Tag: ನೈಸ್ ಯೋಜನೆ

  • ನೈಸ್ ಯೋಜನೆಯನ್ನ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು – ಟಿ.ಬಿ.ಜಯಚಂದ್ರ

    ನೈಸ್ ಯೋಜನೆಯನ್ನ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು – ಟಿ.ಬಿ.ಜಯಚಂದ್ರ

    ಬೆಂಗಳೂರು: ನೈಸ್ ವಿಚಾರದಲ್ಲಿ ಸದನ ಸಮಿತಿ ಕೊಟ್ಟಿರೋ ವರದಿ ಅನ್ವಯ ನೈಸ್ ಯೋಜನೆಯನ್ನ (Nice Project) ಸರ್ಕಾರ ವಶಪಡಿಸಿಕೊಳ್ಳಬೇಕು ಅಂತ ದೆಹಲಿ ಪ್ರತಿನಿಧಿ, ಸದನ ಸಮಿತಿ ಅಧ್ಯಕ್ಷರಾಗಿದ್ದ ಟಿ.ಬಿ ಜಯಚಂದ್ರ (TB Jayachandra) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ನೈಸ್ ದಾಖಲಾತಿ ಬಿಡುಗಡೆ ವಿಚಾರವಾಗಿ ವಿಧಾನಸೌಧದಲ್ಲಿ (Vidhan Soudha) ಪ್ರತಿಕ್ರಿಯೆ ನೀಡಿದ ಅವರು, ಸದನ ಸಮಿತಿ ವರದಿ ಕೊಟ್ಟ ಮೇಲೆ ಮುಗಿದೋಯ್ತು. 2016ರ ಡಿಸೆಂಬರ್‌ನಲ್ಲೇ ವರದಿ ಕೊಟ್ಟಿದ್ದೇನೆ. ಮೂರು ಪಕ್ಷಗಳ ಶಾಸಕರು ಕುಳಿತು ವರದಿ ಕೊಟ್ಟಿದ್ದೇವೆ. ಬೆಳಗಾವಿ ಅಧಿವೇಶನದಲ್ಲಿ (Belagavi Session) ಚರ್ಚೆಗೆ ಒತ್ತಾಯಿಸಿದ್ದರು. ಸರ್ಕಾರ ಕೂಡ ಅದಕ್ಕೆ ಉತ್ತರ ಕೊಟ್ಟಿದೆ. ನಮ್ಮ ಶಿಫಾರಸು ಸಲಹೆ ಕೊಟ್ಟಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಹಸ್ತ ಭೀತಿ; ವಲಸಿಗರ ಜೊತೆ ಸಮಾಲೋಚನೆ ನಡೆಸಲು ಬಿಎಸ್‌ವೈಗೆ ತಾಕೀತು

    ನೈಸ್ ಯೋಜನೆ ಮೇಲೆ 101 ಕೇಸ್ ಇದಕ್ಕೆ ಸಂಬಂಧಿಸಿದಂತೆ ಇದ್ವು. ಮೂರು ಜನರ ಸಮಿತಿ ರಚನೆ ಮಾಡಬೇಕು. ಅವರ ನೇತೃತ್ವದಲ್ಲಿ ಇದರ ತನಿಖೆ ಆಗಬೇಕು ಎಂದಿದ್ದೆವು. ನಾವು ಸಮಿತಿಯಲ್ಲಿ ಚರ್ಚಿಸಿ ವರದಿ ಕೊಟ್ಟಿದ್ದೇವೆ. ಶಿಫಾರಸು ಮಾಡಿದ್ದನ್ನ ಸರ್ಕಾರ ತೀರ್ಮಾನಿಸಬೇಕು. ಯೋಜನೆಯ ಹೆಚ್ಚುವರಿ ಭೂಮಿ ಪಡೆದುಕೊಳ್ಳಬೇಕು. ನಮ್ಮ‌ ವರದಿ ಮೇಲೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3: ನೆಹರೂ ತಾರಾಲಯದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ದೃಶ್ಯ ನೇರಪ್ರಸಾರ

    ಮನಿ ಲಾಂಡರಿಂಗ್ ಕೂಡ ಆಗಿದೆ ವರದಿಯಲ್ಲಿ ಹೇಳಿದ್ದೆವು, ಯೋಜನೆಯ ಮೂಲ ಒಪ್ಪಂದದ ಉಲ್ಲಂಘನೆ ಆದ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಆಗಿದೆ. ಅದಕ್ಕೆ ವರದಿ ಬಗ್ಗೆ ಕ್ರಮ ಆಗಲೇಬೇಕು. ಇಡೀ ಯೋಜನೆಯನ್ನೇ ಸರ್ಕಾರ‌ ಟೇಕ್ ಓವರ್ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸತ್ಯ ಹೇಳಿ ಸತ್ಯರಾಮಯ್ಯರಾಗಿ- ನೈಸ್ ವಿಚಾರದಲ್ಲಿ ಸಿಎಂಗೆ ಹೆಚ್‍ಡಿಕೆ ತಿರುಗೇಟು

