Tag: ಪಂಜಾಬ್ ಪ್ರಾಂತ್ಯ

  • ಪಾಕಿಸ್ತಾನದಲ್ಲಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಷರೀಫ್‌ ಪುತ್ರಿ ಆಯ್ಕೆ

    ಪಾಕಿಸ್ತಾನದಲ್ಲಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಷರೀಫ್‌ ಪುತ್ರಿ ಆಯ್ಕೆ

    ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ (Nawaz Sharif) ಅವರ ಪುತ್ರಿಯೂ ಆಗಿರುವ ಪಿಎಂಎಲ್-ಎನ್ ನಾಯಕಿ ಮರ್ಯಮ್‌ ನವಾಜ್‌ (Maryam Nawaz) ಪಾಕಿಸ್ತಾನ ಪಂಜಾಬ್‌ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

    12 ಕೋಟಿ ಜನ ನೆಲೆಸಿರುವ ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ ಇತ್ತೆಹಾದ್‌ ಕೌನ್ಸಿಲ್‌ (SIC)ನ ನಾಯಕ ರಾಣಾ ಅಫ್ತಾಬ್‌ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮರ್ಯಮ್‌ (50) ಜಯಗಳಿಸಿದ್ದಾರೆ.

    ಪಂಜಾಬ್‌ ಅಸೆಂಬ್ಲಿ ಚುನಾವಣೆಗೆ ಹೋಗುವ ಮುನ್ನ ಮರ್ಯಮ್‌ ತನ್ನ ಜತಿ ಉಮ್ರಾದಲ್ಲಿರುವ ತನ್ನ ತಾಯಿಯ ಸಮಾಧಿಗೆ ಭೇಟಿ ನೀಡಿದ್ದರು. ಈ ಸಂದೇಶವನ್ನು ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಇಬ್ಬರ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ

    ಮರ್ಯಮ್‌ ನವಾಜ್‌ ಯಾರು?
    50 ವರ್ಷ ವಯಸ್ಸಿನ ಮರ್ಯಮ್‌ ಪಾಕಿಸ್ತಾನದಲ್ಲಿ 3 ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಪುತ್ರಿ. 1992ರಲ್ಲಿ, ಅವರು ಸಫರ್ ಅವನ್ ಎಂಬವರೊಂದಿಗೆ ವಿವಾಹವಾದರು, ದಂಪತಿಗೆ ಈಗ ಮೂವರು ಮಕ್ಕಳಿದ್ದಾರೆ. ಸಫರ್ ಆ ಸಮಯದಲ್ಲಿ ಪಾಕಿಸ್ತಾನದ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಬಳಿಕ ನವಾಜ್ ಷರೀಫ್‌ ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರದಲ್ಲಿದ್ದಾಗ ಭದ್ರತಾ ಅಧಿಕಾರಿಯಾಗಿದ್ದರು. ಆರಂಭದಿಂದಲೇ ತನ್ನನ್ನು ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮರ್ಯಮ್‌ 2012ರಲ್ಲಿ ಅವರು ರಾಜಕೀಯಕ್ಕೆ ಪ್ರವೇಶಿಸಿದ್ದರು.

    2013ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು. 2024ರ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಅವರು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಮತ್ತು ಪಂಜಾಬ್‌ನ ಪ್ರಾಂತೀಯ ಅಸೆಂಬ್ಲಿಗೆ ಮೊದಲ ಬಾರಿಗೆ ಚುನಾಯಿತರಾಗಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಸುರಕ್ಷಿತವಾಗಿದೆ, ನಾನು ಸ್ವತಂತ್ರಳಾಗಿದ್ದೇನೆ – ಬ್ರಿಟನ್ ಸಂಸತ್‌ನಲ್ಲಿ ಕಾಶ್ಮೀರದ ಪತ್ರಕರ್ತೆ ಶ್ಲಾಘನೆ

  • ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

    ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

    ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ಹಮ್ಜಾ ಶಹಬಾಜ್ ಅವರ ಆಯ್ಕೆಯನ್ನು ಖಂಡಿಸಿ ಪ್ರತಿಭಟನೆ ಭುಗಿಲೆದ್ದಿದೆ. ಈ ಬೆನ್ನಲ್ಲೇ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಹ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಪರ್ವೇಜ್ ಇಲಾಹಿ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ನಾಯಕ ಹಮ್ಜಾ ಶಹಬಾಜ್ ಅವರು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಮುಸ್ಲಿಂ ಲೀಗ್-ಕ್ವಾಡ್ (PML-Q) ಮತಗಳನ್ನು ಪಂಜಾಬ್ ವಿಧಾನಸಭೆ ಉಪ ಸಭಾಪತಿ ತಿರಸ್ಕರಿಸಿದ ಬಳಿಕ ಅವರು ಜಯ ಸಾಧಿಸಿದ್ದಾರೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿರುವ ಮನೆಗೆ ಹೋಗಿ 90ರ ಅಜ್ಜಿ ಭಾವುಕ

    ಪಿಟಿಐ ಮತ್ತು ಪಿಎಂಎಲ್-ಕ್ಯೂ ಜಂಟಿ ಅಭ್ಯರ್ಥಿ ಪರ್ವೈಜ್ ಇಲಾಹಿ 186 ಮತಗಳನ್ನು ಪಡೆದರೆ, ಹಮ್ಜಾ ಶಹಬಾಜ್ 179 ಮತಗಳನ್ನು ಪಡೆದಿದ್ದರು. ಆದರೆ ಪಿಎಂಎಲ್-ಕ್ಯೂನ 10 ಮತಗಳನ್ನು ಡೆಪ್ಯುಟಿ ಸ್ಪೀಕರ್ ದೋಸ್ತ್ ಮುಹಮ್ಮದ್ ಮಜಾರಿ ಅವರು ತಿರಸ್ಕರಿಸಿದ್ದರಿಂದಾಗಿ ಪರ್ವೈಜ್ ಇಲಾಹಿ ಅವರು 176 ಮತಗಳನ್ನು ತೆಗೆದುಕೊಂಡರು. ಇದರಿಂದಾಗಿ ಇಲಾಹಿಗೆ ಸೋಲುಂಟಾಯಿತು.

    ಸಾಂರ್ಭಿಕ ಚಿತ್ರ

    ಸಿಎಂ ಆಗಿ ಮರು ಆಯ್ಕೆಯಾದ ಬಳಿಕ ಮಾತನಾಡಿದ ಹಮ್ಜಾ ಶಹಬಾಜ್, `ಕೆಲವರು ಆಯ್ಕೆ ವಿರುದ್ಧ ಈಗ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಆದರೆ ಸಂಸತ್ತಿಗೆ ನೈತಿಕತೆಯ ಅಧಿಕಾರವಿದೆ. ಪ್ರಜಾಪ್ರಭುತ್ವವು ನೈತಿಕತೆಯ ಮೇಲೆ ಆಧಾರಿತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ ಏಲಿಯನ್‍ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ

    ಸಿಎಂ ಆಯ್ಕೆ ಕುರಿತು ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪಂಜಾಬ್ ಮುಖ್ಯಮಂತ್ರಿ ಚುನಾವಣೆಯ ಬೆಳವಣಿಗೆಯನ್ನು ಕುದುರೆ ವ್ಯಾಪಾರಕ್ಕೆ ಹೋಲಿಸಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ನಾಯಕ ಆಸಿಫ್ ಜರ್ದಾರಿ ವಿರುದ್ಧ ಕಿಡಿಕಾರಿದ್ದಾರೆ. ದೇಶದ ದೊಡ್ಡ ಡಕಾಯಿತ ಆಸಿಫ್ ಜರ್ದಾರಿ 30 ವರ್ಷಗಳಿಂದ ದೇಶವನ್ನು ದರೋಡೆ ಮಾಡುತ್ತಿದ್ದಾನೆ ದೂರಿದ್ದಾರೆ.

    ಬೇರೆ ಯಾವುದೇ ಸಮಾಜದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹಾಗಾಗಿ ಇಂದು ರಾತ್ರಿ ಪಂಜಾಬ್ ಅಸೆಂಬ್ಲಿ ಬೆಳವಣಿಗೆಗಳ ವಿರುದ್ಧ ಶಾಂತಿಯುತ ಪ್ರತಿಭಟನೆ ದಾಖಲಿಸಲು ನಾನು ರಾಷ್ಟ್ರಕ್ಕೆ ಮನವಿ ಮಾಡುತ್ತೇನೆ ಎಂದು ಕರೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]