Tag: ನೌಕಾನೆಲೆ

  • ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ – ತಪ್ಪಿದ ಅನಾಹುತ

    ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ – ತಪ್ಪಿದ ಅನಾಹುತ

    ಕಾರವಾರ: ಓರಿಸ್ಸಾ (Orissa) ಮೂಲದ ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ (Cylinder) ಸ್ಫೋಟಗೊಂಡು ಐದಕ್ಕೂ ಅಧಿಕ ಕಾರ್ಮಿಕರ ಶೆಡ್‍ಗಳು ಸುಟ್ಟು ಭಸ್ಮವಾದ ಘಟನೆ ಕಾರವಾರದ (Karwar) ಮುದಗಾದ ನೌಕಾ ನೆಲೆಯ (Navy) ವ್ಯಾಪ್ತಿಯಲ್ಲಿರುವ ಲೇಬರ್ ಕಾಲೋನಿಯಲ್ಲಿ ನಡೆದಿದೆ.

    ಲೇಬರ್ ಕಾಲೋನಿಯಲ್ಲಿ ಶೆಡ್ ಒಂದರಲ್ಲಿ ಇರಿಸಿದ್ದು, ಒಂದು ದೊಡ್ಡ ಸಿಲಿಂಡರ್, ಎರಡು ಸಣ್ಣ ಸಿಲಿಂಡರ್‌ಗಳು ಸ್ಪೋಟಗೊಂಡಿದೆ. ಮಾಹಿತಿ ಪ್ರಕಾರ ಸಿಲೆಂಡರ್‌ನ ವಾಲ್‍ನಲ್ಲಿ ಲೀಕೇಜ್ ಆದ ಕಾರಣ ಈ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಐದು ಸೆಡ್‍ಗಳು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಹಾನಿಯಾಗಿದ್ದು, ಎಲ್ಲಾ ವಸ್ತುಗಳು ಸುಟ್ಟುಹೋಗಿದ್ದು, 25 ಮೊಬೈಲ್‍ಗಳು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ – ದೆಹಲಿಗೆ ನಿತ್ಯ ವಿಮಾನ

    ಅದೃಷ್ಟವಶಾತ್ ಶೆಡ್‍ನಲ್ಲಿ ಇದ್ದ ಜನರು ಬೆಂಕಿ ಕಾಣಿಸುತಿದ್ದಂತೆ ಹೊರಬಂದಿದ್ದು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಡ್ವಾಣಿ ಭೇಟಿಯಾದ ಪೇಜಾವರಶ್ರೀ- ರಾಮಮಂದಿರ ಹೋರಾಟ ದಿನಗಳ ಮೆಲುಕು

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ವಿರುದ್ಧ ಗೆಲುವಿಗೆ 50 ವರ್ಷ- ಕಾರವಾರಕ್ಕೆ ಬಂದ ಪ್ರಧಾನಿ ಬೆಳಗಿಸಿದ್ದ ವಿಜಯ ಜ್ಯೋತಿ

    ಪಾಕಿಸ್ತಾನದ ವಿರುದ್ಧ ಗೆಲುವಿಗೆ 50 ವರ್ಷ- ಕಾರವಾರಕ್ಕೆ ಬಂದ ಪ್ರಧಾನಿ ಬೆಳಗಿಸಿದ್ದ ವಿಜಯ ಜ್ಯೋತಿ

    ಕಾರವಾರ: 1971 ರಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಸಶಸ್ತ್ರ ದಳವು ಗೆಲುವು ಸಾಧಿಸಿದ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಇಂದು ಕಾರವಾರದ ಕದಂಬಾ ನೌಕಾನೆಲೆಯಲ್ಲಿ ವಿಜಯ ದಿನವನ್ನು ಆಚರಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಬೆಳಗಿಸಿದ್ದ ವಿಜಯ ಜ್ಯೋತಿಯು ಇಂದು ಕಾರವಾರದ ಕದಂಬ ನೆಲೆಗೆ ಆಗಮಿಸಿದ್ದು ವಿಶೇಷವಾಗಿತ್ತು.

