Tag: ನ್ಯೂಯಾರ್ಕ್

  • ನ್ಯೂಯಾರ್ಕ್ | 54 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ – ಭಾರತೀಯರು ಸೇರಿ ಐವರು ಸಾವು

    ನ್ಯೂಯಾರ್ಕ್ | 54 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ – ಭಾರತೀಯರು ಸೇರಿ ಐವರು ಸಾವು

    ಆಲ್ಬನಿ: ನಯಾಗರಾ ಫಾಲ್ಸ್ (Niagara Falls) ವೀಕ್ಷಿಸಿ ನ್ಯೂಯಾರ್ಕ್‌ಗೆ (New York) ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು (Indians) ಸೇರಿ ಐದು ಜನರು ಸಾವನ್ನಪ್ಪಿರುವ ಘಟನೆ ಪೆಂಬ್ರೋಕ್‌ನಲ್ಲಿ ನಡೆದಿದೆ.

    ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಕೊಲ್ಲಾಪುರದಲ್ಲಿ ಅನ್ಯಕೋಮಿನ ಗುಂಪುಗಳ ನಡುವೆ ಘರ್ಷಣೆ – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಅಪಘಾತದಲ್ಲಿ ಮೃತಪಟ್ಟವರೆಲ್ಲರು ವಯಸ್ಕರಾಗಿದ್ದಾರೆ. ಬಸ್ ಪಲ್ಟಿಯಾದಾಗ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಬಳಿಕ ಹೆಲಿಕಾಪ್ಟರ್ ಹಾಗೂ ಆಂಬ್ಯುಲೆನ್ಸ್ ಮೂಲಕ 40ಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ನ್ಯೂಯಾರ್ಕ್ ಪೊಲೀಸರು ತಿಳಿಸಿದ್ದಾರೆ.

    ಸ್ಟೇಟನ್ ಐಲ್ಯಾಂಡ್‌ನ ಎಂ&ವೈ ಟೂರ್ ಲಿಂಕ್ ನಿರ್ವಹಿಸುತ್ತಿದ್ದ ಈ ಬಸ್, ಕಳೆದ ಎರಡು ವರ್ಷಗಳಲ್ಲಿ ಯಾವುದೇ ಅಪಘಾತಗಳ ದಾಖಲೆಯನ್ನು ಹೊಂದಿರಲಿಲ್ಲ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಶ್ರಾವಣ ಕೊನೆ ಶನಿವಾರ – ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

  • ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

    ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

    ವಾಷಿಂಗ್ಟನ್‌: ನ್ಯೂಯಾರ್ಕ್‌ನ (New York) ಗಗನಚುಂಬಿ ಕಟ್ಟಡದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್‌ ಅಧಿಕಾರಿ, ಶಂಕಿತ ದಾಳಿಕೋರ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ನ್ಯೂಯಾರ್ಕ್‌ನ ಕೇಂದ್ರ ಮ್ಯಾನ್‌ಹ್ಯಾಟನ್‌ನಲ್ಲಿ (Midtown Manhattan) ಗುಂಡಿನ ದಾಳಿ ನಡೆದಿದ್ದು, ಓರ್ವ ಪೊಲೀಸ್‌ ಅಧಿಕಾರಿ ಸೇರಿ ನಾಲ್ವರು ಸಾವನ್ನಪ್ಪಿದ್ದರು. ಆ ಬಳಿಕ ಬಂಧೂಕುದಾರಿ ಸ್ವಯಂ ಹಾನಿಯಿಂದ ಸಾವನ್ನಪ್ಪಿದ್ದಾನೆ. ಬಂಧೂಕುಧಾರಿಯನ್ನ ನೆವಾಡಾದ ಶೇನ್ ಟಮುರಾ (27) ಎಂದು ಗುರುತಿಸಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

    ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ ಪಟ್ಟಣವು NFL ಪ್ರಧಾನ ಕಚೇರಿ ಮತ್ತು ಹೆಡ್ಜ್ ಫಂಡ್, ಬ್ಲಾಕ್‌ಸ್ಟೋನ್ ಸೇರಿದಂತೆ ಹಲವಾರು ಪ್ರಮುಖ ಹಣಕಾಸು ಸಂಸ್ಥೆಗಳ ಕಚೇರಿಗಳನ್ನು ಹೊಂದಿರುವ ಸ್ಥಳವಾಗಿದೆ. ಅಲ್ಲದೇ ಪ್ರಮುಖ ಐಷಾರಾಮಿ ಹೋಟೆಲ್‌ಗಳೂ ಇಲ್ಲಿವೆ. ಅಮೆರಿಕದ ಸ್ಥಳೀಯ ಕಾಲಮಾನ ಸಂಜೆ 6:30ರ ಸುಮಾರಿಗೆ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಅಂಬುಲೆನ್ಸ್‌ ಹಾಗೂ ಭದ್ರತಾ ತಂಡಗಳು ಸ್ಥಳಕ್ಕೆ ದೌಡಾಯಿಸಿವೆ. ಇದನ್ನೂ ಓದಿ: ಬ್ಯಾಂಕಾಕ್ ಫುಡ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿಗೆ 6 ಬಲಿ

    ಇನ್ನೂ ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?

  • ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ (Air India Flight) ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದೆ. ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದ್ದು, ಈ ಬೆನ್ನಲ್ಲೇ ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು‌.

    ಘಟನೆಯನ್ನು ದೃಢಪಡಿಸಿದ ಏರ್ ಇಂಡಿಯಾ, ವಿಮಾನ ವಾಪಸ್ ಬರುವ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

    ಮಾ.10 ರಂದು ಮುಂಬೈ-ನ್ಯೂಯಾರ್ಕ್ (ಜೆಎಫ್‌ಕೆ) ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದಾಗ, ವಿಮಾನವು ಹಾರಾಟದ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ನಂತರ, ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಮರಳಿತು.

    ವಿಮಾನವು ಬೆಳಗ್ಗೆ 10:25 ಕ್ಕೆ ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನವು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಗಾಗುತ್ತಿದೆ. ಏರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

    ಈಗ ವಿಮಾನದ ವೇಳಾಪಟ್ಟಿಯನ್ನು ಮಾ.11 ರಂದು ಬೆಳಗ್ಗೆ 5 ಗಂಟೆಗೆ ಹೊರಡುವಂತೆ ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರಿಗೆ ಹೋಟೆಲ್ ವಸತಿ, ಊಟ ಮತ್ತು ಇತರ ಸಹಾಯವನ್ನು ನೀಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ಭದ್ರತಾ ಸಂಸ್ಥೆಗಳು ಪ್ರಸ್ತುತ ವಿಮಾನವನ್ನು ಪರಿಶೀಲಿಸುತ್ತಿದ್ದು, ಭದ್ರತಾ ಬೆದರಿಕೆಯ ಸ್ವರೂಪದ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಬೋಯಿಂಗ್ 777-300 ಇಆರ್ ವಿಮಾನದಲ್ಲಿ 19 ಸಿಬ್ಬಂದಿ ಸೇರಿದಂತೆ 322 ಜನರು ಪ್ರಯಾಣ ಮಾಡ್ತಿದ್ದರು.

    ಪ್ರತ್ಯೇಕ ಘಟನೆಯಲ್ಲಿ ಚಿಕಾಗೋದಿಂದ ದೆಹಲಿಗೆ ಹೋಗುತ್ತಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ತನ್ನ 12 ಶೌಚಾಲಯಗಳಲ್ಲಿ 11 ಶೌಚಾಲಯಗಳನ್ನು ನಿರುಪಯುಕ್ತಗೊಳಿಸಿದ ನಂತರ ಹಾದಿ ಮಧ್ಯೆ ಹಿಂತಿರುಗಬೇಕಾಯಿತು.

    ವಿಮಾನಯಾನ ವೆಬ್‌ಸೈಟ್ ವ್ಯೂ ಫ್ರಮ್ ದಿ ವಿಂಗ್ ವರದಿಯ ಪ್ರಕಾರ, ಏರ್ ಇಂಡಿಯಾ ವಿಮಾನ AI126 ತನ್ನ ಪ್ರಯಾಣದ ಸುಮಾರು ನಾಲ್ಕೂವರೆ ಗಂಟೆಗಳ ನಂತರ ಗ್ರೀನ್‌ಲ್ಯಾಂಡ್ ಮೇಲೆ ಹಾರುವಾಗ ಈ ಸಮಸ್ಯೆ ಕಂಡುಬಂದಿದೆ. 300 ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಕೇವಲ ಒಂದು ಶೌಚಾಲಯ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾಗ, ವಿಮಾನವು ಚಿಕಾಗೋಗೆ ಹಿಂತಿರುಗಿತು.

  • ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

    ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

    ನವದೆಹಲಿ: ಮುಂಬೈನಿಂದ (Mumbai) ನ್ಯೂಯಾರ್ಕ್‌ಗೆ (New York) ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India flight) ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದೆ. ಮಧ್ಯದಲ್ಲೇ ವಾಪಸ್‌ ತಿರುಗಿಸಿ ದೆಹಲಿ  (Delhi) ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್‌ ಮಾಡಲಾಗಿದೆ. ಬಳಿಕ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

    ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

    ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ AI 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಬಾಂಬ್‌ ಬೆದರಿಕೆ ಬಳಿಕ ವಿಮಾನವನ್ನು ದೆಹಲಿಗೆ ತಿರುಗಿಸಲಾಯಿತು.

    ಕಳೆದ ತಿಂಗಳು ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಅದನ್ನು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.

  • ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಮೋದಿ

    ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಮೋದಿ

    ನವದೆಹಲಿ: ಮೂರು ದಿನಗಳ ಕಾಲ ಅಮೇರಿಕ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳವಾರ ಭಾರತಕ್ಕೆ ಮರಳಿದ್ದಾರೆ. ಭಾರತಕ್ಕೆ ಹೊರಡುವ ಮುನ್ನ ಇಸ್ರೇಲ್-ಹಮಾಸ್ ಯುದ್ಧ ಮತ್ತು ಉಕ್ರೇನ್ (Ukraine) ಬಿಕ್ಕಟ್ಟು ಸೇರಿದಂತೆ ಜಾಗತಿಕ ಸಂಘರ್ಷಗಳ ಹಿನ್ನೆಲೆ ಯುಎನ್‌ನ (UN) ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ಯಾವ ದಿನ ಏನು?
    ಮೊದಲ ದಿನ ಅಮೇರಿಕಾದ (America) ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು.ಇದನ್ನೂ ಓದಿ: ಅತ್ಯಾಚಾರ ವಿರೋಧಿಸಿದ್ದಕ್ಕಾಗಿ ಪ್ರಾಂಶುಪಾಲನಿಂದ 6 ವರ್ಷದ ಬಾಲಕಿಯ ಕೊಲೆ

    ಎರಡನೇ ದಿನ ಶನಿವಾರ ನ್ಯೂಯಾರ್ಕ್‌ಗೆ ಆಗಮಿಸಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿದರು.

    ಮೂರನೇ ದಿನ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

    ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಸಭೆಯಲ್ಲಿ, ಉಕ್ರೇನ್‌ನಲ್ಲಿನ ಸಂಘರ್ಷವನ್ನು ಶೀಘ್ರವಾಗಿ ಪರಿಹರಿಸಲು ಮತ್ತು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬದ್ಧತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ತಿಳಿಸಿದರು.

    ಮೂರು ತಿಂಗಳ ಅವಧಿಯಲ್ಲಿ ಉಭಯ ನಾಯಕರ ನಡುವಿನ ಮೂರನೇ ಸಭೆ ಇದಾಗಿದೆ. ಮೋದಿ ಕೊನೆಯ ಬಾರಿಗೆ ಉಕ್ರೇನ್ ರಾಜಧಾನಿ ಕೀನಲ್ಲಿ ಆ.23 ರಂದು ಭೇಟಿ ನೀಡಿದ್ದರು. ಜೂನ್‌ನಲ್ಲಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದರು.ಇದನ್ನೂ ಓದಿ: ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ

  • ನ್ಯೂಯಾರ್ಕ್‌ನಲ್ಲಿ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ

    ನ್ಯೂಯಾರ್ಕ್‌ನಲ್ಲಿ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ

    ನ್ಯೂಯಾರ್ಕ್: ಮೆಲ್ವಿಲ್ಲೆಯಲ್ಲಿರುವ (Melville) ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನವನ್ನು (BAPS Swaminayaran Temple) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.

    ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ (Indian Consulate General) ಅಮೆರಿಕಾದ ಕಾನೂನು ಅಧಿಕಾರಗಳ ಮುಂದೆ ವಿಷಯವನ್ನು ಪ್ರಸ್ತಾಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.ಇದನ್ನೂ ಓದಿ: ಉಡುಪಿ: ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೇ ತೆತ್ತ ಶಿಕ್ಷಕಿ ಅರ್ಚನಾ ಕಾಮತ್

    ಮೆಲ್ವಿಲ್ಲೆಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸಗೊಳಿಸಿರುವ ಸಂಬಂಧ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಖಂಡಿಸಿದ್ದು, ಇದು ಸ್ವೀಕಾರವಲ್ಲ ಹಾಗೂ ಅಮೆರಿಕಾದ ಕಾನೂನು ಅಧಿಕಾರಿಗಳು ಹೇಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

    ಅಮೆರಿಕಾದ ಹಿಂದೂ ಸಂಸ್ಥೆಯು (Hindu American Foudation) ಬಿಎಪಿಎಸ್, ಹಿಂದೂ ದೇವಾಲಯದ ಧ್ವಂಸಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಅಮೆರಿಕಾದ ನ್ಯಾಯ ಇಲಾಖೆಗೆ ತಿಳಿಸಿದೆ.

    ಕ್ಯಾಲಿಫೋನಿರ್ಯಾ ಹಾಗೂ ಕೆನಡಾದ ದೇವಸ್ಥಾನಗಳ ಮೇಲೆ ಆದ ದಾಳಿ ಬಳಿಕ, ಅದೇ ರೀತಿಯಲ್ಲಿ ನ್ಯೂಯಾರ್ಕ್ ದೇವಸ್ಥಾನದ ಧ್ವಂಸ ನಡೆದಿದೆ ಎಂದು ಅಮೆರಿಕಾದ ಹಿಂದೂ ಸಂಸ್ಥೆಯು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದೆ.ಇದನ್ನೂ ಓದಿ: ಲೇಡಿ ಸೂಪರ್ ಸ್ಟಾರ್‌ಗೆ ತಮಿಳು ಡೈರೆಕ್ಟರ್ ಸುಂದರ್ ಸಿ. ಆ್ಯಕ್ಷನ್ ಕಟ್

  • ಹಾಲಿವುಡ್ ಅಂಗಳದಲ್ಲಿ ಕಾಂತಾರ ಬೆಡಗಿ ಸಖತ್ ಜಾಲಿ

    ಹಾಲಿವುಡ್ ಅಂಗಳದಲ್ಲಿ ಕಾಂತಾರ ಬೆಡಗಿ ಸಖತ್ ಜಾಲಿ

    ಕಾಂತಾರ ಬೆಡಗಿ ಸಪ್ತಮಿಗೌಡ (Saptami Gowda) `ಯುವ’ ಸಿನಿಮಾದ ನಂತರ ಬಿಗ್ ಬ್ರೇಕ್ ತೆಗೆದುಕೊಂಡಿದ್ದಾರೆ. ಇದೇ ವರ್ಷ ತೆರೆಕಂಡ ಯುವ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಸಪ್ತಮಿ ಮತ್ತೆ ಕನ್ನಡದಲ್ಲಿ ಯಾವ ಸಿನಿಮಾ ಅಂತಾ ಅನೌನ್ಸ್ ಮಾಡಿಲ್ಲ. ಏತನ್ಮಧ್ಯೆ ತೆಲುಗು ಪ್ರಾಜೆಕ್ಟ್‌ನಲ್ಲಿ ಮಾಡೋದಾಗಿ `ಯುವ’ ಸಿನಿಮಾದ ಸಕ್ಸಸ್ ಸಂಭ್ರಮದಲ್ಲಿ ಹೇಳಿಕೊಂಡಿದ್ದರು. ಅದಕ್ಕಾಗಿ ಸಾಕಷ್ಟು ರೀತಿಯಲ್ಲಿ ತಯಾರಿಯನ್ನೂ ಕೂಡಾ ಮಾಡಿಕೊಂಡಿದ್ದರಂತೆ ಸಪ್ತಮಿಗೌಡ.

    ಸದ್ಯ ಸಿನಿಮಾದಿಂದ ಬ್ರೇಕ್ ತೆಗೆದುಕೊಂಡಿರುವ ಸಪ್ತಮಿ ಗೌಡ ವಿದೇಶದಲ್ಲಿ ಓಡಾಟ ನಡೆಸಿದ್ದಾರೆ. ಅಮೆರಿಕಾದ ಪ್ರಸಿದ್ಧ ಸ್ಥಳಗಳಲ್ಲಿ ಸಖತ್ ಎಂಜಾಯ್ ಮಾಡ್ತಿರುವ ಸಪ್ತಮಿ ಹಾಲಿವುಡ್‌ಗೂ ಭೇಟಿ ಕೊಟ್ಟಿದ್ದಾರೆ. ಹಾಲಿವುಡ್‌ನ (Hollywood) ಮಾರ್ವೆಲ್ ಸ್ಟುಡಿಯೋಗೂ ಭೇಟಿ ಕೊಟ್ಟಿದ್ದು, ಸಿನಿಮಾದ ಶೂಟ್ ಆಗ್ಲಿ ಅಥವಾ ಯಾವುದೇ ಆ್ಯಡ್ ಬಗ್ಗೆ ಮಾತುಕತೆಗಾಗ್ಲಿ ಅಲ್ಲ. ಬದಲಾಗಿ ಈ ಬಿಡುವಿನ ಸಮಯವನ್ನ ಕಳೆಯುವುದಕ್ಕೆ ಅಮೆರಿಕಾದ ಬೀದಿ ಬೀದಿ ಸುತ್ತಾಟ ನಡೆಸಿದ್ದಾರೆ.

    ನ್ಯೂಯಾರ್ಕ್ (New York), ಕ್ಯಾಲಿಫೋರ್ನಿಯ, ಮಾರ್ವೆಲ್ ಸ್ಟುಡಿಯೋಗೆ ಭೇಟಿಕೊಟ್ಟ ವೇಳೆ ಕ್ಲಿಕ್ಕಿಸಿಕೊಂಡ ಬ್ಯೂಟಿಫುಲ್ ಫೋಟೋಗಳನ್ನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಪ್ತಮಿಗೌಡರ ಫೋಟೋ ನೋಡಿ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. `ಪಾಪ್‌ಕಾರ್ನ್ ಮಂಕಿ ಟೈಗರ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸಪ್ತಮಿ `ಕಾಂತಾರ’ ಮೂಲಕ ನ್ಯಾಷನಲ್ ಲೆವೆಲ್‌ನಲ್ಲಿ ಅಟ್ರ್ಯಾಕ್ಟ್ ಮಾಡಿದ್ದಾರೆ.

    `ಕಾಂತಾರ’ ಸಿನಿಮಾದ ನಂತರ ಹೊಂಬಾಳೆ ಸಂಸ್ಥೆ ನಿರ್ಮಾಣದಲ್ಲಿ ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡಿದ್ದ ಯುವ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಸದ್ಯ ಬಿಗ್ ಬ್ರೇಕ್ ತೆಗೆದುಕೊಂಡಿರುವ ಸಪ್ತಮಿ ಸದ್ಯ ವಿದೇಶದಲ್ಲಿ ಬಿಂದಾಸ್ ಆಗಿ, ಸಖತ್ ಆಗಿ ಎಂಜಾಯ್ ಮಾಡ್ತಿದ್ದಾರೆ.

  • ಅಮೆರಿಕದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಶ್ರಾವಣ ಅಮಾವಾಸ್ಯೆ ಆಚರಣೆ

    ಅಮೆರಿಕದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಶ್ರಾವಣ ಅಮಾವಾಸ್ಯೆ ಆಚರಣೆ

    ವಾಷಿಂಗ್ಟನ್: ಅಮೆರಿಕದ (America) ನ್ಯೂಯಾರ್ಕ್ (New York) ನ್ಯೂಜೆರ್ಸಿ (New Jersey) ನಗರದಲ್ಲಿರುವ ಶ್ರೀ ಆದಿಚುಂಚನಗಿರಿ (Adichunchanagiri) ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಸೋಮವಾರ ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕ ಮಾಡುವ ಮೂಲಕ ಭಕ್ತಿ ಭಾವದಿಂದ ಶ್ರಾವಣ ಅಮಾವಾಸ್ಯೆ ಆಚರಿಸಲಾಯಿತು.

    ಹಲವಾರು ಭಕ್ತರು ಕುಟುಂಬ ಸಮೇತ ಪೂಜೆಯಲ್ಲಿ ಭಾಗವಹಿಸಿ ಧನ್ಯರಾದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ (Nirmalanandanatha Swamiji) ದಿವ್ಯ ಸಾನಿಧ್ಯದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಇದನ್ನೂ ಓದಿ: Paralympics | ಮನೀಶಾ ಕಂಚಿನ ಮಿಂಚು – ಬ್ಯಾಡ್ಮಿಂಟನ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ!

    ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಕಾರ್ಯದರ್ಶಿಗಳಾದ ಪೂಜ್ಯ ಪ್ರಸನ್ನನಾಥ ಸ್ವಾಮೀಜಿಯವರು, ಮೈಸೂರು ಶಾಖೆಯ ಪೂಜ್ಯ ಸೋಮೇಶ್ವರನಾಥ ಸ್ವಾಮಿಜಿಯವರ ಉಪಸ್ಥಿತಿಯಲ್ಲಿ ಅಮಾವಾಸ್ಯೆ ಪೂಜೆಯನ್ನು ನೆರವೇರಿಸಲಾಯಿತು. ಇದನ್ನೂ ಓದಿ: ಬೈಕ್‌ನಲ್ಲಿ ಬಂದು ಪುಣೆ ಮಾಜಿ ಕಾರ್ಪೋರೇಟರ್ ಕೊಂದ್ರು – 10 ಆರೋಪಿಗಳ ಮೇಲೆ ಎಫ್‌ಐಆರ್

  • ಹಾಲಿವುಡ್ #MeToo ಅಭಿಯಾನಕ್ಕೆ ಹಿನ್ನಡೆ: ಹಾರ್ವಿಗೆ ವಿಧಿಸಿದ್ದ ಶಿಕ್ಷೆ ರದ್ದು

    ಹಾಲಿವುಡ್ #MeToo ಅಭಿಯಾನಕ್ಕೆ ಹಿನ್ನಡೆ: ಹಾರ್ವಿಗೆ ವಿಧಿಸಿದ್ದ ಶಿಕ್ಷೆ ರದ್ದು

    ಗತ್ತಿನಾದ್ಯಂತ ಮಿಟೂ (MeToo) ಅಭಿಯಾನಕ್ಕೆ ನಾಂದಿ ಹಾಡಿದ್ದ ಹಾಲಿವುಡ್ ಸಿನಿ ರಂಗದ ಖ್ಯಾತ ನಿರ್ಮಾಪಕ ಹಾರ್ವಿ ವೈನ್ ಸ್ಟೀನ್ (Harvey Weinstein) ಮೇಲಿನ ಅತ್ಯಾಚಾರ ಆರೋಪಕ್ಕೆ ತಾತ್ಕಾಲಿನ ಜಯ ಸಿಕ್ಕಿದೆ. ಹಾರ್ವಿ ವೈನ್ ಸ್ಟೀನ್ ಗೆ ವಿಧಿಸಿದ್ದ ಶಿಕ್ಷೆಯನ್ನು ನ್ಯೂಯಾರ್ಕ್ ನ ಮೇಲ್ಮನವಿ ನ್ಯಾಯಾಲಯವು ರದ್ದು ಮಾಡಿದೆ.

    ಸಾವಿರಾರು ಕೋಟಿ ರೂಪಾಯಿಯನ್ನು ಸಿನಿಮಾಗಳಿಗೆ ಹೂಡಿಕೆ ಮಾಡಿ, ಹಾಲಿವುಡ್ ನಲ್ಲಿ ಸಂಚಲನ ಮೂಡಿಸಿದ್ದ ಹಾರ್ವಿ ಮೇಲೆ 80ಕ್ಕೂ ಅಧಿಕ ಮಹಿಳೆಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಕೆಲವರು ಅತ್ಯಾಚಾರದಂತಹ ಗಂಭೀರ ಆರೋಪವನ್ನೂ ಮಾಡಿದ್ದರು. ಇಲ್ಲಿಂದ ಮಿಟೂ ಅಭಿಯಾನ ಶುರುವಾಗಿತ್ತು. ಅದು ಜಗತ್ತಿನಾದ್ಯಂತ ಹೋರಾಟಕ್ಕೂ ಕಾರಣವಾಗಿತ್ತು.

    2018ರಲ್ಲಿ ಅತ್ಯಾಚಾರದ ಆರೋಪದ ಮೇಲೆ ಹಾರ್ವಿಯನ್ನು ಬಂಧಿಸಲಾಗಿತ್ತು. ಆನಂತರ ಅವರಿಗೆ 23 ವರ್ಷಗಳ ಜೈಲು ಶಿಕ್ಷೆಯೂ ಪ್ರಕಟವಾಗಿತ್ತು. ಈ ತೀರ್ಪಿನ ವಿರುದ್ಧ ಹಾರ್ವಿ ವಕೀಲರು ಮೇಲ್ಮನೆ ಸಲ್ಲಿಸಿದ್ದರು. ಸಂಬಂಧವೇ ಇಲ್ಲದ ಸಾಕ್ಷಿಗಳನ್ನು ಪರಿಗಣಿಸಲಾಗಿದೆ ಮತ್ತು ನ್ಯಾಯಾಧೀಶರು ಹಾರ್ವಿ ಬಗ್ಗೆ ಪೂರ್ವಾಗ್ರಹ ಹೊಂದಿದ್ದರು ಎಂದು ವಾದ ಮಾಡಿದ್ದರು.

     

    ಮೇಲ್ಮನೆಯನ್ನು ಪುರಸ್ಕರಿಸಿದ ನ್ಯೂಯಾರ್ಕ್ ನ್ಯಾಯಾಲಯವು ಶಿಕ್ಷೆ ರದ್ದು ಮಾಡಿ, ಈ ಆರೋಪದ ಕುರಿತಂತೆ ಹೊಸದಾಗಿ ವಿಚಾರಣೆ ಮಾಡಲು ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಹಾರ್ವಿಗೆ ರಿಲೀಫ್ ಸಿಕ್ಕಿದೆ. ಆದರೆ, ಮತ್ತೊಂದು ಲೈಂಗಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು, ಅವರು ಜೈಲಿನಲ್ಲಿ ಇರಬೇಕಾಗಿದೆ. ಯಾಕೆಂದರೆ, ಈ ಪ್ರಕರಣಕ್ಕೆ ಅವರಿಗೆ 16 ವರ್ಷ ಜೈಲು ಶಿಕ್ಷೆಯಾಗಿದೆ.

  • ಟಿಕ್‌ಟಾಕ್ ಬ್ಯಾನ್ ಮಾಡಿದ ನ್ಯೂಯಾರ್ಕ್ ಆಡಳಿತ

    ಟಿಕ್‌ಟಾಕ್ ಬ್ಯಾನ್ ಮಾಡಿದ ನ್ಯೂಯಾರ್ಕ್ ಆಡಳಿತ

    ವಾಷಿಂಗ್ಟನ್: ಭದ್ರತಾ ಕಾಳಜಿಯ ಕಾರಣದಿಂದ ನ್ಯೂಯಾರ್ಕ್ ಸಿಟಿಯ (New York City) ಸರ್ಕಾರಿ ಸಾಧನಗಳಲ್ಲಿ ಚೀನಾ (China) ಮೂಲದ ವೀಡಿಯೋ ಹಂಚಿಕೆ ಪ್ಲಾಟ್‌ಪಾರ್ಮ್ ಟಿಕ್‌ಟಾಕ್ (Tiktok) ಅನ್ನು ಬ್ಯಾನ್ ಮಾಡಲಾಗಿದೆ.

    ನ್ಯೂಯಾರ್ಕ್ ಸಿಟಿಯ ಮೇಯರ್ ಎರಿಕ್ ಆಡಮ್ಸ್ ಆಡಳಿತ, ಟಿಕ್‌ಟಾಕ್ ನಗರದ ತಾಂತ್ರಿಕ ಜಾಲಗಳಿಗೆ ಭದ್ರತಾ ಬೆದರಿಕೆಗಳನ್ನು ಒಡ್ಡಿದೆ ಎಂದು ತಿಳಿಸಿದೆ. ಈ ಮೂಲಕ ಟಿಕ್‌ಟಾಕ್ ಅನ್ನು ನಿರ್ಬಂಧಿಸಿರುವ 24 ರಾಜ್ಯಗಳ ಪಟ್ಟಿಗೆ ನ್ಯೂಯಾರ್ಕ್ ಕೂಡಾ ಸೇರಿಕೊಳ್ಳುತ್ತದೆ ಎಂದು ವರದಿಗಳು ತಿಳಿಸಿವೆ.

    ಇಲ್ಲಿನ ಎಲ್ಲ ಏಜೆನ್ಸಿಗಳು 30 ದಿನಗಳ ಒಳಗೆ ಅಪ್ಲಿಕೇಶನ್ ಅನ್ನು ಅನ್‌ಇನ್ಸ್ಟಾಲ್ ಮಾಡಬೇಕಾಗುತ್ತದೆ. ಸರ್ಕಾರ ಒದಗಿಸಿದ ಮೊಬೈಲ್ ಸಾಧನಗಳು ಹಾಗೂ ನೆಟ್‌ವರ್ಕ್ಗಳಲ್ಲಿ ಇನ್ನು ಮುಂದೆ ಟಿಕ್‌ಟಾಕ್ ಹಾಗೂ ಅದರ ವೆಬ್‌ಸೈಟ್‌ಗೆ ಪ್ರವೇಶ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದೆ. ನ್ಯೂಯಾರ್ಕ್ ರಾಜ್ಯಾಡಳಿತ ಕೆಲವು ವಿನಾಯಿತಿಗಳೊಂದಿಗೆ 3 ವರ್ಷಗಳಿಗೂ ಹೆಚ್ಚು ಕಾಲ ಟಿಕ್‌ಟಾಕ್ ನಿಷೇಧಿಸಿ ಆದೇಶಿಸಿದೆ. ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ iPhone ಬಳಕೆ ನಿಷೇಧಿಸಿದ ರಷ್ಯಾ

    ಟಿಕ್‌ಟಾಕ್ ಅನ್ನು 15 ಕೋಟಿಗೂ ಹೆಚ್ಚು ಅಮೆರಿಕನ್ನರು ಬಳಸುತ್ತಿದ್ದಾರೆ. ಇದು ಭದ್ರತೆಗೆ ಅಪಾಯ ಉಂಟುಮಾಡುತ್ತಿರುವುದರಿಂದ ಸರ್ಕಾರಿ ಸಾಧನಗಳಲ್ಲಿ ಬ್ಯಾನ್ ಮಾಡಲಾಗುತ್ತಿದೆ. ಭಾರತದಲ್ಲಿ ಟಿಕ್‌ಟಾಕ್ ಅನ್ನು 2020ರ ಜೂನ್‌ನಲ್ಲಿಯೇ ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ರಕ್ಷಣಾ ಸಚಿವಾಲದ ಕಂಪ್ಯೂಟರ್‌ಗಳಲ್ಲಿ ಇನ್ನು Windows ಬದಲು ದೇಶೀ ನಿರ್ಮಿತ Maya OS

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]