ಹುಬ್ಬಳ್ಳಿ: ನಾನು ಕೈ ಮುಗಿದು ಕೇಳಿಕೊಳ್ತೀನಿ. ಸಿಎಂ ಹಾಗೂ ಗೃಹ ಸಚಿವರು ನನ್ನ ಮಗಳ ಹತ್ಯೆ ಪ್ರಕರಣ ಸಂಬಂಧ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿ ಎಂದು ನೇಹಾ ಹಿರೇಮಠ ತಂದೆ ನಿರಂಜನ್ (Niranjan Hiremath) ಕೈ ಮುಗಿದು ಕೇಳಿಕೊಂಡಿದ್ದಾರೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗಳ ಸಾವು ವೈಯಕ್ತಿಕ ಅಲ್ಲ. ಅವರಿಗೆ ಮಾಹಿತಿಯ ಕೊರತೆ ಇದೆ. ಯಾರೋ ಅವರನ್ನು ತುಷ್ಠೀಕರಣ ಮಾಡಿ ಹೇಳುವಂಗೆ ಮಾಡಿದ್ದಾರೆ. ದಯಮಾಡಿ ಅಂತಹ ಹೇಳಿಕೆಗಳನ್ನು ಕೊಡಬೇಡಿ. ಎಲ್ಲವನ್ನೂ ನನ್ನ ವೀರಶೈವ ಹಾಗೂ ಲಿಂಗಾಯತ ಸಮಾಜ ನೋಡುತ್ತಿದೆ. ವೈಯಕ್ತಿಕ ಅಂದ್ರೆ ನಾವೇನು ಯಾರಾದ್ದಾದರು ಜೊತೆ ಸಂಬಂಧ ಬೆಳೆಸಲು ಹೋಗಿದ್ದೇವಾ..?. ಅಥವಾ ವ್ಯಾಪಾರ ಇತ್ತಾ?. ವೈಯಕ್ತಿಕ ಅನ್ನುವುದಾದರೆ ಯಾವುದಾದರೂ ಸಂಬಂಧ ಇರಬೇಕು ಅಲ್ವಾ. ಈ ರೀತಿಯ ಹೇಳಿಕೆಗಳಿಂದ ನನ್ನ ಮಗಳಿಗೆ ನ್ಯಾಯ ಸಿಗಲ್ಲ ಎಂದು ನಿರಂಜನ್ ಬೇಸರ ವ್ಯಕ್ತಪಡಿಸಿದರು.
ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾ ಮೊದಲೇ ದುಃಖದಲ್ಲಿರುವ ನಮ್ಮನ್ನು ಮತ್ತಷ್ಟು ದುಃಖಕ್ಕೆ ತಳ್ಳುತ್ತಿದ್ದೀರಿ. ರಾಜ್ಯದ ಸಿಎಂ (Siddaramaiah) ಆಗಿರುವ ನೀವು ಇಂತಹ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿ. ನೀವು ಕೊಟ್ಟ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಿ. ನಮ್ಮ ಹಾಗೂ ಅವರ ಮಧ್ಯೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ. ಅವರು ನಮ್ಮ ಅಕ್ಕಪಕ್ಕದ ಮನೆಯವರಲ್ಲ.. ನಮ್ಮ ಓಣಿಯವರಲ್ಲ ಅಥವಾ ನಮ್ಮ ಕ್ಲಾಸ್‌ಮೇಟ್ ಕೂಡ ಅಲ್ಲ. ವೈಯಕ್ತಿಕ ಅಂದಿದ್ರೆ ಆಕೆ ಅವನ ಜೊತೆ ಹೋಗುತ್ತಿದ್ದಳು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಕನಸು ಕಂಡಿದ್ದೆ: ಆರೋಪಿ ಫಯಾಜ್ ತಂದೆ
ಎರಡು ವರ್ಷದ ಹಿಂದೆ ಆತ ಕಾಲೇಜು ಬಿಟ್ಟಿದ್ದಾನೆ. ಅವನು ಆಕೆಯ ಮೇಲೆ ಕಣ್ಣಿಟ್ಟು, ಲವ್ ಜಿಹಾದ್ ಟ್ರೈನಿಂಗ್ ತೆಗೆದುಕೊಂಡು ಬಂದು ಆಕೆಯನ್ನು ಟಾರ್ಗೆಟ್ ಮಾಡಿದ್ದಾನೆ. ಒಳ್ಳೆಯ ಸಂಸ್ಕೃತಿ ಇರುವ ಹುಡುಗಿಯನ್ನು ಬಲೆಗೆ ಹಾಕಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ ಆಕೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದರು.
