Tag: ನ್ಯಾಯಾಂಗ ತನಿಖೆ

  • ರಾಜ್ಯ ಸರ್ಕಾರ ಹುಡುಗಾಟಿಕೆ ಬಿಟ್ಟು ಕಲ್ಲು ತೂರಿದ ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ: ವಿಜಯೇಂದ್ರ

    ರಾಜ್ಯ ಸರ್ಕಾರ ಹುಡುಗಾಟಿಕೆ ಬಿಟ್ಟು ಕಲ್ಲು ತೂರಿದ ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ: ವಿಜಯೇಂದ್ರ

    – ಮದ್ದೂರು ಘಟನೆ ನ್ಯಾಯಾಂಗ ತನಿಖೆ ಆಗಲೇಬೇಕು: ವಿಜಯೇಂದ್ರ ಆಗ್ರಹ

    ಬೆಂಗಳೂರು: ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ ಇವೆಲ್ಲವುಗಳ ಮೂಲಕ ರಾಜ್ಯ ಸರ್ಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಟೀಕಿಸಿದ್ದಾರೆ.

    ಇಂದು ಮದ್ದೂರಿನಲ್ಲಿ (Maddur) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ. ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ವಿಪಕ್ಷ ನಾಯಕರು, ಪ್ರಮುಖರು ಎಲ್ಲರೂ ಚರ್ಚೆ ಮಾಡಿದ್ದೇವೆ. ಮೆರವಣಿಗೆಯಲ್ಲಿ ನಾವೂ ಪಾಲ್ಗೊಳ್ಳುತ್ತೇವೆ. ಹಿಂದೂ ಸಂಘಟನೆಗಳು, ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ಓಲೈಕೆ ರಾಜಕಾರಣದಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

    ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ರಾಜಕಾರಣ ಎಂದಾದರೂ ಅಂದುಕೊಳ್ಳಲಿ, ಇನ್ನೇನಾದರೂ ಅಂದುಕೊಳ್ಳಲಿ. ನಮ್ಮ ಕರ್ತವ್ಯ ಮಾಡಲಿದ್ದೇವೆ. ಸರ್ಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ, ಮಸೀದಿ ಒಳಗೆ ಕಲ್ಲು ಶೇಖರಿಸಿ ಬಿಸಾಡಿದ ಹಾಗೂ ಗೂಂಡಾವರ್ತನೆ ಪ್ರಾರಂಭಿಸಿದ ದೇಶದ್ರೋಹಿಗಳ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು. ಅವರನ್ನು ಒದ್ದು ಒಳಗೆ ಹಾಕಲಿ. ಸುಮ್ಮನೆ ಅಮಾಯಕ ಹಿಂದೂ ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಿಸಿ, ಹಿಂದೂ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ನುಡಿದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ರ್ಯಾಗರ್‌ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ ಅರೆಸ್ಟ್‌

    ಮೋಜು ಮಸ್ತಿಯೇ ಅವರಿಗೆ ಹೆಚ್ಚಾಗಿದೆ. ಪೊಲೀಸರು ಮುಂಜಾಗ್ರತೆ ಕೈಗೊಳ್ಳದ ಪರಿಣಾಮವಾಗಿಯೇ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿಯಿಂದ ಏಲಕ್ಕಿ ಬೆಳೆ ನಾಶ – ಲಕ್ಷಾಂತರ ರೂಪಾಯಿ ನಷ್ಟ, ರೈತರ ಆಕ್ರೋಶ

    ಮುಖ್ಯಮಂತ್ರಿಗಳು, ಸಣ್ಣಪುಟ್ಟ ಘಟನೆ ಎಂದಿರುವ ಗೃಹ ಸಚಿವರು ತಮ್ಮ ಸ್ಥಾನಕ್ಕೆ ಕಿಂಚಿತ್ತಾದರೂ ಗೌರವ ಇದ್ದರೆ ಮದ್ದೂರಿಗೆ ಬರಲಿ. ನಿಮ್ಮ ಆಡಳಿತ ಪಕ್ಷದ ಶಾಸಕರು ಪಾಪ ವಿದೇಶ ಪ್ರವಾಸದಲ್ಲಿದ್ದಾರೆ. ಅವರಿಗೆ ಇಂಥ ಸಂದರ್ಭದಲ್ಲಿ ಅವರ ಮೋಜೇ ಹೆಚ್ಚಾಗಿದೆ ಹೊರತು ಕಾನೂನು- ಸುವ್ಯವಸ್ಥೆ ಕಾಪಾಡುವ ಕಡೆ ಶಾಸಕರು ಗಮನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Ballari | ಮಟ್ಕಾ ದಂಧೆ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಟ್ರಾಸಿಟಿ ಕೇಸ್

    ಹಿಂದೂ ಕಾರ್ಯಕರ್ತರು ಭಯ ಪಡುವ ಅವಶ್ಯಕತೆ ಇಲ್ಲ. ಬಿಜೆಪಿ ಮಾತ್ರವಲ್ಲ; ಜೆಡಿಎಸ್‌ನವರೂ ಇಲ್ಲಿ ಬಂದಿದ್ದಾರೆ. ಪಕ್ಷಾತೀತವಾಗಿ ನಾವೆಲ್ಲರೂ ಹಿಂದೂ ಸಂಘಟನೆ-ಕಾರ್ಯಕರ್ತರ ಪರವಾಗಿದ್ದೇವೆ. ರಾಜ್ಯ ಸರ್ಕಾರವು ಹುಡುಗಾಟಿಕೆ ಮಾಡುವುದನ್ನು ಬಿಟ್ಟು ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ. ಹಿಂದೂ ಸಂಘಟನೆ- ಕಾರ್ಯಕರ್ತರನ್ನು ಮುಟ್ಟದಿರಿ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರು ಮೊನ್ನೆ ನಡೆದ ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅವರ ಮಾತಿನ ಆಧಾರದಲ್ಲಿ ಹೇಳುವುದಾದರೆ ಒಂದಂತೂ ಸ್ಪಷ್ಟ. ಇಲ್ಲಿ ಒಂದು ಕೋಮಿನ ಜನರು ಹಿಂದೂಗಳು ಆ ಬೀದಿಯಲ್ಲಿ ಮೆರವಣಿಗೆ ಮಾಡಬಾರದು, ಗಣಪತಿ ಮೆರವಣಿಗೆಯೂ ಸಾಗಬಾರದು ಎನ್ನುತ್ತಿರುವ ಮಾಹಿತಿ ಲಭಿಸಿದೆ. ಗೂಂಡಾವರ್ತನೆ ಬಗ್ಗೆಯೂ ಅವರೇ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | 3 ವರ್ಷಗಳಲ್ಲಿ 536 ಮಂದಿ ಆತ್ಮಹತ್ಯೆ – ಮಹಿಳೆಯರಿಗಿಂತ ಪುರುಷರ ಸಂಖ್ಯೆಯೇ ಹೆಚ್ಚು!

    ದುಷ್ಕರ್ಮಿಗಳ ಅಟ್ಟಹಾಸವು ಬೀದಿಗಿಳಿದ ಹಿಂದೂ ಮಹಿಳೆಯರ ಆಕ್ರೋಶದಿಂದ ಗೊತ್ತಾಗುತ್ತದೆ. ಗಾಂಜಾ, ಅಫೀಮು ಕಾಟವೂ ಯಥೇಚ್ಛವಾಗಿ ಇಲ್ಲೂ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳು ಗೌರವಯುತವಾಗಿ ರಸ್ತೆಯಲ್ಲಿ ನಡೆದು ಹೋಗಲು ಅಸಾಧ್ಯ ಆಗುವಂಥ ವಾತಾವರಣ ಮದ್ದೂರಿನಲ್ಲಿ ನಿರ್ಮಾಣವಾಗಿದ್ದರೆ, ದೇಶದ್ರೋಹಿಗಳು ಯಾವ ರೀತಿ ಮೆರೆಯುತ್ತಿದ್ದಾರೆ ಎಂಬುದು ಇದರಲ್ಲೇ ಗೊತ್ತಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗದಗ | ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ – ಅಪ್ರಾಪ್ತನ ವಿರುದ್ಧ ಕೇಸ್

