Tag: ನೂಪುರ್ ಶರ್ಮಾ

  • ರಾಯ್‌ಬರೇಲಿಗೆ ನೂಪೂರ್‌ ಶರ್ಮಾ ಬಿಜೆಪಿ ಅಭ್ಯರ್ಥಿ?

    ರಾಯ್‌ಬರೇಲಿಗೆ ನೂಪೂರ್‌ ಶರ್ಮಾ ಬಿಜೆಪಿ ಅಭ್ಯರ್ಥಿ?

    ನವದೆಹಲಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma)ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

    ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿರುವ ನೂಪುರ್ ಅವರನ್ನು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ (Raibareli) ಸ್ಪರ್ಧಿಸಲು ಬಿಜೆಪಿ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ:ನಾನು ಹಿಂದೂ ಧರ್ಮದ ʼಶಕ್ತಿʼಯ ಉಪಾಸಕ- ರಾಗಾ ವಿರುದ್ಧ ಮೋದಿ ವಾಗ್ದಾಳಿ

    ಉತ್ತರ ಪ್ರದೇಶ ರಾಯ್‌ಬರೇಲಿ ಕಾಂಗ್ರೆಸ್‌ (Congress) ಭದ್ರಕೋಟೆಯಾಗಿದ್ದು ಸೋನಿಯಾ ಗಾಂಧಿ (Sonia Gandhi) ಈ ಬಾರಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಈ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ (Priyanka Vadra) ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: 2 ಸೀಟಿಗೆ ಮೈತ್ರಿ ಬೇಕಿತ್ತಾ? – ಜೆಡಿಎಸ್‌ ಅಸಮಾಧಾನಕ್ಕೆ ಕಾರಣ ಏನು?

    ನೂಪುರ್‌ಶರ್ಮಾ ಈ ಹಿಂದೆ 2015r ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರವಾಲ್ ವಿರುದ್ದ ಸೋತಿದ್ದರು. ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನೂಪುರ್‌ಶರ್ಮಾ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಬಿಜೆಪಿಯಿಂದ ಅಮಾನತಾಗಿದ್ದರು.

    ರಾಯ್‌ಬರೇಲಿ ಕೈ ಕೋಟೆ:
    ರಾಯ್‌ಬರೇಲಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು. 1999 ರಿಂದ ಸೋನಿಯಾ ಗಾಂಧಿ ಲೋಕಸಭೆ ಚುನಾವಣೆಯನ್ನು ಗೆಲ್ಲುತ್ತಾ ಬಂದಿದ್ದಾರೆ. 1999 ರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದ ಅವರು 2004ರ ಚುನಾವಣೆಯಿಂದ 2019ರ ಚುನಾವಣೆಯವರೆಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸತತವಾಗಿ ಆಯ್ಕೆ ಆಗುತ್ತಿದ್ದಾರೆ.

  • ಆಕೆ ಧೈರ್ಯಶಾಲಿ – ನೂಪುರ್‌ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್‌ ನಾಯಕ

    ಆಕೆ ಧೈರ್ಯಶಾಲಿ – ನೂಪುರ್‌ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್‌ ನಾಯಕ

    ಆಮ್ಸ್ಟರ್ಡ್ಯಾಮ್: ಇಸ್ಲಾಂ ವಿರೋಧಿ ನಿಲುವುಗಳಿಗೆ ಹೆಸರುವಾಸಿಯಾಗಿದ್ದ ಡಚ್ ಬಲಪಂಥೀಯ ನಾಯಕ ಗೀರ್ಟ್ ವೈಲ್ಡರ್ಸ್ (Geert Wilders) ಅವರೀಗ ಮತ್ತೆ ಸುದ್ದಿಯಲ್ಲಿದ್ದಾರೆ.

    ಪ್ರವಾದಿ ಮೊಹಮ್ಮದ್‌ ಪೈಗಂಬರ್‌ (Prophet Mohammed) ಅವರ ಕುರಿತು ಅವಹೇಳಕಾರಿ ಹೇಳಿಕೆ ನೀಡಿ, ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದ್ದ ನೂಪುರ್‌ ಶರ್ಮಾ (Nupur Sharma) ಬೆಂಬಲಿಸಿ ಎಕ್ಸ್‌ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    ಧೈರ್ಯಶಾಲಿ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿ ವೈಯಕ್ತಿಕ ಸಂದೇಶ ಕಳುಹಿಸಿದ್ದೇನೆ ಎಂದು ಗೀರ್ಟ್ ವೈಲ್ಡರ್ಸ್ X ಖಾತೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಕಳೆದ ವರ್ಷ ಸಂಸತ್ತಿನ ಚುನಾವಣೆಯಲ್ಲಿ ಗೆಲವು ಸಾಧಿಸಿದ ವೈಲ್ಡರ್ಸ್‌ ನೂಪುರ್‌ ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದಾಗಿಯೂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಟಾಪ್‌ 5 ಸಿಎಂಗಳ ಪೈಕಿ ಯೋಗಿ ಆದಿತ್ಯನಾಥ್‌ಗೆ 2 ನೇ ಸ್ಥಾನ- ಮೊದಲನೇಯವರು ಯಾರು?

    ವೈಲ್ಡರ್ಸ್‌ ಎಕ್ಸ್‌ ಖಾತೆಯಲ್ಲಿ ಏನಿದೆ?
    ಸತ್ಯವನ್ನು ಮಾತನಾಡಿದ್ದಕ್ಕಾಗಿ ಇಸ್ಲಾಮಿಸ್ಟ್‌ಗಳಿಂದ ಬೆದರಿಕೆ ಎದುರಿಸುತ್ತಿರುವ ಧೈರ್ಯಶಾಲಿ ನೂಪುರ್‌ ಶರ್ಮಾ ಅವರಿಗೆ ವೈಯಕ್ತಿಕವಾಗಿ ಬೆಂಬಲಿಸುವ ಸಂದೇಶ ಕಳುಹಿಸಿದ್ದೇನೆ. ಪ್ರಪಂಚದಾದ್ಯಂತ ಇರುವ ಸ್ವಾತಂತ್ರ್ಯ ಪ್ರೇಮಿಗಳು ಅವಳನ್ನು ಬೆಂಬಲಿಸಬೇಕು. ಭಾರತಕ್ಕೆ ಭೇಟಿ ನೀಡುವಾಗ ಒಂದು ದಿನ ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಗೀರ್ಟ್ ವೈಲ್ಡರ್ಸ್ ಬರೆದುಕೊಂಡಿದ್ದಾರೆ.

    ಈ ಹಿಂದೆಯೂ ಹಾಡಿ ಹೊಗಳಿದ್ದ ವೈಲ್ಡರ್ಸ್‌:
    ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿ ಈ ಹಿಂದೆಯೂ ವೈಲ್ಡರ್ಸ್‌ ಹೊಗಳಿದ್ದರು. ನೂಪುರ್ ಶರ್ಮಾ ಸತ್ಯವನ್ನು ಬಿಟ್ಟು ಬೇರೇನೂ ಮಾತನಾಡದ ವೀರ ಮಹಿಳೆ. ಇಡೀ ಜಗತ್ತು ಅವಳ ಬಗ್ಗೆ ಹೆಮ್ಮೆ ಪಡಬೇಕು. ಅವಳು ನೊಬೆಲ್ ಪ್ರಶಸ್ತಿಗೆ ಅರ್ಹಳು ಎಂದು ಹೇಳಿದ್ದರು. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್‌ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್‌ ಹತ್ಯೆ ಖಂಡಿಸಿದ ಮೋದಿ

  • ನೂಪುರ್ ಶರ್ಮಾ ಬೆಂಬಲಿಸಿದ್ದ ಗೀರ್ಟ್ ವೈಲ್ಡರ್ಸ್‌ಗೆ ಚುನಾವಣೆಯಲ್ಲಿ ಗೆಲುವು – ನೆದರ್ಲೆಂಡ್ಸ್ ಪ್ರಧಾನಿಯಾಗಲು ಸಜ್ಜು

    ನೂಪುರ್ ಶರ್ಮಾ ಬೆಂಬಲಿಸಿದ್ದ ಗೀರ್ಟ್ ವೈಲ್ಡರ್ಸ್‌ಗೆ ಚುನಾವಣೆಯಲ್ಲಿ ಗೆಲುವು – ನೆದರ್ಲೆಂಡ್ಸ್ ಪ್ರಧಾನಿಯಾಗಲು ಸಜ್ಜು

    ಆಮ್ಸ್ಟರ್ಡ್ಯಾಮ್: ಇಸ್ಲಾಂ ವಿರೋಧಿ ನಿಲುವುಗಳಿಗೆ ಹೆಸರುವಾಸಿಯಾಗಿದ್ದ ಡಚ್ ಬಲಪಂಥೀಯ ನಾಯಕ ಗೀರ್ಟ್ ವೈಲ್ಡರ್ಸ್ (Geert Wilders) ಅವರು ನೆದರ್ಲೆಂಡ್ಸ್ (Netherlands) ಸಂಸತ್ತಿನ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ.

    ಚುನಾವಣೆಯಲ್ಲಿ ಗೆದ್ದಿರುವ ಹಿನ್ನೆಲೆ ಗೀರ್ಟ್ ವೈಲ್ಡರ್ಸ್ ನೆದರ್ಲೆಂಡ್ಸ್‌ನ ನೂತನ ಪ್ರಧಾನಿಯಾಗಿ (PM) ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ.

    ಈ ಹಿಂದೆ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕವಾದ ಹೇಳಿಕೆಗಳನ್ನು ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರನ್ನು ವೈಲ್ಡರ್ಸ್ ಬೆಂಬಲಿಸಿದ್ದರು. ಇದೀಗ ಬಲಪಂಥೀಯ, ಇಸ್ಲಾಂ ವಿರೋಧಿ ಜನಪರವಾದಿ ಗೀರ್ಟ್ ವೈಲ್ಡರ್ಸ್ ಅವರು ವಿಶ್ವ ಸಮರ 2ರ ನಂತರ ಡಚ್ ರಾಜಕೀಯದಲ್ಲಿ ದೊಡ್ಡ ಅಲೆ ಎಬ್ಬಿಸಿದ್ದಾರೆ. ದೇಶದ ಮೊದಲ ಬಲಪಂಥೀಯ ಪ್ರಧಾನಿಯಾಗಲು ಮುಂದಾಗಿದ್ದಾರೆ. ಇದನ್ನೂ ಓದಿ: ಇಂದಿನಿಂದ ಭಾರತ-ಆಸೀಸ್‌ T20 ಸರಣಿ – ODI ನಲ್ಲಿ ಫ್ಲಾಪ್‌ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?

    ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ಎನ್‌ಒಎಸ್ ಪ್ರಕಟಿಸಿರುವ ಸಮೀಕ್ಷೆಯಲ್ಲಿ ಸಂಸತ್ತಿನ ಕೆಳಮನೆಯ 150 ಸ್ಥಾನಗಳಲ್ಲಿ ವೈಲ್ಡರ್ಸ್ ಪಾರ್ಟಿ ಫಾರ್ ಫ್ರೀಡಮ್ 35 ಸ್ಥಾನಗಳನ್ನು ಗೆದ್ದಿದೆ ಎಂದು ಹೇಳಿದೆ. ಇದು ಕಳೆದ ಚುನಾವಣೆಯಲ್ಲಿ ಅವರು ಗೆದ್ದ ಸ್ಥಾನಗಳಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

  • ಗನ್ ಲೈಸನ್ಸ್ ಪಡೆದ ಬಿಜೆಪಿ ಮಾಜಿ ನಾಯಕಿ ನೂಪರ್ ಶರ್ಮಾ

    ಗನ್ ಲೈಸನ್ಸ್ ಪಡೆದ ಬಿಜೆಪಿ ಮಾಜಿ ನಾಯಕಿ ನೂಪರ್ ಶರ್ಮಾ

    ನವದೆಹಲಿ: ಪ್ರವಾದಿ ಮೊಹಮ್ಮದ್ (Prophet Mohammed) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಬಿಜೆಪಿ (BJP) ಮಾಜಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರಿಗೆ ವೈಯಕ್ತಿಕ ಗನ್ ಹೊಂದಲು ಪರವಾನಗಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.

    ಕಳೆದ ವರ್ಷ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗಿ, ಪ್ರತಿಭಟನೆಗಳು ನಡೆದಿದ್ದವು. ನೂಪುರ್ ಶರ್ಮಾಗೆ ವಿದೇಶಗಳಿಂದಲೂ ಜೀವ ಬೆದರಿಕೆ ಕರೆಗಳು ಬಂದಿದ್ದವು.

    ಅಜ್ಮೀರ್ ದರ್ಗಾದ ಉದ್ಯೋಗಿಯೊಬ್ಬ ಆಕೆಯ ಕತ್ತು ಸೀಳುವುದಾಗಿ ವೀಡಿಯೋದಲ್ಲಿ ಹೇಳಿಕೆ ನೀಡಿದ್ದು, ಮತ್ತೊಬ್ಬ ಉತ್ತರ ಪ್ರದೇಶದ ನಿವಾಸಿ ಆಕೆಯನ್ನು ನಿಂದಿಸಿ ಶಿರಚ್ಛೇದ ಮಾಡುವುದಾಗಿ ಬೆದರಿಕೆಗಳು ಹಾಕಿದ್ದ. ಇದೆಲ್ಲದರ ಬೆನ್ನಲ್ಲೇ ನೂಪುರ್ ಶರ್ಮಾ ಅವರು ಸ್ವಯಂ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಪರವಾನಗಿ ಬೇಕು ಎಂದು ದೆಹಲಿ ಪೊಲೀಸರ ಬಳಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ಪರಿಶೀಲಿಸಿ ದೆಹಲಿ ಪೊಲೀಸರು ನೂಪುರ್ ಶರ್ಮಾಗೆ ಪರವಾನಗಿ ನೀಡಿದ್ದಾರೆ.

    ನೂಪುರ್ ವಿರುದ್ಧ ದೂರು ದಾಖಲು: ನೂಪುರ್ ಶರ್ಮಾ ಅವರ ಹೇಳಿಕೆ ವಿವಾದ ಆಗುತ್ತಿದ್ದಂತೆ ರಾಷ್ಟ್ರದ ಅನೇಕ ರಾಜ್ಯಗಳಲ್ಲಿ ಪೊಲೀಸ್ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಬಂಧನದಿಂದ ರಕ್ಷಣೆ ನೀಡಿತ್ತು. ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಒಂಬತ್ತು ಪ್ರಕರಣಗಳಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅಷ್ಟೇ ಅಲ್ಲದೇ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಈ ಎಲ್ಲಾ ಪ್ರಕರಣಗಳ ವಿಚಾರಣೆ ನಡೆಸುವಂತೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿತ್ತು. ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

    ಬೆಂಬಲ ನೀಡಿದವರ ಹತ್ಯೆ: ಈ ವಿವಾದಕ್ಕೆ ಸಂಬಂಧಿಸಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಇಬ್ಬರ ಹತ್ಯೆಯೂ ನಡೆದಿತ್ತು. ಆಕೆಗೆ ಬೆಂಬಲ ನೀಡಿದ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಜೂನ್‍ನಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಹತ್ಯೆ ಮಾಡಿದ್ದರು. ಅದಾದ ಕೆಲವೇ ದಿನಗಳ ನಂತರ, ನೂಪುರ್ ಶರ್ಮಾ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲಿಸಿದ್ದ ಉದಯಪುರದ ಟೈಲರ್ ಕನ್ಹಯ್ಯ ಲಾಲ್‍ನನ್ನು ಅವರ ಅಂಗಡಿಯಲ್ಲಿ ಕೊಂದಿದ್ದರು.

    ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಉದಯ್‍ಪುರದಲ್ಲಿ ಟೈಲರ್ ಹತ್ಯೆಯಂತಹ ದುರದೃಷ್ಟಕರ ಘಟನೆ ಆಗುವುದಕ್ಕೆ ನೂಪುರ್ ಶರ್ಮಾ ಹೇಳಿಕೆಯೇ ನೇರ ಕಾರಣ. ಈಗ ನಡೆಯುತ್ತಿರುವ ವಿದ್ಯಮಾನಗಳಿಗೆಲ್ಲ ನೂಪುರ್ ಶರ್ಮಾ ಒಬ್ಬರೇ ಹೊಣೆಗಾರರು ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದನ್ನೂ ಓದಿ: 4 ವರ್ಷಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ದಾಖಲೆಯ ಕನಿಷ್ಠ ಉಷ್ಣಾಂಶ ಕುಸಿತ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾರಾಜಿಸಿದ ನೂಪುರ್ ಶರ್ಮಾ ಫ್ಲೆಕ್ಸ್

    ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ರಾರಾಜಿಸಿದ ನೂಪುರ್ ಶರ್ಮಾ ಫ್ಲೆಕ್ಸ್

    ಮೈಸೂರು: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಫ್ಲೆಕ್ಸ್‌ಗಳು ಮೈಸೂರಿನಲ್ಲಿ ರಾರಾಜಿಸಿದೆ.

    ಮೈಸೂರಿನ ರಾಜೇಂದ್ರ ನಗರದ 101 ಗಣಪತಿ ದೇವಸ್ಥಾನದಿಂದ ಮೆರವಣಿಗೆ ಸಂದರ್ಭದಲ್ಲಿ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದ್ದ ಬಿಜೆಪಿಯ ಮಾಜಿ ಕಾರ್ಯಕರ್ತೆ ನೂಪುರ್ ಶರ್ಮಾ ಫ್ಲೆಕ್ಸ್‌ ಹಾಕಿರುವುದು ಕಂಡು ಬಂತು. ಈ ನೂಪುರ್ ಶರ್ಮಾ ಅವರ ಫೋಟೋವನ್ನು ರಾಷ್ಟ್ರ ನಾಯಕರ ಫ್ಲೆಕ್ಸ್ ಜೊತೆ ಹಾಕಿ ಮೆರವಣಿಗೆ ಮಾಡಲಾಯಿತು. ಇದನ್ನೂ ಓದಿ: ಕಾರವಾರ: ವರ್ಷಕ್ಕೊಮ್ಮೆ ದರ್ಶನ ನೀಡುವ ಸಾತೇರಿ ದೇವರ ಜಾತ್ರೆ ಆರಂಭ

    ಮೆರವಣಿಗೆ ವೇಳೆ ಪ್ರಧಾನಿ ಮೋದಿ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಆರ್‌ಎಸ್‍ಎಸ್ ಸಂಸ್ಥಾಪಕ ಹೆಡ್ಗೆವಾರ, ಕನಕದಾಸ ಸೇರಿದಂತೆ ಹಲವರ ಫ್ಲೆಕ್ಸ್ ಹಾಕಲಾಗಿತ್ತು. ಆರ್‌ಎಸ್‍ಎಸ್ ಹಾಗೂ ಬಿಜೆಪಿ ನಾಯಕರು ಈ ಫ್ಲೆಕ್ಸ್‌ನ್ನು ಹಾಕಿದ್ದರು. ಮೆರವಣಿಗೆ ವೇಳೆ ಹತ್ಯೆಯಾದ ಹಿಂದೂ ಕಾರ್ಯಕರ್ತರಾದ ಕ್ಯಾತಮಾರನಹಳ್ಳಿ ರಾಜು, ಶಿವಮೊಗ್ಗದ ಹರ್ಷ ಭಾವಚಿತ್ರಗಳ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಇದನ್ನೂ ಓದಿ: ಗೌರಿ ಕೂರಿಸುವ ವಿಚಾರವಾಗಿ ಗಲಾಟೆ – ತಂಗಿ ಗೌರಿ ತಂದಿದ್ದಕ್ಕೆ ಮನನೊಂದು ಅಕ್ಕ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • BJPಗೆ ಶಾಂತಿ ನೆಲೆಸುವುದು ಇಷ್ಟವಿಲ್ಲ, ಪ್ರವಾದಿ – ಮುಸ್ಲಿಮರನ್ನು ದ್ವೇಷಿಸುತ್ತಲೇ ಇದೆ: ಓವೈಸಿ ಕಿಡಿ

    BJPಗೆ ಶಾಂತಿ ನೆಲೆಸುವುದು ಇಷ್ಟವಿಲ್ಲ, ಪ್ರವಾದಿ – ಮುಸ್ಲಿಮರನ್ನು ದ್ವೇಷಿಸುತ್ತಲೇ ಇದೆ: ಓವೈಸಿ ಕಿಡಿ

    ನವದೆಹಲಿ: ಬಿಜೆಪಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ವಿರೋಧಿಸುತ್ತಲೇ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

    ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ನಿರ್ದಿಷ್ಟ ಧರ್ಮವೊಂದರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ನಾನೂ ಖಂಡಿಸುತ್ತೇನೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ವಾಯಸೇನೆ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ – ಓಡೋಡಿ ಬಂದ ಜನ

    ಹೈದರಾಬಾದ್‌ನಲ್ಲಿ ಶಾಂತಿ ನೆಲೆಸಿರುವುದು ಬಿಜೆಪಿಯವರಿಗೆ ಇಷ್ಟವಿಲ್ಲ. ಬಿಜೆಪಿಯವರು ನಿರಂತರವಾಗಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ದ್ವೇಷಿಸುತ್ತಲೇ ಇದ್ದಾರೆ. ಭಾರತದ ಸಾಮಾಜಿಕ ವ್ಯವಸ್ಥೆಯನ್ನೇ ನಾಶಮಾಡಲು ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ

    ಕೆಲ ದಿನಗಳ ಹಿಂದೆಯಷ್ಟೇ ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಮುಂದಿನ ದಿನಗಳಲ್ಲಿ ದೆಹಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧಿಸಬಹುದು. ಮುಸ್ಲಿಮರನ್ನು ನಿಂದಿಸುವವರಿಗೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಹುದ್ದೆಗಳು ಸಿಗುತ್ತವೆ. ಹಾಗಾಗಿ ನೂಪುರ್ ಶರ್ಮಾ ಅವರನ್ನು ದೆಹಲಿಯ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವುದರಲ್ಲಿ ಅಚ್ಚರಿ ಇಲ್ಲ ಎಂದು ಓವೈಸಿ ಟೀಕಿಸಿದ್ದರು.

    ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ನಡೆಸಿಕೊಟ್ಟಿದ್ದ ಕಾರ್ಯಕ್ರಮವೊಂದರ ಬಗ್ಗೆ ಟೀಕಿಸಿ ರಾಜಾ ಸಿಂಗ್ ನಿನ್ನೆ ವೀಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ರಾಜಾ ಸಿಂಗ್ ವಿರುದ್ಧ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಸಿಂಗ್ ಅವರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

    ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ

    ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ

    ಮುಂಬೈ: ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆಯನ್ನು ನೀಡಿ ದೇಶ ವಿದೇಶದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿ, ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಬೆಂಬಲಕ್ಕೆ ಮಂಗಳವಾರ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮುಂದಾಗಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಠಾಕ್ರೆ, ಎಲ್ಲರೂ ನೂಪುರ್ ಶರ್ಮಾ ಅವರಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಆದರೆ ನಾನು ಆಕೆಯನ್ನು ಬೆಂಬಲಿಸಿದ್ದೇನೆ. ನೂಪುರ್ ನೀಡಿದ ಹೇಳಿಕೆಯನ್ನು ಈ ಹಿಂದೆ ಡಾ. ಜಾಕಿರ್ ನಾಯ್ಕ್ ಹೇಳಿದ್ದರು. ಆದರೆ ನಾಯ್ಕ್ ಅವರಿಗೆ ಯಾರೂ ಕೂಡಾ ಕ್ಷಮೆ ಕೇಳುವಂತೆ ಹೇಳಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!

    ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ನೂಪುರ್ ಶರ್ಮಾ ಅವರು ನೀಡಿದ್ದ ಹೇಳಿಕೆಯಿಂದ ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಅನೇಕ ಗಲ್ಫ್ ರಾಷ್ಟ್ರಗಳಿಂದ ತೀವ್ರವಾದ ವಿರೋಧ ವ್ಯಕ್ತವಾಯಿತು. ಬಳಿಕ ಬಿಜೆಪಿ ನೂಪುರ್ ಅವರನ್ನು ವಕ್ತಾರೆ ಸ್ಥಾನದಿಂದ ಅಮಾನತುಗೊಳಿಸಿತು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ ಬಗ್ಗೆ ಅವಹೇಳನ – ತೆಲಂಗಾಣದ ಬಿಜೆಪಿ ಶಾಸಕ ಅರೆಸ್ಟ್‌

    ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ದಾಖಲಾದ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸುವಂತೆ ಆಗಸ್ಟ್ 10 ರಂದು ಆದೇಶ ನೀಡಿತ್ತು.

    Live Tv 
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!

    ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!

    ಮಾಸ್ಕೋ: ಪ್ರವಾದಿ ಮೊಹಮ್ಮದರನ್ನು ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ಅವರನ್ನು ಹತ್ಯೆ ಮಾಡಿ ಪ್ರತೀಕಾರ ತೆಗೆದುಕೊಳ್ಳಲು ರಷ್ಯಾದಲ್ಲಿ ಸೆರೆ ಸಿಕ್ಕ ಐಸಿಸ್ ಉಗ್ರ ಮುಂದಾಗಿದ್ದ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

    ರಷ್ಯಾದಲ್ಲಿ ನಿನ್ನೆ ಬಂಧಿತನಾಗಿರುವ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಅಜಮೋವ್ ಆತ್ಮಾಹುತಿ ದಾಳಿ ಮೂಲಕ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಕೊಲ್ಲುವ ಯೋಜನೆಯನ್ನು ಮಾಡಿಕೊಂಡಿದ್ದ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದೆ.

    1992ರಲ್ಲಿ ಜನಿಸಿದ ಅಜಮೊವ್ ಟರ್ಕಿಯಲ್ಲಿ ಐಎಸ್‍ನಿಂದ ನೇಮಕಗೊಂಡು ತರಬೇತಿ ಪಡೆದಿದ್ದ. ಈತ ನೂಪುರ್ ಶರ್ಮಾ, ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದಾರೆ. ಆದ್ದರಿಂದ ಅವರನ್ನು ಹತ್ಯೆಗೈದು ಪ್ರತಿಕಾರ ತೀರಿಸಿಕೊಳ್ಳಬೇಕೆಂದುಕೊಂಡಿದ್ದ ಎಂದು ವಿಚಾರಣೆ ವೇಳೆ ಅಜಮೊವ್ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದು ಬಿಜೆಪಿ ನಾಯಕರು ನಮ್ಮ ಟಾರ್ಗೆಟ್ ಎಂದು ಒಪ್ಪಿಕೊಂಡಿದ್ದಾನೆ. ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲೆಂದು ಈ ಶಂಕಿತ ಉಗ್ರನನ್ನು ಐಸಿಸ್ ನೇಮಕ ಮಾಡಿಕೊಂಡಿದೆ. ಈ ಉಗ್ರ ಭಾರತ ಪ್ರವೇಶ ಮಾಡುವ ಬಗ್ಗೆ ತಯಾರಿ ಆರಂಭಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

    bjP

    ಈ ಯೋಜನೆಯ ಭಾಗವಾಗಿಯೇ ಭಾರತದ ವೀಸಾ ಪಡೆಯಲು ಆತನನ್ನು ರಷ್ಯಾಕ್ಕೆ ಕಳುಹಿಸಲಾಗಿತ್ತು. ಆತ ಭಾರತಕ್ಕೆ ಬಂದ ನಂತರ ನವದೆಹಲಿಯಲ್ಲಿ ಸ್ಥಳೀಯ ನೆರವು ನೀಡುವುದಾಗಿಯೂ ಭರವಸೆ ನೀಡಲಾಗಿತ್ತು ಎಂಬ ವಿಚಾರ ಇದೀಗ ಬಯಲಾಗಿದೆ. ಮಧ್ಯ ಏಷ್ಯಾ ಪ್ರಾಂತ್ಯದಲ್ಲಿ ಸಕ್ರಿಯವಾಗಿರುವ ಐಸಿಸ್ ಸಂಘಟನೆಗೆ ರಷ್ಯಾದಲ್ಲಿ ನಿಷೇಧ ಹೇರಲಾಗಿದೆ. ಈ ಸಂಘಟನೆಯ ಸದಸ್ಯನನ್ನು ಸೋಮವಾರ ಮಾಸ್ಕೋನಲ್ಲಿ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ ಘಟಕವು ಸೆರೆ ಹಿಡಿದಿದೆ. ಇದನ್ನೂ ಓದಿ: ಗಣೇಶನ ಹಬ್ಬದಂದೇ ಅದ್ಧೂರಿ ಸಾವರ್ಕರ್‌ ಉತ್ಸವ ಆಚರಣೆಗೆ ಸಿದ್ಧತೆ

    ಉಗ್ರ ಸೆರೆ ಸಿಕ್ಕಿದ್ದು ಹೇಗೆ?: ಕಿರ್ಗಿಸ್ತಾನ, ಉಜ್ಜೇಕಿಸ್ತಾನದ ಇಬ್ಬರು ಭಾರತದ ವೀಸಾಕ್ಕೆ ಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲವಾದಾಗ ರಷ್ಯಾದ ಮೂಲಕ ಭಾರತಕ್ಕೆ ಬರಬಹುದು ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದರಿಂದಾಗಿ ಜು. 27ರಂದು ಭಾರತದ ಜೊತೆಗೆ ಈ ಎಲ್ಲಾ ಮಾಹಿತಿಯನ್ನು ಹಂಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ದಾಳಿ ಕುರಿತು ವಿದೇಶಿ ಗುಪ್ತಚರ ಸಂಸ್ಥೆಗಳಿಂದ ಭಾರತಕ್ಕೆ ಮಾಹಿತಿ ದೊರೆತಿದೆ. ಈ ಮಹತ್ವದ ಮಾಹಿತಿಯನ್ನು ರಷ್ಯಾಗೆ ಭಾರತ ಸರ್ಕಾರ ಕಳುಹಿಸಿದೆ. ಇದರ ಜಾಡು ಹಿಡಿದ ರಷ್ಯಾ ಪೊಲೀಸರು ಟೆಲಿಗ್ರಾಂ ಆ್ಯಪ್‍ನಲ್ಲಿ ನಡೆಸಿದ ಸಂವಹನವನ್ನು ಪತ್ತೆ ಹಚ್ಚಿ ಉಗ್ರನನ್ನು ಬಂಧಿಸಿದ್ದಾರೆ.

    ಬಂಧಿತ ಅಜಮೊವ್‍ನಿಗೆ ಆತ್ಮಹತ್ಯಾ ದಾಳಿ ಕುರಿತು ಐಸಿಸ್ ಟರ್ಕಿಯಲ್ಲಿ ತರಬೇತಿ ನೀಡಿತ್ತು. ಟರ್ಕಿಯಿಂದ ರಷ್ಯಾಗೆ ಟರ್ಕಿಯಿಂದ ರಷ್ಯಾಗೆ ತೆರಳಿ ಅಲ್ಲಿಂದ ಭಾರತಕ್ಕೆ ಬರಲು ಉದ್ದೇಶಿಸಿದ್ದ. ಜೊತೆಗೆ ಭಾರತಕ್ಕೆ ಆಗಮಿಸಿದ ಬಳಿಕ ದಾಳಿಗೆ ಅಗತ್ಯ ಸರಕು ಪಡೆಯುವವನಿದ್ದ ಎನ್ನುವ ವಿಷಯ ಬಯಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಆತ್ಮಾಹುತಿ ದಾಳಿಗೆ ಸ್ಕೆಚ್ ಹಾಕಿದ್ದ ISIS ಭಯೋತ್ಪಾದಕ ರಷ್ಯಾದಲ್ಲಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾ ಹತ್ಯೆಗೆ ಪಾಕ್‌ ಸಂಘಟನೆಗ‌ಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್

    ನೂಪುರ್ ಶರ್ಮಾ ಹತ್ಯೆಗೆ ಪಾಕ್‌ ಸಂಘಟನೆಗ‌ಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್

    ಲಕ್ನೋ: ನೂಪುರ್ ಶರ್ಮಾರನ್ನ ಹತ್ಯೆ ಮಾಡಲು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಹಾಗೂ ತಹ್ರಿಖ್-ಎ-ತಾಲಿಬಾನ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ ಭಯೋತ್ಪಾದಕ ಮೊಹಮ್ಮದ್ ನದೀಮ್‌ನನ್ನು ಉತ್ತರಪ್ರದೇಶದ ಭಯೋತ್ಪಾದಕ ನಿಗ್ರಹ ದಳವು ಬಂಧಿಸಿದೆ.

    ಪಾಕಿಸ್ತಾನ ಮೂಲದ ಜೆಎಂಇ ಹಾಗೂ ಟಿಟಿಪಿ ಭಯೋತ್ಪಾದನಾ ಸಂಘಟನೆಗಳೊಂದಿಗೆ ನೇರ ಸಂಪರ್ಕ ಹೊಂದಿದ್ದ ನದೀಮ್ ನೂಪರ್ ಶರ್ಮಾರನ್ನು ಕೊಲ್ಲುವ ಕೆಲಸ ವಹಿಸಿಕೊಂಡಿದ್ದ. ಅವನನ್ನು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಎಟಿಎಸ್ ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಏನ್ ಬಿಚ್ಚಿಡುತ್ತಾರೋ ಬಿಚ್ಚಿಡಲಿ: ಸುಧಾಕರ್ ತಿರುಗೇಟು

    ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಮುಸ್ಲಿಂ ರಾಷ್ಟ್ರಗಳಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೆಲ ಪಾಕಿಸ್ತಾನಿ ಸಂಘಟನೆಗಳು ನೂಪುರ್ ಶರ್ಮಾರನ್ನ ಕೊಲ್ಲುವುದಕ್ಕೆ ಬಹಿರಂಗವಾಗಿ ಆಫರ್‌ಗಳನ್ನು ಘೋಷಣೆ ಮಾಡಿದ್ದವು. ದೇಶದ ವಿವಿಧ ರಾಜ್ಯಗಳಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದವು. ಇದೀಗ ಸುಪ್ರೀಂ ಕೋರ್ಟ್ ಅವರ ವಿರುದ್ಧದ ಎಲ್ಲ ಕೇಸ್‌ಗಳನ್ನು ದೆಹಲಿಗೆ ವರ್ಗಾಯಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾ ವಿರುದ್ಧದ ಎಲ್ಲಾ ಪ್ರಕರಣಗಳು ದೆಹಲಿಗೆ ವರ್ಗಾವಣೆ: ಸುಪ್ರೀಂ ಕೋರ್ಟ್

    ನೂಪುರ್ ಶರ್ಮಾ ವಿರುದ್ಧದ ಎಲ್ಲಾ ಪ್ರಕರಣಗಳು ದೆಹಲಿಗೆ ವರ್ಗಾವಣೆ: ಸುಪ್ರೀಂ ಕೋರ್ಟ್

    ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲಾ 10 ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಆದೇಶ ನೀಡಿದೆ. ಇದರಿಂದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾಗೆ ದೊಡ್ಡ ಹೊರೆ ಇಳಿದಂತಾಗಿದೆ.

    ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿದ್ದ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ನೂಪುರ್ ವಿರುದ್ಧ ದೇಶಾದ್ಯಂತ ಪ್ರಕರಣಗಳು ದಾಖಲಾಗಿತ್ತು. ಇದೀಗ ದಾಖಲಾಗಿರುವ ಎಲ್ಲಾ 10 ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಲಾಗುವುದು, ನೂಪುರ್ ವಿರುದ್ಧದ ಪ್ರಕರಣಗಳ ತನಿಖೆಯನ್ನು ದೆಹಲಿ ಪೊಲೀಸರು ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

    ಪ್ರವಾದಿ ಬಗ್ಗೆ ಶರ್ಮಾ ಅವರ ಹೇಳಿಕೆಗಳ ಮೇಲೆ ಇನ್ನೂ ಹೆಚ್ಚಿನ ಎಫ್‌ಐಆರ್‌ಗಳು ದಾಖಲಾದಲ್ಲಿ, ಅವುಗಳನ್ನು ಸ್ವಯಂಚಾಲಿತವಾಗಿ ದೆಹಲಿ ಪೊಲೀಸರಿಗೆ ವರ್ಗಾಯಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: 8ನೇ ಬಾರಿ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

    ನೂಪುರ್ ವಿರುದ್ಧ ದೇಶದ ಹಲವಾರು ರಾಜ್ಯಗಳಲ್ಲಿ ಅನೇಕ ಎಫ್‌ಐಆರ್‌ಗಳು ದಾಖಲಾಗಿದ್ದು, ಅವೆಲ್ಲವನ್ನೂ ಒಂದೇ ಕಡೆಗೆ ವರ್ಗಾಯಿಸುವಂತೆ ಕೋರಿ ನೂಪುರ್ ಶರ್ಮಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಆದರೆ ಪಶ್ಚಿಮ ಬಂಗಾಳ ಸರ್ಕಾರ ಇದನ್ನು ವಿರೋಧಿಸಿತ್ತು.

    ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡುತ್ತಾ ನೂಪುರ್, ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಇದು ಜಾಗತಿಕ ವಿವಾದಕ್ಕೆ ಕರಣವಾಗಿತ್ತು. ದೇಶ ವಿದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದು, ಹಲವೆಡೆ ಹಿಂಸಾಚಾರಗಳೂ ವರದಿಯಾಗಿವೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಕೂಡಾ ನೂಪುರ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಜೆಪಿ ಈ ವಿವಾದದಿಂದ ದೂರ ಸರಿದು, ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಹಾಗೂ ವಕ್ತಾರೆ ಹುದ್ದೆಯಿಂದ ಅಮಾನತುಗೊಳಿಸಿತ್ತು. ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿಲ್ಲ ಮಹಿಳೆಯರಿಗೆ ರಕ್ಷಣೆ – ನಿತ್ಯ 6 ರೇಪ್, 7 ಕಿರುಕುಳ ಪ್ರಕರಣಗಳು ವರದಿ

    Live Tv
    [brid partner=56869869 player=32851 video=960834 autoplay=true]