Tag: ನಿರ್ಮಲಾನಂದ ಸ್ವಾಮೀಜಿ

  • ಶ್ರೀಗಳ ಬಗ್ಗೆ ಮಾತಾಡೋಕೆ ಡಿಕೆಶಿಗೆ ನೈತಿಕತೆ ಇಲ್ಲ: ಅಶೋಕ್ ವಾಗ್ದಾಳಿ

    ಶ್ರೀಗಳ ಬಗ್ಗೆ ಮಾತಾಡೋಕೆ ಡಿಕೆಶಿಗೆ ನೈತಿಕತೆ ಇಲ್ಲ: ಅಶೋಕ್ ವಾಗ್ದಾಳಿ

    ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ (BJP- JDS) ನಾಯಕರು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳನ್ನು (Nirmalananda Swamiji) ಭೇಟಿಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಮೈತ್ರಿ ನಾಯಕರು ಕಿಡಿಕಾರಿದ್ದಾರೆ.

    ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅಶೋಕ್, ಡಿಕೆಶಿಗೆ ಸೋಲಿನ ಭೀತಿ ಕಾಡುತ್ತಿದೆ. ನಿನ್ನೆ ತಮಿಳುನಾಡು ದೇವಸ್ಥಾನಕ್ಕೆ ಹೋಗಿದ್ದರು. ಇವತ್ತು ಇಲ್ಲಿಗೆ ನಾವು ಬಂದಿದ್ದು ನೋಡಿ ಅವರಿಗೆ ಚಳಿ ಜ್ವರ ಬಂದಿದೆ. ಶ್ರೀಗಳ ಬಗ್ಗೆ ಮಾತನಾಡುವುದಕ್ಕೆ ಡಿಕೆಶಿಗೆ ನೈತಿಕತೆ ಇಲ್ಲ. ಸ್ವಾಮೀಜಿ ಬಗ್ಗೆ ಡಿಕೆಶಿ ಅಗೌರವವಾಗಿ ಮಾತಾಡಿದ್ದಾರೆ. ಸ್ವಾಮೀಜಿ ಬಗ್ಗೆ ಎಚ್ಚರಿಕೆಯಿಂದ ಡಿಕೆಶಿ (DK Shivakumar) ಮಾತಾಡಲಿ ಎಂದು ಹೇಳಿದರು.

    ಡಿಕೆಶಿಗೆ ಕಷ್ಟ ಬಂದಾಗ, ಜೈಲಿಗೆ ಹೋಗಿ ಬಂದಾಗ ಸ್ವಾಮೀಜಿ ಸಂತೈಸಿದ್ರು. ಇದನ್ನ ಡಿಕೆಶಿ ಮರೆತಿದ್ದಾರಾ?. ಮಠವನ್ನ ರಾಜಕೀಯಕ್ಕೆ ಎಳೆದು ತಂದಿದ್ದು ಸರಿಯಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಒಕ್ಕಲಿಗ ಸ್ವಾಮೀಜಿ ದಡ್ಡರಲ್ಲ- ಮೈತ್ರಿ ನಾಯಕರು ನಿರ್ಮಲಾನಂದ ಶ್ರೀಗಳ ಭೇಟಿಗೆ ಡಿಕೆಶಿ ಆಕ್ಷೇಪ

    ಹೆಚ್‍ಡಿಕೆ ಸರ್ಕಾರ ಬೀಳಿಸಿದ್ದ ಸಂದರ್ಭದಲ್ಲಿ ಹೆಚ್ಚಾಗಿ ಬಂದವರು ಕಾಂಗ್ರೆಸ್‍ನವರೇ. ಸಿದ್ದರಾಮಯ್ಯ ಅವರಿಗೆ ಕೇಳಲಿ, ಯಾರು ಸರ್ಕಾರ ಬೀಳಿಸಿದ್ದು ಅಂತ. ಡಿಕಶಿ ಮೊದಲೇ ಸೋಲನ್ನ ಒಪ್ಪಿಕೊಂಡಿದ್ದಾರೆ ಎಂದು ಗರಂ ಆದರು.

  • ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ

    ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ

    ಬೆಳಗಾವಿ: ಬಿಜೆಪಿಯ (BJP) ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಮಹನೀಯರ ಜೀವನ ಚರಿತ್ರೆ ಬಗ್ಗೆ ಸುಳ್ಳು ಹೇಳಲು ಹೊರಟಿದೆ. ಕಾಲ್ಪನಿಕ ಕಥೆಗಳ ಮೂಲಕ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

    ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ (C.N.Ashwath Narayan) ಹಾಗೂ ಶೋಭಾ ಕರಂದ್ಲಾಜೆ (Shobha karandlaje) ಟಿಪ್ಪು ಬಗ್ಗೆ ತಪ್ಪು ಮಾಹಿತಿ ನೀಡಲು ಹೊರಟಿದ್ದಾರೆ. ಟಿಪ್ಪು ಸಾಧನೆ ಬಗ್ಗೆ ಇತಿಹಾಸವೇ ಇದೆ. ಇದರ ಕುರಿತು ಸಾಕಷ್ಟು ಗ್ರಂಥಗಳಿವೆ. ಈಗ ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ (Nirmalanandanatha Swamiji) ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಇದನ್ನೂ ಓದಿ: ಶೋಭಾ ಡೆವಲಪರ್ಸ್ ಕಚೇರಿಗೆ ಐಟಿ ಶಾಕ್

    ಹೆಸರುಗಳನ್ನು ಬದಲಾವಣೆ ಮಾಡಲು ಸಾಧ್ಯವೇ? ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು. ಯಾವ ನಿರ್ದೇಶಕ ಬೇಕಾದರೂ ಬರಲಿ, ಅವರನ್ನು ಎದುರಿಸಲು, ಉತ್ತರ ಕೊಡಲು ನಾವು ಸಿದ್ಧರಾಗಿದ್ದೇವೆ. ಒಕ್ಕಲಿಗ ಸಮಾಜಕ್ಕೆ ಅಗೌರವ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದಕ್ಕೆ ನಾವು ಹೋರಾಟ ಮಾಡುತ್ತೇವೆ, ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

