Tag: ಪಡಿತರ ಚೀಟಿ

  • PUBLiC TV Impact | – ರದ್ದಾದ ಅರ್ಹ ಬಿಪಿಎಲ್ ಕಾರ್ಡ್ ವಾಪಸ್‌ಗೆ ಸಿಎಂ ಆದೇಶ

    PUBLiC TV Impact | – ರದ್ದಾದ ಅರ್ಹ ಬಿಪಿಎಲ್ ಕಾರ್ಡ್ ವಾಪಸ್‌ಗೆ ಸಿಎಂ ಆದೇಶ

    – ಬಡವರ ಪಡಿತರ ಚೀಟಿ ರದ್ದು ಮಾಡಿದ್ರೆ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

    ಬೆಂಗಳೂರು: ರೇಷನ್‌ ಕಾರ್ಡ್‌ ರದ್ದು ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರದ್ದಾದ ಅರ್ಹ ಬಿಪಿಎಲ್‌ (BPL) ಕಾರ್ಡ್‌ ವಾಪಸ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ತುರ್ತು ಆದೇಶ ಹೊರಡಿಸಿದ್ದಾರೆ.

    ‘ಪಬ್ಲಿಕ್ ಟಿವಿ’ ನಿರಂತರ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಈ ಕುರಿತು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಬಿಪಿಎಲ್, ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ

    ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.

    ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ, ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಇದನ್ನೂ ಓದಿ: ಆಹಾರ ಸುರಕ್ಷತಾ ಇಲಾಖೆಯಿಂದ ರಾಜ್ಯದ 127 ಪಿಜಿಗಳಿಗೆ ನೋಟಿಸ್ – 4 ಪಿಜಿಗಳಿಗೆ ದಂಡ

    ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.

  • ವೈಟ್ ಬೋರ್ಡ್ ಕಾರು ಇರುವ ಪಡಿತರ ಚೀಟಿ ರದ್ದು ಪ್ರಕ್ರಿಯೆ ಶುರು

    ವೈಟ್ ಬೋರ್ಡ್ ಕಾರು ಇರುವ ಪಡಿತರ ಚೀಟಿ ರದ್ದು ಪ್ರಕ್ರಿಯೆ ಶುರು

    ಬೆಂಗಳೂರು: ವೈಟ್ ಬೋರ್ಡ್ ಕಾರು (White Board Car) ಇರುವ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಸರ್ಕಾರ ಶುರು ಮಾಡಿದೆ. ಆಹಾರ ಇಲಾಖೆಯಿಂದ ನಾಲ್ಕು ಚಕ್ರ ವಾಹನಗಳ ಸರ್ವೆ ನಡೆಯುತ್ತಿದೆ. ಮತ್ತೊಂದು ಕಡೆ ಕೆಲವರಿಗೆ ಅನ್ನಭಾಗ್ಯ ಹಣ ತಲುಪಿಲ್ಲ.

    ಅನ್ನಭಾಗ್ಯ ಯೋಜನೆ (AnnaBhagya Scheme) ಜಾರಿಯಾಗಿ 5 ಕೆ.ಜಿ ಉಚಿತ ಅಕ್ಕಿ ವಿತರಣೆ ಮತ್ತು 5 ಕೆ.ಜಿಗೆ ಅಕ್ಕಿಗೆ 170 ರೂಪಾಯಿ ಹಣ ಪಡಿತರ ಚೀಟಿದಾರರಿಗೆ ತಲುಪಿದೆ. ಈ ಮಧ್ಯೆ ವೈಟ್‍ಬೋರ್ಡ್ ಕಾರು ಇರುವ ಕಾರ್ಡ್‍ಗಳನ್ನ ರದ್ದು ಮಾಡಲು ಮುಂದಾಗಿದೆ. ಈ ಪದ್ಧತಿ ಮೊದಲಿನಿಂದ ಇದೆ ಅಂತಾ ಹೇಳಲಾಗ್ತಿದ್ದು, ಈ ವರ್ಷ ವೈಟ್ ಬೋರ್ಡ್ ಕಾರು ಹೊಂದಿರುವ ನಾಲ್ಕು ಚಕ್ರದ ವಾಹನ ಸರ್ವೆಗೆ ಆಹಾರ ಇಲಾಖೆ ಮುಂದಾಗಿದೆ. ಈ ಬಗ್ಗೆ ಸರ್ವೆ ನಡೆಸಲು ಮುಂದಾಗಿದ್ದು, ಮುಂದಿನ ತಿಂಗಳ ಒಳಗಡೆ ಪ್ರಕ್ರಿಯೆ ಶುರು ಮಾಡಲಿದ್ದಾರಂತೆ. ಆರ್‍ಟಿಓಯಿಂದ ನಾಲ್ಕು ಚಕ್ರ ವಾಹನ ಹೊಂದಿರುವವರ ಮಾಹಿತಿ ಬರಲಿದೆ. ಜೊತೆಗೆ ಆದಾಯ ತೆರಿಗೆ ಇಲಾಖೆಯಿಂದ ಆದಾಯ ತೆರಿಗೆ ಪಾವತಿ ಮಾಡ್ತಾ ಇರುವವರ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ಆರಂಭ ಮಾಡುತ್ತೇವೆ ಅಂತಾ ಇದ್ದಾರೆ.

    ಅನ್ನಭಾಗ್ಯ ಹಣ ಎಲ್ಲಾ ಜಿಲ್ಲೆಯ ಪಡಿತರ ಚೀಟಿದಾರರಿಗೆ (Ration Card) ತಲುಪಿದ್ದು, ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಪಡಿತರದಾರರಿಗೆ ತಲುಪಿಲ್ಲ ಅಂತಾ ಹೇಳಲಾಗ್ತಿದೆ. ಕಾರಣ ಅಕೌಂಟ್ ನಂಬರ್ ಸರಿ ಇಲ್ಲದೇ ಇರುವಂತಹದ್ದು, ಆಧಾರ್ ಗೆ ಅಕೌಂಟ್ ಲಿಂಕ್ ಆಗಿಲ್ಲ ಎನ್ನುವಂತಹದ್ದು, ಈ ರೀತಿಯ ಕಾರಣದಿಂದ ಅಮೌಂಟ್ ತಲುಪಿಲ್ಲವಂತೆ ಸಮಸ್ಯೆ ಕ್ಲಿಯರ್ ಆದ ಬಳಿಕ ಅಮೌಂಟ್ ಹಾಕುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ರೆ ರೌಡಿಶೀಟ್ ಓಪನ್ – ಪೊಲೀಸ್ ಕಮಿಷನರ್ ಎಚ್ಚರಿಕೆ

    ವೈಟ್ ಬೋರ್ಡ್ ಕಾರು ಇರುವ ಪಡಿತರ ಚೀಟಿ ರದ್ದಾಗಲಿದ್ದು, ಆಹಾರ ಇಲಾಖೆ ಮಾಹಿತಿ ಸಂಗ್ರಹಕ್ಕೆ ಸರ್ವೆ ಮಾಡಲು ಮುಂದಾಗಿದೆ. ಈಗಾಗಿ ಈ ವರ್ಷ ವೈಟ್‍ಬೋರ್ಡ್ ಕಾರ್ಡ್ ಸಂಬಂಧ ಎಷ್ಟು ಕಾರ್ಡ್ ರದ್ದಾಗಲಿದೆ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ

    ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ

    ಧಾರವಾಡ: ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದ್ರೆ ಅಂತಹ ಸರ್ಕಾರಿ ನೌಕರರೇ (Government Employees) ಸರ್ಕಾರಕ್ಕೆ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

    ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ. ಆದರೆ ಸರ್ಕಾರಿ ಕೆಲಸವಿದ್ದವರೂ ಬಡವರಿಗೆ ನೀಡುವ ಸೌಲಭ್ಯವನ್ನು ಪಡೆದು ಮೋಸ ಮಾಡಿದ್ದಾರೆ. ಅಂತಹವರಿಗೆ ಬುದ್ಧಿ ಕಲಿಸಲು ಸರ್ಕಾರ ದಂಡದ ಬಿಸಿ ಮುಟ್ಟಿಸಿದೆ. ಕೂಡಲೇ ಎಚ್ಚೆತ್ತ ಆಹಾರ ಇಲಾಖೆ (Food Department), ಸುಳ್ಳು ಮಾಹಿತಿ ನೀಡಿ ಪಡಿತರ (Ration Card) ದುರ್ಬಳಕೆ ಮಾಡಿಕೊಂಡ 339 ಸರ್ಕಾರಿ ನೌಕಕರರಿಂದ 36.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. ಇದನ್ನೂ ಓದಿ: ವ್ಯಕ್ತಿ ಹೊಟ್ಟೆಯಲ್ಲಿತ್ತು 62 ಚಮಚ – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

    ಮತ್ತೊಂದು ಕಡೆ ಆದಾಯ ತೆರಿಗೆ ಪಾವತಿಸುತ್ತಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವವರ ಮೇಲೆ ಕ್ರಮಕ್ಕೆ ಮುಂದಾಗಿದೆ. 1945ರ ಕಾಯ್ದೆಯ ಅನ್ವಯ ಆದಾಯ ತೆರಿಗೆ ಪಾವತಿಸುವವರ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಜೊತೆಗೆ ಸ್ವಂತ ಕಾರು ಇದ್ದವರ ಬಗ್ಗೆ ಆರ್‌ಟಿಒನಿಂದ ಮಾಹಿತಿ ಪಡೆದು ಅಂತಹ ಕಾರ್ಡ್‌ಗಳನ್ನು ಅಮಾನ್ಯ ಮಾಡಲು ಮುಂದಾಗಿದ್ದಾರೆ. ಸದ್ಯ ಅಧಿಕಾರಿಗಳು, 4 ಅಂತಸ್ತಿನ ಮನೆ ಇದ್ದವರು ಹಾಗೂ 10 ರಿಂದ 12 ಎಕರೆ ನೀರಾವರಿ ಜಮೀನು ಇದ್ದವರು ಕೂಡಾ ಆಹಾರ ಇಲಾಖೆ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಇಂಥವರನ್ನ ಮಟ್ಟಹಾಕುವಂತೆಯೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್

    ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್

    ಲಕ್ನೋ: ಪರಿವಾರವಾದಿಗಳು ಪಡಿತರವನ್ನು ಲೂಟಿ ಮಾಡಿದರು. ಆದರೆ ಬಿಜೆಪಿಯ ಒಂದು ರಾಷ್ಟ್ರ ಒಂದು ಪಡಿತರ ಚೀಟಿಯೊಂದಿಗೆ ಅವರ ಆಟವನ್ನು ಕೊನೆಗೊಳಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

    ಉತ್ತರ ಪ್ರದೇಶದ ಕೌಶಾಂಬಿಯಲ್ಲಿನ ಪ್ರಚಾರದಲ್ಲಿ ಮಾತನಾಡಿದ ಅವರು, ಪರಿವಾರವಾದಿಗಳು ಬಡವರ ಪಡಿತರವನ್ನು ದೀರ್ಘಕಾಲ ಲೂಟಿ ಮಾಡಿದ್ದಾರೆ. ಆದರೆ ಬಿಜೆಪಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಯೋಜನೆಯನ್ನು ತರುವ ಮೂಲಕ ಅದನ್ನು ಕೊನೆಗೊಳಿಸಿದೆ ಎಂದು ಪರೋಕ್ಷವಾಗಿ ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಬಿಜೆಪಿಯ ಕೋವಿಡ್ ಲಸಿಕೆ ಬಗೆಗಿನ ಟೀಕೆಗಳಿಗಾಗಿ ವ್ಯಂಗ್ಯವಾಡಿದರು. ಇದನ್ನೂ ಓದಿ:  ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

     

    ಈ ಹಿಂದೆ ನೀವು ಕೋವಿಡ್ ಸಮಯದಲ್ಲಿ ಕೆಲ ನಾಯಕರನ್ನು ನೋಡಬೇಕು, ಕೊರೊನಾ ಸಾಂಕ್ರಾಮಿಕ ರೋಗವು ದೇಶದೆಲ್ಲಡೆ ಅತ್ಯಂತ ಗರಿಷ್ಠ ಮಟ್ಟದಲ್ಲಿದ್ದಾಗ ಮಾತನಾಡಿದ ಒಬ್ಬರು ಬಿಜೆಪಿ ಸರ್ಕಾರ ನಿಯಂತ್ರಿಸಿದಾಗ ಕಣ್ಮರೆಯಾದರು ಎಂದು ಟಾಂಗ್ ನೀಡಿದರು.  ಇದನ್ನೂ ಓದಿ: ಆರ್​ಸಿಬಿಯಲ್ಲಿ K.G.F ಸ್ಟಾರ್ಸ್

    ಲಸಿಕೆ ವಿರುದ್ಧ ಕೆಲ ಪಕ್ಷದ ನಾಯಕರು ಜನರಿಗೆ ತಪ್ಪು ಮಾಹಿತಿ ನೀಡಿ ಪ್ರಚೋದಿಸಿದ್ದರು. ಆದರೆ ಅಂತಹ ನಾಯಕರೇ ಕೊನೆಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಲಸಿಕೆ ಹಾಕಿಸಿಕೊಂಡಿದ್ದಾರೆ. ಯುಪಿಯ ಜನರಿಗೆ ಇಂತಹ ಪ್ರಚೋದಿತ ನಾಯಕರ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ತಿರುಗೇಟು ನೀಡಿದರು.

  • ಪಡಿತರದಲ್ಲಿ ಜೋಳ, ರಾಗಿ, ಕಡಲೆ, ಹೆಸರು ಸೇರಿ ಸ್ಥಳೀಯ ಆಹಾರ ವಿತರಣೆ: ಸಚಿವ ಕತ್ತಿ

    ಪಡಿತರದಲ್ಲಿ ಜೋಳ, ರಾಗಿ, ಕಡಲೆ, ಹೆಸರು ಸೇರಿ ಸ್ಥಳೀಯ ಆಹಾರ ವಿತರಣೆ: ಸಚಿವ ಕತ್ತಿ

    ಬೆಳಗಾವಿ: ಆಹಾರ ಭದ್ರತೆ ಯೋಜನೆಯಡಿ ಪಡಿತರದಲ್ಲಿ ಸ್ಥಳೀಯ ಆಹಾರ ವಿತರಣೆಗೆ ಆದ್ಯತೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ, ಕಡಲೆ, ಹೆಸರು ಬೇಳೆ ವಿತರಿಸಲಾಗುವುದು. ದಕ್ಷಿಣ ಕರ್ನಾಟಕದಲ್ಲಿ ಅಕ್ಕಿ, ರಾಗಿ, ಕಡಲೆ, ಹೆಸರು ಬೇಳೆ ವಿತರಿಸಲಾಗುವುದು. ಎಪ್ರಿಲ್ ಒಂದರಿಂದ ಈ ಯೋಜನೆ ಜಾರಿಗೆ ತರಲು ಯೋಜಿಸಲಾಗಿದೆ. ಇದರಿಂದ ಕಾಳಸಂತೆಗೆ ಅಕ್ಕಿ ಸರಬರಾಜು ಆಗುವುದು ತಪ್ಪಲಿದೆ ಎಂದು ತಿಳಿಸಿದರು.

    ಪ್ರತಿವರ್ಷ ಪಂಜಾಬ್ ನಿಂದ ರಾಜ್ಯಕ್ಕೆ ಅಕ್ಕಿ ಸರಬರಾಜು ಆಗುತ್ತಿತ್ತು. ಕರ್ನಾಟಕದಲ್ಲೇ ಸಾಕಷ್ಟು ಭತ್ತ ಬೆಳೆಯುತ್ತಿದ್ದು, ಇಲ್ಲೇ ಖರೀದಿಸುವ ಯೋಜನೆ ಇದೆ. ಕೇಂದ್ರದ ಆಹಾರ ನಾಗರಿಕ ಸರಬರಾಜು ಸಚಿವರ ಜೊತೆಗೆ ಚರ್ಚಿಸಿ ಈ ಕುರಿತು ನಿರ್ಧರಿಸಲಾಗುವುದು. ಇದರಿಂದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಬಹುದಾಗಿದೆ. ಕಾಳಸಂತೆಗೆ ಅಕ್ಕಿ ಸಾಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ರಾಜ್ಯದಲ್ಲಿ ಅನಧಿಕೃತ ಪಡಿತರ ಚೀಟಿ ರದ್ಧತಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಪಡಿತರ ರದ್ಧತಿ ಸಂಬಂಧ ಬೆಳಗಾವಿ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ತಹಶಿಲ್ದಾರ್, ಪಿಡಿಒ ಒಳಗೊಂಡ ಸಮಿತಿ ರಚಿಸಿ ಸರ್ವೆ ಮಾಡಲಾಗುವುದು. ಮಾರ್ಚ್ 31 ರೊಳಗೆ ಅನಧಿಕೃತ ಕಾರ್ಡ್‍ಗಳ ವರದಿ ಕೈ ಸೇರಲಿದೆ. ಬಳಿಕ ಅನಧಿಕೃತ ಪಡಿತರ ಚೀಟಿ ರದ್ದುಗೊಳಿಸಲಾಗುವುದು. ಅನಧಿಕೃತ ಪಡಿತರ ಪತ್ತೆ ಸಮರ್ಪಕವಾಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

  • ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್

    ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್

    ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

    ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಏಪ್ರಿಲ್‍ನಿಂದ ಜೂನ್‍ವರೆಗೆ ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಸಿಗಲಿದೆ. ಆದರೆ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಹಣ ನಿಗದಿ ಮಾಡಿದೆ. ಹೀಗಾಗಿ ಎಪಿಎಲ್ ಕಾರ್ಡ್ ಅರ್ಜಿದಾರರು ಪ್ರತಿ ಕೆಜಿಗೆ 15 ರೂ.ರಂತೆ 10 ಕೆಜಿ ಅಕ್ಕಿ ಖರೀದಿಸಬಹುದಾಗಿದೆ.

    ಈವರೆಗೂ ಬಿಪಿಎಲ್ ಕಾರ್ಡ್‍ಗೆ 1,88,152 ಕುಟುಂಬ ಹಾಗೂ ಎಪಿಎಲ್ ಕಾರ್ಡ್‍ಗೆ 61,333 ಕುಟುಂಬಗಳು ಅರ್ಜಿ ಸಲ್ಲಿಸಿವೆ. ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

  • ನೆಲಮಂಗಲದಲ್ಲಿ 2 ತಿಂಗಳ ಪಡಿತರ ವಿತರಣೆಗೆ ವ್ಯವಸ್ಥೆ – ತರಕಾರಿ ವ್ಯಾಪಾರಕ್ಕೆ ಸಮಯ ನಿಗದಿ

    ನೆಲಮಂಗಲದಲ್ಲಿ 2 ತಿಂಗಳ ಪಡಿತರ ವಿತರಣೆಗೆ ವ್ಯವಸ್ಥೆ – ತರಕಾರಿ ವ್ಯಾಪಾರಕ್ಕೆ ಸಮಯ ನಿಗದಿ

    ಬೆಂಗಳೂರು: ಲಾಕ್‍ಡೌನ್ ಆದೇಶದ ನಂತರ ಸರ್ಕಾರ ಘೋಷಣೆ ಮಾಡಿದ ಎರಡು ತಿಂಗಳ ಪಡಿತರವನ್ನು ನೀಡಲು ತಾಲೂಕು ಆಡಳಿತ ತಯಾರಿ ನಡೆಸಿದ್ದು, ಪಡಿತರ ಚೀಟಿ ಹೊಂದಿದ ಎಲ್ಲರಿಗೂ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಎಂ. ಶ್ರೀನಿವಾಸಯ್ಯ ತಿಳಿಸಿದರು.

    ನೆಲಮಂಗಲ ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ 2ರಿಂದ ತಾಲೂಕಿನ ತರಕಾರಿ ಮಾರಾಟಗಾರರಿಗೆ ಪ್ರತಿದಿನ ಬೆಳಗ್ಗೆ 6ರಿಂದ 10 ಗಂಟೆಯವರೆಗೂ ಹಾಗೂ ದಿನಸಿಯ ಚಿಲ್ಲರೆ ವ್ಯಾಪಾರಿಗಳಿಗೆ 7ರಿಂದ 2 ಗಂಟೆಯವರೆಗೂ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಸಮಯದಲ್ಲಿ ಮಾತ್ರ ವ್ಯಾಪಾರ ವಹಿವಾಟು ನಡೆಸಬೇಕು. ಅದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ನಿಯಮ ಮೀರಿದರೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಹಾಗೂ ಅಂಗಡಿ ಲಾಕ್ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪಡಿತರ ವಿತರಣೆಗೆ ವ್ಯವಸ್ಥೆ:
    ಪಡಿತರ ಚೀಟಿ ಹೊಂದಿರುವವರು ಹೆಬ್ಬೆಟ್ಟಿನ ಗುರುತನ್ನು ನೀಡುವ ಅವಶ್ಯಕತೆಯಿಲ್ಲ. ನಿಮ್ಮ ಮೊಬೈಲ್‍ಗೆ ಬರುವ ಒಟಿಪಿ ನೀಡಿದರೆ ಸಾಕು. ಒಟಿಪಿ ಬರದಿದ್ದರೆ ನಿಮ್ಮ ಮೊಬೈಲ್ ನಂಬರ್ ಬದಲಿಸುವ ಮೂಲಕ ಆ ಮೊಬೈಲ್ ನಂಬರ್ ನಲ್ಲಿ ಒಟಿಪಿ ಪಡೆಯಬಹುದಾಗಿದೆ. ಒಟಿಪಿ ಸಮಸ್ಯೆಯಾದರೆ ಖಚಿತ ಮಾಹಿತಿ ಮೇರೆಗೆ ಪಡಿತರ ನೀಡುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈಗಾಗಲೇ ಗೋಧಿ, ಅಕ್ಕಿಯನ್ನು ನ್ಯಾಯ ಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದರು.

    630 ಮಂದಿಗೆ ಊಟ:
    ತಾಲೂಕಿನ ಕೂಲಿ ಕಾರ್ಮಿಕರು ಹಾಗೂ ಸಂಚರಿಸುವ ಅಲೆಮಾರಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಬೆಳಗ್ಗೆ 630 ಮಂದಿಗೆ ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಊಟದ ಅನಿವಾರ್ಯವಿರುವವರು 080-27722126 ನಂಬರ್ ಗೆ ಕರೆ ಮಾಡಿದರೆ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಬಿಇಓ ರಮೇಶ್, ವೃತ್ತನಿರೀಕ್ಷಕ ಶಿವಣ್ಣ, ಸಬ್‌ಇನ್ಸ್‌ಪೆಕ್ಟರ್ ಡಿ.ಆರ್ ಮಂಜುನಾಥ್, ಅಕ್ಷರ ದಾಸೋಹ ಸಹಾಯಕ ನಿದೇರ್ಶಕ ಶಿವಕುಮಾರ್, ಶಿರಸ್ಥೇದ್ದಾರ್ ಮಂಜುನಾಥ್, ಶ್ರೀನಿವಾಸಮೂರ್ತಿ, ನಗರಸಭೆ ಆರೋಗ್ಯಾಧಿಕಾರಿ ಬಸವರಾಜು ಮತ್ತಿತರು ಉಪಸ್ಥಿತರಿದ್ದರು.

  • ಗಮನಿಸಿ: ರೇಷನ್ ಕಾರ್ಡಿಗೆ ಆಧಾರ್ ಜೋಡಿಸಲು ಮಾರ್ಚ್ ಅಂತ್ಯದವರೆಗೆ ಗಡುವು ವಿಸ್ತರಣೆ

    ಗಮನಿಸಿ: ರೇಷನ್ ಕಾರ್ಡಿಗೆ ಆಧಾರ್ ಜೋಡಿಸಲು ಮಾರ್ಚ್ ಅಂತ್ಯದವರೆಗೆ ಗಡುವು ವಿಸ್ತರಣೆ

    ಬೆಂಗಳೂರು: ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಿಸಲು ಈ ಹಿಂದೆ ನಿಗದಿ ಪಡಿಸಿದ್ದ (ಇ-ಕೆವೈಸಿ) ಅಂತಿಮ ಅವಧಿಯನ್ನು ವಿಸ್ತರಣೆ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಮಾರ್ಚ್ ಅಂತ್ಯದವರೆಗೆ ಹೊಸ ಗಡುವು ನೀಡಿ ಆದೇಶ ನೀಡಿದೆ.

    ಪಡಿತರ ಚೀಟಿಗೆ ಇದುವರೆಗೂ ಆಧಾರ್ ಸಂಖ್ಯೆ ಜೋಡಣೆ ಮಾಡದಿರುವ ಎಲ್ಲಾ ನ್ಯಾಯಬೆಲೆ ಅಂಗಡಿ ವರ್ತಕರು ಅಂಗಡಿಗಳನ್ನು ತೆರೆದು ಇ-ಕೆವೈಸಿಯನ್ನು ಕಡ್ಡಾಯವಾಗಿ ಜ.01 ರಿಂದ 31ರವರೆಗೂ ನಿರ್ವಹಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಇ-ಕೆವೈಸಿ ನಿರ್ವಹಿಸಲು ಹೆಚ್ಚುವರಿ ಸರ್ವರ್ ಅವಶ್ಯಕತೆ ಇರುವುದರಿಂದ ತಾತ್ಕಾಲಿಕವಾಗಿ ಜ.7ರವರೆಗೂ ಈ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಜ.8ರ ಬಳಿಕ ಮಾರ್ಚ್ ತಿಂಗಳ ಅಂತ್ಯದವರೆಗೂ ಇ-ಕೆವೈಸಿ ಮಾಡಲು ಅವಕಾಶ ನೀಡಿ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ.

    ಕಳೆದ 4 ವರ್ಷಗಳ ಹಿಂದೆ ಬೋಗಸ್ ಪಡಿತರ ಚೀಟಿ ತಡೆಯುವ ಸಲುವಾಗಿ ಪರಿಶೀಲನಾ ಕಾರ್ಯವನ್ನು ಸರ್ಕಾರ ನಡೆಸಿತ್ತು. ಆದರೆ ಆಧಾರ್ ಜೋಡಣೆ ನಿಯಮ ಜಾರಿಗೊಂಡ ಬಳಿಕ ಪಡಿತರ ಚೀಟಿ ಪರಿಶೀಲನೆ ಕಾರ್ಯ ಕೈಗೊಂಡಿರಲಿಲ್ಲ. ಸದ್ಯ ಮೃತರ ಹೆಸರಿನಲ್ಲೇ ಇರುವ ಪಡಿತರ ಚೀಟಿಯನ್ನು ಮುಂದುವರಿಸುತ್ತಿರುವ ಆರೋಪಗಳಿರುವ ಹಿನ್ನೆಲೆಯಲ್ಲಿ ಇ-ಕೆವೈಸಿ ನಿಯಮ ಜಾರಿ ಮಾಡಲಾಗಿದೆ.

