Tag: ನ್ಯಾಕ್

  • ನ್ಯಾಕ್ ನೀಡಲು ಲಂಚ – ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ ಬಂಧಿಸಿದ ಸಿಬಿಐ

    ನ್ಯಾಕ್ ನೀಡಲು ಲಂಚ – ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ ಬಂಧಿಸಿದ ಸಿಬಿಐ

    ದಾವಣಗೆರೆ: ಲಂಚ ಪಡೆದು ಎ++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.

    10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬಸಂತ ಪಂಚಮಿ – ಪ್ರಯಾಗ್‌ರಾಜ್‌ನಲ್ಲಿ ಸೋಮವಾರ 3 ಕೋಟಿ ಭಕ್ತರಿಂದ ಪವಿತ್ರ ಸ್ನಾನ

    ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್‌ ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ್ದರು. ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸದ್ಯ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿದ್ದರು. ಅಲ್ಲದೇ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ. ಇದನ್ನೂ ಓದಿ: Ramanagara | ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಟೈಯರ್ ಫ್ಯಾಕ್ಟರಿಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

    ಪ್ರಕರಣದ ತನಿಖೆ ನಡೆಸುತ್ತಿರುವಾಗ, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತು. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ISRO | ಯಶಸ್ವಿಯಾಗಿ ಉಡಾವಣೆಯಾಗಿದ್ದ ಇಸ್ರೋದ 100ನೇ ರಾಕೆಟ್‌ನಲ್ಲಿ ತಾಂತ್ರಿಕ ದೋಷ

  • ಮಂಗಳೂರು ವಿವಿ ಫಲಿತಾಂಶ 10 ದಿನದೊಳಗೆ ಪ್ರಕಟ – ಅಶ್ವಥ್ ನಾರಾಯಣ

    ಮಂಗಳೂರು ವಿವಿ ಫಲಿತಾಂಶ 10 ದಿನದೊಳಗೆ ಪ್ರಕಟ – ಅಶ್ವಥ್ ನಾರಾಯಣ

    ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ (Mangaluru University) ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಇನ್ನು 10 ದಿನಗಳ ಒಳಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ (CN Ashwath Narayan) ಹೇಳಿದರು.

    ವಿಧಾನಸಭೆ ಅಧಿವೇಶನದ (Belagavi Session) ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ (UT Khader) ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರಿಸಿದರು. ಇದನ್ನೂ ಓದಿ: `ಮಹಾ’ ಕ್ಯಾತೆಗೆ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ

    ಮಂಗಳೂರು ವಿವಿಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ ಎಂದು ಖಾದರ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊಸ ವರ್ಷ.. ಹಳೇ ವೈರಸ್‌; ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ – ಭಾರತದ ಕಥೆ ಏನು?

    ಈ ಹಿಂದೆ ಮಂಗಳೂರು ವಿವಿಯು ನ್ಯಾಕ್ `ಎ’ ಗ್ರೇಡ್‌ನಲ್ಲಿತ್ತು. ಈಗ `ಬಿ’ ಗ್ರೇಡ್‌ಗೆ ಬಂದಿದೆ. ವಿಶ್ವವಿದ್ಯಾಲಯದ ಗುಣಮಟ್ಟ ಪುನಃ ಉತ್ತಮಪಡಿಸಲು ಕ್ರಮವಹಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.

    Live Tv
    [brid partner=56869869 player=32851 video=960834 autoplay=true]

  • ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರವಾಗಿ ರೂಪಿಸಿ – ಗೆಹ್ಲೋಟ್

    ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರವಾಗಿ ರೂಪಿಸಿ – ಗೆಹ್ಲೋಟ್

    ಬೆಂಗಳೂರು: ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು (Independence Day) ಅಮೃತ ಮಹೋತ್ಸವವೆಂದು ಆಚರಿಸುತ್ತಿದೆ. ಈ ಅಮೃತ ಕಾಲದಲ್ಲಿ ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನೆಯ ಕೇಂದ್ರವನ್ನಾಗಿ (International Research Center) ರೂಪಿಸಲು, ನಾವು ಏಕಕಾಲದಲ್ಲಿ ಅನೇಕ ರಂಗಗಳಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಕರೆ ನೀಡಿದರು.