    ಬಿಜೆಪಿ ಕಾಲ್ಪನಿಕ ಕಥೆ ಮೂಲಕ ತಪ್ಪು ಸಂದೇಶ ರವಾನಿಸುತ್ತಿದೆ. ಯಾವುದೋ ಒಂದು ಪುಸ್ತಕದಲ್ಲಿ ಈ ಬಗ್ಗೆ ಸಣ್ಣ ಉಲ್ಲೇಖ ಇದೆ. ಸಂಶೋಧನೆ ಮೂಲಕ ಇತಿಹಾಸ ಬರೆದಿರುತ್ತಾರೆ, ಸಂಶೋಧನೆ ಮೂಲಕವೇ ಇತಿಹಾಸ ಇರಬೇಕು. ಉರಿಗೌಡ-ನಂಜೇಗೌಡ ಹೆಸರನ್ನು ಇಷ್ಟು ದಿನ ಎಲ್ಲಿ ಕೇಳಿದ್ದೀರಿ? ಬಿಜೆಪಿ ನಾಯಕರ ಮೇಲೆ ಮೊದಲು ಕೇಸ್ ಹಾಕಬೇಕು. ಯಾರು ಪ್ರಚೋದನೆ ಮಾಡುತ್ತಿದ್ದಾರೆ ಅವರ ಮೇಲೆ ಕೇಸ್ ಹಾಕಬೇಕು. ಪೇ ಸಿಎಂ ಅಭಿಯಾನ ಆದಾಗ ನನ್ನ ಮತ್ತು ಸಿದ್ದರಾಮಯ್ಯ (Siddaramaiah) ಮೇಲೆ ಕೇಸ್ ಹಾಕಿದ್ದರು. ಈಗೇಕೆ ಸೈಲೆಂಟ್ ಆಗಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಬಂತು ಮೊದಲ ಎಫ್‌ಡಿಐ – ಶಾಪಿಂಗ್‌ ಮಾಲ್‌ ನಿರ್ಮಾಣಕ್ಕೆ ಭೂಮಿ ಪೂಜೆ

    ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್ ಮತ್ತು ಸಿಟಿ ರವಿಯವರು (C.T.Ravi) ಒಕ್ಕಲಿಗ ಹಾಗೂ ಹಿಂದೂ ವಿರೋಧಿಗಳು. ನಿರ್ಮಲಾನಂದ ಸ್ವಾಮೀಜಿ ಯಾವ ಡೈರೆಕ್ಟರನ್ನು ಕರೆದು ಮಾತನಾಡಬೇಡಿ. ಕರೆದರೆ ಒಕ್ಕಲಿಗ ಸಮಾಜ ತಲೆ ತಗ್ಗಿಸಿದಂತೆ ಆಗುತ್ತದೆ. ನಾನೂ ಕೂಡ ಸ್ವಾಮೀಜಿಗೆ ಪತ್ರಬರೆದು ಮನವಿ ಮಾಡುತ್ತೇನೆ. ಈ ಹೋರಾಟದ ನಾಯಕತ್ವ ನಿರ್ಮಲಾನಂದ ಸ್ವಾಮೀಜಿಯವರು ವಹಿಸಿಕೊಳ್ಳಬೇಕು. ಎಲ್ಲಾ ಸಮಾಜದ ಸ್ವಾಮೀಜಿಗಳು ಇದಕ್ಕೆ ಕೈಜೋಡಿಸಬೇಕು. ಒಕ್ಕಲಿಗ ಸ್ವಾಮೀಜಿ ಮೊದಲು ಹೋರಾಟ ಮಾಡಲಿ. ಬಳಿಕ ಪಕ್ಷದ ಕಡೆಯಿಂದ ಹೋರಾಟ ಮಾಡಲು ಯೋಚಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಫೋಟೋ ಸ್ಟೇಟಸ್ ಹಾಕಿದ್ದ ಯವಕನಿಗೆ ಹಲ್ಲೆ – ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್‌

    ನಿರ್ಮಲಾನಂದ ಸ್ವಾಮೀಜಿಯವರನ್ನು ಮುನಿರತ್ನ (Munirathna) ಭೇಟಿ ಮಾಡಿ ಮಾತುಕತೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿ ಹಾಗೂ ಮುನಿರತ್ನ ಸಭೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ಚಿತ್ರ ಆಗಬಾರದೆಂದು ಸ್ವಾಮೀಜಿಗೆ ನಾನು ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌ – ಸಿನಿಮಾ ಮಾಡಲ್ಲ ಎಂದ ಮುನಿರತ್ನ

    ಬೆಳಗಾವಿಯಲ್ಲಿ (Belagavi) ರಾಹುಲ್ ಗಾಂಧಿ (Rahul Gandhi) ಸಮಾವೇಶದ ಕುರಿತು ಮಾತನಾಡಿದ ಅವರು, ಭಾರತ ಜೋಡೋ ಯಾತ್ರೆ ಬಳಿಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಯುವ ಕ್ರಾಂತಿ ಸಮಾವೇಶ ನಡೆಸುತ್ತಿದ್ದಾರೆ. ಇಂದು ಕಾಂಗ್ರೆಸ್ಸಿಗೆ (Congress) ಐತಿಹಾಸಿಕ ಕ್ಷಣ. ದೇಶ ಹಾಗೂ ರಾಜ್ಯದ ಬದಲಾವಣೆಗೆ ಯುವಕರು ಎಚ್ಚರಿಕೆ ವಹಿಸಬೇಕು. ಮಹಿಳೆಯರು, ಯುವಕರು ಒಗ್ಗಟ್ಟಾದಾಗ ಬದಲಾವಣೆ ಸಾಧ್ಯವಾಗುತ್ತದೆ. ಮಹಿಳೆಯರು, ಯುವಕರಿಗೆ ಜಾಗೃತಿಯ ಅಗತ್ಯವಿದೆ. ಅದಕ್ಕಾಗಿ ರಾಹುಲ್ ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

