Tag: ಪಂಜಾಬ್ ಸರ್ಕಾರ

  • ಸಾಲದ ಸುಳಿಗೆ ಸಿಲುಕಲಿವೆ – ಉಚಿತ ವಿದ್ಯುತ್‌ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

    ಸಾಲದ ಸುಳಿಗೆ ಸಿಲುಕಲಿವೆ – ಉಚಿತ ವಿದ್ಯುತ್‌ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

    ನವದೆಹಲಿ: ಸಾಲ ಮಾಡಿ ಜನರಿಗೆ ಉಚಿತ ವಿದ್ಯುತ್‌ (Free Electricity) ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಕೇಂದ್ರ ಇಂಧನ ಸಚಿವ ಆ‌ರ್.ಕೆ. ಸಿಂಗ್ (RK Singh), ಪಂಜಾಬ್‌ನಂತಹ ರಾಜ್ಯಗಳು ಸಾಲದ ಹಣದಲ್ಲಿ ವಿದ್ಯುತ್ ಖರೀದಿಸಿ ಜನರಿಗೆ ಉಚಿತವಾಗಿ ನೀಡುತ್ತಿವೆ. ರಾಜ್ಯ ಸರ್ಕಾರದ ಬಳಿಯೇ ಸಾಕಷ್ಟು ಹಣವಿದ್ದರೆ ಇಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸುವುದು ಸರಿ. ಆದರೆ, ಸಾಲ ಮಾಡಿ ವಿದ್ಯುತ್ ನೀಡಿದರೆ ಅದಕ್ಕೆ ಸರ್ಕಾರಗಳು ಬೆಲೆ ತೆರಬೇಕಾಗುತ್ತದೆ. ಏಕೆಂದರೆ ವಿದ್ಯುತ್ ತಯಾರಿಸಲು ಖರ್ಚು ತಗಲುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

    ಬೇರೆಲ್ಲಾ ಉತ್ಪನ್ನಗಳಂತೆ ವಿದ್ಯುತ್ ತಯಾರಿಸಲು ಕೂಡ ಹಣ ಬೇಕು. 2022 ರಲ್ಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (AAP) ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು ಜನಪರ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಪಂಜಾಬ್‌ನ ಎಎಪಿ ಸರ್ಕಾರದ (Punjab Government) ಈಗಾಗಲೇ 2 ವರ್ಷಗಳಲ್ಲಿ 47,000 ಕೋಟಿ ರೂಪಾಯಿಗಳಷ್ಟು ಸಾಲ ಪಡೆದುಕೊಂಡಿದೆ. ಜನರಿಗೆ ಯಾವುದೇ ರಾಜ್ಯ ಸರ್ಕಾರ ವಿದ್ಯುತ್ತನ್ನು ಉಚಿತವಾಗಿ ನೀಡುತ್ತದೆಯಾದರೆ ಅಷ್ಟು ಹಣ ರಾಜ್ಯ ಸರ್ಕಾರದ ಬಳಿಯೇ ಇರಬೇಕು. ಸಾಲ ಮಾಡಿ ಹಣ ತಂದು ಜನರಿಗೆ ಉಚಿತ ವಿದ್ಯುತ್‌ ನೀಡಿದರೆ ಖಂಡಿತ ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರಕ್ಕೂ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

