Tag: ನ್ಯಾಪ್ಕಿನ್

  • ಶುಚಿ ಯೋಜನೆಗೆ ಮರು ಚಾಲನೆ – ಜನವರಿಯಿಂದ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ವಿತರಣೆ: ದಿನೇಶ್ ಗುಂಡೂರಾವ್

    ಶುಚಿ ಯೋಜನೆಗೆ ಮರು ಚಾಲನೆ – ಜನವರಿಯಿಂದ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ವಿತರಣೆ: ದಿನೇಶ್ ಗುಂಡೂರಾವ್

    ಬೆಳಗಾವಿ: 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ (Shuchi Scheme) ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆಯ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ (Napkin) ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

    ಸೋಮವಾರ ಬೆಳಗಾವಿ ಅಧಿವೇಶನದಲ್ಲಿ (Belagavi Session) ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದರು.

    ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ 4 ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ 4 ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

    10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗೂ ನ್ಯಾಪ್ಕಿನ್‌ಗಳನ್ನು ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್‌ಗಳನ್ನು ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್‌ಗಳನ್ನು ವಿತರಿಸುವಂತೆ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

    40.50 ಕೋಟಿ ರೂ.ಯ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ. ಪ್ರಾಯೋಗಿಕವಾಗಿ ಮೆನ್‌ಸ್ಟ್ರುವಲ್ ಮುಟ್ಟಿನ ಕಪ್‌ಗಳನ್ನು ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್‌ಗಳನ್ನು ವಿತರಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದರು. ಇದನ್ನೂ ಓದಿ: ಕಾಡಾನೆ ದಾಳಿಗೆ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಬಲಿ

  • ದರೋಡೆಗೆ ಯತ್ನಿಸಿದವನಿಗೆ ನ್ಯಾಪ್ಕಿನ್‍ನಲ್ಲೆ ಹೊಡೆದು ಓಡಿಸಿದ್ಲು

    ದರೋಡೆಗೆ ಯತ್ನಿಸಿದವನಿಗೆ ನ್ಯಾಪ್ಕಿನ್‍ನಲ್ಲೆ ಹೊಡೆದು ಓಡಿಸಿದ್ಲು

    ಅಂಗಡಿಗೆ ನುಗ್ಗಿ ದರೋಡೆಗೆ ಯತ್ನಿಸಿದ ಖದೀಮನಿಗೆ ಮಹಿಳೆಯೊಬ್ಬರು ನ್ಯಾಪ್ಕಿನ್‍ನಲ್ಲೆ ಹೊಡೆದು ಹೊರದಬ್ಬಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಹೌದು, ಸಾಮಾನ್ಯವಾಗಿ ಕಳ್ಳನಿಂದ ಬಚಾವ್ ಆಗಲು ಮಹಿಳೆಯರು ಚಾಕು ಅಥವಾ ಪೆಪ್ಪರ್ ಸ್ಪ್ರೇ ಇಟ್ಟುಕೊಂಡಿರುತ್ತಾರೆ. ಆದರೆ ನೆದರ್‌ಲ್ಯಾಂಡ್‍ನ ಡೆವೆಂಟರ್‌ನ ಬೇಕರಿಯೊಂದರಲ್ಲಿ ಮಹಿಳೆಯೊಬ್ಬಳು ನ್ಯಾಪ್ಕಿನ್‍ನಲ್ಲಿಯೇ ಕಳ್ಳನಿಗೆ ತಕ್ಕ ಪಾಠ ಕಲಿಸಿದ್ದಾಳೆ.

    ಈ ಘಟನೆಯು ಮೆವ್ಲಾನಾ ಎಂಬ ಬೇಕರಿಯಲ್ಲಿ ನಡೆದಿದೆ. ಲತೀಫ್ ಪೆಕರ್ ಅವರು ತಮ್ಮ ಮಗನ ಬೇಕರಿಯನ್ನು ನ್ಯಾಪ್ಕಿನ್‍ನಲ್ಲಿ ಕ್ಲೀನ್ ಮಾಡುತ್ತಿದ್ದರು. ಈ ವೇಳೆ ಕಪ್ಪು ಬಣ್ಣದ ಮುಖವಾಡ ಧರಿಸಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಏಕಾಏಕಿ ಖದೀಮ ಅಂಗಡಿಗೆ ನುಗ್ಗಿದ್ದಾನೆ. ನಂತರ ಲಾಕರ್‌ನಲ್ಲಿ ಹಣ ಕದಿಯಲು ಯತ್ನಿಸಿದ್ದಾನೆ. ಆದರೆ ಇದ್ಯಾವುದಕ್ಕೂ ಧೃತಿಗೆಡದೇ ಲತೀಫ್ ಅಂಗಡಿಯನ್ನು ಕ್ಲೀನ್ ಮಾಡುತ್ತಿದ್ದ ನ್ಯಾಪ್ಕಿನ್‍ನಲ್ಲಿ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿಸುತ್ತಾ ಅಂಗಡಿಯಿಂದ ತಳ್ಳಲು ಯತ್ನಿಸುತ್ತಿರುತ್ತಾರೆ. ಅಷ್ಟರಲ್ಲಿ ವ್ಯಕ್ತಿಯೋರ್ವ ಅಂಗಡಿಗೆ ಬಂದಿದ್ದನ್ನು ಕಂಡು ಕಳ್ಳ ಓಡಿಹೋಗುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಈ ವೀಡಿಯೋವನ್ನು ತನ್ಸು ಯೆಗೆನ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಲತೀಫ್ ಪೆಕರ್ ಅವರು ಕ್ಲೀನ್ ಮಾಡುವ ಬಟ್ಟೆಯನ್ನು ಬಳಸಿ ಕಳ್ಳನನ್ನು ಓಡಿಸಿದ್ದಾರೆ. ಶುಚಿಗೊಳಿಸುವ ಬಟ್ಟೆಯ ಶಕ್ತಿ ಕಡಿಮೆ ಎಂದು ಅಂದಾಜು ಮಾಡಬೇಡಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇಲ್ಲಿಯವರೆಗೂ ಈ ವೀಡಿಯೋವನ್ನು ಸುಮಾರು 34,000 ಮಂದಿ ವೀಕ್ಷಿಸಿದ್ದು, ಮಹಿಳೆಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]