Tag: ನೇಹಾ ಹಿರೇಮಠ

  • ನೇಹಾ ಕೊಲೆ ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ

    ನೇಹಾ ಕೊಲೆ ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ

    ಧಾರವಾಡ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣದ ಆರೋಪಿ ಫಯಾಜ್‍ನನ್ನು ಇಂದು ಸಿಐಡಿ (CID) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಆರು ದಿನಗಳ ಕಾಲ ಫಯಾಜ್‍ನನ್ನು ಸಿಐಡಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ. ಧಾರವಾಡ ಜೈಲಿನಿಂದ ವಶಕ್ಕೆ ಪಡೆದ ಬಳಿಕ ತಮ್ಮ ಬೊಲೆರೋ ವಾಹನದಲ್ಲಿ ಕರೆದುಕೊಂಡು ಹೋದರು. ಈ ವೇಳೆ ಎರಡು ಕ್ರೂಸರ್ ವಾಹನದಲ್ಲಿ ಪ್ರತ್ಯೇಕವಾಗಿ ಭದ್ರತಾ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದರು.

    ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದ ಬಳಿಕ ಜೈಲಿನಿಂದ ನೇರವಾಗಿ ತಪಾಸಣೆಗೆ ಕರೆತರಲಾಯಿತು. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆತನ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ತಪಾಸಣೆಯ ಬಳಿಕ ಸಿಐಡಿ ಅಧಿಕಾರಿಗಳು ಫಯಾಜ್‍ನನ್ನು (Fayaz) ಹುಬ್ಬಳ್ಳಿ ಬಿವಿಬಿ ಕ್ಯಾಂಪಸ್‍ಗೆ ಕರೆದೊಯ್ದರು. ಅಧಿಕಾರಿಗಳು ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಆಗಮಿಸುತ್ತಿದ್ದಂತೆಯೇ ಕಾಲೇಜಿನ ಸುತ್ತಮುತ್ತ ಬಿಗಿಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು. ಅಲ್ಲಿ ಸ್ಥಳ ಮಹಜರು ನಡೆಸಲಾಯಿತು. ಈ ವೇಳೆ ಎಡಿಜಿಪಿ ಬಿ.ಕೆ ಸಿಂಗ್ ಹಾಜರಿದ್ದರು.

    ಕೊಲೆ ನಡೆದ ಸ್ಥಳದಲ್ಲಿಯೇ ಅಧಿಕಾರಿಗಳು 3 ಗಂಟೆ ತನಿಖೆ ನಡೆಸಿದರು. ಸ್ಥಳ ಮಹಜರು ಜೊತೆಗೆ ಮಹತ್ವದ ವಿಚಾರಣೆಯನ್ನು ಸಹ ಮಾಡಿದ್ದಾರೆ. ಇದಾದ ಬಳಿಕ ಧಾರವಾಡ ನಗರಕ್ಕೆ ಬಾರದೇ ಅಧಿಕಾರಿಗಳು ಫಯಾಜ್‍ನನ್ನು ನೇರವಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ಅಜ್ಞಾತ ಸ್ಥಳದಲ್ಲೇ ಫಯಾಜ್ ಹೆಚ್ಚಿನ ವಿಚಾರಣೆಯನ್ನು ಅಧಿಕಾರಿಗಳು ನಡೆಸಲಿದ್ದಾರೆ. ಇದನ್ನೂ ಓದಿ: 9 ಅಲ್ಲ 14 ಬಾರಿ ನೇಹಾಳನ್ನು ಇರಿದು ಕೊಂದ ಫಯಾಜ್- ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನಿದೆ?

  • ನೇಹಾ ಹಿರೇಮಠ ಮನೆಗೆ ಭೇಟಿ- ಪೋಷಕರಿಗೆ ಹರ್ಷಿಕಾ ದಂಪತಿ ಸಾಂತ್ವನ

    ನೇಹಾ ಹಿರೇಮಠ ಮನೆಗೆ ಭೇಟಿ- ಪೋಷಕರಿಗೆ ಹರ್ಷಿಕಾ ದಂಪತಿ ಸಾಂತ್ವನ

    ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನೇಹಾ ಪೋಷಕರಿಗೆ ಸಾಂತ್ವನ ಹೇಳಲು ‘ಬಿಗ್ ಬಾಸ್’ ಖ್ಯಾತಿಯ ಪ್ರಥಮ್ ಭೇಟಿ ಕೊಟ್ಟ ಬೆನ್ನಲ್ಲೇ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ (Bhuvan) ದಂಪತಿ ಭೇಟಿಯಾಗಿದ್ದಾರೆ.

    ನೇಹಾ ಮನೆಗೆ ಭೇಟಿ ನೀಡಿ ನಿರಂಜನ್ ಹಿರೇಮಠ (Niranjan Hiremath) ಮತ್ತು ಪತ್ನಿ ಗೀತಾರಿಗೆ ಹರ್ಷಿಕಾ ದಂಪತಿ ಸಾಂತ್ವನ ಹೇಳಿದ್ದಾರೆ. ನೇಹಾ ಕುರಿತು ವಿಚಾರಿಸಿದ್ದಾರೆ. ಹರ್ಷಿಕಾ ಮುಂದೆ ನೇಹಾ ಪೋಷಕರು ಭಾವುಕರಾಗಿದ್ದಾರೆ. ಇದನ್ನೂ ಓದಿ:ಲಂಡನ್ ಅಲ್ಲ, ಭಾರತದಲ್ಲೇ ಅಂಬಾನಿ ಪುತ್ರನ ವಿವಾಹ

    ಯಾರಿಗೂ ಯಾರನ್ನು ಕೊಲೆ ಮಾಡುವ ಹಕ್ಕಿಲ್ಲ. ಆಗಿರುವ ನೇಹಾ ಹತ್ಯೆಗೆ ನ್ಯಾಯ ಸಿಗಬೇಕು ಎಂದು ನೇಹಾ ಪೋಷಕರ ಬಳಿ ಹರ್ಷಿಕಾ ದಂಪತಿ ಮಾತನಾಡಿದ್ದಾರೆ. ಕೆಲ ಕಾಲ ನೇಹಾ ಬಗ್ಗೆ ಚರ್ಚಿಸಿದ್ದಾರೆ.

    ಇಂದು ಬೆಳಗ್ಗೆ (ಏ.24) ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಹರ್ಷಿಕಾ ದಂಪತಿ ಭೇಟಿ ನೀಡಿ ತಮ್ಮ ಮೇಲೆ ಆದ ಹಲ್ಲೆಯ ಬಗ್ಗೆ ವಿವರಿಸಿದ್ದಾರೆ. ಚುನಾವಣೆ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹರ್ಷಿಕಾ ದಂಪತಿಗೆ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.

  • ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಹಾ ತಂದೆ‌ ನಿರಂಜನ ಜೊತೆಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ Very Sorry ಎಂದು ಹೇಳಿದ್ದಾರೆ.

    ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೋನ್‌ ನಲ್ಲಿ ನಿರಂಜನ್ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ನಾವು ನಿಮ್ಮ ಜೊತೆ ಇದ್ದೇವೆ ಅಂತ ಭರವಸೆ ನೀಡಿದರು.

    ನನ್ನ ಕುಟುಂಬ ಹಾಗೂ ಎಲ್ಲಾ ಮಠಾಧೀಶರುಗಳ ಪರವಾಗಿ ನಾನು ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಕೈಗೊಂಡ ನಿರ್ಧಾರಕ್ಕೆ ಕಾನೂ ಸಚಿವರು, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಪ್ರಕಣದ ಸಂಪೂರ್ಣ ತನಿಖೆ ಮಾಡಿ ನಮಗೆ ಬೇಗನೆ ನ್ಯಾಯ ಕೊಡಿಸಿ ಎಂದು ಇದೇ ವೇಳೆ ನಿರಂಜನ್‌ ಅವರು ಸಿಎಂ ಅವರನ್ನು ಕೇಳಿಕೊಂಡರು. ಈ ವೇಳೆ ಸಿಎಂ, ಆದಷ್ಟು ಬೇಗನೇ ನಿಮಗೆ ನ್ಯಾಯ ಕೊಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ನೇಹಾ ಹಿರೇಮಠ ಪ್ರಕರಣ ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ.ಇವತ್ತು ಉಚ್ಛ ನ್ಯಾಯಾಲಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತೆ ತಪ್ಪಿಗಸ್ತರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಬರ್ಬರ ಹತ್ಯೆ ಮತ್ತು ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು.ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ ಎಂದರು.

  • ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್‌ (Neha Hiremath) ತಂದೆ ನಿರಂಜನ್ ಹಿರೇಮಠ್‌ಗೆ (Niranjan Hiremath) ಧೈರ್ಯದಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ್ (HK Patil) ಹೇಳಿದ್ದಾರೆ.

    ಹುಬ್ಬಳ್ಳಿಲ್ಲಿ ನೇಹಾ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲಾಗಿಲ್ಲ. ಆದರೆ ಇಂದು ನಿರಂಜನ್ ಹಿರೇಮಠ್ ಜೊತೆ ಸಿಎಂ ಮಾತನಾಡಿದ್ದು, ಸಾಂತ್ವನ ಹೇಳಿದ್ದಾರೆ ಎಂದರು.

    ನೇಹಾ ಪ್ರಕರಣ ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಇವತ್ತು ಉಚ್ಛ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಬಹುಬೇಗ ನೇಹಾಳ ಸಾವಿಗೆ ನ್ಯಾಯ ಸಿಗುತ್ತೆ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಬರ್ಬರ ಹತ್ಯೆ ಮತ್ತು ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು. ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ. ನಾವು ಸಾಂತ್ವನ ಹೇಳಲು ಬಂದಿದ್ದೇವೆ. ನಮ್ಮ ಕರ್ತವ್ಯ ನಿಭಾಯಿಸಿ ನಾವು ಅವರ ಮನೆಗೆ ಬಂದಿದ್ದೇವೆ. ವೈಯಕ್ತಿಕ ಘಟನೆ ಎಂಬ ಹೇಳಿಕೆ ಕುರಿತು ಗೃಹ ಸಚಿವ ಮತ್ತು ಸಿಎಂ ತಮ್ಮ ಸಮಾಜಯಿಸಿ ಹೇಳಿದ್ದಾರೆ ಎಂದರು.

  • ನೇಹಾ ಹತ್ಯೆಗೆ ವ್ಯಾಪಕ ಖಂಡನೆ – ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ವಿದ್ಯಾರ್ಥಿಗಳಿಂದಲೂ ಬೆಂಬಲ

    ನೇಹಾ ಹತ್ಯೆಗೆ ವ್ಯಾಪಕ ಖಂಡನೆ – ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ವಿದ್ಯಾರ್ಥಿಗಳಿಂದಲೂ ಬೆಂಬಲ

    ಬೆಂಗಳೂರು: ಹುಬ್ಬಳ್ಳಿಯ ನೇಹಾ ಹೀರೇಮಠ (Neha Hiremath) ಹತ್ಯೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆ (BJP Protest) ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು, ಕೊಪ್ಪಳ, ಚಾಮರಾಜನಗರ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ವಿವಿಧ ಸಂಘಟನೆಗಳೂ ಬೆಂಬಲ ಸೂಚಿಸಿವೆ. ಪ್ರತಿಭಟನಾಕಾರರು ಕರ್ನಾಟಕ ಸರ್ಕಾರ, ಮುಖ್ಯಮಂತ್ರಿಗಳು (Chief Minister) ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು, ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

    ಹಳೇ ಹುಬ್ಬಳ್ಳಿಯ (Hubballi) ದುರ್ಗದಬೈಲ್ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. `ಅಮರ್ ರಹೇ ನೇಹಾ ಹಿರೇಮಠ ಅಮರ್ ರಹೇ, ಸಿದ್ರಾಮುಲ್ಲಾ ಖಾನ್‌ಗೆ ಧಿಕ್ಕಾರ, ಡಿಕೆ ಬ್ರದರ್ಸ್ ಧಿಕ್ಕಾರ, ಡೌನ್ ಡೌನ್ ಕಾಂಗ್ರೆಸ್’ ಎಂಬಿತ್ಯಾಧಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: 9 ಅಲ್ಲ 14 ಬಾರಿ ನೇಹಾಳನ್ನು ಇರಿದು ಕೊಂದ ಫಯಾಜ್- ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನಿದೆ?

    ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವ ಪ್ರಯತ್ನ:
    ಹುಬ್ಬಳ್ಳಿ-ಧಾರವಾಡದ ಕೆಲ ಭಾಗಗಳಲ್ಲಿ ನೇಹಾ ಹತ್ಯೆ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಕೆಲ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲು ಪ್ರಯತ್ನಿಸಿದ ದೃಶ್ಯಗಳೂ ಕಂಡುಬಂದಿತು.

    ಈ ಪ್ರತಿಭಟನೆಗೆ ಶ್ರೀರಾಮ ಸೇನೆ, ಅಂಜುಮನ್ ಎ ಇಸ್ಲಾಂ ಸಂಸ್ಥೆ, ಎಬಿವಿಪಿ, ಎಸ್‌ಎಫ್‌ಐ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳೂ ಬೆಂಬಲ ಸೂಚಿಸಿದವು. ಇದನ್ನೂ ಓದಿ: West Bengal: 2016ರ ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್‌ ಆದೇಶ

  • 9 ಅಲ್ಲ 14 ಬಾರಿ ನೇಹಾಳನ್ನು ಇರಿದು ಕೊಂದ ಫಯಾಜ್- ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನಿದೆ?

    9 ಅಲ್ಲ 14 ಬಾರಿ ನೇಹಾಳನ್ನು ಇರಿದು ಕೊಂದ ಫಯಾಜ್- ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನಿದೆ?

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶವೊಂದು ಬಹಿರಂಗವಾಗಿದೆ.

    ಹೌದು. ರೋಪಿ ಫಯಾಜ್, ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಹೃದಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ಕಟ್ ಆಗಿ ವಿಪರೀತ ರಕ್ತಸ್ರಾವವಾಗಿದೆ ಎಂಬ ವಿಚಾರ ಬಯಲಾಗಿದೆ. ಇದನ್ನೂ ಓದಿ: ಪೊಲೀಸರ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗೆ ನೇಹಾ ತಂದೆ ಆಗ್ರಹಿಸಿದ್ದಾರೆ: ಜೆಪಿ ನಡ್ಡಾ

    ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

    ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.  ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.

  • Justice For Neha – ಆರೋಪಿಗೆ ಕಠಿಣ ಶಿಕ್ಷೆಯಾಗಲಿ: ಅಶ್ವಿನಿ ಪುನೀತ್

    Justice For Neha – ಆರೋಪಿಗೆ ಕಠಿಣ ಶಿಕ್ಷೆಯಾಗಲಿ: ಅಶ್ವಿನಿ ಪುನೀತ್

    ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ದಿ.ಪುನೀತ್ ರಾಜ್‍ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ (Ashwini Puneeth Rajkumar) ಸಹ ನೇಹಾ (Neha) ಪರ ಧ್ವನಿ ಎತ್ತಿದ್ದಾರೆ. ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ತಮ್ಮ ಇನ್ಸ್ಟಾದಲ್ಲಿ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