    ಮುಖ್ಯಮಂತ್ರಿಗಳು, ಸಚಿವರ ಹೇಳಿಕೆ ಗಮನಿಸಿದರೆ ಇವರು ಹಿಂದೂಗಳ ಮತ ಪಡೆಯದೇ ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳಿಗೆ ಕೇಸರಿ ಕಂಡರೆ ಆಗುವುದಿಲ್ಲ, ಇವರ ನಡವಳಿಕೆಯೂ ಕುಮ್ಮಕ್ಕನ್ನು ನೀಡುತ್ತಿದೆ. ದೇಶದ್ರೋಹಿಗಳು, ಕೆಲವರಲ್ಲಿರುವ ಜಿಹಾದಿ ಮಾನಸಿಕ ಸ್ಥಿತಿ ಏನಿದೆಯೋ ಅವರಿಗೂ ಇದೇ ಕಾರಣಕ್ಕಾಗಿ ಧೈರ್ಯ ಬಂದಿದೆ ಎಂದು ಆರೋಪಿಸಿದರು. ಗಲಭೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೋರ್ಟ್ ಆದೇಶ ಬಳಿಕ ದರ್ಶನ್‌ಗೆ ರಿಲ್ಯಾಕ್ಸ್ – ದಿಂಬು, ಚಾಪೆ ಜೊತೆಗೆ ಎರಡು ಜಮ್ಖಾನ ನೀಡಿದ ಅಧಿಕಾರಿಗಳು

    ಬೀದಿಯಲ್ಲಿ ಓಡಾಡುವುದು ಕಷ್ಟ ಆಗಲಿದೆ:
    ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ನಡವಳಿಕೆಯನ್ನು ಜನತೆ ಗಮನಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಹಿಳೆಯರನ್ನು ತಡೆಯುವ ದುಸ್ಸಾಹಸಕ್ಕೆ ಸರ್ಕಾರ ಕೈಹಾಕಿದೆ. ಅಧಿಕಾರ ಇದೆ ಎಂದು ಚೆಲ್ಲಾಟ, ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇವರ ಪಾಪದ ಕೊಡ ತುಂಬಿದೆ. ಇವತ್ತಲ್ಲ ನಾಳೆ ಇವರು ಬೀದಿಯಲ್ಲಿ ಓಡಾಡುವುದು ಕಷ್ಟ ಆಗಲಿದೆ. ಹಿಂದೂಗಳೆಲ್ಲರೂ ಪ್ರಜ್ಞಾವಂತರಾಗಿದ್ದಾರೆ. ನಿಮ್ಮ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವೇ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ನೇಪಾಳದ 18 ಜಿಲ್ಲೆಗಳ ಜೈಲಿನಿಂದ 6 ಸಾವಿರಕ್ಕೂ ಹೆಚ್ಚು ಕೈದಿಗಳು ಪರಾರಿ

    ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಪ್ರಧಾನಿ ಮೋದಿಜೀ ಅವರು ಸಬ್ ಕಾ ಸಾಥ್ ನೀತಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆಯಲ್ಲವೇ ಎಂದು ಕೇಳಿದರು. ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕೇಸ್‌ | ಕ್ರಿಕೆಟಿಗ ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ಕೋರ್ಟ್

    ಅಯೋಗ್ಯ ಕಾಂಗ್ರೆಸ್ಸಿಗರ ಮಾತನ್ನು ಕಟ್ಟಿಕೊಂಡು ಮುಸಲ್ಮಾನರು ಬೀದಿಗಿಳಿದು ಕಲ್ಲೆಸೆಯುವ ಕೆಲಸ ಆಗುತ್ತಿದ್ದು, ಅವರ ಭವಿಷ್ಯವನ್ನೂ ಕಾಂಗ್ರೆಸ್ಸಿನವರು ಹಾಳು ಮಾಡುತ್ತಿದ್ದಾರೆ ಎಂದು ಮುಸಲ್ಮಾನ ಧರ್ಮಗುರುಗಳಿಗೆ ತಿಳಿಸುವುದಾಗಿ ಹೇಳಿದರು. ಇದನ್ನೂ ಓದಿ: ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಹೆಚ್.ಕೆ ಪಾಟೀಲ್

  • ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ನವದೆಹಲಿ: ಪಹಲ್ಗಾಮ್ ಘಟನೆಯ (Pahalgam Terror Attack) ಬಗ್ಗೆ ನ್ಯಾಯಾಂಗ ತನಿಖೆಗೆ ( Judicial Probe) ಕೋರಿ ಸಲ್ಲಿಸಲಾದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ವಿಚಾರಣೆ ಸಂದರ್ಭದಲ್ಲಿ ಕೋರ್ಟ್‌, ನೀವು ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸಲು ಬಯಸುತ್ತೀರಾ ಎಂದು ಪ್ರಶ್ನಿಸುವ ಮೂಲಕ ಅರ್ಜಿದಾರರಿಗೆ ಚಾಟಿ ಬೀಸಿದೆ.

    ಅರ್ಜಿದಾರರಾದ ಫತೇಶ್ ಕುಮಾರ್ ಶಾಹು, ಮೊಹಮ್ಮದ್ ಜುನೈದ್ ಮತ್ತು ವಿಕ್ಕಿ ಕುಮಾರ್ ಅವರು ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ಇಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾ ಎನ್.ಕೆ. ಸಿಂಗ್ ಅವರಿಂದ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ಸೋನಾಮಾರ್ಗ್‌ ಸುರಂಗ ದಾಳಿಯಲ್ಲಿ 7 ಜನರನ್ನು ಬಲಿಪಡೆದಿದ್ದ ಉಗ್ರರ ಟೀಮ್‌ನಿಂದಲೇ ಪಹಲ್ಗಾಮ್‌ ದಾಳಿ

     

    ಈ ವೇಳೆ, ಪ್ರತಿಯೊಬ್ಬ ಭಾರತೀಯರು ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸಿರುವ ನಿರ್ಣಾಯಕ ಸಮಯ ಇದು. ನಮ್ಮ ಪಡೆಗಳನ್ನು ಸ್ಥೈರ್ಯ ಕುಗ್ಗಿಸಬೇಡಿ. ಸಮಸ್ಯೆಯ ಸೂಕ್ಷ್ಮತೆಯನ್ನು ನೋಡಿ ಅರ್ಜಿ ಸಲ್ಲಿಸಿ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

    ಇಂತಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಜವಾಬ್ದಾರರಾಗಿರಿ. ನಿಮಗೂ ದೇಶದ ಬಗ್ಗೆ ಕರ್ತವ್ಯವಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭಯೋತ್ಪಾದನಾ ನಿಗ್ರಹ ವಿಷಯಗಳಲ್ಲಿ ಯಾವಾಗದಿಂದ ತಜ್ಞರಾಗಿದ್ದಾರೆ ಎಂದು ನ್ಯಾ.ಸೂರ್ಯ ಕಾಂತ್‌ ಖಾರವಾಗಿ ಪ್ರಶ್ನಿಸಿದರು.

    ಈ ವೇಳೆ ಪಹಲ್ಗಾಮ್‌ ದಾಳಿಯ ಬಳಿಕ ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ ನ್ಯಾಯಾಧೀಶರು ಈ ವಿಚಾರವನ್ನು ಅರ್ಜಿಯಲ್ಲಿ ಎಲ್ಲಿ ಉಲ್ಲೇಖ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಈ ವಿಚಾರ ಬೇಕಾದರೆ ಹೈಕೋರ್ಟ್‌ಗೆ ಹೋಗಿ ಅರ್ಜಿ ಸಲ್ಲಿಸಿ ಎಂದು ಸೂಚಿಸಿದರು.

  • ನನ್ನ ವಿರುದ್ಧ ಸಂಚು: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿಟಿ ರವಿ

    ನನ್ನ ವಿರುದ್ಧ ಸಂಚು: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿಟಿ ರವಿ

    – ಪೊಲೀಸರಿಗೆ ನಿರಂತರ ಫೋನ್‌ ಬರುತ್ತಿತ್ತು
    – ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಸಸ್ಪೆಂಡ್‌ ಮಾಡಿ

    ಬೆಂಗಳೂರು: ಪೊಲೀಸರಿಗೆ ಪದೇ ಪದೇ ಸೂಚನೆ ಬರುತ್ತಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅಥವಾ ಡಿಕೆ ಶಿವಕುಮಾರ್‌ (DK Shivakumar) ಅಥವಾ ಯಾರು ನನ್ನ ವಿರುದ್ಧ ಸಂಚು ಮಾಡಿದ್ದಾರೆ ಎನ್ನುವುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು (Judicial Inquiry) ಎಂದು ಸಿಟಿ ರವಿ ಆಗ್ರಹಿಸಿದ್ದಾರೆ.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಕಿಟಾಕಿ ಮೂಲಕ ಸೂಚನೆ ಬಂದರೆ ಉಳಿದೆಲ್ಲವೂ ಫೋನ್‌ ಮೂಲಕ ಸೂಚನೆ ಬರುತ್ತಿತ್ತು. ಪೊಲೀಸರ ಬಳಿ ಎರಡು, ಮೂರು ಫೋನ್‌ಗಳಿದ್ದವು. ಹಿರಿಯ ಅಧಿಕಾರಿಗಳು ಅಥವಾ ಮಂತ್ರಿಯಿಂದ ನಿರಂತರ ಫೋನ್ ಬರುತ್ತಿತ್ತು ಎಂದು ಹೇಳಿದರು. ಇದನ್ನೂ ಓದಿ: ಆ ಬಣ ಈ ಬಣ ಎನ್ನದೇ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ ನಾಯಕರು

     

    ಪೊಲೀಸರ ವೈಯಕ್ತಿಕ, ಇಲಾಖೆ ಫೋನ್‌ಗಳ ಕಾಲ್ ರೆಕಾರ್ಡ್‌, ಜಿಪಿಎಸ್ ಟ್ರ‍್ಯಾಕ್ ಮಾಡಿ ತನಿಖೆ ಆಗಬೇಕು. ಪೊಲೀಸರು ಸರ್ ಸರ್ ಅಂತ ಮಾತನಾಡುತ್ತಿದ್ದರು. ಅವರ ಭಾವ ಭಂಗಿ ನೋಡಿದರೆ ಕರೆ ಮಾಡುತ್ತಿರುವ ವ್ಯಕ್ತಿ ಹಿರಿಯ ಅಧಿಕಾರಿ ಇದ್ದಿರಬಹುದು ಅಥವಾ ಮಂತ್ರಿಯೂ ಇರಬಹುದು. ನಾನು ಕ್ರಿಮಿನಲ್ ಅಲ್ಲ, ಯಾಕೆ ಹೀಗೆ ಮಾಡಿದ್ದಾರೆ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ಹತ್ಯೆ ಮಾಡಲೆಂದು ಕಬ್ಬಿನ ಗದ್ದೆಗೆ ಕರ್ಕೊಂಡು ಬಂದಿದ್ರು: ರಾತ್ರಿ ಏನೇನಾಯ್ತು ವಿವರಿಸಿದ ಸಿಟಿ ರವಿ

    ಸಿಟಿ ರವಿ ಬೇಡಿಕೆ ಏನು?
    ಪೊಲೀಸ್ ಅಧಿಕಾರಿಗಳ ಖಾಸಗಿ ಮತ್ತು ಕಚೇರಿ ಫೋನ್‌ಗಳ ಕಾಲ್ ರೆಕಾರ್ಡ್ ಜೊತೆ ಪೊಲೀಸರಿಗೆ ಪದೇ ಪದೇ ಯಾರಿಂದ ಸೂಚನೆ ಬರುತ್ತಿತ್ತು ಎನ್ನುವುದರ ಬಗ್ಗೆ ತನಿಖೆ ಆಗಬೇಕು.

    ನನ್ನ ಎಲ್ಲೆಲ್ಲಿ ಕರೆದುಕೊಂಡು ಹೋಗಿದ್ದಾರೆ ಅಂತ ಟವರ್ ಲೊಕೇಷನ್ ತನಿಖೆಯಾಗಬೇಕು. ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು. ನನ್ನ ಮೇಲೆ ಹಲ್ಲೆ ಮಾಡಲೆತ್ನಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಮತ್ತಿತರರ ಬಂಧನ ಆಗಬೇಕು.

    ನನ್ನ ಫೋನ್ ಕದ್ದಾಲಿಕೆ ಮಾಡಲಾಗ್ತಿದೆ, ಇದರ ತನಿಖೆ ಆಗಬೇಕು. ಎಲ್ಲದರ ಬಗ್ಗೆ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಬೇಕು.

    ಈಗಲೂ ನನಗೆ ಜೀವ ಬೆದರಿಕೆ ಇದೆ. ಸರ್ಕಾರ ನನಗೆ ಸೂಕ್ತ ಭದ್ರತೆ ಕೊಡಬೇಕು. ಸದನದ ಒಳಗೆ ನನಗೆ ಬೆದರಿಕೆ ಹಾಕಿದ ಡಿಕೆ ಶಿವಕುಮಾರ್‌, ಚನ್ನರಾಜ್ ಹಟ್ಟಿಹೊಳಿ ಮತ್ತಿತರ ವಿಡಿಯೋ, ಆಡಿಯೋ ತನಿಖೆ ಆಗಲಿ.

    ನಾನು ಅಶ್ಲೀಲ ಪದ ಬಳಸಿದರೆ ಸಭಾಪತಿ ಯಾವುದೇ ಕ್ರಮ ಕೈಗೊಳ್ಳಲಿ. ನನ್ನ ಆಡಿಯೋವನ್ನು ಎಫ್‌ಎಸ್‌ಎಲ್‌ಗೆ ಕಳಿಸಿ ವರದಿ ಪಡೆಯಲಿ.

     

  • ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಬೆಂಗಳೂರು: ಕರ್ನಾಟಕ ಪಿಎಸ್‌ಐ ನೇಮಕಾತಿ (PSI Scam) ಹಗರಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರ್ಕಾರ (Karnataka Govt) ಆದೇಶ ಹೊರಡಿಸಿದೆ.

    ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸಿಐಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಪ್ರಕರಣ ಏನು?
    2021ರ ಅಕ್ಟೋಬರ್‌ 3 ರಂದು ನಡೆದಿದ್ದ, 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿತ್ತು. ಈ ಬಗ್ಗೆ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಸ್ಪಷ್ಟನೆ ಪಡೆದ ನಂತರ ಈ ಎಲ್ಲ 52 ಅಭ್ಯರ್ಥಿಗಳನ್ನು ಪೊಲೀಸ್‌ ಇಲಾಖೆಯ ಯಾವುದೇ ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್‌ ಮಾಡಲಾಗಿದೆ. ಇದನ್ನೂ ಓದಿ: ವನ್ಯಜೀವಿಯಿಂದ ಜೀವಹಾನಿ – ಸ್ಥಳ ಭೇಟಿಗೆ ಈಶ್ವರ್ ಖಂಡ್ರೆ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]