Tag: ನೇಮಕಾತಿ ಪರೀಕ್ಷೆ

  • ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

    ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

    – ಚುನಾವಣೆಗೂ ಮುನ್ನ ಯುವಕರ ಸೆಳೆಯಲು ಮಹತ್ವದ ಘೋಷಣೆ ಮಾಡಿದ ಬಿಹಾರ ಸರ್ಕಾರ

    ಪಾಟ್ನಾ: ಬಿಹಾರ (Bihar) ಸರ್ಕಾರವು ರಾಜ್ಯದ ಎಲ್ಲಾ ನೇಮಕಾತಿ ಪರೀಕ್ಷೆಗಳ ಪ್ರಾಥಮಿಕ ಹಂತಕ್ಕೆ ಏಕರೂಪವಾಗಿ 100 ರೂ. ಶುಲ್ಕವನ್ನು ನಿಗದಿಪಡಿಸುವ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇದರ ಜೊತೆಗೆ, ಮುಖ್ಯ ಪರೀಕ್ಷೆಗೆ ಯಾವುದೇ ಶುಲ್ಕವನ್ನು ವಿಧಿಸದಿರಲು ಕೂಡ ನಿರ್ಧರಿಸಲಾಗಿದೆ.

    ಮುಖ್ಯಮಂತ್ರಿ ನಿತಿಶ್ ಕುಮಾರ್ (Nitish Kumar) ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಮುಂದಿಟ್ಟ ಈ ಕ್ರಮಕ್ಕೆ ಅನುಮೋದನೆ ನೀಡಲಾಗಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಉದ್ಯಮ ಆರಂಭಿಸಲು ಆಸಕ್ತಿ ಇರುವ ಮಹಿಳೆಯರಿಗೆ ಗುಡ್ ನ್ಯೂಸ್!

    ಸರ್ಕಾರದ ಈ ಕ್ರಮವು ಅಭ್ಯರ್ಥಿಗಳಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಪರೀಕ್ಷೆಗಳಲ್ಲಿ ಭಾಗವಹಿಸಲು ಸುಲಭವಾಗಲಿದೆ. ಪ್ರಾಥಮಿಕ ಪರೀಕ್ಷೆಗೆ 100 ರೂ. ಶುಲ್ಕವು ಎಲ್ಲಾ ವಿಭಾಗಗಳಿಗೆ ಏಕರೂಪವಾಗಿರುತ್ತದೆ. ಆದರೆ, ಮುಖ್ಯ ಪರೀಕ್ಷೆಗೆ ಶುಲ್ಕವಿಲ್ಲದಿರುವುದು ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶವನ್ನು ಒದಗಿಸಲಿದೆ.

    ಬಿಹಾರದ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ರಾಜ್ಯದ ಯುವಕರಿಗೆ ಅವಕಾಶಗಳನ್ನು ಒದಗಿಸಲು ಮತ್ತು ಅವರ ಭವಿಷ್ಯವನ್ನು ಸುರಕ್ಷಿತಗೊಳಿಸಲು ನಮ್ಮ ಸರ್ಕಾರ ಹಲವಾರು ದೃಢವಾದ ಕ್ರಮಗಳನ್ನು ತೆಗೆದುಕೊಂಡಿದೆ. ಈಗ, ನಾವು ಯುವಕರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ನಿತೀಶ್ ಕುಮಾರ್ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

  • ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಭೀಕರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ನಡುವೆ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಗಿದೆ. ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹೊಸದೊಂದು ಫೋಟೋಗಳು ಹರಿದಾಡಿವೆ. ಬರೋಬ್ಬರು 32 ಸಾವಿರ ದ್ಯೋಗ ಆಕಾಂಕ್ಷಿಗಳು ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಯ ನೇಮಕಾತಿಗಾಗಿ ಲಿಖಿತ ಪರೀಕ್ಷೆ (Recruitment Test) ಬರೆಯಲು ಕ್ರೀಡಾಂಗಣದಲ್ಲಿ (Stadium) ಪೆನ್ನು, ಪೇಪರ್ ಹಿಡಿದು ಕುಳಿತಿರುವುದು ಕಂಡುಬಂದಿದೆ.

    ಶನಿವಾರ ಇಸ್ಲಾಮಾಬಾದ್‌ನ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ನಡೆದಿದ್ದು, ಸುಮಾರು 32 ಸಾವಿರ ಅಭ್ಯರ್ಥಿಗಳು ಸ್ಟೇಡಿಯಂನ ನೆಲದ ಮೇಲೆ ಕುಳಿತು ಪರೀಕ್ಷೆ ಬರೆದಿದ್ದಾರೆ.

    ವರದಿಗಳ ಪ್ರಕಾರ ಪಾಕಿಸ್ತಾನದಾದ್ಯಂತ 1,667 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ಖಾಲಿಯಿದೆ. ಇದಕ್ಕಾಗಿ ಲಿಖಿತ ಪರೀಕ್ಷೆ ನೀಡಲು ಜಾಹೀರಾತು ನೀಡಲಾಗಿತ್ತು. ಈ ಹಿನ್ನೆಲೆ 30 ಸಾವಿರಕ್ಕೂ ಹೆಚ್ಚಿನ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳು ಖಾಲಿ ಉಳಿದಿವೆ ಎನ್ನಲಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಭಾರತೀಯ ವಿದ್ಯಾರ್ಥಿ ಸಾವು – ಶವ ತರಿಸಿಕೊಳ್ಳಲು ಸಹಾಯ ಕೋರಿದ ಕುಟುಂಬಸ್ಥರು

    ಪಾಕಿಸ್ತಾನದಲ್ಲಿ ನಿರುದ್ಯೋಗ ಸಮಸ್ಯೆ ಉತ್ತುಂಗಕ್ಕೇರಿದೆ. ಸರ್ಕಾರಿ ಉದ್ಯೋಗಕ್ಕೆ ಅತ್ಯಂತ ಕಡಿಮೆ ನೇಮಕಾತಿ ಮಾಡಿಕೊಳ್ಳುವುದರಿಂದ ನಿರುದ್ಯೋಗಿಳ ಸಂಖ್ಯೆಯೂ ಹೆಚ್ಚಾಗಿದೆ. ಸರ್ಕಾರಿ ವಲಯದಲ್ಲಿ ಖಾಲಿಯಿರುವ ಕೆಲವೇ ಕೆಲವು ಹುದ್ದೆಗೆ ಲಕ್ಷಾಂತರ ಆಕಾಂಕ್ಷಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಇದನ್ನೂ ಓದಿ: ಭೂತ ಬಿಡಿಸುವ ನೆಪದಲ್ಲಿ 14ರ ಬಾಲಕಿಯ ಮೇಲೆ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]