Tag: ಪಂಕಜಾ

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸುಬ್ಬಲಕ್ಷ್ಮಿ’ ಪತಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸುಬ್ಬಲಕ್ಷ್ಮಿ’ ಪತಿ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿಯಲ್ಲಿ ಈ ಹಿಂದೆ ನಟಿಸುತ್ತಿದ್ದ ನಟ ಭವಾನಿ ಸಿಂಗ್ ತಮ್ಮ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಭವಾನಿ ಸಿಂಗ್ ತಮ್ಮ ಬಹುಕಾಲದ ಗೆಳತಿ ಪಂಕಜಾ ಶಿವಣ್ಣ ಅವರ ಜೊತೆ ಮದುವೆ ಆಗಿದ್ದಾರೆ. ಭವಾನಿ ಹಾಗೂ ಪಂಕಜಾ ಎರಡು ವರ್ಷದಿಂದ ಸ್ನೇಹಿತರಾಗಿದ್ದರು. ಬಳಿಕ ಭವಾನಿ ಅವರು ಪಂಕಜಾ ಅವರನ್ನು ಪ್ರಪೋಸ್ ಮಾಡಿದ್ದು, ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ‘ಸುಬ್ಬಲಕ್ಷ್ಮಿ’ ಪತಿ

    ಕೆಲ ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇದೀಗ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಮದುವೆಯ ಫೋಟೋಗಳನ್ನು ಭವಾನಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇವರಿಬ್ಬರ ಆರತಕ್ಷತೆ ಕೂಡ ಅದ್ಧೂರಿಯಾಗಿ ನಡೆದಿದೆ. ಆರತಕ್ಷತೆಗೆ ಸಹ ಕಲಾವಿದರು ಬಂದು ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.

    ಮೂಲತಃ ರಾಜಸ್ಥಾನದವರಾಗಿರುವ ಭವಾನಿ ಸಿಂಗ್ ಬೆಂಗಳೂರಿನಲ್ಲಿ ಬಿಬಿಎಂ ಪದವಿ ಮಾಡಿದ್ದಾರೆ. ಈ ಹಿಂದೆ ಭವಾನಿ ಸಿಂಗ್ ನಟಿಸಿದ ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿಯಲ್ಲಿ ಪಂಕಜಾ ನಾಯಕಿಯ ಸ್ನೇಹಿತೆಯ ಪಾತ್ರದಲ್ಲಿ ಅಭಿನಯಿಸಿದ್ದರು.

    ಸುಬ್ಬಲಕ್ಷ್ಮಿ ಸಂಸಾರ ಅಲ್ಲದೆ ಭವಾನಿ ಸಿಂಗ್ ‘ಚರಣದಾಸಿ’ ಧಾರಾವಾಹಿಯಲ್ಲಿ ನಟಿಸಿದ್ದರು. ಸದ್ಯ ಭವಾನಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಕ್ಷಾ ಬಂಧನ’ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ.

     

    View this post on Instagram

     

    My Wife My Life !! @pankajashivanna . I Love You ❤️❤️❤️

    A post shared by Bhavani Singh (@bhavanisingh.official) on