ನವದೆಹಲಿ: ನೆಹರೂ-ಗಾಂಧಿ (Nehru-Gandhi) ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಪಕ್ಷ (Congress party) ಏನೂ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ (Digvijiaya Singh) ಹೇಳಿದ್ದಾರೆ.
ಕಾಂಗ್ರೆಸ್ ರಾಜ್ಯ ಘಟಕಗಳಲ್ಲಿನ ಇತ್ತೀಚಿನ ಬಿಕ್ಕಟ್ಟು ಕುರಿತಂತೆ ದಿಗ್ವಿಜಯ ಸಿಂಗ್ ಅವರು, ಈ ಪಕ್ಷದಲ್ಲಿ ಹಲವಾರು ಬಾರಿ ವಿಭಜನೆಗಳಾಗಿವೆ. ಆದರೂ ಶೇ.99ರಷ್ಟು ಕಾಂಗ್ರೆಸ್ಸಿಗರು ಸ್ವಾತಂತ್ರ್ಯಕ್ಕೂ ಮುನ್ನ ಮತ್ತು ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ಸೇವೆ ಸಲ್ಲಿಸಿದ ಗಾಂಧಿ ಕುಟುಂಬವನ್ನು ಬೆಂಬಲಿಸಿದ್ದಾರೆ.
ನವದೆಹಲಿ: ಜವಹರಲಾಲ್ ನೆಹರೂ ದೇಶ ವಿಭಜನೆ ಮಾಡಿದ ಉದಾರವಾದಿ, ಅದನ್ನು ತಡೆಯಲು ರಾಷ್ಟ್ರಪಿತ ಮಹಾತ್ಮಗಾಂಧಿ ಏನೂ ಮಾಡಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎರಡನೇ ಮಹಾಯುದ್ಧದ ಪರಿಣಾಮ ಬ್ರಿಟಿಷರು ಸಾಮರ್ಥ್ಯ ಕಳೆದುಕೊಂಡಿದ್ದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದ ದೇಶಗಳಿಗೂ ಬ್ರಿಟಿಷರು ಸ್ವಾತಂತ್ರ್ಯ ನೀಡಿದ್ದಾರೆ. ಗಾಂಧಿ ಜನಸಮೂಹ ಜೋಡಿಸಿದರು, ಕ್ರಾಂತಿಕಾರಿಗಳು ಬ್ರಿಟಿಷರ ಎದೆ ನಡುಗಿಸಿದರು. ಗಾಂಧಿ ಹೋರಾಟದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು ಎನ್ನುವುದು ಪೂರ್ಣ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ
ಭಾರತ ಸ್ವಾತಂತ್ರ್ಯವಾದ ಬಳಿಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ಏನು ಸಿಕ್ತು? ದೇಶ ಇಬ್ಘಾಗವಾಯಿತು. ನೆಹರೂ – ಜಿನ್ನಾ ಸೇರಿ ದೇಶ ಒಡೆದರು, ಅದನ್ನು ನೋಡಿಕೊಂಡು ಗಾಂಧಿ ಸುಮ್ಮನೆ ಕೂತಿದ್ದರು. ದೇಶ ಒಡೆದ ಪರಿಣಾಮ ಸ್ವಾತಂತ್ರ್ಯ ಹೋರಾಟಗಾರಿಗೆ ಅತ್ಯಾಚಾರ, ಮತಾಂತರ ನೋಡುವುದು ಬಿಟ್ಟು ಬೇರೆನು ಸಿಗಲಿಲ್ಲ, ಗಾಂಧಿಯಲ್ಲೂ ದೌರ್ಬಲ್ಯಗಳು ಇದ್ದವು ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶ ಒಡೆಯುವುದನ್ನು ಅರ್ಥ ಮಾಡಿಕೊಂಡಿದ್ದ ವೀರ ಸಾರ್ವರಕರ್, ಹಿಂದೂಗಳಿಗೆ ಸೇನೆಯಲ್ಲಿ ಹೆಚ್ಚು ಸೇರಲು ಕರೆ ನೀಡಿದರು. ಒಂದು ವೇಳೆ ಸೇನೆಯಲ್ಲಿ ಮುಸ್ಲಿಂ ಸಂಖ್ಯೆ ಹೆಚ್ಚಾಗಿದ್ದರೆ, ಇಂದು ಕಾಶ್ಮೀರ, ದೆಹಲಿ ಇರಲಿ ಭಾರತವೂ ಉಳಿಯುತ್ತಿರಲಿಲ್ಲ, ಎಲ್ಲವೂ ಒಡೆದು ಚೂರಾಗುತ್ತಿತ್ತು ಎನ್ನುವ ಮೂಲಕ ಮತ್ತೊಂದು ಹೊಸ ವಿವಾದ ಹುಟ್ಟು ಹಾಕಿದ್ದಾರೆ.
