Tag: ನೂರು ದಿನ

  • ‘ಕಾಟೇರ’ 100 ದಿನ: ನಾಳೆ ಟಿವಿಯಲ್ಲಿ ಪ್ರಸಾರ

    ‘ಕಾಟೇರ’ 100 ದಿನ: ನಾಳೆ ಟಿವಿಯಲ್ಲಿ ಪ್ರಸಾರ

    ರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಇಂದು ನೂರು ದಿನಗಳನ್ನು ಪೂರೈಸಿದೆ. ನೂರು ದಿನದ ಪೋಸ್ಟರ್ ಅನ್ನು ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೂರು ದಿನಗಳನ್ನು (Hundred Days) ಪೂರೈಸುವ ಬೆನ್ನಲ್ಲೇ ನಾಳೆ ಕಾಟೇರ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಯುಗಾದಿಗೂ ಎರಡು ದಿನ ಮುನ್ನ ಏಪ್ರಿಲ್ 7ಕ್ಕೆ ಸಂಜೆ 7ಕ್ಕೆ ಚಿತ್ರ ಪ್ರಸಾರವಾಗಲಿದೆ.

    ಕಾಟೇರ (Kaatera) ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ, ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗುತ್ತಿತ್ತು. ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿರುವುದಕ್ಕೆ ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದರು. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದರು.

    ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ  ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ Zee5 ವಹಿವಾಟು ಮುಗಿಸಿತ್ತು.

    Zee5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. ‘ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು  ಸಿನಿಮಾ ಪ್ರೀಮಿಯರ್ ಆಗಿದೆ.

     

    ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿದೆ. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿದೆ.

  • ಮಹಾಲಕ್ಷ್ಮಿ ಮದುವೆಗೆ ಶತದಿನೋತ್ಸವ: ಹೆಂಡ್ತಿಗೆ ಹ್ಯಾಪಿ ಕ್ರೆಡಿಟ್ ಕೊಟ್ಟ ರವೀಂದ್ರ

    ಮಹಾಲಕ್ಷ್ಮಿ ಮದುವೆಗೆ ಶತದಿನೋತ್ಸವ: ಹೆಂಡ್ತಿಗೆ ಹ್ಯಾಪಿ ಕ್ರೆಡಿಟ್ ಕೊಟ್ಟ ರವೀಂದ್ರ

    ಕಾಲಿವುಡ್ ನಟಿ ಮಹಾಲಕ್ಷ್ಮಿ ಹಾಗೂ ರವೀಂದ್ರ ಚಂದ್ರಶೇಖರ್ ಮದುವೆಯಾಗಿ ನೂರು ದಿನಗಳನ್ನು ಪೂರೈಸಿದ್ದಾರೆ. ಈ ಸಂಭ್ರಮವನ್ನು ಸ್ವತಃ ರವೀಂದ್ರ ಅವರೇ ಸೋಷಿಯಲ್ ಮೀಡಿಯಾ ಮೂಲಕ ಶೇರ್ ಮಾಡಿದ್ದಾರೆ. ನಾನು ಇಂದು ಹ್ಯಾಪಿ ಆಗಿ ಇದ್ದೇನೆ ಅಂದರೆ, ಅದಕ್ಕೆ ನೀನೇ ಕಾರಣ ಅಮ್ಮು ಎಂದು ಅವರು ಬರೆದುಕೊಂಡಿದ್ದಾರೆ. ಕಿರುತೆರೆ ನಟಿಯಾಗಿ ಸಾಕಷ್ಟು ಫೇಮಸ್ ಆಗಿದ್ದ ಮಹಾಲಕ್ಷ್ಮಿ, ನಿರ್ಮಾಪಕ ರವೀಂದ್ರ ಅವರನ್ನು ಮದುವೆಯಾದಾಗ ಅಭಿಮಾನಿಗಳು ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

    ಈ ಜೋಡಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆಯೇ ಮಿಸ್ ಮ್ಯಾಚ್ ಜೋಡಿ ಎಂದು ಟ್ರೆಂಡ್ ಕೂಡ ಆಗಿತ್ತು. ಕೆಲ ದಿನಗಳ ನಂತರ  ಈ ಜೋಡಿಯ ಹಿನ್ನೆಲೆಯನ್ನು ಕೆದಕಲಾಗಿತ್ತು. ಇಬ್ಬರಿಗೂ ಇದು ಎರಡನೇ ಮದುವೆ ಎಂದು ಹೇಳಲಾಗಿತ್ತು. ಏನೆಲ್ಲ ನೆಗೆಟಿವ್ ಕಾಮೆಂಟ್ ಬಂದರೂ, ಇಬ್ಬರೂ ನಗು ನಗುತ್ತಲೇ ಅವುಗಳನ್ನು ತಗೆದುಕೊಂಡರು. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಮದುವೆ ನಂತರದ ದಿನಗಳನ್ನು ರವೀಂದ್ರ ಆಗಾಗ್ಗೆ ಅಪ್ ಡೇಟ್ ಮಾಡುತ್ತಲೇ ಇರುತ್ತಾರೆ. ತಮ್ಮ ಬದುಕಿಗೆ ಮಹಾಲಕ್ಷ್ಮಿ ಬಂದ ನಂತರ ಸಾಕಷ್ಟು ಬದಲಾವಣೆಗಳನ್ನು ಕಂಡೆ ಎಂದು ಮೊನ್ನೆಯಷ್ಟೇ ಅವರು ಬರೆದುಕೊಂಡಿದ್ದರು. ಇದೀಗ ನೂರರ ಸಂಭ್ರಮಕ್ಕೂ ಅವರು ಭಾವುಕ ಪೋಸ್ಟ್ ಹಾಕಿದ್ದಾರೆ. ಅವರ ಬದುಕಿನಲ್ಲಿ ಉಲ್ಲಾಸ ಬರುವುದಕ್ಕೆ ಕಾರಣ ಪತ್ನಿ ಮಹಾಲಕ್ಷ್ಮಿ ಎಂದು ಅವರಿಗೆ ಕ್ರೆಡಿಟ್ ಕೊಟ್ಟಿದ್ದಾರೆ.

    ದುಡ್ಡಿಗಾಗಿ ಮಹಾಲಕ್ಷ್ಮಿ ಮದುವೆಯಾಗಿದ್ದಾರೆ ಎಂದು ಸುದ್ದಿ ಹರಿ ಬಿಡಲಾಯಿತು. ರವೀಂದ್ರ ಅವರ ಬಾಡಿ ಶೇಮಿಂಗ್ ಮಾಡಲಾಯಿತು. ಅಲ್ಲದೇ, ಇಬ್ಬರ ಬಗ್ಗೆಯೂ ಹಲವು ಗಾಸಿಪ್ ಗಳನ್ನು ಹಂಚಲಾಯಿತು. ಏನೇ ಮಾಡಿದರೂ, ಇಬ್ಬರೂ ಜೋಡಿಯೂ ಖುಷಿ ಖುಷಿಯಾಗಿ ತಗೆದುಕೊಂಡರು. ಹಲವರಿಗೆ ಉತ್ತರವನ್ನೂ ಕೊಟ್ಟರು. ಏನೇ ಆಗಲಿ ಬದುಕು ನಗುನಗುತ್ತಲೇ ಇರುಬೇಕು ಎನ್ನುವುದು ಇವರ ಫಿಲಾಸಫಿ.

    Live Tv
    [brid partner=56869869 player=32851 video=960834 autoplay=true]

  • ಜೇಮ್ಸ್ 100 ದಿನ : ಶತಕದ ಸಂಭ್ರಮದಲ್ಲಿ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ

    ಜೇಮ್ಸ್ 100 ದಿನ : ಶತಕದ ಸಂಭ್ರಮದಲ್ಲಿ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ

    ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ರಿಲೀಸ್ ಆಗಿ ನೂರು ದಿನಗಳನ್ನು ಪೂರೈಸಿದೆ. ಮಾರ್ಚ್ 17 ರಂದು ಅಪ್ಪು ಹುಟ್ಟು ಹಬ್ಬದಂದು ಬಿಡುಗಡೆಯಾದ ಆದ ಸಿನಿಮಾ ಇಂದಿಗೆ ಶತದಿನ ಆಚರಿಸಿದೆ. ಹಾಗಾಗಿ ಅಪ್ಪು ಅಭಿಮಾನಿಗಳು ಅಲ್ಲಲ್ಲಿ ಶತದಿನದ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ನೆಚ್ಚಿನ ನಟನಿಗೆ ಈ ಮೂಲಕ ಅಭಿಮಾನ ತೋರುತ್ತಿದ್ದಾರೆ. ನೂರನೇ ದಿನದ ಸಂಭ್ರಮದಂದು ಶತದಿನ ಪೋಸ್ಟರ್ ಕೂಡ ರಿಲೀಸ್ ಮಾಡಿದ್ದಾರೆ.

    ಬಹಾದ್ದೂರ್ ಚೇತನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಬಾಕ್ಸ್ ಆಫೀಸಿನಲ್ಲೂ ಸಖತ್ ಸದ್ದು ಮಾಡಿತ್ತು. ರಿಲೀಸ್ ಆದ ಕೆಲವೇ ದಿನಗಳಲ್ಲಿ ನೂರು ಕೋಟಿ ಕ್ಲಬ್ ಕೂಡ ಸೇರಿತ್ತು. ಇದೀಗ ನೂರು ದಿನ ಪೂರೈಸಿದೆ. ಈ ಮೂಲಕ ಅಪ್ಪು ಅವರ ನೂರು ದಿನಗಳ ಪ್ರದರ್ಶನ ಕಂಡ ಸಿನಿಮಾಗಳ ಸಾಲಿಗೆ ಜೇಮ್ಸ್ ಕೂಡ ಸೇರ್ಪಡೆಯಾಗಿದೆ. ಇದನ್ನೂ ಓದಿ : ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಅ‍ಪ್ಪು ನಟನೆಯ ಕೊನೆಯ ಸಿನಿಮಾ ಇದಾಗಿದ್ದರಿಂದ, ಅಭಿಮಾನಿಗಳು ಕೂಡ ಭಾವನಾತ್ಮಕವಾಗಿಯೇ ಚಿತ್ರವನ್ನು ತಗೆದುಕೊಂಡರು. ನೂರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಯಿತು. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲೂ ತುಂಬಿದ ಪ್ರದರ್ಶನ ಕಂಡಿತು. ಭಾರತದಲ್ಲಿ ಮಾತ್ರವಲ್ಲ, ಅನೇಕ ದೇಶಗಳಲ್ಲೂ ಈ ಚಿತ್ರವು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತು. ಇದೀಗ ಕರ್ನಾಟಕ ಕೆಲವು ಚಿತ್ರಮಂದಿರಗಳಲ್ಲಿ ಶತದಿನದ ಪ್ರದರ್ಶನವನ್ನೂ ಮುಗಿಸಿದೆ.

    Live Tv

  • ಸರ್ಕಾರದ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಡಿಸಿ ಚಾಲನೆ

    ಸರ್ಕಾರದ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಡಿಸಿ ಚಾಲನೆ

    ಚಾಮರಾಜನಗರ: ರಾಜ್ಯ ಸರ್ಕಾರ ನೂರು ದಿನಗಳನ್ನು ಪೂರೈಸಿ ಮುನ್ನಡೆದಿದೆ. ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಚಾಮರಾಜನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಇಂದಿನಿಂದ ಆರಂಭಗೊಂಡಿದೆ.

    ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಯಕ್ರಮಗಳು, ಸಾಧನೆ ಕುರಿತ ಮಾಹಿತಿ ಫಲಕಗಳನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವೀಕ್ಷಿಸಿದರು. ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎ.ರಮೇಶ್, ಕೆಎಸ್‍ಆರ್‍ಟಿಸಿ ಸಿಬ್ಬಂದಿ ಹಾಜರಿದ್ದರು.