    ಬೆಂಗಳೂರಿನಲ್ಲಿ ವಿಟಿಯು (VTU) ನೇತೃತ್ವದಲ್ಲಿ ಆಯೋಜಿಸಿರುವ 3ನೇ ಟೆಕ್ ವಿಸಿ ಕಾನ್ಕ್ಲೇವ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, 2014 ರಿಂದ ದೇಶದಲ್ಲಿ ವಿಜ್ಞಾನ (Science) ಮತ್ತು ತಂತ್ರಜ್ಞಾನದಲ್ಲಿನ ಹೂಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ಪ್ರಯತ್ನದಿಂದಾಗಿ, ಇಂದು ಭಾರತವು ಅಂತಾರಾಷ್ಟ್ರೀಯ ಸಂಶೋಧನಾ ಸೂಚ್ಯಂಕದಲ್ಲಿ 46ನೇ ಸ್ಥಾನದಲ್ಲಿದೆ. 2015ರಲ್ಲಿ 81ನೇ ಸ್ಥಾನದಲ್ಲಿತ್ತು ಎಂದು ಹೇಳಿದರು.

    ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಉದ್ದೇಶವು ನಮ್ಮ ದೇಶವನ್ನು ವಿಶ್ವ ಮಟ್ಟದಲ್ಲಿ ಶೈಕ್ಷಣಿಕ ಶಕ್ತಿಯನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಅದಕ್ಕಾಗಿ ಹೊಸ ಶಿಕ್ಷಣ ನೀತಿಯಲ್ಲಿ (National Education Policy), 21ನೇ ಶತಮಾನದ ಅಗತ್ಯಗಳನ್ನು ಪೂರೈಸಲು ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಹಲವು ನಿಬಂಧನೆಗಳನ್ನು ಮಾಡಲಾಗಿದೆ. ಎನ್‌ಇಪಿಯು ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ಉಜ್ವಲಗೊಳಿಸುವ ಜೊತೆಗೆ ಸುರಕ್ಷಿತವಾಗಿಯೂ ಇರಿಸುತ್ತದೆ. ನವಭಾರತ ನಿರ್ಮಾಣದಲ್ಲಿ ಇದರ ಪಾತ್ರ ನಿರ್ಣಾಯಕವಾಗಿರುತ್ತದೆ. ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲೂ ಇದೆ ಎಂದು ಎಚ್ಚರಿಸಿದರು.

    ಸಾಂದರ್ಭಿಕ ಚಿತ್ರ

    ಮುಖ್ಯವಾಗಿ ಎನ್‌ಇಪಿ ಮಾತೃಭಾಷೆಯಲ್ಲಿ ಅಧ್ಯಯನದೊಂದಿಗೆ ಆದ್ಯತೆಯ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ‍್ಯ ನೀಡುತ್ತದೆ. ಎಲ್ಲರಿಗೂ ಉನ್ನತ ಶಿಕ್ಷಣ ಒದಗಿಸುತ್ತದೆ. ಇಂತಹ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಹಾಗಾಗಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದೇಶಿಕ ಭಾಷೆಯನ್ನು ಉತ್ತೇಜಿಸುವ ಸಲುವಾಗಿ, 2021-22 ಶೈಕ್ಷಣಿಕ ವರ್ಷದಿಂದ ಕನ್ನಡ ಮಾಧ್ಯಮದ ಮೂಲಕ ಇಂಜಿನಿಯರಿಂಗ್ ಶಿಕ್ಷಣ ನೀಡಲು ವಿಶ್ವವಿದ್ಯಾಲಯವು ಕಾಲೇಜುಗಳಿಗೆ ಅನುಮತಿ ನೀಡಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್, ನ್ಯಾಕ್ ಅಧ್ಯಕ್ಷ ಪ್ರೊ.ಭೂಷಣ್ ಪಟವರ್ಧನ್, ಎನ್‌ಬಿಎ ಅಧ್ಯಕ್ಷ ಪ್ರೊ.ಕೆ.ಕೆ.ಅಗರ್ವಾಲ್, ವಿಟಿಯು ಕುಲಪತಿ ಕರಿಸಿದ್ದಪ್ಪ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್ Rank, ನ್ಯಾಕ್ ಮಾನ್ಯತೆ- ಕುಲಪತಿಗಳಿಗೆ ಡಿಸಿಎಂ ಡೆಡ್‍ಲೈನ್

    ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್ Rank, ನ್ಯಾಕ್ ಮಾನ್ಯತೆ- ಕುಲಪತಿಗಳಿಗೆ ಡಿಸಿಎಂ ಡೆಡ್‍ಲೈನ್

    – ಕ್ರಿಯಾ ಯೋಜನೆ ರೂಪಿಸಲು ಸೂಚನೆ

    ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಕಾಲೇಜುಗಳ ನ್ಯಾಕ್ ಮಾನ್ಯತೆ, ಎನ್‍ಐಆರ್‍ಎಫ್ Rank ಪಡೆಯುವ ಸಂಬಂಧ 15 ದಿನಗಳ ಒಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಡೆಡ್‍ಲೈನ್ ವಿಧಿಸಿದ್ದಾರೆ. ಈ ಮೂಲಕ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವತ್ತ ವೇಗದ ಹೆಜ್ಜೆ ಇಟ್ಟಿದ್ದಾರೆ.

    ಸೋಮವಾರ ನಗರದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿ, ಸುಮಾರು 3 ಗಂಟೆಗೂ ಹೆಚ್ಚು ಸಮಯ ಸಮಾಲೋಚನೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) Rank ಹೊಂದಿರಬೇಕು ಹಾಗೂ ಪ್ರತಿ ಕಾಲೇಜಿಗೂ ನ್ಯಾಕ್ ಮಾನ್ಯತೆ (NAAC Accreditation) ಇರಲೇಬೇಕು ಎಂದರು.

    ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ Rank-ಮಾನ್ಯತೆ ಅಗತ್ಯ ಎಂದು ಕುಲಪತಿಗಳಿಗೆ ಡಿಸಿಎಂ ಸಲಹೆ ನೀಡಿದರು.

    ಮುಂದಿನ 3 ವರ್ಷಗಳಲ್ಲಿ ಯಾವ್ಯಾವ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು, ಎನ್‍ಐಆರ್‍ಎಫ್ Rank, ನ್ಯಾಕ್ ಮಾನ್ಯತೆ ಪಡೆಯಲು ಏನೆಲ್ಲ ಸಿದ್ಧತೆ ನಡೆಸಲಾಗುವುದು ಎಂಬ ವಿವರಗಳನ್ನು ಕ್ರಿಯಾ ಯೋಜನೆಯಲ್ಲಿ ಉಲ್ಲೇಖಿಸಿ ಮುಂದಿನ ಸಭೆಯಲ್ಲಿ ತಿಳಿಸಬೇಕು ಎಂದರು.

    ಎನ್‍ಐಆರ್‍ಎಫ್ Ranking- ನ್ಯಾಕ್ ಮಾನ್ಯತೆಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ. ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಬೇಕಾದರೆ, ಹೆಚ್ಚು ಅನುದಾನ ಪಡೆಯಬೇಕಾದರೆ ಇವು ಅಗತ್ಯ. ಉನ್ನತ ಶಿಕ್ಷಣವನ್ನು ತಳಮಟ್ಟದಿಂದಲೇ ಬಲಿಷ್ಠಗೊಳಿಸಬೇಕಾದರೆ ಇವೆಲ್ಲ ಅಂಶಗಳು ಅಗತ್ಯ ಎಂದು ಹೇಳಿದರು.

    ಸದ್ಯಕ್ಕೆ ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‍ಸಿ)ಯು ಎನ್‍ಐಆರ್‍ಎಫ್ Ranking ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ. ಮುಂದಿನ ಬಾರಿ Ranking ಪಟ್ಟಿ ಸಿದ್ಧವಾಗುವ ಹೊತ್ತಿಗೆ ಮೈಸೂರು ವಿವಿ 20ರೊಳಗಿನ ಸ್ಥಾನಕ್ಕೆ, ಬೆಂಗಳೂರು ವಿವಿ 50ರೊಳಗಿನ ಸ್ಥಾನಕ್ಕೆ ಬರಬೇಕು. ವಿಟಿಯು ಕೂಡ ಇನ್ನೂ ಉತ್ತಮ ಸ್ಥಾನಕ್ಕೆ ಬರಬೇಕು ಎಂದು ಡಿಸಿಎಂ ಕುಲಪತಿಗಳಿಗೆ ತಾಕೀತು ಮಾಡಿದರು. ಅಲ್ಲದೆ ಇದೇ ಪಟ್ಟಿಯಲ್ಲಿ ತುಮಕೂರು ಮತ್ತು ಮಂಗಳೂರು ವಿವಿಗಳು 150ರೊಳಗಿನ ಸ್ಥಾನದಲ್ಲಿವೆ. ಉಳಿದ ಯಾವ ವಿವಿಗಳಿಗೂ ಈ Rank ಸಿಕ್ಕಿಲ್ಲ. ಕೊನೇಯ ಪಕ್ಷ ಅದರ ಚೌಕಟ್ಟಿನೊಳಗೆ ಬಂದಿಲ್ಲ ಎಂದರು.

