Tag: ಪಟಾಕಿ ಕಾರ್ಖಾನೆ ಸ್ಫೋಟ

  • Uttar Pradesh | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ದುರ್ಮರಣ, ಐವರಿಗೆ ಗಾಯ

    Uttar Pradesh | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ದುರ್ಮರಣ, ಐವರಿಗೆ ಗಾಯ

    ಲಕ್ನೋ: ಇಲ್ಲಿನ ಗುಡಂಬಾ (Gudamba) ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಸ್ಫೋಟ (Blast) ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

    ಗುಡಂಬಾದ ಬೆಹ್ತಾ (Behta) ಪ್ರದೇಶದಲ್ಲಿ ಭಾನುವಾರಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕರಂ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ವ್ಯಕ್ತಿ ಸಾವು

    ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ಕಮ್ಯುನಿಸ್ಟ್‌ ಪಕ್ಷದ ಪ್ರಬಲ ನಾಯಕ, ಜಿನ್‌ಪಿಂಗ್‌ ಆಪ್ತಮಿತ್ರನನ್ನ ಭೇಟಿಯಾದ ಮೋದಿ

    ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಗಣೇಶನ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮಸ್ಥರು

  • ಯುಪಿಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ – ಇಬ್ಬರು ಮಕ್ಕಳು ಸೇರಿ ಐವರು ಸಾವು, ಹಲವರಿಗೆ ಗಾಯ

    ಯುಪಿಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ – ಇಬ್ಬರು ಮಕ್ಕಳು ಸೇರಿ ಐವರು ಸಾವು, ಹಲವರಿಗೆ ಗಾಯ

    ಫಿರೋಜಾಬಾದ್: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಮಕ್ಕಳು, ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಫಿರೋಜಾಬಾದ್ (Firozabad) ಜಿಲ್ಲೆಯಲ್ಲಿ ನಡೆದಿದೆ.

    ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸೋಮವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ಮಾಗಡಿಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ

    ಮಾಹಿತಿ ಪ್ರಕಾರ ಚಂದ್ರಪಾಲ್ ಎಂಬವರ ಖಾಲಿ ಮನೆಯಲ್ಲಿ ಪಟಾಕಿ ವ್ಯಾಪಾರಿಯೊಬ್ಬರು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡುತ್ತಿದ್ದರು. ಅದರಲ್ಲಿ ಭಾರೀ ಪ್ರಮಾಣದ ಗನ್ ಪೌಡರು ಶೇಖರಿಸಲಾದ್ದು ಅದರಿಂದ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಮನೆ ಮೇಲ್ಛಾವಣಿ ಕುಸಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡೀಸೆಲ್ ಟ್ಯಾಂಕರ್, ಲಾರಿ ಡಿಕ್ಕಿ – ಇಬ್ಬರು ಟೋಲ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಗಾಯ

    ಮೃತರನ್ನು ಮೀರಾದೇವಿ(52), ಅಮನ್(20), ಗೌತಮ್ ಕುಶ್ವಾಹ(18), ಇಚ್ಛಾ ಕುಮಾರಿ(03) ಮತ್ತು ಅಭಿನೇಯ (1.5) ವರ್ಷ ಎಂದು ಗುರುತಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

    ಅಗ್ನಿಶಾಮಕ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ತಂಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಫಿರೋಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಮೇಶ್ ರಂಜನ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

  • ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ-5 ಸಾವು, 25 ಜನರಿಗೆ ತೀವ್ರ ಗಾಯ

    ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ-5 ಸಾವು, 25 ಜನರಿಗೆ ತೀವ್ರ ಗಾಯ

    ಪಾಟ್ನಾ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟಗೊಂಡು ಐದು ಜನ ಸಾವನ್ನಪ್ಪಿ, 25 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ಬಿಹಾರ ರಾಜ್ಯದ ನಳಂದ ಜಿಲ್ಲೆಯ ಜಲಾಲ್ಪುರ ಭಾಗದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

    ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಅಕ್ಕ-ಪಕ್ಕದ ಸುಮಾರು ಐದು ಮನೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 17 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

    ಘಟನೆ ನಡೆದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಂಟು ಸದಸ್ಯರನ್ನೊಳಗೊಂಡ ಭಯೋತ್ಪಾದನ ವಿರೋಧಿ ತಂಡ(ಎಟಿಎಸ್) ಭೇಟಿ ನೀಡಿ ಸ್ಫೋಟದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

    ನಳಂದ ಜಿಲ್ಲಾಧಿಕಾರಿ ಮತ್ತು ಎಸ್.ಪಿ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ. ಶೀಘ್ರವೇ ಘಟನೆಗೆ ಕಾರಣರಾದ ಆರೋಪಿಗಳನ್ನು ಬಂಧಿಸಲಾಗುವುದು ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.