ಆಗುತ್ತಿದ್ದ ಖುಷಿ ಇವತ್ತು ಸಿಗಲ್ಲ. ಅಂದಿನ 250 ರೂ. ಕೊಡುತ್ತಿದ್ದ ನೆಮ್ಮದಿ, ಇವತ್ತಿನ ಬದುಕು ಕೊಡಲ್ಲ. ಇವತ್ತು ಗೆಲ್ಲುವ ಹಣಕ್ಕಿಂತ 250 ರೂ. ಮೌಲ್ಯ ನನಗೆ ಹೆಚ್ಚು ಎಂದು ಹಣಕ್ಕೆ ನಮಸ್ಕರಿಸಿದರು.

  • ವಾರಕ್ಕೆ 31 ಕೋಟಿ – ಬಿಗ್‍ಬಾಸ್‍ನಲ್ಲಿ ಸಲ್ಮಾನ್ ಸಂಭಾವನೆ

    ವಾರಕ್ಕೆ 31 ಕೋಟಿ – ಬಿಗ್‍ಬಾಸ್‍ನಲ್ಲಿ ಸಲ್ಮಾನ್ ಸಂಭಾವನೆ

    ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ‘ಬಿಗ್‍ಬಾಸ್ ಸೀಸನ್ 13’ ರ ನಿರೂಪಕರಾಗಿ ಮತ್ತೆ ಕಿರುತೆರೆಗೆ ಮರಳುತ್ತಿದ್ದು, ಈ ಬಾರಿ ಅವರು ವಾರಂತ್ಯದ ನಿರೂಪಣೆಗಾಗಿ ಬೃಹತ್ ಸಂಭಾವನೆ ಪಡೆಯುತ್ತಿದ್ದಾರೆ.

    ವರದಿಯೊಂದರ ಪ್ರಕಾರ ಸಲ್ಮಾನ್ ಖಾನ್ ಅವರು ಬಿಗ್‍ಬಾಸ್ ರಿಯಾಲಿಟಿ ಶೋನ ಹೊಸ ಸೀಸನ್‍ಗೆ ವಾರಂತ್ಯದ ನಿರೂಪಣೆಗಾಗಿ ಬರೋಬ್ಬರಿ 31 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ವಾರಂತ್ಯಕ್ಕೆ 31 ಕೋಟಿಯಂತೆ ಒಟ್ಟು ಅವರು 403 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ.

    ಇದೀಗ ಬಾಲಿವುಡ್ ಅಂಗಳದಲ್ಲಿ ಸಲ್ಮಾನ್ ಖಾನ್ ಅವರ ಸಂಭಾವನೆಯ ಬಗ್ಗೆ ಚರ್ಚೆಯಾಗುತ್ತಿದೆ. ಸದ್ಯಕ್ಕೆ ಈ ಮೂಲಕ ಸಲ್ಮಾನ್ ಖಾನ್ ಕಿರುತೆರೆಯಲ್ಲಿ ಅತ್ಯಧಿಕ ಸಂಭಾವನೆ ಪಡೆಯುವ ನಟರಾಗಿ ಹೊರಹೊಮ್ಮಿದ್ದಾರೆ. ಇತ್ತೀಚೆಗೆ ಬಿಗ್‍ಬಾಸ್ ಸೀಸನ್ 13ರ ನಿರೂಪಕರಾಗಿ ಸಲ್ಮಾನ್ ಖಾನ್ ಬರುತ್ತಿಲ್ಲ ಎಂದು ವದಂತಿ ಹಬ್ಬಿತ್ತು. ಆದರೆ ಸಲ್ಮಾನ್ ಅವರು ಸಂದರ್ಶನವೊಂದರಲ್ಲಿ ಮತ್ತೆ ಬಿಗ್‍ಬಾಸ್‍ಗೆ ವಾಪಸ್ ಆಗುತ್ತಿರುವ ಬಗ್ಗೆ ದೃಢಪಡಿಸಿದ್ದಾರೆ.

    ಬಿಗ್‍ಬಾಸ್ ರಿಯಾಲಿಟಿ ಶೋನ ಮುಂದಿನ ಸೀಸನ್ ಸೆಪ್ಟೆಂಬರ್ 29 ರಂದು ಪ್ರಸಾರವಾಗಲಿದೆ. ಈ ಸೀಸನ್ ಕೇವಲ ಸೆಲೆಬ್ರಿಟಿ ಸ್ಪರ್ಧಿಗಳನ್ನು ಮಾತ್ರ ಒಳಗೊಂಡಿರುತ್ತದೆ ಎಂದು ತಿಳಿದು ಬಂದಿದೆ. ಈ ಹಿಂದೆ ಬಿಗ್‍ಬಾಸ್‍ನ ಮೂರು ಸೀಸನ್‍ನಲ್ಲಿ ಸೆಲೆಬ್ರಿಟಿಗಳು ಮತ್ತು ಸಾಮಾನ್ಯ ಸ್ಪರ್ಧಿಗಳು ಭಾಗವಹಿಸಿದ್ದರು. ಆದರೆ ಕಳೆದ ಸೀಸನ್‍ನಲ್ಲಿ ಶೋನ ರೇಟಿಂಗ್ ಕಡಿಮೆಯಾಗಿದ್ದರಿಂದ ಈ ಬಾರಿ ಸಾಮಾನ್ಯರಿಗೆ ಅವಕಾಶವಿಲ್ಲ ಎಂದು ತಿಳಿದು ಬಂದಿದೆ.

    ‘ಬಿಗ್‍ಬಾಸ್ ಸೀಸನ್ 13’ನೇ ಶೋನ ಶೂಟಿಂಗ್ ಹೊಸ ಸ್ಥಳದಲ್ಲಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಕಳೆದ 11 ಆವೃತ್ತಿಗಳ ಶೂಟಿಂಗ್ ಪುಣೆ ಬಳಿಯ ಲೋನಾವಾಲಾದಲ್ಲಿ ಚಿತ್ರೀಕರಿಸಲಾಗಿತ್ತು. ಆದರೆ ಈ ಬಾರಿ ಮುಂಬೈನಲ್ಲಿ ಚಿತ್ರೀಕರಿಸಲು ಸಿದ್ಧತೆ ನಡೆದಿದೆ. ‘ಬಿಗ್‍ಬಾಸ್ ಸೀಸನ್ 5’ನೇ ಶೋವನ್ನು ಗುಜರಾತಿನ ಕಾರ್ಜತ್‍ನಲ್ಲಿ ಚಿತ್ರೀಕರಿಸಲಾಗಿತ್ತು.

  • ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣ ಬಿಚ್ಚಿಟ್ಟ ಪವರ್ ಸ್ಟಾರ್

    ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣ ಬಿಚ್ಚಿಟ್ಟ ಪವರ್ ಸ್ಟಾರ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣವೇನು ಎಂಬುದರ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

    ಇದೇ ಶನಿವಾರದಿಂದ ಮತ್ತೊಮ್ಮೆ ವೀಕೆಂಡ್ ಮಸ್ತಿಯನ್ನು ಹೆಚ್ಚಿಸಲು ಪುನೀತ್ ರಾಜ್‍ಕುಮಾರ್ ಕನ್ನಡದ ಕೋಟ್ಯಧಿಪತಿ ಶೋಗೆ ವಾಪಸ್ ಆಗಿದ್ದಾರೆ. ಕೋಟ್ಯಧಿಪತಿ ಶೋ ಈಗ ಮತ್ತೆ ಪುನೀತ್ ಅವರ ಕೈ ಸೇರಿದ್ದು, ಹೊಸ ಹುರುಪಿನೊಂದಿಗೆ ಕಾರ್ಯಕ್ರಮ ನಡೆಸಿಕೊಡಲು ಸಿದ್ಧರಾಗಿದ್ದಾರೆ. ಸಿದ್ಧಾರ್ಥ್ ಬಾಸಾ ನನಗೆ ಈ ಕಾರ್ಯಕ್ರಮಕ್ಕೆ ಸ್ಫೂರ್ತಿ ನೀಡಿದ್ದಾರೆ. ನಾನು ಚಿಕ್ಕವಯಸ್ಸಿನಲ್ಲಿ ಇದ್ದಾಗ ಅವರು ಕ್ವಿಝ್ ಮಾಡುತ್ತಿದ್ದರು. ಅವರನ್ನು ನೋಡಿ ನಾನು ಬೆಳೆದಿದ್ದೇನೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಪುನೀತ್ ಹೇಳಿದ್ದಾರೆ.

