Tag: ನೇಪಾಳ

  • ನೇಪಾಳದಲ್ಲಿ ಭೂಕುಸಿತ – 14 ಸಾವು, 10 ಮಂದಿ ನಾಪತ್ತೆ

    ನೇಪಾಳದಲ್ಲಿ ಭೂಕುಸಿತ – 14 ಸಾವು, 10 ಮಂದಿ ನಾಪತ್ತೆ

    ಕಠ್ಮಂಡು: ಭಾರೀ ಮಳೆಯಿಂದಾಗಿ ಪಶ್ಚಿಮ ನೇಪಾಳದಲ್ಲಿ(Nepal) ಭೂಕುಸಿತ(Landslide) ಉಂಟಾಗಿದ್ದು, ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ. 7 ಮಂದಿಗೆ ಗಾಯಗಳಾಗಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

    ನೇಪಾಳದ ರಾಜಧಾನಿ ಕಠ್ಮಂಡುವಿನ(Kathmandu) ಪಶ್ಚಿಮಕ್ಕೆ ಸುಮಾರು 450 ಕಿ.ಮೀ ದೂರದಲ್ಲಿರುವ ಅಚ್ಚಾಮ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಹಲವಾರು ಮನೆಗಳು ಮಣ್ಣಿನಡಿ ಹೂತುಹೋಗಿವೆ ಎನ್ನಲಾಗಿದೆ. ಅವಶೇಷಗಳಿಂದ ಮೃತದೇಹ ಹಾಗೂ ಗಾಯಾಳುಗಳನ್ನು ಹೊರ ತೆಗೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಾನ್‍ವೆಜ್ ಊಟಕ್ಕೆಂದು ಬಂದವರಿಗೆ ಗೋಮಾಂಸ ಸರ್ವ್ – ಹೋಟೆಲ್ ಮಾಲೀಕ ಅರೆಸ್ಟ್

    ನಾಪತ್ತೆಯಾಗಿರುವವರ ಪತ್ತೆಗೆ ರಕ್ಷಣಾ ಸಿಬ್ಬಂದಿ ಹುಡುಕಾಟ ಮುಂದುವರಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.

    ಬೆಟ್ಟ ಪ್ರದೇಶವಾಗಿರುವ ನೇಪಾಳದಲ್ಲಿ ಆಗಾಗ ಭೂಕುಸಿತಗಳು ಉಂಟಾಗುತ್ತಲೇ ಇರುತ್ತವೆ. ಅದರಲ್ಲೂ ಜೂನ್ ಇಂದ ಸೆಪ್ಟೆಂಬರ್ ವರೆಗೆ ಭೂಕುಸಿತಗಳು ಹೆಚ್ಚಾಗಿ ಉಂಟಾಗುತ್ತವೆ. ಅಂಕಿ ಅಂಶಗಳ ಪ್ರಕಾರ ಈ ವರ್ಷ ಪ್ರವಾಹ ಹಾಗೂ ಭೂಕುಸಿತಗಳಿಂದಾಗಿ ನೇಪಾಳದಲ್ಲಿ 46 ಜನರು ಸಾವನ್ನಪ್ಪಿದ್ದು, 12 ಜನರು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಹಳೆಯ ಬಾವಿಯೊಳಗೆ ಉಸಿರುಗಟ್ಟಿ ನಾಲ್ವರ ಸಾವು

    Live Tv
    [brid partner=56869869 player=32851 video=960834 autoplay=true]

  • ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಬಡ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯ ಕಶ್ಯಪ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

    ನಿರ್ಮಾಪಕ ಜಾಕ್ ಮಂಜು ಚಿತ್ರದ ರಿಲೀಸ್ ಕುರಿತು ಮಾತನಾಡಿ 27ರಂದು ಪ್ರಪಂಚದ 27ದೇಶಗಳಲ್ಲಿ ಪ್ರಿವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನಿನ್ನೆಯಷ್ಟೇ ನೇಪಾಳ ಕನ್‌ಫರ್ಮ್ ಆಯ್ತು, ಅಲ್ಲದೆ ಪಾಕಿಸ್ತಾನದಲ್ಲೂ ವಿಕ್ರಾಂತ್‌ ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದೆ, ಕರ್ನಾಟಕದಲ್ಲೇ 400ರಿಂದ 420 ಥೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ಅಲ್ಲದೆ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಾಳೆ, ನಾಡಿದ್ದು ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಇದನ್ನೂ ಓದಿ:10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    ಈಗಾಗಲೇ ರಿಲೀಸಾಗಿರುವ ಟ್ರೈಲರ್ ಜೊತೆಗೆ ಹಾಡುಗಳಂತೂ ಒಂದಕ್ಕಿಂತ ಒಂದು ಹೆಚ್ಚಾಗಿ ವೈರಲ್ ಆಗಿವೆ. ಅದರಲ್ಲೂ ಯಾರ ಮೊಬೈಲ್‌ನಲ್ಲಿ ನೋಡಿದರೂ ರಾರಾ.. ರಕ್ಕಮ್ಮ ಹಾಡಿನ ರೀಲ್ಸ್ ನದ್ದೇ  ಅಬ್ಬರ. ಈ ಹಾಡು ಅಷ್ಟೂ ಭಾಷೆಗಳಲ್ಲೂ ದೊಡ್ಡ ಕ್ರೇಜನ್ನೇ ಸೃಷ್ಟಿಸಿದೆ. ಶೇಂಗಾ.90ರಷ್ಟು 3ಡಿ ವರ್ಷನ್ ಚಿತ್ರ ರಿಲೀಸಾಗುತ್ತಿದ್ದು, 3 ಡಿ ಇಲ್ಲದ ಕಡೆ ಮಾತ್ರವೇ 2ಡಿ  ವರ್ಷನ್ ಪ್ರದರ್ಶನವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ನೇಪಾಳದಲ್ಲಿ ಮೊದಲ ಪೌರತ್ವ ತಿದ್ದುಪಡಿ ಅಂಗೀಕಾರ

    ನೇಪಾಳದಲ್ಲಿ ಮೊದಲ ಪೌರತ್ವ ತಿದ್ದುಪಡಿ ಅಂಗೀಕಾರ

    ಕಠ್ಮಂಡು: ರಾಜಕೀಯ ಒಮ್ಮತಗಳನ್ನು ರೂಪಿಸಲು ವಿಫಲವಾಗಿದ್ದ ಹಾಗೂ 2 ವರ್ಷಗಳಿಗೂ ಅಧಿಕ ಕಾಲ ಚರ್ಚೆಯಲ್ಲಿದ್ದ ದೇಶದ ಮೊದಲ ಪೌರತ್ವ ತಿದ್ದುಪಡಿ ಮಸೂದೆಯನ್ನು ನೇಪಾಳದ ಸಂಸತ್ತು ಅಂಗೀಕರಿಸಿದೆ.

    ನೇಪಾಳಿ ಪುರುಷರನ್ನು ವಿವಾಹವಾಗುವ ವಿದೇಶಿ ಮಹಿಳೆಯರು ಪೌರತ್ವವನ್ನು ಪಡೆಯಲು 7 ವರ್ಷಗಳು ಬೇಕಿತ್ತು. ಇದರಿಂದಾಗಿ ಅವರು ಶಿಕ್ಷಣ ಸೇರಿದಂತೆ ಎಲ್ಲಾ ಮೂಲಭೂತ ಸೇವೆಗಳಿಂದ ವಂಚಿತರಾಗುತ್ತಿದ್ದರು. ಈ ಎಲ್ಲದರ ಹಿನ್ನೆಲೆಯಲ್ಲಿ ಮಸೂದೆಯನ್ನು ತಿದ್ದುಪಡಿಗೊಳಿಸಬೇಕು ಎಂದು ಯೋಚಿಸಿದಾಗ ರಾಜಕೀಯ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಅದನ್ನು ಅಲ್ಲೇ ಕೈಬಿಡಲಾಗಿತ್ತು. ಇದನ್ನೂ ಓದಿ: ಭಾರೀ ಮಳೆಯಿಂದ ರೈಲು ರದ್ದು- ವಿದ್ಯಾರ್ಥಿಗೆ ಕಾರಿನ ಸೇವೆ ಒದಗಿಸಿದ ಭಾರತೀಯ ರೈಲ್ವೆ ಇಲಾಖೆ

    ಆದರೆ ಇದೀಗ ಗೃಹ ಸಚಿವ ಬಾಲಕೃಷ್ಣ ಖಂಡ್ ಅವರು ನೇಪಾಳದ ಮೊದಲ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, 2006ರಲ್ಲಿ ತಿದ್ದುಪಡಿ ಮಾಡಲು ಸಂಸತ್ತಿನಲ್ಲಿ ಮಸೂದೆಯನ್ನು ಮಂಡಲಾಗಿತ್ತು. ಅದರಂತೆ ಸಂವಿಧಾನದ ನಿರ್ದೇಶನದಂತೆ ಪೌರತ್ವವನ್ನು ಒದಗಿಸಲು ಸಹಕಾರ ನೀಡಿ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಈ ಮಸೂದೆ ಜಾರಿ ಆಯಿತು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ನೇಪಾಳದಲ್ಲಿ ಪಾನಿಪುರಿ ಮಾರಾಟ ನಿಷೇಧ

    ನೇಪಾಳದಲ್ಲಿ ಪಾನಿಪುರಿ ಮಾರಾಟ ನಿಷೇಧ

    ಕಠ್ಮಂಡು: ಲಲಿತ್‍ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನೇಪಾಳದ ಕಠ್ಮಂಡುವಿನಲ್ಲಿ ಪಾನಿಪುರಿ ಮಾರಾಟವನ್ನು ನಿಷೇಧಿಸಲಾಗಿದೆ.