    ಬೋಧನೆ, ಕಲಿಕೆ, ಸಂಪನ್ಮೂಲ ಸಂಗ್ರಹ, ಸಂಶೋಧನೆ ಮತ್ತು ವೃತ್ತಿಪರತೆ, ಫಲಿತಾಂಶ, ಜನರನ್ನು ತಲುಪುವ ರೀತಿ ಹಾಗೂ ಅದೇ ಜನರನ್ನು ಒಳಗೊಳ್ಳುವ ರೀತಿಯೂ ಸೇರಿದಂತೆ ಪ್ರಮುಖ ಐದು ಅಂಶಗಳನ್ನು ಆಧಾರವಾಗಿ ಇಟ್ಟಿಕೊಂಡು ಎನ್‍ಐಆರ್‍ಎಫ್ Ranking ನೀಡಲಾಗುತ್ತದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    3 ವಿವಿಗಳಿಗೆ ಅರ್ಹತೆಯೇ ಇಲ್ಲ:
    ರಾಜ್ಯದ ಸರ್ಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್‍ಐಆರ್‍ಎಫ್ Ranking ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಎ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿಕೊಂಡಿದ್ದು, ಇನ್ನು 4 ವಿವಿಗಳು ಅರ್ಜಿಯನ್ನೇ ಹಾಕಿಲ್ಲ. 3 ವಿವಿಗಳು ಎನ್‍ಐಆರ್‍ಎಫ್ Ranking ಗೆ ಅರ್ಹತೆಯನ್ನೇ ಹೊಂದಿಲ್ಲ ಎಂದು ಮಾಹಿತಿ ಬಿಚ್ಚಿಟ್ಟರು.

    ರಾಜ್ಯದಲ್ಲಿ ಒಟ್ಟು 430 ಕಾಲೇಜುಗಳಿದ್ದು, ಕೇವಲ 50 ಕಾಲೇಜುಗಳಿಗೆ ಮಾತ್ರ ನ್ಯಾಕ್ ಮಾನ್ಯತೆ ಸಿಕ್ಕಿದೆ. ಕೊನೇ ಪಕ್ಷ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜ್‍ಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕೆನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅಲ್ಲದೆ ಪ್ರತಿ ವಿವಿ ವ್ಯಾಪ್ತಿಯಲ್ಲೂ ಇಬ್ಬರು ನ್ಯಾಕ್ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ಅವರಿಂದ ಕಾಲೇಜುಗಳಿಗೆ ಕಾರ್ಯಾಗಾರ ಮಾಡಿಸಲಾಗುತ್ತಿದೆ. ಎ-ಅದಕ್ಕೂ ಮೇಲ್ಪಟ್ಟು 9 ಕಾಲೇಜ್, ಬಿ-ಎ ಮಟ್ಟದಲ್ಲಿ 170 ಕಾಲೇಜ್‍ಗಳಿವೆ. ಇನ್ನು ನ್ಯಾಕ್ ಮಾನ್ಯತೆಯನ್ನೇ ಪಡೆಯದ 246 ಕಾಲೇಜ್‍ಗಳಿದ್ದು, ಅರ್ಹತೆಯೇ ಇಲ್ಲದ 26 ಕಾಲೇಜುಗಳಿವೆ. ಸದ್ಯ 9 ಕಾಲೇಜುಗಳ ನ್ಯಾಕ್ ಮಾನ್ಯತೆಗೆ ಅರ್ಜಿ ಹಾಕಿಕೊಂಡಿದ್ದರೆ, ಉಳಿದ 167 ಕಾಲೇನುಗಳಿಗೆ ಅರ್ಹತೆಯೇ ಇಲ್ಲದ ಸ್ಥಿತಿ ಇದೆ. ಇದೆಲ್ಲವನ್ನು ಸುಧಾರಿಸಿ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜುಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.