    ಪ್ರಕ್ರಿಯೆ ಹೇಗೆ?
    ಇ-ಕೆವೈಸಿ ದೃಢೀಕರಣ ವೇಳೆ ಎಸ್‍ಟಿ ಮತ್ತು ಎಸ್‍ಸಿ ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಮಾಡಬೇಕಿದೆ. ಎಲ್ಲಾ ಫಲಾನುಭವಿಗಳು ಗ್ಯಾಸ್ ಸಂಪರ್ಕದ ಕುರಿತು ಮಾಹಿತಿ ನೀಡಬೇಕು. ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ದೃಢೀಕರಣ ಮಾಡಿಸಬೇಕು. ಸರ್ಕಾರ ಪ್ರತಿ ಫಲಾನುಭವಿ ದೃಢೀಕರಣಕ್ಕೆ 5 ರೂ.ನಂತೆ, ನೋಂದಣಿಗೆ ಗರಿಷ್ಠ 20 ರೂ.ನಂತೆ ನ್ಯಾಯಬೆಲೆ ಅಂಗಡಿಗಳಿಗೆ ಪಾವತಿಸಲಿದೆ. ವರ್ತಕರಿಗೆ ಇಲಾಖೆಯಿಂದ ನೀಡಿರುವ ಲಾಗಿನ್ ಐಡಿಯಲ್ಲೇ ಇ-ಕೆವೈಸಿ ಮಾಡಿಸಬೇಕು. ಕಾರ್ಡ್ ಸಂಖ್ಯೆ ನಮೂದಿಸಿದರೆ ಎಷ್ಟು ಸದಸ್ಯರಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಸಿಗುತ್ತದೆ. ಬಳಿಕ ಎಲ್ಲರೂ ಆಧಾರ್ ದೃಢೀಕರಣ ಮಾಡಿಸಬೇಕು.

  • ಕಾಳ ಸಂತೆಗೆ ಪಡಿತರ ಅಕ್ಕಿ – 35 ಟನ್ ಜಪ್ತಿ

    ಕಾಳ ಸಂತೆಗೆ ಪಡಿತರ ಅಕ್ಕಿ – 35 ಟನ್ ಜಪ್ತಿ

    ಬೀದರ್: ಅನ್ನ ಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಕಾಳ ಸಂತೆಗೆ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, 35 ಟನ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಹೈದ್ರಾಬಾದ್-ಮುಂಬೈ ಮಾರ್ಗದ ರಾಷ್ಟ್ರೀಯ ಹೆದ್ದಾರಿ-65ರ ಹುಮನಾಬಾದ್ ಕಡೆಯಿಂದ ಲಾರಿಯಲ್ಲಿ ಅಕ್ಕಿ ಸಾಗಿಸಲಾಗುತಿತ್ತು. ಜಿಲ್ಲೆಯ ಬಸವ ಕಲ್ಯಾಣದ ತಡೋಳಾ ಬಳಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಲಾರಿ ಸಹಿತ 35 ಟನ್ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಆಹಾರ ಇಲಾಖೆಯ ನಿರೀಕ್ಷಕರಾದ ರವಿ ಸೂರ್ಯವಂಶಿ ಹಾಗೂ ರಾಮರತನ ದೇಗಲೆ ನೇತೃತ್ವದ ತಂಡ ದಾಳಿ ನಡೆಸಿದೆ. ಕಾಳ ಸಂತೆಯಲ್ಲಿ ಮಾರಾಟ ಮಾಡಲೆಂದು ಬೀದರ್‍ನಿಂದ ಗುಜರಾತಿಗೆ ಅಕ್ಕಿ ಸಾಗಿಸಲಾಗುತಿತ್ತು. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸರ್ಕಾರದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ 2 ಸಾವಿರ ಅಕ್ರಮ ಬಿಪಿಎಲ್ ಕಾರ್ಡ್ ವಾಪಸ್

    ಸರ್ಕಾರದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ 2 ಸಾವಿರ ಅಕ್ರಮ ಬಿಪಿಎಲ್ ಕಾರ್ಡ್ ವಾಪಸ್

    ಚಿತ್ರದುರ್ಗ: ಸರ್ಕಾರದಿಂದ ಕಡು ಬಡವರಿಗೆ ಎಂದು ನೀಡುತ್ತಿರುವ ಬಿಪಿಎಲ್ ಕಾರ್ಡ್ ಪಡೆದು ಅಕ್ಕಿ, ಬೇಳೆ ಪಡೆಯುತಿದ್ದ ಸಾವಿರಾರು ಜನ ಅಕ್ರಮ ಫಲಾನುಭವಿಗಳು ತಮ್ಮ ಪಡಿತರ ಕಾರ್ಡ್ ಗಳನ್ನು ಸರ್ಕಾರಕ್ಕೆ ವಾಪಸ್ ನೀಡಿದ್ದಾರೆ. ಸರ್ಕಾರ ನೀಡಿದ ಖಡಕ್ ಎಚ್ಚರಿಕೆಗೆ ಹೆದರಿದ ಫಲಾನುಭಾವಿಗಳು ಅನಿವಾರ್ಯವಾಗಿ ಆಹಾರ ಇಲಾಖೆಗೆ ಬಂದು ಪಡಿತರ ಚೀಟಿಗಳನ್ನು ವಾಪಸ್ ಮಾಡಿದ್ದಾರೆ.

    ಕಳೆದ ಸೆಪ್ಟಂಬರ್ ತಿಂಗಳಲ್ಲಿ ಸರ್ಕಾರ ತಪ್ಪು ಮಾಹಿತಿ ನೀಡಿ ಪಡೆದ ಅಕ್ರಮ ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಮರಳಿಸಿದರೆ ಉತ್ತಮ. ಇಲ್ಲದೇ ಹೋದಲ್ಲಿ ತಾವು ಪಡಿತರ ಚೀಟಿ ಪಡೆದ ದಿನದಿಂದ ಇಲ್ಲಿಯವರೆಗೂ ಪಡೆದ ಪಡಿತರವನ್ನು, ಹಣದ ರೂಪದಲ್ಲಿ ವಾಪಸ್ ಮರಳಿಸುವುದಲ್ಲದೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ ಎಂದು ಆಹಾರ ಇಲಾಖೆ ಎಚ್ಚರಿಸಿತ್ತು.

    ಈ ಆದೇಶದಿಂದ ಎಚ್ಚತ್ತುಕೊಂಡ ಅಕ್ರಮ ಪಡಿತರ ಕಾರ್ಡ್ ಹೊಂದಿದ್ದ ಚಿತ್ರದುರ್ಗ ಜಿಲ್ಲೆಯ ಹಲವಾರು ಕುಟುಂಬಗಳು ಸುಮಾರು 2,321 ಕಾರ್ಡ್ ಗಳನ್ನು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಅದರಲ್ಲಿ 265 ಕಾರ್ಡಗಳನ್ನು ಸ್ವಯಂಪ್ರೇರಿತರಾಗಿ ಕಚೇರಿಗೆ ಬಂದು ಹಿಂತಿರುಗಿಸಿದ್ದು, ಅವರಲ್ಲಿ 148 ಸರ್ಕಾರಿ ನೌಕರರು ಹಾಗೂ ಇತರ ಕಾರಣಗಳಿಂದ ಕಾರ್ಡ್ ಪಡೆದಿದ್ದ 105 ಸೇರಿದಂತೆ ಒಟ್ಟು 265 ಅಕ್ರಮ ಫಲಾನುಭವಿಗಳು ತಮ್ಮ ಪಡಿತರ ಚೀಟಿಯನ್ನು ಸ್ವಯಂ ಪ್ರೇರಣೆಯಿಂದ ವಾಪಸ್ ಮಾಡಿದ್ದಾರೆ.

    ಹಲವು ಜನರ ಬಳಿ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್‍ಗಳಿವೆ. ಆದರೆ ಅವು ಇನ್ನು ವಾಪಸಾಗಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಸಹ ಸುಮ್ಮನೆ ಕುಳಿತಿಲ್ಲ. ಸ್ವಯಂಪ್ರೇರಣೆಯಿಂದ ವಾಪಸ್ ಮಾಡದೇ ಹೋದಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಇಲಾಖೆ ಈಗ ಸಿದ್ಧತೆ ನಡೆಸುತ್ತಿದೆ.

    ಜೊತೆಗೆ ಇ-ಕೆವೈಸಿ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಕುಟುಂಬ ಸದಸ್ಯರ ಬಯೋ ಅಥೆಂಟಿಕೇಶನ್ ಮಾಡಲಾಗುತ್ತಿದೆ. ಸದ್ಯಕ್ಕೆ 3,54,143 ಜನಸಂಖ್ಯೆಯಿದ್ದು, 4,11,439 ಒಟ್ಟು ಕಾರ್ಡ್‍ಗಳಿವೆ. ಅದರಲ್ಲಿ 1,24,004 ಇ-ಕೆವೈಸಿ ಬಿಪಿಎಲ್ ಕಾರ್ಡ್‍ಗಳು ಮತ್ತು 6,942 ಎಪಿಎಲ್ ಕಾರ್ಡ್ ಗಳಿವೆ. 1,30,946 ಒಟ್ಟು ಇ-ಕೆವೈಸಿಯಾದ ಕಾರ್ಡ್ ಗಳು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರು ಅದಷ್ಟು ಬೇಗ ಸಂಬಂಧ ಪಟ್ಟ ಇಲಾಖೆ ಹಿಂತಿರುಗಿಸಬೇಕು. ಇಲ್ಲವಾದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.