Tag: ನಿರ್ಮಲಾ ಸೀತಾರಾಮ್

  • ಕೇಂದ್ರ ಹಣಕಾಸು ಸಚಿವಾಲಯ ತಲುಪಿದ ವಿತ್ತ ಸಚಿವೆ

    ಕೇಂದ್ರ ಹಣಕಾಸು ಸಚಿವಾಲಯ ತಲುಪಿದ ವಿತ್ತ ಸಚಿವೆ

    ನವದೆಹಲಿ: ಇಂದು ನಡೆಯುವ ಕೇಂದ್ರ ಸರ್ಕಾರದ ಬಜೆಟ್‍ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸಲಿದ್ದು, ಈಗಾಗಲೇ ದೆಹಲಿಯ ನಾರ್ತ್ ಬ್ಲಾಕ್‍ನಲ್ಲಿರುವ ಹಣಕಾಸು ಸಚಿವಾಲಯದ ಕಚೇರಿ ತಲುಪಿದ್ದಾರೆ. ಅಲ್ಲಿ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್‍ರನ್ನು ಭೇಟಿಯಾಗಿ ಸಂಸತ್ತಿಗೆ ತೆರಳಲಿದ್ದಾರೆ.

    ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.

    ಕೋವಿಡ್ ಸೋಂಕು ಹರಡುವ ಭೀತಿಯಿಂದಾಗಿ ಇದು ಎರಡನೇ ಕಾಗದರಹಿತ ಬಜೆಟ್ ಆಗಿದೆ. ಸೋಮವಾರ, ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದರು. ಇದು ಜಿಡಿಪಿ ಬೆಳವಣಿಗೆಯನ್ನು 8 ರಿಂದ 8.5% ರಷ್ಟು ಆಶಾದಾಯಕವಾಗಿ ನಿಗದಿಪಡಿಸಿದೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

  • ಕೇಂದ್ರ ಪುರಸ್ಕೃತ ಯೋಜನೆಗಳ ಆರ್ಥಿಕ ನೆರವಿಗೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ: ಬೊಮ್ಮಾಯಿ

    ಕೇಂದ್ರ ಪುರಸ್ಕೃತ ಯೋಜನೆಗಳ ಆರ್ಥಿಕ ನೆರವಿಗೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ: ಬೊಮ್ಮಾಯಿ

    ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ:  5 ಲಕ್ಷ ಬೆಲೆಬಾಳುವ ಚಿನ್ನದ ಮಾಸ್ಕ್ ತೊಟ್ಟ ಬಾಬಾ

    ಮಾಧ್ಯಮಗಳಜೊತೆಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದರು. ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ನಿರ್ಮಲಾ ಸೀತಾರಾಮನ್ ಜತೆ ಚರ್ಚೆ ನಡೆಸಲಾಯಿತು.

    ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಡಿ ರಾಜ್ಯಸರ್ಕಾರಕ್ಕೆ ಬಿಡುಗಡೆಯಾಗಬೇಕಿರುವ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನಿರ್ಮಲಾ ಸೀತಾರಾಮನ್, ತ್ವರಿತ ಗತಿಯಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ತನ್ನ ಪಾಲಿನ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು ಎಂದು ಬೊಮ್ಮಾಯಿ ಹೇಳಿದರು. ಇದನ್ನೂ ಓದಿ:  ನನ್ನ ವಾಟ್ಸಪ್ ಮೆಸೇಜಿಗೆ ಸದಾ ಉತ್ತರಿಸುತ್ತಿದ್ದ ನೀವು ಈ ಬಾರಿ ಉತ್ತರಿಸಲೇ ಇಲ್ಲ ಹಾಲ್ದೊಡ್ಡೇರಿ ಸರ್..!

    ಕಳೆದ ವರ್ಷದ ಜಿಎಸ್‍ಟಿ ಪರಿಹಾರ ಬಾಕಿ 11,800 ಕೋಟಿ ರೂಪಾಯಿ ಹಣವನ್ನು ರಾಜ್ಯಕ್ಕೆ ನೀಡಲು ಕ್ರಮಕೈಗೊಳ್ಳಲಾಗುವುದು. ಕಳೆದ ಬಾರಿಯಂತೆ ಜಿಎಸ್ಟಿ ಪರಿಹಾರ 18,000 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ಸಾಲ ಪಡೆದು ರಾಜ್ಯಕ್ಕೆ ಒದಗಿಸುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದರೆಂದು ಬೊಮ್ಮಾಯಿ ವಿವರಿಸಿದರು.

    2021- 22 ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸಂಗ್ರಹವಾಗಿರುವ ಜಿಎಸ್ಟಿ ಪಾಲಿನ ಮೊದಲ ಕಂತನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಅದಕ್ಕೆ ಸಚಿವರು ಒಪ್ಪಿಗೆ ನೀಡಿದರು. ಕೋವಿಡ್ ನಿರ್ವಹಣೆ ಮತ್ತು ಕೋವಿಡ್ ಮೂರನೇ ಅಲೆ ತಯಾರಿಗೆ ಬೇಕಾದ ಹಣಕಾಸಿನ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆಯಾಯಿತು. ಕೋವಿಡ್ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ಅಭಾವ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಅವರು ನೀಡಿದರು ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 2,984 ಕೊರೊನಾ ಕೇಸ್- 88 ಸಾವು, 14,337 ಡಿಸ್ಚಾರ್ಜ್

    ರಾಜ್ಯ ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ನಿರ್ವಹಣೆ ಮಾಡಿದ ರೀತಿ, ಬಡವರಿಗೆ ನೀಡಲಾದ ಪ್ಯಾಕೇಜ್, ಕೋವಿಡ್‍ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ, ಖಾಸಗಿ ಆಸ್ಪತ್ರೆಗಳ ಸಹಕಾರದೊಂದಿಗೆ ಕೋವಿಡ್ ಎರಡನೇ ಅಲೆಯನ್ನು ನಿರ್ವಹಣೆ ಮಾಡಿದ ರಾಜ್ಯ ಸರ್ಕಾರದ ಕ್ರಮಕ್ಕೆ ನಿರ್ಮಲಾ ಸೀತಾರಾಮನ್ ಹರ್ಷ ವ್ಯಕ್ತಪಡಿಸಿದರು.