    ಈ ಕುರಿತು ಅಲ್ಲಿನ ಎಲ್‍ಎಂಸಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಪಾನಿಪುರಿಯಲ್ಲಿ ಬಳಸುವ ನೀರಿನಲ್ಲಿ ಕಾಲರಾ ಬ್ಯಾಕ್ಟೀರಿಯಾ ಕಂಡುಬಂದಿದೆ. ಇದರಿಂದಾಗಿ ಪಾನಿಪುರಿ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ನೇಪಾಳದ ಆರೋಗ್ಯ ಮತ್ತು ಜನಸಂಖ್ಯೆ ಸಚಿವಾಲಯದ ಪ್ರಕಾರ, ದೇಶದಲ್ಲಿ ಒಟ್ಟು 17 ಕಾಲರಾ ರೋಗಿಗಳಿದ್ದಾರೆ. ಇದೀಗ ಕಠ್ಮಂಡುವಿನಲ್ಲಿ ಇನ್ನೂ 7 ಜನರಿಗೆ ಕಾಲರಾ ದೃಢವಾಗಿದೆ. ಈ 7 ಪ್ರಕರಣಗಳಲ್ಲಿ 5 ಪ್ರಕರಣಗಳು ಕಠ್ಮಂಡು ಮಹಾನಗರದಲ್ಲಿ ಮತ್ತು ಚಂದ್ರಗಿರಿ ಪುರಸಭೆ ಮತ್ತು ಬುಧಾನಿಲಕಂಠ ಪುರಸಭೆಯಲ್ಲಿ ತಲಾ ಒಂದು ಪ್ರಕರಣಗಳು ವರದಿ ಆಗಿದೆ. ಇದನ್ನೂ ಓದಿ:  ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್

    ಈ ಹಿನ್ನೆಲೆಯಲ್ಲಿ ಕಾಲರಾ ಹರಡುವುದನ್ನು ನಿಯಂತ್ರಿಸಲು ಪಾನಿಪುರಿ ಮಾರಾಟವನ್ನು ನಿಲ್ಲಿಸಲು ಮಹಾನಗರ ಪಾಲಿಕೆ ಸಿದ್ಧತೆಯನ್ನು ನಡೆಸಿದೆ. ಸೋಂಕಿತ ಜನರು ಪ್ರಸ್ತುತ ಟೇಕುನಲ್ಲಿರುವ ಸುಕ್ರರಾಜ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪೈಥಾನ್ ಬಳಸಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ಫುಲ್ ಕ್ಲಾಸ್

    Live Tv

  • ಡಿವೋರ್ಸ್‌ ಆಗಿದ್ದರೂ ಮಕ್ಕಳೊಂದಿಗೆ ಪ್ರವಾಸ: ವಿಮಾನ ದುರಂತದಲ್ಲಿ ನಾಲ್ವರು ಭಾರತೀಯರು ಬಲಿ

    ಡಿವೋರ್ಸ್‌ ಆಗಿದ್ದರೂ ಮಕ್ಕಳೊಂದಿಗೆ ಪ್ರವಾಸ: ವಿಮಾನ ದುರಂತದಲ್ಲಿ ನಾಲ್ವರು ಭಾರತೀಯರು ಬಲಿ

    ಕಠ್ಮಂಡು: ನೇಪಾಳ ವಿಮಾನ ಪತನಗೊಂಡ ಸ್ಥಳದಲ್ಲಿ ಇದುವರೆಗೂ 16 ಮೃತದೇಹ ಪತ್ತೆಯಾಗಿದ್ದು, ಅದರಲ್ಲಿ 4 ಮಂದಿ ಭಾರತೀಯರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

    ಅಶೋಕ್ ಕುಮಾರ್ ತ್ರಿಪಾಠಿ(54) ಮತ್ತು ಪತ್ನಿ ವೈಭವಿ(51) ತಮ್ಮ ಮಕ್ಕಳೊಂದಿಗೆ ನೇಪಾಳ ಪ್ರವಾಸಕ್ಕಾಗಿ ಹೋಗಿದ್ದರು. ಈ ವೇಳೆ ವಿಮಾನ ಅಪಘಾತಕ್ಕೀಡಾಗಿ ನಾಲ್ಕು ಮಂದಿ ಸುಟ್ಟು ಹೋಗಿದ್ದಾರೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಒಡಿಶಾದಲ್ಲಿ ಕಂಪನಿಯೊಂದನ್ನು ನಡೆಸುತ್ತಿದ್ದ ಅಶೋಕ್ ತ್ರಿಪಾಠಿ ಮತ್ತು ಮುಂಬೈನ ಬಿಕೆಸಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ವೈಭವಿ ಬಾಂದೇಕರ್ ತ್ರಿಪಾಠಿ ವಿಚ್ಛೇದನ ಪಡೆದುಕೊಂಡಿದ್ದರು. ಇವರ ಮಗ ಧನುಷ್ (22) ಮತ್ತು ಮಗಳು ರಿತಿಕಾ(15) ಥಾಣೆ ನಗರದ ಬಲ್ಕಮ್ ಪ್ರದೇಶದ ರುಸ್ತಂಜೀ ಅಥೇನಾ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದರು.

    ಭಾನುವಾರ ಅಶೋಕ್ ತ್ರಿಪಾಠಿ, ವೈಭವಿ ಮತ್ತು ಅವರ ಇಬ್ಬರು ಮಕ್ಕಳು ತಾರಾ ಏರ್‌ಲೈನ್ಸ್ ವಿಮಾನವನ್ನು ಹತ್ತಿದ್ದರು. ಆದರೆ ಮುಸ್ತಾಂಗ್ ಜಿಲ್ಲೆಯ ಕೋವಾಂಗ್ ಗ್ರಾಮದ ಲಾಮ್ಷೆ ನದಿಯ ಸಮೀಪ 14,500 ಅಡಿ ಎತ್ತರದಲ್ಲಿ ಪರ್ವತದ ತುದಿಗೆ ಡಿಕ್ಕಿ ಹೊಡೆದು ವಿಮಾನ ಪತನಗೊಂಡಿದೆ. ಈ ಹಿನ್ನೆಲೆ ಪ್ರವಾಸ ಕೈಗೊಂಡಿದ್ದ ಇಡೀ ಕುಟುಂಬ ಸುಟ್ಟು ಹೋಗಿದ್ದು, ಅವರ ಅವಶೇಷಗಳು ನೇಪಾಳದ ಪರ್ವತಮಯ ಮುಸ್ತಾಂಗ್ ಜಿಲ್ಲೆಯಲ್ಲಿ ಸೋಮವಾರ ಸಿಕ್ಕಿದೆ.

    ವೈಭವಿ ಅವರ 80 ವರ್ಷದ ತಾಯಿ ಮನೆಯಲ್ಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅವರನ್ನು ಚಿಕ್ಕಮಗಳು ನೋಡಿಕೊಳ್ಳುತ್ತಿದ್ದಾಳೆ. ವಿಮಾನ ಪತನವಾದ ವಿಷಯವನ್ನು ಇನ್ನೂ ವೈಭವಿ ಅವರ ತಾಯಿಗೆ ತಿಳಿಸಿಲ್ಲ ಎಂದು ಥಾಣೆಯ ಕಪುರ್‍ಬಾವಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಟರ್ಬೊಪ್ರೊಪ್ ಟ್ವಿನ್ ಓಟರ್ 9N-AET ವಿಮಾನ ನಾಲ್ವರು ಭಾರತೀಯ ಪ್ರಜೆಗಳು, ಇಬ್ಬರು ಜರ್ಮನ್ನರು ಮತ್ತು 13 ನೇಪಾಳಿ ಪ್ರಯಾಣಿಕರನ್ನು ಹೊತ್ತುಕೊಂಡು ಸಾಗುತ್ತಿತ್ತು. ಮೂವರು ನೇಪಾಳಿ ಸಿಬ್ಬಂದಿ ವಿಮಾನದಲ್ಲಿದ್ದರು.

  • ವಿಮಾನ ಪತನದ ಸ್ಥಳದಲ್ಲಿ 16 ಮೃತದೇಹ ಪತ್ತೆ- ಪ್ರಯಾಣಿಕರೆಲ್ಲರೂ ಮೃತಪಟ್ಟಿರುವ ಶಂಕೆ

    ವಿಮಾನ ಪತನದ ಸ್ಥಳದಲ್ಲಿ 16 ಮೃತದೇಹ ಪತ್ತೆ- ಪ್ರಯಾಣಿಕರೆಲ್ಲರೂ ಮೃತಪಟ್ಟಿರುವ ಶಂಕೆ

    ಕಠ್ಮಂಡು: ನೇಪಾಳ ವಿಮಾನ ಪತನಗೊಡ ಸ್ಥಳದಲ್ಲಿ ಇದುವರೆಗೂ 16 ಮೃತದೇಹ ಪತ್ತೆಯಾಗಿದ್ದು, ಉಳಿದ 6 ಶವಗಳಿಗಾಗಿ ಪೊಲೀಸರು ಮತ್ತು ಸೇನಾ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