    ವಿದ್ಯುತ್ ಉಚಿತವಾಗಿ ಸಿಗೋದಿಲ್ಲ ಎಂದು ನಾನು ರಾಜ್ಯಗಳಿಗೆ ಹೇಳುತ್ತಲೇ ಬಂದಿದ್ದೇನೆ. ಆದರೂ ಅವು ವಿದ್ಯುತ್ತನ್ನು ಉಚಿತವಾಗಿ ನೀಡುತ್ತವೆಯಾದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ಸಾಲದಲ್ಲಿರುವ ರಾಜ್ಯಗಳು ಉಚಿತ ವಿದ್ಯುತ್‌ನಂತಹ ಜನಪ್ರಿಯ ಯೋಜನೆಗಳಿಗಾಗಿ ಇನ್ನಷ್ಟು ಸಾಲ ಮಾಡುತ್ತಿವೆ. ಹೀಗೆ ಸಾಲದ ಸುಳಿಗೆ ರಾಜ್ಯವನ್ನು ಸಿಲುಕಿಸಬಾರದು. ಉಚಿತಗಳಿಂದಾಗಿಯೇ ಅನೇಕ ರಾಜ್ಯ ಸರ್ಕಾರಗಳು ಸಾಲದ ಸುಳಿಯಲ್ಲಿ ಸಿಲುಕುತ್ತಿವೆ ಎಂದೂ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಸುಲಭವಾಗಿ ಮಾಡಿ ಮಾವಿನಕಾಯಿ ಚಿತ್ರಾನ್ನ

  • ಕುಡಿದ ಮತ್ತಿನಲ್ಲಿ ಪಂಜಾಬ್ ಸಿಎಂ ತೂರಾಟ – ವಿಮಾನದಿಂದ ಕೆಳಗಿಳಿಸಿದ Lufthansa?

    ಕುಡಿದ ಮತ್ತಿನಲ್ಲಿ ಪಂಜಾಬ್ ಸಿಎಂ ತೂರಾಟ – ವಿಮಾನದಿಂದ ಕೆಳಗಿಳಿಸಿದ Lufthansa?

    ಚಂಡೀಗಢ: ಕುಡಿದ (Drunk) ಮತ್ತಿನಲ್ಲಿದ್ದ ಪಂಜಾಬ್ ಸಿಎಂ ಭಗವಂತ್ ಮಾನ್ (Bhagwant Mann) ಅವರನ್ನ ಜರ್ಮನಿಯ ಲುಫ್ಥಾನ್ಸಾ ವಿಮಾನದಿಂದ (Lufthansa Flight) ಕೆಳಗಿಳಿಸಲಾಗಿತ್ತು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಫ್ರಾಂಕ್‌ಫರ್ಟ್‌ನಿಂದ (Frankfurt) ದೆಹಲಿಗೆ (New Delhi) ಬರುತ್ತಿದ್ದ ವಿಮಾನ 4 ಗಂಟೆ 40 ನಿಮಿಷ ತಡವಾಗಲು ಭಗವಂತ್ ಮಾನ್ ಕಾರಣ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ನಡೆದಿದ್ದು ಏನು?
    ಪಂಜಾಬ್‌ಗೆ (Panjab) ಹಲವು ಹೂಡಿಕೆ ಆಕರ್ಷಿಸಲು ಮಾನ್ ಸೆಪ್ಟೆಂಬರ್ 11 ರಿಂದ 18ರ ವರೆಗೆ ಜರ್ಮನಿ ಪ್ರವಾಸ ಕೈಗೊಂಡಿದ್ದರು. ಅವರಿಂದು ಹಿಂದಿರುಗುವಾಗ ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದರು. ಈ ಕಾರಣ ಅವರನ್ನು ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಬರುತ್ತಿದ್ದ ಲುಫ್ಥಾನ್ಸ 760 ವಿಮಾನದಿಂದ ಕೆಳಗಿಳಿಸಲಾಯಿತು. ಜರ್ಮನಿಯಿಂದ (Germany) ಮಧ್ಯಾಹ್ನ 1.40ಕ್ಕೆ ಟೇಕ್ ಆಫ್ ಆದ ವಿಮಾನವು (Flight) ಸಂಜೆ 5.30ಕ್ಕೆ ದೆಹಲಿಗೆ ಬಂದಿಳಿಯಿತು. ಮಾನ್ ಅವರ ವರ್ತನೆಯಿಂದಾಗಿ 4 ಗಂಟೆಗಳ ಕಾಲ ವಿಮಾನ ತಡವಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸಿಎಂ ಕಚೇರಿಯು (Panjab CM Office), ಮಾನ್ ಅವರು ಪಾನಮತ್ತರಾಗಿರಲಿಲ್ಲ, ಅವರಿಗೆ ಆರೋಗ್ಯ ಸಮಸ್ಯೆಯಿದ್ದ ಕಾರಣ ವಿಮಾನ ಹತ್ತಲು ಸಾಧ್ಯವಾಗಲಿಲ್ಲವೇ ಹೊರತು ಲುಪ್ಥಾನ್ಸ ಅವರನ್ನು ಹೊರಹಾಕಿಲ್ಲ ಎಂದು ಸ್ಪಷ್ಟನೆ ನೀಡಿದೆ. ಆದರೆ ವಿರೋಧ ಪಕ್ಷಗಳು, ಭಗವಂತ್ ಮಾನ್ ಪಂಜಾಬಿಗಳು ನಾಚಿಕೆಪಡುವಂತೆ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿವೆ.

