Tag: ನೆಲ್ಸನ್ ಮಂಡೇಲಾ

  • ಬೆಂಗಳೂರಿನ ನಿಮ್ಹಾನ್ಸ್‌ಗೆ ನೆಲ್ಸನ್ ಮಂಡೇಲಾ ಪ್ರಶಸ್ತಿ

    ಬೆಂಗಳೂರಿನ ನಿಮ್ಹಾನ್ಸ್‌ಗೆ ನೆಲ್ಸನ್ ಮಂಡೇಲಾ ಪ್ರಶಸ್ತಿ

    ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ  (WHO) ವತಿಯಿಂದ ನೀಡಲಾಗುವ ನೆಲ್ಸನ್ ಮಂಡೇಲಾ  (Nelson Mandela) ಪ್ರಶಸ್ತಿಗೆ ಬೆಂಗಳೂರಿನ ನಿಮ್ಹಾನ್ಸ್ (Nimhans) ಆಸ್ಪತ್ರೆ ಭಾಜನವಾಗಿದೆ.

    ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಮತ್ತು ನರ ವಿಜ್ಞಾನ ಸಂಸ್ಥೆ (Nimhans) ಗೆ ವಿಶ್ವ ಆರೋಗ್ಯ ಸಂಸ್ಥೆ (WHO) 2024ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ. ಈ ಪ್ರಶಸ್ತಿಯನ್ನು 2019 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಪರಿಚಯಿಸಿದ್ದು, ಇದನ್ನು ಆರೋಗ್ಯ ಪ್ರಚಾರಕ್ಕಾಗಿ ನೀಡುತ್ತದೆ. ಪ್ರಮುಖ ಆರೋಗ್ಯ ಸಂಸ್ಥೆಗಳು, ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳು ಆರೋಗ್ಯ ಕ್ಷೇತ್ರಗಳಲ್ಲಿ ಎಷ್ಟು ಕೊಡುಗೆ ನೀಡಿದೆ ಎಂಬುದಕ್ಕೆ ಈ ಪ್ರಶಸ್ತಿಯನ್ನು ನೀಡುತ್ತದೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್

    ನಿಮ್ಹಾನ್ಸ್ ಶಿಕ್ಷಣ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದೆ. ಯುವಪೀಳಿಗೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಅರಿವು ಮೂಡಿಸುವಲ್ಲಿ ಮತ್ತು ಮನೋವಿಜ್ಞಾನ ಕೋರ್ಸ್‌ಳನ್ನು ಆಯ್ಕೆ ಮಾಡಲು, ಸಂಶೋಧನೆ ಮಾಡಲು, ಮಾನಸಿಕ ಆರೋಗ್ಯದ ಬಗ್ಗೆ ತಿಳಿಯಲು ಮತ್ತು ರೋಗಿಗಳನ್ನು ಆರೈಕೆ ಮಾಡುವುದರ ಬಗ್ಗೆ ವಿಭಿನ್ನವಾಗಿ ಮತ್ತು ಸೃಜನಾತ್ಮಕವಾಗಿ ತಿಳಿಸಿಕೊಟ್ಟಿದೆ. ಇದನ್ನೂ ಓದಿ: ಧರ್ಮದ ಕವಚದ ಒಳಗೆ ಪಾಪ, ಅನ್ಯಾಯದ ಕೆಲಸ ಬಿಜೆಪಿ ಮಾಡುತ್ತಿದೆ: ದಿನೇಶ್ ಗುಂಡೂರಾವ್

    ಈ ಕುರಿತು ಸಂತಸ ವ್ಯಕ್ತಪಡಿಸಿರುವ ನಿಮ್ಹಾನ್ಸ್ ನಿರ್ದೇಶಕರಾದ ಡಾ.ಪ್ರತಿಮಾ ಮೂರ್ತಿ, ನೆಲ್ಸನ್ ಮಂಡೇಲಾ ಪ್ರಶಸ್ತಿ ಕರುನಾಡಿನ ನಿಮ್ಹಾನ್ಸ್ಗೆ ಲಭಿಸಿರುವುದು ಸಂತಸದ ತಂದಿದೆ. ಈವರೆಗೂ ನಿಮ್ಹಾನ್ಸ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಜನರಿಗೆ ತಿಳಿಸುವಲ್ಲಿ ಮತ್ತು ಪ್ರಚಾರ ಮಾಡುವಲ್ಲಿ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ

    ಈ ಪ್ರಶಸ್ತಿ ನಮಗೆ ಕೇವಲ ಹಿಂದಿನ ಮತ್ತು ಪ್ರಸ್ತುತ ಸಾಧನೆಗಲ್ಲ. ನಾವು ಜನರಿಗೆ ನಿರಂತರವಾಗಿ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ

  • ಮೆಚ್ಚುಗೆ ಕೆಲಸದ ಬದಲು, ಸಮಾಜಕ್ಕೆ ಕೊಡುಗೆ ನೀಡಿ: ರಮೇಶ್ ಕುಮಾರ್

    ಮೆಚ್ಚುಗೆ ಕೆಲಸದ ಬದಲು, ಸಮಾಜಕ್ಕೆ ಕೊಡುಗೆ ನೀಡಿ: ರಮೇಶ್ ಕುಮಾರ್

    ಬೆಂಗಳೂರು: ಸಮಾಜವನ್ನು ಮೆಚ್ಚಿಸುವ ಕೆಲಸ ಮಾಡುವುದಕ್ಕಿಂತ, ಸಮಾಜಕ್ಕೆ ಏನಾದರೂ ಕೊಡುಗೆ ನೀಡುವುದು ಇಂದಿನ ಅವಶ್ಯವಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

    ರೇವಾ ವಿಶ್ವವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುವೆಂಪು ಸಭಾಂಗಣ ಲೋಕಾರ್ಪಣೆ ಮಾಡಿ ಬಳಿ ಮಾತನಾಡಿದ ಅವರು, ಬುದ್ಧ, ಅಶೋಕ,  ನೆಲ್ಸನ್ ಮಂಡೇಲಾ, ಮಹಾತ್ಮ ಗಾಂಧಿ, ಅಬ್ದುಲ್ ಕಲಾಂ, ಬೋಸ್ ಮುಂತಾದವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತರಾದವರಲ್ಲ, ಇವರೆಲ್ಲರೂ ವಿಶ್ವಚೇತನರು. ಇವರು ಸಮಾಜಕ್ಕಾಗಿ ದುಡಿದವರು ಎಂದು ತಿಳಿಸಿದರು.

    ಇಂದಿನ ಯುವಕರು ಸಿನಿಮಾ ನಟರ ಬಗ್ಗೆ ತಿಳಿದುಕೊಂಡಷ್ಟು ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡಿಲ್ಲ ಎಂದು ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.