Tag: ನಿರ್ಮಾಪಕಿ ಲತಾ ಜೈಪ್ರಕಾಶ್

  • ‘ಜೀನಿಯಸ್ ಮುತ್ತ’ನಿಗೆ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಸಾಥ್

    ‘ಜೀನಿಯಸ್ ಮುತ್ತ’ನಿಗೆ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಸಾಥ್

    ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಪತ್ನಿ ನಾಗಿಣಿ ಭರಣ ನಿರ್ದೇಶನದ ‘ಜೀನಿಯಸ್ ಮುತ್ತ’ (Genius Mutta) ಚಿತ್ರದಲ್ಲಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಚಿನ್ನಾರಿಮುತ್ತನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ (Vijay Raghavendra) ಅಭಿನಯಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್

    ನನಗೆ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಎಲ್ಲರೂ ಹೇಳುತ್ತಿದ್ದರು. ಆಗಿರಲಿಲ್ಲ. ಆದರೆ ಲತಾ ಅವರು ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದುಕೊಂಡಿದ್ದೇನೆ. ಆ ಚಿತ್ರವನ್ನು ನೀವೇ ನಿರ್ದೇಶಿಸಬೇಕೆಂದರು. ಅವರ ಒತ್ತಾಯಕ್ಕೆ ಮಣಿದು ನನ್ನ ಸ್ನೇಹಿತರ ತಂಡದೊಂದಿಗೆ ಸೇರಿ ಈ ಚಿತ್ರದ ಕಥೆ ಸಿದ್ಧ ಮಾಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್ ಶ್ರೇಯಸ್ಸ್, ವಿಜಯ ರಾಘವೇಂದ್ರ, ಟಿ.ಎಸ್.ನಾಗಾಭರಣ, ಗಿರಿಜಾ ಲೋಕೇಶ್, ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ.

    ನಾಗಿಣಿ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿಂದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎಂದರು ಟಿ.ಎಸ್ ನಾಗಾಭರಣ.

    ನಾನು ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ ‘ಜೀನಿಯಸ್ ಮುತ್ತ’ನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ಮಾಸ್ಟರ್ ಶ್ರೇಯಸ್ಸ್.

    ನಾನು ಯಾವಾಗಲೂ ನಾಗಾಭರಣ್ ಸರ್ ಅವರಿಗೆ ಆಬಾರಿ. ಏಕೆಂದರೆ ನನ್ನನ್ನು ಎಲ್ಲರೂ ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ್ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ ಎಂದು ವಿಜಯ ರಾಘವೇಂದ್ರ ತಿಳಿಸಿದರು.


    ನಾಗಿಣಿ ಭರಣ ಅವರು ನನಗೆ ಹತ್ತು ವರ್ಷಗಳ ಪರಿಚಯ. ನನ್ನ ಮಗನಿಗಾಗಿ ಒಂದೊಳ್ಳೆ ಕಥೆ ಮಾಡಿ ನೀವೇ ನಿರ್ದೇಶನ ಮಾಡಬೇಕೆಂದು ನಾಗಿಣಿ ಭರಣ ಅವರ ಬಳಿ ಹೇಳಿದೆ. ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ನನಗೆ ಕಥೆ ಹೇಳಿದರು. ನಂತರ ‘ಜೀನಿಯಸ್ ಮುತ್ತ’ ಚಿತ್ರ ಆರಂಭವಾಯಿತು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ಲತಾ ಜೈಪ್ರಕಾಶ್.

  • ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್

    ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್

    ಸ್ಯಾಂಡಲ್‌ವುಡ್ ಹಲವು ನಟ, ನಟಿಯರು ದರ್ಶನ್ (Darshan) ಪ್ರಕರಣದ ಬಗ್ಗೆ ಮಾತನಾಡಿದ್ದರು. ಈಗ ವಿಜಯಲಕ್ಷ್ಮಿ ಆಪ್ತೆ ಆಗಿರುವ ನಿರ್ಮಾಪಕಿ ಲತಾ ಜೈಪ್ರಕಾಶ್ (Latha Jaiprakash) ಅವರು ದರ್ಶನ್ ಕುರಿತು ಮಾತನಾಡಿದ್ದಾರೆ. ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

    ದರ್ಶನ್ ಅಣ್ಣ ಮತ್ತು ವಿಜಯಲಕ್ಷ್ಮಿ (Vijayalakshmi) ಇಬ್ಬರೂ ದೈವ ಭಕ್ತರು. ಇದು ಯಾಕೆ ಆಯಿತು ಎಂಬುದು ದೇವರಿಗೆ ಮಾತ್ರ ಗೊತ್ತು. ದರ್ಶನ್ ಅಣ್ಣಗೆ ನವೆಂಬರ್‌ವರೆಗೂ ಟೈಮ್ ಚೆನ್ನಾಗಿಲ್ಲ ಎಂದು ನಮಗೆ ಮೊದಲೇ ಗೊತ್ತಿತ್ತು. ಯಾರು ಏನೇ ಹೇಳಿದ್ರು ಅಣ್ಣ ದೇವರನ್ನು ತುಂಬಾ ನಂಬುತ್ತಿದ್ದರು ಎಂದು ನಿರ್ಮಾಪಕಿ ಲತಾ ಜೈಪ್ರಕಾಶ್ ಮಾತನಾಡಿದ್ದಾರೆ.