    ಕಾರವಾರಕ್ಕೆ ಬಂದ ವಿಜಯ್ ಜ್ಯೋತಿಯನ್ನು ನೌಕಾಪಡೆಯ ಅಧಿಕಾರಿಗಳ ಸಮ್ಮುಖದಲ್ಲಿ ಕದಂಬಾ ನೌಕಾ ನೆಲೆಯಲ್ಲಿ ನಿರ್ಮಿಸಿರುವ ಯುದ್ಧ ಸ್ಮಾರಕದಲ್ಲಿ ನೌಕಾ ನೆಲೆಯ ಕಮಾಂಡಿಂಗ್ ಪ್ಲಾಗ್ ಆಫೀಸರ್ ರಿಯರ್ ಅಡ್ಮಿರಲ್ ಮಹೇಶ್ ಸಿಂಗ್‍ರವರು ಜ್ಯೋತಿಯನ್ನು ಬರಮಾಡಿಕೊಂಡು ಗೌರವ ಸಲ್ಲಿಸಿದರು. ಇದನ್ನೂ ಓದಿ: ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್

    ಸ್ವರ್ಣಿಮ್ ವಿಜಯ ವರ್ಷ:
    1971ರಲ್ಲಿ ಭಾರತೀಯ ಶಸ್ತ್ರ ಪಡೆಯು ಪಾಕಿಸ್ತಾನದ ಸೈನ್ಯದ ಮೇಲೆ ನಿರ್ಣಾಯಕ ಹಾಗೂ ಐತಿಹಾಸಿಕ ವಿಜಯವನ್ನು ಪಡೆದಿತ್ತು. ಇದು ಬಾಂಗ್ಲಾ ದೇಶದ ಸೃಷ್ಟಿಗೆ ಸಹ ಕಾರಣವಾಗಿತ್ತು. ಅದಲ್ಲದೆ ಎರಡನೇ ಮಹಾಯುದ್ಧದ ನಂತರ ಅತಿದೊಡ್ಡ ಮಿಲಿಟರಿ ಶರಣಾಗತಿಗೆ ಈ ಯುದ್ದ ಕಾರಣೀಭೂತವಾಗಿತ್ತು. 2020ರ ಡಿಸೆಂಬರ್ 16 ರಿಂದ ರಾಷ್ಟ್ರವು ಭಾರತ -ಪಾಕ್ ಯುದ್ಧದ ಗೆಲುವಿನ 50 ವರ್ಷದ ಸಂಭ್ರಮಾಚರಣೆಯನ್ನು ಈ ಬಾರಿ ಸ್ವರ್ಣಿಮ್ ವಿಜಯ ವರ್ಷ ಎಂಬ ಹೆಸರಿನಲ್ಲಿ ದೇಶದ್ಯಾಂತ ಆಚರಿಸಲಾಗುತ್ತಿದೆ.