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತುಂಬಾ ಕುಡಿದಿದ್ದರಿಂದ ಅವರನ್ನು ಲುಫ್ಥಾನ್ಸ ವಿಮಾನದಿಂದ ಕೆಳಗಿಳಿಸಲಾಗಿದೆ ಎಂದು ಅವರ ಸಹ ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ.’

    ಇದರಿಂದ ವಿಮಾನ ನಾಲ್ಕು ಗಂಟೆ ವಿಳಂಬವಾಗಿದೆ. ಅಲ್ಲದೇ ಅವರು ಎಎಪಿಯ (AAP) ರಾಷ್ಟ್ರೀಯ ಸಮಾವೇಶಕ್ಕೂ ಗೈರಾಗಿದ್ದಾರೆ. ಈ ಬೆಳವಣಿಗೆಗಳು ಪಂಜಾಬ್ ಸರ್ಕಾರವನ್ನು ತೀವ್ರ ಮುಖಭಂಗಕ್ಕೀಡಾಗುವಂತೆ ಮಾಡಿವೆ. ಜೊತೆಗೆ ಜಗತ್ತಿನಾದ್ಯಂತ ಇರುವ ಪಂಜಾಬಿಗಳನ್ನು ನಾಚಿಕೆಪಡುವಂತಾಗಿದೆ. ಘಟನೆ ಬಗ್ಗೆ ಪಂಜಾಬ್ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಅಕಾಲಿ ದಳದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಟ್ವೀಟ್ ಮಾಡಿದ್ದಾರೆ. ಒತ್ತಾಯಿಸಿದ್ದಾರೆ.

    ಮಾನ್ ಅವರು ಅತಿಯಾಗಿ ಕುಡಿದಿದ್ದರು. ಅವರಿಗೆ ನಡೆಯಲೂ ಸಾಧ್ಯವಾಗುತ್ತಿರಲಿಲ್ಲ. ಅವರ ಪತ್ನಿ ಮತ್ತು ಭದ್ರತಾ ಸಿಬ್ಬಂದಿ ಅವರಿಗೆ ನೆರವಾಗುತ್ತಿದ್ದರು ಎಂಬ ಪ್ರಯಾಣಿಕರೊಬ್ಬರ ಹೇಳಿಕೆಯ ವರದಿಯನ್ನು ಕಾಂಗ್ರೆಸ್ ಟ್ವೀಟ್‌ನಲ್ಲಿ ಹಂಚಿಕೊಂಡಿದೆ.