    ಮುಸ್ತಾಂಗ್ ಜಿಲ್ಲೆಯ ಕೋವಾಂಗ್ ಗ್ರಾಮದ ಲಾಮ್ಷೆ ನದಿಯ ಸಮೀಪ 14,500 ಅಡಿ ಎತ್ತರದಲ್ಲಿ ಪರ್ವತದ ತುದಿಗೆ ಡಿಕ್ಕಿ ಹೊಡೆದು ವಿಮಾನ ಪತನಗೊಂಡಿದೆ. ಮೃತದೇಹಗಳನ್ನು ಹೊರತೆಗೆಯಲು 15 ನೇಪಾಳ ಸೇನೆಯ ಸೈನಿಕರ ತಂಡವು ಸ್ಥಳದಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

    ನೇಪಾಳದ ಗೃಹ ಸಚಿವಾಲಯದ ವಕ್ತಾರ ಫಡಿಂದ್ರ ಮಣಿ ಪೋಖ್ರೆಲ್ ಮಾತನಾಡಿ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿಯಲು ಸಾಧ್ಯವಿಲ್ಲ. ಆದರೆ ಅಧಿಕೃತ ಹೇಳಿಕೆ ಬರಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಪತ್ತೆಯಾದ ವಿಮಾನ 6 ಗಂಟೆಗಳಲ್ಲಿ ಪತ್ತೆ – ಸಾವು ನೋವಿನ ಬಗ್ಗೆ ತನಿಖೆ

    ಅಪಘಾತದ ಸ್ಥಳದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮೃತದೇಹಗಳನ್ನು ತರಲು ಹೋದ ಹೆಲಿಕಾಪ್ಟರ್ ಅಲ್ಲಿಗೆ ಇಳಿಯಲು ಸಾಧ್ಯವಾಗಲಿಲ್ಲ. ಆದರೂ ಎಲ್ಲಾ ಮೃತ ದೇಹಗಳನ್ನು ನೇರವಾಗಿ ಕಠ್ಮಂಡುವಿಗೆ ತರಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ಕಟೀಲ್

  • ನಾಪತ್ತೆಯಾದ ವಿಮಾನ 6 ಗಂಟೆಗಳಲ್ಲಿ ಪತ್ತೆ – ಸಾವು ನೋವಿನ ಬಗ್ಗೆ ತನಿಖೆ

    ನಾಪತ್ತೆಯಾದ ವಿಮಾನ 6 ಗಂಟೆಗಳಲ್ಲಿ ಪತ್ತೆ – ಸಾವು ನೋವಿನ ಬಗ್ಗೆ ತನಿಖೆ

    ಕಠ್ಮಂಡು: ಏಕಾಏಕಿ ನಾಪತ್ತೆಯಾಗಿದ್ದ ನೇಪಾಳದ ವಿಮಾನ ಸುಮಾರು 6 ಗಂಟೆಗಳ ಬಳಿಕ ಪತ್ತೆಯಾಗಿದೆ.

    ನಾಲ್ವರು ಭಾರತೀಯರು ಸೇರಿದಂತೆ 22 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತಾರಾ ಏರ್ 9-ಎನ್‍ಎಇಟಿ ವಿಮಾನವು ಇಂದು ಬೆಳಗ್ಗೆ 9:55ಕ್ಕೆ ಪೋಖರಾದಿಂದ ಜೋಮ್‍ಸಮ್‍ಗೆ ಟೇಕ್ ಆಫ್ ಆದ ಬಳಿಕ ಸಂಪರ್ಕ ಕಳೆದುಕೊಂಡಿತ್ತು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್ 

    ಮುಸ್ತಾಂಗ್ ಜಿಲ್ಲೆಯ ಕೋವಾಂಗ್ ಗ್ರಾಮದ ಲಾಮ್ಚೆ ನದಿಯ ಸಮೀಪ ಈ ವಿಮಾನವು ಪತನಗೊಂಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ನೇಪಾಳದ ಸೇನೆ ವಿಮಾನ ಪತನವಾದ ಸ್ಥಳದತ್ತ ದೌಡಾಯಿಸಿದೆ ಎಂದು ಸೇನೆಯ ವಕ್ತಾರ ನಾರಾಯಣ ಸಿಲ್ವಾಲ್ ತಿಳಿಸಿದ್ದಾರೆ.

    ಪೋಖರಾದಿಂದ ಜೋಮ್‍ಸಮ್‍ಗೆ ಕೇವಲ 15 ನಿಮಿಷಗಳಲ್ಲಿ ವಿಮಾನ ಸಂಚರಿಸಬಹುದಾಗಿದೆ. ಪೋಖರಾದಿಂದ ಟೇಕ್ ಆಫ್ ಆದ ಕೆಲ ನಿಮಿಷದಲ್ಲೇ ಲೇಟೆಪಾಸ್ ಪ್ರದೇಶದಲ್ಲಿ ತನ್ನ ಸಂಪರ್ಕ ಕಳೆದುಕೊಂಡಿತ್ತು. ಇದರ ಪತ್ತೆಯಾಗಿ ಈ ಮಾರ್ಗದಲ್ಲಿ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿತ್ತು.

    ಈ ವಿಮಾನದಲ್ಲಿ ನಾಲ್ವರು ಭಾರತೀಯರು ಮತ್ತು ಮೂವರು ಜಪಾನ್ ಪ್ರಜೆಗಳು, ಇಬ್ಬರು ಜರ್ಮನ್? ಪ್ರಜೆಗಳು ಮತ್ತು 13 ನೇಪಾಳದ ಪ್ರಜೆಗಳಾಗಿದ್ದರು. ಜತೆಗೆ ಮೂವರು ವಿಮಾನದ ಸಿಬ್ಬಂದಿ ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದರು. ಆದರೆ, ಸಾವು-ನೋವಿನ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇದನ್ನೂ ಓದಿ: ಅಂಡರ್‌ವೇರ್‌ನಲ್ಲಿ ಬಂದು ಮತ ಚಲಾಯಿಸಿದ್ರೆ, ಒಳ ಉಡುಪು ಫ್ರೀ

  • 4 ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

    4 ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ನಾಪತ್ತೆ

    ಕಠ್ಮಂಡು: ನೇಪಾಳದ ಖಾಸಗಿ ವಿಮಾನ ಸಂಸ್ಥೆ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನ ಭಾನುವಾರ ನಾಪತ್ತೆಯಾಗಿದೆ. ವಿಮಾನದಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಒಟ್ಟು 22 ಪ್ರಯಾಣಿಕರಿದ್ದರು ಎಂದು ಏರ್‌ಲೈನ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಂಪರ್ಕ ಕಡಿತಗೊಂಡ ವಿಮಾನ ತಾರಾ ಏರ್ 9 ಎನ್‌ಎಇಟಿ ಅವಳಿ ಎಂಜಿನ್ ವಿಮಾನವು ಪ್ರವಾಸಿ ನಗರವಾದ ಪೋಖರಾದಿಂದ ಜೋಮ್ಸಮ್‌ನೆಡೆಗೆ ತೆರಳುತ್ತಿತ್ತು. ಬೆಳಗ್ಗೆ ಸುಮಾರು 9:55ರ ವೇಳೆ ಟೇಕ್‌ಆಫ್ ಆದ ವಿಮಾನ ಸ್ವಲ್ಪ ಸಮಯದಲ್ಲೇ ಸಂಪರ್ಕ ಕಡಿತಗೊಂಡಿತು ಎಂದು ವರದಿಯಾಗಿದೆ. ಇದನ್ನೂ ಓದಿ:  ಪಾನಿಪುರಿ ತಿಂದು 97 ಮಕ್ಕಳು ಅಸ್ವಸ್ಥ

    ವಿಮಾನ ಮುಸ್ತಾಂಗ್ ಜಿಲ್ಲೆಯ ಜೋಮ್ಸಮ್‌ನಲ್ಲಿ ಆಕಾಶದಲ್ಲಿ ಕಾಣಿಸಿಕೊಂಡು, ಬಳಿಕ ಮೌಂಟ್ ಧೌಲಗಿರಿಗೆ ತಿರುಗಿದೆ. ಬಳಿಕ ಅದು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಮುಖ್ಯ ಜಿಲ್ಲಾಧಿಕಾರಿ ನೇತ್ರಾ ಪ್ರಸಾದ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ನಾಪತ್ತೆಯಾಗಿರುವ ವಿಮಾನದಲ್ಲಿ ನಾಲ್ವರು ಭಾರತೀಯರು ಹಾಗೂ ಮೂವರು ಜಪಾನ್ ಪ್ರಜೆಗಳಿದ್ದರು. ಉಳಿದ ಎಲ್ಲಾ ಪ್ರಯಾಣಿಕರು ನೇಪಾಳದ ಪ್ರಜೆಗಳು ಎಂದು ವರದಿಗಳು ತಿಳಿಸಿವೆ.

  • ನೇಪಾಳ ಪ್ರವಾಸ – ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬುದ್ಧನಿಗೆ ಭಕ್ತಿಭಾವದ ನಮನ

    ನೇಪಾಳ ಪ್ರವಾಸ – ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬುದ್ಧನಿಗೆ ಭಕ್ತಿಭಾವದ ನಮನ

    ಕಠ್ಮಂಡು: ನೇಪಾಳದ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ (ಲುಂಬಿನಿ ವನ) ಭೇಟಿ ನೀಡಿ ಭಕ್ತಿಭಾವದ ನಮನ ಸಲ್ಲಿಸಿದ್ದಾರೆ.

    ಇದಕ್ಕೂ ಮುನ್ನ ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಹಾಗೂ ಅವರ ಪತ್ನಿ ಡಾ.ಅರ್ಜು ರಾಣಾ ದೇವುಬಾ ಅವರೊಂದಿಗೆ ಇಲ್ಲಿನ ಮಾಯಾ ದೇವಿ ದೇವಾಲಯದ ಆವರಣದಲ್ಲಿರುವ ಬುದ್ಧನ ಜನ್ಮದ ಗುರುತಿನ ಕಲ್ಲಿಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಬೌದ್ಧ ವಿಧಿ ವಿಧಾನಗಳ ಪ್ರಕಾರ ಪೂಜಾ ಕೈಂಕರ್ಯವನ್ನೂ ನೆರವೇರಿಸಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಮೀಸಲಾತಿ ನಿಲ್ಲಿಸುತ್ತೇವೆ – ತೆಲಂಗಾಣ ಸರ್ಕಾರದ ವಿರುದ್ಧ ಶಾ ಗುಡುಗು

    ಅಲ್ಲದೇ ಪ್ರಧಾನಿ ಮೋದಿ ಅವರು, ದೆಹಲಿ ಅಂತಾರಾಷ್ಟ್ರೀಯ ಬೌದ್ಧ ಒಕ್ಕೂಟಕ್ಕೆ (IBC) ಸೇರಿದ ಜಾಗದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಭಾಗವಹಿಸಿದರು. ಇದನ್ನೂ ಓದಿ: 18ನೇ ಶತಮಾನದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂಗೆ ಸಂತನ ಪಟ್ಟ!

    ಈ ನಡುವೆ, ಉಭಯ ನಾಯಕರು ದೇವಾಲಯದ ಪಕ್ಕದಲ್ಲಿರುವ ಅಶೋಕ ಸ್ತಂಭದ ಬಳಿಯ ದೀಪಗಳನ್ನು ಬೆಳಗಿಸಿದರು. ಕ್ರಿಸ್ತಪೂರ್ವ 249 ರಲ್ಲಿ ಚಕ್ರವರ್ತಿ ಅಶೋಕನಿಂದ ಈ ಸ್ತಂಭವು ಸ್ಥಾಪಿಸಲ್ಪಟ್ಟಿದೆ. ಲುಂಬಿನಿಯು ಭಗವಾನ್ ಬುದ್ಧನ ಜನ್ಮಸ್ಥಳವಾಗಿದೆ ಎಂಬುದನ್ನು ಹೇಳುವ ಮೊದಲ ಶಿಲಾಶಾಸನವನ್ನು ಈ ಸ್ತಂಭ ಹೊಂದಿದೆ.

    ಇದೇ ವೇಳೆ, 2014ರಲ್ಲಿ ಮೋದಿ ಲುಂಬಿನಿ ವನಕ್ಕೆ ಕೊಡುಗೆಯಾಗಿ ನೀಡಿದ್ದ ಬೋಧಿ ವೃಕ್ಷದ ಸಸಿಗೆ ಉಭಯ ನಾಯಕರು ನೀರೆರೆದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್ ಖಾತೆಯಲ್ಲಿ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

    2014ರಿಂದ ಈವೆರೆಗೆ 5ನೇ ಬಾರಿಗೆ ನೇಪಾಳಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಜಲವಿದ್ಯುತ್, ಅಭಿವೃದ್ಧಿ ಮತ್ತು ಸಂಪರ್ಕ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸಲು ಅವರು ನೇಪಾಳ ಪ್ರಧಾನಿ ಬಹದ್ದೂರ್ ದೇವುಬಾ ಅವರೊಂದಿಗೆ ಸಭೆ ನಡೆಸಿದರು.

