Tag: ಪಟಾಕಿ ಸ್ಫೋಟ

  • ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಫೋಟ – ಓರ್ವ ಬಾಲಕ ದುರ್ಮರಣ

    ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಫೋಟ – ಓರ್ವ ಬಾಲಕ ದುರ್ಮರಣ

    – ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್‌ ಕೈಗೆ ಗಂಭೀರ ಗಾಯ

    ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ (Firecracker Explosion) ಓರ್ವ ಬಾಲಕ ಸಾವನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಮುತ್ತೂರಿನಲ್ಲಿ ನಡೆದಿದೆ.

    ಇಂದು ಸಂಜೆ ಗಣೇಶ ವಿಸರ್ಜನೆ ವೇಳೆ ಪಟಾಕಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ 15 ವರ್ಷದ ತನುಷ್ ರಾವ್ ಮೃತಪಟ್ಟಿದ್ದಾನೆ. ಇನ್ನೂ ಘಟನೆಯಲ್ಲಿ ವಿದ್ಯಾರ್ಥಿಗಳಾದ (Students) ಗಣೇಶ್, ಯೋಗೇಶ್, ಪವರ್ ಲಿಫ್ಟರ್ ಚಾಲಕ ಮುನಿರಾಜು, ನಾಗರಾಜು, ಚೇತನ್ ಶಾವಿ ಎಂಬುವರಿಗೆ ಸುಟ್ಟ ಗಾಯಗಳಾಗಿವೆ. ಇದೇ ವೇಳೆ ಬಂದೋಬಸ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಜಾಕಿರ್ ಹುಸೇನ್ ಎಂಬುವರ ಕೈಗೆ ಪಟಾಕಿ ಸಿಡಿದು ಗಂಭೀರ ಗಾಯವಾಗಿದೆ.

    ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಂದಹಾಗೆ ಇಂದು ಸಂಜೆ 5.30ರ ವೇಳೆ ಫ್ರೆಂಡ್ಸ್ ವಿನಾಯಕ ಗ್ರೂಪ್‌ವತಿಯಿಂದ ಗಣೇಶ ವಿಸರ್ಜನೆಗೆಂದು ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಬರುವ ವೇಳೆ, ಮೆರವಣಿಗೆ ಮಾಡಲು ಕರೆಸಲಾಗಿದ್ದ ಪವರ್ ಲಿಪ್ಟರ್ ವಾಹನ ಬಿಸಿಯಾಗಿ, ಅದರ ಮೇಲೆ ಇಡಲಾಗಿದ್ದ ಪಟಾಕಿಗಳ ಏಕಾಏಕಿ ಸ್ಪೋಟಗೊಂಡಿವೆ.

    ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಎಎಸ್ಪಿ ನಾಗರಾಜ್, ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಗೆ ದಾಖಲಾದವರೊಂದಿಗೆ ಮಾತುಕತೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • Uttar Pradesh| ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಮೂವರು ಕಾರ್ಮಿಕರು ದುರ್ಮರಣ

    Uttar Pradesh| ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಮೂವರು ಕಾರ್ಮಿಕರು ದುರ್ಮರಣ

    ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಏಕಾಏಕಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ (Uttar Pradesh) ಸಹರಾನ್‌ಪುರದಲ್ಲಿ (Saharanpur) ಶನಿವಾರ ನಡೆದಿದೆ.

    ಇಲ್ಲಿನ ನಿಹಾಲ್ ಖೇಡಿ ಗ್ರಾಮದಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಶಬ್ದ ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರತಿಧ್ವನಿಸಿದೆ. ಘಟನೆ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಸಹರಾನ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು

    ಸ್ಫೋಟದ ಬಗ್ಗೆ ಮಾಹಿತಿ ದೊರೆತ ತಕ್ಷಣ ಪೊಲೀಸ್ ಸಿಬ್ಬಂದಿ, ವಿಧಿವಿಜ್ಞಾನ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿತು. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದು ಬಿದ್ದಿದೆ. ಘಟನೆ ಸಂಬಂಧ ಕಾರ್ಖಾನೆಯ ಮೂವರು ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬನ್ಸಾಲ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಅನೇಕ ಅಕ್ರಮ ಪಟಾಕಿ ಕಾರ್ಖಾನೆಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ನಮ್ಮ ಧರ್ಮ ಯಾರನ್ನ ಕೊಲ್ಲಲೂ ಅನುಮತಿಸಲ್ಲ – ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಕ್ಕೆ ಮುಸ್ಲಿಮರ ಒತ್ತಾಯ

  • ಎರಡು ಪಟಾಕಿ ಘಟಕಗಳಲ್ಲಿ ಸ್ಫೋಟ; 11 ಮಂದಿ ಸಾವು

    ಎರಡು ಪಟಾಕಿ ಘಟಕಗಳಲ್ಲಿ ಸ್ಫೋಟ; 11 ಮಂದಿ ಸಾವು

    ಚೆನ್ನೈ: ತಮಿಳುನಾಡಿನ ಶಿವಕಾಶಿಯ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಎಂ. ಪುದುಪಟ್ಟಿಯಲ್ಲಿರುವ ಕನಿಷ್ಕರ್ ಹಾಗೂ ಅದರ ಪಕ್ಕದಲ್ಲಿರುವ ಪಟಾಕಿ ಅಂಗಡಿಗಳಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ವಿರುದುನಗರ, ಶಿವಕಾಶಿ, ವಾಟ್ರಪ್ ಮತ್ತು ಶ್ರೀವಿಲ್ಲಿಪುತ್ತೂರಿನಿಂದ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಈವರೆಗೆ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ 10 ಶವಗಳನ್ನು ಹೊರತೆಗೆದಿದ್ದಾರೆ.

    ಕಳೆದ ಕೆಲವು ದಿನಗಳಿಂದ ಹವಾಮಾನ ಪರಿಸ್ಥಿತಿಯಿಂದಾಗಿ ಸರಿಯಾಗಿ ಒಣಗದ ಪಟಾಕಿಗಳ ಮಾದರಿ ಪರೀಕ್ಷೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸುಮಾರು 20-25% ರಷ್ಟು ಸುಟ್ಟ ಗಾಯಗಳಾಗಿರುವ ಇತರೆ ಇಬ್ಬರು ಕಾರ್ಮಿಕರನ್ನು ಶ್ರೀವಿಲ್ಲಿಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

    ಬೆಂಕಿ ಅವಘಡದ ನಂತರ ಘಟಕದಲ್ಲಿದ್ದ ಕಾರ್ಮಿಕರು ಓಡಿ ಹೋಗಿದ್ದು, ಸ್ಫೋಟದಲ್ಲಿ ಸುಟ್ಟು ಕರಕಲಾದ ಕಾರ್ಮಿಕರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಘಟಕವು ಡಿಆರ್‌ಒ ಪರವಾನಗಿಯನ್ನು ಹೊಂದಿದೆ. ವಿರುದುನಗರ ಎಸ್‌ಪಿ ಶ್ರೀನಿವಾಸ ಪೆರುಮಾಳ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿವೇಕಾನಂದನ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

    ಕಿಚ್ಚನಾಯಕನಪಟ್ಟಿಯಲ್ಲಿ ನಡೆದ ಮತ್ತೊಂದು ಅಗ್ನಿ ಅವಘಡದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿದ್ದಾರೆ. ನತಿಕುಡಿಯ ನಿವಾಸಿ ಪಿ.ವೆಂಬು (60) ಹೆಸರಿನ ಕಾರ್ಮಿಕ, ಘಟಕದ ಕೊಠಡಿಯೊಂದರಲ್ಲಿ ರಾಸಾಯನಿಕ ಮಿಶ್ರಣ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ. ಮಾರನೇರಿ ಪೊಲೀಸರು ಘಟಕದ ಮುಖ್ಯಸ್ಥ ಗುರುಮೂರ್ತಿಯನ್ನು ಬಂಧಿಸಿದ್ದು, ಪರಾರಿಯಾಗಿರುವ ಮಾಲೀಕ ಮುತ್ತುವಿಜ್ಯನಿಗಾಗಿ ಶೋಧ ನಡೆಸುತ್ತಿದ್ದಾರೆ.

    ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಅವಘಡಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೀಲ್ ಪಟಾಕಿಯಿಂದ ಬೆಂಗಳೂರಿನಲ್ಲಿ ಸ್ಫೋಟ – ಅನುಮಾನ ಏನು?

    ರೀಲ್ ಪಟಾಕಿಯಿಂದ ಬೆಂಗಳೂರಿನಲ್ಲಿ ಸ್ಫೋಟ – ಅನುಮಾನ ಏನು?

    ಬೆಂಗಳೂರು: ವಿವಿಪುರಂನ ನ್ಯೂ ತರಗುಪೇಟೆಯ ಗೊಡೌನ್‍ನಲ್ಲಿ ನಡೆದ ಭಯಾನಕ ಸ್ಫೋಟಕ್ಕೆ ಪಟಾಕಿ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಪತ್ರಕಾಳಿ ಲಾರಿ ಟ್ರಾನ್ಸ್‍ಪೋರ್ಟ್ ಸರ್ವೀಸ್ ಗೋದಾಮು ಮತ್ತು ಅದಕ್ಕೆ ಹೊಂದಿಕೊಂಡಿರುವ ಪಂಕ್ಚರ್ ಶಾಪ್‍ನಲ್ಲಿ ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಸ್ಫೋಟ ಸಂಭವಿಸಿದೆ. ಘಟನೆ ನಡೆದ ಬಳಿಕ ವಿವಿಪುರಂ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‍ಎಸ್‍ಎಲ್) ತಂಡದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಪ್ರಾಥಮಿಕ ತನಿಖೆ ನಡೆಸಿದ ಬಳಿಕ ರೀಲ್ ಪಟಾಕಿಯ ದೊಡ್ಡ ಡ್ರಮ್ ಕೆಳಕ್ಕೆ ಬಿದ್ದು ಸ್ಫೋಟ ಉಂಟಾಗಿರಬಹುದು ಎಫ್‍ಎಸ್‍ಎಲ್ ಹೇಳಿದೆ.

    ಬಾಬು ಅವರಿಗೆ ಸೇರಿದ ಈ ಗೋದಾಮಿನಲ್ಲಿ ಲಾರಿ ಸರ್ವಿಸ್ ಬೋರ್ಡ್ ಹಾಕಿ, ಪಟಾಕಿ ಸಂಗ್ರಹಿಸಿಡಲಾಗಿತ್ತು. ಅಯ್ಯನ್ ಹಂಟರ್ ರಿಂಗ್ ಕ್ಯಾಪ್ ಹೆಸರಿನ ಪಟಾಕಿ ಕಂಪನಿಗೆ ಸಂಬಂಧಿಸಿದ ಅವಶೇಷಗಳು ಘಟನಾ ಸ್ಥಳದಲ್ಲಿ ಪತ್ತೆಯಾಗಿದ್ದು ಪಟಾಕಿ ಸ್ಫೋಟಕದ ಶಂಕೆಗೆ ಪುಷ್ಠಿ ನೀಡುತ್ತಿವೆ. ಇದನ್ನೂ ಓದಿ:  ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ: ಪ್ರಭು ಚವ್ಹಾಣ್

    ಗೋದಾಮಿನಲ್ಲಿ 15 ರಿಂದ 20 ಕೆಜಿ ತೂಕದ ಒಟ್ಟು 80 ಬಾಕ್ಸ್ ಗಳನ್ನು ಪಟಾಕಿಯನ್ನು ಸಂಗ್ರಹಿಸಿ ಇಡಲಾಗಿತ್ತು. ಈ ಪೈಕಿ 78 ಪತ್ತೆಯಾಗಿದ್ದು, ಉಳಿದ ಎರಡು ಸ್ಫೋಟಗೊಂಡಿರುವ ಅನುಮಾನ ವ್ಯಕ್ತವಾಗುತ್ತಿದೆ. ಇದರ ಜೊತೆ ಮೆಕ್ಯಾನಿಕಲ್ ಹಾಗೂ ಕೆಮಿಕಲ್ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ.

