Tag: ನೆರೆಹೊರೆಯವರು

  • ಅನ್ಯ ಸಮುದಾಯದವರೊಂದಿಗೆ ಮಗ ಮಾತನಾಡಿದ್ದಕ್ಕೆ ನೆರೆಹೊರೆಯವರಿಂದ ತಂದೆಯ ಹತ್ಯೆ

    ಅನ್ಯ ಸಮುದಾಯದವರೊಂದಿಗೆ ಮಗ ಮಾತನಾಡಿದ್ದಕ್ಕೆ ನೆರೆಹೊರೆಯವರಿಂದ ತಂದೆಯ ಹತ್ಯೆ

    ಲಕ್ನೋ: ಯುವಕನೊಬ್ಬ ಅನ್ಯ ಸಮುದಾಯದವರೊಂದಿಗೆ (Another Community) ಸ್ನೇಹ ಬೆಳೆಸಿದ್ದ ಎಂಬ ಕಾರಣಕ್ಕೆ ಆತನ ತಂದೆಯನ್ನು (Father) ಮನಬಂದಂತೆ ಥಳಿಸಿ ನೆರೆಹೊರೆಯವರೇ ಹತ್ಯೆ (Murder) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಪುತ್ರನೂ (Son) ಗಾಯಗೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ.

    ಮೃತ ವ್ಯಕ್ತಿಯ ಮಗ ಶಾರುಖ್ ಶೇಖ್ (20) ಅನ್ಯ ಸಮುದಾಯದ ಸ್ನೇಹಿತರೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ನೆರೆಹೊರೆಯವರು ಥಳಿಸಿದ್ದಾರೆ. ತನ್ನ ಮಗನನ್ನು ಥಳಿಸುತ್ತಿರುವುದನ್ನು ಕಂಡು ಮಹಮ್ಮದ್ ಸರ್ತಾಜ್ ಆತನನ್ನು ರಕ್ಷಿಸಲು ಧಾವಿಸಿದ್ದಾರೆ. ಆದರೆ ಈ ವೇಳೆ ನೆರೆಹೊರೆಯವರು ಸರ್ತಾಜ್ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಸರ್ತಾಜ್ ಪ್ರಜ್ಞೆ ಕಳೆದುಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ವರದಿಗಳ ಪ್ರಕಾರ ಶಾರುಖ್ ತನ್ನ ಇಬ್ಬರು ಸ್ನೇಹಿತರೊಂದಿಗೆ ತಮ್ಮ ಮನೆಯ ಹೊರಗಡೆ ಮಾತನಾಡುತ್ತಿದ್ದ. ಈ ವೇಳೆ ನೆರೆಹೊರೆಯವರಾದ ರಶೀದ್ ಖಾನ್, ಅಶು ಖಾನ್, ಫಯ್ಯಾಮ್ ಹಾಗೂ ಫಾಜಿಲ್ ಆತನನ್ನು ನಿಂದಿಸಿ ಥಳಿಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಹೇಗೋ ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಶಾರುಖ್‌ನನ್ನು ಥಳಿಸುತ್ತಿದ್ದುದನ್ನು ಕಂಡ ಸರ್ತಾಜ್ ಮಗನನ್ನು ರಕ್ಷಿಸಲು ಅಲ್ಲಿಗೆ ಬಂದಾಗ ಅವರ ಮೇಲೆ ಹಾಕಿ ಸ್ಟಿಕ್‌ಗಳಿಂದ ಥಳಿಸಿದ್ದಾರೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ನನ್ನ ಕುಟುಂಬ ಅನ್ಯ ಸಮುದಾಯದವರ ಭೇಟಿಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಆದರೆ ನಮ್ಮ ನೆರೆಹೊರೆಯವರು ಇದನ್ನು ವಿರೋಧಿಸಿದ್ದು, ಅನ್ಯ ಧರ್ಮದವರೊಂದಿಗೆ ಸಂಬಂಧ ಕಡಿದುಕೊಳ್ಳುವಂತೆ ಹೇಳಿದ್ದರು. ಇಲ್ಲದೇ ಹೋದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯನ್ನೂ ಹಾಕಿದ್ದರು. ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧವೂ ಕಠಿಣ ಕ್ರಮವನ್ನು ಕೈಗೊಳ್ಳಬೇಕಾಗಿ ವಿನಂತಿಸುತ್ತೇವೆ ಎಂದು ಶಾರುಖ್‌ನ ಹಿರಿಯ ಸಹೋದರ ದಾವುದ್ ತಿಳಿಸಿದ್ದಾರೆ.

    CRIME 2

    ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ

    Live Tv
    [brid partner=56869869 player=32851 video=960834 autoplay=true]

  • ಮಾತನಾಡಲು ನಿರಾಕರಿಸಿದಕ್ಕೆ ಯುವತಿಗೆ ಆ್ಯಸಿಡ್ ದಾಳಿ ಬೆದರಿಕೆ ಹಾಕ್ದ

    ಮಾತನಾಡಲು ನಿರಾಕರಿಸಿದಕ್ಕೆ ಯುವತಿಗೆ ಆ್ಯಸಿಡ್ ದಾಳಿ ಬೆದರಿಕೆ ಹಾಕ್ದ

    ಗಾಂಧಿನಗರ: ಮಾತನಾಡಲು ನಿರಾಕರಿಸಿದ 25 ವರ್ಷದ ಯುವತಿಗೆ ಆ್ಯಸಿಡ್ ದಾಳಿ ನಡೆಸುವುದಾಗಿ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಘಟನೆ ಅಹಮದಬಾದ್‍ನಲ್ಲಿ ನಡೆದಿದೆ.

    ಇದೀಗ ಯುವತಿ ಆ್ಯಸಿಡ್ ದಾಳಿ ಬೆದರಿಕೆಯೊಡ್ಡಿದ್ದ ಆರೋಪಿ ವಿರುದ್ಧ ವೆಜಾಲ್‍ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಹಮದಾಬಾದ್‍ನ ಜುಹಾಪುರದ ನಿವಾಸಿಯಾಗಿರುವ ಸಂತ್ರಸ್ತೆ, ವೆಜಲ್‍ಪುರದಲ್ಲಿ ವಾಸಿಸುವ ಮನ್ಸೂರಿ ಇಬ್ಬರೂ ಸುಮಾರು ಏಳು ವರ್ಷಗಳಿಂದ ಸ್ನೇಹಿತರಾಗಿದ್ದರು. ಆದರೆ ಇದೀಗ ಯುವತಿ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ರೇಪ್ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು!

    ಮನ್ಸೂರಿ ಶನಿವಾರ ಮಧ್ಯಾಹ್ನ ಸಂತ್ರಸ್ತೆ ಮನೆಗೆ ಆಗಮಿಸಿ ಮತನಾಡುವುದನ್ನು ನಿಲ್ಲಿಸಿರುವ ಕುರಿತಂತೆ ಪ್ರಶ್ನಿಸಿದ್ದಾನೆ. ಆಗ ಯುವತಿ ನಿನ್ನೊಂದಿಗೆ ಸ್ನೇಹ ಬೆಳೆಸಲು ಇಷ್ಟವಿಲ್ಲ ಎಂದು ಹೇಳಿದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಮನ್ಸೂರಿ ಆಕೆಯ ಮೇಲೆ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಈ ವೇಳೆ ಯುವತಿ ಕಿರುಚಾಡಿದ್ದರಿಂದ ಅವರ ನೆರೆಹೊರೆಯವರು ಧಾವಿಸಿದಾರೆ. ಆಗ ವ್ಯಕ್ತಿ ಸಂತ್ರಸ್ತೆಗೆ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿ ಅಲ್ಲಿಂದ ಪರಾರಿಯಾಗಿದ್ದಾನೆ.

    ಈ ಘಟನೆ ಕುರಿತಂತೆ ಯುವತಿ ತನ್ನ ತಂದೆಗೆ ವಿವರಿಸಿದಾಗ ಕೂಡಲೇ ಪೊಲೀಸರನ್ನು ಸಂಪರ್ಕಿಸಲು ತಿಳಿಸಿದ್ದಾರೆ. ಇದೀಗ ಪೊಲೀಸರು ಆರೋಪಿ ವಿರುದ್ಧ ಕ್ರಮಿನಲ್ ಬೆದರಿಕೆ ಮತ್ತು ಇತರ ದೂರುಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಹಿರಿಯರ ಕಿರುಕುಳ – ಚರ್ಚಿನಲ್ಲಿಯೇ ಪಾದ್ರಿ ಆತ್ಮಹತ್ಯೆಗೆ ಯತ್ನ

  • ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ತಂದೆಯನ್ನೇ ಹತ್ಯೆಗೈದ ಬಾಲಕಿ

    ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ತಂದೆಯನ್ನೇ ಹತ್ಯೆಗೈದ ಬಾಲಕಿ

    ಚೆನ್ನೈ: ಕೆಲವು ದಿನಗಳ ಹಿಂದೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯೇ ತನ್ನ ತಂದೆಯನ್ನು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತಂತೆ ಪೊಲೀಸರು, ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಬಾಲಕಿ ಆತ್ಮರಕ್ಷಣೆಗಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾಳೆ. ಕೆಲವು ದಿನಗಳ ಹಿಂದೆ ಬಾಲಕಿ ಬಟ್ಟೆ ಒಗೆಯುವ ಕೆಲಸದಿಂದ ಮನೆಗೆ ಹಿಂದಿರುಗಿದ ಬಳಿಕ ತನ್ನ ತಂದೆಯನ್ನು ಕೊಲೆ ಮಾಡಿರುವುದಾಗಿ ನೆರೆಹೊರೆಯವರ ಬಳಿ ಹೇಳಿಕೊಂಡಿದ್ದಾಳೆ. ಈ ಹಿಂದೆ ಈ ಪ್ರಕರಣ ಕುರಿತಂತೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ತನಿಖೆ ಬಳಿಕ 40 ವರ್ಷದ ತನ್ನ ತಂದೆಯನ್ನು ಕೊಂದಿದ್ದು, ಮಗಳೇ ಎಂಬ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೆ.28 ರವರೆಗೆ ರಾಜ್ಯದಲ್ಲಿ ಮಳೆ – ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

    ಮದ್ಯವ್ಯಸನರಾಗಿದ್ದ ತಂದೆ ನೀಡುತ್ತಿದ್ದ ಹಿಂಸೆಯನ್ನು ಸಹಿಸಲಾಗದೇ ಬಾಲಕಿಯೆ ತಂದೆಯನ್ನು ಕೊಲೆಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಇನ್ನೂ ಈ ವಿಚಾರವಾಗಿ ಕಾನೂನು ತಜ್ಞರನ್ನು ಸಂಪರ್ಕಿಸಿದಾಗ ಭಾರತೀಯ ದಂಡ ಸಂಹಿತೆ ಸೆಕ್ಷನ್ 100ರ ಅಡಿ ಖಾಸಗಿ ರಕ್ಷಣೆಯ ಹಕ್ಕನ್ನು ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ನಾವು ಆಕೆಯನ್ನು ಮುಕ್ತಗೊಳಿಸಿದ್ದೇವೆ ಎಂದು ವಿಲ್ಲುಪುರಂ ಪೊಲೀಸ್ ಅಧಿಕಾರಿ ಎನ್. ಶ್ರೀನಾಥ್ ತಿಳಿಸಿದ್ದಾರೆ.

    ವಿಚಾರಣೆ ವೇಳೆ ಬಾಲಕಿ ತನ್ನ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಆಕೆಯ ಅಕ್ಕ 160 ಕಿ.ಮೀ ದೂರದಲ್ಲಿರುವ ಚೆನ್ನೈನ ಜವಳಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾಳೆ ಮತ್ತು ಆಕೆ ತನ್ನ ತಂದೆಯೊಟ್ಟಿಗೆ ವಾಸಿಸುತ್ತಿರುವುದಾಗಿ ಹೇಳಿಕೊಂಡಿದ್ದಾಳೆ. ಇದೀಗ ಬಾಲಕಿಯನ್ನು ಬಾಲಗೃಹಕ್ಕೆ ಸ್ಥಳಾಂತರಿಸಲಾಗಿದ್ದು, ಈಗ ಬಾಲಕಿ ಕ್ಷೇಮವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ -ನಾಲ್ವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

  • ಸ್ನೇಹಿತನಿಂದ ಚಾಕು ಇರಿತ – 7 ವರ್ಷದ ಮಗನ ಮುಂದೆಯೇ ದಂಪತಿ ಸಾವು

    ಸ್ನೇಹಿತನಿಂದ ಚಾಕು ಇರಿತ – 7 ವರ್ಷದ ಮಗನ ಮುಂದೆಯೇ ದಂಪತಿ ಸಾವು

    ನವದೆಹಲಿ: 7 ವರ್ಷದ ತಮ್ಮ ಮಗನ ಮುಂದೆಯೇ ತಂದೆ, ತಾಯಿಯನ್ನು ವ್ಯಕ್ತಿಯೊಬ್ಬ ಕೊಲೆಗೈದ ಘಟನೆ ದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ.

