ಶಿವಮೊಗ್ಗ: ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ (Election Campaign) ಆರೋಪದಡಿ ಬಿಜೆಪಿ (BJP) ಬಂಡಾಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct) ಪ್ರಕರಣ ದಾಖಲಾಗಿದೆ.
ಈಶ್ವರಪ್ಪ ಶಿವಮೊಗ್ಗದ (Shivamogga) ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ವೇಳೆ ಮತಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಇಂದು ಸುಮಲತಾರನ್ನು ಭೇಟಿಯಾಗಲಿದ್ದಾರೆ ಹೆಚ್‌ಡಿಕೆ
ಚಿಕ್ಕೋಡಿ: ನೀತಿ ಸಂಹಿತೆ ಉಲ್ಲಂಘನೆ (Violation of Code of Conduct) ಮಾಡಿರುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ (Nipani) ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.
ನೀತಿ ಸಂಹಿತೆ ಘೋಷಣೆಯ ಮೊದಲ ದಿನವೇ ಸಚಿವೆ ಶಶಿಕಲಾ ಜೊಲ್ಲೆ ಸಮ್ಮುಖದಲ್ಲೇ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಬ ಜೊಲ್ಲೆ ಅವರ ಫೋಟೋ ಬಳಕೆ ಮಾಡಲಾಗಿತ್ತು. ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್‍ನ ಹೊಸ ಮುಖಗಳ ಪ್ರಯೋಗ ಶಾಲೆಯಾಗುತ್ತಾ ರಾಜ್ಯದ ಏಕೈಕ ಮೀಸಲು ಕ್ಷೇತ್ರ ಸುಳ್ಯ?
ಈ ಕಾರ್ಯಕ್ರಮದಲ್ಲಿ 4-5 ಸಾವಿರ ಮಹಿಳೆಯರು ಭಾಗವಹಿಸಿದ್ದು, ಶಶಿಕಲಾ ಜೊಲೆ ಕೂಡಾ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗಿರುವ ಹಿನ್ನೆಲೆ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚೆಕ್‍ಬೌನ್ಸ್ ಕೇಸ್- ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಂಧನದ ಭೀತಿ?
ಬೆಳಗಾವಿ: ಚುನಾವಣೆ (Election) ಸಮೀಪಿಸುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಯಾವುದಾದರೂ ನೆಪದಲ್ಲಿ ಅಮಿಷಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಬಾಡೂಟಗಳು ಭರ್ಜರಿಯಾಗಿ ಆಯೋಜಿಸಲಾಗುತ್ತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಚುನಾವಣಾ ಆಯೋಗ (Election Commission) ಬ್ರೇಕ್ ಹಾಕಲು ಮುಂದಾಗಿದೆ. ಮೊದಲ ಆರಂಭವೆಂಬಂತೆ ಕುಂದಾನಗರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಒಂದು ಪ್ರಕರಣ ದಾಖಲಿಸಲಾಗಿದೆ.
ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮೂರು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸಳೆಯಲು ಹಬ್ಬ-ಆಚರಣೆ-ಮದುವೆ ನೆಪಗಳಲ್ಲಿ ವಿವಿಧ ವಸ್ತುಗಳ ಅಮಿಷಗಳೂಂದಿಗೆ ಭರ್ಜರಿ ಬಾಡೂಟಗಳ ಆಯೋಜಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲೇ ಹೇಚ್ಚಾಗಿ ಕಂಡು ಬರುತ್ತಿದ್ದ ಬಾಡೂಟ ಅಮಿಷ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಿದೆ.
ಮೊನ್ನೆ ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳೂಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಆಮಿಷ ನೀಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ರು. ಹಬ್ಬ-ಹರಿದಿನಗಳ ನೆಪಗಳಲ್ಲಿ ಮತದಾರರರಿಗೆ ಅಮಿಷಗಳ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುದೆಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತೆ ಜಾರಿ (Code Of Conduct) ಮುನ್ನವೇ ಬೆಳಗಾವಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿಗಿಂತ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಡಿಕೆಶಿ
ಮಾ.15 ರಂದು ರಮೇಶ್ ಜಾರಕಿಹೊಳಿ (Ramesh Jarakiholi) ಅಭಿಮಾನಿ ಬಳಗದಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿ ಬಸ್ತವಾಡ ಗ್ರಾಮದಲ್ಲಿ ಎಸ್‍ಸಿ, ಎಸ್‍ಟಿ ಸಮಾವೇಶ ಆಯೋಜನೆ ಮಾಡಲಾಗಿತ್ತು. ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಸುಮಾರು 3 ಸಾವಿರ ಜನರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಬಾಡೂಟ ಆಯೋಜಿಸಿದವರ ವಿರುದ್ಧ ಇದೀಗ ಚಾಟಿ ಬೀಸಿರುವ ಜಿಲ್ಲಾಡಳಿತ ರಮೇಶ್ ಜಾರಕಿಹೊಳಿ ಆಪ್ತ ಸೇರಿ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲು ಮಾಡಿದೆ. ಆಯೋಜಕ ನಾಗೇಂದ್ರ ನಾಯಕ್, ನಾಗೇಶ್ ಮನ್ನೋಳ್ಕರ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಚುನಾವಣಾ ಘೋಷಣೆಗೂ ಮುನ್ನ ಮತದಾರರಿಗೆ ಆಮಿಷ ಒಡ್ಡದಂತೆ ಅದೇಶ ಹೊರಡಿಸಿದ್ದರು. ಆದರೂ ಸಮಾವೇಶದಲ್ಲಿ ಬಾಡೂಟದ ಅಮಿಷ ಆಯೋಜಿಸಿದ ಹಿನ್ನೆಲೆ ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಇದು ರಾಜ್ಯದಲ್ಲಿ ಮೊದಲ ಪ್ರಕರಣವಾಗಿದೆ.
ಮಂಡ್ಯ: ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದು, ಚುನಾವಣಾ ಸಿಬ್ಬಂದಿಗೂ ಕ್ಯಾರೆ ಎನ್ನದೇ ಮುಂದೆ ಸಾಗಿದ್ದಾರೆ.
ಬಸವರಾಜ್ ಬೊಮ್ಮಾಯಿ ಕಾರಿನಲ್ಲಿ ಹೋಗುತ್ತಿದ್ದಾಗ ವಾಹನ ತಪಾಸಣೆಗೆಂದು ಚುನಾವಣಾ ಸಿಬ್ಬಂದಿ ಕಾರನ್ನು ತಡೆಯಲು ಮುಂದಾದರು. ಆದರೆ ಬೊಮ್ಮಾಯಿ ವಾಹನ ತಪಾಸಣೆಗೆ ಸಹಕರಿಸದೆ ಚುನಾವಣಾ ಸಿಬ್ಬಂದಿಗೂ ಕ್ಯಾರೆ ಎನ್ನದೇ ಮುಂದೆ ಸಾಗಿದ್ದಾರೆ.
ಈಗಾಗಲೇ ಗೃಹ ಮಂತ್ರಿ ಎರಡು ಕಡೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಬುಧವಾರ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಅವರು ಮಂಡ್ಯ ಜಿಲ್ಲೆಯ ಗಡಿ ನಿಡಘಟ್ಟ ಹಾಗೂ ಮಂಡ್ಯ ತಾಲೂಕಿನ ಹನಕೆರೆ ಬಳಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಬುಧವಾರ ಎರಡು ಕಡೆ ಚೆಕ್ ಪೋಸ್ಟ್ ಸಿಬ್ಬಂದಿ ಬೆಂಗಳೂರಿಂದ ಮೈಸೂರಿನತ್ತ ತೆರಳುತ್ತಿದ್ದ ಬಸವರಾಜ್ ಅವರ ವಾಹವನ್ನು ತಡೆದಿದ್ದರು. ಮೊದಲು ನಿಡಘಟ್ಟ ಬಳಿ ವಾಹನ ನಿಲ್ಲಿಸದ ಹಿನ್ನೆಲೆಯಲ್ಲಿ ಹನಕೆರೆ ಬಳಿ ವಾಹನ ತಪಾಸಣೆಗೆ ಚೆಕ್ ಪೋಸ್ಟ್ ಸಿಬ್ಬಂದಿ ಸಿದ್ಧವಾಗಿದ್ದರು. ಇಲ್ಲೂ ವಾಹನ ನಿಲ್ಲಿಸದೆ ಸಚಿವರ ಉದ್ಧಟತನ ಪ್ರದರ್ಶಿಸಿದ್ದಾರೆ.
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತಗಟ್ಟೆಯ ಒಳಗಡೆ ಮತಯಾಚಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ಬೆಳಗಾವಿಯ ಹಿಂಡಲಗಾ 60ರ ಮತಗಟ್ಟೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತನ್ನ ತಾಯಿ, ಪುತ್ರ ಮತ್ತು ಸಹೋದರನ ಜೊತೆಗೆ ಬಂದು ಮತದಾನ ಮಾಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ ಬಳಿಕ ಮತಗಟ್ಟೆ ಆವರಣದಲ್ಲಿ ಮತದಾರರಿಗೆ ಕೈಮುಗಿದು ಇದೊಂದು ಬಾರಿ ಮತ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಮತಗಟ್ಟೆಯ ಆವರಣದ ಒಳಗಡೆ ಮತಯಾಚನೆ ಮಾಡುವಂತಿಲ್ಲ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮತಯಾಚನೆ ಮಾಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.
ಬೀದರ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಇಲ್ಲಿಯವರೆಗೆ ಒಟ್ಟು 4.13 ಕೋಟಿ ರೂ. ಮೌಲ್ಯದ ಮದ್ಯವನ್ನು ಬೀದರ್‍ನ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ವಶಕ್ಕೆ ಪಡೆದಿದ್ದಾರೆ.
29 ಚೆಕ್ ಪೋಸ್ಟ್‍ಗಳಲ್ಲಿ ತಪಾಸಣೆ ಸೇರಿದಂತೆ ಮೂರು ದಿನಗಳಲ್ಲಿ 83 ದಾಳಿ ಮಾಡಿದ್ದಾರೆ. ದಾಳಿ ಮಾಡಿ 31 ಪ್ರಕರಣ ದಾಖಲಿಸಿಕೊಂಡು, 27 ಆರೋಪಿಗಳನ್ನು ಬಂಧಿಸಿದ್ದಾರೆ.
ಒಟ್ಟು 255 ಲೀಟರ್ ಮದ್ಯ, 900 ಲೀಟರ್ ಶೆಂದಿ ಹಾಗೂ 5 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 4.75 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಚುನಾವಣಾಧಿಕಾರಿ ಎಚ್.ಆರ್ ಮಹಾದೇವ್ ಮಾರ್ಗದರ್ಶನ ಹಾಗೂ ಅಬಕಾರಿ ಡಿಸಿ ಶಿವಪ್ರಸಾದ್ ನೇತೃತ್ವದಲ್ಲಿ ದಾಳಿಗಳನ್ನು ಮಾಡಲಾಗಿದೆ.
ಹಾಸನ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ನೀತಿಸಂಹಿತೆ ಜಾರಿ ಬಳಿಕವೂ ಎ ಮಂಜು ಅವರು ಸರ್ಕಾರಿ ಕಟ್ಟಡ ಬಳಸಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯ ಮೇರೆಗೆ ಚುನಾವಣಾಧಿಕಾರಿ ರಾಜೇಶ್ ದೂರು ನೀಡಿದ್ದರು.
ಮಾರ್ಚ್ 26 ರಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಂದೇ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾಗಿರುವ ಮಂಜು ವಿರುದ್ಧ ಹಾಸನ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ದೂರು ಏನಿತ್ತು?
