Tag: ನೋಟು ವಿನಿಮಯ

  • 2,000 ನೋಟು ರದ್ದು ಆರ್ಥಿಕತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ: ಶಕ್ತಿಕಾಂತ್ ದಾಸ್

    2,000 ನೋಟು ರದ್ದು ಆರ್ಥಿಕತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ: ಶಕ್ತಿಕಾಂತ್ ದಾಸ್

    ನವದೆಹಲಿ: 2,000 ರೂಪಾಯಿ ನೋಟುಗಳನ್ನು ಹಿಂಪಡೆಯುವುದರಿಂದ ಆರ್ಥಿಕತೆಯ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ (Shaktikanta Das) ಹೇಳಿದ್ದಾರೆ.

    ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 2,000 ರೂಪಾಯಿ ನೋಟು ಆರ್ಥಿಕತೆಯ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ. ಈಗಾಗಲೇ ಮೂರನೇ ಎರಡರಷ್ಟು ಗುಲಾಬಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲಾಗಿದೆ ಅಥವಾ ವಿನಿಮಯ ಮಾಡಲಾಗಿದೆ ಎಂದರು. ಇದನ್ನೂ ಓದಿ: ವಿದೇಶ ಪ್ರವಾಸದಿಂದ ವಾಪಸ್ಸಾಗ್ತಿದ್ದಂತೆ ಮೋದಿ ಮಹತ್ವದ ಸಭೆ

     ವಾಸ್ತವವಾಗಿ 2,000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದರಿಂದ ಬ್ಯಾಂಕಿಂಗ್ ವ್ಯವಸ್ಥೆ ಮತ್ತು ವಿಶಾಲ ಆರ್ಥಿಕತೆಗೆ ಪ್ರಯೋಜನವಾಗಬಹುದು ಎಂದು ಎಸ್‌ಬಿಐ (SBI) ವರದಿ ಹೇಳಿದೆ. 2,000 ರೂ. ನೋಟುಗಳ ವಿನಿಮಯಕ್ಕೆ 2023ರ ಸೆಪ್ಟೆಂಬರ್ 30ರವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ

    ಹಣದುಬ್ಬರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಣದುಬ್ಬರ ನಿಯಂತ್ರಣಕ್ಕೆ ಆರ್‌ಬಿಐ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಹಣದುಬ್ಬರ ಪ್ರಮಾಣ 5% ಕಡಿತವಾಗಿದ್ದುದ್ದು ನಿಯಂತ್ರಣದಲ್ಲಿದೆ ಎಂದರು. ಭಾರತೀಯ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಅನಿಶ್ಚಿತತೆಗಳಾಗಿವೆ ಮತ್ತು ಆರ್‌ಬಿಐ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಬೇಕಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್‌ ದಾಳಿ ನಡೆಸಿದವರು ರಕ್ಷಣೆ ಬಗ್ಗೆ ಮಾತಾಡೋದು ಹಾಸ್ಯಾಸ್ಪದ – ನಿರ್ಮಲಾ ಸೀತಾರಾಮನ್‌

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

    ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

    – 3,000 ಕೋಟಿ ಬೆಲೆಯ ನೋಟುಗಳು ಎಕ್ಸ್‌ಚೇಂಜ್
    – ಮಾರುಕಟ್ಟೆಯ 20% ನೋಟುಗಳು ಎಸ್‌ಬಿಐನಲ್ಲಿ

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೇ 19 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಇದುವರೆಗೆ ಅಂದಾಜು 17,000 ಕೋಟಿ ರೂ. ಮೌಲ್ಯದ 2,000 ರೂ.ಯ ನೋಟುಗಳನ್ನು ಠೇವಣಿ ಹಾಗೂ ವಿನಿಮಯ ಮಾಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

    ಆರ್‌ಬಿಐ ಮೇ 19 ರಂದು ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಂಡಿತು. ಸಾರ್ವಜನಿಕರು 2,000 ರೂ.ಯ ನೋಟುಗಳನ್ನು ತಮ್ಮ ಖಾತೆಗಳಲ್ಲಿ ಠೇವಣಿ ಇಡಲು ಹಾಗೂ ಎಕ್ಸ್‌ಚೇಂಜ್ ಮಾಡಿಕೊಳ್ಳಲು ಮೇ 23 ರಿಂದ ಅನುಮತಿ ನೀಡಿದ್ದು, ಸೆಪ್ಟೆಂಬರ್ 30ರ ವರೆಗೆ ಕಾಲಾವಕಾಶ ನೀಡಿದೆ.

    ನೋಟುಗಳನ್ನು ಬದಲಿಸಿಕೊಳ್ಳಲು (Note Exchange) ಅನುಮತಿ ನೀಡಿದ ವಾರದ ಬಳಿಕ ಮಂಗಳವಾರ ಮಾಹಿತಿ ನೀಡಿರುವ ಎಸ್‌ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ, ತಮ್ಮ ಬ್ಯಾಂಕ್‌ನಲ್ಲಿ ಇಲ್ಲಿಯವರೆಗೆ ಸುಮಾರು 14,000 ಕೋಟಿ ರೂ. ಮೌಲ್ಯದ 2,000 ರೂ.ಯ ನೋಟುಗಳನ್ನು ಠೇವಣಿಯಾಗಿ ಸ್ವೀಕರಿಸಲಾಗಿದೆ. ಸುಮಾರು 3,000 ಕೋಟಿ ರೂ. ಮೌಲ್ಯದ ನೋಟುಗಳನ್ನು ಬದಲಾಯಿಸಿಕೊಳ್ಳಲಾಗಿದೆ. ಇದು ಮಾರುಕಟ್ಟೆಯಲ್ಲಿರುವ ಸುಮಾರು 20% ದಷ್ಟು ನೋಟುಗಳು ಈಗ ನಮ್ಮಲ್ಲಿದೆ ಎಂದು ತಿಳಿಸಿದ್ದಾರೆ.

    ನೋಟು ಬದಲಾವಣೆ ಹಾಗೂ ಠೇವಣಿ ಇಡುವ ಬಗ್ಗೆ ಮಾಹಿತಿ ನೀಡಿರುವ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, 2,000 ರೂ. ನೋಟುಗಳನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಯಾವುದೇ ರೀತಿಯ ಆತಂಕ ಬೇಡ. ಈ ನೋಟುಗಳು ಕಾನೂನಾತ್ಮಕವಾಗಿ ಮುಂದುವರಿಯಲಿದೆ. ನಾವು ಒಟ್ಟು ಎಷ್ಟು ನೋಟುಗಳು ವಾಪಸಾಗುತ್ತವೆ ಎಂಬುದನ್ನು ಕಾದು ನೋಡಲಿದ್ದೇವೆ. ಸೆಪ್ಟೆಂಬರ್ 30ರ ವರೆಗೆ ಏನಾಗುತ್ತದೆ ಎಂಬುದನ್ನು ಈಗಲೇ ಊಹೆ ಮಾಡಲು ಸಾಧ್ಯವಿಲ್ಲ ಎಂದು ದಾಸ್ ತಿಳಿಸಿದ್ದಾರೆ.

    ಆರ್‌ಬಿಐ ನೋಟು ಬದಲಾವಣೆಗೆ ಸೆಪ್ಟೆಂಬರ್ 30ರ ವರೆಗೆ ಸಮಯಾವಕಾಶ ನೀಡಿದ್ದು, ಒಂದು ಬಾರಿ 2,000 ರೂ. 10 ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ನೋಟುಗಳನ್ನು ಡೆಪಾಸಿಟ್ ಮಾಡಲು ಯಾವುದೇ ನಿರ್ಬಂಧವಿಲ್ಲ. ಒಂದು ಬಾರಿಗೆ ಡೆಪಾಸಿಟ್ ಮಾಡಬಹುದಾದ ಗರಿಷ್ಠ ಮಿತಿಯನ್ನು ಆರ್‌ಬಿಐ ನಿಗದಿಪಡಿಸಿಲ್ಲ. ಇದನ್ನೂ ಓದಿ: ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ಒಂದು ಖಾತೆಗೆ 50,000 ರೂ.ಗಿಂತಲೂ ಕಡಿಮೆ ಮೊತ್ತದ ಹಣವನ್ನು ಡೆಪಾಸಿಟ್ ಮಾಡಲು ಯಾವುದೇ ದಾಖಲೆಗಳ ಅಗತ್ಯವಿಲ್ಲ. ಆದರೆ ಅದಕ್ಕಿಂತಲೂ ಹೆಚ್ಚು ಹಣವನ್ನು ಡೆಪಾಸಿಟ್ ಮಾಡುವುದಾದರೆ ಆದಾಯ ತೆರಿಗೆ ನಿಯಮದ ಅನ್ವಯ ಮಾಡಲಾಗುತ್ತದೆ ಎಂಬುದು ತಿಳಿದಿರಬೇಕು. ಅಧಿಕ ಮೊತ್ತವನ್ನು ಡೆಪಾಸಿಟ್ ಮಾಡುವಾಗ ಪ್ಯಾನ್ ಕಾರ್ಡ್ ಸಲ್ಲಿಸಬೇಕಾಗುತ್ತದೆ ಎಂದು ಆರ್‌ಬಿಐ ಗವರ್ನರ್ ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ – ಜೂನ್‌ 3, 4ಕ್ಕೆ ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ

  • 500, 1000 ರೂ. ನೋಟು ವಿನಿಮಯ: ರಾಯಚೂರಿನಲ್ಲಿ ಮೂವರ ಬಂಧನ

    500, 1000 ರೂ. ನೋಟು ವಿನಿಮಯ: ರಾಯಚೂರಿನಲ್ಲಿ ಮೂವರ ಬಂಧನ

    – 16.70 ಲಕ್ಷ ರೂಪಾಯಿ ಹಳೆಯ ನೋಟು, ಒಂದು ಕಾರು ಜಪ್ತಿ

    ರಾಯಚೂರು: ರದ್ದಾಗಿರುವ 500, 1000 ಮುಖಬೆಲೆಯ ನೋಟುಗಳ ವಿನಿಮಯ ಮಾಡುತ್ತಿದ್ದ ಮೂವರು ದಂಧೆಕೋರರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

    ನಗರದ ಪಶ್ಚಿಮ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಮೂರು ಜನ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಧಾರವಾಡ ಮೂಲದ ರವಿಕುಮಾರ್, ರಾಯಚೂರಿನ ಅನ್ವರ್, ಮಾನ್ವಿಯ ಪರಶುರಾಮ ನೋಟು ವಿನಿಮಯ ವೇಳೆ ಸಿಕ್ಕಿಬಿದ್ದ ಆರೋಪಿಗಳು. ಬಂಧಿತರಿಂದ ಒಟ್ಟು 16 ಲಕ್ಷ 70 ಸಾವಿರ ರೂಪಾಯಿ ಹಳೆಯ ನೋಟುಗಳನ್ನ ಜಪ್ತಿ ಮಾಡಲಾಗಿದೆ. ಇದರಲ್ಲಿ 3 ಲಕ್ಷ 82 ಸಾವಿರ ರೂಪಾಯಿ ಸಾವಿರ ರೂಪಾಯಿ ಮುಖಬೆಲೆಯ ನೋಟು, 12 ಲಕ್ಷ 88 ಸಾವಿರ ರೂಪಾಯಿ 500 ರೂಪಾಯಿ ಮುಖಬೆಲೆಯ ನೋಟುಗಳಾಗಿವೆ.

    ರಾಯಚೂರಿನ ಮಂತ್ರಾಲಯ ರಸ್ತೆಯ ಅತಿಥಿ ಹೋಟೆಲ್ ಎದುರು ಆರೋಪಿಗಳು ಹಣ ವಿನಿಮಯಕ್ಕೆ ಮುಂದಾಗಿದ್ದರು. ದಾಳಿ ವೇಳೆ ಪೊಲೀಸರು ಆರೋಪಿಗಳ ಕಾರನ್ನೂ ಜಪ್ತಿ ಮಾಡಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.