    ಯುದ್ಧದಲ್ಲಿ ಹುತಾತ್ಮರಾದವರನ್ನು ಸ್ಮರಿಸಲು, ವಿಜಯಕ್ಕೆ ಕಾರಣರಾದವರನ್ನು ಗೌರವಿಸಲು ಮತ್ತು ವಿಜಯದ ಆಚರಣೆಯ ಸಾಂಕೇತಿಕವಾಗಿ ಭಾರತೀಯ ರಕ್ಷಣಾಪಡೆಗಳಿಂದ ಸ್ವರ್ಣಿಮ್ ವಿಜಯ ವರ್ಷ ವೆಂದು ಆಚರಿಸಲು ಪ್ರಧಾನಿ ಮೋದಿಯವರು ಕರೆ ನೀಡಿ, ಒಂದು ವರ್ಷದ ಕಾರ್ಯಕ್ರಮಗಳಿಗೆ ಡಿಸೆಂಬರ್ 16 ರಂದು ಮೋದಿಯವರು ವಿಜಯ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ್ದರು. ಈ ವಿಜಯಜ್ಯೋತಿಯು ಭಾರತದಾದ್ಯಂತ ಸಂಚರಿಸುತಿದ್ದು, ಡಿಸೆಂಬರ್ 15 ರಂದು ಈ ಜ್ಯೋತಿ ನವದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ತಲುಪಲಿದೆ. ಇಂದು ಬಂದ ಜ್ಯೋತಿಯು ಸೆಪ್ಟೆಂಬರ್ 24ರ ವರೆಗೆ ಕಾರವಾರದ ಕದಂಬ ನೌಕಾನೆಲೆಯಲ್ಲಿ ಇರಲಿದೆ. ಇದನ್ನೂ ಓದಿ: ವ್ಯಾಕ್ಸಿನ್‌ ಭಾರತ ಮಹಾನ್‌ – 9 ಗಂಟೆಯಲ್ಲಿ 2 ಕೋಟಿಗೂ ಅಧಿಕ ಮಂದಿಗೆ ಲಸಿಕೆ!

  • ಕದಂಬ ನೌಕಾನೆಲೆಯಲ್ಲಿ ಸ್ಮಾರ್ಟ್ ಫೋನ್, ಇಂಟರ್‌ನೆಟ್ ಬಂದ್

    ಕದಂಬ ನೌಕಾನೆಲೆಯಲ್ಲಿ ಸ್ಮಾರ್ಟ್ ಫೋನ್, ಇಂಟರ್‌ನೆಟ್ ಬಂದ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾ ಬಳಿ ಇರುವ ಕದಂಬ ನೌಕಾನೆಲೆ ಸೇರಿದಂತೆ ಭಾರತೀಯ ನೌಕಾದಳದಲ್ಲಿ ಇಂದಿನಿಂದಲೇ ಜಾರಿ ಬರುವಂತೆ ಸ್ಮಾರ್ಟ್ ಫೋನ್, ಫೇಸ್‍ಬುಕ್ ಹಾಗೂ ಇಂಟರ್‌ನೆಟ್ ಬಳಕೆಗೆ ಭಾರತೀಯ ನೌಕಾಪಡೆ ನಿಷೇಧ ಹೇರಿದೆ.

    ಕಳೆದ ತಿಂಗಳು ಪಾಕಿಸ್ತಾನದ ಹನಿಟ್ರ್ಯಾಪ್ ಬಲೆಗೆ ಸಿಲುಕಿ, ಭಾರತದ ಭದ್ರತೆಗೆ ಸಂಬಂಧಿಸಿದ ಬಹುಮುಖ್ಯ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದ ಆರೋಪದ ಮೇರೆಗೆ ಸುಮಾರು 10 ಮಂದಿಯನ್ನು ಬಂಧಿಸಲಾಗಿತ್ತು. ಜಿಲ್ಲೆಯ ಕಾರವಾರದ ಅರಗಾದ ಕದಂಬ ನೌಕಾನೆಲೆಯ ಇಬ್ಬರು, ಭಾರತೀಯ ನೌಕಾಪಡೆಯ ಒಟ್ಟು 7 ಸಿಬ್ಬಂದಿ ಹಾಗೂ ಓರ್ವ ಹವಾಲ ವ್ಯವಹಾರದ ವ್ಯಕ್ತಿಯನ್ನು ಆಂಧ್ರ ಪೋಲೀಸರು ಬಂಧಿಸಿದ್ದರು.

