ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯಗೆ (Daali Dhananjay) ಸಿನಿಮಾ ಕೆಲಸದಲ್ಲಿ ಬ್ರೇಕ್ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಟ್ರಿಪ್‌ಗೆ ತೆರಳಿದ್ದಾರೆ. ನೇತ್ರಾಣಿಯಲ್ಲಿ ಡಾಲಿ ಸ್ಕೂಬಾ ಡೈವಿಂಗ್ (Scuba Diving) ಮಾಡಿ ಎಂಜಾಯ್ ಮಾಡಿದ್ದಾರೆ. ಈ ಕುರಿತ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.
ಮುರುಡೇಶ್ವರದಿಂದ 10 ಕಿ.ಮೀ ದೂರವಿರುವ ನೇತ್ರಾಣಿ ದ್ವೀಪಕ್ಕೆ ಡಾಲಿ ಭೇಟಿ ನೀಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ನೇತ್ರಾಣಿಯಲ್ಲಿ ಡಾಲಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ. ಡಾಲಿ ಟ್ರಿಪ್‌ಗೆ ಮೈಸೂರಿನ ಸ್ನೇಹಿತರು ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಮುಂದಿನ ತಿಂಗಳು ಆಪರೇಷನ್ ಇದೆ, ಯುಎಸ್‌ಎಗೆ ಹೋಗುತ್ತಿದ್ದೇನೆ: ಶಿವರಾಜ್ ಕುಮಾರ್
ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಫೆ.16ರಂದು ಮೈಸೂರಿನಲ್ಲಿ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಧನ್ಯತಾ ಜೊತೆಗಿನ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ರೆಡಿಯಾಗಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಕೊನೆಯದಾಗಿ ಪೋಸ್ಟ್ ಮಾಡಿದ್ದರು.
ಉತ್ತರ ಕನ್ನಡ ಜಿಲ್ಲೆಗೂ ನಟ ಪುನೀತ್ ರಾಜ್‍ಕುಮಾರ್ ಅವರಿಗೂ ಅವಿನಾಭಾವ ಸಂಬಂಧವಿದ್ದು, ಫೆಬ್ರವರಿ ತಿಂಗಳಲ್ಲಿ ಜಿಲ್ಲೆಯಲ್ಲಿ ಡಾಕ್ಯುಮೆಂಟರಿ ಚಿತ್ರೀಕರಣಕ್ಕೆ ಈ ಭಾಗಕ್ಕೆ ಬಂದು ಇಲ್ಲಿನ ಸೌಂದರ್ಯದ ಬಗ್ಗೆ ಮೂಕ ವಿಸ್ಮಿತರಾಗಿದ್ದರು.
ಬುಧವಾರ ಮುರುಡೇಶ್ವರದಲ್ಲಿ ತಾವು ಸ್ಕೂಬಾ ಡೈ ಮಾಡಿದ ಹಾಗೂ ಡಾಕ್ಯುಮೆಂಟರಿ ಚಿತ್ರೀಕರಣದ ಜಿಲ್ಲೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಿಸಿದ್ದ ಡಾಕ್ಯುಮೆಂಟರಿಯ ಬಿಡುಗಡೆಗೆ ಎರಡೇ ದಿನ ಇರುವಾಗ ಅವರ ಅಗಲಿಕೆ ದೊಡ್ಡ ನೋವು ತಂದಿದೆ.
ಪುನೀತ್ ರಾಜ್‍ಕುಮಾರ್‌ಗೆ ಉತ್ತರ ಕನ್ನಡವೆಂದರೆ ಬಹಳ ಪ್ರೀತಿ. ಇಲ್ಲಿನ ನಿಸರ್ಗ ಸೌಂದರ್ಯ, ಕಡಲತೀರ, ಜಲಪಾತಗಳ ಸೊಬಗನ್ನು ಇಷ್ಟಪಡುತಿದ್ದ ಅವರು ಕುಟುಂಬ ಸಮೇತರಾಗಿ ಆಗಮಿಸಿ ಇಲ್ಲಿ ಸಮಯ ಕಳೆದಿದ್ದರು. ಹೀಗಾಗಿ ಈ ವರ್ಷದ ಜನವರಿ, ಫೆಬ್ರವರಿಯಲ್ಲಿ ಪುನೀತ್ ಹೆಚ್ಚಿನ ಸಮಯ ಉತ್ತರ ಕನ್ನಡದಲ್ಲೇ ಕಳೆದಿದ್ದರು.
ಜಿಲ್ಲೆಗೆ ಭೇಟಿ ನೀಡಿದ್ದ ಅವರು ಕುಮಟಾ, ಗೋಕರ್ಣ, ಮುರುಡೇಶ್ವರ, ಜೊಯಿಡಾ ತಾಲೂಕಿನಲ್ಲಿ ತಮ್ಮ ತಂಡದೊಂದಿಗೆ ತಿರುಗಾಡಿ ಡಾಕ್ಯುಮೆಂಟರಿಗಾಗಿ ಚಿತ್ರೀಕರಣ ನಡೆಸಿದ್ದರು. ಕಡಲತೀರಗಳಲ್ಲಿ ಓಡಾಡಿ, ಸ್ಟಂಟ್‍ಗಳನ್ನೂ ಮಾಡಿದ್ದರು. ಗೋಕರ್ಣಕ್ಕೆ ಡಾಕ್ಯುಮೆಂಟರಿ ಚಿತ್ರೀಕರಣಕ್ಕಾಗಿ ಭೇಟಿ ನೀಡಿದ್ದ ಪುನೀತ್ ಸಾಮಾನ್ಯರಂತೆ ಕಡಲತೀರದಲ್ಲಿ ಅಡ್ಡಾಡಿದ್ದರು. ತೀರದ ಹೋಟೆಲ್‍ಗಳಲ್ಲಿ ಖಾದ್ಯಗಳನ್ನು ಸವಿಯುತ್ತಾ ಕಾಲ ಕಳೆದಿದ್ದರು. ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀಮಹಾಬಲೇಶ್ವರ ದೇವಾಲಯಕ್ಕೂ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದರು.
ಮುರುಡೇಶ್ವರಕ್ಕೆ ಭೇಟಿ ನೀಡಿದ್ದ ಅವರು ನೇತ್ರಾಣಿ ದ್ವೀಪ ಪ್ರದೇಶದಲ್ಲಿ ಡಾಕ್ಯುಮೆಂಟರಿಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆಸಿ, ಮುರುಡೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆರಳಿದ್ದರು. ನೇತ್ರಾಣಿಯಲ್ಲಿ ನಡೆದ ಚಿತ್ರೀಕರಣದ ಒಂದು ತುಣುಕನ್ನು ಪುನೀತ್ ಹತ್ತು ದಿನಗಳ ಬಳಿಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಗೋಕರ್ಣ ಕಡಲತೀರದಲ್ಲಿ ಮಾಡಿದ್ದ ಬ್ಯಾಕ್ ಫ್ಲಿಪ್ ಸ್ಟಂಟ್‍ಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದರು.
ನ.1ಕ್ಕೆ ಬಿಡುಗಡೆಯಾಗಬೇಕಿದ್ದ ಡಾಕ್ಯುಮೆಂಟರಿ
ಫೆಬ್ರವರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ಮಾಡಿದ್ದ ಡಾಕ್ಯುಮೆಂಟರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಪುನೀತ್, ‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂಬ ಸಾಲುಗಳನ್ನು ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೋವೊಂದನ್ನು ಹಂಚಿ ಡಾಕ್ಯುಮೆಂಟರಿ ಬಿಡುಗಡೆಯ ಸಮಯ ತಿಳಿಸಿದ್ದರು.