ಜೈಪುರ: ನಾನು ಗಾಂಧಿ-ನೆಹರೂ ಕುಟುಂಬದ ಗುಲಾಮ ಎಂದು ಕಾಂಗ್ರೆಸ್ ಶಾಸಕ ಸಂಯಮ್ ಲೋಧಾ ವಿಧಾನಸಭೆಯಲ್ಲಿ ಹೆಮ್ಮೆಯಿಂದ ಹೇಳಿಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ರಾಜಸ್ಥಾನದ ಸಿರೋಹಿ ಶಾಸಕ ಸಂಯಮ್ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವದ ವೇಳೆ ಮಾತನಾಡಿದ್ದಾರೆ. ನಾನು ನೆಹರು, ಗಾಂಧಿ ಕುಟುಂಬದ ಗುಲಾಮ. ಕೊನೇ ಉಸಿರು ಇರುವ ತನಕವೂ ನಾವು ನೆಹರು ಹಾಗೂ ಗಾಂಧಿ ಕುಟುಂಬದ ಗುಲಾಮರಾಗಿಯೇ ಉಳಿಯುತ್ತೇವೆ. ಈ ದೇಶವೂ ರೂಪು ಗೊಂಡಿರುವುದೇ ನೆಹರು ಮತ್ತು ಗಾಂಧಿ ಕುಟುಂಬದಿಂದಾಗಿ ಎಂದು ಹೇಳಿದ್ದಾರೆ. ಇದನ್ನೂ ಓದಿ:ಸತತ 2ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ
“Yes we are slaves of Nehru-Gandhi family and we will remain their slaves till our last breath” : Rajasthan Congress MLA Sanyam Lodha pic.twitter.com/SrnTgduHdN
ಈ ಹೇಳಿಕೆ ಬಿಜೆಪಿ ಶಾಸಕರಿಂದ ಭಾರೀ ಗದ್ದಲಕ್ಕೆ ಕಾರಣವಾಯಿತು. ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ಪ್ರತಿಕ್ರಿಯಿಸಿ, ಇದೊಂದು ಹೊಸ ಸಂಸ್ಕೃತಿ ಹುಟ್ಟಿಕೊಂಡಿದೆ. ಗುಲಾಮಗಿರಿಗೆ ಅಭಿನಂದನೆಗಳು. ಸಮಾಜಕ್ಕೆ ಏನು ಸಂದೇಶ ನೀಡುತ್ತೀರಿ? ಎಂದು ಧ್ವನಿ ಎತ್ತುವ ಮೂಲಕವಾಗಿ ಸಭಾತ್ಯಾಗ ಮಾಡಿದ್ದಾರೆ. ಇದನ್ನೂ ಓದಿ:ಕೋವಿಡ್ ನಿರ್ವಹಣೆಯಲ್ಲಿ ಭಾರತ ಜಗತ್ತಿಗೆ ಮಾದರಿ- ಜಾಗತಿಕ ನಾಯಕರು
ಈ ಲೋಧಾ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರೂ ಆಗಿದ್ದಾರೆ. ಹರಿದೇವ್ ಜೋಶ್ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ತಿದ್ದುಪಡಿ ಮಸೂದೆ ಸಂಬಂಧ ಮಾತನಾಡುವಾಗ ಹೀಗೆ ಹೇಳಿದ್ದಾರೆ.
ಮಾರ್ಚ್ 15 ರಂದು ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಾಲ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಮಾರ್ಷಲ್‍ಗಳ ಸಹಾಯದಿಂದ ಲೋಧಾ ಅವರನ್ನು ರಾಜಸ್ಥಾನ ವಿಧಾನಸಭೆಯಿಂದ ಹೊರಹಾಕಲಾಗಿತ್ತು. ಇದೀಗ ಈ ಹೇಳಿಕೆಯಿಂದ ಮತ್ತೆ ಸುದ್ದಿಯಾಗಿದೆ.
ಉಡುಪಿ: ಕಾಂಗ್ರೆಸ್ ಅನ್ನೇ ಆರಾಧಿಸಿದ್ದ ಜವಾಹರಲಾಲ್ ನೆಹರೂ ಅವರು ಆರ್‌ಎಸ್‌ಎಸ್ ಸಂಘಟನೆಯನ್ನು ಹೊಗಳಿದ್ದರು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್‌ಎಸ್‌ಎಸ್ ರಾಷ್ಟ್ರಪ್ರೇಮಿ ಸಂಘಟನೆ ಎಂದು ನೆಹರೂ ಅವರು ಬಣ್ಣಿಸಿದ್ದರು. ಅಲ್ಲದೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆರ್‌ಎಸ್‌ಎಸ್‌ಗೆ ಅವಕಾಶ ಕೊಟ್ಟಿದ್ದರು. ಆರ್‌ಎಸ್‌ಎಸ್ ಅನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೆಹರೂಗಿಂತ ಮೇಲಿನವರಾ ಎಂದು ಸಚಿವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೇಗೆ ಬದುಕ್ಬೇಕು, ಹೇಗೆ ಸಾಮಾಜಿಕ ಕಾರ್ಯಗಳನ್ನು ಮಾಡ್ಬೇಕು ಅನ್ನೋದಕ್ಕೆ ಪುನೀತ್ ಮಾದರಿ: ರಾಜಮೌಳಿ
ಸಂವಿಧಾನ ದಿನಾಚರಣೆ ಬಹಿಷ್ಕರಿಸಿರುವ ಕಾಂಗ್ರೆಸ್ ನಡೆ ಬಗ್ಗೆ ಟೀಕಿಸಿದ ಸಚಿವರು, ಕಾಂಗ್ರೆಸ್ಸಿನವರು ನಮ್ಮನ್ನು ಹೊಗಳಬೇಕು ಎಂದು ಆಸೆ ಪಡೋದಕ್ಕಾಗುತ್ತಾ? ಬಿಜೆಪಿಯನ್ನು ಬೈಯ್ಯೋದೆ ಕಾಂಗ್ರೆಸ್ ಅಜೆಂಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ನಮಗೆ ಭಾವುಕತೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಟುಂಬದಿಂದಲೇ ಪಕ್ಷ, ಕುಟುಂಬಕ್ಕಾಗಿಯೇ ಪಕ್ಷ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಪಟ್ಟಿ ಸಿದ್ಧಪಡಿಸಿದೆ. ಅಸ್ಪೃಶ್ಯತೆ ತೊಡೆದು ಹಾಕುವ ಸವಾಲು ನಮ್ಮ ಮುಂದೆ ಇದೆ. ಪ್ರತಿಯೊಬ್ಬರನ್ನೂ ಅಸ್ಪೃಶ್ಯತೆ ನಿವಾರಣೆಗೆ ಸಿದ್ಧಪಡಿಸುತ್ತೇವೆ. ಚುನಾವಣೆಯ ಬಳಿಕ ಈ ಕುರಿತು ಸರ್ಕಾರಿ ಕಾರ್ಯಕ್ರಮ ರೂಪಿಸುತ್ತೇವೆ. ಪೇಜಾವರ ಶ್ರೀಗಳನ್ನು ಕೂಡಿಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಕಲಬುರಗಿ: ವಾಜಪೇಯಿವರು ಹೇವಿ ಡ್ರಿಂಕರ್ ಅಂತೆ, ಸಂಜೆಗೆ ಅವರಿಗೆ ಎರಡು ಪೆಗ್ ಡ್ರಿಂಕ್ ಬೇಕಾಗಿತ್ತಂತೆ. ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಬಾರ್ ಅಂತಾ ಹಾಕ್ತೀರಾ ಎಂದು ಪ್ರಶ್ನಿಸುವ ಮೂಲಕ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಟಿ ರವಿಯವರ ಹುಕ್ಕಾ ಬಾರ್ ಹೇಳಿಕೆ ವಿಚಾರವಾಗಿ ಕಲಬುರಿಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗರೇಟ್ ಸೇದುವುದು ಅಕ್ರಮನಾ? 2007ರಲ್ಲಿ ಒಂದು ಮ್ಯಾಗಜಿನ್‍ನಲ್ಲಿ ಸ್ಲೀಪಿಂಗ್ ಆನ್ ದಿ ವಿಲ್ ಎಂಬ ಆರ್ಟಿಕವೊಂದನ್ನು ಓದಿದ್ದೆ. ಅದರಲ್ಲಿ ವಾಜಪೇಯಿಯವರ ನಾಯಕತ್ವದಲ್ಲಿ ದೇಶ ಯಾಕೆ ಸರಿಯಾದ ರೀತಿಯಲ್ಲಿ ಹೋಗುತ್ತಿಲ್ಲ ಎಂಬುದರ ಬಗ್ಗೆ ಅವರ ವೈಯಕ್ತಿಕ ಜೀವನದ ವಿಚಾರಗಳಿತ್ತು. ವಾಜಪೇಯವರು ಹೆಚ್ಚು ಮದ್ಯಪಾನ ಮಾಡುತ್ತಿದ್ದರಂತೆ, ಅವರಿಗೆ ಸಂಜೆ ಹೊತ್ತು 2 ಗ್ಲಾಸ್ ವಿಸ್ಕಿ ಇರಲೇಬೇಕಾಗುತ್ತಂತೆ, ಸಿಗರೇಟ್ ಹಾಗೂ ಮದ್ಯಪಾನ ಮಾಡುವುದು ತಪ್ಪಲ್ಲ. ಹಾಗಂತ ನೀವು ಎಲ್ಲಾ ಬಾರ್‍ಗಳಿಗೂ ವಾಜಪೇಯಿ ಬಾರ್ ಎಂದು ಹೆಸರಿಡುತ್ತೀರಾ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಹೆಸ್ರು ಬದಲಾಯಿಸಿ ಅನ್ನೋದು ಬಿಜೆಪಿಯ ಚಿಲ್ಲರೆ ವಿಚಾರ: ಎಸ್.ಆರ್.ಪಾಟೀಲ್
ಸಾಮಾನ್ಯವಾಗಿ ಆರ್‍ಎಸ್‍ಎಸ್‍ನಲ್ಲಿ ಇರುವವರು ಸಸ್ಯಾಹಾರಿಗಳು ಎಂದು ನಾವು ಭಾವಿಸುತ್ತೇವೆ. ಆದರೆ ವಾಜಪೇಯಿಯವರು ಮಾಂಸಹಾರಿ ಪ್ರಿಯರು. ಆದರೆ ಮಾಂಸ ಸೇವಿಸುವುದರಿಂದ ಗೌರವ ಕಡಿಮೆಯಾಗುತ್ತಾ? ಹಾಗಂತ ನೀವು ಎಲ್ಲಾ ಕಸಾಯಿಖಾನೆಗಳಿಗೆ ವಾಜಪೇಯಿ ಹೆಸರಿಡಲು ಆಗುತ್ತಾ? ಎಂದು ಹರಿಹಾಯ್ದಿದ್ದಾರೆ.
ಬಿಜೆಪಿಯಲ್ಲಿರುವವರೆಲ್ಲಾ ಬಹಳ ಸಾಚಗಳು ಎಂದು ನಾವು ಭಾವಿಸುತ್ತೇವೆ. ಆದರೆ ಇತ್ತೀಚೆಗೆ ಸಿಡಿ ಪ್ರಕರಣದಿಂದ ದೇಶದ ಮರ್ರ್ಯಾದೆ ಹೋಗಿದೆ. ಕರ್ನಾಟಕ ಸಂಸದರು ಇಡೀ ದೇಶದಲ್ಲಿಯೇ ತಲೆ ತಗ್ಗಿಸುವಂತಹ ಕೆಲಸವನ್ನು ಮಾಡಿದ್ದಾರೆ. ಇವರು ಮಾತನಾಡುವುದರಿಂದ, ನಾವು ಮಾತನಾಡುವುದರಿಂದ ನೆಹರೂ ಘನತೆಯಾಗಲಿ, ವಾಜಪೇಯಿ ಘನತೆಯಾಗಲಿ ಕಡಿಮೆಯಾಗುವುದಿಲ್ಲ. ಯಾವಾಗ ಏನು ಮಾತನಾಡಬೇಕೆಂದು ತಿಳಿದುಕೊಂಡು ಮಾತನಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ
ಮೊದಲನೇಯದಾಗಿ ಇವರಿಗೆ ಇವರ ನಾಯಕರ ಇತಿಹಾಸವೇ ಗೊತ್ತಿಲ್ಲ. ಸಾವರ್ಕರ್ ಅವರ ಏನು ಕೊಡುಗೆ ಇದೆ ಅಂತ ಅವರ ಹೆಸರನ್ನು ಪ್ಲೈ ಓವರ್‍ಗೆ ಇಡುತ್ತಾರೆ..? ಗೋಡ್ಸೆಯನ್ನು ನಂಬುತ್ತಾರೆ. ಗಾಂಧಿಯವರನ್ನು ನಂಬಲ್ಲ. ಇತಿಹಾಸ ಗೊತ್ತಿಲ್ಲದವರು ಮಂತ್ರಿಯಾದರೆ ಹಿಂಗೆ ಮಾತಾನಾಡುವುದು. ಇವರು ಅವಿವೇಕಿಗಳು, ಅವಿವೇಕಿತನದ ಪರಮಾವಧಿ ಇದು ಎಂದು ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಕ್ಕಾ ಬಾರ್ ಹೇಳಿಕೆ ನೀಡಿದ್ದ ಸಿ.ಟಿ ರವಿ..!
ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.ಇದನ್ನೂ ಓದಿ: ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ
ವಿಜಯಪುರ: ಭಾರತ ಮಾತಾ ಕೀ ಜೈ ಅನ್ನಬೇಕು ಇಲ್ಲ ನೆಹರು ಕಟ್ಟಿದ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದಾರೆ.
ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಯತ್ನಾಳ ನೇತೃತ್ವದಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನದ ಎದುರು ಸಂಭ್ರಮಾಚರಣೆ ನಡೆಸಲಾಯಿತು. ಇದೇ ವೇಳೆ ಮಾತನಾಡಿದ ಶಾಸಕ ಯತ್ನಾಳ್, ಹಮ್ ಪಾಂಚ್ ಹಮ್ ಪಚ್ಚಿಸ್ ಚಲಾಗಯ್. ಇನ್ನೇನು ಇದ್ದರೂ ಒಂದೇ ಮದುವೆ ಎರಡೇ ಮಕ್ಕಳು ಅಷ್ಟೇ ಎಂದರು.
ಅಲ್ಲದೆ ಭಾರತ ದೇಶದಲ್ಲಿ ಇರಬೇಕು ಅಂದರೆ ಭಾರತ್ ಮಾತಾ ಕೀ ಜೈ ಹಾಗೂ ವಂದೇ ಮಾತರಂ ಅನ್ನಬೇಕು. ಇಲ್ಲದೇ ಇದ್ದರೆ ನೀವು ನೆಹರು ಮಾಡಿಕೊಟ್ಟಿರುವ ಪಾಕಿಸ್ತಾನಕ್ಕೆ ಹೋಗಬೇಕು ಮಕ್ಕಳ್ರೇ ಎಂದು ತಮ್ಮ ನಾಲಗೆ ಹರಿಬಿಟ್ಟಿದ್ದಾರೆ.
ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಇದು ಭಾರತ ಇತಿಹಾಸದಲ್ಲಿ ಕರಾಳ ದಿನ ಎಂದು ಹೇಳಿದ್ದರು. ಇದಕ್ಕೆ ತೀರುಗೇಟು ಕೊಟ್ಟ ಯತ್ನಾಳ್ ಏ ಬದ್ಮಾಶ್.. ನಿನ್ನ ಕುಟುಂಬಕ್ಕೆ ಇದು ಕರಾಳ ದಿನ. ನಮಗೆ ಇದು ಸುವರ್ಣ ಯುಗ ಎಂದು ಹರಿಹಾಯ್ದರು.