Tag: ನೇತಾಜಿ ಸುಭಾಷ್ ಚಂದ್ರ ಬೋಸ್

  • ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ

    ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ

    ಬೆಂಗಳೂರು: ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟಿಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್‌ರವರು (Subhash Chandra Bose) ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ತಿಳಿಸಿದರು.

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ – ವ್ಯಕ್ತಿಯ ಮೇಲೆ ಹಲ್ಲೆ

    ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್‌ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ‍್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ‍್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟಿಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್‌ಎ (ಇಂಡಿಯನ್ ನ್ಯಾಷನಲ್ ಆರ್ಮಿ) ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದೆಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು. ಇದನ್ನೂ ಓದಿ: ಕುರಿ ವ್ಯಾಪಾರಿಗಳಿಂದ 4 ಲಕ್ಷ ಕಿತ್ತು ಪರಾರಿ – 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್

    ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕ್ರಿಮಿನಲ್ ಬ್ಯಾಗ್ರೌಂಡ್‌ ಬಗ್ಗೆ ಸಾಚಾ ಅಂತಾರೆ, ಸಮಯ ಬಂದಾಗ ಜನರ ಮುಂದೆ ಬಿಚ್ಚಿಡ್ತೀನಿ: ರೆಡ್ಡಿಗೆ ರಾಮುಲು ವಾರ್ನಿಂಗ್‌

  • ಸಾವರ್ಕರ್  ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಸಾವರ್ಕರ್ ಸಿನಿಮಾ: ನಿರ್ದೇಶಕನ ವಿರುದ್ಧ ನೇತಾಜಿ ಫ್ಯಾಮಿಲಿ ಕಿಡಿಕಿಡಿ

    ಬಾಲಿವುಡ್ ನಟ, ನಿರ್ದೇಶಕ ರಣದೀಪ್ ಹೂಡಾ (Randeep Hooda) ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚೆನ್ನೈ ಟೀಮ್ ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ವಿಘ್ನೇಶ್ ಶಿವನ್ ಪೋಸ್

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

    2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

    ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಕನಸಿನಂತೆ ಸ್ವಾತಂತ್ರ್ಯದ 100ನೇ ವರ್ಷ 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ ಪ್ರಯುಕ್ತ ಇಂದು ದೇಶಾದ್ಯಂತ ಪರಾಕ್ರಮ ದಿವಸ್ ಆಚರಿಸಲಾಗಿದೆ. ಮಹಾನ್ ಸ್ವಾತಂತ್ರ್ಯ ಸೇನಾನಿಗೆ ಕೇಂದ್ರ ಸರ್ಕಾರ ಇಂದು ವಿಶೇಷ ಗೌರವ ನೀಡಿದೆ. ಇಂಡಿಯಾ ಗೇಟ್‍ನಲ್ಲಿ ನೇತಾಜಿಯವರ ಹೊಲೋಗ್ರಾಮ್ ಪ್ರತಿಮೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 50,210 ಕೇಸ್ – ಪಾಸಿಟಿವಿಟಿ ರೇಟ್ 22.77%ಕ್ಕೆ ಏರಿಕೆ

    ಬಳಿಕ ಮಾತನಾಡಿದ ಅವರು, ನೇತಾಜಿ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸುತ್ತಿರುವುದು ನನಗೆ ತುಂಬಾ ಸಂತೋಷವಿದೆ. ಅವರಿಗೆ ಭಾರತ ಯಾವತ್ತು ಋಣಿಯಾಗಿರುತ್ತದೆ. ನೇತಾಜಿ ಹೇಳಿದಂತೆ ಸ್ವತಂತ್ರ ಭಾರತದ ಕನಸಿನಲ್ಲಿ ಎಂದಿಗೂ ನಂಬಿಕೆ ಕಳೆದುಕೊಳ್ಳಬೇಡಿ, ಭಾರತವನ್ನು ಅಲುಗಾಡಿಸುವ ಶಕ್ತಿ ಜಗತ್ತಿನಲ್ಲಿ ಇಲ್ಲ. ನೇತಾಜಿ ಅವರ ಪ್ರತಿಮೆಯು ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿ, ನಾವು ಸುಧಾರಣೆಯ ಜೊತೆಗೆ ಪರಿಹಾರ ರಕ್ಷಣೆ ಪುನರ್ವಸತಿ ಕಡೆಗೆ ಒತ್ತು ನೀಡುತ್ತಿದ್ದೇವೆ ಎಂದರು.

    ನಾವು ಎನ್‍ಡಿಆರ್‌ಎಫ್‌ನ್ನು ಆಧುನೀಕರಿಸಿದ್ದೇವೆ. ದೇಶದ ಬೆಳವಣಿಗಾಗಿ ಹೊಸ ಕ್ರಾಂತಿಕಾರಿ ಬದಲಾವಣೆಗಳನ್ನು ಮಾಡುತ್ತಿದ್ದೇವೆ. ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿ, 2019, 2020, 2021, 2022ರ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರಗಳನ್ನು ಪ್ರದಾನ ಮಾಡಿದರು. 28 ಅಡಿ ಎತ್ತರ, 6 ಅಡಿ ಅಗಲದ ಭವ್ಯ ಗ್ರಾನೈಟ್ ಪ್ರತಿಮೆ ನಿರ್ಮಾಣ ಆಗುವವರೆಗೂ ಅದರ ಸ್ಥಾನದಲ್ಲಿ ಹೊಲೋಗ್ರಾಮ್ ಪ್ರತಿಮೆ ರಾರಾಜಿಸಲಿದೆ ಎಂದರು. ಇದನ್ನೂ ಓದಿ: ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಪ್ರತಿಮೆಯ ವಿಶೇಷತೆ ಏನು?:
    1968ರಲ್ಲಿ ಕಿಂಗ್ ಜಾರ್ಜ್-5 ಪ್ರತಿಮೆ ತೆರವು ಮಾಡಿದ್ದ ಜಾಗದಲ್ಲಿ ನೇತಾಜಿ ಪ್ರತಿಮೆ ಇರಿಸಿರುವುದು ವಿಶೇಷ. ತೆಲಂಗಾಣದಿಂದ ತರಿಸಲಿರುವ ಕಪ್ಪು ಗ್ರಾನೈಟ್‍ನಲ್ಲಿ ರಾಷ್ಟ್ರೀಯ ಮಾಡರ್ನ್ ಆರ್ಟ್ ಗ್ಯಾಲರಿಯ ಮಹಾನಿರ್ದೇಶಕ, ಖ್ಯಾತ ಶಿಲ್ಪಿ ಅದ್ವೈತ ಗಡನಾಯಕ್ ಅವರು ನೇತಾಜಿ ಪ್ರತಿಮೆಯನ್ನು ರೂಪಿಸಲಿದ್ದಾರೆ. ಈಗಾಗಲೇ ವಿನ್ಯಾಸದ ಕಾರ್ಯ ಶುರುವಾಗಿದೆ. ಈಗಿರುವ ಹೊಲೋಗ್ರಾಮ್ ಪ್ರತಿಮೆ 4 ಕೆ ಪ್ರೊಜೆಕ್ಟರ್ ಬಳಸಿಕೊಂಡು 30,000ದಷ್ಟು ಬೆಳಕಿನ ಕಿರಣಗಳನ್ನು ಬಳಸಿಕೊಂಡು ಶೇ.90 ರಷ್ಟು ಪಾರದರ್ಶಕವಾಗಿರುವಂತೆ ಹೊಲೋಗ್ರಾಫಿಕ್ ಸ್ಕ್ರೀನ್ ಮೂಲಕ ಅಳವಡಿಸಲಾಗಿದ್ದು, 3ಡಿ ಚಿತ್ರದ ಮೂಲಕ ವಿನ್ಯಾಸಗೊಳಿಸಿರುವ ಪ್ರತಿಮೆಯು 28 ಅಡಿ ಎತ್ತರ, 6 ಅಡಿ ಅಗಲದಲ್ಲಿ ಕಂಗೊಳಿಸುತ್ತಿದೆ. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

  • ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

    ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

    ಕೋಲ್ಕತ್ತಾ: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವಾದ ಕಾರಣ ಎಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಕೋಲ್ಕತ್ತಾ ಬಳಿಯ ಪಶ್ಚಿಮ ಬಂಗಾಳದ ಭಟ್ಪರಾ ಪಟ್ಟಣದಲ್ಲಿ ನೇತಾಜಿ ಕಾರ್ಯಕ್ರಮದಲ್ಲಿ ನಡೆಯುತ್ತಿ ವೇಳೆ ಟಿಎಂಸಿ (ತೃಣಮೂಲ ಕಾಂಗ್ರೆಸ್) ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ.