ನನ್ನ ಮಗಳನ್ನು ಈಗಾಗಲೇ ಬಲಿ ತೆಗೆದುಕೊಂಡಿದ್ದೀರಿ. ನಮ್ಮನ್ನಾದರು ಬದುಕಲು ಬಿಡಿ. ನೀವು ಇದೆ ರೀತಿಯ ಹೇಳಿಕೆ ಕೊಟ್ಟರೆ ನಾನು ಸಮಾಜದಲ್ಲಿ ಹೇಗೆ ಮುಖ ತೋರಸಲಿ. ನಾನು ನನ್ನ ಕುಟುಂಬ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ನಿರಂಜನ್ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ ಕಾಲೇಜುವೊಂದರಲ್ಲಿ ನಡೆದ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆಗೆ ಇದೀಗ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಇದೀಗ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಪ್ರತಿಕ್ರಿಯೆ ನೀಡಿದ್ದಾರೆ. ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೇಹಾ ಪರ ಧ್ರುವ ಧ್ವನಿಯೆತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಸೀರಿಯಲ್‌ಗೆ ತಾರಕ್ ಪೊನ್ನಪ್ಪ ಗುಡ್ ಬೈ
ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ????
ಜೈ ಆಂಜನೇಯ ???? pic.twitter.com/z1gkJkEETU
ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಕ್ರೂರಿಗೆ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏ.18ರಂದು ಹುಬ್ಬಳ್ಳಿ- ಧಾರಾವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ಅವರ ಪುತ್ರಿ ಹತ್ಯೆ ನಡೆದಿತ್ತು. ನೇಹಾ ಹತ್ಯೆಗೈದ ಆರೋಪಿ ಫಯಾಜ್ ಬಂಧನವೂ ಆಗಿದೆ. ನಗರದ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
– ನೇಹಾ ಜೊತೆ ಮದುವೆ ಬೇಡವೆಂದು ಕೈ ಮುಗಿದಿದ್ದೆ
– ಹಣಕ್ಕಾಗಿ ಮಾತ್ರ ಫಯಾಜ್ ಕಾಲ್ ಮಾಡ್ತಿದ್ದ
– ಮುನವಳ್ಳಿ ಜನತೆ ನನ್ನ ಪಾಲಿನ ದೇವರು
ಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath Murder Case) ಕೊಲೆ ಪ್ರಕರಣ ಸಂಬಂಧ ಆರೋಪಿ ಫಯಾಜ್ (Accused Fayaz) ತಂದೆ ಬಾಬಾ ಸಾಹೇಬ್ ಸುಬಾನಿಯವರು ಕಣ್ಣೀರು ಹಾಕುತ್ತಲೇ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.
ನನ್ನ ಮಗನನ್ನು ಸೈನಿಕನಾಗಿ ನೋಡುವ ಆಸೆ ನನ್ನದಾಗಿತ್ತು. ಆದರೆ ಇಂದು ಆತ ಕ್ಷಮಿಸಲಾರದ ತಪ್ಪು ಮಾಡಿದ್ದಾನೆ. ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ. ಮುಂದೆ ಯಾವ ಹೆಣ್ಮಕ್ಕಳ ಮೇಲೆ ಯಾರೂ ಕೈ ಮಾಡಬಾರದು. ಇವನಿಗೆ ಕೊಡುವ ಶಿಕ್ಷೆಯಿಂದ ಅಂತಹ ಭಯ ಜನರಲ್ಲಿ ಮೂಡಬೇಕು. ಆ ರೀತಿಯ ಶಿಕ್ಷೆಯನ್ನು ನೀಡಲಿ ಎಂದು ಹೇಳುತ್ತಾ ನೇಹಾ ತಂದೆ ಹಾಗೂ ರಾಜ್ಯದ ಜನರ ಬಳಿ ಕ್ಷಮೆಯಾಚಿಸಿದ್ದಾರೆ.