    ಪ್ರತಿ ಆಷಾಢದಲ್ಲೂ ವಿಜಯಲಕ್ಷ್ಮಿ ಅತ್ತಿಗೆ ದೇವಸ್ಥಾನಕ್ಕೆ ಬರುತ್ತಿದ್ದರು. ಈ ಬಾರಿ ಕೇಸ್ ಆಗಿದ್ರಿಂದ ಅವರು ಬಂದಿಲ್ಲ. ಈ ಕೇಸ್ ನಂತರ ಅತ್ತಿಗೆ ಓಡಾಟ ಮತ್ತು ಹೋರಾಟ ಎರಡು ಮಾಡುತ್ತಿದ್ದಾರೆ. ಆರೋಪಿ ಸ್ಥಾನದಲ್ಲಿ ದರ್ಶನ್ ಅಣ್ಣ ಇದ್ದಾರೆ. ಆದಷ್ಟು ಬೇಗ ಆಚೆ ಬರಲಿ ಅಂತ ಕೇಳಿಕೊಳ್ತೀನಿ. ರೇಣುಕಾಸ್ವಾಮಿ ಕುಟುಂಬಕ್ಕೂ ಕೂಡ ಯಾರೇ ಆದ್ರೂ ಕರುಣೆ ತೋರಬೇಕು. ಒಬ್ಬ ದೊಡ್ಡ ಸ್ಟಾರ್ ಈ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಒಂದು ಸಣ್ಣ ವಿಚಾರದಿಂದ ಜೀವನೇ ಹೋಗುತ್ತದೆ ಅಂದರೆ ಇದರಿಂದ ಎಲ್ಲರೂ ಪಾಠ ಕಲಿಯಬೇಕು ಎಂದು ನಿರ್ಮಾಪಕಿ ಲತಾ ಜೈಪ್ರಕಾಶ್ ಹೇಳಿದ್ದಾರೆ.

    ಏನೇ ಮಾಡಬೇಕು ಅಂದರು ದೈವ ಬಲ ಇರಬೇಕು. ದರ್ಶನ್ ಅಣ್ಣ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೂ ಒಂದು ಕಂಟಕದಲ್ಲಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಜೀವನದಲ್ಲಿ ಯಾವಾಗಲೂ ಶಾಂತವಾಗಿ ಯೋಚಿಸಿ ನಡೆಯಬೇಕು ಎಂದು ಪಾಠವಿದೆ ಎಂದಿದ್ದಾರೆ. 2014ರಿಂದಲೂ ವಿಜಯಲಕ್ಷ್ಮಿ ಅತ್ತಿಗೆ ಪರಿಚಯವಿದೆ. ದರ್ಶನ್ ಅಣ್ಣ ‘ಅಂಬರೀಶ್’ ಸಿನಿಮಾ ಸಮಯದಲ್ಲಿ ಪರಿಚಯ ಆದ್ರೂ ಅಲ್ಲಿಂದ ನನ್ನ ತಮ್ಮನಿಗೆ ಕ್ಲೋಸ್ ಆಗಿದ್ದರು. ಈ ಸಂದರ್ಭದಲ್ಲಿ, ಅತ್ತಿಗೆನೇ ದರ್ಶನ್ ಅಣ್ಣನಿಗೆ ಬಲ ಆಗಿದ್ದಾರೆ. ಅಣ್ಣನ ಬ್ಯಾಡ್ ಟೈಮ್‌ನಿಂದ ಅತ್ತಿಗೆನೂ ಕೊರಗುತ್ತಿದ್ದಾರೆ.

    ಜನ ಇದ್ದಾಗ ದರ್ಶನ್ ಅಣ್ಣ ದೇವಸ್ಥಾನಕ್ಕೆ ಬರುತ್ತಿರಲಿಲ್ಲ. ಅಣ್ಣನಿಗೆ ದೇವಸ್ಥಾನಕ್ಕೆ ಬರಬೇಕು ಅನ್ನಿಸಿದಾಗ ಮಿಡ್ ನೈಟ್ ಆದರು ಬಂದು ಪೂಜೆ ಮಾಡಿಸಿಕೊಂಡು ಹೋಗ್ತಿದ್ದರು. ಈ ಸಂಕಷ್ಟದಿಂದ ದರ್ಶನ್ ಅಣ್ಣ ಆಚೆ ಬರಲಿ ಎಂದು ಮನೆ ದೇವರು ಮುನೇಶ್ವರಗೆ ಅತ್ತಿಗೆ ಹರಕೆ ಕಟ್ಟಿಕೊಂಡಿದ್ದಾರೆ ಎಂದು ಬಂಡೆ ಮಹಾಕಾಳಮ್ಮ ದೇವಸ್ಥಾನದ ಟ್ರಸ್ಟಿ ಲತಾ ಜೈಪ್ರಕಾಶ್ ಮಾತನಾಡಿದ್ದಾರೆ.