Tag: ನಿರ್ದೇಶಕ ಮಂಸೋರೆ

  • ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

    ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

    ರಡು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಂಸೋರೆ, ಇದೀಗ ಮತ್ತೊಂದು ಸಿನಿಮಾಗೆ ಆಕ್ಸನ್ ಕಟ್ ಹೇಳುತ್ತಿದ್ದು, ಈ ಸಿನಿಮಾ ಇಂದಿನಿಂದ ಚಿತ್ರೀಕರಣ ಆರಂಭಿಸಿದೆ. ಇವರ ಚೊಚ್ಚಲು ಸಿನಿಮಾ ‘ಹರಿವು’ ಕೂಡ ನೈಜಘಟನೆಯನ್ನೇ ಆಧರಿಸಿತ್ತು. ಇದೀಗ ನಾಲ್ಕನೇ ಚಿತ್ರಕ್ಕೂ ಅವರು ನಡೆದ ಘಟನೆಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಹರಿವು ಸಿನಿಮಾದಲ್ಲಿ ಮಗನನ್ನು ಕಳೆದುಕೊಂಡ ಅಸಹಾಯಕ ತಂದೆಯೊಬ್ಬರು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಹಳ್ಳಿಗೆ ತಮ್ಮ ಮಗನ ಶವವನ್ನು ಪೆಟ್ಟಿಗೆಯಲ್ಲಿ  ತಗೆದುಕೊಂಡು ಹೋದ ಅಮಾನವೀಯ ಘಟನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಬಾರಿ ಅವರು ಘಟನೆಯ ಬಗ್ಗೆ ಹೇಳಿಕೊಳ್ಳದೇ ‘ಈ ನೆಲದ ಮಣ್ಣಿನ ಜನರ ಆರ್ದ್ರ ಬದುಕಿನ ನೈಜ ಘಟನೆಯೊಂದನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ’ ಎಂದಷ್ಟೇ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಸಿನಿಮಾದ ಶೀರ್ಷಿಕೆಯೇ ಆಕರ್ಷಕವಾಗಿದೆ ಮತ್ತು ಕುತೂಹಲ ಮೂಡಿಸುತ್ತದೆ. ತಮ್ಮ ನಾಲ್ಕನೇ ಸಿನಿಮಾಗೆ ಅವರು ’19, 20, 21’ ಎಂದು ಹೆಸರಿಟ್ಟಿದ್ದಾರೆ. ಈ ಟೈಟಲ್ ನಾನಾ ಅರ್ಥಗಳನ್ನು ಹೇಳುತ್ತಿದೆ. ಈ ಮೂರು ತಾರೀಖಿನ ದಿನಗಳಲ್ಲಿ ನಡೆದ ಘಟನೆಯಾ? ಅಥವಾ ಆರ್ಟಿಕಲ್ 19, 20, 21ರ ಬಗೆಗಿನ ಕಥಾನಕವಾ ಎನ್ನುವುದು ಸದ್ಯ ಚರ್ಚೆಯ ವಿಷಯವಾಗಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ಎರಡ್ಮೂರು ದಿನಗಳ ಹಿಂದೆಯೇ ಇಡೀ ಟೀಮ್ ಕಟ್ಟಿಕೊಂಡು ಮಲೆನಾಡಿನ ಸೆರೆಗಿನಲ್ಲಿ ಬೀಡುಬಿಟ್ಟಿದ್ದಾರೆ ಮಂಸೋರೆ. ಉತ್ತರ ಕರ್ನಾಟಕದ ಕೆಲ ಕಡೆ ಮತ್ತು ಕರಾವಳಿ ಭಾಗದಲ್ಲೂ ಒಂದಷ್ಟು ದಿನಗಳ ಕಾಲ ಚಿತ್ರೀಕರಣ ನಡೆಸಲಿದೆ ತಂಡ. ಎಂದಿನಂತೆ ಬಹುತೇಕ ಆಕ್ಟ್ 1978 ಸಿನಿಮಾದಲ್ಲಿ ಕೆಲಸ ಮಾಡಿದವರೇ ಈ ಟೀಮ್ ನಲ್ಲೂ ಮುಂದುವರೆದಿದ್ದಾರೆ. ಸತ್ಯಾ ಹೆಗಡೆ ಅವರ ಸಿನಿಮಾಟೋಗ್ರಫಿ, ದೇವರಾಜ್ ಅವರ ನಿರ್ಮಾಣ ಚಿತ್ರಕ್ಕಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿರ್ದೇಶಕ ಮಂಸೋರೆ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿರ್ದೇಶಕ ಮಂಸೋರೆ

    ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿರ್ದೇಶಕ ಮಂಸೋರೆ ಅವರು ತಮ್ಮ ಬಹುಕಾಲದ ಗೆಳತಿ ಅಖಿಲಾ ಜೊತೆಗೆ ಇಂದು ದಾಂಪತ್ಯಜೀವನಕ್ಕೆ ಕಾಲಿಟ್ಟಿದ್ದಾರೆ.

    ಜುಲೈ 4ರಂದು ಬೆಂಗಳೂರಿನಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇಂದು ಕನಕಪುರ ರಸ್ತೆಯ ತಲಘಟ್ಟಪುರ ಬಳಿ ಇರುವ ಶಿಬ್ರಾವ್ಯಿ ಕೋರ್ಟ್ ಯಾರ್ಡ್‍ನಲ್ಲಿ ಸಪ್ತಪದಿ ತುಳಿದಿದೆ. ಕೋವಿಡ್ ನಿಮಯಗಳನ್ನು ಅನುಸರಿಸಿ, ಈ ಮದುವೆ ಮಾಡಲಾಗಿದೆ. ಇದನ್ನೂ ಓದಿ:  ನಿರ್ದೇಶಕ ಮಂಸೋರೆ ನಿಶ್ಚಿತಾರ್ಥ: ಆಗಸ್ಟ್‌ನಲ್ಲಿ ಮದುವೆ

     

    2014ರಲ್ಲಿ ಮಂಸೋರೆ ಅವರು ಮೊದಲು ನಿರ್ದೇಶಿಸಿದ ಹರಿವು ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ಹರಿವು ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ಮಂಸೋರೆ ನಿರ್ದೇಶನದಲ್ಲಿ, ಶೃತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿ, 2018ರಲ್ಲಿ ಬಿಡುಗಡೆಯಾಗಿದ್ದ ನಾತಿಚರಾಮಿ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ ಮತ್ತು ಇತರೆ ಮೂರು ವಿಭಾಗಗಳಲ್ಲಿ ರಾಷ್ಟ್ರಪ್ರಶಸ್ತಿ ಗೌರವ ಸಿಕ್ಕಿದ್ದು, ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಗರಿ ಸಿಕ್ಕಿತ್ತು.