ಪಬ್ಲಿಕ್ ಟಿವಿಗೆ ಹೇಳಿದ್ದೇನು..?: 8 ತಿಂಗಳ ಹಿಂದೆ ನೇಹಾ ಅವರ ತಂದೆ ಕರೆ ಮಾಡಿ, ಸರ್ ನಿಮ್ಮ ಮಗನಿಂದ ನಮ್ಮ ಮಗಳಿಗೆ ತೊಂದರೆ ಇದೆ. ದಯವಿಟ್ಟು ನಿಮ್ಮ ಮಗನಿಗೆ ಬುದ್ಧಿ ಹೇಳಿ ಎಂದಿದ್ದರು. ಈ ಕಾರಣಕ್ಕಾಗಿ ನಾನು ಅವನನ್ನು ಬೆಳಗಾವಿಗೆ ಕರೆದುಕೊಂಡು ಬಂದು ಇಲ್ಲಿ ಇಟ್ಟುಕೊಂಡಿದ್ದೆ. ಆದರೆ ಕಳೆದ 2 ವರ್ಷದಿಂದ ಆತ ನನ್ನ ಜೊತೆಗೆ ಇರಲಿಲ್ಲ. ಬದಲಾಗಿ ತಾಯಿ ಜೊತೆ ಇದ್ದ. ನಾನು ನನ್ನ ಪಾಡಿಗೆ ಕೆಲಸ ಮಾಡಿಕೊಳ್ಳುತ್ತಾ ಇದ್ದೆ. ಈ ಘಟನೆ ನಡೆದು 6 ಗಂಟೆಗೆ ನನಗೆ ಗೊತ್ತಾಯಿತು. ಅಲ್ಲಿವರೆಗೆ ನನನಗೆ ಏನೂ ಗೊತ್ತಿಲ್ಲ ಎಂದರು.
ನಾನು ಒಬ್ಬನೇ ಬೇರೆ ಇದ್ದೀನಿ: ನನ್ನ ಮಗನನ್ನು ದೇಶ ಸೈನಿಕನನ್ನಾಗಿ ಮಾಡಬೇಕು ಎಂದು ಆಸೆ ಪಟ್ಟಿದ್ದೆ. ಅದಕ್ಕಾಗಿ ಅವನನ್ನು ಬಾಡಿಬಿಲ್ಡರ್ ಅನ್ನಾಗಿ ಮಾಡುತ್ತಿದ್ದೆ. 2 ವರ್ಷದಿಂದ ಅವನು ನನ್ನ ಜೊತೆ ಮಾತಾಡ್ತಿರಲಿಲ್ಲ. ಶಿಕ್ಷಣಕ್ಕಾಗಿ ಹಣ ಕೊಡುತ್ತಿದ್ದೆ ಅಷ್ಟೇ. ಮಗ ಹಾಗೂ ಮಗಳು ನನ್ನ ಪತ್ನಿಯ ಜೊತೆ ವಾಸವಾಗಿದ್ದಾರೆ. ನಾನು ಒಬ್ಬನೇ ಬೇರೆ ಇದ್ದೀನಿ. 6 ವರ್ಷದಿಂದ ನಾವಿಬ್ಬರು ಗಂಡ-ಹೆಂಡತಿ ಕೌಟುಂಬಿಕ ಕಲಹದಿಂದ ಬೇರೆಯಾಗಿದ್ದೇವೆ. ಮಗ ನನ್ನ ಜೊತೆ ಮಾತಾಡದೇ 3 ತಿಂಗಳು ಆಯ್ತು. ಹಣ ಬೇಕಾದರೆ ಮಾತ್ರ ಆತ ನನಗೆ ಫೋನ್ ಮಾಡುತ್ತಾನೆ. ಇಲ್ಲವೆಂದರಲ್ಲಿ ಫೋನ್ ಮಾಡಲ್ಲ ಎಂದು ತಿಳಿಸಿದರು.