    ಹೀಗಾಗಿ ಭಾರತೀಯ ನೌಕಾಪಡೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ನೌಕಾ ಸಿಬ್ಬಂದಿ ಸಮುದ್ರ ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳು ಹಾಗೂ ಸ್ಮಾರ್ಟ್ ಫೋನ್ ಬಳಸುವುದನ್ನು ನಿಷೇಧಿಸಿದೆ. ಈ ಹಿಂದೆ ಇಂಟರ್ ನೆಟ್, ಸ್ಮಾರ್ಟ್ ಫೋನ್ ಬಳಸುವುದಕ್ಕೆ ಯಾವುದೇ ಅಡ್ಡಿ ಇರಲಿಲ್ಲ. ಆದರೆ ಏಳು ಜನ ನೌಕಾ ಸಿಬ್ಬಂದಿ ಬಂಧನದ ನಂತರ ಮೊಬೈಲ್ ಬಳಕೆಯಿಂದಲೇ ದೊಡ್ಡ ದೊಡ್ಡ ಮಾಹಿತಿ ಪಾಕಿಸ್ತಾನ ಗುಪ್ತ ದಳಕ್ಕೆ ಹಂಚಿಕೆಯಾಗಿತ್ತು.

    ಇದಲ್ಲದೇ ದೊಡ್ಡ ಅಧಿಕಾರಿಗಳನ್ನು ಸಹ ಹನಿಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿಕೊಂಡ ಪಾಕಿಸ್ತಾನ ಗುಪ್ತದಳ ಇಲಾಖೆ ನೌಕಾದಳದವರಿಂದ ಹಲವು ಮಾಹಿತಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ನೌಕಾದಳ ಈ ನಿರ್ಧಾರ ಕೈಗೊಂಡಿದೆ.

  • ನೀರಿಗೆ ಬರ – ಸ್ತಬ್ಧವಾಗ್ತಿದೆ ಏಷ್ಯಾದ ಮೂರನೇ ಅತಿದೊಡ್ಡ ನೌಕಾನೆಲೆ

    ನೀರಿಗೆ ಬರ – ಸ್ತಬ್ಧವಾಗ್ತಿದೆ ಏಷ್ಯಾದ ಮೂರನೇ ಅತಿದೊಡ್ಡ ನೌಕಾನೆಲೆ

    ಕಾರವಾರ: ಏಷ್ಯಾದಲ್ಲಿಯೇ ಮೂರನೇ ಅತಿದೊಡ್ಡ ನೌಕಾನೆಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬಾ ನೌಕಾನೆಲೆಗೀಗ ಬರದ ಕರಿ ಛಾಯೆ ತಟ್ಟಿದೆ. ಇಡೀ ನೌಕಾನೆಲೆಗೆ ನೀರಿನ ಕೊರತೆಯಿಂದಾಗಿ ನೌಕಾನೆಲೆಯ ಕೆಲಸಕಾರ್ಯಗಳನ್ನೇ ಬಂದ್ ಮಾಡಲು ನೌಕಾ ದಳ ಹೊರಟಿದೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಭಾರತೀಯ ನೌಕಾದಳವು 11,500 ಎಕರೆ ಪ್ರದೇಶವನ್ನು ಹೊಂದುವ ಮೂಲಕ ಏಷ್ಯಾದಲ್ಲಿಯೇ ಮೂರನೇ ಅತಿದೊಡ್ಡ ನೌಕಾನೆಲೆ ಎನ್ನುವ ಹೆಗ್ಗಳಿಕೆಯನ್ನು ಗಿಟ್ಟಿಸಿಕೊಂಡಿದೆ. ಹೀಗಾಗಿ ಈ ನೌಕಾನೆಲೆಯಲ್ಲಿ ಫೇಸ್-2 ಹಂತದ ಅಭಿವೃದ್ಧಿ ಕಾರ್ಯಗಳು ನಡೆಯುತಿದ್ದು, ನೌಕಾನೆಲೆಯನ್ನು ವಿಸ್ತರಣೆ ಮಾಡಲಾಗುತ್ತಿದೆ.

    ಇಲ್ಲಿಯೇ ದೇಶದ ಅತಿದೊಡ್ಡ ಯುದ್ಧ ನೌಕೆ ವಿಕ್ರಮಾದಿತ್ಯ ಹಡಗು, ಯುದ್ಧ ನೌಕೆಗಳು, ಸಬ್ ಮೆರಿನ್‍ಗಳ ನಿಲ್ದಾಣವಿದೆ. ಹೀಗಾಗಿ ಒಂದು ದಿನಕ್ಕೆ ನೌಕಾನೆಲೆಗೆ ಪ್ರತಿ ದಿನ ಆರು ಮಿಲಿಯನ್ ಲೀಟರ್ ನೀರು ಬೇಕಾಗುತ್ತದೆ. ಇದಲ್ಲದೇ ಇಲ್ಲಿನ ಕಾಲೋನಿ, ನಗರವ್ಯಾಪ್ತಿ ಸೇರಿ ಹದಿನೆಂಟು ಮಿಲಿಯನ್ ನೀರು ಒಂದು ದಿನಕ್ಕೆ ಬೇಕಿದೆ. ಈ ನೀರಿಗೆ ಮೂಲ ಅಂಕೋಲ ತಾಲೂಕಿನ ಗಂಗಾವಳಿ ನದಿಯಾಗಿದ್ದು, ಈ ನದಿಯಿಂದಲೇ ಅಂಕೋಲ ಪಟ್ಟಣ ಸೇರಿದಂತೆ ಕಾರವಾರಕ್ಕೂ ನೀರು ಪೂರೈಸಬೇಕು.

    ಗಂಗಾವಳಿ ನದಿಯಲ್ಲಿ ಈಗ ಮಳೆ ಬಾರದೆ ಸಂಪೂರ್ಣ ಬತ್ತಿ ಹೋಗಿದ್ದು, ಎಲ್ಲಿಯೂ ನೀರು ಪೂರೈಸದ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ನೌಕಾನೆಲೆಗೆ ನಾಲ್ಕು ದಿನಕ್ಕೆ ಒಂದು ಸಾರಿ ನೀರು ಪೂರೈಕೆಯಾಗುತ್ತಿದ್ದು, ಜೂನ್ ಆದರೂ ಮಳೆ ಬಾರದ ಹಿನ್ನೆಲೆಯಲ್ಲಿ ಅದನ್ನೂ ಪೂರೈಕೆ ಮಾಡಲು ಸಾಧ್ಯವಾಗದೆ ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ ಕೈಚೆಲ್ಲಿ ಕುಳಿತಿದೆ. ಹೀಗಾಗಿ ಇನ್ನೆರಡು ದಿನದಲ್ಲಿ ಮಳೆ ಬಾರದಿದ್ದಲ್ಲಿ ನೌಕಾನೆಲೆಯ ಫೇಸ್-2 ಕಾಮಗಾರಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣ ನಿಲ್ಲಿಸಲು ನೌಕಾದಳ ತೀರ್ಮಾನಿಸಿದೆ.

    ನೌಕಾನೆಲೆಗೆ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ನೀರನ್ನು ಪೂರೈಸುತ್ತಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ನದಿ ಹರಿಯುವ ಸ್ಥಳದಲ್ಲಿ ಅಳಿದುಳಿದ ನೀರಿಗೆ ಪಂಪ್‍ಗಳನ್ನು ಅಳವಡಿಸಿ ನೀರನ್ನು ಪೂರೈಕೆ ಮಾಡಿದ್ದೇವೆ. ಪ್ರತಿ ದಿನ 6 ಮಿಲಿಯನ್ ನಷ್ಟು ನೀರು ನೌಕಾನೆಲೆಗೆ ಬೇಕಾಗುತ್ತಿದೆ. ಇದನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಇನ್ನೆರಡು ದಿನದಲ್ಲಿ ಮಳೆ ಬಾರದಿದ್ರೆ ನೌಕಾನೆಲೆಗೆ ನೀರು ಪೂರೈಸಲು ಸಾಧ್ಯವಾಗದು ಎಂದು ನೌಕಾನೆಲೆಗೆ ನೀರು ಪೂರೈಕೆ ಜವಾಬ್ದಾರಿ ಹೊತ್ತಿರುವ ಕರ್ನಾಟಕ ನಗರ ನೀರು ಪೂರೈಕೆ ಹಾಗೂ ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಸುರೇಶ್ ಹೇಳಿದ್ದಾರೆ.