    ಪ್ರಿಯಾಂಕಾ ಗಾಂಧಿ (Priyanka Gandhi Vadra) ಬೆಂಗಳೂರಿಗೆ (Bengaluru) ಬಂದು ಗೃಹಲಕ್ಷ್ಮಿ ಯೋಜನೆ ಘೋಷಿಸಿದರು. ಅದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರ ಕೂಡ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಯೋಜನೆಗೆ ಮುಂದಾಗಿದೆ. ನಮ್ಮ ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ, ಮಾಡಲಿ. ಚುನಾವಣೆಯಲ್ಲಿ 500ಕ್ಕೂ ಅಧಿಕ ಭರವಸೆಯನ್ನು ಪ್ರಣಾಳಿಕೆಯಲ್ಲಿ ಹಾಕಿದ್ದಾರೆ. ನಾಲ್ಕು ಬಜೆಟ್ ಮಂಡಿಸುವ ಅವಕಾಶ ಇದ್ದರೂ ಬಹುತೇಕ ಯೋಜನೆ ಜಾರಿಯಾಗಲಿಲ್ಲ. ಕಾಂಗ್ರೆಸ್ ಯೋಜನೆ ನೋಡಿ ಬಿಜೆಪಿ ಸರ್ಕಾರ ನಮ್ಮನ್ನು ಫಾಲೋ ಮಾಡುತ್ತಿದೆ. ಗೃಹಲಕ್ಷ್ಮಿಗೆ ಪರ್ಯಾಯವಾಗಿ ಸ್ತ್ರಿಶಕ್ತಿ ಯೋಜನೆ, ಯುವಶಕ್ತಿ ಯೋಜನೆಗೆ ಬಿಜೆಪಿ ಮುಂದಾಗಿದೆ ಎಂದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್‌ಗೆ ಮತ್ತೊಂದು ಶಾಕ್

    ನಾವು ಜನಪರ ಯೋಜನೆ ಬಗ್ಗೆ ವಿಚಾರ ಮಾಡುತ್ತಿದ್ದೇವೆ. ಬಿಜೆಪಿ ಭ್ರಷ್ಟಾಚಾರದ (Corruption) ಬಗ್ಗೆ ಚಿಂತೆ ಮಾಡುತ್ತದೆ. ಬಿಜೆಪಿ ದೇಶದಲ್ಲೇ ಅತಿ ಭ್ರಷ್ಟ ಸರ್ಕಾರವಾಗಿದೆ. ಮಂತ್ರಿಗಳು, ಶಾಸಕರು ನೇರವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆಗಿದ್ದು, ಯುವಕರು ರೋಸಿ ಹೋಗಿದ್ದಾರೆ. ಅಧಿಕಾರ ಇದ್ದಾಗ ಮಾಡದ ಬಿಜೆಪಿಯವರು ಈಗ ಪ್ರಣಾಳಿಕೆಯಲ್ಲಿ ಹಾಕುತ್ತಿದ್ದಾರೆ. ಯುವಕರು, ಮಹಿಳೆಯರನ್ನು ಸೆಳೆಯಲು ಭರವಸೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು. ಇದೇ ವೇಳೆ ಕನಕಪುರಕ್ಕೆ (Kanakapura) ಬರುತ್ತೇನೆ ಎಂಬ ರಮೇಶ್ ಜಾರಕಿಹೊಳಿ (Ramesh Jarakiholi) ವಿಚಾರಕ್ಕೆ ಐ ವಿಶ್ ಹಿಮ್ ಎಂದು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

  • ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

    ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

    – ಚಕ್ರತೀರ್ಥ ಮೇಲೆ ನಾಳೆ ಕ್ರಮ ಆಗುತ್ತಾ?

    ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ.

    ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‍ನಲ್ಲಿ ಬಹಳ ಜನ ಸ್ನೇಹಿತರಿದ್ದಾರೆ- ರಾಜಕೀಯ ದಾಳ ಉರುಳಿಸಿದ ಸಿಎಂ

    ನಿನ್ನೆ ಸಚಿವ ಬಿ.ಸಿ.ನಾಗೇಶ್ ಆದಿಚುಂಚನಗಿರಿ ಮಠಕ್ಕೆ ಭೇಟಿ ಕೊಟ್ಟಿದ್ರು. ಇಂದು ಪಠ್ಯಪುಸ್ತಕ ನಿರ್ದೇಶನಾಲಯದ ನಿರ್ದೇಶಕ ಮಾದೇಗೌಡ ನೇತೃತ್ವದ ತಂಡ ಶ್ರೀಗಳನ್ನು ಭೇಟಿ ಮಾಡಿ ಕುವೆಂಪು ಪಠ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಬಸವಣ್ಣಗೆ ಪಠ್ಯದಲ್ಲಿ ಅಪಮಾನ ಮಾಡಲಾಗಿದೆ. ಲಿಂಗಾಯತ ಧರ್ಮದ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಕೂಡಲೇ ಇದನ್ನೆಲ್ಲಾ ಹಿಂಪಡೆದು, ಹಳೆಯ ಪಠ್ಯ ಮುಂದುವರೆಸಬೇಕು. ಇಲ್ಲ ಅಂದ್ರೆ ಹೋರಾಟ ಮಾಡಬೇಕಾಗುತ್ತದೆ ಎಂದು ಸಾಣೆಹಳ್ಳಿ ಶ್ರೀಗಳು ಪತ್ರ ಬರೆದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    TEXTBOOK

    ಕೂಡಲಸಂಗಮ ಶ್ರೀಗಳು ಕೂಡ, ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಇರೋದನ್ನು ನೋಡಿ ಎದೆಗೆ ಕಲ್ಲು ಹೊಡೆದಂಗೆ ಆಗಿದೆ. ಕುವೆಂಪು, ಬಸವಣ್ಣ ತತ್ವಗಳಿಗೆ ಅಪಚಾರ ಎಸಗಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರದ್ದು ಮಾಡುವಂತೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

    ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ವಿವಾದ ರಹಿತ ವ್ಯಕ್ತಿಗಳಿಗೆ ಸಮಿತಿಯಲ್ಲಿ ಜಾಗ ಕೊಡ್ಬೇಕು ಎಂದಿದ್ದಾರೆ. ಈ ಬೆನ್ನಲ್ಲೇ ಮಾತನಾಡಿದ ಸಿಎಂ, ಸಮಿತಿಯಿಂದ ರೋಹಿತ್ ಚಕ್ರತೀರ್ಥ ಸದಸ್ಯತ್ವ ವಜಾ ಬಗ್ಗೆ ನಾಳೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 21 ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ – ಕರ್ನಾಟಕಕ್ಕೆ 8 ಸಾವಿರ ಕೋಟಿ ಬಿಡುಗಡೆ