    ಅಶ್ವಿನಿಯವರು ತಮ್ಮ ಇನ್ಸ್ಟಾದಲ್ಲಿ, ನೇಹಾ ಹಿರೇಮಠ ಅವರ ಸಾವಿಗೆ ನ್ಯಾಯ ಸಿಗಲಿ ಎಂಬುದು ನಮ್ಮೆಲ್ಲರ ಆಶಯ. ಕಾನೂನಿನ ಅಡಿಯಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದು, #JusticeForNeha ಎಂಬ ಟ್ಯಾಗ್ ಬಳಸಿ ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಶಿವಣ್ಣ ಸಹ ತಮ್ಮ ಎಕ್ಸ್ ಖಾತೆಯಲ್ಲಿ, ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಬರೆದುಕೊಂಡಿದ್ದರು.

    ನಟ ರಿಷಭ್, ರಕ್ಷಿತ್, ದರ್ಶನ್ ಹಾಗೂ ಅನುಶ್ರೀ ಸೇರಿದಂತೆ ಅನೇಕ ನಟ ನಟಿಯರು ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

    ಏನಿದು ಪ್ರಕರಣ? ಏ.18ರ ಗುರುವಾರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ಹುಬ್ಬಳ್ಳಿ ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ‘ಕಾಪ್ ಆಫ್ ದಿ ಮಂತ್’ ಅವಾರ್ಡ್

    ಹುಬ್ಬಳ್ಳಿ ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ‘ಕಾಪ್ ಆಫ್ ದಿ ಮಂತ್’ ಅವಾರ್ಡ್

    ಹುಬ್ಬಳ್ಳಿ: ಹುಬ್ಬಳ್ಳಿಯ (Hubballi) ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ (Neha Hiremath) ಎಂಬ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿದ ಪೊಲೀಸರಿಗೆ ‘ಕಾಪ್‌ ಆಫ್‌ ದಿ ಮಂತ್‌’ ಅವಾರ್ಡ್‌ (Cop Of The Month Award) ನೀಡಿ ಪ್ರಶಂಸಿಸಲಾಗಿದೆ.

    ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಈ ಪ್ರಕರಣದ ಆರೋಪಿ ಪತ್ತೆ ಹಚ್ಚಲು ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಡಿ.ಕೆ ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಇದನ್ನೂ ಓದಿ: ಫಯಾಜ್‌, ಕುಟುಂಬದವರ ಒಳಸಂಚು ಇದೆ ಎನಿಸುತ್ತಿದೆ: ನೇಹಾ ತಂದೆ ಆರೋಪ

    ತಕ್ಷಣ ಕಾರ್ಯಪ್ರವೃತ್ತರಾದ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯ ಸಾಧಿಸಿ, ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಫಯಾಜ್ ಬಾಬಾಸಾಹೇಬ ಖೊಂದುನಾಯಕ (23) ಬೆನ್ನತ್ತಿದ್ದರು. ಈತನ ಸುಳಿವನ್ನು ಬೆನ್ನತ್ತಿ ಕೃತ್ಯ ನಡೆದ ಕೇವಲ ಒಂದು ಗಂಟೆಯೊಳಗೆ ಆರೋಪಿಯನ್ನು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

    ನಂತರ ಅವಧಿಯೊಳಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೂ ಒಪ್ಪಿಸಲಾಗಿತ್ತು. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ. ಅಲ್ಲದೇ, ಉತ್ತರ ಉಪವಿಭಾಗದ ಎಸಿಪಿ ಮತ್ತು ವಿದ್ಯಾನಗರ ಪಿಎಸ್‌ನ ಪಿಐ ಅವರ ನೇತೃತ್ವದ ತಂಡಕ್ಕೆ ‘ಕಾಪ್ ಆಫ್ ದಿ ಮಂತ್’ ಎಂದು ಘೋಷಿಸಿ, 25 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ವಿತರಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಯಾಕೆ ನೀವು ಧ್ವನಿ ಎತ್ತುತ್ತಿಲ್ಲ: ಪ್ರಕಾಶ್ ರಾಜ್, ಚೇತನ್ ವಿರುದ್ಧ ಪ್ರಥಮ್ ಕಿಡಿ

  • ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!

    ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಒಂದೆಡೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಕೂಡ ಆರಂಭವಾಗಿದೆ. ಈ ನಡುವೆ ಕೊಲೆ ಸಮರ್ಥಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಧಾರವಾಡ ನಗರದ ನಿವಾಸಿಗಳಾದ ಸಾದಿಕ್ ತಡಕೋಡ ಹಾಗೂ ಆದಿಲ್ ಎಂಬಿಬ್ಬರು  ನೇಹಾ ಹಾಗೂ ಫಯಾಜ್ ಫೋಟೋ ಹಾಕಿ ಜಸ್ಟಿಸ್ ಫಾರ್ ಲವ್ ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಇಬ್ಬರು ಯುವಕರನ್ನು ವಿದ್ಯಾಗಿರಿ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಠಾಣೆ ಎದುರು ಜೈ ಶ್ರೀರಾಮ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.‌ ಇದನ್ನೂ ಓದಿ: ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

    ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

    ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.

  • ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

    ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

    – ಶಿವಣ್ಣ, ರಿಷಭ್‌, ರಕ್ಷಿತ್‌ ಹಾಗೂ ಅನುಶ್ರೀ ಹೇಳಿದ್ದು ಹೀಗೆ..

    ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗ ಕೂಡ ವಿದ್ಯಾರ್ಥಿನಿ ಸಾವಿಗೆ ಮರುಕ ವ್ಯಕ್ತಪಡಿಸಿದೆ. ನಟ- ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ನೇಹಾ ಹತ್ಯೆಯನ್ನು ಖಂಡಿಸಿದ್ದಾರೆ.

    ಇದೀಗ ಪ್ರಕರಣ ಸಂಬಂಧ ನಟ ದರ್ಶನ್‌ (Darshan) ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ನೀಡಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

    ಸಾವಿಗೆ ನ್ಯಾಯ ದೊರಕಲಿ: ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ನಟ ಶಿವರಾಜ್‌ ಕುಮಾರ್‌ (Shivaraj Kumar) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ತಪ್ಪಿತಸ್ಥರ ಮೇಲೆ ಕ್ರಮಕ್ಕೆ ವಿನಂತಿ: ನೇಹಾ ಹಿರೇಮಠ್ (Neha Hiremath) ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ನಟ ರಿಷಬ್‌ ಶೆಟ್ಟಿ (Rishabh Shetty) ಹಾಗೂ ರಕ್ಷಿತ್‌ ಶೆಟ್ಟಿ (Rakshit Shetty) ತಮ್ಮ ಎಕ್ಸ್‌ನಲ್ಲಿ ಬರೆದುಕೊಳ್ಳುವ ಮೂಲಕ #JusticeForNeha ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

    ಉತ್ತರ ಒಂದೇ ನ್ಯಾಯ: ಒಳ್ಳೇ ಬುದ್ದಿ ಹೇಳಿಕೊಡುವ ವಿದ್ಯಾ ದೇಗುಲವೇ ಕಲುಷಿತವಾಯ್ತು. ಸಮಾಜದಲ್ಲಿ ಬಾಳಿ ಬದುಕಬೇಕಾದ ಒಂದು ಹೆಣ್ಣಿನ ಜೀವ ಮಣ್ಣಾಯ್ತು. ಇದಕ್ಕೆ ಉತ್ತರ ಒಂದೇ …. ” ನ್ಯಾಯ “, ಆ ಕಣ್ಣಿರಿಗೆ ಉತ್ತರ ” ನ್ಯಾಯ ” ಎಂದು ನಟಿ ಕಂ Anchor ಅನುಶ್ರೀ (Anushree) ಬೇಸರ ವ್ಯಕ್ತಪಡಿಸಿದ್ದಾರೆ.

    ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

    ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ.