Tag: ನೇಪಾಳ

  • ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿಎಂ

    ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿಎಂ

    ಬೆಂಗಳೂರು: ನೇಪಾಳದಲ್ಲಿ (Nepal) ಸಿಲುಕಿರುವ ಕನ್ನಡಿಗರು (Kannadigas) ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟಪಡಿಸಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಅಧಿಕೃತವಾಗಿ ಹೇಳಿದ್ದಾರೆ. ಇದನ್ನೂ ಓದಿ: Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್‌ʼ ಧಗಧಗ

    ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಮುಖ್ಯಮಂತ್ರಿಗಳ ಸೂಚನೆ ಬಳಿಕ ಮುಖ್ಯಕಾರ್ಯದರ್ಶಿ ನಿರಂತರವಾಗಿ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ

  • Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್‌ʼ ಧಗಧಗ

    Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್‌ʼ ಧಗಧಗ

    – ನೇಪಾಳದ ಆಡಳಿತ ವಹಿಸಿಕೊಂಡ ಸೇನೆ
    – ಅಧ್ಯಕ್ಷ, ಪ್ರಧಾನಿ, ಸಂಸತ್‌ಗೆ ದಾಳಿಯಿಟ್ಟು ಹಿಂಸಾಚಾರ

    ಕಠ್ಮಂಡು: ಭಾರತದ ನೆರೆಯ ರಾಷ್ಟ್ರ ನೇಪಾಳ (Nepal) ಯುವ ದಂಗೆಗೆ ಹೊತ್ತಿ ಉರಿಯುತ್ತಿದೆ. ಸತತ 3ನೇ ದಿನವೂ ನೇಪಾಳ ಕುದಿಯುತ್ತಿದೆ. ಆಂತರ್ಯುದ್ಧಕ್ಕೆ ಶ್ರೀಲಂಕಾ, ಬಾಂಗ್ಲಾದೇಶದಂತೆ ನೇಪಾಳವೂ ಬದಲಾಗಿದೆ. ರಾಜಧಾನಿ ಕಠ್ಮಂಡುವಿನಲ್ಲಿ (Kathmandu) ಭಾರೀ ಪ್ರತಿಭಟನೆ, ಯುವಕರ ಕೋಪತಾಪಕ್ಕೆ ನೇಪಾಳದ ಓಲಿ ಸರ್ಕಾರ ಮಂಡಿಯೂರಿದೆ.

    ಭುಗಿಲೆದ್ದ ʻಜೆನ್ ಝಡ್‌ʼ ರಣಕೋಪಕ್ಕೆ ಕೆಪಿ ಶರ್ಮಾ ಓಲಿ ಪ್ರಧಾನಿ ಹುದ್ದೆಯನ್ನೇ ತ್ಯಜಿಸಿದ್ದಾರೆ. ಅಧ್ಯಕ್ಷ ರಾಮಚಂದ್ರ ಪೌಡೆಲ್ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಸೋಷಿಯಲ್ ಮೀಡಿಯಾ ನಿಷೇಧ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದ ಬೆನ್ನಲ್ಲೇ ನಿಷೇಧ ಆದೇಶವನ್ನು ನಿನ್ನೆ ರಾತ್ರಿಯೇ ವಾಪಸ್ ಪಡೆದಿದ್ದರೂ, ಹಿಂಸಾಚಾರ ತಣ್ಣಗಾಗಿಲ್ಲ. ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ಯುವಕರು ಪಟ್ಟು ಹಿಡಿದು ಇಂದು ಕೂಡ ಗಲಭೆ ಸೃಷ್ಟಿಸಿದ್ರು. ಕಠ್ಮಂಡುವಿನಲ್ಲಿ ಕರ್ಫ್ಯೂ ಮೀರಿ ಯುವಕರು ದಂಗೆ ಎದ್ರು. ಇದನ್ನೂ ಓದಿ: ನೇಪಾಳ ಧಗ ಧಗ – ಉದ್ರಿಕ್ತರಿಂದ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

    ಅಧ್ಯಕ್ಷರ ಭವನ, ಪ್ರಧಾನಿ ನಿವಾಸ, ಸಂಸತ್ ಭವನ, ಮಾಜಿ ಪಿಎಂ ಪ್ರಚಂಡ್ ಮನೆ, ಸಚಿವರ ನಿವಾಸಗಳನ್ನ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ವೇಳೆ ವರ್ಷವಿಡೀ ಪ್ರವಾಸಿಗರಿಂದ ತುಂಬಿರುತ್ತಿದ್ದ ಏಷ್ಯಾದ ಅತಿದೊಡ್ಡ ಅರಮನೆ (Asias Largest Palace) ʻಸಿಂಹ ದರ್ಬಾರ್‌ʼಗೂ (Singha Durbar) ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಅರಮನೆ ಧಗಧಗಿಸಿದ್ದು, ಭಾರೀ ಪ್ರಮಾಣದ ಸಂಪತ್ತು ನಷ್ಟವಾಗಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