    ಈ ಕುರಿತು ಮಾತನಾಡಿರುವ ಎಎಪಿ ವಕ್ತಾರ ಮಲ್ವಿಂದರ್ ಸಿಂಗ್ ಕಾಂಗ್, ಮುಖ್ಯಮಂತ್ರಿ ಅವರು ನಿಗದಿಯಂತೇ ಸೆಪ್ಟೆಂಬರ್ 19ರಂದು ಹಿಂತಿರುಗಿದ್ದಾರೆ. ಈ ಎಲ್ಲಾ ಸಾಮಾಜಿಕ ಮಾಧ್ಯಮ (Social Media) ವರದಿಗಳು ಕೇವಲ ಅಪಪ್ರಚಾರವಷ್ಟೇ. ಮಾನ್ ಅವರು ತಮ್ಮ ವಿದೇಶ ಪ್ರವಾಸದ ಮೂಲಕ ಒಂದಷ್ಟು ಹೂಡಿಕೆ ತರುತ್ತಿರುವುದನ್ನು ಕಂಡು ವಿರೋಧ ಪಕ್ಷಗಳು ಕಂಗಾಲಾಗಿವೆ. ಅಗತ್ಯವಿದ್ದವರು ಲುಪ್ಥಾನ್ಸ ಏರ್‌ಲೈನ್ಸ್‌  ಬಳಿ ಪರಿಶೀಲಿಸಬಹುದು ಎಂದು ಸಮರ್ಥಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

    424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

    ಚಂಡೀಗಢ: ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ರಾಜ್ಯದಲ್ಲಿ 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದೆ.

    ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಧಾರ್ಮಿಕ ಮತ್ತು ರಾಜಕೀಯ ಮುಖಂಡರಿಗೆ ನೀಡಲಾಗಿದ್ದ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದಿದೆ. ಏಪ್ರಿಲ್‍ನಲ್ಲಿ ಮಾಜಿ ಸಚಿವರು, ಶಾಸಕರು ಸೇರಿದಂತೆ 184 ಜನರ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದಿತ್ತು. ಬಳಿಕ ಒಂದು ತಿಂಗಳ ಹಿಂದೆ 122 ಮಾಜಿ ಸಚಿವರು ಮತ್ತು ಶಾಸಕರ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದನ್ನೂ ಓದಿ: 1991ರ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೊಂದು ಅರ್ಜಿ

    ಇದೀಗ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪುತ್ರ ರಾನೀಂದರ್ ಸಿಂಗ್, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಪತ್ನಿ, ಮಾಜಿ ಸಚಿವರಾದ ಮನ್‍ಪ್ರೀತ್ ಸಿಂಗ್ ಬಾದಲ್, ರಾಜ್ ಕುಮಾರ್ ವರ್ಕಾ, ಭರತ್ ಭೂಷಣ್ ಆಶು, ಮಾಜಿ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸೇರಿದಂತೆ ಅವರ ಕುಟುಂಬಸ್ಥರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ. ಸದ್ಯ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಠಾಣೆಗಳಿಗೆ ಮರಳಿದ್ದಾರೆ ಎಂದು ಭಗವತ್ ಮಾನ್ ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಇಡಿ ಕೇಸ್‌ – ವಿಚಾರಣೆ ಮೇ 31ಕ್ಕೆ ಮುಂದೂಡಿಕೆ

  • ಜು.1ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ – ಪಂಜಾಬ್ ಸರ್ಕಾರ ಘೋಷಣೆ

    ಜು.1ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ – ಪಂಜಾಬ್ ಸರ್ಕಾರ ಘೋಷಣೆ

    ಚಂಡೀಗಢ: ಜುಲೈ 1 ರಿಂದ ಪ್ರತಿಯೊಂದು ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪಂಜಾಬ್‍ನ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಘೋಷಿಸಿದೆ.

    ಈ ಕುರಿತಂತೆ ಮಂಗಳವಾರ ಟ್ವೀಟ್ ಮಾಡಿದ್ದ ಭಗವಂತ್ ಮಾನ್ ಅವರು, ನಮ್ಮ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಪಂಜಾಬ್ ಜನತೆಗೆ ಒಳ್ಳೆಯ ಸುದ್ದಿ ನೀಡುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ – ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿತ

    ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಎಎಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಪ್ರತಿ ಮನೆಗೆ 300 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಒಂದಾಗಿತ್ತು. ಸದ್ಯ 300 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಸರಬರಾಜು ಘೋಷಿಸುವ ವೇಳೆ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ, ದೀರ್ಘ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗುತ್ತದೆ ಮತ್ತು ಅನೇಕ ಜನರು ದುಬಾರಿ ಬಿಲ್‍ಗಳನ್ನು ಪಡೆಯುತ್ತಾರೆ ಎಂದಿದ್ದಾರೆ.

    ಗ್ರಾಮೀಣ ಪ್ರದೇಶಗಳಲ್ಲಿ ತಪ್ಪಾದ ಬಿಲ್‍ಗಳನ್ನು ಪಡೆದ ಅನೇಕ ಜನರಿದ್ದಾರೆ ಮತ್ತು ವಿದ್ಯುತ್ ಬಿಲ್ ಪಾವತಿಸದೇ ಇರುವವರ ವಿದ್ಯುತ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ. ಅಂತಹ ಜನರು ವಿದ್ಯುತ್ ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ

    ಎಎಪಿ ಸರ್ಕಾರವು ದೆಹಲಿಯಲ್ಲಿ ಪ್ರತಿ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತದೆ. ಕಳೆದ ತಿಂಗಳು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಘೋಷಿಸಿದ್ದರು. ಇದೀಗ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ತಿಳಿಸಿದ್ದಾರೆ.

  • ಪಂಜಾಬ್ ಕ್ಯಾಬಿನೆಟ್ – 7 ಮಂದಿ ಕ್ರಿಮಿನಲ್ ಹಿನ್ನೆಲೆ, 8 ಮಂದಿ ಕೋಟ್ಯಧಿಪತಿ

    ಪಂಜಾಬ್ ಕ್ಯಾಬಿನೆಟ್ – 7 ಮಂದಿ ಕ್ರಿಮಿನಲ್ ಹಿನ್ನೆಲೆ, 8 ಮಂದಿ ಕೋಟ್ಯಧಿಪತಿ

    ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿ 11 ಸಚಿವರಿದ್ದಾರೆ. ಅವರಲ್ಲಿ 7 ಮಂದಿ ಕ್ರಿಮಿನಲ್ ಪ್ರಕರಣ ಉಳ್ಳವರಾಗಿದ್ದು, 7ರಲ್ಲಿ 4 ಮಂದಿ ಗಂಭೀರ ಆರೋಪ ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ.

    ಪಂಜಾಬ್ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಿಎಂ ಸೇರಿದಂತೆ ಎಲ್ಲ ಸಚಿವರ ಅಫಿಡಿವೇಟ್‌ಗಳನ್ನು ವಿಶ್ಲೇಷಿಸಿದೆ. 7 ಮಂದಿ ಸಚಿವರು (ಶೇ.64) ತಮ್ಮ ವಿರುದ್ಧ ಕ್ರಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ. ಅವರಲ್ಲಿ ನಾಲ್ಕು ಮಂದಿ ಗಂಭೀರ ಎದುರಿಸುವುದಾಗಿ ಹೇಳಿದ್ದಾರೆ. ಅಲ್ಲದೆ, 11 ಸಚಿವರಲ್ಲಿ 9 ಮಂದಿ ಕೋಟ್ಯಧಿಪತಿಗಳಾಗಿದ್ದಾರೆ. ಬ್ರಾಮ್ ಶಂಕರ್ (ಜಿಂಪಾ) ಅವರು 8.56 ಕೋಟಿ, ಭೋವಾ (ಎಸ್‌ಸಿ) ಕ್ಷೇತ್ರದ ಲಾಲ್‌ಚಂದ್ ಅವರು 6.19 ಲಕ್ಷ, ಬ್ರಾಮ್ ಶಂಕರ್ 1.08 ಕೋಟಿ ಕನಿಷ್ಠ ಘೋಷಿತ ಆಸ್ತಿಯನ್ನು ಹೊಂದ್ದಾರೆ. ಇದನ್ನೂ ಓದಿ: ಯೋಗಿ ಪ್ರಮಾಣವಚನಕ್ಕೂ ಮುನ್ನವೇ ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ- ರೇಸ್‍ನಲ್ಲಿ ಯಾರಿದ್ದಾರೆ ನೋಡಿ

    ಶೈಕ್ಷಣಿಕ ಅರ್ಹತೆ
    ಭಗವಂತ್‌ನ ಸಂಪುಟದಲ್ಲಿರುವ ಐವರು ಸಚಿವರು ತಮ್ಮ ಶೈಕ್ಷಣಿಕ ಅರ್ಹತೆಯನ್ನು 10 ಮತ್ತು 12ನೇ ತರಗತಿಯ ನಡುವೆ ಎಂದು ಘೋಷಿಸಿದ್ದಾರೆ. ಉಳಿದವರು ಪದವೀಧರರು ಅಥವಾ ಅದಕ್ಕಿಂತ ಹೆಚ್ಚಿನವರು. 6 ಸಚಿವರು ತಮ್ಮ ವಯಸ್ಸು 31 ರಿಂದ 50 ವರ್ಷ ಎಂದು ಘೋಷಿಸಿದ್ದಾರೆ, ಐವರು 51 ಮತ್ತು 60 ವರ್ಷ ವಯಸ್ಸಿನವರೆಂದು ಘೋಷಿಸಿಕೊಂಡಿದ್ದಾರೆ.

    ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹರ್ಪಾಲ್ ಸಿಂಗ್ ಚೀಮಾ, ಗುರ್ಮೀತ್ ಸಿಂಗ್ ಮೀತ್ ಹಯರ್, ಡಾ.ಬಲ್ಜಿತ್ ಕೌರ್, ಶಾಸಕ ಹರ್ಭಜನ್ ಸಿಂಗ್ ಇಟಿಒ, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕಟಾರು ಚಾಕ್, ಶಾಸಕ ಕುಲದೀಪ್ ಸಿಂಗ್ ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲಾರ್, ಬ್ರಾಮ್ ಶಂಕರ್ (ಜಿಂಪಾ), ಹೊಶಿಯಾರ್‌ಪುರ್ ಮತ್ತು ಹರ್ಜೋತ್ ಸಿಂಗ್ ಬೈನ್ಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮಹಿಳೆ ಸೇರಿದಂತೆ ನಾಲ್ವರು ಜಾಟ್, ನಾಲ್ವರು ಎಸ್ಸಿಗಳು ಮತ್ತು ಇಬ್ಬರು ಹಿಂದೂಗಳು ಕ್ಯಾಬಿನೆಟ್ ನಲ್ಲಿ ಒಳಗೊಂಡಿದ್ದಾರೆ. ಎಲ್ಲ ಶಾಸಕರಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದ್ದರು. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ

  • ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದಿದ್ರೆ ನೌಕರರಿಗೆ ಸಂಬಳ ನೀಡಲ್ಲ – ಪಂಜಾಬ್‌ ಸರ್ಕಾರ

    ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದಿದ್ರೆ ನೌಕರರಿಗೆ ಸಂಬಳ ನೀಡಲ್ಲ – ಪಂಜಾಬ್‌ ಸರ್ಕಾರ

    ಚಂಡೀಗಢ: ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದ ಸರ್ಕಾರಿ ನೌಕರರಿಗೆ ಸಂಬಳ ನೀಡುವುದಿಲ್ಲ ಎಂದು ಪಂಜಾಬ್‌ ಸರ್ಕಾರ ತಿಳಿಸಿದೆ.

    ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೆ ಅಥವಾ ಒಂದು ಡೋಸ್‌ ಮಾತ್ರ ಪಡೆದಿದ್ದರೆ ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ಸರ್ಕಾರದ ಲಸಿಕೀಕರಣ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಿಸಿರಬೇಕು. ಅಂತಹವರಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

    ಕೊರೊನಾ ವೈರಸ್‌ನ ರೂಪಾಂತರಿ ಓಮಿಕ್ರಾನ್‌ ಸೋಂಕು ವೇಗವಾಗಿ ಹರಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಪಂಜಾಬ್‌ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿದೆ.

    ಲಸಿಕೀಕರಣದ ಪ್ರಮಾಣ ಪತ್ರಗಳನ್ನು ಪಂಜಾಬ್‌ ಸರ್ಕಾರದ ಐಎಚ್‌ಆರ್‌ಎಂಎಸ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಆಗ ನೌಕರರಿಗೆ ಸಂಬಳ ಪಾವತಿ, ನಿವೃತ್ತಿ ಪ್ರಯೋಜನ ಪ್ರಕ್ರಿಯೆಗಳನ್ನು ಸುವ್ಯವಸ್ಥೆಗೊಳಿಸಲು ಸಾಫ್ಟ್‌ವೇರ್‌ ಸಹಾಯ ಮಾಡುತ್ತದೆ. ಇದನ್ನೂ ಓದಿ: 2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ

    ಭಾರತದಲ್ಲಿ ಈವರೆಗೆ 210 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಪೈಕಿ 90 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

  • ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಬಂಧನಕ್ಕೊಳಗಾಗಿರುವ ರೈತರಿಗೆ 2 ಲಕ್ಷ ಪರಿಹಾರ- ಪಂಜಾಬ್ ಸರ್ಕಾರ

    ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಬಂಧನಕ್ಕೊಳಗಾಗಿರುವ ರೈತರಿಗೆ 2 ಲಕ್ಷ ಪರಿಹಾರ- ಪಂಜಾಬ್ ಸರ್ಕಾರ

    ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿ ಬಂಧನಕ್ಕೊಳಗಾಗಿರುವ 83 ರೈತರಿಗೆ ಆರ್ಥಿಕ ನೆರವು ನೀಡಲು ತಲಾ 2 ಲಕ್ಷ ರೂ. ಪರಿಹಾರವನ್ನು ಪಂಜಾಬ್ ಸರ್ಕಾರ ಘೋಷಿಸಿದೆ.

    ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ, ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರ ಪರವಾಗಿ ನಮ್ಮ ಸರ್ಕಾರ ಇದೆ. ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಬಂಧನಕ್ಕೊಳಗಾಗಿರುವ ರೈತರಿಗೆ ತಲಾ ಎರಡು ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ತೆರಳಿದ ಅಪ್ಪು ಮಗಳು ಧೃತಿ

    ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗಗಳಲ್ಲಿ ಪಂಜಾಬ್, ಹರಿಯಾಣ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕ್ಷೇತ್ರವನ್ನು ಖಾಸಗಿಯವರ ಕೈಗಳಿಗೆ ನೀಡುವ ಹುನ್ನಾರ ಎಂದು ರೈತರು ಆರೋಪಿಸಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಅಲ್ಲೆಗಳೆದಿದ್ದು, ಕಾಯ್ದೆಗಳಿಗೆ ಅಗತ್ಯ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಿದೆ. ಆದರೆ ಅವುಗಳನ್ನು ಹಿಂಪಡೆಯುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್

    ರೈತರು ಜನವರಿ ವೇಳೆ ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದರು. ದೆಹಲಿಯ ಕೆಂಪು ಕೋಟೆಗೆ ಮುತ್ತಿಗೆ ಹಾಕುವ ರೈತರು ಯೋಜನೆ ರೂಪಿಸಿದ್ದರು. ಆಗ ಎಲ್ಲೆಡೆ ಬ್ಯಾರಿಕೇಡ್‍ಗಳನ್ನು ಹಾಕಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಅದನ್ನೂ ಲೆಕ್ಕಿಸದೇ ರೈತರು ಕೆಂಪು ಕೋಟೆ ಪ್ರವೇಶಿಸಿ ಧ್ವಜಾರೋಹಣ ಮಾಡಿದ್ದರು. ಈ ವೇಳೆ ಹಲವರನ್ನು ಬಂಧಿಸಲಾಗಿತ್ತು.

  • ರೈತರು ಕೃಷಿ ತ್ಯಾಜ್ಯ ಸುಡದಿದ್ದರೆ ಪ್ರತಿ ಎಕ್ರೆಗೆ 2,500 ರೂ. ನೀಡ್ತೇವೆ ಎಂದ ಸರ್ಕಾರ

    ರೈತರು ಕೃಷಿ ತ್ಯಾಜ್ಯ ಸುಡದಿದ್ದರೆ ಪ್ರತಿ ಎಕ್ರೆಗೆ 2,500 ರೂ. ನೀಡ್ತೇವೆ ಎಂದ ಸರ್ಕಾರ

    ಚಂಡೀಗಢ: ಭಾರೀ ಪ್ರಮಾಣದಲ್ಲಿ ರೈತರು ತಮ್ಮ ಜಮೀನಿನಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ಪರಿಣಾಮ ರಾಜ್ಯದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಪಂಜಾಬ್ ಸರ್ಕಾರ ಹೊಸ ಉಪಾಯ ಮಾಡಿದೆ. ಕೃಷಿ ತ್ಯಾಜ್ಯ ಸುಡದೇ ಇದ್ದರೆ ಆ ರೈತರ ಪ್ರತಿ ಎಕ್ರೆಗೆ 2,500 ರೂ. ಪರಿಹಾರ ಧನವನ್ನು ನೀಡಲು ಮುಂದಾಗಿದೆ.

    ಮಾಯುಮಾಲಿನ್ಯದ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಉಸಿರಾಡಲು ಜನ ತೊಂದರೆ ಪಡುತ್ತಿದ್ದಾರೆ. ಹೀಗಾಗಿ ಪಂಜಾಬ್ ಸರ್ಕಾರ ರೈತರಿಗೆ ಪರಿಹಾರ ಧನ ಘೋಷಿಸಿ ಕೃಷಿ ತ್ಯಾಜ್ಯ ಸುಡದಂತೆ ಮನವಿ ಮಾಡಿಕೊಂಡಿದೆ. ಕೃಷಿ ತ್ಯಾಜ್ಯವನ್ನು ಸುಡದೇ ಇದ್ದರೆ ಪ್ರತಿ ಎಕ್ರೆಗೆ 2,500 ರೂಪಾಯಿ ರೈತರಿಗೆ ನೀಡುವುದಾಗಿ ಹೇಳಿದೆ.

    ಈ ಬಗ್ಗೆ ಕೃಷಿ ಇಲಾಖೆಯ ಕಾರ್ಯದರ್ಶಿ ಕಹಾನ್ ಸಿಂಗ್ ಪನ್ನು ಮಾತನಾಡಿ, ಬಾಸ್‍ಮತಿ ಹಾಗೂ ಇತರೆ ಭತ್ತದ ಬೆಳೆಯನ್ನು ಬೆಳೆಯುವ ರೈತರು 5 ಎಕ್ರೆ ಜಮೀನು ಹೊಂದಿದ್ದರೆ. ಅಲ್ಲಿ ಅವರು ಕೃಷಿ ತ್ಯಾಜ್ಯ ಸುಡದಿದ್ದರೆ, ಅವರ ಪ್ರತಿ ಎಕ್ರೆಗೆ 2,500 ರೂ. ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಈ ಪರಿಹಾರ ಧನವನ್ನು ಪಡೆಯಲು ರೈತರು ನ. 30ರ ಒಳಗೆ ಸಂಬಂಧಪಟ್ಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೇಕಾದ ದಾಖಲೆಗಳನ್ನು ಒಪ್ಪಿಸಬೇಕಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಯೇ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ದಾಖಲೆಗಳನ್ನು ನೀಡಿದ ಬಳಿಕ ಪರಿಹಾರ ಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ ಎಂದು ಪನ್ನು ಅವರು ತಿಳಿಸಿದ್ದಾರೆ.

    ಅಷ್ಟೇ ಅಲ್ಲದೆ ಸರ್ಕಾರದ ಆದೇಶವನ್ನು ಮೀರಿ ರೈತರು ಕೃಷಿ ತ್ಯಾಜ್ಯವನ್ನು ಸುಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಿಲಾಗಿದೆ.