Tag: ಪಟಾಕಿ ಗೋಡೌನ್

  • ಮಂಗಳೂರಿನ ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್‌ ಸ್ಫೋಟಕ್ಕೆ ಕಾರಣ ಏನು? – ತನಿಖೆಯಲ್ಲಿ ರಹಸ್ಯ ಬಯಲು

    ಮಂಗಳೂರಿನ ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್‌ ಸ್ಫೋಟಕ್ಕೆ ಕಾರಣ ಏನು? – ತನಿಖೆಯಲ್ಲಿ ರಹಸ್ಯ ಬಯಲು

    ಮಂಗಳೂರು: ವೇಣೂರಿನ ಕುಕ್ಕೇಡಿ ಪಟಾಕಿ ಘಟಕ (Firecracker Godown) ಸ್ಪೋಟದಿಂದ ಮೂವರ ಸಾವು ಪ್ರಕರಣದಲ್ಲಿ ಸತ್ಯಾಂಶ ಬಯಲಾಗಿದೆ. ಪಟಾಕಿ ಘಟಕ ಸ್ಫೋಟಕ್ಕೆ ನಿಯಮ ಮೀರಿ 100 Kg ಗನ್ ಪೌಡರ್ ದಾಸ್ತಾನು ಇರಿಸಿದ್ದೇ ಕಾರಣ ಎಂಬ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

    ಈ ಪಟಾಕಿ‌ ತಯಾರಿಕಾ ಘಟಕಕ್ಕೆ 15 ಕೆಜಿ ಸ್ಫೋಟಕ (Explosives) ಸಂಗ್ರಹಿಸಿಟ್ಟುಕೊಳ್ಳಲು ಮಾತ್ರ ಅನುಮತಿ ನೀಡಲಾಗಿತ್ತು. ಆದ್ರೆ ಅಂಗಡಿ ಆರೋಪಿ ಬಶೀರ್‌, 100 ಕೆ.ಜಿ ಸ್ಟಾಕ್ ಇಟ್ಟಿದ್ದ. ಪಟಾಕಿ ತಯಾರಿಕೆಗಾಗಿ ಪೊಟ್ಯಾಶಿಯಂ ಕ್ಲೋರೈಡ್‌, ಪೊಟ್ಯಾಶಿಯಂ ನೈಟ್ರೇಟ್ ಬಳಕೆ ಮಾಡುತ್ತಿದ್ದ. ಇದರಿಂದ ಪಟಾಕಿ ಲೋಡಿಂಗ್ ವೇಳೆ ಒತ್ತಡ ಉಂಟಾಗಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಡೀಸೆಂಟ್ ಜಂಟಲ್‍ ಮ್ಯಾನ್, ಕಾಂಗ್ರೆಸ್ಸಿಗರು ಉಳಿಸಿಕೊಳ್ಳಬೇಕಾಗಿತ್ತು: ಹರಿಪ್ರಸಾದ್

    ಅತಿಯಾಗಿ ಸ್ಫೋಟಕ ದಾಸ್ತಾನು ಇಟ್ಟಿದ್ದ ಕಾರಣಕ್ಕೆ ಇಂತಹ ಭೀಕರ ಸ್ಫೋಟ ಉಂಟಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸದ್ಯ ಚಾರ್ಕೋಲ್, ಗಂಧಕ, ಅಲ್ಯೂಮಿನಿಯಂ ಪೌಡರ್ ಸಹಿತ 85ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನ ಎಫ್ಎಸ್ಎಲ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಗೆ ಕಿರುಕುಳ; ಅನ್ಯಕೋಮಿನ ಯುವಕ ಅರೆಸ್ಟ್ – ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ

    ಫೈರ್ ಸೇಫ್ಟಿ ಬಳಕೆ ಮಾಡದೇ ನಿಯಮ ಉಲ್ಲಂಘಿಸಿ ಪಟಾಕಿ ತಯಾರಿಸುತ್ತಿದ್ದು, ಮೈಸೂರು ಭಾಗದ ಕಾರ್ಯಕ್ರಮದಲ್ಲಿ ಸಂಭ್ರಮಿಸಲು ಪಟಾಕಿ ತಯಾರಿಸುತ್ತಿದ್ದ ಎನ್ನಲಾಗಿದೆ. ಇದಕ್ಕಾಗಿಯೇ ನಿಯಮ ಬಾಹಿರವಾಗಿ ಭಾರೀ ಪ್ರಮಾಣದ ಸ್ಫೋಟಕವನ್ನು ದಾಸ್ತಾನು ಇಟ್ಟಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

  • ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

    ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

    ಮಂಗಳೂರು: ಪಟಾಕಿ ಗೋಡೌನ್ (Fireworks Godown) ಸ್ಫೋಟಗೊಂಡ (Blast) ಪರಿಣಾಮ ಮೂವರು ಕಾರ್ಮಿಕರು (Workers) ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಅವಘಡ ಸಂಭವಿಸಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿದ್ದಾರೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಇದನ್ನೂ ಓದಿ: ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ

    ಇನ್ನು ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, ಪ್ರೇಮ್ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಕುಟ್ಟೋಡಿ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಕೆ ಮಾಡುತ್ತಿದ್ದು, ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಪಟಾಕಿ ಕಾರ್ಖಾನೆ ಮೇಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಂದಿಬೆಟ್ಟದಲ್ಲಿ ಆತ್ಮಹತ್ಯೆ – ಒಂದೂವರೆ ತಿಂಗಳ ಬಳಿಕ ಶವ ಪತ್ತೆ

    ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಈ ಘಟನೆ ಭಾನುವಾರ ಸಂಜೆ ಸುಮಾರು 5:30ರ ಸುಮಾರಿಗೆ ನಡೆದಿದೆ. 50 ಸೆನ್ಸ್ ಜಾಗದಲ್ಲಿ ಸಯ್ಯದ್ ಬಶೀರ್ ಎಂಬವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. 2011-2012 ನಲ್ಲಿ ತೆಗೆದುಕೊಂಡಿರುವ ಲೈಸೆನ್ಸ್ 2019ರಲ್ಲಿ ರಿನಿವಲ್ ಆಗಿದೆ. 2024ರ ಮಾರ್ಚ್ವರೆಗೂ ವ್ಯಾಲಿಡ್ ಆಗಿದೆ. ಡಿಮ್ಯಾಂಡ್‌ಗೆ ತಕ್ಕ ಹಾಗೆ ಪಟಾಕಿ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ತಯಾರಿಸುವಾಗ ಯಾವ ಕಾರಣಕ್ಕೆ ಬ್ಲಾಸ್ಟ್ ಆಗಿದೆ ಎಂಬುದು ಗೊತ್ತಾಗಿಲ್ಲ. ಮೊಬೈಲ್ ಫೊರೆನ್ಸಿಕ್ ಟೀಮ್, ಡಿಪಾರ್ಟ್ಮೆಂಟ್ ಆಫ್ ಎಕ್ಸ್‌ಪ್ಲೋಸಿವ್‌ ತಂಡ ಬಂದಿದೆ. ಘಟನೆ ಹೇಗಾಯಿತು? ಯಾಕಾಯ್ತು ಎಂಬ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿ ಟ್ರಕ್‌ಗೆ ಡಿಕ್ಕಿ; ತಮಿಳುನಾಡಿನಲ್ಲಿ ಸ್ಥಳದಲ್ಲೇ ಐವರು ಸಾವು

    ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮಾತನಾಡಿದ ಅವರು, ಈ ಘಟನೆಗೆ ಕಾರಣ ಏನು ಎಂಬ ಬಗ್ಗೆ ಗಂಭೀರ ತನಿಖೆ ನಡೆಯಬೇಕಿದೆ. ಪರವಾನಿಗೆ ನೀಡಿದರ ಬಗ್ಗೆ ಸರ್ಕಾರ ಗಂಭೀರ ತನಿಖೆ ಮಾಡಬೇಕು. ಸ್ಫೋಟದ ತೀವ್ರತೆ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಈ ಪ್ರಕರಣವನ್ನು ರಾಷ್ಟೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಘಟನೆ ಬಹಳ ಭೀಕರವಾಗಿ ನಡೆದಿದೆ. ಈ ಘಟನೆ ಬಗ್ಗೆ ಅನುಮಾನವಿದೆ. ಮೂವರು ಬಲಿಯಾಗಿದ್ದಾರೆ. ದೊಡ್ಡದಾದ ಸ್ಫೋಟಕ ವಸ್ತುಗಳ ಸ್ಫೋಟವಾಗಿದೆ. ಸ್ಥಳೀಯ ಮನೆಗಳಿಗೆ ಸರ್ಕಾರ ಸಂಪೂರ್ಣ ಪರಿಹಾರ ಕೊಡಬೇಕು. ಬಲಿಯಾದ ಕಾರ್ಮಿಕ ಕುಟುಂಬಗಳಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮೇಲೆ ಹಲ್ಲೆ – ಪ್ರಶ್ನೆ ಮಾಡಿದಕ್ಕೆ ಕುಚಿಕುಗಳಿಂದಲ್ಲೇ ಕೊಲೆ

    ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದು, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿ ಸಮಗ್ರ ತನಿಖೆ ಮಾಡಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ. ತಕ್ಷಣವೇ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಈ ಸ್ಫೋಟದ ಹಿಂದೆ ಯಾವುದಾದ್ರು ವ್ಯವಸ್ಥೆಯ ನಂಟಿದೆಯಾ ಅನ್ನೋದನ್ನು ನೋಡಬೇಕು. ಈ ಸ್ಫೋಟಕ್ಕೆ ಸಂಬಂಧಪಟ್ಟವರನ್ನು ತಕ್ಷಣ ಬಂಧಿಸಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ

  • ಪಟಾಕಿ ಅಂಗಡಿಯಲ್ಲಿ ಸ್ಫೋಟದಿಂದ ಇಬ್ಬರು ಸಾವು- ತಲಾ 2 ಲಕ್ಷ ಪರಿಹಾರ ಘೋಷಿಸಿದ ಜಮೀರ್

    ಪಟಾಕಿ ಅಂಗಡಿಯಲ್ಲಿ ಸ್ಫೋಟದಿಂದ ಇಬ್ಬರು ಸಾವು- ತಲಾ 2 ಲಕ್ಷ ಪರಿಹಾರ ಘೋಷಿಸಿದ ಜಮೀರ್

    ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

    ಗಾಯಾಳು ಮಂಜುನಾಥ್‍ನನ್ನು ಬೃಂದಾವನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಲಿಕೆಯಿಂದ ಅನುಮತಿ ಪಡೆದೇ ಪಟಾಕಿ ಸ್ಟೋರೇಜ್ ಮಾಡಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಸ್ಥಳೀಯರೇ ಮೃತಪಟ್ಟಿದ್ದಾರೆ. 75 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಕೆಲ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಸ್ಫೋಟ – ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ

    ಪಟಾಕಿ ಹಾಗೂ ಸಂಬಂಧಿಸಿದ ವಸ್ತುಗಳನ್ನು ಗೋಡೌನ್ ನಲ್ಲಿಟ್ಟುಕೊಂಡು, ಬೇರೆಡೆಗೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಸರ್ಕಾರದಿಂದ ಬಡವರಿಗೆ ಪರಿಹಾರ ನೀಡಬೇಕು. ಮೃತರ ಕುಟುಂಬಕ್ಕೆ ನಾನೂ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದರು.

    ಪಟಾಕಿ ಅಂಗಡಿ, ಶ್ರೀ ಪತ್ರ ಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿಯಲ್ಲಿ ಪಟಾಕಿ ಸ್ಫೋಟ ಹಾಗೂ ಪಂಕ್ಚರ್ ಅಂಗಡಿಯಲ್ಲಿ ಹೈಡ್ರೋಲಿಕ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ನಗರ್ತರಪೇಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ, ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸಸ್ ಗೋಡೌನ್‍ನಲ್ಲಿ ಪಟಾಕಿ ಸ್ಫೋಟಗೊಂಡು ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟಾಕಿ ಸ್ಫೋಟದಿಂದ ಮೃತರ ದೇಹ ಛಿದ್ರಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

    ಮೃತರನ್ನು ಅಸ್ಲಾಂ, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.