Tag: ನೂತನ್ ಉಮೇಶ್

  • ಫೈಟರ್ ಚಿತ್ರದ ‘ಐ ವಾನ ಫಾಲೋ ಯು’ ಸಾಂಗ್ ರಿಲೀಸ್

    ಫೈಟರ್ ಚಿತ್ರದ ‘ಐ ವಾನ ಫಾಲೋ ಯು’ ಸಾಂಗ್ ರಿಲೀಸ್

    ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ (Nutan Umesh) ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ (Fighter) ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ ‘ಐ ವಾನ ಫಾಲೋ ಯು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚೆಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ (ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ, ಗೌರೀಶ್ ಹಾಗೂ ಹಿರಿಯ ಪತ್ರಕರ್ತರಾದ ಕೆ.ಎಸ್ ವಾಸು, ಕೆ.ಎನ್.ನಾಗೇಶ್ ಕುಮಾರ್ ಮುಂತಾದ ಗಣ್ಯರು ‘ಐ ವಾನ ಫಾಲೋ ಯು’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

    ಈ ಹಾಡಿನ ಮೊದಲ ಪದ ‘ಐ ವಾನ ಫಾಲೋ’ ಎಂಬುದನ್ನು ನಿರ್ದೇಶಕರು ಹೇಳಿದಾಗ ಫಾಲೋ ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು.  ವಿಶೇಷವೆಂದರೆ,  ಈ  ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಹಾಡಿನ ಬಗ್ಗೆ ಮಾಹಿತಿ ನೀಡಿದರು.

    ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್  ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ ‘ಫಾಲೋ ಯು’ ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ ಎನ್ನುತ್ತಾರೆ ನಿರ್ದೇಶಕ ನೂತನ್ ಉಮೇಶ್.

    ಚಿತ್ರದ ಮುಹೂರ್ತಕ್ಕೆ ಬಂದು ಹಾರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೆನೆಯುತ್ತಾ ಮಾತು ಆರಂಭಿಸಿದ ನಾಯಕ ವಿನೋದ್ ಪ್ರಭಾಕರ್, ಈ ಫೈಟರ್ ಅನ್ಯಾಯದ ವಿರುದ್ಧ ಹಾಗೂ ರೈತರ ಪರವಾಗಿ ಹೋರಾಡುವ ಫೈಟರ್. ನಿರ್ಮಾಪಕ ಸೋಮಶೇಖರ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಅಷ್ಟೇ ಚೆನ್ನಾಗಿ ಕಥೆ ,ಚಿತ್ರಕಥೆ ಬರೆದಿದ್ದಾರೆ. ಇಂದು ಬಿಡುಗಡೆಯಾದ ಹಾಡಿನ ಚಿತ್ರೀಕರಣ ಮಾರ್ಚ್ ನಲ್ಲಿ ಪಾಂಡಿಚೇರಿಯಲ್ಲಿ ಚಿತ್ರೀಕರಣವಾಗಿದ್ದು, ಅಲ್ಲಿನ ಬಿಸಿಲು ತಡೆಯುವುದು ಕಷ್ಟ.   ಎಲ್ಲರ ಶ್ರಮದಿಂದ ಈ ಹಾಡು ಚೆನ್ನಾಗಿ ಬಂದಿದೆ. ನಿರ್ಮಾಪಕ ಸೋಮಶೇಖರ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ತಂದು ಕೊಡಲಿ. ಅವರಿಂದ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿ ಎಂದು ಹಾರೈಸಿದರು.

    ಇಡೀ ಚಿತ್ರತಂಡದ ಶ್ರಮದಿಂದ ಫೈಟರ್ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ‌ಇಂದು ಹಾಡು ಬಿಡುಗಡೆಯಾಗಿದೆ. ಚಿತ್ರತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ. ಹಾಡು ಬರೆದಿರುವ ಕವಿರಾಜ್, ಹಾಡಿರುವ ಚೈತ್ರ ಹಾಗೂ ನಾಯಕಿ ಲೇಖಾ ಚಂದ್ರ  ಫಾಲೋ ಯು ಹಾಡಿನ ಬಗ್ಗೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಅಭಿನಯದ, ನೂತನ್ ಉಮೇಶ್ (Nutan Umesh) ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ (Fighter) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು.

    ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ನೂತನ್ ಉಮೇಶ್, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು.  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು.  ಈಗ ಟೀಸರ ಅನ್ನು ನಿರ್ಮಾಪಕರ ತಂದೆಯವರು ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೈಲರ್ ಹೊರಬರಲಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಫೈಟರ್ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ಫೈಟರ್ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ‌. ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ . ಸುಮಾರು ವರ್ಷಗಳ ನಂತರ ನಟಿ ನಿರೋಷ  ಈ ಚಿತ್ರದಲ್ಲಿ  ಅಭಿನಯಿಸಿದ್ದಾರೆ ಎಂದರು. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್ ಶೆಟ್ಟಿ ದಂಪತಿ

    ಫೈಟರ್ ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ  ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನನ್ನನ್ನು ನಿರ್ದೇಶಕರು ನನ್ನ ಹಿಂದಿನ ಚಿತ್ರಗಳಿಗಿಂತ ತುಂಬಾನೇ ಸ್ಟೈಲಿಷ್ ಆಗಿ ತೋರಿಸಿದ್ದಾರೆ. ನಿರ್ಮಾಪಕರು ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್ ನಾನು ಎಂದು ವಿನೋದ್ ಪ್ರಭಾಕರ್ ತಿಳಿಸಿದರು.

    ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ (Pavana) ತಮ್ಮ ಪಾತ್ರದ ಕುರಿತು ಮಾತನಾಡಿದರು. ಬಹಳ ದಿನಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ನಿರೋಷ ಸಂತಸಪಟ್ಟರು. ಚಿತ್ರದಲ್ಲಿ  ಹಾಡುಗಳಿದ್ದು ಎರಡೂ ವಿಭಿನ್ನವಾಗಿವೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಫೈಟರ್ ಚಿತ್ರದ ಸಾಹಸ ದೃಶ್ಯಗಳ ಕುರಿತು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]