    ಅಮಿತಾಬ್ ಬಚ್ಚನ್ ರಂತಹ ದಿಗ್ಗಜ ನಟರು ನಡೆಸಿಕೊಟ್ಟ ಕಾರ್ಯಕ್ರಮವನ್ನು ನಾನು ಹೇಗೆ ಮಾಡೋದು ಎಂಬ ಭಯ ನನ್ನ ಕಾಡಿತ್ತು. ಆದರೆ ನನ್ನ ತಾಯಿ ನನಗೆ ಮೊದಲ ಧೈರ್ಯ ನೀಡಿದ್ದರು. ನಿನ್ನಿಂದ ಇದು ಸಾಧ್ಯ ಎಂದು ಮೊದಲು ನನ್ನ ತಾಯಿ ನನಗೆ ಹೇಳಿದರು. ಆ ನಂತರ ನನ್ನ ಸಹೋದರರಾದ ಶಿವಣ್ಣ ಹಾಗೂ ರಾಘಣ್ಣ ಕೂಡ ನನಗೆ ಧೈರ್ಯ ತುಂಬಿದರು. ಅಲ್ಲದೆ ರಾಘಣ್ಣ ಈ ಕಾರ್ಯಕ್ರಮದಲ್ಲೂ ನನ್ನ ಜೊತೆ ಇರ್ತಾರೆ ಎಂದು ಪುನೀತ್ ನೆನೆಪು ಮೆಲುಕು ಹಾಕಿದರು.

    ಈ ಕಾರ್ಯಕ್ರಮದ ಬಗ್ಗೆ ತುಂಬಾ ಕ್ಯೂರೆಸ್ ಆಗಿರುವ ಪುನೀತ್, ಒಬ್ಬ ಆ್ಯಂಕರ್ ಆಗಿ ಯಾವ ಆ್ಯಂಕರ್ ಇಷ್ಟ ಎಂಬ ಮಾತನ್ನು ಹಂಚಿಕೊಂಡಿದ್ದಾರೆ. ರಮೇಶ್ ಅರವಿಂದ್, ಸುದೀಪ್, ಅಕುಲ್ ಬಾಲಾಜಿ, ಅನುಶ್ರೀ, ಸೃಜನ್ ಎಲ್ಲರೂ ಒಳ್ಳೆಯ ಆ್ಯಂಕರ್ ಗಳೇ ಆಗಿದ್ದಾರೆ. ನಾನು ಸುಮಾರು ಕಾರ್ಯಕ್ರಮಗಳನ್ನು ನೋಡುತ್ತೇನೆ. ಬಹಳಷ್ಟು ಆ್ಯಂಕರ್ ಕಾರ್ಯಕ್ರಮವನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ ಎಂದು ಪುನೀತ್ ತಿಳಿಸಿದ್ದಾರೆ.

  • ಬಿಗ್ ಬಾಸ್ ಹೊಸ ಸೀಸನ್‍ಗೆ ಅನುಷ್ಕಾ ಶೆಟ್ಟಿ ನಿರೂಪಣೆ!

    ಬಿಗ್ ಬಾಸ್ ಹೊಸ ಸೀಸನ್‍ಗೆ ಅನುಷ್ಕಾ ಶೆಟ್ಟಿ ನಿರೂಪಣೆ!

    ಹೈದರಾಬಾದ್: ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.

    ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿ ಎಂಟ್ರಿ?

    ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

    ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

    ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.

  • ಕನ್ನಡದ ಕೋಟ್ಯಾಧಿಪತಿಯಲ್ಲಿ ಮೊದಲ ಸ್ಫರ್ಧಿಯಾಗಿ ಬರಲಿದ್ದಾರೆ ಸ್ಯಾಂಡಲ್‍ವುಡ್ ಸ್ಟಾರ್!

    ಕನ್ನಡದ ಕೋಟ್ಯಾಧಿಪತಿಯಲ್ಲಿ ಮೊದಲ ಸ್ಫರ್ಧಿಯಾಗಿ ಬರಲಿದ್ದಾರೆ ಸ್ಯಾಂಡಲ್‍ವುಡ್ ಸ್ಟಾರ್!

    ಬೆಂಗಳೂರು: ಕನ್ನಡದ ಕೋಟ್ಯಾಧಿಪತಿ ಮೂರನೇ ಆವೃತ್ತಿ ಬರುತ್ತಿದ್ದು, ರಮೇಶ್ ಅರವಿಂದ್ ನಿರೂಪಣೆ ಮಾಡುತ್ತಿದ್ದಾರೆ. ಶುಕ್ರವಾರ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದು, ಮೊದಲ ಸ್ಪರ್ಧಿ ಯಾರೆಂಬುದನ್ನು ನಟ ರಮೇಶ್ ಅರವಿಂದ್ ತಿಳಿಸಿದ್ದಾರೆ.

