Tag: ನೀತು ಗಂಗಾಸ್

  • CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿಂದು 3ನೇ ಚಿನ್ನದ ಪದಕ ಭಾರತದ ಪಾಲಾಗಿದೆ. ಗೇಮ್ಸ್‌ನಲ್ಲಿ ಒಟ್ಟಾರೆಯಾಗಿ ಇಂದು ಒಂದೇ ದಿನದಲ್ಲಿ 4 ಚಿನ್ನದ ಬೇಟೆಯಾಡಿದ ಕೀರ್ತಿಯನ್ನು ಭಾರತ ಸಂಪಾದಿಸಿದೆ.

    50 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್‌ನಲ್ಲಿ ನಿಖತ್ ಜರೀನ್ ಭರ್ಜರಿ ಗೆಲುವಿನೊಂದಿಗೆ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಇದಕ್ಕೂ ಮುನ್ನ 48 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ನೀತು ಗಂಗಾಸ್ ಹಾಗೂ 51 ಕೆಜಿ ಪುರುಷರ ವಿಭಾಗದಲ್ಲಿ ಅಮಿತ್ ಪಂಗಲ್ ಭರ್ಜರಿ ಜಯ ಸಾಧಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

    10ನೇ ದಿನದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 4 ಚಿನ್ನದ ಪದಕಗಳು ಲಭಿಸಿವೆ. ಟ್ರಿಪಲ್ ಜಂಪ್‌ನಲ್ಲಿ ಒಂದು ಹಾಗೂ ಬಾಕ್ಸಿಂಗ್‌ನಲ್ಲಿ 3 ಚಿನ್ನದ ಪದಕ ಪಡೆದಿದೆ.

    ಬೆಳ್ಳಿ ಕಿರಣ ಮೂಡಿಸಿದ ಕಮಲ್‌ -ಸತ್ಯನ್‌: ಇಂದಿನ ಪುರುಷರ ಡಬಲ್ಸ್ ಟೇಬಲ್‌ ಟೆನ್ನಿಸ್‌ ಭಾರತದ ಶರತ್ ಕಮಲ್ ಹಾಗೂ ಸತ್ಯನ್‌ ಜ್ಞಾನ ಶೇಖರನ್‌ ಬೆಳ್ಳಿ ಪದಕ ಗೆದ್ದಿದ್ದಾರೆ.

    ಆದರೆ ಇನ್ನೊಂದೆಡೆ ಮಹಿಳೆಯರ ವಿಭಾಗದ ಟೇಬಲ್‌ ಟೆನ್ನಿಸ್‌ ನಲ್ಲಿ ಭಾರತದ ಶ್ರೀಜಾ ಅಕುಲಾ ಅವರು ಪ್ಲೇ ಆಫ್‌ನಲ್ಲಿ ಆಸ್ಟ್ರೇಲಿಯಾದ ಯಾಂಗ್ಜಿ ಲಿಯು ವಿರುದ್ಧ 3-4 ಅಂತರದಲ್ಲಿ ಸೋಲನ್ನು ಕಂಡಿದ್ದಾರೆ. ಒಂದೂವರೆ ಗಂಟೆಗಳಿಗೂ ಅಧಿಕಕಾಲ ಸೆಣಸಿದ ಅವರು 3 6-11 2-11 11-7 13-15 11-9 7-11 ಅಂತರದಲ್ಲಿ ಪರಾಭವಗೊಂಡಿದ್ದು, ಕಂಚಿನ ಪದಕದಿಂದ ವಂಚಿತರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿ ಎರಡು ಚಿನ್ನದ ಪದಕಗಳು ಭಾರತದ ಪಾಲಾಗಿವೆ.

    48 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ನೀತು ಗಂಗಾಸ್ ಹಾಗೂ 51 ಕೆಜಿ ಪುರುಷ ವಿಭಾಗದಲ್ಲಿ ಅಮಿತ್ ಪಂಗಲ್ ಭರ್ಜರಿ ಜಯ ಸಾಧಿಸಿದ್ದು, ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

    ಪುರುಷರ ಫ್ಲೈವೇಟ್‌ನಲ್ಲಿ ಎದುರಾಳಿಯಾಗಿದ್ದ ಯುರೋಪಿಯನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಇಂಗ್ಲೆಂಡ್‌ನ ಕಿಯಾರನ್ ಮ್ಯಾಕ್‌ಡೊನಾಲ್ಡ್ ಅವರನ್ನು 5-0 ಅಂತರದಿಂದಲ್ಲಿ ಮಣಿಸುವ ಮೂಲಕ ಪಂಗಲ್ ಚಿನ್ನದ ಹಾರಕ್ಕೆ ಕೊರಳೊಡ್ಡಿದರು. 2018ರ  ಕಾಮನ್‌ವೆಲ್ತ್ ಆವೃತ್ತಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದ ಪಂಗಾಲ್ ಈ ಬಾರಿ ಉತ್ತಮ ಪ್ರದರ್ಶನದಿಂದ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರ ಹಾಕಿಯಲ್ಲಿ ರೋಚಕ ಕಾದಾಟ – ಪೆನಾಲ್ಟಿ ಶೂಟೌಟ್‍ನಲ್ಲಿ ಗೆದ್ದು ಕಂಚು ಮುಡಿಗೇರಿಸಿಕೊಂಡ ಭಾರತ

    ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತರಾಗಿದ್ದ ನೀತು ಗಂಗಾಸ್ ಇಂಗ್ಲೆಂಡ್‌ನ ಡೆಮಿ-ಜೇಡ್ ರೆಸ್ಟನ್ ರನ್ನು 5-0 ಅಂತರದಲ್ಲಿ ಬಗ್ಗು ಬಡಿಯುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದಾರೆ.

    ಸಿಂಧು ಫೈನಲ್‌ಗೆ ಎಂಟ್ರಿ: 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತರಾದ ಸಿಂಧು ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ. ಸಿಂಗಾಪುರದ ಯೆಯೂ ಜಿಯಾಮಿನ್ ಅವರೊಂದಿಗೆ 49 ನಿಮಿಷಗಳ ಕಾಲ ಸೆಣಸಿದ ಸಿಂಧು ಜಿಯಾಮಿನ್ ಅವರನ್ನು 21-19, 21-17 ಅಂತರದಲ್ಲಿ ಸೋಲಿಸಿ ಫೈನಲ್‌ಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆಯನ್ನೂ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]