Tag: ನೇಣು

  • ನೇಣುಹಾಕಿಕೊಂಡ ವರ್ಷದ ಬಳಿಕ ಶವ ಪತ್ತೆ!

    ನೇಣುಹಾಕಿಕೊಂಡ ವರ್ಷದ ಬಳಿಕ ಶವ ಪತ್ತೆ!

    ಚಿಕ್ಕಮಗಳೂರು: ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರ ಶವ ವರ್ಷದ ಬಳಿಕ ಪತ್ತೆಯಾಗಿದೆ. ಘಟನೆ ಕೊಪ್ಪ ಪಟ್ಟಣದ ಟಿಎಂ ರಸ್ತೆಯ ಬಳಿ ನಡೆದಿದೆ.

    ನಗರದ ಪಾಳುಬಿದ್ದ ಮನೆಯೊಂದರಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಈ ಘಟನೆ ವರ್ಷದ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಮೃತ ವ್ಯಕ್ತಿಯ ಗುರುತನ್ನು ಪತ್ತೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಶವ ತಲುಪಿದೆ. ಇದನ್ನೂ ಓದಿ: ನಟೋರಿಯಸ್ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಅರೆಸ್ಟ್

     

    ಪಾಳು ಬಿದ್ದ ಮನೆಯ ಮಾಲೀಕ ದುರಸ್ಥಿ ಮಾಡಲು ಹೋಗಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಅಕ್ರಮ ಬಡ್ಡಿ ವ್ಯವಹಾರ ಶಂಕೆ – ಮಹಿಳೆಯ ಮೇಲೆ ಶೂಟೌಟ್

  • ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣು..?

    ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣು..?

    – ಟಿಎಂಸಿ ಮೇಲೆ ಬಿಜೆಪಿ ನಾಯಕರು ಕಿಡಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಇದೀಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಮೃತ ಬಿಜೆಪಿ ಕಾರ್ಯಕರ್ತನನ್ನು ಉದಯ್ ದುಬೆ ಎಂದು ಗುರುತಿಸಲಾಗಿದೆ. ಇವರ ಮೃತದೇಹ ನಂದಿಗ್ರಾಮದ ಭೆಕುಟಿಯಾ ಪ್ರದೇಶದಲ್ಲಿರುವ ನಿವಾಸದಲ್ಲಿ ದೊರೆತಿದೆ. ಸದ್ಯ ಬಿಜಿಪಿ ನಾಯಕರು ಟಿಎಂಸಿ ಪಕ್ಷದೆವರ ಮೇಲೆ ಬೊಟ್ಟು ಮಾಡುತ್ತಿದ್ದು, ದುಬೆ ಸಾವಿಗೆ ಅವರೇ ಕಾರಣ ಎಂದು ಆರೋಪಿಸುತ್ತಿದ್ದಾರೆ.

    ದುಬೆ ಇತ್ತೀಚೆಗೆ ಸೂಪರ್ ಸ್ಟಾರ್ ಮಿಥುನ್ ಚಕ್ರವರ್ತಿ ಅವರು ಸುವೆಂದು ಅಧಿಕಾರಿ ಪರ ನಡೆಸಿದ್ದ ರೋಡ್ ಶೋ ದಲ್ಲಿ ಭಾಗಿಯಾಗಿದ್ದರು. ಆ ಬಳಿಕದಿಂದ ಅವರಿಗೆ ಹಲವಾರು ಬೆದರಿಕೆಗಳು ಬರಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಬಿಜೆಪಿ ನಾಯಕರು ತೃಣಮೂಲಕ ಕಾಂಗ್ರೆಸ್ ಕಾರ್ಯಕರ್ತರು(ಟಿಎಂಸಿ) ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ.

    ಈ ಸಂಬಂಧ ಸುವೇಂದು ಅಧಿಕಾರಿ ಮಾತನಾಡಿ, ಸಮ್ಸಾಬಾದ್ ನ ಕಂಚನ್ ನಗರದಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಇತ್ತ ನಂದಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಎರಡೂ ಘಟನೆಗಳ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಕ್ರಮ ಕೈಗೊಳ್ಳುತ್ತಾರೆ. ಒಟ್ಟಿನಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿಸಿದ್ದಾರೆ.

