Tag: ನಿವೃತ್ತ

  • ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಕಲಬುರಗಿ: ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ, ಕರ್ನಾಟಕದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಾಗಿರುವ ಮಲ್ಲಿಕಾರ್ಜುನ ಖರ್ಗೆಯವರನ್ನು ಹೇಗಾದರೂ ಸೋಲಸಲೇಬೇಕೆಂದು ಬಿಜೆಪಿ ಮಾಸ್ಟರ್ ಮೈಂಡ್ ಪ್ಲಾನ್ ಸಿದ್ದಪಡಿಸಿದೆ. ಹೀಗಾಗಿ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಎಲ್ಲಾ ರೀತಿಯ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿದು ಬಂದಿದೆ.

    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ. ಅಲ್ಲದೇ ರತ್ನಪ್ರಭಾರವರು ಸಹ ಈಗಾಗಲೇ ಹಲವು ಬಾರಿ ಕಲಬುರಗಿ ಭೇಟಿ ನೀಡಿದ್ದಾರೆ. ಅಲ್ಲದೇ ಮತ್ತೆ ಸೆಪ್ಟಂಬರ್ ನಲ್ಲಿ ಭೇಟಿ ನೀಡುತ್ತಿದ್ದಾರೆ.

    ರತ್ನಪ್ರಭಾರ ಪದೇ ಪದೇ ಭೇಟಿಯಿಂದಾಗಿ, ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸುತ್ತಾರೆನ್ನು ಚರ್ಚೆ ಇದೀಗ ಬಿಜೆಪಿ ವಲಯದಲ್ಲಿ ಕೇಳಿ ಬಂದಿದ್ದು, ಈ ಮೂಲಕ ಮೂಲಕ ಖರ್ಗೆ ಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಸಜ್ಜಾಗಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಿಕ್ಷೆ ಬೇಡಿ ವೈದ್ಯರಾದ್ರು, ದುಡಿದ ಹಣವನ್ನ ವಿದ್ಯಾರ್ಥಿಗಳಿಗೆ ದಾನ ಮಾಡಿದ್ರು ಪಾವಗಡದ ಪ್ರಭಾಕರ ರೆಡ್ಡಿ

    ಭಿಕ್ಷೆ ಬೇಡಿ ವೈದ್ಯರಾದ್ರು, ದುಡಿದ ಹಣವನ್ನ ವಿದ್ಯಾರ್ಥಿಗಳಿಗೆ ದಾನ ಮಾಡಿದ್ರು ಪಾವಗಡದ ಪ್ರಭಾಕರ ರೆಡ್ಡಿ

    ತುಮಕೂರು: ಎಂಜಿನಿಯರ್, ಡಾಕ್ಟರ್ ಆಗಿ ಚೆನ್ನಾಗಿ ಸಂಪಾದನೆ ಮಾಡ್ಬೇಕು. ಲೈಫನ್ನ ಎಂಜಾಯ್ ಮಾಡ್ಬೇಕು. ಮಕ್ಕಳು ಮೊಮ್ಮಕ್ಕಳಿಗೂ ಕೂಡಿಡಬೇಕು ಅಂತಲೇ ಎಲ್ಲರ ಕನಸು ಕಾಣ್ತಾರೆ. ಆದ್ರೆ, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಡಾ.ಪ್ರಭಾಕರ್ ರೆಡ್ಡಿ ಅವರು ಮಾತ್ರ ಹಣವನ್ನೆಲ್ಲಾ ಬಡ ವಿದ್ಯಾರ್ಥಿಗಳಿಗೆ ದಾನ ಮಾಡ್ತಿದ್ದಾರೆ.

    80 ವರ್ಷದ ಡಾ. ಪ್ರಭಾಕರ್ ರೆಡ್ಡಿಯವರು ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವಳ್ಳೂರು ಗ್ರಾಮದಲ್ಲಿ ಜನಿಸಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿ ವೈದ್ಯ ವೃತ್ತಿಗಾಗಿ ಲಂಡನ್‍ಗೆ ಹೋಗಿರೋ ಇವರು ಸದ್ಯ ನಿವೃತ್ತಿಯಾಗಿದ್ದಾರೆ.

    ಬಾಲ್ಯದಲ್ಲೇ ಹೆತ್ತವರನ್ನ ಕಳೆದುಕೊಂಡು ಕಡುಬಡತನದಲ್ಲಿ ಬೆಳೆದ ಇವರಿಗೆ ಡಾಕ್ಟರ್ ಆಗೋದು ಕನಸು. 1965ರಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ್ದಾರೆ. ಅಂದಿನ ಕಾಲದಲ್ಲಿ 240 ರೂಪಾಯಿ ಶುಲ್ಕ ಕಟ್ಟಲು ಸಾಧ್ಯವಾಗದೆ ಪರಿತಪಿಸಿದ್ದರು. ಸ್ನೇಹಿತರ ಬಳಿ ಸ್ವಲ್ಪ ಹಣ ಸಿಕ್ಕರೂ ಉಳಿದ ಹಣಕ್ಕಾಗಿ ಸಾರ್ವಜನಿಕವಾಗಿ ಭಿಕ್ಷೆ ಬೇಡಿ, ಎಂಬಿಬಿಎಸ್ ಪಾಸ್ ಮಾಡಿದ್ರು. ಆಮೇಲೆ ಕೆಲ ವರ್ಷ ರಾಜ್ಯದಲ್ಲಿ ಸೇವೆ ಸಲ್ಲಿಸಿ ಹೆಚ್ಚಿನ ವ್ಯಾಸಂಗಕ್ಕಾಗಿ ಲಂಡನ್‍ಗೆ ಹೋಗಿ ಅಲ್ಲಿಯೇ ನೆಲೆಸಿದ್ದರು.

    ತಮ್ಮ ಕಷ್ಟದ ದಿನಗಳನ್ನ ನೆನಸಿಕೊಳ್ಳುವ ಪ್ರಭಾಕರ ರೆಡ್ಡಿ ಅವರು, ತಮ್ಮ ಹೆಸರಿನಲ್ಲಿ ಎಜುಕೇಷನ್ ಟ್ರಸ್ಟ್ ಸ್ಥಾಪಿಸಿ ವಿದ್ಯಾರ್ಥಿಗಳ ಸಹಾಯಕ್ಕೆ ನಿಂತಿದ್ದಾರೆ. ವಿದ್ಯಾರ್ಥಿ ವೇತನ, ಶಾಲಾ ಕಾಲೇಜ್‍ಗಳಿಗೆ ಕುಡಿಯುವ ನೀರು, ಬೆಂಚು, ಕ್ರೀಡಾಪಟುಗಳಿಗೆ ಸಮವಸ್ತ್ರವನ್ನ ನೀಡ್ತಿದ್ದಾರೆ. ಪಾವಗಡದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಿ ಅದನ್ನು ಸಮಾಜ ಕಲ್ಯಾಣ ಇಲಾಖೆಗೆ ಅತಿ ಕಡಿಮೆ ಬಾಡಿಗೆಗೆ ನೀಡಿದ್ದಾರೆ.

    ಬೆಂಗಳೂರಿನಲ್ಲಿದ್ದ 1.5 ಕೋಟಿ ರೂಪಯಿ ಮನೆ ಹಾಗೂ ಲಂಡನ್ನಿನಲಿದ್ದ ಸುಮಾರು 2 ಕೋಟಿ ರೂಪಾಯಿ ಮನೆಯನ್ನು ಮಾರಿದ್ದು, ಈಗ ಬಾಡಿಗೆ ಮನೆಯಲ್ಲಿದ್ದಾರೆ. ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವಿನ ಜೊತೆಗೆ ಪರಿಸರ ಕಾಳಜಿ, ಸ್ವಚ್ಚತೆ, ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ಸಹ ಮಾಡ್ತಿದ್ದಾರೆ.

    https://www.youtube.com/watch?v=GYvWiQGjB94

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews