Tag: ನೂತನ ರಾಷ್ಟ್ರೀಯ ಶಿಕ್ಷಣ ನೀತಿ

  • ಶಿಕ್ಷಣ ಕ್ರಾಂತಿಯಲ್ಲಿ ಪ್ರಾದೇಶಿಕ ಭಾಷೆಗಳು ಮಹತ್ವದ ಪಾತ್ರ ವಹಿಸುತ್ತದೆ: ಅಮಿತ್ ಶಾ

    ಶಿಕ್ಷಣ ಕ್ರಾಂತಿಯಲ್ಲಿ ಪ್ರಾದೇಶಿಕ ಭಾಷೆಗಳು ಮಹತ್ವದ ಪಾತ್ರ ವಹಿಸುತ್ತದೆ: ಅಮಿತ್ ಶಾ

    ಬೆಂಗಳೂರು: ಭಾರತವನ್ನು ಸಶಕ್ತವಾಗಿ ಕಟ್ಟಿ ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಾಪಿಸುವುದು ಮತ್ತು ಯುವಜನರಿಗೆ ಉಜ್ವಲ ಅವಕಾಶಗಳನ್ನು ಒದಗಿಸಬೇಕೆನ್ನುವುದೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಂಕಲ್ಪವಾಗಿದೆ. ಈ ಕ್ರಾಂತಿಕಾರಕ ಬದಲಾವಣೆಗಳನ್ನು ತರಲೆಂದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದ್ದು, ಭಾರತವನ್ನು ಜ್ಞಾನಾಧರಿತ ಸೂಪರ್ ಪವರ್ ಮಾಡಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.

    ಕೇಂದ್ರ ಸರಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಇಲ್ಲಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ನೂತನ ವಿವಿಯ ಶೈಕ್ಷಣಿಕ ಸಮುಚ್ಛಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಲಾಂಛನ ಅನಾವರಣ ಮತ್ತು ಬಳ್ಳಾರಿಯಲ್ಲಿ ಸ್ಥಾಪಿಸಲಾಗಿರುವ ವಿಧಿವಿಜ್ಞಾನ ಪ್ರಯೋಗಾಲಯದ ವರ್ಚುಯಲ್ ಉದ್ಘಾಟನೆಯನ್ನು ನೆರವೇರಿಸಿದರು.

    ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವಿದೆ. ಎನ್‍ಇಪಿಯನ್ನು ಕರ್ನಾಟಕವು ದೇಶದ ಮೊದಲ ರಾಜ್ಯವಾಗಿ ಜಾರಿಗೆ ತಂದಿದ್ದು ಶ್ಲಾಘನೀಯ ನಡೆಯಾಗಿದೆ. ಇದೊಂದು ಮಾದರಿ ನಡೆ. ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿ ದೇಶಭಕ್ತಿಯ ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇದು ಕೇಂದ್ರ ಸರ್ಕಾರದ ಪ್ರತಿಜ್ಞೆಯಾಗಿದೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ

    ಒಂದು ದೇಶ ದೊಡ್ಡದೊಡ್ಡ ಸಾಧನೆಗಳನ್ನು ಮಾಡಲು ವ್ಯಕ್ತಿಗಳ ಚಿಕ್ಕಚಿಕ್ಕ ಸಂಕಲ್ಪಗಳು ನಿರ್ಣಾಯಕ ಕೊಡುಗೆ ಕೊಡುತ್ತವೆ. ಈ ನಿಟ್ಟಿನಲ್ಲಿ, ದೇಶವನ್ನು ಪ್ರೀತಿಸುವಂತಹ ಶಿಕ್ಷಣವನ್ನು ಎನ್‍ಇಪಿ ಅಡಿಯಲ್ಲಿ ಒದಗಿಸಲಾಗುವುದು.ಇದು ಸಂಪೂರ್ಣ ಭಾರತೀಯ ದೃಷ್ಟಿಕೋನವನ್ನು ಹೊಂದಿದೆ. ದೇಶದ ಪ್ರಗತಿಯ ದೃಷ್ಟಿಯಿಂದ ಮುಂದಿನ 25 ವರ್ಷಗಳಿಗೆ ಅತಿಶಯ ಮಹತ್ವವಿದ್ದು, ಭಾರತವು ವಿಶ್ವಗುರು ಎನಿಸಿಕೊಳ್ಳುವುದು ನಿಶ್ಚಿತ ಎಂದು ಅವರು ಪ್ರತಿಪಾದಿಸಿದರು.

    ಕಳೆದ ಎಂಟು ವರ್ಷಗಳಿಂದ ಈಚೆಗೆ ದೇಶದ ಗ್ರಾಮೀಣ ಭಾಗದಲ್ಲಿ 410 ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಜತೆಗೆ ಜಮ್ಮು-ಕಾಶ್ಮೀರದ ಲಡಾಖ್ ಮತ್ತು ಈಶಾನ್ಯ ಭಾರತ ಸೇರಿದಂತೆ ಉದ್ದಗಲಕ್ಕೂ ಕೇಂದ್ರೀಯ ವಿವಿ, ಏಮ್ಸ್, ಐಐಟಿಗಳು, ವೈದ್ಯಕೀಯ ಕಾಲೇಜುಗಳು ಮತ್ತು ಹೊಸ ಜ್ಞಾನಶಾಖೆಗಳ ವಿವಿಗಳನ್ನು ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ಭಾಗಗಳನ್ನೂ ಸಮಾನವಾಗಿ ಕಾಣಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಕುಟುಂಬದವರಿಂದ ಅಮಿತ್‌ ಶಾಗೆ ಸನ್ಮಾನ

    ಪ್ರಧಾನಿ ಮೋದಿ ತಮ್ಮ ದಕ್ಷ ನೀತಿಗಳ ಮೂಲಕ ದೇಶವನ್ನು ಜಾಗತಿಕ ತಯಾರಿಕಾ ವಲಯವಾಗಿ ಬೆಳೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ, ಭಯೋತ್ಪಾದನೆ ಮತ್ತಿತರ ಪಿಡುಗುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ಅಮೆರಿಕ ಮತ್ತು ಇಸ್ರೇಲ್ ದೇಶಗಳ ಮಟ್ಟಕ್ಕೆ ಬೆಳೆದು, ಬೆಳಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

  • ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು.

    ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‌ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

    ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿ: ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರ್ತಿ. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಫೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದನ್ನೂ ಓದಿ: ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

    ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು. ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಆವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

    basavaraj bommai

    ತರ್ಕಬದ್ಧ ಚಿಂತನೆಗೆ ಅವಕಾಶ: ವಿಶ್ವವಿದ್ಯಾಲಯಗಳು ತರ್ಕಬದ್ಧ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು. ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೆ ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೆ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

    ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ : ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು ಎಂದು ಸಲಹೆ ನೀಡಿದರು.

    ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಎಚ್.ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ತಿಳಿಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

  • ನಾಳೆ ಪ್ರಧಾನಿ ನರೇಂದ್ರ ಮೋದಿ ಭಾಷಣ

    ನಾಳೆ ಪ್ರಧಾನಿ ನರೇಂದ್ರ ಮೋದಿ ಭಾಷಣ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ ಸಂಜೆ 4.30ಕ್ಕೆ ಮಾತನಾಡಲಿದ್ದಾರೆ.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಅಲ್ಲದೇ ಕೊರೊನಾ ಅನ್‍ಲಾಕ್ 3.0 ನಾಳೆಯಿಂದ ಜಾರಿ ಆಗಲಿದೆ. ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಾಡುತ್ತಿರುವುದು ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.

    ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣದ ಮಾಧ್ಯಮವಾಗಬೇಕು ಎಂಬುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶವಾಗಿದ್ದು, ಹಲವು ರಾಜ್ಯಗಳು ಹೊಸ ನೀತಿಯನ್ನು ಸ್ವಾಗತಿಸಿವೆ. ಬರೋಬ್ಬರಿ 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದ್ದರಿಂದ ಇದರ ಮಹತ್ವ, ಶಿಕ್ಷಣ ಕ್ಷೇತ್ರದಲ್ಲಿ ಆಗುವ ಬದಲಾವಣೆಯನು ದೇಶದ ಮನವರಿಕೆ ಮಾಡಲು ಮೋದಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.