    ಈ ಮಧ್ಯೆ ದುಬೆ ಅವರನ್ನು ಟಿಎಂಸಿ ‘ಗೂಂಡಾಗಳು’ ಗಲ್ಲಿಗೇರಿಸಬಹುದೆಂದು ಬಿಜೆಪಿ ಹೇಳಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಆದರೆ ಟಿಎಂಸಿ ಮಾತ್ರ ತನ್ನ ಮೇಲಿನ ಆರೋಪಗಳನ್ನು ಅಲ್ಲಗೆಳೆದಿದೆ. ಅಲ್ಲದೆ ಬಿಜೆಪಿ ನಾಯಕರು ಸಾವಿನಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.

    ಇತ್ತ ಟಿಎಂಸಿಯ ಹಿರಿಯ ಮುಖಂಡರೊಬ್ಬರು, ಕೌಟುಂಬಿಕ ಕಲಹದಿಂದ ದುಬೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದ್ದು, ಮರಣೋತ್ತರ ವರದಿಯನ್ನು ಪಡೆದ ನಂತರ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿಯ ನಡುವಿನ ಹೈ-ವೋಲ್ಟೇಜ್ ಚುನಾವಣಾ ಸ್ಪರ್ಧೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಂದಿಗ್ರಾಮ್ ನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

  • ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಪ್ರೇಮಿಗಳು

    ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಪ್ರೇಮಿಗಳು

    ಬೆಳಗಾವಿ: ಒಂದೇ ಹಗ್ಗಕ್ಕೆ ನೇಣು ಬಿಗಿದುಕೊ0ಡು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

    ಈರಣ್ಣ ಸಾಲಿಮನಿ ಹಾಗೂ ಶ್ವೇತಾ ಕುಂಬಾರ ಆತ್ಮಹತ್ಯೆ ಶರಣಾದ ಪ್ರೇಮಿಗಳು. ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಕೆಳಗಿಳಿಸಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    ಮೃತ ಈರಣ್ಣ ಸಾಲಿಮನಿಯ ತಾಯಿ ಮಾತನಾಡಿ, ನನಗೆ ಏನೂ ಗೊತ್ತಿಲ್ಲ. ಮಗ ಈರಣ್ಣ ಒಂದು ವರ್ಷದಿಂದ ಕೆಎಲ್‍ಇ ನಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲದೇ ಬೆಳಗ್ಗೆ ನನಗೆ ಯಲ್ಲಮ್ಮನ ದೇವಾಲಯಕ್ಕೆ ಹೋಗಲು ದುಡ್ಡು ಕೊಟ್ಟು ಕಳುಹಿಸಿದ್ದ. ಮಧ್ಯಾಹ್ನ ಮನೆಗೆ ಬಂದು ಬಾಗಿಲು ಬಡಿದಾಗ ತೆಗೆಯಲಿಲ್ಲ. ನೀರು ತೆಗೆದುಕೊಳ್ಳಲು ಕಿಟಿಕಿ ತೆಗೆದಾಗ ಇಬ್ಬರು ನೇಣು ಹಾಕಿಕೊಂಡಿದ್ದು ಗೊತ್ತಾಯಿತು. ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಕುರಿತು ನನಗೆ ಏನೂ ಗೊತ್ತಿಲ್ಲ. ನಮಗೆ ಹುಡುಗಿಯ ಹೆಸರು ಸಹ ಗೊತ್ತಿಲ್ಲ. ಅಲ್ಲದೇ ಇಬ್ಬರೂ ಒಂದೇ ಪಂಗಡದವರಾಗಿದ್ದೆವು. ಒಂದು ವೇಳೆ ಪ್ರೀತಿಸುತ್ತಿದ್ದ ವಿಚಾರವನ್ನು ತಿಳಿಸಿದ್ದರೆ ನಾವೇ ಮುಂದೆ ನಿಂತು ಮದುವೆ ಮಾಡಿಕೊಡುತ್ತಿದ್ದವೆಂದು ಕಣ್ಣೀರು ಸುರಿಸಿದ್ದಾರೆ.