    ಸ್ಫೋಟಕ್ಕೆ ಸಂಬಂಧಿಸಿದಂತೆ ವಿವಿಪುರಂ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಮಾಲೀಕ ಗಣೇಶ್ ಬಾಬುವನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

    ಅನುಮಾನ ಏನು?
    ಪಟಾಕಿ ಸ್ಫೋಟ ಎಂಬ ಅನುಮಾನ ಇದ್ದರೂ ಕೇವಲ 2 ಬಾಕ್ಸ್ ಮಾತ್ರ ಸ್ಫೋಟಗೊಂಡಿವೆ. ಜೊತೆಗೆ ಪಟಾಕಿ ಸ್ಫೋಟ ಆಗಿದ್ದರೆ ಪಟಪಟ ಎಂದು ಶಬ್ಧ ಆಗಬೇಕಿತ್ತು. ಆದರೆ ಇಲ್ಲಿ ಒಂದೇ ಬಾರಿಗೆ ಸ್ಫೋಟ ಸಂಭವಿಸಿದೆ. ಇದನ್ನೂ ಓದಿ:  ಕಾರ್ಯಕರ್ತರನ್ನು ಮನೆ ಬಾಗಿಲಿಗೆ ಬರಮಾಡಿಕೊಳ್ಳಲಿದ್ದಾರೆ ಹೆಚ್‍ಡಿಕೆ

    ಪಂಕ್ಚರ್ ಅಂಗಡಿಯಲ್ಲಿ ಇರುವ ನೈಟ್ರೋಜನ್ ಸಿಲಿಂಡರ್ ಸ್ಫೋಟ ಆಗಿರಬಹುದು ಎಂಬ ಅನುಮಾನವೂ ಇದೆ. ಆದರೆ ನೈಟ್ರೋಜನ್ ಸಿಲಿಂಡರ್ ಸ್ಫೋಟ ಆಗಿದ್ದರೆ ಪಂಕ್ಚರ್ ಅಂಗಡಿ ಇರುವ ಕಟ್ಟಡಕ್ಕೆ ಹಾನಿ ಆಗಬೇಕಿತ್ತು. ಆದರೆ ಮೇಲ್ಛಾವಣಿ ಕಿತ್ತು ಹೋಗುವ ರೀತಿಯಲ್ಲಿ ಹೆಚ್ಚು ಹಾನಿ ಆಗಿರುವುದು ಪಂಕ್ಚರ್ ಅಂಗಡಿ ಪಕ್ಕದ ಲಾರಿ ಟ್ರಾನ್ಸ್‍ಪೋರ್ಟ್ ಗೋದಾಮಿನಲ್ಲಿ

    ನಿಗೂಢ ಸ್ಫೋಟಕ್ಕೆ ಇಬ್ಬರು ಬಲಿ ಆಗಿದ್ದಾರೆ. ಏಳುಮಂದಿ ಗಾಯಗೊಂಡಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ತೀವ್ರತೆಗೆ ಇಡೀ ನ್ಯೂ ತರಗುಪೇಟೆಯಲ್ಲಿ ಕಂಪನದ ಅನುಭವ ಉಂಟಾಗಿದೆ. ಇಬ್ಬರ ಮೃತದೇಹಗಳು ಛಿದ್ರ ಛಿದ್ರವಾಗಿವೆ. ಇದನ್ನೂ ಓದಿ:  ಅರ್ಚಕರಿಗೆ ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ಶೀಘ್ರ ಕ್ರಮ: ಜೊಲ್ಲೆ

    ಮೃತರ ಅಂಗಾಂಗಗಳು ಸುಮಾರು 10 ಮೀಟರ್‍ವರೆಗೂ ಹಾರಿ ಬಿದ್ದಿವೆ. ಟ್ರಾನ್ಸ್‍ಪೋರ್ಟ್ ಮತ್ತು ಪಂಕ್ಚರ್ ಅಂಗಡಿ ಮುಂದಿನ ಟೆಂಪೋ ಜಖಂ ಆಗಿದ್ರೆ. ದ್ವಿಚಕ್ರ ವಾಹನಗಳು ಚಿಂದಿ ಚಿಂದಿ ಆಗಿವೆ. ದುರಂತದಲ್ಲಿ ಮೃತಪಟ್ಟವರನ್ನು ಪಂಕ್ಚರ್ ಅಂಗಡಿ ಮಾಲಿಕ ಅಸ್ಲಾಂ, ಟೆಂಪೋ ಚಾಲಕ ತಮಿಳುನಾಡು ಮೂಲದ ಮನೋಹರ್ ಎಂದು ಗುರುತಿಸಲಾಗಿದೆ. ಗಾಯಾಳು 70 ವರ್ಷದ ಅನ್ಬು ಸ್ವಾಮಿ ಮತ್ತು ಮಂಜುನಾಥ್ ಸ್ಥಿತಿ ಗಂಭೀರವಾಗಿದೆ.