    ಕನ್ನಡದ ಕೋಟ್ಯಾಧಿಪತಿ 2ನೇ ಆವೃತ್ತಿಯನ್ನು ನಿರೂಪಣೆ ಮಾಡಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರೇ ಮೂರನೇ ಆವೃತ್ತಿಯ ಮೊದಲ ಸ್ಪರ್ಧಿ ಆಗಬೇಕೆಂದು ರಮೇಶ್ ಆಸೆ ಪಡುತ್ತಿದ್ದಾರೆ. ಪುನೀತ್ ರಾಜ್‍ಕುಮಾರ್ ಮೂಲಕ ಈ ಕಾರ್ಯಕ್ರಮ ಶುಭಾರಂಭ ಆಗಬೇಕೆಂದು ರಮೇಶ್ ಅರವಿಂದ್ ಬಯಸಿದ್ದಾರೆ.

    ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನಿರೂಪಕಿ, ನೀವು ಈ ಕಾರ್ಯಕ್ರಮದ ಮೊದಲ ಸಂಚಿಕೆ ಹಾಟ್ ಸೀಟ್ ಮೇಲೆ ಯಾರನ್ನು ನೋಡಲು ಇಷ್ಟಪಡುತ್ತೀರಾ ಎಂದು ಪ್ರಶ್ನೆ ಮಾಡಿದ್ರು. ಈ ವೇಳೆ ನಿರೂಪಕಿ ರಾಜ್ಯದ ಮುಖ್ಯಮಂತ್ರಿಗಳು, ಪತ್ರಕರ್ತರು, ಸಿನಿಮಾ ಕಲಾವಿದರ ಹಾಗೂ ಕೋಟ್ಯಾಧಿಪತಿ ಕಾರ್ಯಕ್ರಮವನ್ನು ಮೊದಲು ಪರಿಚಯಿಸಿದವರ ಹೆಸರನ್ನು ಆಯ್ಕೆಗಳನ್ನಾಗಿ ರಮೇಶ್ ಅರವಿಂದ್ ಅವ್ರಿಗೆ ನೀಡಿದ್ದರು.

    ನಿರೂಪಕಿಯ ಪ್ರಶ್ನೆಗೆ ರಮೇಶ್, “ನಾನು ವೀಕೆಂಡ್ ವಿಥ್ ರಮೇಶ್” ಕಾರ್ಯಕ್ರಮದಲ್ಲಿ ಮೊದಲ ಸಂಚಿಕೆಯಲ್ಲಿ ಬಂದ ವ್ಯಕ್ತಿಯನ್ನೇ ಕನ್ನಡದ ಕೋಟ್ಯಾಧಿಪತಿಯ ಹಾಟ್ ಸೀಟ್‍ನಲ್ಲಿ ನೋಡಲು ಇಷ್ಟಪಡುತ್ತೇನೆ. ಅದು ಬೇರೆ ಯಾರೂ ಅಲ್ಲ ಪುನೀತ್ ರಾಜ್‍ಕುಮಾರ್ ಎಂದು ಉತ್ತರಿಸಿದ್ದಾರೆ.

    ಕನ್ನಡದ ಕೋಟ್ಯಾಧಿಪತಿ ಮಾಡುತ್ತಿರುವುದರ ಬಗ್ಗೆ ರಮೇಶ್, ಪುನೀತ್ ರಾಜ್‍ಕುಮಾರ್ ಅವರಿಗೆ ಮೆಸೇಜ್ ಮಾಡಿದ್ದಾರೆ. ಆ ಮೆಸೇಜ್ ನೋಡಿದ ತಕ್ಷಣ ಪುನೀತ್, ರಮೇಶ್ ಅರವಿಂದ್ ಅವರಿಗೆ ಫೋನ್ ಮಾಡಿದ್ದಾರೆ.

    ನೀವು ಕಾರ್ಯಕ್ರಮ ನಡೆಸಿಕೊಡುತ್ತಿರುವುದು ತುಂಬ ಖುಷಿ ಆಯಿತು ಎಂದು ಪುನೀತ್ ಸಂತೋಷದಿಂದ ಶುಭ ಹಾರೈಸಿದ್ದಾರೆ. ಸಿನಿಮಾಗಳ ಕೆಲಸದಿಂದಾಗಿ ಪುನೀತ್ ಈ ಬಾರಿ ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.