    ನೀರಿಲ್ಲದೆ ನೌಕೆಗಳೇ ಸ್ಥಳಾಂತರ!
    ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ ಅಂಕೋಲ ತಾಲೂಕಿನಲ್ಲಿರುವ ಗಂಗಾವಳಿ ನದಿಯಿಂದ ನೀರನ್ನು ಹೊನ್ನಳ್ಳಿಗೆ ತಂದು ಶುದ್ಧೀಕರಿಸಲಾಗುತ್ತದೆ. ಬಳಿಕ ನೀರನ್ನು ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕದಂಬ ನೌಕಾನೆಲೆ ಹಾಗೂ ನೌಕಾ ನೆಲೆಯ ವಸತಿ ಗೃಹಕ್ಕೆ ನೀಡಲಾಗುತ್ತದೆ. ಕಳೆದ ಎಂಟು ದಿನದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ 2 ಮಿ.ಲೀಟರ್ ನೀರನ್ನು ನಾಲ್ಕು ದಿನಕ್ಕೆ ಒಂದು ಬಾರಿ ಪೂರೈಕೆ ಮಾಡಿದರೆ ಅಲ್ಪ ನೀರನ್ನು ಟ್ಯಾಂಕರ್ ಮೂಲಕ ಕಾಲೋನಿಗೆ ವಿತರಿಸಲಾಗಿತ್ತು.

    ಆದರೆ ಎರಡು ದಿನದಿಂದ ಅದನ್ನೂ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಇದರಿಂದಾಗಿ ಯುದ್ಧ ನೌಕೆಗಳಿಗೆ ಹಾಗೂ ಫೇಸ್ -2 ಕಾಮಗಾರಿಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ನೌಕಾನೆಲೆಯಲ್ಲಿ ನಡೆಯುತ್ತಿದ್ದ ವಿಸ್ತರಣಾ ಕಾರ್ಯಕ್ಕೆ ಅಡ್ಡಿಯಾಗಿದ್ದು, ಕೆಲವು ಭಾಗದಲ್ಲಿ ಕೆಲಸವನ್ನು ನಿಲ್ಲಿಸಲಾಗಿದೆ. ಶುದ್ಧ ಕುಡಿಯುವ ನೀರು ಕೊರತೆಯಿಂದ ಯುದ್ಧ ಹಡಗುಗಳು, ಸಬ್ ಮೆರಿನ್‍ಗಳು ಕಾರವಾರದ ಕದಂಬಾ ನೌಕಾನೆಲೆಯಿಂದ ಮುಂಬೈ ನೌಕಾನೆಲೆಗೆ ತಮ್ಮ ಸ್ಥಾನ ಬದಲಿಸಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಜೂನ್ 8 ರೊಳಗೆ ಮಳೆ ಬರುವ ಸೂಚನೆ ನೀಡಿದೆ. ಒಂದು ವೇಳೆ ನಿಗದಿಯಂತೆ ಮಳೆ ಬಾರದಿದ್ದರೆ ಏಷ್ಯಾದ ಮೂರನೇ ಅತಿದೊಡ್ಡ ನೌಕಾನೆಲೆಯ ಪ್ರಮುಖ ಕಾರ್ಯಗಳು ಸ್ತಬ್ಧವಾಗಲಿವೆ.