    ಸತ್ಯ ಹೇಳಿ ಸತ್ಯರಾಮಯ್ಯರಾಗಿ- ನೈಸ್ ವಿಚಾರದಲ್ಲಿ ಸಿಎಂಗೆ ಹೆಚ್‍ಡಿಕೆ ತಿರುಗೇಟು

    ಬೆಂಗಳೂರು: ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದೇವೆ? ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)  ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈಗಲಾದರೂ ಸತ್ಯ ಹೇಳಿ ಸತ್ಯರಾಮರಾಗಿ ಎಂದು ವ್ಯಂಗ್ಯವಾಡಿದ್ದಾರೆ.

    ನೆಪ ಹೇಳದೆ ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆದು ಬದ್ಧತೆ ತೋರಿಸಲಿ. ಅಲ್ಲದೇ ನೈಸ್‍ಗೆ ನ್ಯಾಯ ಕೊಡಿ ಎಂದು ಹ್ಯಾಷ್ ಟ್ಯಾಗ್ ಮಾಡಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ನೈಸ್ ವಶಪಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಓವರ್‌ಲೋಡ್‌ನಿಂದ ಕೊಳಕ್ಕೆ ಉರುಳಿದ ಬಸ್ – 17 ಮಂದಿ ಸಾವು, 35 ಮಂದಿಗೆ ಗಾಯ

    ಗ ಕರ್ನಾಟಕದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರು ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ, ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ. ನಿಮ್ಮನ್ನು ಸುಳ್ಳುರಾಮಯ್ಶ ಎಂದು ಕರೆಯುವುದು ನನಗೆ ಇಷ್ಟವಿಲ್ಲ. ಏಕೆಂದರೆ ನಿಮ್ಮ ಹೆಸರಿನಲ್ಲೇ ರಾಮ ಇದ್ದಾರೆ. ತಾವು ಸತ್ಯರಾಮಯ್ಯನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ ತಮ್ಮದೇ ಸರ್ಕಾರದ ಕಾನೂನು ಸಚಿವರು ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ ಎಂದು ಕಿಡಿಕಾರಿದ್ದಾರೆ.

    ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜೊತೆಗಿದ್ದ ಅಡ್ವೋಕೇಟ್ ಜನರಲ್ ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ಎಂದು ತಮ್ಮ ಅವಧಿಯ ವಿಚಾರ ಪ್ರಸ್ತಾಪ ಮಾಡಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಸುಪ್ರೀಂಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ತಂಡವನ್ನು ಅಭಿನಂದಿಸಿದ್ದಾರೆ.

    ಹಿಂದಿನ ಬಿಜೆಪಿ ಸರ್ಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಸರಿಯಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡ ರಿಸ್ಕ್ ಸಣ್ಣದೇನಲ್ಲ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮ್ ನನಗೆ ಕೊಟ್ಟ ನಿತ್ಯ ಕಿರುಕುಳವನ್ನು ಮರೆಯಲಾದೀತೆ? ಎಂದು ಚಾಟಿ ಬೀಸಿದ್ದಾರೆ.

    ನಿಮ್ಮ ಹಂಗಿನಲ್ಲಿದ್ದ ನನಗೆ ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರ್ಕಾರ, ನುಡಿದಂತೆ ನಡೆಯುವ ಅಪರ ಹರಿಶ್ಚಂದ್ರನ ಸರ್ಕಾರ ಹೌದಲ್ಲವೇ? ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ ಎಂದು ಕುಟುಕಿದ್ದಾರೆ.

    ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. ನೆಪ ಹೇಳಿ ಸಮಯವನ್ನು ಕೊಲ್ಲಬೇಡಿ. ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು ಎಂದು ಹರಿಹಾಯ್ದಿದ್ದಾರೆ.

    ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾ ಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಸಿದ್ದರಾಮಯ್ಯರನ್ನ ಕಾಲೆಳೆದಿದ್ದಾರೆ. ಇದನ್ನೂ ಓದಿ: ಶಂಕಿತ ಉಗ್ರ ಜುನೈದ್‍ಗೆ ಲುಕ್ ಔಟ್ ನೋಟಿಸ್ – ಸಿಸಿಬಿ ಸಿದ್ಧತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ತಪ್ಪು ಜಾತಿಯಲ್ಲಿ ಹುಟ್ಟಿದ್ದೀನಿ, ಅಶೋಕ್ ಗೌಡ ಆಗಿದ್ರೆ ಕನ್ಯಾಕುಮಾರಿವರೆಗೂ ನೈಸ್ ಪ್ರಾಜೆಕ್ಟ್!

    ನಾನು ತಪ್ಪು ಜಾತಿಯಲ್ಲಿ ಹುಟ್ಟಿದ್ದೀನಿ, ಅಶೋಕ್ ಗೌಡ ಆಗಿದ್ರೆ ಕನ್ಯಾಕುಮಾರಿವರೆಗೂ ನೈಸ್ ಪ್ರಾಜೆಕ್ಟ್!

    – ಬಿಎಸ್‍ವೈ ಬೇಗ ಸಿಎಂ ಆಗಲಿ ಎಂದು ಹಾರೈಕೆ

    ಮೈಸೂರು: ನಾನು ಲಿಂಗಾಯತ ಜಾತಿಯಲ್ಲಿ ಹುಟ್ಟಿದ ಪರಿಣಾಮ ನೈಸ್ ಪ್ರಾಜೆಕ್ಟ್ ಪೂರ್ಣಗೊಳಿಸಲು ಆಗಲಿಲ್ಲ. ಅಶೋಕ್ ಗೌಡ ಆಗಿದ್ದರೆ ಕನ್ಯಾಕುಮಾರಿವರೆಗೂ ನೈಸ್ ಪ್ರಾಜೆಕ್ಟ್ ಸಿಗುತಿತ್ತು ಎಂದು ಪರೋಕ್ಷವಾಗಿ ಜೆಡಿಎಸ್ ಪಕ್ಷದ ವರಿಷ್ಠರ ಬಗ್ಗೆ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅಸಮಾಧಾನ ಹೊರಹಾಕಿದ್ದಾರೆ.

    ಮೈಸೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೈಸ್ ಪ್ರಾಜೆಕ್ಟ್ ನಾನು ಲಿಂಗಾಯುತ ಆದ ಕಾರಣ ಪೂರ್ಣಗೊಳಿಸಲಾಗಲಿಲ್ಲ. ನಾನು ತಪ್ಪು ಜಾತಿಯಲ್ಲಿ ಹುಟ್ಟಿದ್ದೇನೆ. ನಾನೇನಾದರೂ ಅಶೋಕ್ ಗೌಡ ಆಗಿದ್ದರೆ ಕನ್ಯಾಕುಮಾರಿವರೆಗೆ ನೈಸ್ ಪ್ರಾಜೆಕ್ಟ್ ಆಗುತ್ತಿತ್ತು ಎಂದು ಹೇಳಿದ್ದಾರೆ.

    ಸಭೆಯಲ್ಲಿ ಭಾಗವಹಿಸಿದ್ದು ನನಗೆ ಬಹಳ ಸಂತಸ ತಂದಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಬಹು ದಿನಗಳ ಬಳಿಕ ನಗು ಮುಖದಿಂದ ನೋಡುತ್ತಿದ್ದೇನೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಕೂಡ ಅವರು ಬೇಗ ಸಿಎಂ ಆಗಲಿ ಎಂದು ಹಾರೈಕೆ ಮಾಡುತ್ತೇನೆ ಎಂದರು.

    ಜನರು ನನ್ನನ್ನು ಸೋಲಿಸಿದ ವೇಳೆ ನಾನು ಶ್ರೀಗಳ ಸಲಹೆ ಪಡೆದು ಸಂತನಾಗಿದ್ದೆ. ಈಗ ಜನರಿಗೆ ತಿಳಿಯುತ್ತಿದೆ ಯಾರು ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದು ತಿಳಿಸಿದರು. ತಮ್ಮ ಭಾಷಣದಲ್ಲಿ ಲಿಂಗಾಯುತ ಪದ ಬಳಸಿ ಸ್ಪಷ್ಟನೆ ನೀಡಿದ ಅವರು, ಈಗ ಲಿಂಗಾಯತ ಎಂದರೆ ಬೈತಾರೆ, ವೀರಶೈವ ಲಿಂಗಾಯುತ ಎನ್ನಬೇಕು ಎಂದರು. ಅಲ್ಲದೇ ನಮಗೆ ವಿಭೂತಿಯೇ ಎಲ್ಲಕ್ಕಿಂತ ಹೆಚ್ಚಿನ ಮೇಕಪ್ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv