Tag: ನ್ಯಾಷನಲ್ ಕಾನ್ಫರೆನ್ಸ್

  • Jammu Kashmir | ಕಾಂಗ್ರೆಸ್‌ ಬೆಂಬಲ ಇಲ್ಲದೇ ಬಹುಮತ ಸಾಧಿಸಿದ NC

    Jammu Kashmir | ಕಾಂಗ್ರೆಸ್‌ ಬೆಂಬಲ ಇಲ್ಲದೇ ಬಹುಮತ ಸಾಧಿಸಿದ NC

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಕಾಂಗ್ರೆಸ್‌ (Congress) ಬೆಂಬಲ ಇಲ್ಲದೇ ನ್ಯಾಷನಲ್‌ ಕಾನ್ಫರೆನ್ಸ್‌ (NC) ಈಗ ಬಹುಮತ ಪಡೆದಿದೆ. 4 ಮಂದಿ ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ.

    ಒಟ್ಟು 90 ಸ್ಥಾನಗಳಿಗೆ ಚುನಾವಣೆ (Election) ನಡೆದಿದ್ದು ಸರ್ಕಾರ ರಚನೆಗೆ 46 ಶಾಸಕರ ಬೆಂಬಲ ಬೇಕು. ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ 42, ಕಾಂಗ್ರೆಸ್‌ 6 ಸ್ಥಾನ ಗೆದ್ದರೆ 7 ಮಂದಿ ಪಕ್ಷೇತರರಯ ಗೆದ್ದಿದ್ದರು. 7 ಮಂದಿಯ ಪೈಕಿ 4 ಮಂದಿ ಎನ್‌ಸಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರದ ಶಿಫಾರಸು

    ಕಾಂಗ್ರೆಸ್‌ ಮತ್ತು ಪಕ್ಷೇತರರ ಬೆಂಬಲದಿಂದಾಗಿ ಎನ್‌ಸಿ ಬಲ ಮತ್ತಷ್ಟು ಗಟ್ಟಿಯಾಗಲಿದೆ. ಪಕ್ಷೇತರರ ಬಲ ಇರುವ ಕಾರಣ ಮಂತ್ರಿ ಸ್ಥಾನ ಹಂಚುವ ವೇಳೆ ಕಾಂಗ್ರೆಸ್‌ ಶಾಸಕರಿಗೆ ಮಂತ್ರಿಗಿರಿ ಸಾಧ್ಯತೆ ಕಡಿಮೆಯಿದೆ.

    ಯಾರು ಎಷ್ಟು ಸ್ಥಾನ?
    ನ್ಯಾಷನಲ್‌ ಕಾನ್ಫರೆನ್ಸ್‌ – 42
    ಬಿಜೆಪಿ – 29
    ಕಾಂಗ್ರೆಸ್‌ – 06
    ಪಿಡಿಪಿ – 03
    ಜೆಪಿಸಿ – 1
    ಸಿಪಿಐ(ಎಂ)- 01
    ಆಪ್‌ – 01
    ಇತರರು – 07

  • ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ

    ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ

    ಶ್ರೀನಗರ: ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ (Omar Abdullah) ಆಯ್ಕೆ ಆಗಿದ್ದಾರೆ.

    ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ (Farooq Abdullah) ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.

    ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ. ಎನ್‌ಸಿ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರು 1977 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಅವರ ಮಗ ಫಾರೂಕ್ ಅಬ್ದುಲ್ಲಾ ಅವರು 1983, 1987 ಮತ್ತು 1996 ರಲ್ಲಿ ವಿಜಯಗಳಿಸಿದರು. ನಂತರ ಒಮರ್ ಅಬ್ದುಲ್ಲಾ ಅವರು 2008 ರಲ್ಲಿ ಕ್ಷೇತ್ರದಿಂದ ಆಯ್ಕೆಯಾದರು.

    ಬುದ್ಗಾಮ್‌ನಲ್ಲಿ ಅಬ್ದುಲ್ಲಾ ಅವರು ಪಿಡಿಪಿಯ ಅಗಾ ಸೈಯದ್ ಮುಂತಜೀರ್ ಮೆಹದಿ ಮತ್ತು ಅವಾಮಿ ನ್ಯಾಷನಲ್ ಕಾನ್ಫರೆನ್ಸ್‌ನ ಅಗಾ ಸೈಯದ್ ಅಹ್ಮದ್ ಮೂಸ್ವಿ ಸೇರಿದಂತೆ 7 ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದರು.

    ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 2 ಟ್ರೆಂಡ್‌ ಪ್ರಕಾರ ಎನ್‌ಸಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟ 51ಕ್ಷೇತ್ರ, ಬಿಜೆಪಿ (BJP) 27 ಪಿಡಿಪಿ (PDP) 02 ಇತರರು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    ಒಟ್ಟು 90 ಕ್ಷೇತ್ರಗಳ ಪೈಕಿ ಎನ್‌ಸಿ 56, ಕಾಂಗ್ರೆಸ್‌ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.

    90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು

    2014 ರಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್‌ ಕಾನ್ಫರೆನ್ಸ್‌ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.

  • Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    ನವದೆಹಲಿ: ಜಮ್ಮು ಕಾಶ್ಮೀರದಲ್ಲಿ (Jammu Kashmir) 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (National Conference) ಮತ್ತು ಕಾಂಗ್ರೆಸ್ (Congress) ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ.

    ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್‌ ಪ್ರಕಾರ ಎನ್‌ಸಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ (BJP) 26, ಪಿಡಿಪಿ (PDP) 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಚುನಾವಣೆ ಇದಾಗಿರುವ ಕಾರಣ ಈ ಚುನಾವಣೆ ಮಹತ್ವ ಪಡೆದಿತ್ತು.

    ಈ ಚುನಾವಣೆಯಲ್ಲಿ ಗೆದ್ದರೆ ಜಮ್ಮು ಕಾಶ್ಮೀರಕ್ಕೆ ರಾಜ್ಯಸ್ಥಾನಮಾನವನ್ನು ನೀಡುತ್ತೇವೆ ಎಂದು ಕಾಂಗ್ರೆಸ್‌ ಮತ್ತು ಎನ್‌ಸಿ ಘೋಷಿಸಿತ್ತು. ಅಷ್ಟೇ ಅಲ್ಲದೇ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತ್ತು. ಈ ಘೋಷಣೆಗಳ ಪರಿಣಾಮ ಎನ್‌ಸಿ ಮೈತ್ರಿಕೂಟ ಚುನಾವಣೆಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.

    ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಎನ್‌ಸಿ ಮೈತ್ರಿಕೂಟ ಜಮ್ಮು ಕಾಶ್ಮೀರದಲ್ಲಿ ಜಯಗಳಿಸಲಿದೆ ಎಂದು ಭವಿಷ್ಯ ನುಡಿದಿದ್ದವು.

     

    ಒಟ್ಟು 90 ಕ್ಷೇತ್ರಗಳ ಪೈಕಿ ಎನ್‌ಸಿ 56, ಕಾಂಗ್ರೆಸ್‌ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.

    90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು  2014 ರಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್‌ ಕಾನ್ಫರೆನ್ಸ್‌ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.

  • J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

    J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

    – ಆರ್ಟಿಕಲ್‌ 370 ಮರುಸ್ಥಾಪಿಸುವ ಬಗ್ಗೆ ಕಾಂಗ್ರೆಸ್‌ – ಪಾಕ್‌ ಸರ್ಕಾರ ಒಂದೇ ಮನಸ್ಥಿತಿ ಹೊಂದಿದೆ ಎಂದ ಪಾಕ್‌ ಸಚಿವ

    ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌ (Khawaja Asif) ಹೇಳಿದ್ದಾರೆ.

    ಆರ್ಟಿಕಲ್‌ 370 ರದ್ದಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಜೆ&ಕೆ ನಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡಿದ್ದು, 61.3% ಮತದಾನವಾಗಿದೆ. ಈ ನಡುವೆ ಪಾಕ್‌ ರಕ್ಷಣಾ ಸಚಿವ ಮಾತನಾಡಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ (Congress And National Conference) ಮೈತ್ರಿ ಕೂಟ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ.

    ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ 370 ಮತ್ತು 35ಎ ವಿಧಿ ಮರುಸ್ಥಾಪಿಸುವ ವಿಚಾರದಲ್ಲಿ ಶೆಹಬಾಜ್‌ ಷರೀಫ್‌ ಸರ್ಕಾರ ಮತ್ತು ಕಾಂಗ್ರೆಸ್‌ – ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಒಂದೇ ಅಭಿಪ್ರಾಯ ಹೊಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಜಿ ನೀಟ್ ಸೀಟು ರದ್ದತಿಗೆ ಅವಕಾಶ – ಸೆ.20ಕ್ಕೆ ಕೆಇಎಗೆ ಬರಲು ಅಭ್ಯರ್ಥಿಗಳಿಗೆ ಸೂಚನೆ

    ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ:
    ಇನ್ನೂ ಪಾಕ್‌ ಸಚಿವರ ಹೇಳಿಕೆ ಕುರಿತು ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ, ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ, ಕಾಶ್ಮೀರದ ಬಗ್ಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ನಿಲುವನ್ನು ಅನುಮೋದಿಸುತ್ತದೆ. ಇಂತಹ ಹೇಳಿಕೆಗಳಿಂದ ರಾಹುಲ್ ಗಾಂಧಿ ಮತ್ತು ಅವರ ಕಾಂಗ್ರೆಸ್ ಪಕ್ಷ ಯಾವಾಗಲೂ ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾದವರ ಪರವಾಗಿಯೇ ಇರುತ್ತದೆ ಎಂಬಹುದನ್ನು ಸೂಚಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನುದ್ದೇಶಿಸಿ ಭಾಷಣ

    ಜಮ್ಮು-ಕಾಶ್ಮೀರದಲ್ಲಿ ಶೇ.61 ಮತದಾನ:
    ಜಮ್ಮು ಮತ್ತು ಕಾಶ್ಮೀರದ 7 ಜಿಲ್ಲೆಗಳ 24 ಕ್ಷೇತ್ರಗಳಲ್ಲಿ ಬುಧವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.61 ಕ್ಕಿಂತ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ವರದಿ ಬರುವ ಹೊತ್ತಿಗೆ ಕೆಲವು ಕೇಂದ್ರಗಳ ಮತದಾನ ದತ್ತಾಂಶ ಸಂಗ್ರಹವಾಗಬೇಕಿರುವುದರಿಂದ ಅಂತಿಮ ಮತದಾನದ ಶೇಕಡಾವಾರು ಹೆಚ್ಚಾಗಬಹುದು ಮತ್ತು ಇದು ಅಂಚೆ ಮತಪತ್ರಗಳನ್ನು ಒಳಗೊಂಡಿಲ್ಲ ಎಂದು ಆಯೋಗ ಹೇಳಿದೆ. ಇದನ್ನೂ ಓದಿ: ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ 2.11 ಕೋಟಿ ಪಂಗನಾಮ – ಸಿಕ್ಕಿಬಿದ್ದ ಸೈಬರ್‌ ವಂಚಕ

    ಜಮ್ಮುವಿನ ಚೆನಾಬ್ ಕಣಿವೆ ಪ್ರದೇಶದಲ್ಲಿ ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡಾ 80.14 ರಷ್ಟು ಮತದಾನವಾಗಿದೆ, ನಂತರ ದೋಡಾ (71.34 ಶೇಕಡಾ) ಮತ್ತು ರಂಬಾನ್ (70.55 ಶೇಕಡಾ) ಮತದಾನವಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ದಕ್ಷಿಣ ಕಾಶ್ಮೀರದಲ್ಲಿ, ಕುಲ್ಗಾಮ್ ಜಿಲ್ಲೆ 62.46 ಪ್ರತಿಶತದೊಂದಿಗೆ ಮತದಾನದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ನಂತರ ಅನಂತನಾಗ್ ಜಿಲ್ಲೆ (57.84 ಪ್ರತಿಶತ), ಶೋಪಿಯಾನ್ ಜಿಲ್ಲೆ (55.96 ಪ್ರತಿಶತ) ಮತ್ತು ಪುಲ್ವಾಮಾ ಜಿಲ್ಲೆ (ಶೇ 46.65) ಎಂದು ಇಸಿ ತಿಳಿಸಿದೆ. ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು

  • J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

    J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

    ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ (Jammu And Kashmir Assembly Poll) ಕಾಂಗ್ರೆಸ್‌ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಸೀಟು ಹಂಚಿಕೆಯ ಹಗ್ಗಜಗ್ಗಾಟ ಅಂತ್ಯಕಂಡಿದೆ. 90 ಸ್ಥಾನಗಳ ಪೈಕಿ 51 ಕ್ಷೇತ್ರಗಳಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (National Conference) ಸ್ಪರ್ಧಿಸಲಿದ್ದು, ಕಾಂಗ್ರೆಸ್‌ 32 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಪಕ್ಷಗಳ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳಿದ್ದಾರೆ.

    ಸೀಟು ಹಂಚಿಕೆ ಒಪ್ಪಂದ ಪ್ರಕಟಿಸುವಾಗ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ (Congress) ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ, ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 5 ಸ್ಥಾನಗಳಲ್ಲಿ ಸೌಹಾರ್ದಯುತ ಮತ್ತು ಶಿಸ್ತಿನ ಸ್ಪರ್ಧೆ ಹೊಂದಿರುತ್ತದೆ ಎಂದು ಹೇಳಿದ್ದಾರೆ.

    ನ್ಯಾಶನಲ್ ಕಾನ್ಫರೆನ್ಸ್ 51 ಸ್ಥಾನಗಳಲ್ಲಿ, ಕಾಂಗ್ರೆಸ್ 32 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಪ್ಯಾಂಥರ್ಸ್ ಪಾರ್ಟಿಗೆ ತಲಾ 1 ಸ್ಥಾನ ನಿಯೋಜಿಸಿದೆ.

    ವಿಪಕ್ಷಗಳ ವಿರುದ್ಧ ವಾಗ್ದಾಳಿ:
    ಇನ್ನೂ ಸೀಟು ಹಂಚಿಕೆ ಘೋಷಣೆ ಬಳಿಕ ಕಾಂಗ್ರೆಸ್‌ & ಎನ್‌ಸಿ ನಾಯಕರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಹೋರಾಡಲಿವೆ. ಅದಕ್ಕಾಗಿ ಈ ಅಭಿಯಾನವನ್ನು ಆರಂಭಿಸಿದ್ದೇವೆ. ಕೋಮುವಾದ ಬಯಸುವ ಶಕ್ತಿಗಳನ್ನು ಬಗ್ಗು ಬಡಿಯಲು ಈ ಒಕ್ಕೂಟ ರಚಿಸಿದ್ದೇವೆ ಎಂದು ಗುಡುಗಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಾಲ್, ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ಆತ್ಮವನ್ನೇ ನಾಶಮಾಡಲು ಪ್ರಯತ್ನಿಸುತ್ತಿದೆ. ಆದ್ರೆ ನಮ್ಮ ಸರ್ಕಾರ ಜನಸ್ನೇಹಿಯಾಗಿರಲಿದೆ. ಒಗ್ಗಟ್ಟಿನಿಂದ ಹೋರಾಡಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

    ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಇದಾಗಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.

  • ಏರ್ ಸ್ಟ್ರೈಕ್ ದಾಳಿಯ ಬಳಿಕ ರಾಮ ಮಂದಿರ ಮರೆತು ಬಿಟ್ರು: ಫಾರೂಕ್ ಅಬ್ದುಲ್ಲಾ

    ಏರ್ ಸ್ಟ್ರೈಕ್ ದಾಳಿಯ ಬಳಿಕ ರಾಮ ಮಂದಿರ ಮರೆತು ಬಿಟ್ರು: ಫಾರೂಕ್ ಅಬ್ದುಲ್ಲಾ

    ವಿಜಯವಾಡ: ಬಾಲಕೋಟ್ ಏರ್ ಸ್ಟ್ರೈಕ್ ದಾಳಿ ಹಾಗೂ ರಾಮ ಮಂದಿರ ವಿಚಾರವಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಮ ಮಂದಿರದ ಕುರಿತು ಈಗ ಯಾರೊಬ್ಬರೂ ಮಾತನಾಡುತ್ತಿಲ್ಲ. ಬಾಲಕೋಟ್ ದಾಳಿಯ ಮುನ್ನ ರಾಮ ಮಂದಿರ, ರಾಮ ಮಂದಿರ ಎನ್ನುವ ಕೂಗು ಕೇಳುತ್ತಿತ್ತು. ಈಗ ರಾಮ ಮಂದಿರದ ಕುರಿತು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

    ಪಾಕಿಸ್ತಾನದ ಬಾಲಕೋಟ್ ಉಗ್ರರ ನೆಲೆಯ ಮೇಲೆ ಭಾರತೀಯ ವಾಯು ಪಡೆ ನಡೆಸಿ ಏರ್ ಸ್ಟ್ರೈಕ್ ದಾಳಿಯಲ್ಲಿ 300 ಜನ ಉಗ್ರರು ಹತ್ಯೆಯಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಜವಾಗಿ ಏನು ಆಗಿದೆ ಎಂದು ಯಾವುದೇ ಮಾಹಿತಿ ನೀಡಿಲ್ಲ. ಈ ಕುರಿತು ಯಾರಾದರೂ ಪ್ರಶ್ನಿಸಿದರೆ ಅವರು ದೇಶದ್ರೋಹಿಗಳಾಗುತ್ತಾರೆ. ಇಲ್ಲವೆ ಪಾಕ್ ಪ್ರಜೆ ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.

    ಪ್ರಧಾನಿ ನರೇಂದ್ರ ಮೋದಿ ಹನುಮಂತನಿದ್ದಂತೆ. ಅವರು ಪಾಕಿಸ್ತಾನವನ್ನು ಬಗ್ಗು ಬಡಿಯುತ್ತಾರೆ ಎಂದು ಬಿಜೆಪಿಯವರು ಬಿಂಬಿಸಿದ್ದರು. ಆದರೆ ಪ್ರಧಾನಿ ಮೋದಿ ಪಾಕಿಸ್ತಾನವನ್ನು ಬಗ್ಗು ಬಡಿದರೇ? ಉಗ್ರರ ಅಟ್ಟಹಾಸ ನಿಂತುಹೋಯಿಯೇ ಎಂದು ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.