Tag: ನೊಬೆಲ್

  • ಟ್ರಂಪ್‌ಗೆ ಭಾರೀ ಮುಖಭಂಗ – ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌

    ಟ್ರಂಪ್‌ಗೆ ಭಾರೀ ಮುಖಭಂಗ – ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌

    ಓಸ್ಲೋ: ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ (Donald Trump) ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ (Maria Corina Machado) ಅವರಿಗೆ ಪ್ರಶಸ್ತಿ ಸಿಕ್ಕಿದೆ.

    ವೆನೆಜುವೆಲಾದ (Venezuela) ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ  ನೊಬೆಲ್ ಸಮಿತಿ ನಿರ್ಧರಿಸಿದೆ.

    ಇಂದು ಸಹ ಟ್ರಂಪ್‌ ನಾನು 8 ಯುದ್ಧಗಳನ್ನು ನಿಲ್ಲಿಸಿದ್ದೇನೆ. ಬರಾಕ್‌ ಒಬಾಮ ಏನು ಮಾಡಿದ್ದಾರೆ? ಏನು ಮಾಡದ ಒಬಾಮಗೆ ನೊಬೆಲ್‌ ಸಿಗುವುದಾದರೆ ನನಗೆ ಯಾಕೆ ಸಿಗಬಾರದು ಎಂದು ಪ್ರಶ್ನಿಸಿ ನನಗೆ ನೊಬೆಲ್‌ ಪ್ರಶಸ್ತಿಯ ಕನಸನ್ನು ವ್ಯಕ್ತಪಡಿಸಿದ್ದರು.

  • ‘ನಾನು ಮೋದಿ ವಿರೋಧಿ’ – ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಧಾನಿಯ ಜೋಕ್ ಹಂಚಿಕೊಂಡ ಬ್ಯಾನರ್ಜಿ

    ‘ನಾನು ಮೋದಿ ವಿರೋಧಿ’ – ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಧಾನಿಯ ಜೋಕ್ ಹಂಚಿಕೊಂಡ ಬ್ಯಾನರ್ಜಿ

    ನವದೆಹಲಿ: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಮೋದಿಯವರು ಟ್ವಿಟ್ಟರಿನಲ್ಲಿ ಅಭಿಜಿತ್ ಬ್ಯಾನರ್ಜಿಯವರನ್ನ ಭೇಟಿಯಾಗಿರುವ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ಪ್ರಧಾನಿ ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಜಿತ್ ಬ್ಯಾನರ್ಜಿ, ನನ್ನ ಜೊತೆಗಿನ ಮಾತಿನ ಆರಂಭದಲ್ಲಿ ನಾನು ಹೇಗೆ ಮೋದಿ ವಿರೋಧಿ ಎಂಬುದನ್ನು ಮಾಧ್ಯಮಗಳು ವರದಿ ಮಾಡುತ್ತಿವೆ ಎನ್ನುವುದನ್ನು ಉಲ್ಲೇಖಿಸಿ ಜೋಕ್ ಮಾಡಿ ನಕ್ಕರು. ಮೋದಿಯವರು ಟಿವಿಯನ್ನು ನೋಡುತ್ತಾರೆ. ನೀವು ಏನನ್ನು ಬಿಂಬಿಸಲು ಪ್ರಯತ್ನಿಸುತ್ತಿದ್ದೀರಿ ಎಂಬುದನ್ನು ಮೋದಿಯವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಭೇಟಿಯ ವೇಳೆ ನಡೆದ ಮಾತುಕತೆಯನ್ನು ಹಂಚಿಕೊಂಡರು. ಇದನ್ನೂ ಓದಿ: ವಿದ್ಯಾರ್ಥಿಯಾಗಿದ್ದಾಗ ಪ್ರತಿಭಟನೆ – 10 ದಿನ ತಿಹಾರ್ ಜೈಲು ಸೇರಿದ್ದ ಅಭಿಜಿತ್ ಬ್ಯಾನರ್ಜಿ

    ಪ್ರಧಾನಿಗಳಾದ ಮೋದಿಯವರ ಭೇಟಿ ಖುಷಿ ತಂದಿದ್ದು, ತಮ್ಮ ಅಮೂಲ್ಯ ಸಮಯವನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಭಾರತದ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ತಳಮಟ್ಟದಿಂದ ಅಭಿವೃದ್ಧಿ ಕೆಲಸಗಳು ನಡೆಯಬೇಕು. ಜನರಿಗೆ ಸರ್ಕಾರಗಳ ಮೇಲೆ ನಂಬಿಕೆ ಬಂದಾಗ ಅಭಿವೃದ್ಧಿ ಕೆಲಸ ಸರಳವಾಗಲಿದೆ. ಉದ್ಯೋಗ ನಿರ್ಮಾಣ ಸೇರಿದಂತೆ ಹಲವು ವಿಚಾರಧಾರೆಗಳನ್ನು ಪ್ರಧಾನಿಗಳು ಹಂಚಿಕೊಂಡಿದ್ದು ಖುಷಿ ತಂದಿದೆ ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದರು. ಇದನ್ನೂ ಓದಿ: ಅರ್ಥಶಾಸ್ತ್ರ ನೊಬೆಲ್ – ಭಾರತೀಯ ಮೂಲದ ಅಭಿಜಿತ್ ದಂಪತಿಗೆ ಪ್ರಶಸ್ತಿ

    ಅಭಿಜಿತ್ ಬ್ಯಾನರ್ಜಿ ಜೊತೆಗಿನ ಭೇಟಿ ಚೆನ್ನಾಗಿತ್ತು. ಮಾನವ ಸಶಕ್ತೀಕರಣದ ತುಡಿತ ಅವರಲ್ಲಿ ಎದ್ದು ಕಾಣುತ್ತದೆ. ಇಬ್ಬರ ಮಧ್ಯೆ ವಿವಿಧ ವಿಷಯಗಳ ಕುರಿತು ಗಂಭೀರವಾದ ಆರೋಗ್ಯಕರ ಚರ್ಚೆಗಳು ನಡೆದಿವೆ. ಅಭಿಜಿತ್ ಬ್ಯಾನರ್ಜಿ ಭಾರತೀಯರೆಂದು ಹೇಳಲು ಹೆಮ್ಮೆ ಆಗುತ್ತಿದೆ. ಅವರ ಮುಂದಿನ ಭವಿಷ್ಯ ಚೆನ್ನಾಗಿರಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅಭಿಜಿತ್ ಬ್ಯಾನರ್ಜಿ ಎಡಪಂಥೀಯ ಅರ್ಥಶಾಸ್ತ್ರಜ್ಞ ಎಂದ ಪಿಯೂಷ್ ಗೋಯಲ್ ಗೆ ತಿರುಗೇಟು ನೀಡಿದ ಪ್ರಿಯಾಂಕ ಗಾಂಧಿ

    ವಿಶ್ವದಲ್ಲಿ ಬಡತನ ನಿರ್ಮೂಲನೆಗೆ ಸಂಬಂಧಿಸಿದ ವಿಷಯದ ಸಂಶೋಧನೆಗೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಮತ್ತು ಅವರ ಪತ್ನಿ ಎಸ್ತರ್ ಡುಪ್ಲೋ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಪ್ರಸ್ತುತ ಫೋರ್ಡ್ ಫೌಂಡೇಶನ್ ಇಂಟರ್ ನ್ಯಾಷನಲ್‍ನ ಮ್ಯಾಸಚೂಸೆಟ್ಸ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ. 2003ರಲ್ಲಿ ಬ್ಯಾನರ್ಜಿಯವರು ಡುಫ್ಲೋ ಮತ್ತು ಸೆಂಧಿಲ್ ಮುಲೈನಾಥನ್ ಅವರೊಂದಿಗೆ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಯಕ್ಷನ್ ಲ್ಯಾಬ್(ಜೆ-ಪಿಎಎಲ್) ಸ್ಥಾಪಿಸಿದ್ದರು. ಅಲ್ಲದೆ ಲ್ಯಾಬ್‍ನ ನಿರ್ದೇಶಕರಲ್ಲಿ ಇವರೂ ಸಹ ಒಬ್ಬರಾಗಿದ್ದಾರೆ.

  • ವಿದ್ಯಾರ್ಥಿಯಾಗಿದ್ದಾಗ ಪ್ರತಿಭಟನೆ – 10 ದಿನ ತಿಹಾರ್ ಜೈಲು ಸೇರಿದ್ದ ಅಭಿಜಿತ್ ಬ್ಯಾನರ್ಜಿ

    ವಿದ್ಯಾರ್ಥಿಯಾಗಿದ್ದಾಗ ಪ್ರತಿಭಟನೆ – 10 ದಿನ ತಿಹಾರ್ ಜೈಲು ಸೇರಿದ್ದ ಅಭಿಜಿತ್ ಬ್ಯಾನರ್ಜಿ

    ನವದೆಹಲಿ: ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾದ ಅಭಿಜಿತ್ ಬ್ಯಾನರ್ಜಿ ಅ ವಿದ್ಯಾರ್ಥಿಯಾಗಿದ್ದಾಗ ತಿಹಾರ್ ಜೈಲಿನಲ್ಲಿ 10 ದಿನ ಕಳೆದಿದ್ದರು.

    ಹೌದು. ದೆಹಲಿಯ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದಾಗ ಪ್ರತಿಭಟನೆ ನಡೆಸಿದ್ದಕ್ಕೆ ಅಭಿಜಿತ್ ಬ್ಯಾನರ್ಜಿ ತಿಹಾರ್ ಜೈಲ್ ಸೇರಿದ್ದರು.

    ಈ ಸಂಬಂಧ ಪತ್ರಿಕೆಗೆ ಲೇಖನ ಬರೆದಿದ್ದ ಅವರು, 1983 ರಲ್ಲಿ ವಿದ್ಯಾರ್ಥಿ ಸಂಘದ ನಾಯಕನನ್ನು ಡಿಬಾರ್ ಮಾಡಿದ್ದನ್ನು ಖಂಡಿಸಿ ವಿಶ್ವವಿದ್ಯಾಲಯದ ಉಪಕುಲಪತಿಗಳ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ನಮ್ಮ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿರಲಿಲ್ಲ. ಕೊಲೆ ಯತ್ನ ಮತ್ತು ದೊಂಬಿ ಪ್ರಕರಣವನ್ನು ದಾಖಲಿಸಿ ಪೊಲೀಸರು ತಿಹಾರ್ ಜೈಲಿಗೆ ಕಳುಹಿಸಿದ್ದರು ಎಂದು ಬರೆದುಕೊಂಡಿದ್ದರು.

    ಕೇಂದ್ರದಲ್ಲಿರುವ ಕಾಂಗ್ರೆಸ್ ಸರ್ಕಾರ ಮತ್ತು ಎಡಪಂಥಿಯ ಒಲವಿನ ಪ್ರಾಧ್ಯಾಪಕರಿಂದಾಗಿ ನಮ್ಮ ಮೇಲೆ ಪೊಲೀಸರು ಕ್ರಮವನ್ನು ಕೈಗೊಂಡಿದ್ದರು. ಈ ವೇಳೆ ಪೊಲೀಸರು ನಮ್ಮ ಮೇಲೆ ಹೊಡೆದಿದ್ದರು. 10 ದಿನಗಳ ನಂತರ ನಮ್ಮನ್ನು ಬಿಡುಗಡೆ ಮಾಡಲಾಯಿತು. ಆದರೆ ನಮ್ಮ ವಿರುದ್ಧ ದಾಖಲಾದ ಪ್ರಕರಣಗಳು ಯಾವುದು ಸಾಬೀತಾಗಲಿಲ್ಲ ಎಂದು ಉಲ್ಲೇಖಿಸಿದ್ದರು.

    ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಮತ್ತು ಅವರ ಪತ್ನಿ ಎಸ್ತರ್ ಡುಫ್ಲೋ ಅವರಿಬ್ಬರಿಗೆ ಈ ಬಾರಿಯ ಅರ್ಥಶಾಸ್ತ್ರ ವಿಭಾಗದಲ್ಲಿನ ನೊಬೆಲ್ ಪ್ರಶಸ್ತಿ ಲಭಿಸಿದೆ. ಈ ದಂಪತಿ ಜೊತೆ ಮೈಕೆಲ್ ಕ್ರೇಮರ್ ಅವರೂ ಸಹ ಬಾರಿ ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.

    ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಪತಿ ಪತ್ನಿಯರಿಬ್ಬರೂ ಪಡೆದುಕೊಳ್ಳುವುದು ಒಂದು ವಿಶೇಷ. ಅದರಲ್ಲೂ ನೊಬೆಲ್ ನಂತಹ ಮಹೋನ್ನತ ಪ್ರಶಸ್ತಿಯನ್ನು ಒಂದೇ ವಿಷಯದ ಮೇಲೆ ಒಂದೇ ಬಾರಿಗೆಅಭಿಜಿತ್ ದಂಪತಿ ಪಡೆದುಕೊಂಡಿರುವುದು ವಿಶೇಷ ಎನಿಸಿಕೊಂಡಿದೆ.

    ‘ಜಾಗತಿಕ ಬಡತನವನ್ನು ಹೋಗಲಾಡಿಸುವ ಕುರಿತ ಪ್ರಾಯೋಗಿಕ ವಿಧಾನ’ಕ್ಕಾಗಿ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಿದೆ. 58 ವರ್ಷದ ಬ್ಯಾನರ್ಜಿ ಕೋಲ್ಕತಾ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಹಾಗೂ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದಾರೆ.

  • ಅರ್ಥಶಾಸ್ತ್ರ ನೊಬೆಲ್ – ಭಾರತೀಯ ಮೂಲದ ಅಭಿಜಿತ್ ದಂಪತಿಗೆ ಪ್ರಶಸ್ತಿ

    ಅರ್ಥಶಾಸ್ತ್ರ ನೊಬೆಲ್ – ಭಾರತೀಯ ಮೂಲದ ಅಭಿಜಿತ್ ದಂಪತಿಗೆ ಪ್ರಶಸ್ತಿ

    ನವದೆಹಲಿ: ಅರ್ಥಶಾಸ್ತ್ರದ 2019ರ ನೊಬೆಲ್ ಪ್ರಶಸ್ತಿ ಪ್ರಕಟವಾಗಿದ್ದು, ಭಾರತೀಯ ಮೂಲದ ಅಮೆರಿಕದಲ್ಲಿ ನೆಲೆಸಿರುವ ಅಭಿಜಿತ್ ಬ್ಯಾನರ್ಜಿ ಸೇರಿದಂತೆ ಎಸ್ತರ್ ಡುಫ್ಲೋ ಹಾಗೂ ಮಿಷಲ್ ಕ್ರೆಮರ್ ಅವರಿಗೆ ಲಭಿಸಿದೆ.

    ‘ಜಾಗತಿಕ ಬಡತನವನ್ನು ಹೋಗಲಾಡಿಸುವ ಕುರಿತ ಪ್ರಾಯೋಗಿಕ ವಿಧಾನ’ಕ್ಕಾಗಿ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್ ಇಂದು ಪ್ರಶಸ್ತಿಯನ್ನು ಪ್ರಕಟಿಸಿದೆ.

    58 ವರ್ಷದ ಬ್ಯಾನರ್ಜಿ ಕೋಲ್ಕತಾ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಹಾಗೂ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದಾರೆ. 1988ರಲ್ಲಿ ಇವರು ಪಿಎಚ್‍ಡಿ ಪಡೆದಿದ್ದಾರೆ.

    ಪ್ರಸ್ತುತ ಫೋರ್ಡ್ ಫೌಂಡೇಶನ್ ಇಂಟರ್ ನ್ಯಾಷನಲ್‍ನ ಮ್ಯಾಸಚೂಸೆಟ್ಸ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ. 2003ರಲ್ಲಿ ಬ್ಯಾನರ್ಜಿಯವರು ಡುಫ್ಲೋ ಮತ್ತು ಸೆಂಧಿಲ್ ಮುಲೈನಾಥನ್ ಅವರೊಂದಿಗೆ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್(ಜೆ-ಪಿಎಎಲ್) ಸ್ಥಾಪಿಸಿದ್ದರು. ಅಲ್ಲದೆ ಲ್ಯಾಬ್‍ನ ನಿರ್ದೇಶಕರಲ್ಲಿ ಇವರೂ ಸಹ ಒಬ್ಬರಾಗಿದ್ದಾರೆ.

    ಇನ್ನೂ ವಿಶೇಷವೆಂದರೆ ಎಸ್ತರ್ ಡುಫ್ಲೋ ಅವರು ಅಭಿಜಿತ್ ಬ್ಯಾನರ್ಜಿ ಅವರ ಪತ್ನಿಯಾಗಿದ್ದಾರೆ. ಈ ಮೂಲಕ ಪತಿ-ಪತ್ನಿ ಇಬ್ಬರಿಗೂ ಒಂದೇ ಬಾರಿಗೆ ನೊಬೆಲ್ ಪ್ರಶಸ್ತಿ ಲಭಿಸಿದೆ.

    ಈ ವರ್ಷದ ಪ್ರಶಸ್ತಿ ವಿಜೇತರು ನಡೆಸಿದ ಸಂಶೋಧನೆಯು ಜಾಗತಿಕ ಬಡತನದ ವಿರುದ್ಧ ಹೋರಾಡುವ ನಮ್ಮ ಸಾಮರ್ಥ್ಯವನ್ನು ಗಣನೀಯವಾಗಿ ಸುಧಾರಿಸಿದೆ. ಕೇವಲ ಎರಡು ದಶಕಗಳಲ್ಲಿ ಅವರ ಹೊಸ ಪ್ರಯೋಗ ಆಧಾರಿತ ವಿಧಾನವು ಅಭಿವೃದ್ಧಿ ಅರ್ಥಶಾಸ್ತ್ರವನ್ನು ಪರಿವರ್ತಿಸಿದೆ. ಈಗ ಅಭಿವೃದ್ಧಿ ಹೊಂದುತ್ತಿರುವ ಸಂಶೋಧನಾ ಕ್ಷೇತ್ರವಾಗಿದೆ ಎಂದು ನೋಬೆಲ್ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

    ಇಲ್ಲಿಯವರೆಗೆ ಆರ್ಥಸಾಸ್ತ್ರದಲ್ಲಿ 81 ಮಂದಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಹಿಂದೆ 1998ರಲ್ಲಿ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅವರು ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದರು.

    ಪ್ರಶಸ್ತಿಯೂ 11.10 ಲಕ್ಷ ಡಾಲರ್(7.90 ಕೋಟಿ ರೂ.) ನಗದು ಬಹುಮಾನ, ಚಿನ್ನದ ಪದಕ ನೀಡಲಾಗುತ್ತದೆ. ಕಳೆದ ವಾರ ಔಷಧಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಶಾಂತಿ, ಸಾಹಿತ್ಯ ಕ್ಷೇತ್ರಗಳ ನೊಬೆಲ್ ಪ್ರಶಸ್ತಿಯನ್ನು ಪ್ರಕಟಿಸಲಾಗಿತ್ತು.

    ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರನ್ನು ಹೊರತುಪಡಿಸಿ ಎಲ್ಲರೂ ಡಿಸೆಂಬರ್ 10ರಂದು ನೊಬೆಲ್ ಅವರ ಮರಣದ ವಾರ್ಷಿಕೋತ್ಸವದಂದು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಶಾಂತಿ ಪ್ರಶಸ್ತಿ ವಿಜೇತರಿಗೆ ನಾರ್ವೆಯ ಓಸ್ಲೋದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.