ಈ ಡಾಕ್ಯುಮೆಂಟರಿ ಪಿಆರ್‌ಕೆ ಪ್ರೊಡಕ್ಷನ್ ಹಾಗೂ ಮಡ್ ಸ್ಕಿಪ್ಪರ್ಸ್ ಮೀಡಿಯಾ ಹೌಸ್‍ನಿಂದ ತಯಾರಾಗಿತ್ತು. ಆದರೆ ಡಾಕ್ಯುಮೆಂಟರಿಯಲ್ಲಿ ಏನಿತ್ತು? ಯಾಕಾಗಿ ಮಾಡಲಾಗಿತ್ತು ಎಂಬ ಬಗ್ಗೆ ಪುನೀತ್ ಆಗಲಿ, ಅವರ ತಂಡವಾಗಲಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿರಲಿಲ್ಲ. ದುರಂತ ಎನ್ನುವಂತೆ ಡಾಕ್ಯುಮೆಂಟರಿ ಬಿಡುಗಡೆಗೂ ಮುನ್ನ ಪುನೀತ್ ಅಗಲಿದ್ದಾರೆ. ಅವರು ಇಷ್ಟಪಡುವ ಉತ್ತರ ಕನ್ನಡ ಜಿಲ್ಲೆಯ ಸೊಬಗು ಅವರ ಜೀವನದ ಕೊನೆಯ ಕ್ಷಣದ ಪೋಸ್ಟ್ ಆಗಿದ್ದು, ಅಭಿಮಾನಿಗಳಿಗೆ ನೋವು ತಂದಿದೆ.
ಕಾರವಾರ: ಒಂದೆಡೆ ಆಳ ಸಮುದ್ರದಲ್ಲಿ ಸ್ವಚ್ಛಂದವಾಗಿ ಈಜುತ್ತಿರುವ ಬಣ್ಣ ಬಣ್ಣದ ಹತ್ತಾರು ಬಗೆಯ ಮೀನುಗಳು. ಕಡಲಾಳಕ್ಕೆ ಇಳಿದು ಅಲ್ಲಿನ ಜಲಚರಗಳನ್ನ ಕಣ್ಣಾರೆ ನೋಡುವ ಆಸೆ ಯಾರಿಗೆ ತಾನೆ ಇಲ್ಲ ಹೇಳಿ. ಇದಕ್ಕೆ ಹೇಳಿ ಮಾಡಿಸಿದಂತಿರುವ ರಾಜ್ಯದ ಏಕೈಕ ಸ್ಥಳ ಅಂದ್ರೆ ಅದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ನೇತ್ರಾಣಿ ದ್ವೀಪ. ಈಗಾಗಲೇ ಜಿಲ್ಲಾಡಳಿತ ಅಲ್ಲಿ ಸ್ಕೂಬಾ ಡೈವಿಂಗ್‍ಗೆ ಅವಕಾಶ ಮಾಡಿಕೊಡುವ ಮೂಲಕ ಪ್ರವಾಸೋದ್ಯಮಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಎರಡು ದಿನದ ರಾಜ್ಯ ಮಟ್ಟದ ಸ್ಕೂಬಾ ಉತ್ಸವವನ್ನ ನೇತ್ರಾಣಿಯಲ್ಲಿ ಆಯೋಜನೆ ಮಾಡುವ ಮೂಲಕ ಇನ್ನಷ್ಟು ಪ್ರವಾಸಿಗರನ್ನು ಸೆಳೆಯಲಾಗುತ್ತಿದೆ.
ಕಳೆದ ಮೂರು ವರ್ಷಗಳ ಹಿಂದೆ ಜಿಲ್ಲಾಡಳಿತವೇ ಖುದ್ದು ಸ್ಕೂಬಾ ಡೈವಿಂಗ್‍ನ್ನು ಆರಂಭಿಸಿದ್ದು, ಸಾಕಷ್ಟು ಪ್ರವಾಸಿಗರನ್ನು ಜಿಲ್ಲೆಯತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ದೇಶ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸಿ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಸಕತ್ ಎಂಜಾಯ್ ಮಾಡಿದರು. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಸ್ಕೂಬಾ ಉತ್ಸವ ಆಯೋಜನೆ ಮಾಡಿದ್ದು, ನೂರಾರು ಸಂಖ್ಯೆಯಲ್ಲಿ ದೇಶ, ವಿದೇಶಗಳ ಪ್ರವಾಸಿಗರು ಮುರುಡೇಶ್ವರದ ನೇತ್ರಾಣಿ ನಡುಗಡ್ಡೆಯಲ್ಲಿ ಎಂಜಾಯ್ ಮಾಡಿದರು.
ನೇತ್ರಾಣಿ ದ್ವೀಪ ಪ್ರಾಕೃತಿಕವಾಗಿ ಸಾಕಷ್ಟು ವೈವಿಧ್ಯತೆಗಳನ್ನ ಹೊಂದಿದ್ದು, ಹಲವಾರು ಬಗೆಯ ಜಲಚರಗಳಿಗೆ ಸ್ಥಾನ ಒದಗಿಸಿದೆ. ಕರ್ನಾಟಕದಲ್ಲಿಯೇ ಹವಳದಂಡೆಯನ್ನು ಹೊಂದಿರುವ ಏಕೈಕ ಪ್ರದೇಶವಾಗಿರುವುದರ ಜೊತೆಗೆ ಅಪರೂಪದ ಸುಮಾರು 35ಕ್ಕೂ ಅಧಿಕ ಪ್ರಬೇಧಗಳ ಕಡಲಜೀವಿಗಳನ್ನು ಇಲ್ಲಿ ಗುರುತಿಸಲಾಗಿದೆ.
ಈ ಪ್ರದೇಶದಲ್ಲಿ ಸ್ವಚ್ಛ ನೀರು ಇರುವುದರಿಂದ ಸ್ಕೂಬಾ ಡೈವಿಂಗ್‍ಗೆ ಹೇಳಿ ಮಾಡಿಸಿದ ಸ್ಥಳವಾಗಿದ್ದು, ದೇಶ, ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಜಿಲ್ಲಾಡಳಿತ ಸ್ಕೂಬಾ ಡೈವಿಂಗ್‍ಗೆ ಅವಕಾಶ ಒದಗಿಸಿರುವುದರಿಂದ ಇನ್ನಷ್ಟು ಪ್ರವಾಸಿಗರನ್ನು ಸೆಳೆಯುತ್ತಿದೆ.
ಸ್ಕೂಬಾ ಡೈವಿಂಗ್‍ಗೆ ನೇತ್ರಾಣಿಯಂತಹ ಪ್ರದೇಶ ರಾಜ್ಯದಲ್ಲೆಲ್ಲೂ ಇಲ್ಲ. ಹೀಗಾಗಿ ವಿದೇಶಗಳಿಗೆ ತೆರಳುವ ಬದಲು ರಾಜ್ಯದಲ್ಲೇ ಇರುವ ಮುರುಡೇಶ್ವರಕ್ಕೆ ಆಗಮಿಸಿ, ಪ್ರವಾಸಿಗರು ಖುಷಿ ಪಡುತ್ತಿದ್ದಾರೆ.
ಎರಡು ದಿನಗಳ ಕಾಲ ನಡೆದ ಸ್ಕೂಬಾ ಡೈವಿಂಗ್ ಉತ್ಸವಕ್ಕೆ ಮುರುಡೇಶ್ವರದ ನೇತ್ರಾಣಿ ಅಡ್ವೇಂಚರ್ಸ್ ಸಂಸ್ಥೆ ಕೈಜೋಡಿಸಿದೆ. ಎರಡು ದಿನಗಳ ಕಾಲ ಸ್ಕೂಬಾ ಡೈವಿಂಗ್ ಮಾಡಲು ಬಂದ ಪ್ರವಾಸಿಗರನ್ನು ಮುರುಡೇಶ್ವರದಿಂದ ಅರಬ್ಬಿ ಸಮುದ್ರದಲ್ಲಿರುವ ನೇತ್ರಾಣಿ ನಡುಗಡ್ಡೆಗೆ ಯಾವುದೇ ತೊಂದರೆಗಳಾಗದಂತೆ ಕರೆದೊಯ್ದು ಪ್ರವಾಸಿಗರನ್ನು ಸಂತಸ ಪಡಿಸಿತು. ಸ್ಕೂಬಾ ಉತ್ಸವಕ್ಕೆ ಪ್ರವಾಸಿಗರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗಾಗಲೇ ನೂರಾರು ಜನ ಸ್ಕೂಬಾ ಡೈವಿಂಗ್ ಮಾಡಲು ರಿಜಿಸ್ಟರ್ ಮಾಡಿಕೊಂಡಿಕೊಂಡಿದ್ದಾರೆ.