Tag: ಪಟಿಯಾಲ ಕೋರ್ಟ್

  • NIAಯಿಂದ ಸಾಕ್ಷಿ ಕೊರತೆ: ಭಟ್ಕಳ ಮೂಲದ ಉಗ್ರಗಾಮಿ ವಾಯಿದ್‌ಗೆ ಬಿಗ್ ರಿಲೀಫ್‌ ನೀಡಿದ ಕೋರ್ಟ್‌

    NIAಯಿಂದ ಸಾಕ್ಷಿ ಕೊರತೆ: ಭಟ್ಕಳ ಮೂಲದ ಉಗ್ರಗಾಮಿ ವಾಯಿದ್‌ಗೆ ಬಿಗ್ ರಿಲೀಫ್‌ ನೀಡಿದ ಕೋರ್ಟ್‌

    ಕಾರವಾರ: ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್‌ನಲ್ಲಿ ಆರೋಪಿಯಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಉಗ್ರಗಾಮಿ ಅಬ್ದುಲ್ ವಾಯಿದ್ ಸಿದ್ದಿಬಪ್ಪಗೆ (Abdul Wahid Siddibappa) ದೆಹಲಿ ಪಟಿಯಾಲ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಭಯೋತ್ಪಾದಕ ಚಟುವಟಿಕೆಗೆ ಹವಾಲಾ ಹಣ ವರ್ಗಾವಣೆ ಆರೋಪ ಸಾಬೀತಾಗದ ಹಿನ್ನಲೆಯಲ್ಲಿ ಪ್ರಕರಣ ರದ್ದು ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

    ದುಬೈನಲ್ಲಿ ಕುಳಿತು ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿದ್ದ ಆರೋಪದಡಿ ಅಲ್ಲಿನ ಸರ್ಕಾರ ಈತನನ್ನು ಗಡಿಪಾರು ಮಾಡಿತ್ತು. ನಂತರ 2016ರ ಮೇ 20 ರಲ್ಲಿ NIA ದೆಹಲಿಯಲ್ಲಿ ಬಂಧಿಸಿತ್ತು. ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದಿದ್ದ ರಾಹುಲ್‌ ಗಾಂಧಿಗೆ 4 ಅಂತಸ್ತಿನ ಮನೆ ನೀಡಿದ ಕಾಂಗ್ರೆಸ್‌ ʻರಾಜಕುಮಾರಿʼ

    ಈತನ ವಿರುದ್ಧ ಇಂಡಿಯನ್ ಮುಜಾಹಿದ್ದಿನ್ (ಸಿಮಿ) ಸಂಘಟನೆಗೆ ಅಕ್ರಮ ಹಣಕಾಸು ವ್ಯವಹಾರ, ಹವಾಲಾ ದಂಧೆ, ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್‌ನಲ್ಲಿ ಸಹ ಈತನ ಕೈವಾಡ ಇರುವ ಕುರಿತು NIA ಪ್ರಕರಣ ದಾಖಲಿಸಿತ್ತು.

    ಭಟ್ಕಳ ಮೂಲದ ಅಬ್ದುಲ್ ವಾಯಿದ್ ಸಿದ್ದಿಬಪ್ಪ ವಿರುದ್ಧ NIA ದಾಖಲಿಸಿದ್ದ, ಭಯೋತ್ಪಾದನೆ ಸಂಘಟನೆಗೆ ಹಣ ಒದಗಿಸಿದ ಕುರಿತು ಇರುವ ದೂರಿನಲ್ಲಿ ಸಾಕ್ಷಿ ಕೊರತೆ ಹಿನ್ನಲೆಯಲ್ಲಿ ಪ್ರಕರಣವನ್ನು ದೆಹಲಿ ಪಟಿಯಾಲ ಕೋರ್ಟ್‌ ಶನಿವಾರ ರದ್ದುಪಡಿಸಿತು. ಅಲ್ಲದೇ ವಾಯಿದ್‌ ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ಮಾಡಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

  • ನೇಣು ಕುಣಿಕೆಯಿಂದ ಮತ್ತೆ ಪಾರಾದ ಕೀಚಕರು- ನಿರ್ಭಯಾ ಅತ್ಯಾಚಾರಿಗಳಿಗೆ ಸದ್ಯಕ್ಕಿಲ್ಲ ಗಲ್ಲು

    ನೇಣು ಕುಣಿಕೆಯಿಂದ ಮತ್ತೆ ಪಾರಾದ ಕೀಚಕರು- ನಿರ್ಭಯಾ ಅತ್ಯಾಚಾರಿಗಳಿಗೆ ಸದ್ಯಕ್ಕಿಲ್ಲ ಗಲ್ಲು

    ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಮತ್ತೆ ನೇಣು ಕುಣಿಕೆಯಿಂದ ಪಾರಾಗಿದ್ದಾರೆ. ಮುಂದಿನ ಆದೇಶದವರೆಗೂ ಗಲ್ಲು ಶಿಕ್ಷೆ ವಿಧಿಸದಂತೆ ದೆಹಲಿಯ ಪಟಿಯಾಲ ಕೋರ್ಟ್ ಆದೇಶ ನೀಡಿದೆ.

    ಸುಪ್ರೀಂಕೋರ್ಟಿನಲ್ಲಿ ಗಲ್ಲು ಶಿಕ್ಷೆಯನ್ನು ಮರಣದಂಡನೆ ಇಳಿಸುವಂತೆ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿ ವಜಾ ಆಗುತ್ತಿದ್ದಂತೆ, ತಿರಸ್ಕೃತಗೊಂಡಿರುವ ಕ್ಷಮಾದಾನ ಅರ್ಜಿಯನ್ನು ಮರು ಪರಿಶೀಲನೆ ನಡೆಸುವಂತೆ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದರು. ರಾಷ್ಟ್ರಪತಿಗಳಿಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದ ಹಿನ್ನೆಲೆ ನಾಳೆ ಬೆಳಗ್ಗೆ ನಿಗದಿಯಾಗಿದ್ದ ಗಲ್ಲು ಶಿಕ್ಷಗೆ ತಡೆ ನೀಡುವಂತೆ ಪವನ್ ಗುಪ್ತಾ ಪರ ವಕೀಲ ಎ.ಪಿ ಸಿಂಗ್ ಮನವಿ ಮಾಡಿದರು. ಇದರ ಜೊತೆಗೆ ಮತ್ತೋರ್ವ ದೋಷಿ ಅಕ್ಷಯ್ ಠಾಕೂರ್ ನ ತಿರಸ್ಕೃತಗೊಂಡ ಕ್ಷಮಾದಾನ ಅರ್ಜಿಯ ಮರು ಪರಿಶೀಲನಾ ಅರ್ಜಿ ಬಾಕಿ ಇದೆ ಎಂದು ಕೋರ್ಟ್ ಗಮನಕ್ಕೆ ತಂದರು.

    ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಧರ್ಮೇಂದರ್ ರಾಣಾ ಅರ್ಜಿದಾರರ ಪರ ವಕೀಲ ಎ.ಪಿ ಸಿಂಗ್ ವಿರುದ್ಧ ಹರಿಹಾಯ್ದರು. ಒಂದು ವಾರದಲ್ಲಿ ಕಾನೂನು ಹೋರಾಟವನ್ನು ಮುಗಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಇದ್ಯಾಗೂ ನೀವೂ ಕಾನೂನು ಹೋರಾಟಗಳನ್ನು ಅಂತ್ಯಗೊಳಿಸಿಲ್ಲ ನೀವೂ ಬೆಂಕಿಯ ಜೊತೆ ಆಟವಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಎರಡು ಗಂಟೆಗೆ ವಿಚಾರಣೆ ನಡೆಸಿದ್ದ ಪಟಿಯಾಲ ಕೋರ್ಟ್ ದಿಢೀರ್ ಬೆಳವಣಿಗೆಯಿಂದ ಗಲ್ಲು ಶಿಕ್ಷೆಗೆ ತಡೆ ನೀಡಲಾಗಿದ್ದು, ಮುಂದಿನ ಆದೇಶವರೆಗೂ ಗಲ್ಲು ಶಿಕ್ಷೆ ವಿಧಿಸದಂತೆ ತಿಹಾರ್ ಜೈಲು ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ಸತತವಾಗಿ ಮೂರನೇ ಬಾರಿ ಗಲ್ಲು ಶಿಕ್ಷೆಯಿಂದ ನಾಲ್ವರು ದೋಷಿಗಳು ಪಾರಾಗಿದ್ದಾರೆ.

    ಪಟಿಯಾಲ ಕೋರ್ಟ್ ತೀರ್ಪು ಬಳಿಕ ಮಾತನಾಡಿದ ದೋಷಿಗಳ ಪರ ವಕೀಲ ಎ.ಪಿ ಸಿಂಗ್, ನಾಳಿನ ಗಲ್ಲು ಶಿಕ್ಷೆಗೆ ವಿಶೇಷ ಕೋರ್ಟ್ ತಡೆ ನೀಡಿದೆ. ಮುಂದಿನ ಆದೇಶದವರೆಗೂ ತಡೆ ನೀಡಿದೆ. ನಾಲ್ವರು ದೋಷಿಗಳಿಗೂ ನಾಳೆ ಶಿಕ್ಷೆ ಆಗುವುದಿಲ್ಲ ಎಂದರು.

    ಕೋರ್ಟ್ ಆದೇಶ ಬಗ್ಗೆ ನಾನೇನು ಹೇಳಲಿ, ಪದೇ ಪದೇ ಗಲ್ಲು ಶಿಕ್ಷೆ ಮುಂದೂಡಿಕೆಯಾಗಿದೆ ಭಾರತದಲ್ಲಿ ಅಪರಾಧಿಗಳಿಗೆ ಬೆಂಬಲ ಸಿಗುತ್ತಿದೆ. ಇಡೀ ಸಮಾಜ ಈ ಬೆಳವಣಿಗೆ ನೋಡುತ್ತಿದೆ. ಗಲ್ಲು ಶಿಕ್ಷೆ ಯಾವಾಗ ಎಂದು ನೀವೇ ಕೋರ್ಟ್ ಮತ್ತು ಸರ್ಕಾರವನ್ನು ಕೇಳಿ ಎಂದು ಸಂತ್ರಸ್ತೆ ತಾಯಿ ಆಶಾದೇವಿ ಆಕ್ರೋಶ ವ್ಯಕ್ತಪಡಿಸಿದರು.

  • ನಿರ್ಭಯಾ ಪ್ರಕರಣದ ದೋಷಿ ವಿನಯ್ ಕ್ಷಮಾದಾನ ಅರ್ಜಿ ತಿರಸ್ಕೃತ 

    ನಿರ್ಭಯಾ ಪ್ರಕರಣದ ದೋಷಿ ವಿನಯ್ ಕ್ಷಮಾದಾನ ಅರ್ಜಿ ತಿರಸ್ಕೃತ 

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿ ವಿನಯ್ ಶರ್ಮಾ ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತ ವಾಗಿದೆ. ಪ್ರಕರಣದ ಮತ್ತೋರ್ವ ದೋಷಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿ ಸಹ ತಿರಸ್ಕೃತಗೊಂಡಿತ್ತು.

    ಪ್ರಕರಣದ ನಾಲ್ವರು ಅಪರಾಧಿಗಳು ಇಂದು ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆಗೆ ಒಳಗಾಗಬೇಕಿತ್ತು. ಆದರೆ ಪಟಿಯಾಲ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಗಲ್ಲುಶಿಕ್ಷೆ ಮುಂದೂಡಿಕೆಯಾಗಿದೆ. ಶುಕ್ರವಾರ ಈ ಆದೇಶಕ್ಕೆ ತಡೆ ನೀಡಲಾಗಿದೆ. ನ್ಯಾಯಾಲಯ ಹೊಸ ದಿನಾಂಕವನ್ನು ನಿಗದಿ ಮಾಡಿಲ್ಲ.

    ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು. ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ರಾಷ್ಟ್ರಪತಿಗಳ ತೀರ್ಮಾನ ಪ್ರಕಟವಾಗದ ಹಿನ್ನೆಲೆಯಲ್ಲಿ ಪಟಿಯಾಲ ಕೋರ್ಟ್ ತಡೆಯಾಜ್ಞೆ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು.

    ಇನ್ನೊಂದೆಡೆ ಮತ್ತೋರ್ವ ದೋಷಿ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹಾಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದಾನೆ. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಈಗ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದಾನೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ.

  • ನಿರ್ಭಯಾ ಹಂತಕರ ಗಲ್ಲಿಗೆ ತಡೆಯಾಜ್ಞೆ – ನಾಳೆ ಬೆಳಗ್ಗೆ ಮರಣದಂಡನೆ ಇಲ್ಲ

    ನಿರ್ಭಯಾ ಹಂತಕರ ಗಲ್ಲಿಗೆ ತಡೆಯಾಜ್ಞೆ – ನಾಳೆ ಬೆಳಗ್ಗೆ ಮರಣದಂಡನೆ ಇಲ್ಲ

    ನವದೆಹಲಿ: ಫೆಬ್ರವರಿ 1 ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ವಿಧಿಸಿದ್ದ ಡೆತ್ ವಾರಂಟ್‍ಗೆ ಪಟಿಯಾಲ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಗಲ್ಲುಶಿಕ್ಷೆಗೆ ಮುಂದೂಡಿಕೆಯಾಗಿದೆ.

    ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು.

    ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ಈಗ ರಾಷ್ಟ್ರಪತಿಯವರ ತೀರ್ಮಾನ ಪ್ರಕಟಗೊಂಡಿರಲಿಲ್ಲ.

    ಇನ್ನೊಂದೆಡೆ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹಾಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದಾನೆ. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಈಗ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದಾನೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ.