Tag: ಪಂಚನಹಳ್ಳಿ

  • ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ 2ನೇ ವರ್ಷದ ಪುಣ್ಯಸ್ಮರಣೆ

    ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ 2ನೇ ವರ್ಷದ ಪುಣ್ಯಸ್ಮರಣೆ

    ಬಿ.ಎಸ್. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ  ‘ನಾನು ಅವನಲ್ಲ ಅವಳು’ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದ ನಟ ಸಂಚಾರಿ ವಿಜಯ್ (Sanchari Vijay) ಅವರು ಅಗಲಿ ಎರಡು ವರ್ಷಗಳು. ಅವರ 2ನೇ ವರ್ಷದ ಪುಣ್ಯ ಸ್ಮರಣೆಯನ್ನು (Punyasmarane) ನಾಳೆ ವಿಜಯ್ ಅವರ ಹುಟ್ಟೂರಾದ ಪಂಚನಹಳ್ಳಿಯಲ್ಲಿ (Panchanahalli) ಆಯೋಜನೆ ಮಾಡಲಾಗಿದೆ.

    ಸಂಚಾರಿ ವಿಜಯ್ ನಿಧನರಾದಾಗ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾದರಿಯ ನಡೆಯನ್ನು ಹಾಕಿಕೊಟ್ಟು ಹೋದರು. ವಿಜಯ್ ಅವರ ಸಮಾಜಮುಖಿ ಕೆಲಸಗಳನ್ನು ಅವರ ಗೆಳೆಯರ ಬಳಗ ಮುಂದುವರೆಸಿಕೊಂಡು ಹೋಗುತ್ತಿದೆ. ಎರಡನೇ ವರ್ಷದ ಪುಣ್ಯ ಸ್ಮರಣೆಯನ್ನು ಅರ್ಥಪೂರ್ಣವಾಗಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ:ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

    ಸಂಚಾರಿ ವಿಜಯ್ ಅವರ ಕುಟುಂಬ, ಸಂಚಾರಿ ವಿಜಯ್ ಗೆಳೆಯರ ಬಳಗ, ಸಂಚಾರಿ ವಿಜಯ್ ಕಲಾ ಸಂಘ, ಸಂಚಾರಿ ವಿಜಯ್ ಸ್ಪೋರ್ಟ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್, ತಾಲೂಕ ಘಟಕ ಕಡೂರು ಇವರ ಸಂಯುಕ್ತ ಆಶ್ರಯದಡಿ ರಕ್ತದಾನ ಶಿಬಿರವನ್ನು (blood donation camp) ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕಡೂರು ತಾಲೂಕು, ಪಂಚನಹಳ್ಳಿಯಲ್ಲಿರುವ ವಿಜಯ್ ಅವರ ಸಮಾಧಿ ವಿಜಯನಿಧಿ ಬಳಿ ಕಾರ್ಯಕ್ರಮ ಆಯೋಜನೆಯಾಗಿದೆ.

    ರಕ್ತದಾನ ಶಿಬಿರವನ್ನು ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರೆ, ಪಂಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಗಂಗನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ದೇಶಕ ಬಿ.ಎಸ್.ಲಿಂಗದೇವರು, ಮಾಜಿ ಶಾಸಕರಾದ ಜಿ.ಹೆಚ್. ಶ್ರೀನಿವಾಸ್, ಶೃಂಗೇರಿ ಶಾಸಕರಾದ ಟಿ.ಡಿ ರಾಜೇಗೌಡ, ಮಾಜಿ ಶಾಸಕರಾದ ವೈ ಎಸ್ ವಿ ದತ್ತ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

    ಸಂಚಾರಿ ತಂಡದ ಎನ್. ಮಂಗಳಾ, ನಟ ರಂಗಾಯಣ ರಘು, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್, ಅರವಿಂದ್ ಕುಪ್ಳಿಕರ್, ನಟ ಕೃಷ್ಣ ಹೆಬ್ಬಾಳೆ, ನಟಿಯರಾದ ಸೋನು ಗೌಡ, ಸುರಭಿ ಲಕ್ಷ್ಮೀ ಸೇರಿದಂತೆ ವಿಜಯ್ ಅವರ ಕುಟುಂಬ ಅಂದು ಉಪಸ್ಥಿತಿ ಇರಲಿದೆ.

  • ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಹುಟ್ಟುಹಬ್ಬ : ವಿವಿಧ ಕಾರ್ಯಕ್ರಮಗಳ ಆಯೋಜನೆ

    ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಹುಟ್ಟುಹಬ್ಬ : ವಿವಿಧ ಕಾರ್ಯಕ್ರಮಗಳ ಆಯೋಜನೆ

    ಲವು ವರ್ಷಗಳ ನಂತರ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದು ಕೊಟ್ಟ ನಟ ಸಂಚಾರಿ ವಿಜಯ್ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ನಾಳೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಅವರ ಹುಟ್ಟು ಹಬ್ಬವಾಗಿರುವುದರಿಂದ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಹುಟ್ಟು ಹಬ್ಬವನ್ನು ಸಾರ್ಥಕಗೊಳಿಸುತ್ತಿದ್ದಾರೆ.

    ಸಂಚಾರಿ ವಿಜಯ್ ಅವರಿಗೆ ಸಂಚಾರಿ ಎಂಬ ಪದನಾಮವನ್ನು ತಂದುಕೊಂಡ ಮಂಗಳಾ ಅವರ ಸಂಚಾರಿ ಥಿಯೇಟರ್ ನಲ್ಲಿ ನಾಳೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜಯ್ ಅವರ ಹೆಸರಿನಲ್ಲಿ ನಾಟಕೋತ್ಸವ ಆಯೋಜನೆ ಮಾಡಿದ್ದು, ಈ ನಾಟಕೋತ್ಸವದ ಪೋಸ್ಟರ್ ಅನ್ನು ಬಿ.ಜಯಶ್ರೀ ಅವರು ಬಿಡುಗಡೆ ಮಾಡಲಿದ್ದಾರೆ. ಸಂಜೆ 7ಕ್ಕೆ ಸಂಚಾರಿ ಥಿಯೇಟರ್ ಎಂಪ್ಟಿಸ್ಪೆಸ್ ನಲ್ಲಿ ವಿಜಯ್ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ. ಇದನ್ನೂ ಓದಿ : ‘ಮದುವೆನೂ ಇಲ್ಲ, ರಿಂಗೂ ಇಲ್ಲ’ ಲಲಿತ್ ಮೋದಿಗೆ ತಿವಿದ ಸುಶ್ಮಿತಾ ಸೇನ್

    ವಿಜಯ್ ಅವರ ಸ್ನೇಹಿತರಾದ ಅನಿಲ್ ಗೌಡ ಮತ್ತು ಸ್ನೇಹಿತರು ನಾಗರಭಾವಿ ಸಬ್ ರಿಜಿಸ್ಟಾರ್ ಕಛೇರಿ ಎದುರು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದಾರೆ. ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರಿಗೆ ಸಂಚಾರಿ ವಿಜಯ್ ಅವರ ಜನ್ಮದಿನಕ್ಕಾಗಿ ಈ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜನೆಗೊಂಡಿದೆ. ಅಲ್ಲದೇ, ವಿಜಯ್ ಅವರನ್ನು ಸ್ಮರಿಸುವಂತಹ ಕಾರ್ಯ ಕೂಡ ಈ ಮೂಲಕ ನಡೆಯಲಿದೆ.

    ವಿಜಯ್ ಅವರು ಕಲಿತಿರುವ ಪಂಚನಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಗೆ ಸುಣ್ಣ ಬಣ್ಣ ಹಚ್ಚುವಂತಹ ಕೆಲಸವನ್ನು ಕನ್ನಡ ಮನಸುಗಳ ಪ್ರತಿಷ್ಠಾನ ಮಾಡುತ್ತಿದೆ. ಜುಲೈ 16 ಮತ್ತು 17 ಎರಡು ದಿನಗಳ ಕಾಲ ಈ ಕೆಲಸವನ್ನು ಅದು ಹಮ್ಮಿಕೊಂಡಿದೆ. ಅಲ್ಲದೇ, ಜೀ ಕನ್ನಡ ವಾಹಿನಿಯಲ್ಲಿ ವಿಜಯ್ ನಟಿಸಿರುವ ತಲೆದಂಡ ಸಿನಿಮಾ ಕೂಡ ಪ್ರಸಾರವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯತಿಥಿ : ಹುಟ್ಟೂರಲ್ಲಿ ಹಲವು ಕಾರ್ಯಕ್ರಮಗಳು

    ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯತಿಥಿ : ಹುಟ್ಟೂರಲ್ಲಿ ಹಲವು ಕಾರ್ಯಕ್ರಮಗಳು

    ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ತನ್ನ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳನ್ನು ಅಗಲಿ ಇಂದಿಗೆ ಒಂದು ವರ್ಷ. ಮೊನ್ನೆಯಷ್ಟೇ ಅವರ ಕುಟುಂಬವು ಪಂಚನಹಳ್ಳಿಯಲ್ಲಿರುವ ವಿಜಯ್ ಸಮಾಧಿ ಸ್ಥಳದಲ್ಲಿ ಪುತ್ಥಳಿ ಸ್ಥಾಪಿಸಿ, ಪೂಜೆ ಸಲ್ಲಿಸಿದ್ದರು. ಇವತ್ತು ಪುಣ್ಯತಿಥಿಯ ದಿನದಂದೂ ವಿಜಯ್ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ, ಅಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಇಂದು ಬೆಳಗ್ಗೆ ವಿಜಯ್ ಅವರ ನೆಚ್ಚಿನ ರಂಗಸಂಸ್ಥೆ ಸಂಚಾರಿ ಬಳಗವು ವಿಜಯ್ ಅವರ ಗುರು ಮಂಗಳಾ ಅವರ ನೇತೃತ್ವದಲ್ಲಿ ಪಂಚನಹಳ್ಳಿಯಲ್ಲಿರುವ ವಿಜಯ್ ಅವರ ಸಮಾಧಿ ಬಳಿ ರಂಗಗೀತೆ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ವಿಜಯ್ ಇಷ್ಟದ ಹಾಡುಗಳನ್ನು ಹೇಳುವ ಮೂಲಕ ನಮನ ಸಲ್ಲಿಸಲಾಗುತ್ತಿದೆ. ಅಲ್ಲದೇ, ಅಭಿಮಾನಿಗಳು ಕೂಡ ಇಂದು ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ : ಗಂಡನ ಮನೆಯ ಫೋಟೋ ಹಂಚಿಕೊಂಡ ನಯನತಾರಾ : ಸಂಪ್ರದಾಯ ಪಾಲಿಸಿದ ನಟಿಗೆ ಅಭಿಮಾನಿಗಳ ಹಾರೈಕೆ

    ವಿಜಯ್ ಅವರು ಕಾಣಿಸಿಕೊಂಡ ಕೊನೆಯ ಆಲ್ಬಂ ಮೈಲಾರವನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ. ಮೈಲಾರಲಿಂಗೇಶ್ವರ ಕುರಿತಾದ ಭಕ್ತಿ ಪ್ರಧಾನ ಗೀತೆ ಇದಾಗಿದ್ದು, ಈ ವಿಡಿಯೋ ಆಲ್ಬಂನಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ. ಇಂದು ಅದರ ಲೋಕಾರ್ಪಣೆ ಕೂಡ ಇದೆ. ಈ ಮೂಲಕ ವಿಜಯ್ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಗೆಳೆಯರು ಮತ್ತು ಆಪ್ತರು ಕೂಡ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

  • Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಗಲಿ ಜೂನ್ 14ಕ್ಕೆ ಒಂದು ವರ್ಷ ತುಂಬುತ್ತದೆ. ಅಗಲಿದ ನಟನ ನೆನಪಿಗೆ ಒಂದು ವಾರ ಮುಂಚೆಯೇ ಅವರ ಕುಟುಂಬದವರು ಮತ್ತು ಆಪ್ತರು, ಸ್ನೇಹಿತರು ಹಾಗೂ ಅಭಿಮಾನಿಗಳು ಇಂದು ಮೊದಲ ವರ್ಷದ ಪುಣ್ಯತಿಥಿಯನ್ನು ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ನೆರವೇರಿಸಿದರು. ಇದನ್ನೂ ಓದಿ:`ಜವಾನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಶಾರುಖ್ ಖಾನ್ ಎಂಟ್ರಿ

    ಮೊದಲ ವರ್ಷದ ಪುಣ್ಯಸ್ಮರಣೆಯ ದಿನದಂದು ವಿಜಯ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಗಿದೆ. ವಿಜಯ್ ಸಹೋದರರಾದ ಬಿ.ವೀರೂಪಾಕ್ಷ ಮತ್ತು ಸಿದ್ದೇಶಕುಮಾರ್ ಸಹೋದರನ ಸುಂದರ ಮೂರ್ತಿಯನ್ನು ಅರ್ಥಗರ್ಭಿತವಾಗಿ ತಯಾರಿಸಿದ್ದು, ಇಂದು ಆ ಪುತ್ಥಳಿ ಪಂಚನಹಳ್ಳಿಯ ವಿಜಯ್ ಸಮಾಧಿ ಸ್ಥಳದಲ್ಲಿ ಅನಾವರಣಗೊಂಡಿದೆ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ವಿಜಯ್ ಅವರ ಪ್ರಥಮ ಪುಣ್ಯಸ್ಮರಣೆಯಲ್ಲಿ ವಿಜಯ್ ಅವರ ಪರಮಾಪ್ತ ಸ್ನೇಹಿತರಾದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, ನಿರ್ದೇಶಕ ವೀರೂ ಮಲ್ಲಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಳೆದ ವರ್ಷ ವಿಜಯ್ ರಸ್ತೆ ಅಪಘಾತದಲ್ಲಿ ನಿಧನಹೊಂದಿದ್ದರು. ಅತೀ ಚಿಕ್ಕ ವಯಸ್ಸಿನ ಪ್ರತಿಭಾವಂತ ನಟನನ್ನು ಕಳೆದುಕೊಂಡ ಸಿನಿಮಾ ರಂಗ ಬಡವಾಗಿತ್ತು.