Tag: ನೀರೊಳಗಿನ ಮೆಟ್ರೋ ಸುರಂಗ ಮಾರ್ಗ

  • 2023ರಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ಆರಂಭ

    2023ರಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ಆರಂಭ

    ಕೋಲ್ಕತ್ತಾ: ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ನಿರ್ಮಾಣವಾಗುತ್ತಿದ್ದು, ಇದು 2023ರ ವೇಳೆಗೆ ಪ್ರಯಾಣಕ್ಕೆ ಲಭ್ಯವಾಗಲಿದೆ.

    ಭಾರತದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಗ ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿರ್ಮಾಣವಾಗುತ್ತಿದ್ದು, ಈ ಸುರಂಗ ಮಾರ್ಗ ಹೌರಾ ಹಾಗೂ ಕೋಲ್ಕತ್ತಾ ನಡುವೆ ಸಂಪರ್ಕವನ್ನು ಕಲ್ಪಿಸಲಿದೆ. 16.6 ಕಿ.ಮೀ ಉದ್ದದ ಸುರಂಗ ಮಾರ್ಗದ 520 ಮೀ. ನದಿ ತಳದಲ್ಲಿ ಇರಲಿದೆ. 33 ಮೀ. ನದಿಯ ತಳದ ವರೆಗೆ ಸುರಂಗವನ್ನು ನಿರ್ಮಿಸಲಾಗಿದೆ.

    ನೀರೊಳಗೆ ಸುರಕ್ಷತಾ ಕ್ರಮ:
    ನೀರೊಳಗಿನ ಮೆಟ್ರೋ ಸುರಂಗ ಮಾರ್ಗದ ಯೋಜನೆಯಲ್ಲಿ ಒದಗಿಸಲಾದ ಸೌಲಭ್ಯ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಮಾತನಾಡಿದ ಸೈಟ್ ಮೇಲ್ವಿಚಾರಕ ಮಿಥುನ್ ಘೋಷ್, ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರನ್ನು ಸ್ಥಳಾಂತರಿಸಲು ಸುರಂಗಗಳಲ್ಲಿ ವಾಕ್‌ವೇಗಳು ಇರುತ್ತವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ


    ನೀರಿನ ಸುರಂಗದ ಪ್ರದೇಶದಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ, ವಿಶೇಷ ಮಾರ್ಗದ ಮೂಲಕ ಪ್ರಯಾಣಿಕರನ್ನು ಹೊರಕ್ಕೆ ಕರೆದೊಯ್ಯಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಪ್ಯಾಸೇಜ್ ಕಾಮಗಾರಿಯನ್ನೂ ಮಾಡಲಾಗಿದೆ ಎಂದು ಮಿಥುನ್ ತಿಳಿಸಿದರು. ಇದನ್ನೂ ಓದಿ: ಅಡುಗೆ ಎಣ್ಣೆಯಿಂದ ತಯಾರಿಸಿದ ಇಂಧನದಲ್ಲಿ 3 ಗಂಟೆ ಹಾರಾಡಿತು ವಿಮಾನ

    ಪೂರ್ವ-ಪಶ್ಚಿಮ ಹೌರಾ ಮೆಟ್ರೋ ನಿಲ್ದಾಣದ ಸುಮಾರು ಶೇ.80 ರಷ್ಟು ಕೆಲಸ ಪೂರ್ಣಗೊಂಡಿದೆ. ಇದು 2023 ರಲ್ಲಿ ಪೂರ್ಣ ಪ್ರಮಾಣದ ಸೇವೆ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಹೇಳಿದರು.