Tag: ನಿರ್ಮಲಾನಂದ ಶ್ರೀ

  • ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನ- ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ ದೋಸ್ತಿ ನಾಯಕರು!

    ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನ- ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ ದೋಸ್ತಿ ನಾಯಕರು!

    ಬೆಂಗಳೂರು: ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನಕ್ಕೂ ಮುನ್ನ ಇಂದು ದೋಸ್ತಿ ನಾಯಕರ ದಂಡು ಆದಿಚುಂಚನಗಿರಿ ಮಠಕ್ಕೆ ತೆರಳಿದೆ.

    ಹೆಚ್.ಡಿ ಕುಮಾರಸ್ವಾಮಿ, ಆರ್.ಅಶೋಕ್, ಸಿ.ಟಿ ರವಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಅಶ್ವಥ್ ನಾರಾಯಣ್, ಪಿಸಿ ಮೋಹನ್, ಯದುವೀರ್ ಒಡೆಯರ್, ನಿಖಿಲ್, ಬೆಂಗಳೂರು ಗ್ರಾ, ಅಭ್ಯರ್ಥಿ ಸಿಎನ್ ಮಂಜುನಾಥ್ ಸೇರಿದಂತೆ ಹಲವರು ಮಠಕ್ಕೆ ಭೇಟಿ ಕೊಟ್ಟು ನಿರ್ಮಲಾನಂದ ಶ್ರೀಗಳ (Nirmalananda Swamiji) ಆಶೀರ್ವಾದ ಪಡೆದಿದ್ದಾರೆ.

    ಈ ವೇಳೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಹೆಚ್‍ಡಿಕೆ, ಶ್ರೀಗಳ ಆಶೀರ್ವಾದ ಪಡೆಯಲಿಕ್ಕೆ ಮೈತ್ರಿ ಮುಖಂಡರು, ಅಭ್ಯರ್ಥಿಗಳು ಸಹ ಬಂದಿದ್ದೇವೆ. ಹೊಸತೊಡಕು ಸಂಭ್ರಮಕ್ಕೆ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಅಲ್ಲೇನು ರಾಜಕೀಯ ಇಲ್ಲ. ಸಮುದಾಯ ಪ್ಲೇ ಕಾರ್ಡ್ ಅನ್ನೋಕೆ ಆಗಲ್ಲ ಎಂದರು. ಇದನ್ನೂ ಓದಿ: ಲೋಕ ಸಮರ ಗೆಲ್ಲೋಕೆ ರಣತಂತ್ರ- ಹೊಸತೊಡಕು ನೆಪದಲ್ಲಿ ಹೆಚ್‍ಡಿಕೆ ತೋಟದ ಮನೆಯಲ್ಲಿ ಸಭೆ

    ಮೊದಲ ಹಂತದ ಚುನಾವಣಾ ಅಭ್ಯರ್ಥಿಗಳು ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇವೆ. ಬೆಂಗಳೂರು ನಗರದ 4 ಅಭ್ಯರ್ಥಿಗಳು, ಮೈಸೂರಿನ ಅಭ್ಯರ್ಥಿ, ಕೋಲಾರದ ಅಭ್ಯರ್ಥಿ, ತುಮಕೂರು, ಮಂಡ್ಯದ ನಾನು ಎಲ್ಲಾ ಜೊತೆಗೂಡಿ ಆಶೀರ್ವಾದ ಪಡೆದಿದ್ದೇವೆ. ವರ್ಷದ ಮೊದಲ ದಿನ ಗುರುಗಳ ಆಶೀರ್ವಾದ ಪಡೆಯೋದು ನಮ್ಮ ಕರ್ತವ್ಯ.  ಬಳಿಕ ನಾವೆಲ್ಲ ಒಟ್ಟಾಗಿ ಹೊಸತೊಡಕು ಆಚರಣೆ ಮಾಡುತ್ತೇವೆ ಎಂದರು.

    ಮುಖ್ಯಂಮತ್ರಿಗಳಿಗೆ ಈಗ ಒಕ್ಕಲಿಗರು ಕಾಣುತ್ತಿದ್ದಾರೆ. ಅವರಿಗೆ ಅಸ್ಥಿರತೆ ಕಾಡುತ್ತಿರೋ ಕಾರಣ ಈಗ ಬರುತ್ತಾ ಇದ್ದಾರೆ. ಇವರ ಸರ್ಕಾರದಲ್ಲಿ ಹೇಗೆ ನಡೆಸಿಕೊಂಡಿದ್ದಾರೆ ಅನ್ನೋದು ಗೊತ್ತಿದೆ. ನಾವಿಲ್ಲಿ ಡಿಕೆ ಶಿವಕುಮಾರ್ (DK Shivakumar) ರೀತಿ ಟಿವಿ ಕುಕ್ಕರ್ ಕೊಡುವ ಕಾರ್ಯಕ್ರಮ ಅಲ್ಲ. ಜಸ್ಟ್ ಗೆಟ್ ಟು ಗೆದರ್ ಅಷ್ಟೇ ಎಂದು ಹೆಚ್‍ಡಿಕೆ ಸ್ಪಷ್ಟಪಡಿಸಿದರು.

    ಆರ್.ಅಶೋಕ್ (R. Ashok) ಮಾತನಾಡಿ, ಇಂದು ಶ್ರೀಗಳ ಆರ್ಶೀವಾದ ಪಡೆಯುವುದಕ್ಕೆ ಮೈತ್ರಿ ನಾಯಕರು ಬಂದಿದ್ದೇವೆ. ಶ್ರೀಗಳ ಆರ್ಶೀವಾದ, ಅವರ ಬೆಂಬಲದೊಂದಿಗೆ ಚುನಾವಣೆ ಪ್ರಚಾರಕ್ಕೆ ಹೋಗ್ತೀವಿ ಎಂದರು. ಇದೇ ವೇಳೆ ಬಿಡದಿ ತೋಟದಲ್ಲಿ ಹೊಸತೊಡಕು ವಿಚಾರಕ್ಕೆ ಪ್ರತಿಕ್ರಿಯಿಸಿ, ಇನ್ನು ಹೋಗುವುದು ನಿರ್ಧಾರ ಆಗಿಲ್ಲ. ಒಂದೊಳ್ಳೆ ಸಂದೇಶ ಹೋಗಬೇಕಿದೆ. ಎಲ್ಲಾ ಸಮುದಾಯದವರು, ಬಿಜೆಪಿಗೆ, ಮೋದಿಗೆ ಮತ ಹಾಕಬೇಕೆಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಇಲ್ಲಿ ಆರ್ಶೀವಾದ ಪಡೆದರೆ ಇನ್ನಷ್ಟು ಬೆಂಬಲ ಸಿಗುತ್ತದೆ ಎಂದು ಹೇಳಿದರು.

    ರಾಹುಲ್ ಗಾಂಧಿ ಚುನಾವಣೆ ಬದಲಾಯಿಸಲು ಸಾಧ್ಯವಿಲ್ಲ. ಅವರು ಹೋದ ಕಡೆ ಎಲ್ಲಾ ಸೋತಿದ್ದಾರೆ. ಮೋದಿಯವರು (Narendra Modi) ಬರುವುದರಿಂದ ನಮಗೆ ಸಹಾಯವಾಗುತ್ತೆ. ರಾಹುಲ್ ಗಾಂಧಿ ಬರುವುದರಿಂದ ಇನ್ನು ವೋಟ್ ಅವರಿಗೆ ಮೈನಸ್ ಆಗುತ್ತೆ ಎಂದು ತಿಳಿಸಿದರು.

    ನಿರ್ಮಲಾನಂದ ಶ್ರೀಗಳ ಮೈತ್ರಿ ಅಭ್ಯರ್ಥಿಗಳು ಪಡೆದಿದ್ದೇವೆ. ಪ್ರಜಾಪ್ರಭುತ್ವ ಯುದ್ಧದಲ್ಲಿ ಗುರು ರಕ್ಷೆ ಬೇಕು ಎಂದು ಸಿ.ಟಿ ರವಿ ಹೇಳಿದ್ದಾರೆ. ಭಾರತ ವಿಶ್ವಗುರು ಆಗಬೇಕು ಮೋದಿ ಪ್ರಧಾನಿಯಾಗಬೇಕು. ಹಾಗಾಗಿ ಆಶೀರ್ವಾದ ಪಡೆಯಲು ಬಂದಿದ್ದೇವೆ. ಸನಾತನ ಧರ್ಮ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಧರ್ಮವನ್ನ ಡೆಂಗ್ಯೂ ಮಲೇರಿಯಾಗೆ ಹೋಲಿಕೆ ಮಾಡಿದ್ದರು. ಮಠ ದೇವಾಸ್ಥಾನ ಸನಾತನ ಧರ್ಮಗಳ ಪ್ರತೀಕ. ಮಠ ದೇವಸ್ಥಾನ ನಾಶವಾಗಬೇಕು ಅನ್ನೋದು ಅವರ ಉದ್ದೇಶ. ಸನಾತನ ಧರ್ಮ ಉಳಿವಿಗಾಗಿ ಮತ್ತೆ ಮೋದಿಯವರು ಬೇಕು ಎಂದು ಹೇಳಿದರು.

  • ಅಮೆರಿಕಾದಲ್ಲಿ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ- ಕಾಮಗಾರಿ ಪರಿಶೀಲನೆ

    ಅಮೆರಿಕಾದಲ್ಲಿ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ- ಕಾಮಗಾರಿ ಪರಿಶೀಲನೆ

    ನ್ಯೂಯಾರ್ಕ್: ಅಮೆರಿಕದ (America) ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ (Adichunchanagiri) ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದ್ದು, ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು (Nirmalananda Swamiji) ಕಾಮಗಾರಿ ಪರಿಶೀಲನೆ ಮಾಡಿದರು.

    ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಈ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ. ಇದನ್ನೂ ಓದಿ: ನನಗೆ ಸಿಎಂ ಆಯ್ಕೆ ಮಾಡೋದು, ಇಳಿಸೋದು ಬಹಳ ಚೆನ್ನಾಗಿ ಗೊತ್ತಿದೆ: ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

    ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

    ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

    ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಾಕ್ಸಮರ ಮುಂದುವರಿದ ಹಿನ್ನೆಲೆಯಲ್ಲಿ ನಿರ್ಮಲಾನಂದ ಶ್ರೀಗಳು ಇಬ್ಬರಿಗೂ ಕಿವಿ ಮಾತು ಹೇಳಿದ್ದಾರೆ.

    ಇಬ್ಬರು ನಾಯಕರನ್ನು ಕೂಡ ತಮ್ಮ ಅಕ್ಕಪಕ್ಕ ಕೂರಿಸಿಕೊಂಡು ಶ್ರೀಗಳು ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ದ್ವೇಷ-ವೈಮನಸ್ಸು ಬೆಳೆಸಿಕೊಳ್ಳಬೇಡಿ. ಪ್ರೀತಿ ವಿಶ್ವಾಸದಿಂದ ಕೆಲಸ ಮಾಡಿ ಅಂತ ತಿಳಿಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: 5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

    ಇತ್ತ ಏನೂ ಮಾತನಾಡಬೇಡಿ ಎಂದು ಶ್ರೀಗಳ ಸಂದೇಶ ನೀಡಿದ್ರಾ ಎಂಬ ಪ್ರಶ್ನೆಗೆ ಅಶ್ವಥ್ ನಾರಾಣ್ ಪ್ರತಿಕ್ರಿಯಿಸಿ, ರಾಜಕೀಯದಲ್ಲಿ ಎಲ್ಲಾ ಗುರುಹಿರಿಯರು ಸಲಹೆ ನೀಡುತ್ತಾರೆ. ದ್ವೇಷ ವೈಮನಸ್ಸು ಬೆಳೆಸಿಕೊಳ್ಳಬೇಡಿ. ಪ್ರೀತಿ ವಿಶ್ವಾಸದಿಂದ ಕೆಲಸ ಮಾಡಿ ಅನ್ನೋದು ಗುರುಹಿರಿಯರ ಆಶೀರ್ವಾದವಾಗಿದೆ. ಡಿ.ಕೆ ಶಿವಕುಮಾರ್‍ಗೆ ಹಾರೈಸುತ್ತೇವೆ ಎಂದರು.

    ದ್ವೇಷ ಬೆಳೆಸಿಕೊಳ್ಳಬೇಡಿ ಎಂದು ಗುರುಹಿರಿಯರು ಯಾವಾಗಲೂ ಹೇಳುತ್ತಾರೆ. ನಾನು ಡಿ.ಕೆ ಶಿವಕುಮಾರ್ ಅವ್ರಿಗೆ ಶುಭಕೋರುತ್ತೇನೆ. ನೀವು ಸಾಧನೆ ಮಾಡಿ. ಕೆಂಪೇ ಗೌಡರ ಪ್ರೇರಣೆ ತೆಗೆದುಕೊಳ್ಳಲಿ. ಅಭಿವೃದ್ಧಿ ಮಾಡಿ, ಒಳ್ಳೇದಾಗುತ್ತದೆ ಎಂದು ಅಶ್ವಥ್ ನಾರಾಯಣ್ ಹೇಳಿದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]