    ಭಾಟ್ಪಾರಾದಲ್ಲಿ ನೇತಾಜಿಗೆ ಪುಷ್ಪ ನಮನ ಸಲ್ಲಿಸುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮೇಲೆ ಕಲ್ಲು ತೂರಿದರು. ಪರಿಣಾಮ ಈ ಘರ್ಷಣೆಯನ್ನು ತಡೆಯಲು ಅರ್ಜುನ್ ಸಿಂಗ್ ಅವರ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಬ್ಯಾರಕ್‍ಪುರ ಸಂಸದ ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ಇದನ್ನೂ ಓದಿ: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

    ಈ ಗಲಾಟೆಯ ವೇಳೆ ಪೊಲೀಸ್ ವಾಹನ ಸೇರಿದಂತೆ ಎರಡು ಕಾರುಗಳನ್ನು ಧ್ವಂಸಗೊಳಿಸಲಾಗಿದೆ. ಬಿಜೆಪಿ ಸಂಸದರನ್ನು ರಕ್ಷಿಸಿ ಸುರಕ್ಷಿತವಾಗಿ ಅವರ ನಿವಾಸಕ್ಕೆ ಕಳುಹಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಧ್ರುಬಾ ಜ್ಯೋತಿ ಡೇ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.

    ಏನಿದು ಘಟನೆ?
    ಈ ಕುರಿತು ಅರ್ಜುನ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಂದು ಬೆಳಗ್ಗೆ 10:30ಕ್ಕೆ, ನಮ್ಮ ಶಾಸಕ ಪವನ್ ಸಿಂಗ್ ನೇತಾಜಿಗೆ ಶ್ರದ್ಧಾಂಜಲಿ ಸಲ್ಲಿಸಲು ಹೋಗಿದ್ದರು. ಟಿಎಂಸಿಯ ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿದ್ದು, ಅವರ ಮೇಲೆ ಗುಂಡು ಹಾರಿಸಿದರು. ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ನಾನು ಅಲ್ಲಿಗೆ ಹೋದಾಗ ನನ್ನ ಮೇಲೂ ದಾಳಿ ಮಾಡಿದರು. ನನ್ನ ಕಾರಿನ ಮೇಲೆಯೂ ದಾಳಿ ಮಾಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ

    ಶನಿವಾರ ರಾತ್ರಿ, ಪಾನಿಹಟಿ ಪ್ರದೇಶದ ಬಿಟಿ ರಸ್ತೆಯಲ್ಲಿರುವ ಟಿಎಂಸಿ ಪಕ್ಷದ ಕಚೇರಿಯ ಮೇಲೆ ಬಿಜೆಪಿ ಕಾರ್ಯಕರ್ತರು ಬಾಂಬ್‍ಗಳನ್ನು ಎಸೆದು ದಾಳಿ ಮಾಡಿದ್ದಾರೆ. ಈ ಹಿನ್ನೆಲೆ ಅವರು ಬಿಜೆಪಿ ಮೇಲೆ ದಾಳಿ ಮಾಡಿಸಿದ್ದಾರೆ. ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದರು.

  • ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಕೊಲ್ಕತ್ತಾ: ಮಹಾತ್ಮ ಗಾಂಧೀಜಿ ಅವರ ಶಾಂತಿ ಚಳುವಳಿಯೊಂದರಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತಿಲ್ಲ. ಬದಲಾಗಿ ಸುಭಾಷ್ ಚಂದ್ರ ಬೋಸ್‍ರ ಆಜಾದ್ ಹಿಂದ್ ಫೌಜ್ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ನೇತಾಜಿಯವರ ಸೋದರಳಿಯ ಅರ್ಧೇಂದು ಬೋಸ್ ತಿಳಿಸಿದರು.

    ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರನ್ನು ಬದಿಗಿಟ್ಟಿದ್ದಾರೆ. ಬೋಸ್‍ರ ಕಥೆಯನ್ನು ಇತಿಹಾಸ ಪುಸ್ತಕಗಳಲ್ಲಿ ಪ್ರಕಟವಾಗದಂತೆ ನಿರ್ಬಂಧ ಹೇರಿದ್ದರು ಎಂದು ಆರೋಪಿಸಿದರು.

    ನೇತಾಜಿ ಹಾಗೂ ಜವಾಹರಲಾಲ್ ನೆಹರು ಅವರ ನಡುವೆ ಸಾಕಷ್ಟು ಪೈಪೋಟಿ ಇತ್ತು. ಇದರಿಂದಾಗಿ ನೇತಾಜಿಯನ್ನು ಇತಿಹಾಸದ ಪುಟದಿಂದ ತೆಗೆದು ಹಾಕಲು ನಿರ್ಧರಿಸಲಾಯಿತು. ಅದಕ್ಕೆ ಇತಿಹಾಸ ಪುಸ್ತಕಗಳಲ್ಲಿ ಸುಭಾಷ್ ಚಂದ್ರ ಬೋಸ್ ಬಗ್ಗೆ ಹೆಚ್ಚು ಬರೆದಿಲ್ಲ. ಇದರಿಂದಾಗಿ ಯುವಕರಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಅವರ ಆಜಾದ್ ಹಿಂದ್ ಫೌಜ್ ಬಗ್ಗೆ ಅರಿವಿಲ್ಲ ಎಂದು ವಿಷಾದಿಸಿದರು.

    ಜನವರಿ 23, 1897 ರಂದು ಜನಿಸಿದ ನೇತಾಜಿ ಅವರು ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಅವರು ಸ್ವಾತಂತ್ರ್ಯಕ್ಕಾಗಿ ಆಜಾದ್ ಹಿಂದ್ ಫೌಜ್ ಅನ್ನು ಸ್ಥಾಪಿಸಿದ್ದರು. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರ ಜ.23ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದೆ. ಜೊತೆಗೆ ಈ ವರ್ಷದಿಂದ ಭಾರತ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಗಣರಾಜ್ಯೋತ್ಸವವನ್ನು ಜ.23ರಿಂದಲೇ ಆಚರಿಸುತ್ತಿದೆ. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

  • ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಈ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದ್ದೇ ಆದರೆ, ಇಡೀ ದೇಶವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು, ದೇಶ ನಾಯಕ್ ದಿವಸ್ ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋಂಕಿನಿಂದ ಗುಣಮುಖರಾಗಿ 3 ತಿಂಗಳ ನಂತರ ಲಸಿಕೆ, ಬೂಸ್ಟರ್ ಡೋಸ್: ಕೇಂದ್ರ

    ದೇಶದ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ನೇತಾಜಿಯವರು ದೇಶಭಕ್ತಿ, ಧೈರ್ಯ, ನಾಯಕತ್ವ, ಏಕತೆ ಮತ್ತು ಭ್ರಾತೃತ್ವದ ದ್ಯೋತಕರಾಗಿದ್ದಾರೆ. ಮುಂದಿನ ಪೀಳಿಗೆಗೆ ನೇತಾಜಿ ಸ್ಫೂರ್ತಿಯಾಗಿದ್ದು, ಇದು ಹೀಗೆಯೇ ಮುಂದುವರಿಯುತ್ತದೆ. ದೇಶನಾಯಕ್ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದಂದು ಅವರಿಗೆ ಗೌರವಾರ್ಪಣೆ. ರಾಷ್ಟ್ರೀಯ ಮತ್ತು ಜಾಗತಿಕ ಐಕಾನ್, ಬಂಗಾಳದಿಂದ ನೇತಾಜಿಯವರ ಉದಯವು ಭಾರತೀಯ ಇತಿಹಾಸದಲ್ಲಿ ಸಾಟಿಯಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

    ಪಶ್ಚಿಮ ಬಂಗಾಳ ಸರ್ಕಾರವು ನೇತಾಜಿಯವರ ಜನ್ಮದಿನವನ್ನು ದೇಶ್ ನಾಯಕ್ ದಿನವೆಂದು ಆಚರಿಸುತ್ತದೆ. ನಾವು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ನೇತಾಜಿ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿ. ಇಡೀ ರಾಷ್ಟ್ರವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು ಮತ್ತು ದೇಶ್ ನಾಯಕ್ ದಿನವನ್ನು ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಇದು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ

  • ನೇತಾಜಿ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭ

    ನೇತಾಜಿ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭ

    ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ.

