ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial) ಇಂದು ಕನ್ಯಾಡಿಯಲ್ಲಿ (Kanyadi) ನಡೆದ ಶೋಧ ಕಾರ್ಯ ಅಂತ್ಯಗೊಂಡಿದ್ದು ಅನಾಮಿಕ ಬರಿಗೈಯಲ್ಲಿ ವಾಪಸ್ ಆಗಿದ್ದಾನೆ.
ಇಲ್ಲಿಯವರೆಗೆ ನೇತ್ರಾವತಿ ನದಿ (Netravathi River) ತಟ, ನದಿ ಪಕ್ಕ ಇರುವ ಅರಣ್ಯ, ಬಾಹುಬಲಿ ಬೆಟ್ಟದಲ್ಲಿ ಶೋಧ ಕಾರ್ಯ ನಡೆದಿತ್ತು. ಆದರೆ ಇಂದು ಧರ್ಮಸ್ಥಳದಿಂದ 5 ಕಿ.ಮೀ ದೂರದಲ್ಲಿರುವ ಕನ್ಯಾಡಿಯಲ್ಲಿ ಶೋಧ ನಡೆಸಲಾಯಿತು.
ಮಳೆಯ ನಡುವೆಯೂ ಎಸ್‌ಐಟಿ ತಂಡ ಅನಾಮಿಕ ಹೇಳಿದಂತೆ ಗುಂಡಿ ತೋಡಿತು. ಯಾವುದೇ ಕುರುಹು ಪತ್ತೆಯಾಗದ ಕಾರಣ ಸಂಜೆ ಉತ್ಕನನ ಕೆಲಸವನ್ನು ಸ್ಥಗಿತಗೊಳಿಸಿ ಎಸ್‌ಐಟಿ ಅಧಿಕಾರಿಗಳು ವಾಪಸ್ ಆಗಿದ್ದಾರೆ.
ಅರಣ್ಯ (Forest) ಪ್ರವೇಶದ ಆರಂಭದಲ್ಲೇ ಇರುವ ಎರಡನೇ ಜಾಗವಿದ್ದು ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ ನಡೆಯಿತು. ಆರಂಭದಲ್ಲಿ ಉದ್ದಕ್ಕೆ ಆರು ಅಡಿ, ಅಗಲಕ್ಕೆ ಐದು ಅಡಿ ಜಾಗ ಗುರುತಿಸಿ ಅಗೆಯಲಾಯಿತು.
ಅರಣ್ಯದ ಒಳಗಡೆ ಉತ್ಕನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಕಾರ್ಮಿಕರಿಂದಲೇ ಶೋಧ ಕಾರ್ಯ ನಡೆಸಲಾಯಿತು. ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್.ಪಿ ಜಿತೇಂದ್ರ ಕುಮಾರ್ ದಯಾಮ ಖುದ್ದು ಸ್ಥಳದಲ್ಲಿದ್ದಾರೆ.
ಊಟದ ವಿರಾಮದ ನಂತರ ದೂರುದಾರ ವ್ಯಕ್ತಿ ತೋರಿಸಿದ ಮೂರನೇ ಜಾಗದಲ್ಲಿ ಅಗೆಯುವ ಕೆಲಸ ಆರಂಭವಾಗಿದೆ.
ಮಂಗಳೂರು: ಮಗುವಿನೊಂದಿಗೆ ನೇತ್ರಾವತಿ ನದಿಗೆ (Netravathi River) ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ (Mangaluru) ಹೊರವಲಯದ ಅಡ್ಯಾರ್ ಡ್ಯಾಂ ಬಳಿ ನಡೆದಿದೆ.
ಅಡ್ಯಾರ್ ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನದಿಂದ ತಾಯಿ ಮಗುವಿನೊಂದಿಗೆ ನಾಪತ್ತೆಯಾಗಿರುವುದಾಗಿ ತಿಳಿದುಬಂದಿತ್ತು.
ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಚೈತ್ರಾ ಆಚರಿಸಿದ್ದರು. ತಾಂಯಿ ಮಗು ನಾಪತ್ತೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದ ಮೂಲಕ ಸಂಬಂಧಿಕರು ಇಬ್ಬರ ಹುಡುಕಾಟ ನಡೆಸಿದ್ದರು ಎನ್ನಲಾಗಿದೆ.
ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.
ಕೋಲಾರ; ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆ:
ಕೋಲಾರದ (Kolar) ನರಸಾಪುರ ಕಾಫಿಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಶ್ರೀನಿವಾಸಪುರ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ಲಾರಿ ಚಾಲಕ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಬೆಂಗಳೂರು: ಗುರುಪುರ ಮತ್ತು ನೇತ್ರಾವತಿ ನದಿಗಳ (Netravati River) ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್‌ಗಳ ಸೇವೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (Basavaraj Bommai) ಪ್ರಕಟಿಸಿದರು.
ತಮ್ಮ ಬಜೆಟ್ ಭಾಷಣದಲ್ಲಿ, ಬಾಗಲಕೋಟೆ- ಕಂಕಣವಾಡಿ- ಕದಮ್‌ಪುರ, ಕಲಬುರಗಿ- ಸನ್ನತಿ, ಶಿವಮೊಗ್ಗ- ಕೊಗರು- ಶಿಗ್ಲು, ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೈಟ್ ಕಾರ್ಗೋ ಟ್ರಾನ್ಸ್‌ಪೋರ್ಟ್ (LCT) ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಮುಖ್ಯಾಂಶಗಳು: ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ
ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್‌ಯಾರ್ಡ್ಸ್ ಲಿಮಿಟೆಡ್‌ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್‌ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.
ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಲೂ ಎಕೊನಾಮಿಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1,100 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.
ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು- ಕಾರವಾರ- ಗೋವಾ- ಮುಂಬಯಿ ವಾಟರ್‌ವೇಸ್ ಅನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
Live Tv
[brid partner=56869869 player=32851 video=960834 autoplay=true]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ (Bajarangdal) ಮುಖಂಡನ ಶವ ಪತ್ತೆಯಾಗಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26)ಯವರ ಮೃತದೇಹ ದೊರೆತಿದೆ. ಪಾಣೆಮಂಗಳೂರು (Panemangaluru) ಹಳೆಯ ಸೇತುವೆಯ ಬಳಿ ಪತ್ತೆಯಾಗಿದೆ.
ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹ ಪತ್ತೆಯಾಗಿದೆ.
ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ.
ಇದನ್ನು ನೋಡಿದ ಗೂಡಿನ ಬಳಿಯ ಮಹಮ್ಮದ್ ಮತ್ತು ಅವರ ಸ್ನೇಹಿತರ ತಂಡ ದೋಣಿಯ ಮೂಲಕ ತೆರಳಿ ಸೇತುವೆಯ ಕಂಬದಲ್ಲಿ ಸಿಲುಕಿಕೊಂಡಿದ್ದ ಕುಮಾರ್ ನನ್ನು ರಕ್ಷಿಸಿ ಕರೆ ತಂದಿದ್ದಾರೆ. ಸದ್ಯ ಯುವಕನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ತಂಡ ಹಿಂದೆಯೂ ಇದೇ ರೀತಿ ಹಲವರನ್ನು ರಕ್ಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಬಂಟ್ವಾಳದ ಪಾಣೆ ಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದರು. ಶನಿವಾರ ನೇತ್ರಾವತಿ ನದಿಯಲ್ಲಿ ನೀರಿನ ರಭಸ ಜಾಸ್ತಿಯಾಗಿತ್ತು. ಇಂದು ನದಿ ನೀರಿನ ರಭಸ ಹಾಗೂ ಮಳೆಯೂ ಕಡಿಮೆಯಾಗಿದೆ. ಹೀಗಾಗಿ ಪಾಣೆಮಂಗಳೂರಿನ ಹಳೆಯ ಸೇತುವೆಯಲ್ಲಿ ಯುವಕರು ನದಿಗೆ ಹಾರಿ ಈಜಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದು ಕೂಡ ರೆಡ್ ಅಲರ್ಟ್ ಇದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ. ಆದರೂ ಯುವಕರು ಈ ರೀತಿ ಅಪಾಯಕಾರಿ ಸಾಹಸ ನಡೆಸಿ ನದಿಗೆ ಹಾರಿ ಈಜಾಡುತ್ತಿದ್ದಾರೆ. ಅನಾಹುತ ಆಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.
ಮಂಗಳೂರು/ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.
ಕಳೆದ ಎರಡು ದಿನದಿಂದ ಕರಾವಳಿ ಹಾಗೂ ಮಲೆನಾಡು, ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆಯಾಗಿದೆ. ಇಂದೂ ಕೂಡಾ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆ ನೀರು ಸಮುದ್ರ ಸೇರಲು ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ಹರಿದು ಬರುತ್ತಿದೆ. ಹೀಗಾಗಿ ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಬಳಿ ಇರುವ ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಭಾಗದವರೆಗೂ ನದಿ ನೀರು ಬರುತ್ತಿದೆ.
ನದಿ ನೀರು ಅಪಾಯದ ಮಟ್ಟಮೀರಿ ಹರಿಯುತ್ತಿರೋದ್ರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಭಕ್ತರಿಗೆ ಸಂಪೂರ್ಷವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಖುಗಡೆಯಾಗುವ ಸಾಧ್ಯತೆ ಇದೆ.
ಈಶ್ವರಪ್ಪ ಬಾಗಿನ: ಕಳೆದೆರೆಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ತುಂಗಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಡ್ಯಾಂ ನಿಂದ ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹರಿಯುವ ತುಂಗಾ ನದಿ ಭರ್ತಿಯಾಗಿ ಹರಿಯುತ್ತಿದ್ದು, ಕೋರ್ಪಲಯ್ಯನ ಛತ್ರದ ಬಳಿಯ ಮಂಟಪ ಮುಳುಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು.
ಈ ವೇಳೆ ಮಾತನಾಡಿದ ಸಚಿವರು, ತುಂಗಾ ನದಿ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ರೈತರ ಮೊಗದಲ್ಲಿ ಹರ್ಷ ಕಾಣುತ್ತಿದ್ದೇವೆ. ಕಳೆದ ಭಾರಿ ನಿರೀಕ್ಷೆ ಮೀರಿ ನೆರೆ ಬಂದ ಹಿನ್ನೆಲೆಯಲ್ಲಿ, ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ದುರಸ್ತಿ ಸೇರಿದಂತೆ, ಇತರೇ, ಪರಿಹಾರಕ್ಕಾಗಿ ಸ್ಪಂದಿಸಿ, 1500 ಕೋಟಿ ರೂ. ಬಿಡುಗಡೆ ಮಾಡಿದ್ದು, ತುರ್ತು ಪರಿಹಾರ ಕಾರ್ಯ ಕೈಗೊಳ್ಳಲಾಗಿತ್ತು. ಈ ಬಾರಿ ಯಾವುದೇ ತೊಂದರೆ ಇಲ್ಲದಂತೆ ಮಳೆಯಾಗುತ್ತಿದ್ದು, ಯಾವುದೇ ತೊಂದರೆಯಾಗದಂತೆ ತುಂಗೆಗೆ ಬಾಗಿನ ಅರ್ಪಿಸಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.
ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ಇದೆ. ಈ ಕುರಿತು ಮೆಚ್ಚೆಚ್ಚರಿಕೆ ವಹಿಸಲಾಗಿದ್ದು, ಸ್ನಾನ ಘಟ್ಟದ ಬಳಿ ಯಾರನ್ನೂ ಬಿಡಲಾಗುತ್ತಿಲ್ಲ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಹಾಗೂ ಜಲಾಶಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಕೊಡಗು, ಧಾರವಾಡ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಧ್ಯದಲ್ಲೇ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
– ಕಾಫಿ ಡೇ ಸಂಸ್ಥಾಪಕನ ಬಳಿಕ 14 ಮಂದಿ ಸೂಸೈಡ್
– 55 ಲಕ್ಷ ರೂ. ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ
ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ, ಕೋಟಿ ಒಡೆಯ ವಿ.ಜಿ. ಸಿದ್ಧಾರ್ಥ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಕರುಣಿಸಲಾಗಿದೆ.
ಹೌದು. ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷವೇ ಕಳೆದು ಹೋಗಿದೆ. ಮಂಗಳೂರಿನ ಜಪ್ಪಿನಮೊಗರು ಬಳಿಯ ನೇತ್ರಾವತಿ ಸೇತುವೆಯಿಂದ ಹಾರಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ದಿನದಿಂದಲೇ ಈ ಸೇತುವೆಗೆ ತಡೆಬೇಲಿ ನಿರ್ಮಿಸಬೇಕೆಂದು ಸಾಕಷ್ಟು ಒತ್ತಾಯ ಕೇಳಿ ಬಂದಿದ್ದು, ರಾಜಕಾರಣಿಗಳು ಕೂಡ ಒಪ್ಪಿಕೊಂಡಿದ್ರು. ಇದನ್ನೂ ಓದಿ: ನೇತ್ರಾವತಿ ನದಿಗೆ ಮತ್ತೊಂದು ಜೀವ ಆಹುತಿ
ಅಂದಿನಿಂದ ಇಂದಿನವರೆಗೆ ಈ ಸೇತುವೆಯಿಂದ ನದಿಗೆ ಹಾರಿ ಬರೋಬ್ಬರಿ 14 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ಜಾಗವೊಂದು ಸೂಸೈಡ್ ಪಾಯಿಂಟ್ ಆಗಿತ್ತು. ಇದೀಗ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ಕೊನೆಗೂ ತಡೆಬೇಲಿ ಭಾಗ್ಯ ಒದಗಿ ಬಂದಿದೆ. ಇದನ್ನೂ ಓದಿ: ಸಿದ್ಧಾರ್ಥ್ ಕಾಣೆಯಾಗಿದ್ದ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ
ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಆರಂಭಗೊಂಡಿದೆ. ಸಿದ್ದಾರ್ಥ್ ಆತ್ಮಹತ್ಯೆಯ ಬಳಿಕ ಈ ಸೇತುವೆ ಬಳಿ ಬಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸೇತುವೆಯುದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಸೇತುವೆಯ 8ನೇ ಕಂಬದಿಂದ ವ್ಯಕ್ತಿ ನೀರಿಗೆ ಹಾರಿದ್ದನ್ನು ಕಣ್ಣಾರೆ ಕಂಡ ಮೀನುಗಾರ
ಸೇತುವೆ 800 ಮೀ.ಉದ್ದವಿದೆ. ಸೇತುವೆಯ ತಡೆಗೋಡೆಯ ಮೇಲೆ ರಕ್ಷಣಾ ಬೇಲಿಯು 5 ಅಡಿ ಎತ್ತರವಿದ್ದು, ಬೇಲಿಯ ಮೇಲ್ಗಡೆಯೂ ಹತ್ತಲು ಸಾಧ್ಯವಾಗದಂತೆ ಮೇಲ್ಭಾಗಕ್ಕೂ ನಾಲ್ಕು ಸಾಲು ಮುಳ್ಳು ತಂತಿಯನ್ನು ರಸ್ತೆಯ ಭಾಗಕ್ಕೆ ಬಗ್ಗಿಸಿ ಜೋಡಣೆ ಮಾಡಲಾಗುತ್ತಿದೆ.