ಮುನವಳ್ಳಿ ಜನತೆಗೆ ಕೃತಜ್ಞ: ಮುನವಳ್ಳಿ ಜನತೆ ನನ್ನ ಪಾಲಿನ ದೇವರು. ಇವತ್ತು ಭವಾನಿ ಸರ್ (ನನ್ನ) ಉಳಿಸಿದ್ದಾರೆ, ಬೆಳೆಸಿದ್ದಾರೆ ಅಂದ್ರೆ ಅದು ಮುನವಳ್ಳಿ ಜನತೆ ನನಗೆ ಕೊಟ್ಟ ಭಿಕ್ಷೆ. ನಾನು ಈ ಋಣ ತೀರಿಸಲು ಆಗಲ್ಲ. ಅವರು ನನ್ನ ಮೇಲೆ ತುಂಬಾ ಅಭಿಮಾನ ಇಟ್ಟಿದ್ದಾರೆ. ಅವರ ಅಭಿಮಾನಕ್ಕೆ ನಾನು ಕೃತಜ್ಞನನಾಗಿದ್ದೇನೆ. ಎಲ್ಲಿ ಅನ್ಯಾಯ ಆಗುತ್ತೋ ಅಲ್ಲಿ ಪ್ರತಿಭಟನೆ ಆಗುತ್ತೆ. ಈ ಪ್ರಕರಣದಲ್ಲಿ ಜನ ಪ್ರತಿಭಟನೆ ಮಾಡುವುದರಲ್ಲಿ ತಪ್ಪಿಲ್ಲ. ಹೀಗಾಗಿ ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ. ಇದರ ಉದ್ದೇಶ ಮುಂದೆ ಈ ರೀತಿಯ ಘಟನೆಗಳು ನಡೆಯಬಾರದು ಎಂಬುದಾಗಿದೆ ಎಂದರು. ಇದನ್ನೂ ಓದಿ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೀನಿ- ನೇಹಾ ಹಂತಕ ಫಯಾಜ್ ತಂದೆ ಕಣ್ಣೀರು
ಮದುವೆ ಬೇಡವೆಂದು ಕೈ ಮುಗಿದಿದ್ದೆ: ನನ್ನ ಮಗ ತಪ್ಪು ಮಾಡಿದ್ದಾನೆ ಒಪ್ಪಿಕೊಳ್ಳುತ್ತೇನೆ. ಆದರೆ ಅವರಿಬ್ಬರ ನಡುವೆ ಅಫೇರ್ ಇತ್ತು. ಮಗ ಅವಳನ್ನು ಮದುವೆ ಆಗುತ್ತೇನೆ ಎಂದಿದ್ದ. ಆಗ ನಾನು ಬೇಡಪ್ಪ.. ಅವರು ಗುರುಗಳು ಅಂಥವರ ಮಗಳನ್ನು ಮದುವೆ ಆಗುವುದು ನಮಗೆ ಗೌರವ ಅಲ್ಲ.. ಬೇಡ. ಮೊದಲೇ ದೇಶ ಹಾಗೂ ರಾಜ್ಯದಲ್ಲಿ ಲವ್ ಜಿಹಾದ್ ಅನ್ನೋದು ಹುಟ್ಟಿಕೊಂಡಿದೆ. ಇದಕ್ಕೆ ಬಣ್ಣ ಕಟ್ಟಿ ನಿನಗೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಬೇಡ ಅಂತಾ ಅವನ ಮುಂದೆಯೇ ಕೈಮುಗಿದು ಕೇಳಿಕೊಂಡಿದ್ದೆ. ಇವತ್ತು ಇಂತಹ ಘಟನೆ ನಡೆದರೂ ನಾನು ಅವನ ಪರವಾಗಿಲ್ಲ. ಯಾಕೆಂದರೆ ಯಾರ ಮಕ್ಕಳಾದರೂ ನಮ್ಮ ಮಕ್ಕಳ ಥರನೇ. ಹೆಣ್ಮಕ್ಕಳು ಕಣ್ಣೀರು ಹಾಕಿದರೆ ಯಾರಿಗೂ ಒಳ್ಳೆಯದಾಗಲ್ಲ ಎಂದು ಸುಬಾನಿ ಹೇಳಿದರು.
ಅವನಿಗೆ ಯಾವ ಶಿಕ್ಷೆ ಕೊಟ್ಟರೂ ನನಗೆ ಓಕೆ. ಮುಂದೆಯಾದರು ಇಂತಹ ಶಿಕ್ಷೆಯಿಂದ ಹೆಣ್ಮಕ್ಕಳು ಸುರಕ್ಷಿತವಾಗಿರಲಿ. ಆ ಭಯಕ್ಕಾದರೂ ಜನಗಳು ತಪ್ಪು ಮಾಡುವುದು ಬಿಡುತ್ತಾರೆ ಎಂಬುದು ನನ್ನ ನಂಬಿಕೆ ಆಗಿದೆ ಎಂದರು.
ಪ್ರಕರಣ ವಿವರ: ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ.
ಹುಬ್ಬಳ್ಳಿ: ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ, ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು ಅಂಥ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ನೇಹಾ ಹಿರೇಮಠ (Neha Hiremath Murder Case) ಕೊಲೆ ಪ್ರಕರಣದ ಆರೋಪಿ ಫಯಾಜ್ (Fayaz) ತಂದೆ ಬಾಬಾ ಸಾಹೇಬ್ ಸುಬಾನಿ ಕಣ್ಣೀರು ಹಾಕಿದ್ದಾರೆ.
ರಾಜ್ಯದ ಜನತೆಯಲ್ಲಿ ಕ್ಷಮೆ: ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡುವಂತೆ ಕಣ್ಣೀರಾಕುತ್ತಲೇ ಭವಾನಿ ಮನವಿ ಮಾಡಿದ್ದಾರೆ.
ಪ್ರತಿಭಟನಾಕಾರರಿಗೆ ಸಲಾಂ : ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ಅವಳು ನನ್ನ ಮಗಳಿದ್ದ ಹಾಗೆ. ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದು ಭವಾನಿ ಹೇಳಿದರು.
ಇದೇ ವೇಳೆ ನೇಹಾ- ಫಯಾಜ್ ರೀಲ್ಸ್ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರಿಬ್ಬರ ನಡುವೆ ಅಫೇರ್ ಇತ್ತು. ಅವರು ಗುರುಗಳು ಈ ನಿಮ್ಮ ಪ್ರೀತಿಗೆ ಲವ್ ಜಿಹಾದ್ ಬಣ್ಣ ಕಟ್ಟಿ ನಿನ್ನ ಟಾರ್ಗೆಟ್ ಮಾಡ್ತಾರೆ ಎಂದು ನನ್ನ ಮಗನಿಗೆ ಬುದ್ದಿ ಹೇಳಿದ್ದೇ ಎಂದು ಭವಾನಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣವು ವೈಯಕ್ತಿಕ ಕಾರಣಕ್ಕೆ ಆಗಿರೋದು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮರ್ಡರ್ ಆಗಿದ್ದರೂ ಅದು ವೈಯಕ್ತಿಕ ಕಾರಣಕ್ಕೆ ಆಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ನಮ್ಮ ಸರ್ಕಾರ ಅದನ್ನ ಮಾಡ್ತಿದೆ ಎಂದರು.
ಪ್ರಕರಣ ಸಂಬಂಧ ನಿನ್ನೆ ರಾತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಸಿಎಂ, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಇದನ್ನೂ ಓದಿ: ಹುಬ್ಬಳ್ಳಿಯ ನೇಹಾ ಹತ್ಯೆಗೈದ ಫಯಾಜ್ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು.
ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್…
ಪ್ರಕರಣ ವಿವರ: ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ.
ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‍ನಲ್ಲಿಯೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆಗೆ ಇದೀಗ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ.
ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ನೂರಾರು ಕಾರ್ಯಕರ್ತರು ವಿದ್ಯಾನಗರ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ್ದಾರೆ. ಪರಿಣಾಮ ವಿದ್ಯಾನಗರ ಪೆÇಲೀಸ್ ಠಾಣೆ ಎದುರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನೇಹಾ ಕೊಂದವನನ್ನು ಎನ್‍ಕೌಂಟರ್ ಮಾಡಬೇಕೆಂದು ವಿವಿಧ ಹಿಂದೂಪರ ಸಂಘಟನೆಗಳು ಠಾಣೆ ಎದುರು ಆಗ್ರಹಿಸುತ್ತಿವೆ. ಇದನ್ನೂ ಓದಿ: ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು?
ಕಿಮ್ಸ್ ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ, ಬೆಲ್ಲದ್ ಟೆಂಗಿನಕಾಯಿ ಭೇಟಿ ಕೊಟ್ಟು ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣದಿಂದಲೇ ಇಂಥ ಘಟನೆ ನಡೆದಿದೆ. ಸರ್ಕಾರ ತಮ್ಮ ಬೆಂಬಲಕ್ಕಿದೆಯೆಂದು ಇಂತಹ ಘಟನೆ ಮರುಕಳಿಸುತ್ತವೆ. ಹಾಡಹಗಲೇ ಕೊಲೆ ಮಾಡುವ ಮನಸ್ಥಿತಿಗೆ ತಲುಪಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ಅಗಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ : ಕಾಲೇಜು ಕ್ಯಂಪಸ್‌ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್ (Fiaz) ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ ಬಿಸಿಎ ಓದುವಾಗಿನಿಂದ ನೇಹಾ (Neha Hiremath) ಮತ್ತು ಫಯಾಜ್ ಲವ್ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದರು.
ಇಂದು ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದರು.
ಇತ್ತ ಚಾಕು ಇರಿದ ಬಳಿಕ ಆರೋಪಿ ಆತನ ಊರಿನ ಕಡೆ ಪರಾರಿಯಾಗಲು ಯತ್ನಿಸಿದ್ದ. ಆದರೆ ಘಟನೆ ನಡೆದು 1 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ನಮ್ಮ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಹೇಳಿದರು.
ಘಟನೆ ಖಂಡಿಸಿ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡಲಿ. ನಾವು ಎಲ್ಲದಕ್ಕೂ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು.