ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ (RBI) ಹಿಂಪಡೆದ ನಂತರ ಪೆಟ್ರೋಲ್ ಬಂಕ್‌ಗಳಲ್ಲಿ (Petrol Bunk) ಪಿಂಕ್ ನೋಟಿನ ಹಾವಳಿ ಜಾಸ್ತಿಯಾಗಿದೆ. ಜನರು 200 ರೂ.ಗಳ ಪೆಟ್ರೋಲ್ ಹಾಕಿಸಿಕೊಂಡರೂ 2,000 ರೂ. ನೀಡುತ್ತಿದ್ದಾರೆ. ಇದರಿಂದ ಪೆಟ್ರೋಲ್ ಬಂಕ್ ಮಾಲೀಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
2,000 ರೂ. ನೋಟ್ ಬ್ಯಾನ್ (Note Ban) ಬೆನ್ನಲ್ಲೇ ಜನರು ತಮ್ಮಲ್ಲಿರುವ 2,000 ರೂ. ನೋಟುಗಳನ್ನು ಬ್ಯಾಂಕ್, ಆಸ್ಪತ್ರೆ ಹಾಗೂ ಪೆಟ್ರೋಲ್ ಬಂಕ್‌ನಲ್ಲಿ ಕೊಟ್ಟು ಬಚಾವ್ ಆಗುತ್ತಿದ್ದಾರೆ. ಆದರೆ ಇದರಿಂದ ಪೆಟ್ರೋಲ್ ಬಂಕ್ ಮಾಲೀಕರು ಕಂಗೆಟ್ಟಿದ್ದಾರೆ. ಜನರು 100-200 ರೂ. ಪೆಟ್ರೋಲ್ ಹಾಕಿಸಿದರೂ 2,000 ರೂ. ಪಿಂಕ್ ನೋಟನ್ನು ಕೊಡುತ್ತಿದ್ದಾರೆ. ಇದರಿಂದ ಬಂಕ್ ಮಾಲೀಕರಿಗೆ ಚೇಂಜ್ ಸಮಸ್ಯೆ ಆಗುತ್ತಿದೆ. ಇದನ್ನೂ ಓದಿ: ಇಂದಿನಿಂದ 2,000 ಮುಖಬೆಲೆ ನೋಟು ವಿನಿಮಯ ಪ್ರಕ್ರಿಯೆ ಆರಂಭ
ಇದರಿಂದ ಹೈರಾಣಾದ ಗೊರಗುಂಟೆಪಾಳ್ಯ (Goraguntepalya) ಪೆಟ್ರೋಲ್ ಬಂಕ್ ಮಾಲೀಕರು ಹೊಸದೊಂದು ಬೋರ್ಡ್ ಅನ್ನು ತಮ್ಮ ಪೆಟ್ರೋಲ್ ಬಂಕ್‌ನಲ್ಲಿ ಅಳವಡಿಸಿದ್ದಾರೆ. ಆ ಬೋರ್ಡ್‌ನಲ್ಲಿ 1,500 ರೂ.ಗಳ ಪೆಟ್ರೋಲ್ ಹಾಕಿಸಿದರೆ ಮಾತ್ರ 2,000 ರೂ. ನೋಟನ್ನು ನೀಡಿ ಸಹಕರಿಸಿ ಎಂದು ಬರೆಯುವ ಮೂಲಕ ಜನರಲ್ಲಿ ಚೇಂಜ್ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ – ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ
ನವದೆಹಲಿ: ಚಲಾವಣೆಯಿಂದ ಹಿಂಪಡೆದಿರುವ 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಮಂಗಳವಾರದಿಂದ ಬ್ಯಾಂಕುಗಳಿಗೆ (Bank) ನೀಡಿ ಬದಲಾಯಿಸಿಕೊಳ್ಳಬಹುದು (Exchange) ಅಥವಾ ಡೆಪಾಸಿಟ್ ಮಾಡಿಕೊಳ್ಳಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತಿಳಿಸಿದೆ.
ಆರ್‌ಬಿಐ ಚಲಾವಣೆಯಿಂದ ಹಿಂಪಡೆದಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಎಲ್ಲ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಬಹುದು. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ನೀವು ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಅದಲ್ಲದೇ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ನೀವು 2,000 ರೂ. ನೋಟುಗಳನ್ನು ಬದಲಿಸಿಕೊಳ್ಳಬಹುದು.
ನೋಟುಗಳ ವಿನಿಮಯಕ್ಕೆ ಅರ್ಜಿ ಬೇಕಿಲ್ಲ:
ಸಾರ್ವಜನಿಕರು ಬ್ಯಾಂಕ್‌ಗಳಲ್ಲಿ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಯಾವುದೇ ನಮೂನೆಯನ್ನು ಭರ್ತಿ ಮಾಡುವ ಅಗತ್ಯವಿಲ್ಲ. ಆರ್‌ಬಿಐ ಘೋಷಣೆಯ ಬಳಿಕ ರಿಕ್ವೆಸ್ಟ್ ಫಾರ್ಮ್ ಅನ್ನು ಭರ್ತಿ ಮಾಡಿ ನೋಟು ಬದಲಾವಣೆ ಮಾಡಬೇಕು ಎಂಬ ಸುದ್ದಿ ಹರಿದಾಡಿತ್ತು. ಆದರೆ ಭಾನುವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಲ್ಲ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದು, ಯಾವುದೇ ಫಾರ್ಮ್ ಅನ್ನು ಭರ್ತಿ ಮಾಡುವ ಅಗತ್ಯವಿಲ್ಲ ಎಂದಿದೆ.
ಗುರುತಿನ ಚೀಟಿ ಬೇಕಾ?
ನೋಟುಗಳ ವಿನಿಮಯ ಹಾಗೂ ಠೇವಣಿಗೆ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲ ಎಂದು ಎಸ್‌ಬಿಐ ಸ್ಪಷ್ಟಪಡಿಸಿದೆ. ಆದ್ದರಿಂದ ನಿರಾತಂಕವಾಗಿ 2,000 ರೂ. ನೋಟು ಬದಲಾಯಿಸಿಕೊಳ್ಳಬಹುದು.
ನೋಟುಗಳ ಬದಲಾವಣೆಗೆ ಶುಲ್ಕ ಇದೆಯಾ?
2,000 ರೂಪಾಯಿ ನೋಟುಗಳ ವಿನಿಮಯ ಹಾಗೂ ಠೇವಣಿಗೆ ಯಾವುದೇ ಶುಲ್ಕವನ್ನು ಬ್ಯಾಂಕ್‌ಗಳಿಗೆ ಪಾವತಿಸಬೇಕಿಲ್ಲ. ಬ್ಯಾಂಕ್‌ಗಳು ಉಚಿತವಾಗಿಯೇ ನಿಮ್ಮ ನೋಟುಗಳನ್ನು ಬದಲಿಸಿಕೊಡುತ್ತವೆ.
ನೋಟು ಬದಲಾವಣೆಯ ಗಡುವು:
ಮೇ 19ರಂದು ಆರ್‌ಬಿಐ 2,000 ರೂ. ಮುಖಬೆಲೆಯೆ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದೆ. ಆದರೆ ನೋಟುಗಳ ವಿನಿಮಯಕ್ಕೆ ಸಾಕಷ್ಟು ಸಮಯಾವಕಾಶವನ್ನು ಆರ್‌ಬಿಐ ನೀಡಿದೆ. ಮೇ 23 ರಿಂದ ಸೆಪ್ಟೆಂಬರ್ 30 ರವರೆಗೂ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದ್ದು, ಈ 4 ತಿಂಗಳ ಗಡುವಿನಲ್ಲಿ ನೋಟುಗಳನ್ನು ಬದಲಿಸಿಕೊಳ್ಳಬಹುದು.
ಎಷ್ಟು ನೋಟು ಬದಲಿಸಿಕೊಳ್ಳಬಹುದು?
ಒಬ್ಬರು ಒಂದು ಬಾರಿ ಗರಿಷ್ಠ 2,000 ರೂ. ಮುಖಬೆಲೆಯ 10 ನೋಟುಗಳು ಅಂದರೆ 20,000 ರೂ.ಯನ್ನು ಬದಲಿಸಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ. ಅದಲ್ಲದೇ ಒಬ್ಬ ವ್ಯಕ್ತಿ ಒಂದು ದಿನದಲ್ಲಿ ಎಷ್ಟು ಬಾರಿಯಾದರೂ ಸರತಿ ಸಾಲಿನಲ್ಲಿ ನಿಂತು ನೋಟುಗಳನ್ನು ಬದಲಿಸಿಕೊಳ್ಳಬಹುದು. ಆದರೆ ಒಂದು ಬಾರಿಗೆ ಗರಿಷ್ಠ 20,000 ರೂ. ಮಾತ್ರ ಬದಲಾವಣೆಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾದ ವಿಪಕ್ಷ ನಾಯಕನ ಆಯ್ಕೆ
ಬ್ಯಾಂಕ್‌ಗಳಲ್ಲಿ 2,000 ರೂ. ನೋಟು ಡೆಪಾಸಿಟ್ ಅವಕಾಶ:
2,000 ರೂ. ಮುಖಬೆಲೆಯ ನೋಟು ಅಮಾನ್ಯವಾಗಿಲ್ಲ. ಅದನ್ನು ಕೇವಲ ಚಲಾವಣೆಯಿಂದ ಹಿಂಪಡೆಯಲಾಗಿದೆ. ಬ್ಯಾಂಕ್‌ಗಳಲ್ಲಿ 2,000 ರೂ. ನೋಟುಗಳನ್ನು ಜಮಾ ಮಾಡಬಹುದು. ಆದರೆ ಇದಕ್ಕೆ ಯಾವುದೇ ಮಿತಿಯನ್ನು ಆರ್‌ಬಿಐ ವಿಧಿಸಿಲ್ಲ. ಆದರೆ ನಿಗದಿತ ಮಿತಿ ದಾಟಿದ ಪ್ರಕರಣಗಳಲ್ಲಿ ಕೆವೈಸಿ ಸೇರಿ ಅಗತ್ಯ ಶಾಸನಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾದ ಅಗತ್ಯವಿದೆ.
ಬ್ಯಾಂಕ್ ಗ್ರಾಹಕರಲ್ಲದಿದ್ದರೂ ನೋಟು ಬದಲಾಯಿಸಿಕೊಳ್ಳಬಹುದು:
ಬ್ಯಾಂಕ್ ಗ್ರಾಹಕರಲ್ಲದಿದ್ದರು 2,000 ರೂ. ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಯಾವುದೇ ಬ್ಯಾಂಕಿನಲ್ಲಿ, ಆರ್‌ಬಿಐ ಪ್ರಾದೇಶಿಕ ಶಾಖೆಗಳಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ – ಶೀಘ್ರವೇ ಮಸೂದೆ ಮಂಡನೆ
ನವದೆಹಲಿ: ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ ವರದಿಯಲ್ಲಿ ದೇಶದಲ್ಲಿ ನಕಲಿ ನೋಟುಗಳ ಹಾವಳಿ ಭಾರೀ ಪ್ರಮಾಣದ ಏರಿಕೆಯನ್ನು ಬಹಿರಂಗಪಡಿಸಿದೆ. 2016ರಲ್ಲಿ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀಕರಣ ಕ್ರಮದ ಬಗ್ಗೆ ಇತರ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.
ಆರ್‌ಬಿಐ ವರದಿ ಪ್ರಕಾರ, 2021-22ರ ಆರ್ಥಿಕ ವರ್ಷದಲ್ಲಿ ಎಲ್ಲಾ ಮುಖಬೆಲೆಯ ನಕಲಿ ನೋಟುಗಳು ಹೆಚ್ಚಾಗಿವೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ, 500 ರೂ. ಮುಖಬೆಲೆಯ ನಕಲಿ ನೋಟುಗಳು ಶೇ.101.9 ರಷ್ಟು ಹೆಚ್ಚಾಗಿದೆ. 2,000 ರೂ. ಮುಖಬೆಲೆಯ ನಕಲಿ ನೋಟುಗಳು ಶೇ.54.16 ರಷ್ಟು ಹೆಚ್ಚಾಗಿದೆ.
2016ರಲ್ಲಿ ಕೇಂದ್ರ ಸರ್ಕಾರ ಕಪ್ಪು ಹಣ ಹೊರಹಾಕುವುದು ಮಾತ್ರವಲ್ಲದೇ ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವ ಕಾರಣಕ್ಕೂ 500 ಹಾಗೂ 1,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿತ್ತು.
ಇದೀಗ ಆರ್‌ಬಿಐ ವರದಿಯಲ್ಲಿ ದೇಶದಲ್ಲಿ ನಕಲಿ ನೋಟು ಹೆಚ್ಚುತ್ತಿರುವ ಮಾಹಿತಿಯನ್ನು ಹೊರಹಾಕಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಟಿಎಂಟಿಸಿ ಸಂಸದ ಓಬ್ರೇನ್ ಅವರು ಟ್ವಿಟ್ಟರ್‌ನಲ್ಲಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಯುನಿಕಾರ್ನ್‌ಗಳ ಮೌಲ್ಯ 25 ಲಕ್ಷ ಕೋಟಿಗೆ ಹೆಚ್ಚಳ – ಮೋದಿ
ಕೇಂದ್ರದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ, ನೋಟು ರದ್ದತಿಯ ಏಕೈಕ ದುರದೃಷ್ಟಕರ ಯಶಸ್ಸು ಎಂದರೆ ಭಾರತದ ಆರ್ಥಿಕತೆಯ ನಾಶ ಎಂದಿದ್ದಾರೆ.
The only unfortunate success of Demonetisation was the TORPEDOING of India’s economy. pic.twitter.com/S9iQVtSYSx
ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಟಿಎಂಸಿ ನಾಯಕ ಡೆರೆಕ್ ಒಬ್ರೇನ್, ನರೇಂದ್ರ ಮೋದಿಯವರೆ, ನೋಟು ಅಮಾನ್ಯೀಕರಣ ನೆನಪಿದೆಯಾ? ನೋಟು ರದ್ದತಿ ರಾಷ್ಟ್ರದ ಎಲ್ಲಾ ನಕಲಿ ನೋಟುಗಳನ್ನು ತೊಡೆದು ಹಾಕುತ್ತದೆ ಎಂದು ನೀವು ಯಾವ ಭರವಸೆಯಲ್ಲಿ ಹೇಳಿದ್ದೀರಿ? ಇದೀಗ ಆರ್‌ಬಿಐ ವರದಿ ಪ್ರಕಾರ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ
How you promised the nation Demo would WIPE OUT ALL COUNTERFEIT CURRENCY.
Here’s the latest RBI report pointing out the huge increase in counterfeit notes???? pic.twitter.com/ipmQXUF8BY
— Derek O’Brien | ডেরেক ও’ব্রায়েন (@derekobrienmp) May 29, 2022
ನೋಟು ಅಮಾನ್ಯೀಕರಣ:
2016ರ ನವೆಂಬರ್‌ನಲ್ಲಿ ಸರ್ಕಾರ ಎಲ್ಲಾ 500 ಹಾಗೂ 1,000 ರೂ. ನೋಟುಗಳನ್ನು ಅಮಾನ್ಯೀಕರಿಸಿತು ಹಾಗೂ ಹೊಸ 500 ಮತ್ತು 2,000 ರೂ. ನೋಟುಗಳನ್ನು ಬಿಡುಗಡೆ ಮಾಡಿತು. ಈ ಕ್ರಮದಿಂದ ಭ್ರಷ್ಟಾಚಾರಕ್ಕೆ ಹಾಗೂ ನಕಲಿ ನೋಟು ಬಳಕೆಗೆ ಕಡಿವಾಣ ಬೀಳಲಿದ್ದು, ಡಿಜಿಟಲ್ ವಹಿವಾಟಿಗೆ ಉತ್ತೇಜನ ಸಿಗಲಿದೆ ಎಂದು ಕೇಂದ್ರ ತಿಳಿಸಿತ್ತು.
ಹಠಾತ್ತನೆ ನೋಟು ಅಮಾನ್ಯೀಕರಣದ ಘೋಷಣೆಯಿಂದಾಗಿ ಜನರು ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಬ್ಯಾಂಕ್‌ಗಳ ಎದುರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಸರ್ಕಾರದ ಕ್ರಮದಿಂದ ನಗದು ಕೊರತೆ ಹಾಗೂ ಅನಾನುಕೂಲತೆಯೂ ಉಂಟಾಗಿತ್ತು. ಅಂದಿನಿಂದಲೂ ಈ ವಿಷಯ ದೇಶದಲ್ಲಿ ಭಾರೀ ಚರ್ಚೆಗೆ ಒಳಗಾಗಿದೆ.
ನವದೆಹಲಿ: ದೇಶದ ಜಿಡಿಪಿ ಶೇ.8ರಿಂದ ಶೇ.4.5ಕ್ಕೆ ಇಳಿಕೆಯಾಗಿದ್ದು, ಇದೇನಾ ಅಚ್ಛೇ ದಿನ್ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಬರಂ ಪ್ರಶ್ನೆ ಮಾಡಿದ್ದಾರೆ.
ಬುಧವಾರ ತಿಹಾರ್ ಜೈಲಿನಿಂದ ಹೊರ ಬಂದಿರುವ ಪಿ.ಚಿದಂಬರಂ ಇಂದು ಸುದ್ದಿಗೋಷ್ಠಿ ನಡೆಸಿ, ಮೋದಿ ಸರ್ಕಾರದ ಮೇಲೆ ಜಿಡಿಪಿ ಅಸ್ತ್ರವನ್ನ ಪ್ರಯೋಗಿಸಿದರು. ಕಳೆದ ಆರು ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.8ರಿಂದ ಶೇ.4.5ಕ್ಕೆ ಇಳಿಕೆಯಾಗಿದೆ. ಕೇಂದ್ರ ಸರ್ಕಾರ ಅರ್ಥ ವ್ಯವಸ್ಥೆಯನ್ನು ಸುಧಾರಿಸುವ ಕೆಲಸ ಮಾಡುತ್ತಿಲ್ಲ ಎಂದು ಕಿಡಿಕಾರಿದರು.
Congress leader P Chidambaram: Prime Minister has been unusually silent on the economy. He has left it to his ministers to indulge in bluff and bluster. The net result, as the Economist put it, is that the government has turned out to be an ‘incompetent manager’ of the economy. https://t.co/algL4hlIJF
ಇದೇನಾ ಅಚ್ಛೇ ದಿನ್?: ದೇಶದ ಆರ್ಥಿಕ ವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ. ಅರ್ಥವ್ಯವಸ್ಥೆಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಯಾವುದೇ ಉಪಾಯಗಳನ್ನು ಮಾಡುವಲ್ಲಿ ವಿಫಲವಾಗಿದೆ. ನೋಟ್ ಬ್ಯಾನ್, ಜಿಎಸ್‍ಟಿ ಮತ್ತು ಟ್ಯಾಕ್ಸ್ ಟೆರರಿಸಮ್ ಅರ್ಥವ್ಯವಸ್ಥೆಯ ಮೇಲೆ ನೇರ ಪರಿಣಾಮಗಳನ್ನು ಬೀರಿವೆ. ಬೇಕಾದ್ರೆ ನಾನು ನಿಮಗೆ ಕಳೆದ 6 ತ್ರೈಮಾಸಿಕದ ಅಂಕಿಅಂಶಗಳ ಮೂಲಕ ಸಾಬೀತು ಮಾಡುತ್ತೇನೆ. ಜಿಡಿಪಿ 8ರಿಂದ 7, 6.6, 5.5, 5 ಮತ್ತು 4.5ಕ್ಕೆ ಬಂದು ತಲುಪಿದೆ. ಇದೇನಾ ಎನ್‍ಡಿಎ ಸರ್ಕಾರ ಹೇಳಿರುವ ಅಚ್ಛೇ ದಿನ್ ಎಂದು ಪ್ರಶ್ನೆ ಮಾಡಿದರು.
ಯಾರು ಹೊಣೆ?: ಈ ವರ್ಷದ ಅಂತ್ಯದೊಳಗೆ ಜಿಡಿಪಿ ದರ ಶೇ.5ಕ್ಕೆ ತಲುಪಿದ್ರೆ ನಿಮ್ಮನ್ನು ಅದೃಷ್ಟವಂತರು ಎನ್ನಬಹುದು. ಜಿಡಿಪಿ ಶೇ.5ಕ್ಕೆ ತಲುಪಿದಾಗ ಹಿರಿಯ ಅರ್ಥಶಾಸ್ತ್ರಜ್ಞರಾದ ಡಾ.ಅರವಿಂದ್ ಸುಬ್ರಮಣಿಯನ್ ಸರ್ಕಾರಕ್ಕೆ ಎಚ್ಚರಿಕೆಯನ್ನು ಸಹ ನೀಡಿದ್ದರು. ಆದ್ರೆ ಇಂದಿನ ಸ್ಥಿತಿ ಅದಕ್ಕಿಂತ ಕೆಟ್ಟದಾಗಿದೆ. ಎಂದಿನಂತೆ ಜಿಡಿಪಿ ವಿಷಯದಲ್ಲಿ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಈ ಸಂಬಂಧ ಸುಳ್ಳು ಮಾತನಾಡಲು ತಮ್ಮ ಮಂತ್ರಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಅರ್ಥವ್ಯವಸ್ಥೆ ನಿರ್ವಹಣೆಯಲ್ಲಿ ಎಡವಿದ್ದು, ಅದರ ಹೊಣೆಯನ್ನು ಹೊರಬೇಕಿದೆ ಎಂದರು.
P. Chidambaram, Congress: I am particularly concerned about the political leaders who have been detained without charges. Freedom is indivisible, if we must preserve our freedom, we must fight for their freedom. https://t.co/eS5HbMtWmB
ವಿತ್ತಮಂತ್ರಿ ಈರುಳ್ಳಿ ತಿನ್ನಲ್ಲ: ಜಗತ್ತಿನ ಎಲ್ಲ ಉದ್ಯಮಿದಾರರು ವ್ಯವಹಾರದ ದೃಷ್ಟಿಯಿಂದ ಅಂತರಾಷ್ಟ್ರೀಯ ಪತ್ರಿಕೆಗಳನ್ನು ಓದುತ್ತಿರುತ್ತಾರೆ. ಪತ್ರಿಕೆಗಳಲ್ಲಿ ಪ್ರಕಟವಾಗುವ ಅಂಕಿ ಅಂಶಗಳನ್ನು ಗಮನಿಸಿ ದೇಶದ ಆರ್ಥಿಕತೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಲೆಕ್ಕ ಹಾಕುತ್ತಾರೆ. ಕೈಗಾರಿಕೆಗಳ ಸ್ಥಿತಿ ಕೆಟ್ಟದಾಗಿದ್ದು, ದಿನದಿಂದ ದಿನಕ್ಕೆ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಿದೆ. ಈರುಳ್ಳಿ ಬೆಲೆ ಕೆಜಿಗೆ 100 ರೂ.ಗಿಂತ ಹೆಚ್ಚಾಗಿದೆ. ಬಹುಶಃ ಹಣಕಾಸಿನ ಮಂತ್ರಿಗಳು ಈರುಳ್ಳಿ ತಿನ್ನದಿರಬಹುದು. ಹಾಗಾಗಿ ಪರಿಸ್ಥಿತಿಯ ಬಗ್ಗೆ ಗೊತ್ತಿಲ್ಲ ಎಂದು ಟಾಂಗ್ ನೀಡಿದರು.
ಕಾಶ್ಮೀರ ನಾಯಕರ ಬಗ್ಗೆ ಚಿಂತೆ: ಬುಧವಾರ ರಾತ್ರಿ 8 ಗಂಟೆಗೆ ತಿಹಾರ್ ಜೈಲಿನಿಂದ ಹೊರ ಬಂದು ಸ್ವತಂತ್ರದ ಉಸಿರು ತೆಗೆದುಕೊಂಡಿದ್ದೇನೆ. ಆದ್ರೆ ಆಗಸ್ಟ್ 4ರಿಂದ ಕಾಶ್ಮೀರದ 75 ಲಕ್ಷ ಜನರಿಗೆ ಸ್ವತಂತ್ರ ಸಿಕ್ಕಿಲ್ಲ. ಯಾವುದೇ ಆರೋಪಗಳಿಲ್ಲದೇ ಅನಾವಶ್ಯಕವಾಗಿ ಕಾಶ್ಮೀರದ ನಾಯಕರನ್ನು ಬಂಧನದಲ್ಲಿ ಇರಿಸಲಾಗಿದೆ. ನಮ್ಮ ಸ್ವಾತಂತ್ರದ ಬಗ್ಗೆ ಹೇಗೆ ಮಾತನಾಡುತ್ತವೆ. ಹಾಗೆಯೇ ಬೇರೆಯವರ ಸ್ವಾತಂತ್ರತೆ ಬಗ್ಗೆ ಹೋರಾಡಬೇಕಿದೆ ಎಂದರು.
ಮಂತ್ರಿಯಾಗಿ ನನ್ನ ರೆಕಾರ್ಡ್ ಕ್ಲೀನ್ ಆಗಿದೆ. ನನ್ನೊಂದಿಗೆ ಕೆಲಸ ಮಾಡಿದ ಅಧಿಕಾರಿಗಳು ನನ್ನ ಸಂಪರ್ಕದಲ್ಲಿದ್ದಾರೆ. ನನ್ನ ಪ್ರಕರಣ ಏನು ಎಂಬುವುದು ಎಲ್ಲ ಪತ್ರಕರ್ತರಿಗೂ ಗೊತ್ತಿದೆ. ನನ್ನ ಪ್ರಕರಣಕ್ಕೆ ಸಂಬಂಧಿಸಿದ ಏನೇ ಪ್ರಶ್ನೆಗಳಿದ್ದರೂ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಸಂಪೂರ್ಣವಾಗಿ ಓದಿ. ಅಲ್ಲಿ ನಿಮಗೆ ಎಲ್ಲ ವಿಷಯಗಳು ಅರ್ಥವಾಗಲಿವೆ ಎಂದು ಪತ್ರಕರ್ತ ಪ್ರಶ್ನೆಗಳಿಗೆ ಉತ್ತರಿಸಿದರು.
Congress leader P Chidambaram: My record as Minister and my conscience are absolutely clear. Officers who have worked with me, business persons who have interacted with me and journalists who have observed me know that very well. pic.twitter.com/iNzkwxMqkt
ನವದೆಹಲಿ: ತೆಲಂಗಾಣದಲ್ಲಿ 6.4 ಕೋಟಿ ರೂ. ಮೌಲ್ಯದ 2 ಸಾವಿರ ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸುದ್ದಿಗೆ ಪ್ರತಿಕ್ರಿಯಿಸುವ ಕಾಂಗ್ರೆಸ್, ಇದೇನಾ ನಿಮ್ಮ ನೋಟ್ ಬ್ಯಾನ್ ಎಂದು ವ್ಯಂಗ್ಯವಾಗಿ ಟೀಕಿಸಿದೆ.
ಕಾಂಗ್ರೆಸ್ ಟ್ವೀಟ್: ಪಿಎಂ ಮೋದಿಯವರೇ ಭ್ರಷ್ಟಾಚಾರದ ವಿರುದ್ಧದ ನಿಮ್ಮ ಹೋರಾಟ ಸುಳ್ಳು ಎಂಬುವುದು ಸಾಬೀತಾಗಿದೆ. ನಕಲಿ ಕರೆನ್ಸಿ ತೆಗೆದು ಹಾಕುತ್ತೇವೆ ಎಂದು ನೋಟ್ ಬ್ಯಾನ್ ಮಾಡಲಾಯ್ತು. ಆದರೆ ಇಷ್ಟು ದೊಡ್ಡ ಮೊತ್ತದ ನಕಲಿ ನೋಟು ಪತ್ತೆಯಾಗಿದ್ದು ಹೇಗೆ? ಇದೇನಾ ನಿಮ್ಮ ನೋಟ್ ಬ್ಯಾನ್? ಇಷ್ಟು ದೊಡ್ಡ ಪ್ರಮಾಣದ ನಕಲಿ ನೋಟುಗಳು ಹೇಗೆ ಚಲಾವಣೆಗೆ ಬಂತು ಎಂಬುದಕ್ಕೆ ಉತ್ತರಿಸಿ.
ಶನಿವಾರ ತೆಲಂಗಾಣ ಪೊಲೀಸರು ಅಂತರ ರಾಜ್ಯ ಗ್ಯಾಂಗ್ ನ್ನು ಬಂಧಿಸಿ, 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದರು. ಖಮ್ಮಾಮ್ ಜಿಲ್ಲೆಯ ವೆಮ್ಸೂರ್ ನಲ್ಲಿ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಈ ತಂಡ ಗ್ರಾಹಕರಿಗೆ ನಕಲಿ ನೋಟುಗಳನ್ನು ಅಸಲಿ ಎಂದು ನಂಬಿಸಿ ವ್ಯವಹರಿಸುತ್ತಿದ್ದರು. 20% ಕಮಿಷನ್ ಮೇಲೆ ನೋಟುಗಳ ವರ್ಗಾವಣೆ ನಡೆಸುತ್ತಿದ್ದರು.
Telangana: Khammam police today arrested five persons for cheating public in guise of exchanging Rs. 2,000 denomination currency notes and offering 20% commission. 320 bundles of Rs. 2000 denomination fake notes (around Rs 6.4 crores) seized. pic.twitter.com/ptulXGi1Qb
2 ಸಾವಿರ ರೂಪಾಯಿಯ 320 ಬಂಡಲ್ ಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರು ತೆಲಂಗಾಣದ ನಿವಾಸಿಗಳೆಂದು ತಿಳಿದು ಬಂದಿದ್ದು, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ವ್ಯವಹರಿಸುತ್ತಿದ್ದರು ಎಂದು ವರದಿಯಾಗಿದೆ.
ಮೈಸೂರು: ನೋಟ್ ಬ್ಯಾನ್ ಆಗಿ ವರ್ಷಗಳೇ ಕಳೆದಿವೆ. ಕೆಲವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆ ಮತ್ತೆ ಕೆಲವರು ಉದ್ಯಮದಲ್ಲಿ ನಷ್ಟ ಅನುಭವಿಸಿದ್ದಾರೆ. ಮೈಸೂರಿನ ಕುಟುಂಬವೊಂದಕ್ಕೆ ನೋಟ್ ಬ್ಯಾನ್ ಪರಿಣಾಮದಿಂದಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಧಾನಿ ಮೋದಿ ಅವರು ನವೆಂಬರ್ 8, 2016 ನೋಟ್ ಬ್ಯಾನ್ ಮಾಡಿ ಮೂರೂವರೆ ವರ್ಷಗಳೇ ಕಳೆದಿದೆ. ಆದರೂ, ನೋಟ್ ಬ್ಯಾನ್ ಎಫೆಕ್ಟ್ ಮಾತ್ರ ಬಾಧಿಸುತ್ತಲೇ ಇದೆ. ಹೀಗೆ ನೋಟ್ ಬ್ಯಾನ್ ಎಫೆಕ್ಟ್ ನಿಂದ ನೊಂದ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮನಗುನಹಳ್ಳಿ ಗ್ರಾಮದ ಶೇಖರ್ ಮತ್ತವರ ಕುಟುಂಬ ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದೆ.
ಪರೋಟ ವ್ಯಾಪಾರ ಮಾಡುತ್ತಿದ್ದ ಶೇಖರ್ 40 ಜನರಿಗೆ ಕೆಲಸ ನೀಡಿದ್ದರು. ವ್ಯಾಪಾರವೂ ಭರ್ಜರಿಯಾಗಿ ನಡೆದು ತಿಂಗಳಿಗೆ ಲಕ್ಷಾಂತರ ರೂಪಾಯಿ ಆದಾಯವಿತ್ತು. ಇದೇ ಖುಷಿಯಲ್ಲಿ ನಿವೇಶನ ಖರೀದಿ ಮಾಡಿದ ಶೇಖರ್, ಮೈಸೂರಿನ ದಿವಾನ್ಸ್ ಹೌಸಿಂಗ್ ಫೈನಾನ್ಸ್ ನಲ್ಲಿ ಮನೆ ಸಾಲ ಪಡೆದು ಮನೆಯೂ ಕಟ್ಟಿಕೊಂಡರು. ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ನೋಟ್ ಬ್ಯಾನ್ ಬಳಿಕ ಇದ್ದಕ್ಕಿದ್ದಂತೆ ವ್ಯಾಪಾರ ಕುಸಿದು ಹೋಗಿದೆ ಎಂದು ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಶೇಖರ್ ಹೇಳಿದ್ದಾರೆ.
ನೋಟ್ ಬ್ಯಾನ್ ಬಳಿಕ ವ್ಯಾಪಾರ ಕುಸಿದು, ಮನೆಗೆ ಪಡೆದ ಸಾಲ ತೀರಿಸಲು ಸಾಧ್ಯವಾಗಿಲ್ಲ. ಹೇಗೋ ಮಾಡಿ 2017ರವರಗೆ ಮನೆ ಸಾಲದ ಕಂತು ಕಟ್ಟಿದ್ದಾರೆ. ಆದರೆ ಮುಂದೆ ಕಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ ಫೈನಾನ್ಸ್ ನವರು ಸಾಕಷ್ಟು ಬಾರಿ ನೋಟಿಸ್ ನೀಡಿದ್ದಾರೆ. ಕಡೆಗೆ ಮನೆ ಜಪ್ತಿ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಶೇಖರ್ ಪತ್ನಿ ರಮಾದೇವಿ ಪುತ್ರಿ ಮಾನಸ ಪುತ್ರ ಪೂರ್ಣಚಂದ್ರ ಜೊತೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರು, ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ತಹಶೀಲ್ದಾರ್, ಶಾಸಕರಿಗೂ ಪತ್ರ ಬರೆದಿದ್ದಾರೆ ಎಂದು ಸ್ಥಳೀಯರಾದ ಸತ್ಯಪ್ಪ ತಿಳಿಸಿದ್ದಾರೆ.
ಮಾನಸಿಕವಾಗಿ ಸಾಕಷ್ಟು ನೊಂದಿರುವ ಶೇಖರ್ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರ್ದೇಶಕರ ಅನುಮೋದನೆ ಪಡೆಯದೇ ಪ್ರಧಾನಿ ನರೇಂದ್ರ ಮೋದಿ 500 ಮತ್ತು 1000 ರೂ. ಮುಖಬೆಲೆಯ ನೋಟುಗಳ ನಿಷೇಧಿಸುವ ಘೋಷಣೆ ಪ್ರಕಟಿಸಿದ್ದರು ಎನ್ನುವ ವಿಚಾರ ಮಾಹಿತಿ ಹಕ್ಕಿನ ಅಡಿ ಬೆಳಕಿಗೆ ಬಂದಿದೆ.
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ನಿರ್ದೇಶಕರ ಮಂಡಳಿ ಸಭೆಯ ಮಾಹಿತಿ ನೀಡಬೇಕೆಂದು ವೆಂಕಟೇಶ್ ನಾಯಕ್ ಎಂಬವರು ಅರ್ ಟಿಐ ಅಡಿ ಅರ್ಜಿ ಸಲ್ಲಿಸಿದ್ದರು. ಆರಂಭದಲ್ಲಿ ಆರ್ ಬಿಐ ಎಲ್ಲ ಮಾಹಿತಿಗಳನ್ನು ನೀಡಲು ನಿರಾಕರಿಸಿತ್ತು. ಇದೀಗ ಸಭೆಯ ಎಲ್ಲ ಮಾಹಿತಿಗಳನ್ನು ಆರ್ ಬಿಐ ನೀಡಿದೆ.
2016 ನವೆಂಬರ್ 8ರಂದು ಸಂಜೆ 5.30ಕ್ಕೆ ನೋಟ್ ನಿಷೇಧ ಘೋಷಣೆಗೆ ಸಂಬಂಧಿಸಿದಂತೆ ಆರ್ ಬಿಐ ನಿರ್ದೇಶಕ ಮಂಡಳಿಯ ಸಭೆಯ ಕರೆಯಲಾಗಿತ್ತು. ಸಭೆಯಲ್ಲಿ ಕೆಲ ನಿರ್ದೇಶಕರು ಈ ನಿರ್ಧಾರ ವಿರೋಧಿಸಿ, ಹೆಚ್ಚಿನ ಕಪ್ಪುಹಣ ನಗದು ರೂಪದಲ್ಲಿ ಶೇಖರಣೆ ಆಗಿಲ್ಲ. ಬಹುತೇಕ ಕಪ್ಪು ಹಣ ರಿಯಲ್ ಎಸ್ಟೇಟ್, ಚಿನ್ನ, ಬೇನಾಮಿ ಆಸ್ತಿಗಳಲ್ಲಿದೆ. ಹಾಗಾಗಿ ನೋಟ್ ಬ್ಯಾನ್ ನಿಂದ ಕಪ್ಪು ಹಣದ ನಿಯಂತ್ರಣ ಅಸಾಧ್ಯ ಎಂದು ಹೇಳಿದ್ದರು. ಈ ಸಭೆಯಲ್ಲಿ ಭಾಗವಹಿಸಿದ್ದ ನಿರ್ದೇಶಕರ ಅನುಮೋದನೆ ಪಡೆಯದೇ ನರೇಂದ್ರ ಮೋದಿ ರಾತ್ರಿ 8 ಗಂಟೆಗೆ ನೋಟು ನಿಷೇಧದ ನಿರ್ಧಾರ ಪ್ರಕಟಿಸಿದ್ದಾರೆ ಎನ್ನುವ ವಿಚಾರ ಆರ್ ಟಿಐ ಅಡಿ ಬೆಳಕಿಗೆ ಬಂದಿದೆ.
500 ಮತ್ತು 1000 ರೂ. ಮುಖಬೆಲೆಯ ನೋಟ್‍ಗಳ ನಿಷೇಧದಿಂದಾಗಿ ಕಪ್ಪುಹಣದ ನಿಯಂತ್ರಣ, ಇ-ಪೇಮೆಂಟ್ ವ್ಯವಹಾರ ವೃದ್ಧಿಯಾಗಲಿದೆ. ಜನರಿಗೆ ಆನ್‍ಲೈನ್ ಮೂಲಕ ವ್ಯವಹಾರಗಳು ನಡೆಸಲು ನೋಟ್ ಬ್ಯಾನ್ ನಾಂದಿಯಾಗಲಿದೆ. 2011-12 ರಿಂದ 2015-16ರವರೆಗೆ ದೇಶದ ಅರ್ಥವ್ಯವಸ್ಥೆ ಶೇ.30 ರಷ್ಟು ಏರಿಕೆ ಕಂಡಿದೆ. ಇತ್ತ 500 ರೂ. ಮೌಲ್ಯದ ನೋಟುಗಳು ಶೇ.76 ಮತ್ತು 1 ಸಾವಿರ ಮೌಲ್ಯದ ನೋಟು ಶೇ.109ರಷ್ಟು ಹೆಚ್ಚಾಗಿವೆ ಎಂದು ಸರ್ಕಾರ ವಾದಿಸಿತ್ತು.
ಹೆಚ್ಚಿನ ಮೌಲ್ಯದ ನೋಟುಗಳ ಚಲಾವಣೆಯನ್ನು ತಗ್ಗಿಸಿ ಕಪ್ಪು ಹಣವನ್ನು ನಿಯಂತ್ರಿಸಿ ಆರ್ಥಿಕ ಅಭಿವೃದ್ಧಿ ವಿಚಾರದ ಸರ್ಕಾರದ ಪ್ರಸ್ತಾವನೆಯನ್ನು ಆರ್ ಬಿಐ ಒಪ್ಪಿರಲಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ನೋಟು ನಿಷೇಧಕ್ಕೂ ಮೊದಲು ಹಣಕಾಸು ಸಚಿವಾಲಯ ಮತ್ತು ಆರು ತಿಂಗಳ ಕಾಲ ಚರ್ಚೆ ನಡೆಸಿತ್ತು. ಕೇಂದ್ರದ ಕೆಲ ಪ್ರಸ್ತಾಪಗಳಿಗೆ ಸಮ್ಮತಿ ಸೂಚಿಸದೇ ಇದ್ದರೂ ಆರ್ ಬಿಐ ನೋಟ್ ನಿಷೇಧಕ್ಕೆ ಹಸಿರು ನಿಶಾನೆ ನೀಡಿತ್ತು.
ನವದೆಹಲಿ: ನೋಟು ಅಮಾನೀಕರಣ ವಿಚಾರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ.
ಸ್ವಾತಂತ್ರ್ಯನಂತರ ಹಿಂದೆಂದೂ ಕಾಣದಂತಹ ನಿರುದ್ಯೋಗ ಸಮಸ್ಯೆ ಈಗ ದೇಶದಲ್ಲಿ ಸೃಷ್ಟಿಯಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿಯನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಗುಡುಗಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?:
ನೋಟ್ ಬ್ಯಾನ್ ದುರಂತವಲ್ಲ. ಅದೊಂದು ದೊಡ್ಡ ಹಗರಣ. ನೋಟ್ ಬ್ಯಾನ್ ದೇಶದ ಆರ್ಥಿಕತೆಯನ್ನೇ ಹಾಳು ಮಾಡಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂಬ ಎನ್‍ಎಸ್‍ಎಸ್‍ಒ ಅಂಕಿ ಸಂಖ್ಯೆ ಮಾಹಿತಿಯನ್ನು ಮುಚ್ಚಿಹಾಕಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಯತ್ನಿಸುತ್ತಿದೆ. ದೇಶದಲ್ಲಿ 1947ರ ಬಳಿಕ ಕಾಣದಂತಹ ನಿರುದ್ಯೋಗ ಸಮಸ್ಯೆ ಈಗ ಹೆಚ್ಚಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
Demonetisation was not a disaster, it was a mega scam. It destroyed India's economy & irrespective of whichever fraud Modi govt might indulge in to hide NSSO data, everyone in this country knows unemployment rate is the highest now than ever since 1947
ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕ ರಮೇಶ್ ಅವರು ನೀವು ನೋಟ್ ಬ್ಯಾನ್‍ಗೂ ಮುನ್ನ ಹೀಗೆ ಇದ್ದೀರಿ. ನೋಟು ಅಮಾನೀಕರಣಗೊಂಡ ಬಳಿಕ ಹೀಗೆ ಆಗಿದ್ದೀರಾ ಎಂದು ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾವು 2016ರ ನವೆಂಬರ್ ನಲ್ಲಿ 500ರೂ. ಹಾಗೂ 1,000 ರೂ. ಮುಖಬೆಲೆಯ ನೋಟು ನಿಷೇಧವನ್ನು ಮಾಡಿತ್ತು. ಬಳಿಕ 500 ರೂ. ಹೊಸ ನೋಟು ಹಾಗೂ 2,000 ರೂ. ಮುಖಬೆಲೆಯ ನೋಟನ್ನು ಜಾರಿಗೆ ತಂದಿತ್ತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 500 ರೂ., 1 ಸಾವಿರ ರೂ. ನೋಟು ಬ್ಯಾನ್ ಮಾಡಿ ಸರಿಸುಮಾರು 2 ವರ್ಷ ಆಗುತ್ತಿದ್ದರೂ ನಗರದಲ್ಲಿ ಹಳೇ ನೋಟು ಬದಲಾವಣೆ ದಂಧೆಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಇದರಂತೆ ನಗರದಲ್ಲಿ ನೋಟು ಬದಲಾವಣೆ ಮಾಡುತ್ತಿದ್ದ ಗ್ಯಾಂಗನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ರಮೇಶ್, ಸಕಾರಕ್, ಪ್ರಕಾಶ್, ವೆಂಕಟರಾಮ್ ಬಂಧಿತ ಆರೋಪಿಗಳು. ಮಡಿಕೇರಿ ಮೂಲದ ವ್ಯಕ್ತಿಯೊಬ್ಬರಿಂದ ಹಳೇ ನೋಟು ತಂದಿದ್ದ ನಾಲ್ವರು ಇಪ್ಪತ್ತು ಪರ್ಸೆಂಟ್ ಕಮೀಷನ್‍ಗೆ ಹಳೇ ನೋಟು ಕೊಟ್ಟು ಹೊಸ ನೋಟು ಪಡೆಯುತ್ತಿದ್ದರು.
ನೋಟು ಬದಲಾವಣೆ ದಂಧೆ ಮಾಡುತ್ತಿದ್ದ ಆರೋಪಿಗಳು ಬಿಜೆಪಿ ಸರ್ಕಾರದ ಅವಧಿ ಮುಗಿದ ಬಳಿಕ ಮತ್ತೆ ಹಳೇ ನೋಟು ಚಲಾವಣೆಗೆ ಬರುತ್ತೆ ಎಂದು ಜನರಿಗೆ ಸುಳ್ಳು ಹೇಳಿ ಮೋಸ ಮಾಡುತ್ತಿದ್ದರು. ಈಗಾಗಲೇ ಹಲವು ಮಂದಿಗೆ ಇದೇ ರೀತಿ ಹೇಳಿ ಮೋಸ ಮಾಡಿದ್ದ ಈ ಗ್ಯಾಂಗ್, ಹಳೆ ನೋಟುಗಳನ್ನು ತೆಗೆದುಕೊಳ್ಳಲು ಸಾಕಷ್ಟು ಗಿರಾಕಿಗಳನ್ನು ಹೊಂದಿದ್ದರು ಎನ್ನಲಾಗಿದೆ.
ನಗರದ ನಂದಿನಿ ಲೇಔಟ್ ಬಸ್ ನಿಲ್ದಾಣದ ಬಳಿ 1,95 ಕೋಟಿ ರೂ. ಹಣ ಬದಲಾವಣೆಗಾಗಿ ಕಾದು ಕುಳಿತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ನಗದು ಸಮೇತ ಬಂಧಿಸಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಪೊಲೀಸರು ಈ ಗ್ಯಾಂಗಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೇ ಇಂತಹ ಗ್ಯಾಂಗ್ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು: ಸಂಸದ ನಳಿನ್‍ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಗರದ ಜಿಲ್ಲಾ ಕಚೇರಿ ಎದುರಲ್ಲಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಚಿವರು, ಲಾಭದಲ್ಲಿರುವ ವಿಜಯ ಬ್ಯಾಂಕ್ ಜೊತೆಗೆ ನಷ್ಟದಲ್ಲಿರುವ ದೇನಾ ಬ್ಯಾಂಕನ್ನು ವಿಲೀನಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಹರಿಹಾಯ್ದರು.
ವಿಜಯ್ ಬ್ಯಾಂಕನ್ನು ನಮ್ಮ ಸಮುದಾಯದ ನಾಯಕರು ಸ್ಥಾಪಿಸಿ ಬೆಳೆಸಿದರು. ಅದು ರಾಷ್ಟ್ರೀಕೃತಗೊಂಡು ಲಾಭದಾಯಕ ಬ್ಯಾಂಕ್ ಆಗುತ್ತಿದೆ. ಆದರೆ ಈಗ ಅದರೊಂದಿಗೆ ನಷ್ಟದಲ್ಲಿರುವ ದೇನಾ ಬ್ಯಾಂಕ್ ವಿಲೀನಗೊಳಿಸಲಾಗುತ್ತಿದೆ. ಇದನ್ನು ತಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಿಜೆಪಿ ಶಾಸಕರು, ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಅವರು ಜೀವಂತ ಇದ್ದೂ ಸತ್ತ ಹಾಗೆ ಎಂದು ಗುಡುಗಿದರು.
ಬ್ಯಾಂಕ್ ವಿಲೀನ ತಪ್ಪಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಸಂಸದ ನಳಿನ್ ಕುಮಾರ್ ಕಟೀಲ್ ಸತ್ತಿದ್ದಾರೆಯೇ ಅಂತ ಪ್ರಶ್ನೆ ಮಾಡುತ್ತೇನೆ ಎಂದ ಮಾಜಿ ಸಚಿವರು, ಸಂಸದರ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದರು.
ಲೋಕಪಾಲ್ ಜಾರಿಗೆ ತರುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಆದರೆ ಗುಜರಾತಿನಲ್ಲೇ ಲೋಕಾಯುಕ್ತರು ಇಲ್ಲ. ಬೇರೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಬೋಧನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.