    ಗಣರಾಜ್ಯೋತ್ಸವನ್ನು ಭಾರತದಲ್ಲಿ ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುತ್ತದೆ. ಆದರೆ ಈಗ ನೇತಾಜಿ ಹುಟ್ಟುಹಬ್ಬವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ಮಾಧ್ಯಮಗಳಿಗೆ ತಿಳಿಸಿದೆ. ಇದನ್ನೂ ಓದಿ:  ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ನರೇಂದ್ರ ಮೋದಿ ಸರ್ಕಾರವು ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಅಂಶಗಳನ್ನು ಆಚರಿಸಲು ಮತ್ತು ಸ್ಮರಿಸಲು ಯಾವಾಗಲೂ ಗಮನಕೊಡುತ್ತಾರೆ. ಅದಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿದೆ.

    ಭಾರತದ ನೇತಾಜಿ ಎಂದೇ ಪ್ರಸಿದ್ಧಿ ಹೊಂದಿದ ಸುಭಾಷ್ ಚಂದ್ರ ಬೋಸ್ 23 ಜನವರಿ 1897 ರಂದು ಜನಿಸಿದರು. ಈ ಹಿಂದೆ ಸರ್ಕಾರವು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲು ಪ್ರಾರಂಭಿಸಿತ್ತು. ಆದರೆ ಈಗ ಅವರ ಹುಟ್ಟಿದ ದಿನದಿಂದಲೇ ಗಣರಾಜ್ಯೋತ್ಸವ ಪ್ರಾರಂಭಿಸಲು ನಿರ್ಧರಿಸಿದೆ.

    ಅದೇ ರೀತಿ ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತಾ ದಿನ(ಸರ್ದಾರ್ ಪಟೇಲ್ ಅವರ ಜನ್ಮದಿನ), ನವೆಂಬರ್ 15 ಜನಜಾತಿಯ ಗೌರವ್ ದಿವಸ್(ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವ), ನವೆಂಬರ್ 26 ಅನ್ನು ಸಂವಿಧಾನದ ದಿನವಾಗಿ ಮತ್ತು ಡಿಸೆಂಬರ್ 26 ರಂದು ವೀರ್ ಬಾಲ್ ದಿವಸ್ (ಗುರು ಗೋವಿಂದ್ ಸಿಂಗ್ ಅವರ ನಾಲ್ವರು ಪುತ್ರರಿಗೆ ಗೌರವ) ದಿನವನ್ನು ಆಚರಿಸಲಾಗುತ್ತದೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತವಾಗಿ, ಸಂತೋಷವಾಗಿದ್ದಾರೆ: ಸಯ್ಯದ್ ಸಯೀದ್

    ಕೇಂದ್ರ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ತೆರಳಿದ್ದ ಜಾಗಗಳನ್ನು ದೇಶಾದ್ಯಂತ ಪ್ರಚಾರ ಮಾಡಲು ಯೋಜನೆಗಳನ್ನು ರೂಪಿಸಿದೆ. ಅಕ್ಟೋಬರ್ 21, 1943 ರಂದು ಬೋಸ್ ಅವರು ‘ಆಜಾದ್ ಹಿಂದ್ ಫೌಜ್’ ಹೆಸರಿನ ಸೇನೆಯನ್ನು ಘೋಷಿಸಿದ್ದರು. ನೇತಾಜಿ ಸ್ಮರಣಾರ್ಥ ಕಾರ್ಯಕ್ರಮಗಳ ಭಾಗವಾಗಿ ಪ್ರವಾಸೋದ್ಯಮ ಸಚಿವಾಲಯವು ಪ್ರವಾಸಗಳನ್ನು ಆಯೋಜಿಸಲು ಮುಂದಾಗಿದೆ.

  • ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ಕರೆನ್ಸಿ ನೋಟುಗಳ ಮೇಲೆ ನೇತಾಜಿ ಫೋಟೋ ಮುದ್ರಿಸಿ: ಹರೇನ್ ಬಿಸ್ವಾಸ್ ಮನವಿ

    ಕೊಲ್ಕತ್ತಾ: ಕರೆನ್ಸಿ ನೋಟುಗಳ ಮೇಲೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಮುದ್ರಿಸುವಂತೆ 94 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಹರೇನ್ ಬಗ್ಚಿ ಬಿಸ್ವಾಸ್ ಕೊಲ್ಕತ್ತಾ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ.

    ಹರೇನ್ ಬಗ್ಚಿ ಬಿಸ್ವಾಸ್ ಅವರು ಕೊಲ್ಕತ್ತಾ ಹೈಕೋರ್ಟ್‍ನಲ್ಲಿ ಕರೆನ್ಸಿ ನೋಟುಗಳ ಮೇಲೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಫೋಟೋವನ್ನು ಮುದ್ರಿಸಿ ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು(ಪಿಐಎಲ್) ಸಲ್ಲಿಸಿದ್ದಾರೆ. ಅವರು ತಮ್ಮ ಪಿಐಎಲ್‍ನಲ್ಲಿ, ‘ಮಹಾತ್ಮ ಗಾಂಧಿ’ ಅವರಂತೆ ಕರೆನ್ಸಿ ನೋಟುಗಳಲ್ಲಿ ನೇತಾಜಿ ಅವರ ಚಿತ್ರವನ್ನು ಏಕೆ ಸೇರಿಸಬಾರದು? ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ಅವರ ಕೊಡುಗೆಗೆ ಭಾರತ ಸರ್ಕಾರವು ಸರಿಯಾದ ಮನ್ನಣೆಯನ್ನು ನೀಡಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ ಮತ್ತೆ ಅರಳಿದ ಬಿಜೆಪಿ

    ಈ ಹಿನ್ನೆಲೆ ಕೊಲ್ಕತ್ತಾ ಹೈಕೋರ್ಟ್ ಸೋಮವಾರ ಎಂಟು ವಾರಗಳಲ್ಲಿ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಮತ್ತು ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರ ಪೀಠವು ಸೋಮವಾರ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರವನ್ನು ಸಲ್ಲಿಸಲು ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ವೈಜೆ ದಸ್ತೂರ್ ಅವರು ಈ ಸಂಬಂಧ ಅಫಿಡವಿಟ್ ಸಲ್ಲಿಸಲು ಸಮಯ ಕೋರಿದ್ದಾರೆ ಎಂದು ಲೈವ್ ಲಾ ತಿಳಿಸಿದೆ.

    ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 21 ರಂದು ನಡೆಯಲಿದೆ.

  • ಸ್ವಾತಂತ್ರ್ಯ ಸಿಕ್ಕಿ ವರ್ಷಗಳು ಕಳೆದರೂ ನೇತಾಜಿ ಕನಸ್ಸನ್ನು ನನಸು ಮಾಡಲು ಸಾಧ್ಯವಾಗಿಲ್ಲ: ಮೋದಿ

    ಸ್ವಾತಂತ್ರ್ಯ ಸಿಕ್ಕಿ ವರ್ಷಗಳು ಕಳೆದರೂ ನೇತಾಜಿ ಕನಸ್ಸನ್ನು ನನಸು ಮಾಡಲು ಸಾಧ್ಯವಾಗಿಲ್ಲ: ಮೋದಿ

    ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕನಸಿನ ಸೇನೆಯನ್ನು ನಿರ್ಮಿಸಲು ನಾವು ಕಳೆದ 4 ವರ್ಷಗಳಿಂದ ಹಲವು ಕಾರ್ಯಗಳನ್ನು ಮಾಡಿದ್ದು, ಅವರ ಕನಸನ್ನು ನನಸು ಮಾಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ಸುಭಾಷ್ ಚಂದ್ರ ಬೋಸ್ ಅವರ ಆಝಾದ್ ಹಿಂದ್ ಫೌಜ್ ಸ್ಥಾಪನೆ 75ನೇ ವರ್ಷದ ನೆನಪಿಗಾಗಿ ಇಂದು ಪ್ರಧಾನಿ ಮೋದಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ವಿಶೇಷವಾಗಿ ಕಾರ್ಯಕ್ರಮಕ್ಕೆ ಆಝಾದ್ ಹಿಂದ್ ಫೌಜ್ ಟೋಪಿಯನ್ನು ಧರಿಸಿ ಗಮನಸೆಳೆದರು.