    120 ವರ್ಷಗಳಷ್ಟು ಹಳೆಯದಾದ ಅರಮನೆ ಧಗಧಗ
    ಹೊಸ ವಿಡಿಯೋಗಳು ವೈರಲ್‌ ಆಗಿದ್ದು, ಸುಮಾರು 120 ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಏಷ್ಯಾದ ಅತಿದೊಡ್ಡ ಅರಮನೆಯಾದ ʻಸಿಂಹ ದರ್ಬಾರ್‌ʼಗೂ ಬೆಂಕಿ ಹಚ್ಚಿದ್ದಾರೆ. 1903ರಲ್ಲಿ ನೇಪಾಳದ ಪ್ರಧಾನಿಯ ಅಧಿಕೃತ ನಿವಾಸವಾಗಿ ಈ ಅರಮನೆಯನ್ನ ನಿರ್ಮಿಸಲಾಗಿತ್ತು. ಬಳಿಕ ಐತಿಹಾಸಿಕ ಅರಮನೆಯಾಗಿ ಗುರುತಿಸಿಕೊಂಡಿದ್ದ ಈ ಅರಮನೆಯನ್ನ ಪ್ರವಾಸಿ ತಾಣವಾಗಿಯೂ ಮಾಡಲಾಗಿತ್ತು. ಇದೀಗ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿದ್ದಲ್ಲದೇ ಇದ್ದಬದ್ದ ವಸ್ತುಗಳೆಲ್ಲವನ್ನು ಲೂಟಿ ಮಾಡಿದೆ. ಇದನ್ನೂ ಓದಿ: Video Viral | ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗಲೇ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ

    ನೇಪಾಳದಲ್ಲಿ ಅರಾಜಕತೆ ಸೃಷ್ಟಿಗೆ ಕಾರಣವೇನು?
    * ಸಾಮಾಜಿಕ ಜಾಲತಾಣಗಳ ನಿರ್ಬಂಧ ಹೋರಾಟ ನೆಪವಷ್ಟೇ
    * ಕೆಪಿ ಶರ್ಮಾ ಓಲಿ ಸಮ್ಮಿಶ್ರ ಸರ್ಕಾರ ವಿರುದ್ಧ ಇದ್ದ ಅಸಮಾಧಾನ
    * ಭ್ರಷ್ಟಾಚಾರ, ಪಾರದರ್ಶಕತೆ ಕೊರತೆ ಆರೋಪ
    * ಯುವಕರಿಗೆ ಉದ್ಯೋಗಾವಕಾಶಗಳ ಕೊರತೆ
    * ಆರ್ಥಿಕ ಅಭಿವೃದ್ಧಿಯಲ್ಲಿನ ಅಸಮಾನತೆ ಬಗ್ಗೆ ಟೀಕೆ

    ನೇಪಾಳದ ಆಡಳಿತ ವಹಿಸಿಕೊಂಡ ಸೇನೆ
    ಇನ್ನೂ ನೇಪಾಳದಲ್ಲಿ ಮೂರನೇ ದಿನವೂ ಪ್ರತಿಭಟನೆ ನಿಲ್ಲದ ಹಿನ್ನೆಲೆ ಸೇನೆಯು ಆಡಳಿತವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಶಿಗ್ಡೆಲ್ ಆಡಳಿತ ವಹಿಸಿಕೊಂಡಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೆ ಅಶೋಕ್ ರಾಜ್ ಶಿಗ್ಡೆಲ್ ನೇತೃತ್ವದಲ್ಲೇ ಆಡಳಿತ ನಡೆಯಲಿದೆ. ನೇಪಾಳದ ಸ್ವಾತಂತ್ರ್ಯ, ಸಾರ್ವಭೌಮತ್ವ, ರಾಷ್ಟ್ರೀಯ ಏಕತೆ, ನೇಪಾಳಿಗರ ಸುರಕ್ಷತೆ ಕಾಪಾಡಲು ಬದ್ಧ ಅಂತ ಅಶೋಕ್‌ ರಾಜ್‌ ಶಿಗ್ಡೆಲ್ ಹೇಳಿದ್ದಾರೆ.

  • ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ

    ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ

    – ಕನ್ನಡಿಗರಿಂದ ಪ್ರವಾಸಿ ಮಂದಿರಕ್ಕೆ ಉದ್ರಿಕ್ತರಿಂದ ಬೆಂಕಿ
    – ಕಠ್ಮಂಡು ನಗರ ಸುತ್ತುವರಿದ ಸೇನೆ, ಕರ್ಫ್ಯೂ ಜಾರಿ

    ಬೆಂಗಳೂರು: ನೇಪಾಳದಲ್ಲಿ (Nepal) ಭುಗಿಲೆದ್ದ ಪ್ರತಿಭಟನೆಯಿಂದ ದೇಶಾದ್ಯಂತ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ (Shalini Rajneesh) ಅವರಿಗೆ ಸೂಚನೆ ನೀಡಿದ್ದಾರೆ.

    ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ಸದ್ಯ ಕನ್ನಡಿಗರು ನೇಪಾಳದಲ್ಲಿ ಸಿಲುಕಿರುವ ಸುರಕ್ಷಿತವಾಗಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ (Kannadigas) ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

    ಸೇನೆಯಿಂದ ಕರ್ಫ್ಯೂ ಜಾರಿ
    ನೇಪಾಳದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ ಸೇನೆ ಕಾರ್ಯಾಚರಣೆಗೆ ಇಳಿದಿದೆ. ಕಠ್ಮಂಡು ನಗರವನ್ನ ನೇಪಾಳಿ ಸೇನೆ (Nepali Army) ಸುತ್ತುವರಿದಿದ್ದು, ರಾಜಧಾನಿಯಾದ್ಯಂತ ಕರ್ಫ್ಯೂ ಜಾರಿಗೊಳಿಸಿದೆ. ನಾಳೆ ಬೆಳಗ್ಗೆ 6 ಗಂಟೆವರೆಗೆ ಜನರು ರಸ್ತೆಗಿಳಿಯದಂತೆ ಸೂಚನೆ ನೀಡಿದೆ. ಜೊತೆಗೆ ಪ್ರವಾಸಿಗರು ಉಳಿದುಕೊಂಡಿರುವ ಹೊಟೇಲ್, ಲಾಡ್ಜ್ ಆವರಣದ ಗೇಟ್‌ಗಳನ್ನ ಕೂಡಲೇ ಬಂದ್‌ ಮಾಡುವಂತೆ ಸೂಚನೆ ನೀಡಿದೆ. ಇದರೊಂದಿಗೆ ಹಿಂದೂ ದೇವಾಲಯದ ಬಳಿಯೂ ಬಿಗಿ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಉದ್ರಿಕ್ತರಿಂದ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

    ಆನೇಕಲ್‌ನಿಂದ ಪ್ರವಾಸ ಹೊರಟಿದ್ದ ಕನ್ನಡಿಗರಿಗೆ ಸಂಕಷ್ಟ
    ಆನೇಕಲ್‌ ಸೇರಿದಂತೆ ಬೇರೆ ಬೇರೆ ಏರಿಯಾಗಳಿಂದ ಹೊರಟ್ಟಿದ್ದ 27 ಜನರ ಕನ್ನಡಿಗರ ತಂಡವೂ ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಟ್ರಾವೆಲ್ಸ್‌ ಮೂಲಕ ಪ್ರವಾಸ ಹೊರಟಿದ್ದ ತಂಡ ಶನಿವಾರ ವಾಪಸ್‌ ಬರುವ ನಿರೀಕ್ಷೆಯಲ್ಲಿದೆ, ಫ್ಲೈಟ್‌ ಕೂಡ ಬುಕಿಂಗ್‌ ಮಾಡಲಾಗಿದೆ. ಆದ್ರೆ ಸೇನೆಯಿಂದ ಕರ್ಫ್ಯೂ ಜಾರಿಯಾದ ಹಿನ್ನೆಲೆ ಪರಿಸ್ಥಿತಿ ನಿಯಂತ್ರಣಕ್ಕೆ ಬರೋವರೆಗೆ ಅಲ್ಲಿಂದ ಹೊರಡುವುದು ಕಷ್ಟಸಾಧ್ಯವಾಗುತ್ತದೆ ಎಂದು ಕನ್ನಡಿಗರು ಗೋಳಿಟ್ಟಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

    ಭುಗಿಲೆದ್ದ ಪ್ರವಾಸಿಗರು ಉಳಿದುಕೊಂಡಿದ್ದ ಬಿಲ್ಡಿಂಗ್‌ಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಸುತ್ತಮುತ್ತ ನಾಲ್ಕು ಕಡೆ ಬೆಂಕಿ ಹಚ್ಚಿರೋದ್ರಿಂದ ಕನ್ನಡಿಗರು ಜೀವ ಭಯದಲ್ಲಿದ್ದಾರೆ. ಸದ್ಯ ಈ ಪ್ರವಾಸಿ ತಂಡದೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ, ನಗರ ಪೊಲೀಸ್ ಆಯುಕ್ತ ಸಿಮಂತ್ ಕುಮಾರ್‌ ಸಿಂಗ್ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿ ಕರೆತರುವ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

    ಅಷ್ಟೇ ಅಲ್ಲದೇ ಇನ್ನೂ ಕೆಲ ಪ್ರವಾಸಿ ತಂಡಗಳು ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

  • ನೇಪಾಳ ಪ್ರಧಾನಿ ಹುದ್ದೆ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ

    ನೇಪಾಳ ಪ್ರಧಾನಿ ಹುದ್ದೆ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ

    ಕಠ್ಮಂಡು: ಸೋಷಿಯಲ್ ಮೀಡಿಯಾ ಬ್ಯಾನ್‌ನಿಂದಾಗಿ ಶುರುವಾದ ದಂಗೆಯ ಬೆನ್ನಲ್ಲೇ ರಾಜೀನಾಮೆ ನೀಡಿರುವ ನೇಪಾಳದ ಪ್ರಧಾನಿ ಓಲಿ ಸ್ಥಾನಕ್ಕೆ ಇದೀಗ ಕರ್ನಾಟಕದ ಎಂಟೆಕ್ ಪದವೀಧರನಾಗಿರುವ ರ‍್ಯಾಪರ್ ಬಲೇನ್ ಶಾ ಹೆಸರು ಜೋರಾಗಿ ಕೇಳಿ ಬರುತ್ತಿದೆ.

    ನೇಪಾಳದಲ್ಲಿ ಹೊಸತಲೆಮಾರಿನ ಯುವಜನ (GEN-Z) ದಂಗೆಯಿಂದಾಗಿ ನೇಪಾಳದ (Nepal) ಪ್ರಧಾನಿ ಸ್ಥಾನಕ್ಕೆ ಸೆ.9ರಂದು ಕೆ.ಪಿ.ಶರ್ಮಾ ಓಲಿ (KP Sharma Oli) ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಎಂಟೆಕ್ ಪದವೀಧರ ಪಿಎಂ ರೇಸ್‌ನಲ್ಲಿದ್ದಾರೆ ಎನ್ನಲಾಗುತ್ತಿದೆ.ಇದನ್ನೂ ಓದಿ: ನೇಪಾಳ ಧಗ ಧಗ – ಉದ್ರಿಕ್ತರಿಂದ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

    ಸದ್ಯ ನೇಪಾಳದ ರಾಜಧಾನಿ ಕಠ್ಮಂಡುವಿನ ಮೇಯರ್ ಆಗಿರುವ ಬಲೇನ್ ಅಲಿಯಾಸ್ ಬಲೇಂದ್ರಗೆ ಯುವಜನರ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಬಲೇನ್ ಅವರೇ ಮುಂದಿನ ಪ್ರಧಾನಿ ಆಗಬೇಕು, ಯುವಜನರ ಆಶೋತ್ತರ ಈಡೇರಿಸಲು ಅವರೇ ಸೂಕ್ತ ಎಂಬ ಒತ್ತಾಯ ಜಾಲತಾಣದಲ್ಲಿ ಕೇಳಿಬರುತ್ತಿದೆ. ಇವರ ಜೊತೆಗೆ ಸಂಸದೆ ಸುಮನಾ ಶ್ರೇಷ್ಠ ಅವರ ಹೆಸರೂ ಕೂಡ ಮುನ್ನೆಲೆಗೆ ಬಂದಿದೆ.

    ಸದ್ಯ 35 ವರ್ಷದ ಬಲೇಂದ್ರ ಅವರ ಪರವಾಗಿ ಆನ್‌ಲೈನ್‌ನಲ್ಲಿ ದೇಶಾದ್ಯಂತ ದೊಡ್ಡಮಟ್ಟದ ಕ್ಯಾಂಪೇನ್ ನಡೆಯುತ್ತಿದೆ. ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಯುವಜನರು ಯುವ ಮುಖವೊಂದನ್ನು ದೇಶದ ಪ್ರಧಾನಿ ಸ್ಥಾನದಲ್ಲಿ ತಂದು ಕೂರಿಸುವ ಬೇಡಿಕೆ ಇಡುತ್ತಿದ್ದಾರೆ.

    ಬಲೇನ್ ಹಿನ್ನೆಲೆ ಏನು?
    1990ರಲ್ಲಿ ಜನಿಸಿರುವ ಬಲೇನ್ ಅವರು ಎಂಜಿನಿಯರಿಂಗ್ ಪದವೀಧರ. ಕಠ್ಮಂಡುವಿನಲ್ಲಿ ಎಂಜಿನಿ ಯರಿಂಗ್ ಮುಗಿಸಿ ಅವರು, ಬಳಿಕ ಕರ್ನಾಟಕದ ಬೆಳಗಾವಿಯಲ್ಲಿ ಕೇಂದ್ರ ಸ್ಥಾನ ಹೊಂದಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಸ್ಟçಕ್ಚರಲ್ ಎಂಜಿನಿಯರಿAಗ್‌ನಲ್ಲಿ ಎಂಟೆಕ್ ಪದವಿ ಪಡೆದಿದ್ದಾರೆ.

    ರಾಜಕೀಯಕ್ಕೆ ಕಾಲಿಡುವ ಮೊದಲು ಶಾ ನೇಪಾಳದ ಭೂಗತ ಹಿಪ್ ಆಫ್‌ನಲ್ಲಿದ್ದು ಸದ್ದು ಮಾಡಿದವರು. ರ‍್ಯಾಪರ್ ಆಗಿ, ಸಾಹಿತಿಯಾಗಿ ಯುವಜನರ ಗಮನಸೆಳೆದವರು. ಬಳಿಕ 2022ರಲ್ಲಿ ಕಠ್ಮಂಡು ಮೇಯರ್ ಚುನಾವಣೆಗೆ ಸ್ಪರ್ಧಿಸಿ ಸಿಪಿಎನ್ (ಯುಎಂಎಲ್) ಅಭ್ಯರ್ಥಿ ವಿರುದ್ಧ 61,000 ಮತಗಳ ಅಂತರದಿಂದ ಗೆದ್ದಿದ್ದರು. ನೇಪಾಳಿ ರ‍್ಯಾಪ್ ಬ್ಯಾಟಲ್ ಲೀಗ್‌ನ 2ನೇ ಆವೃತ್ತಿಯ ವಿನ್ನರ್ ಕೂಡ ಆಗಿರುವ ಬಲೇಂದ್ರ ಸಾಮಾಜಿಕ ಜಾತಾಣದಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ.ಇದನ್ನೂ ಓದಿ: ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

  • ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

    ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

    – ಮಾಜಿ ಪ್ರಧಾನಿ ಮೇಲೂ ಹಲ್ಲೆ, ಹಾಲಿ ಪ್ರಧಾನಿ ಜೊತೆ 4 ಮಂತ್ರಿಗಳೂ ರಾಜೀನಾಮೆ

    ಕಠ್ಮಂಡು: ಭ್ರಷ್ಟಚಾರ, ಸೋಷಿಯಲ್‌ ಮೀಡಿಯಾ ನಿಷೇಧದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಉದ್ರಿಕ್ತರು ನೇಪಾಳದ ಹಣಕಾಸು ಸಚಿವನಿಗೆ (Finance Minister) ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮೊದಲು ಮನೆ ಮೇಲೆ ಹಲ್ಲೆ ನಡೆಸಿದ ಪ್ರತಿಭಟನಾಕಾರು ಬಳಿಕ ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ.

    ಮಂಗಳವಾರ ಹಣಕಾಸು ಸಚಿವ ಬಿಷ್ಣು ಪ್ರಸಾದ್ ಪೌಡೆಲ್‌ರನ್ನ (Bishnu Prasad Paudel) ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಪ್ರತಿಭಟನಾಕಾರರು ಥಳಿಸಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    29 ಸೆಕೆಂಡುಗಳ ವಿಡಿಯೋನಲ್ಲಿ ಬಿಷ್ಣು ಪ್ರಸಾದ್‌ ಜೀವ ಉಳಿಸಿಕೊಳ್ಳಲು ಓಡೋಡಿ ಹೋಗ್ತಿದ್ದ ದೃಶ್ಯ ಕಂಡುಬಂದಿದೆ. ಉದ್ರಿಕ್ತರು ಮನೆಗೆ ಮುತ್ತಿಗೆ ಹಾಕ್ತಿದ್ದಂತೆ ಸಚಿವರು ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದಾರೆ. ಕಾಂಪೌಂಡ್‌ನಿಂದ ಆಚೆ ಬರ್ತಿದ್ದಂತೆ ಕುತ್ತಿಗೆಪಟ್ಟಿ ಹಿಡಿದು ಎಳೆದಾಡಿದ್ದಾರೆ. ಅವರಿಂದ ತಪ್ಪಿಸಿಕೊಂಡು ಓಡ್ತಿದ್ದಂತೆ ಮತ್ತೊಬ್ಬ ಫಿಲ್ಮಿ ಸ್ಟೈಲ್‌ನಲ್ಲಿ ಜಂಪ್‌ ಮಾಡಿ ಜಾಡಿಸಿ ಒದ್ದಿದ್ದಾನೆ. ಬಳಿಕ ಅಲ್ಲೇ ಇದ್ದ ಮತ್ತೊಂದು ಗುಂಪು ಅವರನ್ನು ರಕ್ಷಣೆ ಮಾಡಿ ಕರೆದೊಯ್ದಿದೆ. ಈ ದೃಶ್ಯಗಳು 29 ಸೆಕೆಂಡುಗಳ ವಿಡಿಯೋನಲ್ಲಿ ಸೆರೆಯಾಗಿದೆ.

    ಮಾಜಿ ಪ್ರಧಾನಿಗೂ ಗೂಸಾ
    ನೇಪಾಳ ಹಿಂಸಾತ್ಮಕ ಪ್ರತಿಭಟನೆ ವೇಳೆ ಹಣಕಾಸು ಸಚಿವೆ ಅರ್ಜು ರಾಣಾ ದೇವುಬಾ ಅವರ ಪತಿ ಶೇರ್ ಬಹದ್ದೂರ್ ದೇವುಬಾ ಮೇಲೂ ಹಲ್ಲೆ ನಡೆದಿದೆ. ಸರ್ಕಾರಿ ಸಂಕೀರ್ಣಗಳು, ಸಂಸತ್ತು ಮತ್ತು ಹಿರಿಯ ರಾಜಕೀಯ ನಾಯಕರ ಮನೆಗಳ ಮೇಲೂ ಉದ್ರಿಕ್ತರ ಗುಂಪು ದಾಳಿ ನಡೆಸಿವೆ. ಈ ಬೆನ್ನಲ್ಲೇ ನೇಪಾಳ ಸಚಿವರ ರಕ್ಷಣೆಗೆ ಮೂರು ಹೆಲಿಕಾಪ್ಟರ್‌ಗಳನ್ನ ನಿಯೋಜನೆ ಮಾಡಲಾಗಿದೆ.

    ಪ್ರಧಾನಿ ಜೊತೆಗೆ ನಾಲ್ವರು ಸಚಿವರ ರಾಜೀನಾಮೆ
    ಇಂದು ಮುಂಜಾನೆ ಉದ್ರಿಕ್ತಗೊಂಡ ಪ್ರತಿಭಟನಾಕಾರರು ಪ್ರಧಾನಿ ಕೆಪಿ ಶರ್ಮಾ ಓಲಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಈ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಓಲಿ ರಾಜೀನಾಮೆ ನೀಡಿದ್ದಾರೆ. ಪ್ರಧಾನಿಗಳೊಂದಿಗೆ ನಾಲ್ವರು ಸಚಿವರೂ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

    ಇನ್ನೂ ಅತಿಯಾದ ಭ್ರಷ್ಟಾಚಾರ, ಸೋಷಿಯಲ್‌ ಮೀಡಿಯಾ ಮೇಲಿನ ನಿಷೇಧ ವಿರೋಧಿಸಿ ನೇಪಾಳದಾದ್ಯಂತ ಭುಗಿಲೆದ್ದಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯಲ್ಲಿ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 19 ಮಂದಿ ಸಾವು – ನೇಪಾಳ ಗೃಹ ಸಚಿವ ರಾಜೀನಾಮೆ

  • ನೇಪಾಳದ ಏರ್‌ಪೋರ್ಟ್ ಬಳಿ ಹೊಗೆ ಕಂಡು ದೆಹಲಿಗೆ ವಾಪಸಾದ  ವಿಮಾನ – ಏರ್‌ ಇಂಡಿಯಾ, ಇಂಡಿಗೋ ಹಾರಾಟ ರದ್ದು

    ನೇಪಾಳದ ಏರ್‌ಪೋರ್ಟ್ ಬಳಿ ಹೊಗೆ ಕಂಡು ದೆಹಲಿಗೆ ವಾಪಸಾದ ವಿಮಾನ – ಏರ್‌ ಇಂಡಿಯಾ, ಇಂಡಿಗೋ ಹಾರಾಟ ರದ್ದು

    – ಭಾರತೀಯರಿಗೆ ಮನೆಯಿಂದ ಹೊರಬರದಂತೆ ಕೇಂದ್ರದ ಎಚ್ಚರಿಕೆ

    ನವದೆಹಲಿ: ನೇಪಾಳದಲ್ಲಿ (Nepal) ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ಕಠ್ಮಂಡುವಿನ (Kathmandu) ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದರಿಂದಾಗಿ ದೆಹಲಿಯಿಂದ ತೆರಳಬೇಕಿದ್ದ ಏರ್‌ ಇಂಡಿಯಾ (Air India), ಇಂಡಿಗೋ (IndiGo) ಹಾಗೂ ನೇಪಾಳ ಏರ್‌ಲೈನ್ಸ್‌ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

    ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ್ದಕ್ಕೆ ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, 19ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. ಕಠ್ಮಂಡುವಿನಲ್ಲಿ ಪ್ರಸ್ತುತ ಇರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ-ಕಠ್ಮಂಡು ಮಾರ್ಗದಲ್ಲಿ ಕಾರ್ಯನಿರ್ವಹಿಸುವ AI2231/2232, AI2219/2220, AI217/218 ಮತ್ತು AI211/212 ವಿಮಾನಗಳನ್ನು ಇಂದು (ಸೆ.9) ರದ್ದುಗೊಳಿಸಲಾಗಿದೆ. ಏನಾದರೂ ಬದಲಾವಣೆಗಳಾದರೆ ಮಾಹಿತಿ ಹಂಚಿಕೊಳ್ಳುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ಇಂದು ವಿಮಾನ ಕಠ್ಮಂಡುವಿಗೆ ತೆರಳಿದ್ದ ಏರ್‌ ಇಂಡಿಯಾ ವಿಮಾನ, ನಿಲ್ದಾಣದ ಸಮೀಪ ಹೊಗೆ ಕಂಡುಬಂದ ಕಾರಣ ದೆಹಲಿಗೆ ವಾಪಸ್‌ ಆಗಿತ್ತು ಎಂದು ಮೂಲಗಳು ತಿಳಿಸಿವೆ. ದೆಹಲಿ ಮತ್ತು ಕಠ್ಮಂಡು ನಡುವೆ ದಿನಕ್ಕೆ ಆರು ಏರ್ ಇಂಡಿಯಾ ವಿಮಾನಗಳು ಸಂಚರಿಸುತ್ತವೆ.

    ಭಾರತ ನೇಪಾಳ ಗಡಿಯಲ್ಲಿ ಬಿಗಿ ಭದ್ರತೆ
    ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ, ನೇಪಾಳದಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಅನಗತ್ಯವಾಗಿ ಹೊರಗೆ ಬರದಂತೆ ಸಲಹೆ ನೀಡಿದೆ. ಸರ್ಕಾರದ ಸೂಚನೆಗಳನ್ನು ಪಾಲಿಸಿ ಎಂದು ಸೂಚನೆ ನೀಡಿದೆ. ಇನ್ನೂ ಈ ಹಿಂಸಾಚಾರದಿಂದ ಪಶ್ಚಿಮ ಬಂಗಾಳದ ಬಳಿಯ ಪಣಿಟಾಂಕಿಯಲ್ಲಿ ಭಾರತ-ನೇಪಾಳ ಗಡಿಯಲ್ಲಿ ಅಶಾಂತಿ ಉಂಟಾಗಬಹುದೆಂದು ವರದಿಯಾಗಿದೆ. ಈ ಹಿನ್ನೆಲೆ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

    ನೇಪಾಳದಲ್ಲಿ (Nepal) ಯುವ ಜನತೆಯ ಪ್ರತಿಭಟನೆ (Protest) ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ (KP Sharma Oli) ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದರು. ಬಿಗಿಪಟ್ಟು ಹಿಡಿದ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ:  ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

  • ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

    ಕಠ್ಮಂಡು: ನೇಪಾಳದಲ್ಲಿ(Nepal)  ಯುವ ಜನತೆಯ ಪ್ರತಿಭಟನೆ (Protest) ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ.

    ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ (KP Sharma Oli) ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಬಿಗಿಪಟ್ಟು ಹಿಡಿದ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ:  ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

    ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್‌ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಇಳಿದಿದೆ.

    ನೇಪಾಳದ ಎಲ್ಲಾ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ದೇಶಿಯ ವಿಮಾನಗಳ ಹಾರಾಟ ಸಂಪೂರ್ಣ ಸ್ಥಗಿತವಾಗಿದೆ.

  • ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

    ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

    ಕಠ್ಮಂಡು: ನೇಪಾಳದಲ್ಲಿ (Nepal) ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ (Social Media) ಮೇಲೆ ಅಲ್ಲಿನ ಸರ್ಕಾರ ಹೇರಿದ ನಿರ್ಬಂಧವನ್ನು ಹಿಂದಕ್ಕೆ ಪಡೆದಿದೆ. ನಿಷೇಧವನ್ನು ಹಿಂಪಡೆಯುವಂತೆ ಭಾರೀ ಪ್ರತಭಟನೆ ನಡೆದ ಬೆನ್ನಲ್ಲೇ ಸರ್ಕಾರ ಈ ಘೋಷಣೆ ಮಾಡಿದೆ.

    ಸಚಿವ ಸಂಪುಟದ ತುರ್ತು ಸಭೆ ಕರೆದು ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಾಸ್ ಪಡೆಯಲಾಗಿದೆ. ಇನ್ನು ಮುಂದೆ ಎಂದಿನಂತೆ ಸೋಷಿಯಲ್ ಮೀಡಿಯಾ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ನೇಪಾಳದ ಸಂವಹನ, ಮಾಹಿತಿ ಮತ್ತು ಪ್ರಸಾರ ಸಚಿವ ಪೃಥ್ವಿ ಸುಬ್ಬಾ ಗುರುಂಗ್ (Prithvi Subba Gurung) ತಿಳಿಸಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು; ಹಿಂಸಾಚಾರಕ್ಕೆ 9 ಬಲಿ

    ನೇಪಾಳ ಸರ್ಕಾರವು ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿದಂತೆ 26 ಸಾಮಾಜಿಕ ತಾಣಗಳ ಮೇಲೆ ನಿಷೇಧ ಹೇರಿತ್ತು. ಸಾಮಾಜಿಕ ಜಾಲತಾಣಗಳ ನೋಂದಣಿ ಕಡ್ಡಾಯ ಎಂಬ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ತೆಗೆದುಕೊಂಡಿತ್ತು. ಆದರೆ ಯಾವುದೇ ಸಾಮಾಜಿಕ ಜಾಲತಾಣಗಳು ನೋಂದಣಿಯಾಗದ ಹಿನ್ನೆಲೆ ನೇಪಾಳ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿತ್ತು.

    ಸರ್ಕಾರದ ಈ ನಿರ್ಧಾರದ ವಿರುದ್ಧ ಅಲ್ಲಿನ ಜನರು ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರತಿಭಟನಾಕಾರರ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ನೇಪಾಳ ಸರ್ಕಾರ ಈ ನಿಷೇಧವನ್ನು ವಾಪಾಸ್ ಪಡೆದಿದೆ.

  • ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 19 ಮಂದಿ ಸಾವು – ನೇಪಾಳ ಗೃಹ ಸಚಿವ ರಾಜೀನಾಮೆ

    ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 19 ಮಂದಿ ಸಾವು – ನೇಪಾಳ ಗೃಹ ಸಚಿವ ರಾಜೀನಾಮೆ

    ಕಠ್ಮಂಡು: ನೇಪಾಳ ಗೃಹ ಸಚಿವ ರಮೇಶ್‌ ಲೇಖಕ್‌ (Ramesh Lekhak) ತಮ್ಮ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ.

    ಫೇಸ್‌ಬುಕ್‌, ಎಕ್ಸ್‌, ಯೂಟ್ಯೂಬ್‌ ನಿಷೇಧಿಸಿರುವುದನ್ನು ವಿರೋಧಿಸಿ ನೇಪಾಳದಾದ್ಯಂತ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಸ್ಥಾನಕ್ಕೆ ರಮೇಶ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು; ಹಿಂಸಾಚಾರಕ್ಕೆ 9 ಬಲಿ

    ಸೋಮವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಅವರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

    ಸಾಮಾಜಿಕ ಮಾಧ್ಯಮ ಮೇಲಿನ ಸರ್ಕಾರದ ನಿರ್ಬಂಧ ಮತ್ತು ಆಡಳಿತ ಸಮಸ್ಯೆಗಳ ವಿರುದ್ಧ ಭುಗಿಲೆದ್ದ ಪ್ರತಿಭಟನೆಗಳು, ಕಠ್ಮಂಡು ಸೇರಿದಂತೆ ಅನೇಕ ನಗರಗಳಲ್ಲಿ ಮಾರಕವಾಗಿ ಪರಿಣಮಿಸಿವೆ.

    ಇದಕ್ಕೂ ಮುನ್ನ, ಲೇಖಕ್ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಪ್ರತಿಭಟನೆಗಳನ್ನು ನಿರ್ವಹಿಸಿದ ರೀತಿಗೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಸಾರ್ವಜನಿಕ ಮತ್ತು ರಾಜಕೀಯ ಟೀಕೆಗಳನ್ನು ಎದುರಿಸುತ್ತಿರುವ ಅವರು, ಇಂತಹ ದುರಂತದ ನಡುವೆಯೂ ಅಧಿಕಾರದಲ್ಲಿ ಮುಂದುವರಿಯುವುದು ಅನೈತಿಕ ಎಂದು ಅಭಿಪ್ರಾಯಪಟ್ಟಿದ್ದರು.

  • ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು; ಹಿಂಸಾಚಾರಕ್ಕೆ 9 ಬಲಿ

    ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು; ಹಿಂಸಾಚಾರಕ್ಕೆ 9 ಬಲಿ

    – ಬೀದಿಗಿಳಿದು ಬೃಹತ್‌ ಪ್ರತಿಭಟನೆ

    ಕಠ್ಮಂಡು: ಭ್ರಷ್ಟಾಚಾರ ಹಾಗೂ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಸರ್ಕಾರದ ವಿರುದ್ಧ ನೇಪಾಳದ (Nepal) ಜನತೆಗೆ ತಿರುಗಿಬಿದ್ದಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

    ಪ್ರತಿಭಟನಾಕಾರರು ಬೀದಿಗಿಳಿದಾಗ ನಡೆದ ಹಿಂಸಾತ್ಮಕ ಘರ್ಷಣೆಗಳಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ

    ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದರು. ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡು ಸಿಡಿಸಿದರು. ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ.

    ಮುಖ್ಯ ಜಿಲ್ಲಾ ಅಧಿಕಾರಿ ಛಬಿಲಾಲ್ ರಿಜಾಲ್ ಪ್ರಕಾರ, ಕರ್ಫ್ಯೂ ಮಧ್ಯಾಹ್ನ 12:30 ರಿಂದ ರಾತ್ರಿ 10:00 ರವರೆಗೆ (ಸ್ಥಳೀಯ ಸಮಯ) ಜಾರಿಯಲ್ಲಿದೆ. ಈ ವಲಯಗಳಲ್ಲಿ ಸಾರ್ವಜನಿಕರ ಓಡಾಟ, ಸಭೆ ಸೇರುವುದು, ಪ್ರತಿಭಟನೆಗಳು ಅಥವಾ ಸುತ್ತುವರಿದ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದನ್ನೂ ಓದಿ: ಇಸ್ರೇಲಿನ ಜೆರುಸಲೇಂನಲ್ಲಿ ಉಗ್ರರ ದಾಳಿ – ಕನಿಷ್ಠ 5 ಬಲಿ, ಹಲವು ಮಂದಿಗೆ ಗಾಯ

    ನೇಪಾಳ ಸರ್ಕಾರ ನೋಂದಾಯಿತ 26 ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿದೆ. ಇಲ್ಲಿನ ಜನತೆಗೆ ಯೂಟ್ಯೂಬ್‌, ಎಕ್ಸ್‌, ಫೇಸ್‌ಬುಕ್‌ ಸೈಟ್‌ಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದು ಬಳಕೆದಾರರ ಆಕ್ರೋಶ ಕಾರಣವಾಗಿದೆ. ಇನ್‌ಸ್ಟಾಗ್ರಾಮ್‌ನಂತಹ ಜನಪ್ರಿಯ ಪ್ಲಾಟ್‌ಫಾರ್ಮ್‌ಗಳು ನೇಪಾಳದಲ್ಲಿ ಲಕ್ಷಾಂತರ ಬಳಕೆದಾರರನ್ನು ಹೊಂದಿದೆ.

    ಸರ್ಕಾರದ ಕ್ರಮವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಯುವ ನೇಪಾಳಿಗಳು ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿ, ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು. ದೇಶವನ್ನು ವ್ಯಾಪಿಸಿರುವ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.