Tag: ನಿವೇದಿತಾ ಶಿವರಾಜ್‌ಕುಮಾರ್‌

  • ತಂದೆಯ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ಹೇಳಿದ್ದೇನು?

    ತಂದೆಯ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ಹೇಳಿದ್ದೇನು?

    ಟ ಶಿವರಾಜ್‌ಕುಮಾರ್ (Shivarajkumar) ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯದ ಕುರಿತು ಗೀತಾ ಶಿವರಾಜ್‌ಕುಮಾರ್ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಪುತ್ರಿ ನಿವೇದಿತಾ (Niveditha Shivarajkumar) ಕೂಡ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಕೀರ್ತಿ ಸುರೇಶ್ ಮದುವೆಯಲ್ಲಿ ಕನ್ನಡತಿ ಸೋನು ಗೌಡ

    ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಪೋಸ್ಟ್‌ವೊಂದನ್ನು ಶೇರ್ ಮಾಡಿ, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್‌ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಶ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.

    ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ. ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಅಭಾರಿಯಾಗಿರುತ್ತೇವೆ. ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ ಎಂದು ಬರೆದುಕೊಂಡಿದ್ದಾರೆ.

    ಇನ್ನೂ ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯ ಡಾ.ಮುರುಗೇಶ್ ಮನೋಹರನ್ ಕೂಡ ತಿಳಿಸಿದ್ದಾರೆ.

  • ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

    ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

    ನ್ನಡದ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’ (Fire Fly Kannada) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜೊತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಯಕ ಮತ್ತು ನಿರ್ದೇಶಕ ವಂಶಿ (Vamsi) ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

    ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು (Audio Rights) ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದನ್ನೂ ಓದಿ:ಸೆನ್ಸಾರ್ ಮುಗಿಸಿದ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’ ಚಿತ್ರ

    ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರುತ್ತಿದ್ದಾರೆ. ವಂಶಿಗೆ ‌’ಲವ್ ಮಾಕ್ಟೈಲ್’ ನಟಿ ರಚನಾ ಇಂದರ್ (Rachana Inder) ನಾಯಕಿಯಾಗಿದ್ದಾರೆ.

    ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.

  • ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಪುತ್ರಿ ನಿವೇದಿತಾ (Niveditha) ಶಿವರಾಜ್‌ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್ ಫ್ಲೈ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮೈಸೂರು,ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ.

    ಫೈರ್ ಫ್ಲೈ (Fire Fly)ಸಿನಿಮಾವನ್ನ ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಡ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಇದನ್ನೂ ಓದಿ:‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

    ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್.ಕೆ ಸಂಸ್ಥೆಯ ಮಾಯಾಬಜಾರ್ (Mayabazar) ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿಯೇ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ಪೆಂಟಗನ್ (Pentagan) ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ರು.

    ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗಳ ನಿರ್ಮಾಣದ ವೆಬ್ ಸೀರಿಸ್‌ನಲ್ಲಿ ಶಿವಣ್ಣ ಆಕ್ಟಿಂಗ್

    ಮಗಳ ನಿರ್ಮಾಣದ ವೆಬ್ ಸೀರಿಸ್‌ನಲ್ಲಿ ಶಿವಣ್ಣ ಆಕ್ಟಿಂಗ್

    ಸ್ಯಾಂಡಲ್‌ವುಡ್ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಸಿನಿಮಾ ಲಿಸ್ಟ್‌ನಲ್ಲಿ ಸಾಲು ಸಾಲು ಸಿನಿಮಾಗಳಿರಬೇಕಾದ್ರೆ ವೆಬ್ ಸೀರಿಸ್‌ನತ್ತ ಮುಖ ಮಾಡಿದ್ದಾರೆ. ಮಗಳು ನಿವೇದಿತಾ ಪ್ರೋಡಕ್ಷನ್‌ನಲ್ಲಿ ಮೂಡಿಬರಲಿರುವ ವೆಬ್ ಸಿರೀಸ್‌ನಲ್ಲಿ ನಟಿಸೋದಕ್ಕೆ ನಟ ಶಿವಣ್ಣ ರೆಡಿಯಾಗಿದ್ದಾರೆ.

    ಸೀರಿಯಲ್, ಸಿನಿಮಾಗಳಂತೆ ವೆಬ್‌ಸಿರೀಸ್‌ಗೂ ಒಂದು ಕಾಲ. ಒಂದರ್ಥದಲ್ಲಿ ಇದೀಗ ವೆಬ್‌ಸಿರೀಸ್ ಮೇನಿಯಾ ಅಂದ್ರೆ ತಪ್ಪಾಗಲಾರದು. ಪರಭಾಷೆಗಳಲ್ಲಿ ಟ್ರೇಂಡ್ ಆಗಿದ್ದ ವೆಬ್‌ಸಿರೀಸ್ ಈಗ ಕನ್ನಡಕ್ಕೂ ಬಂದಿದೆ. ಈಗಾಗಲೇ ಸಾಕಷ್ಟು ವೆಬ್‌ಸಿರೀಸ್ ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದಿದೆ. ಒಂದು ಕಥೆಯನ್ನ ಸಿನಿಮಾ ರೂಪದಲ್ಲಿ ಹೇಳದೆ, ಸೀಸನ್ ಹಾಗೂ ಎಪಿಸೋಡ್‌ಗಳ ರೂಪದಲ್ಲಿ ತೋರಿಸಲಾಗುತ್ತಿದೆ. ಅಭಿಮಾನಿಗಳು ಕೂಡ ವೆಬ್‌ ಸಿರೀಸ್‌ನ ಇಷ್ಟಪಡ್ತಿದ್ದಾರೆ.  ಹಾಗಾಗಿನೇ ಶಿವರಾಜ್‌ಕುಮಾರ್ ವೆಬ್ ಸೀರಿಸ್‌ನತ್ತ ಮುಖ ಮಾಡಿದ್ದಾರೆ.

    ಒಟಿಟಿ ಫ್ಲಾರ್ಟ್ಫಾರ್ಮ್ ವಿಸ್ತಾರ ಹಿರಿದಾದಂತೆ ವೆಬ್ ಸೀರಿಸ್ ನಿರ್ಮಾಣದತ್ತ ಸಿನಿಮಾ ಹೆಚ್ಚು ಅಟ್ರಾಕ್ಟ್ ಆಗ್ತಿದ್ದಾರೆ. ಈಗಾಗಲೇ ಶಿವಣ್ಣ ಮಗಳು ನಿವೇದಿತಾ ಐ ಹೇಟ್ ಯು ರೋಮಿಯೋ, ಬೈ ಮಿಸ್‌ಟೆಕ್, ಹನಿಮೂನ್ ವೆಬ್ ಸೀರಿಸ್ ನಿರ್ಮಾಣ ಮಾಡಿದ್ದಾರೆ. ಶ್ರೀ ಮುತ್ತು ಸಿನಿ ಸರ್ವಿಸ್ ಪ್ರೋಡಕ್ಷನ್‌ನಲ್ಲಿ ನಿವೇದಿತಾ ನೇತೃತ್ವದಲ್ಲಿ ಈ ವೆಬ್‌ ಸಿರೀಸ್ ಮೂಡಿ ಬರಲಿದೆ. ಇದನ್ನೂ ಓದಿ: ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಿಲ್ಲದ ರಾಕಿಭಾಯ್ ಆರ್ಭಟ: 400 ಕೋಟಿಯತ್ತ `ಕೆಜಿಎಫ್ 2

    ಈಗಾಗಲೇ ಏಳು ವೆಬ್ ಸೀರಿಸ್ ಕಥೆ ರೆಡಿಯಾಗಿದ್ದು, ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ. ಶಿವಣ್ಣ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ ಅದರ ಮಧ್ಯೆ ವೆಬ್ ಸೀರಿಸ್ ಮಾಡಲಾಗುತ್ತದೆ. ವಿಭಿನ್ನ ಪ್ರಯತ್ನದ ಮೂಲಕ ಅಭಿಮಾನಿಗಳನ್ನ ರಂಜಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಜ್ಜಾಗಿದ್ದಾರೆ.