    ಈ ವೇಳೆ ಮಾತನಾಡಿದ ಅವರು, ನೇತಾಜಿ ತಮ್ಮ ಅವಧಿಯಲ್ಲಿ ಬದಲಾದ ಪರಿಸ್ಥಿತಿಗಳಿಗೆ ತಕ್ಕಂತೆ ಹೋರಾಟ ರೂಪಿಸಿ, ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಜನತೆಯನ್ನು ಒಗ್ಗೂಡಿಸಿದ್ದರು. ಅಲ್ಲದೇ ದೇಶದ ಸಂಸ್ಕೃತಿ ರಕ್ಷಣೆ, ಅಭಿವೃದ್ಧಿ ಬಗ್ಗೆ ಆಶ್ವಾಸನೆ ನೀಡಿದ್ದರು. ದೇಶದ ಸಾಂಪ್ರದಾಯಗಳ ಬಗ್ಗೆ ಹೆಮ್ಮೆ ಇರುವ ಎಲ್ಲಾ ರಂಗಗಳಲ್ಲಿಯೂ ಬೆಳವಣಿಗೆ ಸಾಧಿಸುವ ರಾಷ್ಟ್ರದ ಕಲ್ಪನೆ ಹೊಂದಿದ್ದರು. ಆದರೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ನಾವು ಅವರ ಕನಸುಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

    ಹಲವರ ತ್ಯಾಗ ಬಲಿದಾನದಿಂದ ನಾವು ಸ್ವರಾಜ್ಯವನ್ನ ಪಡೆದಿದ್ದು, ಅದನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ. ಅವರ ಕನಸು ಸಕಾರಗೊಳ್ಳುವಂತೆ ಮಾಡಲು 4 ವರ್ಷಗಳಲ್ಲಿ ಸತತವಾಗಿ ಪ್ರಯತ್ನಿಸುತ್ತಿದ್ದೇವೆ. ಅವರ ಕುರಿತ ಸಾಕಷ್ಟು ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ. ಸರ್ಜಿಕಲ್ ಸ್ಟ್ರೈಕ್ ಮಾಡುವಂತಹ ದೃಢ ತೀರ್ಮಾನಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.

    ಇದೇ ವೇಳೆ ನೆಹರು ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ, ಪಟೇಲ್, ಅಂಬೇಡ್ಕರ್, ನೇತಾಜಿ ಅವರ ಕೊಡುಗೆಗಳನ್ನು ಜನರಿಂದ ದೂರ ಮಾಡಲು ಯತ್ನಿಸಿದ್ದರು. ಆದರೆ ಇಂದಿನ ಸರ್ಕಾರ ಇದನ್ನು ಬದಲಾಯಿಸಿದೆ. ಬೋಸರ ಕಲ್ಪನೆಯ ಸೇನೆಯನ್ನು ನಿರ್ಮಿಸುತ್ತಿದೆ. ಅವರ ಗೌರವಾರ್ಥ ಪ್ರಶಸ್ತಿಯನ್ನು ಸ್ಥಾಪಿಸಲಾಗುತ್ತಿದೆ ಎಂದರು.

    ಕಾರ್ಯಕ್ರಮದಲ್ಲಿ ಕೇಂದ್ರ ಪ್ರಮುಖ ಸಚಿವರು, ಮುಖಂಡರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಕೇವಲ ಕೆಂಪು ಕೋಟೆ ಮಾತ್ರವಲ್ಲದೇ ದೇಶದ ವಿವಿಧೆಡೆ ನೇತಾಜಿ ಅವರ ಆಝಾದ್ ಹಿಂದ್ ಫೌಜ್ ಸರ್ಕಾರ ಸ್ಥಾಪನೆಯ ಸ್ಮರಣೆಯ ಕಾರ್ಯಕ್ರಮವನ್ನು ಬಿಜೆಪಿ ಏರ್ಪಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv