Tag: ಪಂಚಮಸಾಲಿ ಹೋರಾಟ

  • 2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    – ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

    ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutunjaya Swamiji) ಎಚ್ಚರಿಕೆ ನೀಡಿದ್ದಾರೆ.

    ಇಂದು (ಡಿ.12) ಬೆಳಗಾವಿ (Belagavi) ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.ಇದನ್ನೂ ಓದಿ: ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.

    ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.

    ಪಂಚಮಸಾಲಿ ಮೀಸಲು ಹೋರಾಟದಲ್ಲಿ ನಡೆದ ಲಾಠಿಚಾರ್ಜ್‌ನಿಂದಾಗಿ ಹಲವರು ಗಾಯಗೊಂಡಿದ್ದರು. ಸದ್ಯ ಗಾಯಳುಗಳು ಬೆಳಗಾವಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ನಾಯಕರು ಇಂದು ಗಾಯಾಳುಗಳ ಆರೋಗ್ಯ ವಿಚಾರಿಣೆ ನಡೆಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್ ಸೇರಿದಂತೆ ಇನ್ನಿತರರು ಭೇಟಿ ನೀಡಲಿದ್ದಾರೆ.

    ಬಿಜೆಪಿಯಿಂದ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ:
    ಪಂಚಮಸಾಲಿ ಹೋರಾಟದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಇಂದು ಬಿಜೆಪಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದೆ. ಬಿವೈ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

  • ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ

    ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ

    ಬೆಳಗಾವಿ/ಬೆಂಗಳೂರು: ಬಿಜೆಪಿಯವ್ರು (BJP) ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ (Muslim Community) ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಬೆಳಗಾವಿ ಚಳಿಗಾಲ ಅಧಿವೇಶನದ (Belagavi Winter Session)ಮೊದಲ ದಿನ ಸದನದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಕುರಿತು ಸಿಎಂ ಮಾತನಾಡಿದರು. ಪಂಚಮಸಾಲಿ (Panchamasali) ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

    ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದರು. ಈ ವೇಳೆ ಸ್ಪಷ್ಟನೆ ನೀಡಿದ ಗೃಹ ಸಚಿವರು 5,000 ಟ್ರ‍್ಯಾಕ್ಟರ್‌ಗಳನ್ನು ತರಲು ಮುಂದಾಗಿದ್ದಾರೆ. ಹಾಗಾಗಿ ಲಾ ಅಂಡ್ ಆರ್ಡರ್ ಸಮಸ್ಯೆ ಆಗುತ್ತೆ ಅಂತ ಅನುಮತಿ ಕೊಡಲಿಲ್ಲ. ನಂತರ ಜನ ಬರ್ತಾರೆ ವಾಹನಗಳಲ್ಲಿ ಅಂದ್ರು, ಜನ ಬರೋ ವಾಹನಗಳಿಗೂ ನಾವು ಮಿತಿ ಹಾಕಿದ್ದೇವೆ. ಪ್ರತಿಭಟನೆ ಮಾಡಲು ಅಡ್ಡಿ ಇಲ್ಲ, ಆದ್ರೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಅಷ್ಟೇ ಎಂದು ಗೃಹಸಚಿವರು ತಿಳಿಸಿದ್ರು. ಇದನ್ನೂ ಓದಿ: ಪ್ರತಿ ತಿಂಗಳು ಎಷ್ಟು ಮಂದಿಗೆ ಯುವನಿಧಿ ಹಣ ಸೇರುತ್ತಿದೆ – ಲೆಕ್ಕ ಕೊಟ್ಟ ಸರ್ಕಾರ

    ಬಳಿಕ ಮಾತು ಮುಂದುವರಿಸಿದ ಸಿಎ, ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: 9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

    ಈ ಹಿಂದೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸುವುದಿಲ್ಲ. ಯತಾಸ್ಥಿತಿ ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಕೋರ್ಟ್‌ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ ಎಂದು ಹೇಳಿದರು.

  • ಯತ್ನಾಳ್ ಸಮಾಜದ ಅಸ್ತ್ರ: ಜಯಮೃತ್ಯುಂಜಯ ಸ್ವಾಮೀಜಿ

    ಯತ್ನಾಳ್ ಸಮಾಜದ ಅಸ್ತ್ರ: ಜಯಮೃತ್ಯುಂಜಯ ಸ್ವಾಮೀಜಿ

    ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾಜದ ಅಸ್ತ್ರ. ಯತ್ನಾಳ್ ಹಿಂದೆ ನಮ್ಮ ಸಮಾಜವಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾಮೀಜಿಗಳು, ನಮ್ಮ ಧರಣಿಗೆ ಅನುಮತಿ ನೀಡೋದಾಗಿ ಪೊಲೀಸ್ ಕಮಿಷನರ್ ಕಮಲ್ ಪಂಥ್ ಅವರೇ ಹೇಳಿದ್ದರು. ಮೌರ್ಯ ಸರ್ಕಲ್ ಮತ್ತು ವಿಧಾನಸೌಧದ ಮುಂಭಾಗ ಪ್ರತಿಭಟನೆ ಸಾರ್ವಜನಿಕರಿಗೆ ತೊಂದರೆ ಆಗಲಿದೆ ಎಂದು ಕಮಲ್ ಪಂಥ್ ಹೇಳಿದರು. ಅವರ ಮನವಿ ಹಿನ್ನೆಲೆ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಏನು ಬೇಕಾದ್ರೂ ಆಗಬಹುದು ಅನ್ನೋದಕ್ಕಿಂತ ಏನು ಆಗದೇ ಹಾಗೆ ನೋಡಿಕೊಳ್ಳಲಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಬಸನಗೌಡ ಪಾಟೀಲ್ ಯತ್ನಾಳ್ ನೇರವಾಗಿ ಮಾತನಾಡುವ ವ್ಯಕ್ತಿ. ಈ ಹಿಂದೆಯೂ ಅನೇಕ ಬಾರಿ ಪಕ್ಷದ ಮುಖಂಡರ ಬಗ್ಗೆ ಮಾತನಾಡಿದ್ದಾರೆ. ಅಂದು ನೀಡದ ನೋಟಿಸ್ ನೀಡದ ಬಿಜೆಪಿ ಹೈಕಮಾಂಡ್ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾದಾಗ ನೀಡಿದ್ದು ಯಾಕೆ? ಈ ಸಂದರ್ಭದಲ್ಲಿ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದರಿಂದ ಸಮಾಜದಲ್ಲಿ ಬೇರೆ ಸಂದೇಶ ರವಾನೆ ಆಗ್ತಿದೆ. ನೋಟಿಸ್ ನೀಡುವ ಮೂಲಕ ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಒತ್ತಡ ಹಾಕಲಾಯ್ತು ಎಂದು ಸ್ವಾಮೀಜಿಗಳು ಆರೋಪಿಸಿದರು.

    ಯತ್ನಾಳ್ ವಿರುದ್ಧ ಕಾಣದ ಕೈಗಳು ಕೆಲಸ ಮಾಡುತ್ತಿದ್ದು, ಹೋರಾಟದ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ತಪ್ಪು ಸಂದೇಶ ಕಳುಹಿಸದಂತೆ ಕಾಣಿಸುತ್ತಿದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷರು ಮುಂದೆ ಬಂದು ತಪ್ಪು ಸಂದೇಶ ರವಾನೆ ಆಗೋದನ್ನ ತಡೆಯಬೇಕಿದೆ. ಮೀಸಲಾತಿ ಪರವಾಗಿ ಹೋರಾಟ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ್ರೆ ಸುಮ್ಮಿನರಲ್ಲ ಎಂದು ಎಚ್ಚರಿಸಿದರು.

  • 2ಎ ಮೀಸಲಾತಿಗಾಗಿ ಪಂಚಮಸಾಲಿಗರ ಹೋರಾಟ – ವೀಕೆಂಡ್ ಮಸ್ತಿ ಅಂತ ರೋಡಿಗೆ ಇಳಿಯೋ ಮುನ್ನ ಎಚ್ಚರ

    2ಎ ಮೀಸಲಾತಿಗಾಗಿ ಪಂಚಮಸಾಲಿಗರ ಹೋರಾಟ – ವೀಕೆಂಡ್ ಮಸ್ತಿ ಅಂತ ರೋಡಿಗೆ ಇಳಿಯೋ ಮುನ್ನ ಎಚ್ಚರ

    – ರಾಜಧಾನಿಯಲ್ಲಿ ಟ್ರಾಫಿಕ್ ಜಾಮ್ ಫಿಕ್ಸ್
    – ಬೆಂಗಳೂರಿನ 8 ಕಡೆ ಮಾರ್ಗ ಬದಲಾವಣೆ

    ಬೆಂಗಳೂರು: 2ಎ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತರ ಹೋರಾಟ ನೆಡಯಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬೃಹತ್ ಸಮಾವೇಶ ನಡೆಯಲಿದೆ. ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ನಡೆಯಲಿದೆ.

    ಇಂದು ಬೆಳಗ್ಗೆ 11ಕ್ಕೆ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಈ ಸಮಾವೇಶಕ್ಕೆ 10ಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ಅದಕ್ಕಾಗಿ ಈಗಾಗಲೇ ಜಿಲ್ಲೆಗಳಿಂದ ಜನ ಆಗಮಿಸಿದ್ದಾರೆ.

    38 ದಿನಗಳ ಪಾದಯಾತ್ರೆ ಮುಗಿಸಿ, ಇಂದು ಪಾಂಚಜನ್ಯ ಹೊರಡಿಸಲಿದ್ದಾರೆ. ಈ ವೇಳೆ ಪಂಚಮಸಾಲಿ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಪ್ರಮುಖರು ಭಾಗಿಯಾಗಲಿದ್ದಾರೆ. ಮೂರೂ ಪಕ್ಷಗಳ ಪಂಚಮಸಾಲಿ ನಾಯಕರಿಗೂ ಆಹ್ವಾನ ನೀಡಲಾಗಿದೆ. ಸಮಾವೇಶದ ಬಳಿಕ ಹೋರಾಟ ಮುಂದುವರಿಸಲು ಸ್ವಾಮೀಜಿಗಳು ನಿರ್ಧಾರ ಮಾಡಿದ್ದು, ವಿಧಾನಸೌಧಕ್ಕೆ ಸ್ವಾಮೀಜಿಗಳ ನೇತೃತ್ವದಲ್ಲಿ ರ್ಯಾಲಿ ನಡೆಯಲಿದೆ. ಆದರೆ ವಿಧಾನಸೌಧದ ಕಡೆಗೆ ಪಂಚಮಸಾಲಿ ರ್ಯಾಲಿಗೆ ಅನುಮತಿ ಸಿಕ್ಕಿಲ್ಲ.

    ವೀಕೆಂಡ್ ಮಸ್ತಿ ಅನ್ನೋ ಬೆಂಗಳೂರಿಗರೆ ಎಚ್ಚರವಾಗಿರಿ. ಪಂಚಮಸಾಲಿ ಮೀಸಲಾತಿ ಹೋರಾಟದ ಕಹಳೆಯಿಂದಾಗಿ ಇಂದು ಬೆಂಗಳೂರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ. ಬಳ್ಳಾರಿ, ತುಮಕೂರು ರೋಡ್ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಎದುರಾಗಲಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು 8 ಪ್ರಮುಖ ರಸ್ತೆಗಳ ಬದಲಾವಣೆ ಮಾಡಿದ್ದಾರೆ. ಬೈಕ್, ಕಾರುಗಳಿಗೆ ತ್ರಿಪುರ ವಾಸಿನಿ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿಐಪಿ ವಾಹನಗಳಿಗೆ ರಮಣಶ್ರೀ ರೋಡ್, ಕೃಷ್ಣ ವಿಹಾರ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

    8 ಮಾರ್ಗಗಳ ಬದಲಾವಣೆ
    1) ಮೈಸೂರ್ ರೋಡ್: ನಾಯಂಡಹಳ್ಳಿ – ಸುಮನಹಳ್ಳಿ, ರಾಜ್ ಕುಮಾರ್ ಸಮಾಧಿ ರೋಡ್,ತುಮಕೂರ್ ರೋಡ್ – ಗೊರಗುಂಟೆಪಾಳ್ಯ ಜಂಕ್ಷನ್-ಬಿಇಎಲ್ – ಹೆಬ್ಬಾಳ ಮೇಲ್ಸೇತುವೆ- ಮೇಕ್ರಿ ಸರ್ಕಲ್ – ಜಯಮಹಲ್ ರೋಡ್ – ಅರಮನೆ ಮೈದಾನ

    2) ತುಮಕೂರು ರೋಡ್: ಗೊರಗುಂಟೆ ಪಾಳ್ಯ ಜಂಕ್ಷನ್ – ಬಿಇಎಲ್ – ಹೆಬ್ಬಾಳ – ಮೇಕ್ರಿ ಸರ್ಕಲ್ ಸರ್ವಿಸ್ ರೋಡ್- ಅರಮನೆ ಮೈದಾನ

    3) ಕನಕಪುರ ರೋಡ್: ಬನಶಂಕರಿ ದೇವಸ್ಥಾನ ಬಸ್ ನಿಲ್ದಾಣ – ರಾಜಲಕ್ಷ್ಮಿ ಜಂಕ್ಷನ್ ಜಯನಗರ 4 ಮೈನ್ – ಸೌಥ್ ಅಂಡ್ ಸರ್ಕಲ್ – ಆರ್ ವಿ ಜಂಕ್ಷನ್ – ಲಾಲ್ ಬಾಗ್ ವೆಸ್ಟ್ ಗೇಟ್ – ಮಿನರ್ವ ಸರ್ಕಲ್ – ಜೆ ಸಿ ರೋಡ್ – ಟೌನ್ ಹಾಲ್ – ಕೆಜಿ ರೋಡ್ – ಮೈಸೂರ್ ಬ್ಯಾಂಕ್ ಸರ್ಕಲ್ – ಪ್ಯಾಲೇಸ್ ರೋಡ್ -ಬಸವೇಶ್ವರ ಸರ್ಕಲ್ – ವಸಂತನಗರ ರೋಡ್ – ಕಂಟೋನ್ಮೆಂಟ್ ಅಂಡರ್ ಪಾಸ್ – ಜಯಮಹಲ್ ರೋಡ್ – ಅರಮನೆ ಮೈದಾನ

    4) ಬನ್ನೇರುಘಟ್ಟ ರೋಡ್: ಡೈರಿ ಸರ್ಕಲ್ – ಲಾಲ್ ಬಾಗ್ ಮೈನ್ ಗೇಟ್ – ಮಿನರ್ವ ಸರ್ಕಲ್ – ಜೆ ಸಿ ರೋಡ್ – ಟೌನ್ ಹಾಲ್ – ಕೆಜಿ ರೋಡ್ – ಮೈಸೂರ್ ಬ್ಯಾಂಕ್ ಸರ್ಕಲ್ – ಪ್ಯಾಲೇಸ್ ರೋಡ್ -ಬಸವೇಶ್ವರ ಸರ್ಕಲ್ – ವಸಂತನಗರ ರೋಡ್ – ಕಂಟೋನ್ಮೆಂಟ್ ಅಂಡರ್ ಪಾಸ್ – ಜಯಮಹಲ್ ರೋಡ್ – ಅರಮನೆ ಮೈದಾನ

    5) ಹಳೇ ಮದ್ರಾಸ್ ರೋಡ್: ಕೆಆರ್ ಪುರಂ ಮೇಲ್ಸೇತುವೆ- ಹೆಣ್ಣೂರು ಕ್ರಾಸ್ – ನಾಗವಾರ- ಹೆಬ್ಬಾಳ ಫ್ಲೈ ಓವರ್ – ಬಳ್ಳಾರಿ ರೋಡ್ – ಮೇಕ್ರಿ ಸರ್ಕಲ್ ಸರ್ವಿಸ್ ರೋಡ್ – ಅರಮನೆ ಮೈದಾನ

    6) ಹೊಸೂರು ರೋಡ್ : ಹೊಸೂರು ರೋಡ್ – ಮಡಿವಾಳ ಚೆಕ್ ಪೋಸ್ಟ್- ಹಳೇ ಮದ್ರಾಸ್- ಡೈರಿ ಸರ್ಕಲ್ ರೋಡ್ – ಲಾಲ್ ಬಾಗ್ ಮೈನ್ ಗೇಟ್ – ಮಿನರ್ವ ಸರ್ಕಲ್ – ಜೆ ಸಿ ರೋಡ್ – ಟೌನ್ ಹಾಲ್ – ಕೆಜಿ ರೋಡ್ – ಮೈಸೂರ್ ಬ್ಯಾಂಕ್ ಸರ್ಕಲ್ – ಪ್ಯಾಲೇಸ್ ರೋಡ್ -ಬಸವೇಶ್ವರ ಸರ್ಕಲ್ – ವಸಂತನಗರ ರೋಡ್ – ಕಂಟೋನ್ಮೆಂಟ್ ಅಂಡರ್ ಪಾಸ್ – ಜಯಮಹಲ್ ರೋಡ್ – ಅರಮನೆ ಮೈದಾನ

    7) ಬಳ್ಳಾರಿ ರೋಡ್: ದೇವನಹಳ್ಳಿ ಮಾರ್ಗ – ಚಿಕ್ಕಜಾಲ – ಹುಣಿಸೇಮಾರನಹಳ್ಳಿ -ಕೋಗಿಲು ಜಂಕ್ಷನ್ – ಕೊಡಿಗೇಹಳ್ಳಿ ಗೇಟ್ – ಹೆಬ್ಬಾಳ ಮೇಲ್ಸೇತುವೆ – ಮೇಕ್ರಿ ಸರ್ಕಲ್ – ಅರಮನೆ ಮೈದಾನ

    8) ದೊಡ್ಡಬಳ್ಳಾಪುರ: ಮೇಜರ್ ಉನ್ನಿಕೃಷ್ಣನ್ ರೋಡ್ – ಯಲಹಂಕ ಪೊಲೀಸ್ ಸ್ಟೇಷನ್ ಜಂಕ್ಷನ್ – ಬೈಪಾಸ್ – ಬಳ್ಳಾರಿ ರೋಡ್ – ಹೆಬ್ಬಾಳ ಮೇಲ್ಸೇತುವೆ – ಮೇಕ್ರಿ ಸರ್ಕಲ್ – ಅರಮನೆ ಮೈದಾನ.