    ಸಾಣೆಹಳ್ಳಿ ಸ್ವಾಮೀಜಿಗಳೊಂದಿಗೆ ಮಾತನಾಡಿ ಗೊಂದಲ ಬಗೆಹರಿಸೋದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಕುವೆಂಪು ಬಗ್ಗೆ ಅಪಮಾನ ಮಾಡಲಾಗಿದೆ ಅನ್ನೋ ಆರೋಪಕ್ಕೆ ರೋಹಿತ್ ಚಕ್ರತೀರ್ಥರಿಂದ ಸ್ಪಷ್ಟೀಕರಣ ನೀಡಿದ್ದು, ಕುವೆಂಪು ಅವರಿಗೆ ಅಪಮಾನ ಮಾಡಿಲ್ಲ ಎಂದಿದ್ದಾರೆ. 2017ರಲ್ಲಿ ವಾಟ್ಸಪ್ ಮೂಲಕ ಬಂದ ನಾಡಗೀತೆ ಧಾಟಿಯ ನಾಲ್ಕು ಸಾಲುಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದೆ ಅಷ್ಟೇ. ಆದ್ರೆ, ಇದನ್ನು ಕೆಲವರು ತಮಗೆ ಬೇಕಾದಂತೆ ತಿರುಚಿದ್ದಾರೆ. ಪೊಲೀಸ್ ಇಲಾಖೆ ಕೂಡ ಪ್ರಕರಣ ಕೈಬಿಟ್ಟಿದೆ. ಹಳೆಯ ಪ್ರಕರಣವನ್ನು ಮತ್ತೆ ಕೆದಕಿ ವಿವಾದವಾಗಿಸಿದ್ದು ವಿಷಾದನೀಯ ಎಂದಿದ್ದಾರೆ.

    ಮೈಸೂರು ರಾಜವಂಶ ಯದುವೀರ್ ಮಾತ್ರ, ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ ಎಂದು ಸಲಹೆ ನೀಡಿದ್ದಾರೆ.

  • ಕುವೆಂಪು ಅವಹೇಳನ, ರಾಷ್ಟ್ರಗೀತೆ ತಿರುಚಿ ಬರೆದವರ ವಿರುದ್ಧ ಕ್ರಮಕ್ಕೆ ಕಸಾಪ ಆಗ್ರಹ

    ಕುವೆಂಪು ಅವಹೇಳನ, ರಾಷ್ಟ್ರಗೀತೆ ತಿರುಚಿ ಬರೆದವರ ವಿರುದ್ಧ ಕ್ರಮಕ್ಕೆ ಕಸಾಪ ಆಗ್ರಹ

    ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

    ಕುವೆಂಪು ಅವರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿ. ಅವರ ಸಾಹಿತ್ಯವನ್ನು ಓದಿದವರ್ಯಾರೂ ಚಕಾರ ಎತ್ತುವ ಧೈರ್ಯ ಮಾಡುವುದಿಲ್ಲ. ಯಾರು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿ ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

    ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರನ್ನು ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಶೀಘ್ರವಾಗಿಯೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: PSI ನೇಮಕಾತಿ ಅಕ್ರಮ: 2 ತಿಂಗಳ ಬಳಿಕ ಅಭ್ಯರ್ಥಿ ಶಾಂತಿಬಾಯಿ ಅರೆಸ್ಟ್

    ಪತ್ರದಲ್ಲಿ ಏನಿದೆ?
    ಜಗದ ಕವಿ, ಯುಗದ ಕವಿ, ನಾಡು ಕಂಡ ಅಪ್ರತಿಮ ಮಹಾಕವಿ, ದಾರ್ಶನಿಕ, ರಸಋಷಿ ಕುವೆಂಪು ಅವರಿಗೆ ಅತ್ಯಂತ ಗೌರವ ಸಲ್ಲಿಸುವ ಸಂಸ್ಥೆ ಕರ್ನಾಟಕದಲ್ಲಿ ಯಾವುದಾದರೂ ಇದೇ ಅಂದರೆ, ಅದು ಕನ್ನಡ ಸಾಹಿತ್ಯ ಪರಿಷತ್ತು. ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ಗೀತೆಯನ್ನು “ನಾಡಗೀತೆ” ಮಾಡಬೇಕೆಂದು ಮೊದಲ ಅಳವಡಿಸಿಕೊಂಡಿದ್ದು ಸಾಹಿತ್ಯ ಪರಿಷತ್ತು. 1971ರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಪರಿಷತ್ತು ನಾಡಗೀತೆಯನ್ನು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಹಾಡಿಸಲಾಗುತ್ತಿತ್ತು.

    ಈ ಮೂಲಗೀತೆ 1924ರಲ್ಲಿ ರಚನೆಯಾಗಿ, ಇಂದಿಗೆ 98 ವರ್ಷವಾಯಿತು. ಎರಡು ಸಲ ಪರಿಷ್ಕರಣೆಗೊಂಡು ಮೈಸೂರಿನ ಸಂಪದಭ್ಯುದಯ ಪತ್ರಿಕೆಯಲ್ಲಿ ಪ್ರಕಟವಾಯಿತು. ಅನಂತರ ಮತ್ತೆ ಪರಿಷ್ಕರಣೆಗೊಂಡು ಕುವೆಂಪು ಅವರ ಕೊಳಲು ಕವನ ಸಂಕಲನದಲ್ಲಿ ಪ್ರಕಟವಾಯಿತು. ಇದು ಭಾರತದ ಅಖಂಡತೆಯನ್ನೂ, ಭಾವೈಕ್ಯತೆಯನ್ನೂ ಎತ್ತಿ ಹಿಡಿಯುವ ಗೀತೆ. ಭಾರತಾಂತರ್ಗತ ಕರ್ನಾಟಕ, ಕರ್ನಾಟಕಾಂತರ್ಗತ ಭಾರತ ಎಂಬುದನ್ನು ಆವೇಶವಿಲ್ಲದೆ, ಘೋಷಣೆಗಳಿಲ್ಲದೆ ಸಾರುವ ಭಾವನಾತ್ಮಕ ಗೀತೆಯಿದು. ಇಂತಹ ಅಪರೂಪದ ಗೀತೆಯನ್ನು ಪರಿಷತ್ತು ನಾಡಗೀತೆಯಾಗಿ ಆರಿಸಿತು. ಅದರ ಅನಂತರ ಸರ್ಕಾರವೂ ಇದನ್ನೇ ನಾಡಗೀತೆ ಎಂದು ಅಂಗೀಕರಿಸಿ, ಪರಿಷತ್ತಿನ ಆಯ್ಕೆಯನ್ನು ದೃಢಗೊಳಿಸಿ, 6-1-2004ರಂದು ಕರ್ನಾಟಕದ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.

    ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ದಿನಪತ್ರಿಕೆಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ. ಇದನ್ನೂ ಓದಿ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ

    ʻಮನುಜ ಮತ ವಿಶ್ವಪಥʼ ಎಂಬ ಸಂದೇಶದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ, ಪ್ರಕೃತಿಯಲ್ಲಿ ದೇವರನ್ನು ಕಾಣುವ, ದೇವರಲ್ಲಿ ಪ್ರಕೃತಿಯನ್ನು ಕಾಣುವ ದೈವಿಕ ಸಂಬಂಧಗಳನ್ನು ಪ್ರತಿಪಾದಿಸಿದ ಸರ್ವೋದಯ ತತ್ವಪ್ರತಿಪಾದಕರು ಕುವೆಂಪು ಅವರು. ಸಾಮಾಜಿಕ, ಧಾರ್ಮಿಕ, ಆರ್ಥಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ಜಗತ್ತು ʻಸರ್ವಜನಾಂಗದ ಶಾಂತಿಯ ತೋಟʼವಾಗಬೇಕೆಂದು ಕನಸು ಕಂಡ ಶ್ರೇಷ್ಠ ದಾರ್ಶನಿಕರು. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿಗಳು. ಅವರ ಸಾಹಿತ್ಯವನ್ನು ಓದಿದವರ್ಯಾರೂ ಸಹ ಕುವೆಂಪು ಅವರ ಕುರಿತು ಚಕಾರ ಎತ್ತುವ ಧೈರ್ಯವನ್ನು ಮಾಡುವುದಿಲ್ಲ. ಯಾರು ಈ ಮಹಾದಾರ್ಶನಿಕರನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿಯನ್ನು ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ.

    ಶ್ರೀರಾಮಕೃಷ್ಣ ಪರಮಹಂಸರ, ಶ್ರೀ ವಿವೇಕಾನಂದರ ಚಿಂತನೆಗಳನ್ನು ಆದರ್ಶವನ್ನಾಗಿಸಿಕೊಂಡು, ಸಾಹಿತ್ಯದಲ್ಲಿ ಆಧ್ಯಾತ್ಮೀಕತೆಯನ್ನು ಸರಳವಾಗಿ, ಎಲ್ಲರೂ ಅರ್ಥ ಮಾಡಿಕೊಳ್ಳುವ ಹಾಗೆ ರಚಿಸಿದ ಮಹಾಕವಿಯ ಕುರಿತು ನಿಂದನೆಯನ್ನು ಮಾಡಿರುವುದು ವೈಯಕ್ತಿಕವಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಖಂಡಿಸುವುದರ ಜೊತೆಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.

    ಕುವೆಂಪು ಅವರ ಪುಸ್ತಕಗಳನ್ನು ಬಹಳ ಗೌರವದಿಂದ, ಭಕ್ತಿಯಿಂದ ಓದುವ ನಾನು, ಅವರ ಪ್ರಕೃತಿ ವರ್ಣನೆಗೆ ಮಾರುಹೋಗುವುದರ ಜೊತೆಗೆ, ಅವರ ಶ್ರೇಷ್ಠ ಚಿಂತನೆಗಳಿಂದ ಪ್ರೇರಿತನಾಗಿ “ಮನುಜ ಮತದಲ್ಲಿ” ನಂಬಿಕೆ ಇಟ್ಟಂಥವನು. ಕುವೆಂಪು ಅವರ ಚಿಂತನೆಯ ಮಾರ್ಗದಲ್ಲಿಯೇ, ಕನ್ನಡ ಸಾಹಿತ್ಯ ಪರಿಷತ್ತು ಜಾತಿ, ಮತ, ಧರ್ಮ, ಲಿಂಗ ತಾರತಮ್ಯವಿಲ್ಲದೆ ನನ್ನ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಸಾಧಾರಣವಾಗಿ ನನ್ನ ಎಲ್ಲ ಭಾಷಣಗಳಲ್ಲೂ ಕುವೆಂಪು ಅವರ ಚಿಂತನೆಗಳನ್ನು ಉಲ್ಲೇಖಿಸುತ್ತೇನೆ. ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ. ಹಿನ್ನೆಲೆ ತಿಳಿದುಕೊಳ್ಳದೇ ಮಾತನಾಡುವುದು, ಅವರ ಬೇಜವಾಬ್ದಾರಿತನವನ್ನು ಹಾಗೂ ಅಪ್ರಬುದ್ಧತೆಯನ್ನು ತೋರಿಸುತ್ತದೆ.

    ಕುವೆಂಪು ಅವರನ್ನು ನಿಂದಿಸಿದವರ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ತೀರ್ಮಾನ ಬೆಂಬಲಿಸುತ್ತಾ ತಡಮಾಡದೇ ಅಂಥವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತದೆ.

    ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಹಾಗೂ ಪರಿಷತ್ತಿನ ಎಲ್ಲಾ ಜಿಲ್ಲಾ ಘಟಕಗಳ, ಗಡಿನಾಡ ಘಟಕಗಳ, ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಈ ಖಂಡನೆಗೆ ಒಮ್ಮತದಿಂದ ಕೇಂದ್ರ ಪರಿಷತ್ತಿಗೆ ಬೆಂಬಲವನ್ನು ಸೂಚಿಸಿದ್ದಾರೆ.

  • ಕೆಂಪೇಗೌಡರ ಪುತ್ಥಳಿ ಕಾರ್ಯ- ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಪರಿಶೀಲನೆ

    ಕೆಂಪೇಗೌಡರ ಪುತ್ಥಳಿ ಕಾರ್ಯ- ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಪರಿಶೀಲನೆ

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಪಾರ್ಕ್ ಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಶ್ರೀಗಳು ಭೇಟಿ ನೀಡಿ ಕಾಮಗಾರಿ ಸ್ಥಳ ವೀಕ್ಷಣೆ ಮಾಡಿದರು.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂಪೇಗೌಡ ಪಾರ್ಕ್ ನಲ್ಲಿ ಸರ್ಕಾರದ ವತಿಯಿಂದ ಬೃಹತ್ ಪುತ್ಥಳಿ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಲ್ಲಿ ರಾಜ್ಯ ಸರ್ಕಾರದ ವತಿಯಿಂದ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಪುತ್ಧಳಿ ಮತ್ತು ಪಾರ್ಕ್ ನಿರ್ಮಾಣಕ್ಕೆ ಕಳೆದ ವರ್ಷ ಸಿಎಂ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದರು. ಹೀಗಾಗಿ ಕೆಂಪೇಗೌಡರ ಬೃಹತ್ ಪುತ್ಥಳಿ ಮತ್ತು ಪಾರ್ಕ್ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು ಇಂದು ಆ ಸ್ಥಳಕ್ಕೆ ಸ್ವಾಮೀಜಿಗಳು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

    ದೆಹಲಿಯಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನ ನಿರ್ಮಾಣ ಮಾಡ್ತಿದ್ದು, ಇಂದು ಪ್ರತಿಮೆಯ ಮೊದಲ ಭಾಗವಾಗಿ ನಿರ್ಮಾಣವಾಗಿರವ ಪ್ರತಿಮೆಯ ಕಾಲುಗಳು ದೆಹಲಿಯಿಂದ ಪ್ರತಿಮೆ ಸ್ಥಳಕ್ಕೆ ಬಂದು ತಲುಪಿದೆ. ಹೀಗಾಗಿ ಪ್ರತಿಮೆಯ ಪಾದಗಳನ್ನ ಸ್ವಾಮೀಜಿ ಸೇರಿದಂತೆ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿದ್ರು. ಅಲ್ಲದೆ ಮುಂದಿನ 2022 ರ ವೇಳೆಗೆ ಪಾರ್ಕ್ ಮತ್ತು ಪುತ್ಥಳಿ ನಿರ್ಮಾಣಕ್ಕೆ ಗಡುವು ನೀಡಿದ್ದು ನಿರ್ಮಾಣದ ಕಾರ್ಯ ಸಹ ಭರದಿಂದ ಸಾಗಿದೆ.

    ಬೆಂಗಳೂರಿನಿಂದ ದೇಶ ಮತ್ತು ವಿದೇಶಗಳಿಗೆ ತೆರಳಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಏರ್ಪೋಟ್ ಪ್ರವೇಶಿಸುತ್ತಿದ್ದಂತೆ, ಬೆಂಗಳೂರು ಮಹಾನಗರದ ನಿರ್ಮಾತೃ, ಬೃಹತ್ ನಾಡಪ್ರಭು ಕೇಂಪೇಗೌಡರ ಪುತ್ಥಳಿ ಮತ್ತು ಪಾರ್ಕ್ ಕಾಣಿಸುವ ರೀತಿಯಲ್ಲಿ ಪ್ಲಾನ್ ರೂಪಿಸಲಾಗಿದೆ. ನಾಡಪ್ರಭುವಿನ ಪುತ್ಥಳಿ ದೇಶ ವಿದೇಶಿ ಪ್ರಯಾಣಿಕರ ಕಣ್ಮನ ಸೆಳೆಯಲಿದೆ.

  • ರಾಜ್ಯ ಸರ್ಕಾರಕ್ಕೆ ನಿರ್ಮಲಾನಂದ ಸ್ವಾಮೀಜಿ ಅಭಿನಂದನೆ

    ರಾಜ್ಯ ಸರ್ಕಾರಕ್ಕೆ ನಿರ್ಮಲಾನಂದ ಸ್ವಾಮೀಜಿ ಅಭಿನಂದನೆ

    ಕೋಲಾರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೃತೃತ್ವದ ರಾಜ್ಯ ಸರ್ಕಾರಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

    ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದಲ್ಲಿರುವ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ರಾಜ್ಯದ ಬಹು ದೊಡ್ಡ ಸಮುದಾಯ ನಮ್ಮದು. ರಾಜ್ಯ ಸರ್ಕಾರಕ್ಕೆ ಈ ಹಿಂದೆ ನಾವು ನಿಗಮ ಮಂಡಳಿಗಾಗಿ ಒತ್ತಾಯ ಮಾಡಿದ್ವಿ. ಅದರಂತೆ ಈ ಬಜೆಟ್ ನಲ್ಲಿ ನಿಗಮ ಸ್ಥಾಪನೆ ಮಾಡಿರುವುದಕ್ಕೆ ಅಭಿನಂದನೆ ಎಂದು ಹೇಳಿದರು.

    500 ಕೊಟಿ ರೂಪಾಯಿ ಮೀಸಲಿಟ್ಟಿರುವ ರಾಜ್ಯ ಸರ್ಕಾರವನ್ನ ಅಬಿನಂಧಿಸುತ್ತೇನೆ. ಇದಕ್ಕೆ ಶ್ರಮಿಸಿದವರಿಗೂ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ:  ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ಇಂದಿನ ಬಜೆಟ್ ನಲ್ಲಿ ವಿವಿಧ ಮಂಡಳಿಗಳ ಅಭಿವೃದ್ಧಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಮತ್ತು ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಸಿ 500 ಕೋಟಿ ಮೀಸಲಿರಿದ್ದಾರೆ.

    ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಗಳ ಅನುದಾನ. ಈಗಾಗಲೇ 100 ಕೋಟಿ ಬಿಡುಗಡೆಗೊಳಿಸಲಾಗಿದೆ. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪನೆ ಹಾಗೂ ನಿಗಮ ಚಟುವಟಿಕೆಗಳಿಗೆ 500 ಕೋಟಿ ವೆಚ್ಚ ಮಾಡಲು ಯೋಜಿಸಲಾಗಿದೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ ಮೀಸಲಿಟ್ಟಿದ್ದಾರೆ.

  • ಡಾ.ಶ್ರೀ ನಿರ್ಮಲಾನಂದ ಸ್ವಾಮೀಜಿ ಕರ್ನಾಟಕ ಜಾನಪದ ಪರಿಷತ್ತಿನ ಪ್ರಧಾನ ಪೋಷಕರಾಗಿ ಘೋಷಣೆ: ಟಿ ತಿಮ್ಮೇಗೌಡ

    ಡಾ.ಶ್ರೀ ನಿರ್ಮಲಾನಂದ ಸ್ವಾಮೀಜಿ ಕರ್ನಾಟಕ ಜಾನಪದ ಪರಿಷತ್ತಿನ ಪ್ರಧಾನ ಪೋಷಕರಾಗಿ ಘೋಷಣೆ: ಟಿ ತಿಮ್ಮೇಗೌಡ

    ರಾಮನಗರ: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಪ್ರಧಾನ ಪೋಷಕರನ್ನಾಗಿ ಪರಿಷತ್ತಿನ ಆಡಳಿತ ಮಂಡಳಿಯ ಸಭೆಯಲ್ಲಿ ನೇಮಕ ಮಾಡಕೊಳ್ಳಲಾಗಿದೆ ಎಂದು ಎಂದು ಪರಿಷತ್ತಿನ ರಾಜ್ಯ ಘಟಕದ ಅದ್ಯಕ್ಷ ಡಾ. ಟಿ. ತಿಮ್ಮೇಗೌಡ ಜನಪದ ಲೋಕದಲ್ಲಿ ತಿಳಿಸಿದ್ದಾರೆ.

    ರಾಮನಗರ ಹೊರವಲಯದಲ್ಲಿನ ಜಾನಪದ ಲೋಕದ ಸರಸ್ವತಿ ಮಂದಿರದಲ್ಲಿ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಎಚ್.ಎನ್. ನಂಜರಾಜ್ ಸ್ಮರಣಾರ್ಥ ರಾಜ್ಯ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ರಾಜ್ಯದ ವಿವಿದೆಡೆಗಳಿಂದ ನೂರಾರು ಜನಪದ ಗಾಯಕರು ಹಾಗೂ ಜನಪದ ಗಾಯನ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಜನಪದ ಗೀತೆಗಾಯನ ಮೂಲಕ ಒಬ್ಬರಿಗೊಬ್ಬರು ಸಾಕಷ್ಟು ಪೈಪೋಟಿ ನೀಡಿದ್ದು ನೆರೆದಿದ್ದವರನ್ನು ಮೂಕವಿಸ್ಮಿತರನ್ನಾಗಿಸಿತ್ತು.

    ಜನಪದ ಗೀತಗಾಯನ ಸ್ಪರ್ಧೆಯಲ್ಲಿ ಮಂಡ್ಯ ತಾಲೂಕಿನ ಕೀಲಾರ ಗ್ರಾಮದ ಮಂಜೇಶ್‍ಗೌಡ ಮತ್ತು ತಂಡ ಪ್ರಥಮ ಬಹುಮಾನಗಳಿಸುವ ಮೂಲಕ ಟ್ರೋಫಿ ಹಾಗೂ ಹತ್ತು ಸಾವಿರ ರೂಪಾಯಿಗಳ ನಗದು ಬಹುಮಾನವನ್ನ ತನ್ನದಾಗಿಸಿಕೊಂಡ್ರೆ, ಮುಧೋಳದ ಯಶೋಧ ನಡುವಿನಮನಿ ಮತ್ತು ತಂಡ ದ್ವಿತೀಯ ಬಹುಮಾನ ಪಡೆದು ಟ್ರೋಫಿ ಹಾಗೂ ಐದು ಸಾವಿರ ನಗದು ಬಹುಮಾನ ಹಾಗೂ ಅರಕಲಗೂಡಿನ ಪ್ರದೀಪ ಮತ್ತು ತಂಡ ತೃತೀಯ ಬಹುಮಾನ ಗಳಿಸಿ ಟ್ರೋಫಿ ಹಾಗೂ ಮೂರು ಸಾವಿರ ನಗದು ಬಹುಮಾನವನ್ನು ಪಡೆದರು. ಗೀತಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಡಾ. ರಂಗಾರೆಡ್ಡಿ ಕೋಡಿರಾಂಪುರ, ಕರ್ನಾಟಕ ಜಾನಪದ ಪರಿಷತ್ತಿನ ಮೆನೇಜಿಂಗ್ ಟ್ರಸ್ಟಿ ಆದಿತ್ಯಾನಂಜರಾಜ್, ತೀರ್ಪುಗಾರರಾದ ಹೊಳಗೆರೆಹಳ್ಳಿ ಲೋಕೇಶ್, ಡಾ.ಯು.ಎಂ. ರವಿ, ಬಂಡ್ಲಳ್ಳಿ ವಿಜಯ್ ಕುಮಾರ್, ಜಾನಪದ ಲೋಕದ ಮುಖ್ಯ ಆಡಳಿತಾಕಾರಿ ಸಿ.ಎನ್. ರುದ್ರಪ್ಪ, ಆಡಳಿತಾಕಾರಿ ಡಾ. ಕುರುವ ಬಸವರಾಜ್ ಇತರರು ಪಾಲ್ಗೊಂಡಿದ್ದರು.

    ಇದೇ ವೇಳೆ ಮಾತನಾಡಿದ ಜನಪದ ಪರಿಷತ್ತಿನ ಅದ್ಯಕ್ಷ ಡಾ.ಟಿ ತಿಮ್ಮೇಗೌಡರವರು ಆದಿಚುಂಚನಗಿರಿಯ ಮಹಾಸಂಸ್ಥಾನದ ಪೀಠಾದ್ಯಕ್ಷ ಡಾ.ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಕರ್ನಾಟಕ ಜನಪದ ಪರಿಷತ್ತಿನ ಪ್ರಧಾನ ಪೋಷಕರನ್ನಾಗಿ ಹಾಗೂ ರಾಮನಗರ ತಾಲೂಕಿನ ಅರ್ಚಕರಹಳ್ಳಿ ಬಳಿ ಇರುವ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಅವರನ್ನು ಪರಿಷತ್ತಿನ ಆಡಳಿತ ಮಂಡಳಿಯ ಧರ್ಮದರ್ಶಿಗಳನ್ನಾಗಿ ಸರ್ವಾನುಮತದಿಂದ ಪರಿಷತ್ತಿನ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿಸಿದರು.

    ಜಾನಪದ ಲೋಕದ ಬೆಳ್ಳಿಹಬ್ಬ ಹಾಗೂ ಲೋಕೋತ್ಸವವನ್ನು ಫೆಬ್ರವರಿ 16ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಗುತ್ತದೆ. ಹಾಗೂ ಫೆಬ್ರವರಿ 17 ಹಾಗೂ 18 ರಂದು ಬೆಳ್ಳಿ ಹಬ್ಬ ಹಾಗೂ ಲೋಕೋತ್ಸವವನ್ನು ವಿಜೃಂಭಣೆಯಿಂದ ಜನಪದ ಲೋಕದಲ್ಲಿ ಆಚರಿಸಲಾಗುತ್ತದೆ ಎಂದರು. ಅದರಲ್ಲೂ ಬೆಳ್ಳಿ ಹಬ್ಬವನ್ನು ಜನಪದ ಲೋಕದಲ್ಲಿ ಜನಪದ ಕಲಾತಂಡಗಳು ಹಾಗೂ ಜನಪದ ತತ್ವಗಳನ್ನು ಸಾರುವ ದೃಷ್ಟಿಯಿಂದ ಜನಪದ ಲೋಕೋತ್ಸವವನ್ನು ಆಚರಿಸಲಾಗುವುದು ಎಂದು ಹೇಳಿದರು.

  • ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

    ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

    ಬೆಂಗಳೂರು: ಫೋನ್ ಕದ್ದಾಲಿಕೆ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದಾರೆ.

    ಸದಾನಂದಗೌಡ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕೆಲ ಸಮಯದ ಹಿಂದೆ ಗುರು ಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು. ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ. ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

    ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವುದರ ಮೂಲಕ ತನ್ನ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದರು. ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದಿದ್ದಾರೆ.

    ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಹೇಳಿಕೊಂಡಿದ್ದಾರೆ.

    ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

  • ಸಿದ್ಧಾರ್ಥ್ ಮನೆಗೆ ನಿರ್ಮಲಾನಂದ ಸ್ವಾಮೀಜಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಸಿದ್ಧಾರ್ಥ್ ಮನೆಗೆ ನಿರ್ಮಲಾನಂದ ಸ್ವಾಮೀಜಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    – ಸಿದ್ಧಾರ್ಥ್ ಅಭಿಮಾನಿಗಳಿಂದ ಅಭಿಯಾನ

    ಚಿಕ್ಕಮಗಳೂರು: ನಿಗೂಢವಾಗಿ ಸಾವನ್ನಪ್ಪಿರುವ ಕೆಫೆ ಕಾಫಿ ಡೇ ಮಾಲೀಕ ವಿ.ಜಿ ಸಿದ್ಧಾರ್ಥ್ ಅವರ ಮನೆಗೆ ಆದಿಚುಂಚನಗಿರಿ ಮಠದ ಸ್ವಾಮೀಜಿಗಳು ಇಂದು ಭೇಟಿ ನೀಡಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್ ನಲ್ಲಿರುವ ಸಿದ್ದಾರ್ಥ್ ಮನೆಗೆ ಭೇಟಿ ನೀಡಿದ ಸ್ವಾಮೀಜಿಗಳು, ಸಿದ್ದಾರ್ಥ್ ತಾಯಿ ವಸಂತಿ ಹೆಗ್ಡೆ ಹಾಗೂ ಪತ್ನಿ ಮಾಳವಿಕಾ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.

    ಯುವಕರಿಂದ ಅಭಿಯಾನ:
    ಸಿದ್ಧಾರ್ಥ್ ಅವರು ಮೃತಪಟ್ಟ ಬಳಿಕ ಕಾಫಿ ಡೇ ಷೇರು ದಿನೇ, ದಿನೇ ಕುಸಿತ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಯುವಕರು ಅಭಿಯಾನಯೊಂದಕ್ಕೆ ಚಾಲನೆ ನೀಡಿದ್ದಾರೆ.

    ಸಿದ್ದಾರ್ಥ್ ಅವರ ಅಭಿಮಾನಿ ಯುವಕರು `ಟೀಮ್ ನಮ್ಮುಡುಗ್ರು’ ತಂಡದಿಂದ ಷೇರು ಖರೀದಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗುತ್ತಿದೆ. ಸಿದ್ಧಾರ್ಥ್ ಅವರು ಕೆಫೆ ಕಾಫಿ ಡೇ ಸೇರಿದಂತೆ ಅವರ ಸಂಸ್ಥೆಗಳಲ್ಲಿ ಯುವಕರಿಗೆ ಹೆಚ್ಚಿನ ಅದ್ಯತೆ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಯುವಕರಿಗೆ ತರಬೇತಿ ನೀಡಲೆಂದೇ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು.

  • ಅಮಿತ್ ಶಾ ವಿರುದ್ಧ ಮಾಜಿ ಸಚಿವ ಎಚ್ ವಿಶ್ವನಾಥ್ ಕಿಡಿ

    ಅಮಿತ್ ಶಾ ವಿರುದ್ಧ ಮಾಜಿ ಸಚಿವ ಎಚ್ ವಿಶ್ವನಾಥ್ ಕಿಡಿ

    ಮಂಡ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂಸ್ಕೃತಿ ಇಲ್ಲದವರು ಅಂತಾ ಮಾಜಿ ಸಚಿವ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ.

    ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಎದುರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾಲು ಮೇಲೆ ಕಾಲು ಹಾಕಿಕೊಂಡು ಕುಳಿತ ವಿಚಾರವಾಗಿ ಮಂಡ್ಯ ಜಿಲ್ಲೆ ಕೆಆರ್‍ಪೇಟೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿಯವ್ರು ದೇಶಭಕ್ತಿ ರಾಷ್ಟ್ರ ಭಕ್ತಿ ಅಂತಾರೆ. ನಾವು ಸೇರಿದಂತೆ ಯಾರಾದ್ರೂ ಜಗದ್ಗುರು ಎದುರು ಹಾಗೇ ಕುಳಿತುಕೊಳ್ತಾರ ಎಂದು ಪ್ರಶ್ನೆ ಮಾಡಿದ್ರು.

    ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹದೇವಪ್ಪ ಬಗ್ಗೆಯೂ ಮಾತನಾಡಿದ ಅವರು, ಇಬ್ಬರೂ ಶೂ ಹಾಕಿಕೊಂಡು ಪೂಜೆ ಮಾಡುವ ಬಗ್ಗೆ ವ್ಯಂಗ್ಯವಾಡಿದ್ರು. ಜೊತೆಗೆ ಮಾಧ್ಯಮಗಳಲ್ಲಿ ರಾಷ್ಟ್ರಾದ್ಯಂತ ಜನರು ನಮ್ಮನ್ನು ನೋಡುತ್ತಿರುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ರಾಜಕಾರಣಿಗಳಿಗೆ ವಿಶ್ವನಾಥ್ ಕಿವಿಮಾತು ಹೇಳಿದ್ರು.