Tag: ನೆಲಬಾಂಬ್

  • ಜಮ್ಮು-ಕಾಶ್ಮೀರ ಗಡಿಯುದ್ದಕ್ಕೂ ಕಾಡ್ಗಿಚ್ಚು – ನೆಲಬಾಂಬ್‌ಗಳು ಸ್ಫೋಟ

    ಜಮ್ಮು-ಕಾಶ್ಮೀರ ಗಡಿಯುದ್ದಕ್ಕೂ ಕಾಡ್ಗಿಚ್ಚು – ನೆಲಬಾಂಬ್‌ಗಳು ಸ್ಫೋಟ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ದಕ್ಕೂ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಇದರಿಂದಾಗಿ ನೆಲಬಾಂಬ್‌ಗಳು ಸ್ಫೋಟಗೊಂಡಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

    ಸೋಮವಾರ ಗಡಿ ನಿಯಂತ್ರಣ ರೇಖೆಯಲ್ಲಿ ಪ್ರಾರಂಭವಾದ ಕಾಡ್ಗಿಚ್ಚು, ಮೆಂಧರ್ ಸೆಕ್ಟರ್‌ನ ಎಲ್ಲೆಡೆ ವ್ಯಾಪಿಸಿದೆ. ಕಾಡ್ಗಿಚ್ಚು ಒಳನುಸುಳುವಿಕೆಯ ವಿರೋಧಿ ವ್ಯವಸ್ಥೆಯ ಭಾಗವಾಗಿದ್ದ 6ಕ್ಕೂ ಹೆಚ್ಚು ಲ್ಯಾಂಡ್‌ಮೈನ್‌ಗಳನ್ನು ಸ್ಫೋಟಿಸಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ – 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿ, ಕೊಚ್ಚಿಹೋದ ರಸ್ತೆ, ರೈಲು ಹಳಿ

    ಕಳೆದ 3 ದಿನಗಳಿಂದ ಕಾಡ್ಗಿಚ್ಚು ಉರಿಯುತ್ತಿದ್ದು, ನಾವು ಸೇನೆಯೊಂದಿಗೆ ಬೆಂಕಿಯನ್ನು ನಂದಿಸುತ್ತಿದ್ದೇವೆ. ಇಂದು ಬೆಳಗ್ಗೆ ದರಂಶಾಲ್ ಬ್ಲಾಕ್‌ನಲ್ಲಿ ಪ್ರಾರಂಭವಾದ ಬೆಂಕಿ ಪ್ರಬಲವಾದ ಗಾಳಿಯಿಂದಾಗಿ ವೇಗವಾಗಿ ಹರಡಿದೆ. ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎಂದು ಫಾರೆಸ್ಟರ್ ಕನಾರ್ ಹುಸೇನ್ ಶಾ ತಿಳಿಸಿದ್ದಾರೆ.

    ರಜೌರಿ ಜಿಲ್ಲೆಯ ಗಡಿ ಸಮೀಪದ ಸುಂದರಬಂಡಿ ಪ್ರದೇಶದಲ್ಲಿ ಮತ್ತೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಇದು ಗಂಭೀರ್, ನಿಕ್ಕಾ, ಪಂಜ್‌ಗ್ರೇ, ಬ್ರಾಹ್ಮಣ, ಮೊಘಲಾ ಸೇರಿದಂತೆ ಇತರ ಅರಣ್ಯ ಪ್ರದೇಶಗಳಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತವು ಶ್ರೀಲಂಕಾದಂತೆ ಕಾಣುತ್ತಿದೆ: ರಾಹುಲ್ ಗಾಂಧಿ

    ಜಮ್ಮು ಜಿಲ್ಲೆಯ ಅಂತರಾಷ್ಟ್ರೀಯ ಗಡಿ(ಐಬಿ)ಯಲ್ಲಿಇರುವ ಕೃಷಿ ಕ್ಷೇತ್ರದಲ್ಲಿಯೂ ಹಲವಾರು ಕಿ.ಮೀ ವರೆಗೆ ಬೆಂಕಿ ವ್ಯಾಪಿಸಿದ್ದು, ಅದನ್ನು ನಿಯಂತ್ರಣಕ್ಕೆ ತರಲಾಗಿದೆ. ಸದ್ಯ ಕಾಡ್ಗಿಚ್ಚು ಹತೋಟಿಗೆ ಬಂದಿದ್ದು, ಯಾವುದೇ ಪ್ರಾಣಹಾನಿಯಾಗದಂತೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ನಾಡ ಬಾಂಬ್ ಎಸೆದು ಕಾಂಗ್ರೆಸ್ ಶಾಸಕನ ಹತ್ಯೆಗೆ ಯತ್ನ- ಬಾಂಬ್ ಎಸೆಯಲೆತ್ನಿಸಿದ ವ್ಯಕ್ತಿಯ ಕೈಯಲ್ಲೇ ಸ್ಫೋಟ

    ನಾಡ ಬಾಂಬ್ ಎಸೆದು ಕಾಂಗ್ರೆಸ್ ಶಾಸಕನ ಹತ್ಯೆಗೆ ಯತ್ನ- ಬಾಂಬ್ ಎಸೆಯಲೆತ್ನಿಸಿದ ವ್ಯಕ್ತಿಯ ಕೈಯಲ್ಲೇ ಸ್ಫೋಟ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಹೊಸಾಡ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಕಾಂಗ್ರೆಸ್ ಶಾಸಕರೊಬ್ಬರನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

    ಕೃತ್ಯ ಎಸಗಲು ಮುಂದಾದ ವ್ಯಕ್ತಿಯನ್ನು ರೈಮಂಡ್ ಮಿರಂಡ್ ಎಂದು ಗುರುತಿಸಲಾಗಿದೆ. ಶಾಸಕ ಮಂಕಾಳು ವೈದ್ಯ ಅವರು ಹೊಸಾಡ್ ಗ್ರಾಮದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಕಾರ್ಯಕ್ರಮದ ಉದ್ಘಾಟನೆ ಮಾಡಲು ಆಗಮಿಸಿದ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು.

    ಕಾರ್ಯಕ್ರಮ ನಡೆಯುತ್ತಿರುವ ವೇಳೆ ರೈಮಂಡ್ ಮಿರಂಡ್ ತನ್ನ ಕೈಯಲ್ಲಿ ನೆಲ ಬಾಂಬ್ ಹಿಡಿದುಕೊಂಡಿದ್ದನು. ಕೆಲ ಸಮಯದ ಬಳಿಕ ಅದನ್ನು ಶಾಸಕರ ಕಡೆ ಎಸೆಯಲು ಮುಂದಾಗಿದ್ದು, ನೆಲಬಾಂಬ್ ಎಸೆಯುವ ವೇಳೆ ಆತನ ಕೈಯಲ್ಲೇ ಸ್ಫೋಟಗೊಂಡಿದೆ. ಬಳಿಕ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದ. ತಕ್ಷಣ ಎಚ್ಚೆತ್ತ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಾಂಬ್ ಸ್ಫೋಟದಿಂದ ಆರೋಪಿಯ ಕೈ ಸಂಪೂರ್ಣ ಜಖಂ ಆಗಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

    ಕೃತ್ಯ ನೆಡೆಸಲು ಪ್ರಯತ್ನಿಸಿದ ವ್ಯಕ್ತಿಯ ಕೈಯಲ್ಲೇ ನೆಲಬಾಂಬ್ ಸ್ಫೋಟವಾದ್ದರಿಂದ ಶಾಸಕ ಮಂಕಾಳ ವೈದ್ಯ ಅಪಾಯದಿಂದ ಪಾರಾಗಿದ್ದಾರೆ. ಈ ಹಿಂದೆ ಕೂಡ ಬಿಜೆಪಿಯ ಭಟ್ಕಳ ಶಾಸಕರಾಗಿದ್ದ ಡಾ. ಚಿತ್ತರಂಜನರವರನ್ನ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಅದಾದ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕ ಮಂಕಾಳು ವೈದ್ಯರ ಹತ್ಯೆಗೆ ಪ್ರಯತ್ನ ನಡೆದಿದೆ.

    ಈ ಸಂಬಂಧ ಹೊನ್ನಾವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.