ಸಚಿವರ ಕಚೇರಿ ಇದ್ದ ಕಟ್ಟಡದಲ್ಲಿ ಅನಧಿಕೃತವಾಗಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೀತಿಸಂಹಿತೆ ಜಾರಿ ಬಳಿಕವೂ ಕಚೇರಿಯ ಬಾಗಿಲನ್ನು ಹೊರಗಿನಿಂದ ಬಂದ್ ಮಾಡಿ ಕೆಲ ಸಿಬ್ಬಂದಿ ಒಳಗೆ ಕೆಲಸಮಾಡುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಕೇಳಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ರೋಹಿಣಿ ಸಿಂಧೂರಿ ಅವರು ನೋಟೀಸ್ ನೀಡಿದ್ದರು.
ರಾಯಚೂರು: 2013ರ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದ ಭೀತಿ ಎದುರಿಸುತ್ತಿದ್ದ ನಟಿ ಪೂಜಾಗಾಂಧಿಗೆ ಕೋರ್ಟ್ ಜಾಮೀನು ನೀಡಿದೆ.
ಚುನಾವಣೆಯಲ್ಲಿ ಬಿಎಸ್‍ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪೂಜಾ ಗಾಂಧಿ ಅನುಮತಿ ಇಲ್ಲದ ವಾಹನವನ್ನ ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 5 ಬಾರಿ ವಿಚಾರಣೆಗೆ ಗೈರಾಗಿದ್ದ ಪೂಜಾ ಗಾಂಧಿಗೆ ವಾರೆಂಟ್ ಜಾರಿ ಮಾಡಲಾಗಿತ್ತು. ಇಂದು ವಿಚಾರಣೆ ವೇಳೆ ನ್ಯಾಯಾಧೀಶರು ಪೂಜಾಗಾಂಧಿಯನ್ನು ಸುಮಾರು 6 ಗಂಟೆ ಕಾಲ ಕೋರ್ಟ್ ಕಸ್ಟಡಿಗೆ ಒಳಪಡಿಸಿದ್ದರು. ನ್ಯಾಯಾಲಯವು ಪೂಜಾಗಾಂಧಿಗೆ ಒಂದು ಲಕ್ಷ ರೂ. ಶ್ಯೂರಿಟಿ ಹಾಗೂ ಮುಂದಿನ ವಿಚಾರಣೆಗೆ ತಪ್ಪದೆ ಹಾಜರಾಗುವಂತೆ ಎಚ್ಚರಿಕೆ ನೀಡಿ ಷರತ್ತುಬದ್ಧ ಜಾಮೀನು ನೀಡಿದೆ. ಮುಂದಿನ ವಿಚಾರಣೆಯನ್ನ ನವೆಂಬರ್ 3 ಕ್ಕೆ ಮುಂದೂಡಿದೆ.
ಕಸ್ಟಡಿಗೆ ಒಳಪಡಿಸಿದ ವೇಳೆ ಪೂಜಾಗಾಂಧಿ ಇಂದು ಮಧ್ಯಾಹ್ನ ಊಟ ಬಿಟ್ಟು ಚಾಕೋಲೇಟ್ ತಿಂದು ಹೊಟ್ಟೆ ತುಂಬಿಸಿಕೊಂಡರು.
ಶಿವಮೊಗ್ಗ: ನಟ ಶಿವರಾಜ್ ಕುಮಾರ್‍ಗೆ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಶ್ರೀಕಾಂತ್ ವಿರುದ್ಧ ದೂರು ದಾಖಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಇಂದು ಇವರೆಲ್ಲರೂ ಖುಲಾಸೆಗೊಂಡಿದ್ದಾರೆ.
2014ರ ಏಪ್ರಿಲ್ 16ರಂದು ನೀತಿ ಸಂಹಿತೆ ಉಲ್ಲಂಘನೆ ಮಾಡಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಬಾರಿ ಶಿವರಾಜ್ ಕುಮಾರ್ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಮೂರನೇ ಜೆಎಂಎಫ್‍ಸಿ ನ್ಯಾಯಾಧೀಶರಾದ ಶ್ವೇತಾ ಈ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ವಕೀಲ ಶ್ರೀಪಾಲ್ ನಟ ಶಿವರಾಜ್ ಕುಮಾರ್ ಪರ ವಾದ ಮಂಡನೆ ಮಾಡಿದ್ದರು.