    ಕೊಲೆಯಾದ ದಂಪತಿಯನ್ನು ದುಂಡೇಹಾರದ ನಿವಾಸಿಗಳಾದ ವಿಕ್ರಮ್ ಸಿಂಗ್ ಮತ್ತು ಅವರ ಪತ್ನಿ ಜ್ಯೋತಿ ಎಂದು ಗುರುತಿಸಲಾಗಿದೆ. ವಿಕ್ರಮ್ ಸಿಂಗ್ ಅವರ ಸ್ನೇಹಿತ ಅಭಿನವ್ ಕೊಲೆ ಮಾಡಿ ಸ್ಥಳೀಯರ ಕೈಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ಆರೋಪಿ ಅಭಿನವ್ ವಿಕ್ರಮ್ ಸಿಂಗ್ ಅವರ ಸ್ನೇಹಿತನಾಗಿದ್ದು, ವಿಕ್ರಮ್ ವಿದೇಶದಲ್ಲಿ ನಿನಗೆ ಕೆಲಸ ಕೊಡುಸುತ್ತೇನೆ ಎಂದು ಹೇಳಿ ಅಭಿನವ್ ಬಳಿ 1.5 ಲಕ್ಷ ರೂ ಪಡೆದುಕೊಂಡಿದ್ದಾನೆ. ಆದರೆ ಅಭಿನವ್‍ಗೆ ಕೆಲಸ ಕೊಡಿಸಲು ವಿಕ್ರಮ್‍ನಿಂದ ಸಾಧ್ಯವಾಗಿಲ್ಲ. ಈ ವಿಚಾರಕ್ಕೆ ಈ ಇಬ್ಬರ ನಡುವೆ ಜಗಳವಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

    ಈ ವಿಚಾರವಾಗಿ ಮಾತನಾಡಲು ತಡರಾತ್ರಿ ಅಭಿನವ್ ವಿಕ್ರಮ್ ಸಿಂಗ್ ಅವರ ಮನೆಗೆ ಬಂದಿದ್ದಾನೆ. ಇಬ್ಬರು ಕುಳಿತು ಮದ್ಯಪಾನ ಮಾಡಿದ್ದಾರೆ. ನಂತರ ಅಭಿನವ್ ಮತ್ತು ವಿಕ್ರಮ್ ಕೆಲಸದ ವಿಚಾರವಾಗಿ ಮತ್ತೆ ಮನೆಯಲ್ಲಿ ಜಗಳವಾಡಿದ್ದಾರೆ. ಈ ವೇಳೆ ಅಭಿನವ್ ಚಾಕುವಿನಿಂದ ವಿಕ್ರಮ್‍ಗೆ ಇರಿದಿದ್ದಾನೆ. ಗಂಡನನ್ನು ಬಿಡಿಸಿಕೊಳ್ಳಲು ಬಂದ ಪತ್ನಿ ಜ್ಯೋತಿಯನ್ನು ಕೂಡ ಅಭಿನವ್ ಇರಿದು ಇಬ್ಬರನ್ನು ಕೊಲೆ ಮಾಡಿದ್ದಾನೆ.

    ಈ ಸಮಯದಲ್ಲಿ ಮನೆಯೊಳಗೆ ಗಲಾಟೆಯಾಗುತ್ತಿದ್ದನ್ನು ಗಮನಿಸಿದ ನೆರೆಹೊರೆಯವರು ಬಾಗಿಲು ಮುರಿದು ಮನೆಯೊಳಗೆ ಬಂದಿದ್ದಾರೆ. ಈ ವೇಳೆ ಇರಿತಕ್ಕೆ ಒಳಗಾಗಿದ್ದ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ದಂಪತಿಯ 7 ವರ್ಷದ ಮಗ ಭಯಭೀತನಾಗಿ ನಿಂತಿದ್ದ. ಸ್ಥಳೀಯರು ಆರೋಪಿ ಅಭಿನವ್‍ನನ್ನು ರೆಡ್‍ಹ್ಯಾಂಡ್ ಆಗಿ ಹಿಡಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬೆರಾಮ್ ಸಿಂಗ್ ಹೇಳಿದ್ದಾರೆ.