    ಪೊಲೀಸರ ತನಿಖೆಯಿಂದ ಪ್ರೇಮಿಗಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿದ್ಯಾರ್ಥಿನಿಯನ್ನು ಹಲ್ಲೆಗೈದು ಮರಕ್ಕೆ ನೇಣು ಹಾಕಿದ್ರು: ಮೂವರು ಅಪ್ರಾಪ್ತರು ಅರೆಸ್ಟ್

    ವಿದ್ಯಾರ್ಥಿನಿಯನ್ನು ಹಲ್ಲೆಗೈದು ಮರಕ್ಕೆ ನೇಣು ಹಾಕಿದ್ರು: ಮೂವರು ಅಪ್ರಾಪ್ತರು ಅರೆಸ್ಟ್

    ಲಕ್ನೋ: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು ತಡೆದು ಆಕೆಯ ಪ್ರಿಯಕರ ಸೇರಿ ಮೂವರು ಥಳಿಸಿ, ಮರಕ್ಕೆ ನೇಣು ಹಾಕಿದ ಘಟನೆ ಉತ್ತರ ಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ನಡೆದಿದೆ.

    ಮೇನ್ಪುರಿ ಜಿಲ್ಲೆಯ ಹವಿಲಿಯಾ ಗ್ರಾಮದ ಸಮಿತಾ ಯಾದವ್ ಕೊಲೆಯಾದ ವಿದ್ಯಾರ್ಥಿನಿ. ಸವಿತಾ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ನಡೆದದ್ದು ಏನು?:
    ಸವಿತಾ ಮಂಗಳವಾರ ಕಾಲೇಜಿನ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಮರಳುತ್ತಿದ್ದಳು. ಆಕೆಯನ್ನು ಗ್ರಾಮದ ಹೊರವಲಯದಲ್ಲಿ ತಡೆದ ಮೂವರು ಹಲ್ಲೆ ಎಸಗಿ ಮರಕ್ಕೆ ನೇಣು ಹಾಕಿ ಪರಾರಿಯಾಗಿದ್ದಾರೆ. ಈ ವೇಳೆ ಸವಿತಾ ಕಿರುಚಿದ ಧ್ವನಿ ಕೇಳಿದ ವಿದ್ಯಾರ್ಥಿನಿಯ ಸಹೋದರ ಅಲ್ಲಿಗೆ ಬಂದಿದ್ದಾನೆ. ಆಗ ಸವಿತಾ ಮೃತ ದೇಹ ಪತ್ತೆಯಾಗಿದೆ.

    ಯಾರೋ ಕಾಪಾಡಿ, ಕಾಪಾಡಿ ಅಂತಾ ಕಿರುಚಿದ ಧ್ವನಿ ಕೇಳಿತು. ತಕ್ಷಣವೇ ಅಲ್ಲಿಗೆ ಹೋಗುತ್ತಿದ್ದಂತೆ ಸವಿತಾ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಕಂಡಿದೆ ಎಂದು ಅವಿನಾಶ್, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

    ಕೊಲೆ ಮಾಡಿದ ಮೂವರಲ್ಲಿ ಒಬ್ಬನ ಜೊತೆಗೆ ಸವಿತಾ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಆತನು ಸವಿತಾ ಕಾಲೇಜಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಕೆಲವು ತಿಂಗಳಿನಿಂದ ಇಬ್ಬರ ಮಧ್ಯೆ ಸಂಬಂಧವಿತ್ತು ಎನ್ನಲಾಗಿದ್ದು, ಸವಿತಾ ಯುವಕನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಾಗ ಮನೆಯವರ ಕೈಗೆ ಸಿಕ್ಕಿಬಿದ್ದಿದ್ದಳು ಅಂತಾ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೂವರು ಬಾಲಕರನ್ನು ಬಂಧಿಸಿ, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಅಂತಾ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಮಾಡಿದ ನಂತರ ಮರಕ್ಕೆ ನೇಣು ಹಾಕಿದ್ದು ಯಾಕೆ ಎನ್ನುವ ಪ್ರಶ್ನೆ ಈಗ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದೇ ಕುಟುಂಬದ 6 ಜನರ ಸಾಮೂಹಿಕ ಆತ್ಮಹತ್ಯೆ

    ಒಂದೇ ಕುಟುಂಬದ 6 ಜನರ ಸಾಮೂಹಿಕ ಆತ್ಮಹತ್ಯೆ

    ರಾಂಚಿ: ಒಂದೇ ಕುಟುಂಬದ 5 ಜನರು ನೇಣು ಹಾಕಿಕೊಂಡು ಮತ್ತೊಬ್ಬರು ಮನೆ ಮೇಲ್ಛಾವಣಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್‍ನ ಹಜಾರಿಬಾಗ್‍ನಲ್ಲಿ ನಡೆದಿದೆ.

    ಮಾರವಾಡಿ ಕುಟುಂಬದ ಮಾಹಾವೀರ್ ಮಹೇಶ್ವರಿ (70), ಪತ್ನಿ ಕಿರಣ್ ಮಹೇಶ್ವರಿ (60), ಪುತ್ರ ನರೇಶ್ ಅಗರರ್ವಾಲ್ (40), ಪ್ರೀತಿ ಅಗರ್ವಾಲ್ (38), ಇವರ ಮಕ್ಕಳಾದ ಅಮನ್ (8) ಹಾಗೂ ಅಂಜಲಿ (6) ಮೃತರು.

    ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು. ಮನೆಯನ್ನು ಪರಿಶೀಲನೆ ಮಾಡುವ ಐವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ವಿಚಾರ ಬೆಳಕಿಗೆ ಬಂದಿದೆ.

    ಮೃತರ ಮನೆಯಲ್ಲಿ ಆತ್ಮಹತ್ಯೆ ಪತ್ರ ಲಭಿಸಿದೆ. ಮೃತರ ಕುಟುಂಬವು ಒಣ ಹಣ್ಣಿನ (ಡ್ರೈ ಫ್ರುಟ್ಸ್) ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರದಲ್ಲಿ ನಷ್ಟವಾಗಿದ್ದರಿಂದ ಸಾಲ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಕೌಟುಂಬಿಕ ಕಲಹವೂ ಇತ್ತು ಎಂದು ವರದಿಯಾಗಿದೆ.

  • ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್  ವಿದ್ಯಾರ್ಥಿನಿ ನೇಣಿಗೆ ಶರಣು!

    ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು!

    ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.

    ಎಂ.ಎಸ್ ರಾಮಯ್ಯ ಎಂಜಿನಿಯರಿಂಗ್ ಕಾಲೇಜಿನ ಸಾಯಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೃತ ಸಾಯಿಶ್ರೀ ಹಾಸ್ಟೆಲ್‍ನಲ್ಲಿದ್ದು ಓದುತ್ತಿದ್ದಳು. ಆದರೆ ಕಳೆದ ಕೆಲವು ದಿನಗಳಿಂದ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಅಲ್ಲದೇ ಒಬ್ಬಂಟಿಯಾಗಿ ಇರಲು ಇಷ್ಟಪಡುತ್ತಿದ್ದಳು ಎನ್ನಲಾಗಿದೆ.

    ಶುಕ್ರವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಸಾಯಿಶ್ರೀ ನೇಣು ಹಾಕಿಕೊಂಡಿದ್ದಾಳೆ. ಆತ್ಮಹತ್ಯೆಗೆ ಯಾವುದೇ ಕಾರಣಗಳು ತಿಳಿದು ಬಂದಿಲ್ಲ.

    ಈ ಕುರಿತು ರಾಜಗೋಪಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮನೆ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಹೋದರಿಯರ ಶವ ಪತ್ತೆ

    ಮನೆ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಹೋದರಿಯರ ಶವ ಪತ್ತೆ

    ನೊಯ್ಡಾ: ಮನೆ ಹೊರಗಡೆ ಇದ್ದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಸಹೋದರಿಯರ ಶವ ಪತ್ತೆಯಾದ ಘಟನೆ ಇಂದು ಬೆಳಗ್ಗೆ ದೆಹಲಿ ಬಳಿಯ ನೋಯ್ಡಾದಲ್ಲಿ ನಡೆದಿದೆ.

    ಇಲ್ಲಿನ ಬರೋಲಾ ಗ್ರಾಮದಲ್ಲಿ ಸೆಕ್ಟರ್ 49 ರಲ್ಲಿ ವಾಸವಿದ್ದ 18 ಹಾಗೂ 13 ವರ್ಷದ ಸಹೋದರಿಯರು ಸಾವನ್ನಪ್ಪಿದ್ದಾರೆ. ಮುಂಜಾನೆ 4 ಗಂಟೆ ವೇಳೆಯಲ್ಲಿ ಪೋಷಕರಿಗೆ ಶವ ಪತ್ತೆಯಾಗಿದೆ. ದೂರದ ಸಂಬಂಧಿ ರವಿ ಹಾಗೂ ಆತನ ಕುಟುಂಬಸ್ಥರು ಹುಡುಗಿಯರನ್ನ ಕೊಲೆ ಮಾಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

    ರವಿಗೆ ಈಗಾಗಲೇ ಮದುವೆಯಾಗಿದ್ದು, ಹಿರಿಯ ಸಹೋದರಿಗೆ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎಂದು ಹುಡುಗಿಯರ ಪೋಷಕರು ಹೇಳಿದ್ದಾರೆ. ಕಳೆದ ಸಂಜೆಯೂ ಜಗಳವಾಗಿದ್ದು, ರವಿ ಕುಟುಂಬಸ್ಥರು ಹುಡುಗಿಯರಿಗೆ ತೊಂದರೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಹಿರಿಯ ಅಧಿಕಾರಿ ಲವ್ ಕುಮಾರ್, ನಾವು ಈ ಬಗ್ಗೆ ತನಿಖೆ ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದೇವೆ. ಇದು ಕೊಲೆಯೋ ಆತ್ಮಹತ್ಯೆಯೋ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಸದ್ಯಕ್ಕೆ ಹುಡುಗಿಯರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ. ಹುಡುಗಿಯರ ಸಾವಿನಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

  • ಮಂಡ್ಯ: 2ನೇ ಪತ್ನಿಯ ಇಬ್ಬರು ಹೆಣ್ಮಕ್ಕಳಿಗೆ ನೇಣು ಬಿಗಿದು ತಾನೂ ನೇಣಿಗೆ ಶರಣಾದ!

    ಮಂಡ್ಯ: 2ನೇ ಪತ್ನಿಯ ಇಬ್ಬರು ಹೆಣ್ಮಕ್ಕಳಿಗೆ ನೇಣು ಬಿಗಿದು ತಾನೂ ನೇಣಿಗೆ ಶರಣಾದ!

    ಮಂಡ್ಯ: ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ನೇಣು ಬಿಗಿದು ನಂತರ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹಂಚಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    45 ವರ್ಷದ ಜಯರಾಮ್ ಎಂಬವರೇ ತನ್ನ ಇಬ್ಬರು ಮಕ್ಕಳಾದ 4 ವರ್ಷದ ಸೌಭಾಗ್ಯ ಮತ್ತು 2 ವರ್ಷದ ಹರ್ಷಿಕಾಗೆ ನೇಣು ಬಿಗಿದು, ಆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.

    ಜಯರಾಮ್‍ಗೆ ಇಬ್ಬರು ಹೆಂಡತಿಯರಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಮೊದಲ ಪತ್ನಿ ಬೆಂಗಳೂರಿನಲ್ಲಿ ವಾಸವಿದ್ದು, ಜಯರಾಮ್ ಎರಡನೇ ಪತ್ನಿಯೊಂದಿಗೆ ವಾಸವಿದ್ದರು. ಆದ್ರೆ ಇತ್ತೀಚಿಗೆ ಇಬ್ಬರ ನಡುವೆ ಜಗಳವಾಗಿದ್ದು, ಪತ್ನಿ ತನ್ನ ತವರು ಸೇರಿಕೊಂಡಿದ್ದರು ಎನ್ನಲಾಗಿದೆ.

    ಮಂಗಳವಾರ ತನ್ನ ಎರಡನೇ ಪತ್ನಿ ಮಕ್ಕಳನ್ನು ಕರೆದುಕೊಂಡು ಬಂದಿದ್ದ ಜಯರಾಮ್, ರಾತ್ರಿ ಈ ಕೃತ್ಯ ಎಸಗಿದ್ದಾರೆ. ಇಂದು ಬೆಳಗ್ಗೆ ಮೊದಲ ಪತ್ನಿಯ ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಭೇಟಿ ನೀಡಿರುವ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಇಬ್ಬರು ಮಕ್ಕಳ ಜೊತೆ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಇಬ್ಬರು ಮಕ್ಕಳ ಜೊತೆ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಬೆಂಗಳೂರು: ಅದೊಂದು ಸುಂದರ ಕುಟುಂಬ. ಬದುಕಿನಲ್ಲಿ ಕನಸು ಕಟ್ಟಿಕೊಂಡಿದ್ದ ಮಕ್ಕಳು. ಗಂಡ ಹೆಂಡತಿ ನಡುವೆ ಸಾಕಷ್ಟು ಪ್ರೀತಿ ಇತ್ತು. ಆದ್ರೆ ಅದೆನಾಯ್ತೋ ಏನೋ, ನಾಲ್ವರೂ ಈಗ ಸಾವಿನ ಮನೆ ಮುಟ್ಟಿದ್ದಾರೆ.

    ಭಾನುವಾರದಂದು ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಂಗಸಂದ್ರದ ಮನೆಯಲ್ಲಿ ಗಂಡ ಹೆಂಡತಿ ಸೇರಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 45 ವರ್ಷದ ಜಗದೀಶ್, 44 ವರ್ಷದ ಪತ್ನಿ ಕಸ್ತೂರಿ, ಇಬ್ಬರು ಮಕ್ಕಳಾದ ವಿನೋದ್ ಮತ್ತು ಬಾಲಚಂದ್ರ ಮೃತ ದುರ್ದೈವಿಗಳು. ಈ ನಾಲ್ವರು ಭಾನುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆಯಾದ್ರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸಂಬಂಧಿಕರು ಕಿಟಕಿ ಒಡೆದು ನೋಡಿದಾಗ ಕುಟುಂಬ ನೇಣಿಗೆ ಶರಣಾಗಿರೋದು ಬೆಳಕಿಗೆ ಬಂದಿದೆ.

    ಮೃತ ಜಗದೀಶ್ ಮೂಲತಃ ತಮಿಳುನಾಡಿನವರು. ಸುಮಾರು 20 ವರ್ಷಗಳಿಂದ ಬೆಂಗಳೂರಿನಲ್ಲೇ ನಲೆಸಿದ್ದಾರೆ. ಕಷ್ಟಪಟ್ಟು ದುಡಿದು ಬೆಂಗಳೂರಿನಲ್ಲಿ ಸ್ವಂತ ಮನೆ ಮಾಡಿದ್ರು. ಇದರ ಜೊತೆಗೆ ವರ್ಕ್ ಶಾಪ್ ಇಟ್ಟುಕೊಂಡಿದ್ರು. ಆದ್ರೆ ಇತ್ತೀಚಿನ ದಿನಗಳಲ್ಲಿ ಬ್ಯುಸಿನೆಸ್ ಲಾಸ್ ಆಗಿ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ. ಜೊತೆಗೆ ತಮ್ಮ ಮನೆಯಲ್ಲಿ ಬೋಗ್ಯಕ್ಕೆ ಬಾಡಿಗೆ ಇದ್ದ ಇಬ್ಬರು ಬಾಡಿಗೆದಾರರಿಗೆ ಇದೇ ತಿಂಗಳು 7 ಲಕ್ಷ ರೂ. ಹಣ ನೀಡಬೇಕಿತ್ತು. ಆದ್ರೆ ಸಾಲದ ಸುಳಿಯಲ್ಲಿ ಸುಲುಕಿದ್ದ ಜಗದೀಶ್ ಗೆ ಸಾಲದ ಹಣ ಮತ್ತು ಬೋಗ್ಯದ ಹಣ ನೀಡಲಾಗದ ಹಿನ್ನೆಲೆಯಲ್ಲಿ ನೇಣಿಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ.

    ಸದ್ಯ ಈ ವಿಷಯ ತಿಳಿದು ಮೃತ ಜಗದೀಶ್ ಮನೆಗೆ ಭೇಟಿ ನೀಡಿ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕಿಂಡಿರುವ ಪೊಲೀಸ್ರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.