  • ರಾಹುಲ್‌ ಮದುವೆಯಲ್ಲಿ ಭಾಗವಹಿಸಿದ್ರೆ ಸಂಘಿಗಳಿಗೆ ಭಯ ಯಾಕೆ: ಕಾಂಗ್ರೆಸ್‌ ಪ್ರಶ್ನೆ

    ರಾಹುಲ್‌ ಮದುವೆಯಲ್ಲಿ ಭಾಗವಹಿಸಿದ್ರೆ ಸಂಘಿಗಳಿಗೆ ಭಯ ಯಾಕೆ: ಕಾಂಗ್ರೆಸ್‌ ಪ್ರಶ್ನೆ

    ನವದೆಹಲಿ: ರಾಹುಲ್‌ ಗಾಂಧಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದರೆ ಸಂಘಿಗಳಿಗೆ ಭಯ ಯಾಕೆ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

    ಸಾಮಾನ್ಯ ವ್ಯಕ್ತಿಯಂತೆ ಖಾಸಗಿ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಿದರೆ ತಪ್ಪೇನು? ಸಂಘಿಗಳು ಏಕೆ ಸುಳ್ಳನ್ನು ಹಬ್ಬಿಸುತ್ತಿದ್ದಾರೆ? ನಾವೆಲ್ಲರೂ ಖಾಸಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತೇವೆ ಎಂದು ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದಾರೆ.

    ರಾಹುಲ್‌ ಗಾಂಧಿ ನೈಟ್‌ ಕ್ಲಬ್‌ನಲ್ಲಿರುವ ವೀಡಿಯೋ ವೈರಲ್‌ ಆಗುತ್ತಿದ್ದು ಬಿಜೆಪಿ ನಾಯಕರ ಟೀಕೆಗೆ ಕಾಂಗ್ರೆಸ್‌ ವಕ್ತಾರ ರಂದೀಪ್‌ ಸುರ್ಜೇವಾಲಾ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

    ರಾಹುಲ್ ಗಾಂಧಿ ಅವರು ಕಠ್ಮಂಡುವಿನಲ್ಲಿರುವ ಸ್ನೇಹಿತನ ಮದುವೆಯಲ್ಲಿ ಭಾಗಿಯಾಗಿದ್ದರು. ವಿನಾಕಾರಣ ಕಾಂಗ್ರೆಸ್ ನಾಯಕರ ಹಿಂದೆ ಹೋಗುವ ಬದಲು ಬಿಜೆಪಿ ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದು ಕುಟುಕಿದರು.

    ರಾಹುಲ್‌ ಗಾಂಧಿ ವೈಯಕ್ತಿಕ ಭೇಟಿಯಲ್ಲಿದ್ದಾರೆ. ಬಿಜೆಪಿಯವರು ವಿದ್ಯುತ್‌ ಸಮಸ್ಯೆ, ಹಣದುಬ್ಬರಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ಆದರೆ ರಾಹುಲ್‌ ಗಾಂಧಿ ಅವರ ಬಗ್ಗೆ ಮಾತನಾಡಲು ಸಮಯವಿದೆ ಎಂದು ಕಿಡಿಕಾರಿದರು.

    ಮದುವೆ ಮತ್ತು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸುವುದು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ವಿಷಯವಾಗಿದೆ. ಮದುವೆಯಾಗುವುದು, ಯಾರೊಂದಿಗಾದರೂ ಸ್ನೇಹಿತರಾಗುವುದು ಅಥವಾ ಅವರ ಮದುವೆಯಲ್ಲಿ ಪಾಲ್ಗೊಳ್ಳುವುದು ಈ ದೇಶದಲ್ಲಿ ಅಪರಾಧವೇ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ತನಗಿಂತ 28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್

    ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸುರ್ಜೇವಾಲಾ, ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಹೋದಂತೆ ರಾಹುಲ್ ಗಾಂಧಿ ಆಹ್ವಾನಿಸದ ಅತಿಥಿಯಾಗಿ ತೆರಳಲಿಲ್ಲ. ಸ್ನೇಹಿತರ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ನೇಪಾಳಕ್ಕೆ ತೆರಳಿದ್ದರು ಎಂದು ಹೇಳಿದರು. ಇದನ್ನೂ ಓದಿ: ನೈಟ್‌ಕ್ಲಬ್ ಪಾರ್ಟಿಯಲ್ಲಿ ರಾಹುಲ್ – ವೀಡಿಯೋ ಫುಲ್ ವೈರಲ್

    ಮಾಣಿಕ್ಕಂ ಟ್ಯಾಗೋರ್ ಅವರು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಕಾರ್ಯಕ್ರಮವೊಂದರಲ್ಲಿ ಶಾಂಪೇನ್ ಚಿಮ್ಮಿಸುತ್ತಿರುವ ಚಿತ್ರಗಳನ್ನು ಹಂಚಿಕೊಂಡು ತಿರುಗೇಟು ನೀಡಿದ್ದಾರೆ.