  • ನಮೋ 2.0ಗೆ 100 ದಿನ- ನಮ್ಮ ಸರ್ಕಾರ ಭರವಸೆಯ ಸಂಕೇತ ಎಂದ ಅಮಿತ್ ಶಾ

    ನಮೋ 2.0ಗೆ 100 ದಿನ- ನಮ್ಮ ಸರ್ಕಾರ ಭರವಸೆಯ ಸಂಕೇತ ಎಂದ ಅಮಿತ್ ಶಾ

    ನವದೆಹಲಿ: ಪ್ರಧಾನಿ ಮೋದಿ ಅವರ ಸತತ ಎರಡನೇ ಬಾರಿ ಅಧಿಕಾರ ವಹಿಸಿಕೊಂಡು ಇಂದಿಗೆ ನೂರು ದಿನ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಸರ್ಕಾರ ದೇಶದ ಎಲ್ಲಾ ಜನರಿಗೂ ಭರವಸೆಯ ಸಂಕೇತ ಎಂದು ಹೇಳಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ನರೇಂದ್ರ ಮೋದಿ ಸರ್ಕಾರವು ಬಡವರ ರಾಷ್ಟ್ರೀಯ ಭದ್ರತೆ, ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಸಮಾನಾರ್ಥಕವಾಗಿದೆ ಮತ್ತು ಸಮಾಜದ ಪ್ರತಿಯೊಂದು ವರ್ಗಕ್ಕೂ “ಭರವಸೆಯ ಸಂಕೇತ” ವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಮೋದಿ ಸರ್ಕಾರದ 100 ದಿನಗಳ ಪೂರ್ಣಗೊಂಡ ನಂತರ ಸರಣಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿ ಅಡಿಯಲ್ಲಿ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದು ಸೇರಿದಂತೆ ಹಲವಾರು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಮೂಲಕ ಮೋದಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಅಭಿವೃದ್ಧಿ ಮತ್ತು ಬಡವರ ಕಲ್ಯಾಣಕ್ಕೆ ಸಮಾನಾರ್ಥಕವಾಗಿದೆ ಎಂದು ಅವರು ಸರಣಿ ಟ್ವೀಟ್‍ಗಳಲ್ಲಿ ಹೇಳಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಿಂದ ಆರ್ಟಿಕಲ್ 370, ಆರ್ಟಿಕಲ್ 35 ಎ ಅನ್ನು ತೆಗೆದುಹಾಕುವುದು. ಮುಸ್ಲಿಂ ಮಹಿಳೆಯರನ್ನು ತ್ರಿಪಲ್ ತಲಾಖ್ ಶಾಪದಿಂದ ಮುಕ್ತಗೊಳಿಸುವ ನಿರ್ಧಾರ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ರಾಷ್ಟ್ರದ ಭದ್ರತಾ ವಿಚಾರವನ್ನು ಬಲಪಡಿಸುವ ನಿರ್ಧಾರಗಳು ಮೋದಿಯವರ ನಿರ್ಣಾಯಕ ನಾಯಕತ್ವದ ಫಲಿತಾಂಶವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

    # MODIfied100 ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅಮಿತ್ ಶಾ ಅವರು. ಮೋದಿ ಅವರ ಸರ್ಕಾರ ಎರಡನೇ ಅವಧಿಯಲ್ಲಿ 100 ದಿನವನ್ನು ಪೂರ್ಣಗೊಳಿಸಿದ್ದಕ್ಕೆ ಪಿಎಂ ಮೋದಿ ಮತ್ತು ನನ್ನ ಎಲ್ಲಾ ಮಂತ್ರಿ ಸಹದ್ಯೋಗಿಗಳಿಗೆ ಅಭಿನಂದಿಸುತ್ತೇನೆ. ನಮ್ಮ ರಾಷ್ಟ್ರದ ಅಭಿವೃದ್ಧಿ ಮತ್ತು ರಕ್ಷಣೆ ಯಾವುದೇ ತೊಂದರೆ ಬಾರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ನಾನು ನಮ್ಮ ಎಲ್ಲ ದೇಶವಾಸಿಗಳಿಗೆ ಭರವಸೆ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.