Tag: ಪಡುಬಿದ್ರೆ

  • ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

    ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

    ಉಡುಪಿ: ಹಳಿಯ ಕಬ್ಬಿಣ ಕದ್ದ ಆರೋಪದಲ್ಲಿ ಬಾಲಕರಿಗೆ ಸ್ಥಳದಲ್ಲೇ ಏಟು ನೀಡಿದ್ದಕ್ಕೆ ಕೊಂಕಣ ರೈಲ್ವೇ ಸಿಬ್ಬಂದಿ (Konkan Railway Employee) ವಿರುದ್ಧ ಕೇಸ್‌ ದಾಖಲಾಗಿದೆ.

    ಪಲಿಮಾರು ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಫೆ.15ರಂದು ಮಧ್ಯಾಹ್ನದ ವೇಳೆಗೆ ಇವರಿಬ್ಬರು ರೈಲು ಹಳಿಯ (Railway Track) ಕಬ್ಬಿಣದ ಲಾಕ್ ಮತ್ತು ತುಂಡುಗಳನ್ನು ಕದಿಯುತ್ತಿದ್ದರು.

    ಎಂದಿನಂತೆ ಪರೀಕ್ಷೆ ಮಾಡಲು ಹಳಿಯಲ್ಲಿ ಬರುತ್ತಿದ್ದಾಗ ರೈಲ್ವೇ ಗ್ಯಾಂಗ್‌ಮ್ಯಾನ್‌ ಶಾಲಾ ಸಮವಸ್ತ್ರದಲ್ಲಿರುವ ಇಬ್ಬರು ಬಾಲಕರನ್ನು ನೋಡಿದ್ದಾರೆ. ಸ್ಥಳದಲ್ಲಿ ಕಬ್ಬಿಣದ ತುಂಡುಗಳನ್ನು ನೋಡಿ ಶಾಕ್‌ ಆಗಿ “ಇಲ್ಲಿ ಏನು ಮಾಡುತ್ತಿದ್ದೀರಿ? ಹಳಿಯ ಕಬ್ಬಿಣವನ್ನು ಕಳ್ಳತನ ಮಾಡುತ್ತಿದ್ದೀರಾ? ಯಾವ ಶಾಲೆಯಲ್ಲಿ ಓದುತ್ತಿದ್ದೀರಿ? ನಿಮ್ಮ ತಂದೆ ತಾಯಿ ಯಾರು” ಎಂದು ಪ್ರಶ್ನಿಸಿ ಕೋಲಿನಿಂದ ಒಬ್ಬನ ತಲೆಗೆ ಹಾಗೂ ಮತ್ತೋರ್ವನ ಕಾಲಿಗೆ ಹೊಡೆದಿದ್ದರು. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ!

    ಇಬ್ಬರು ಬಾಲಕರಿಗೆ ಗದರಿಸುತ್ತಿರುವ ದೃಶ್ಯವನ್ನು ಗ್ಯಾಂಗ್‌ಮ್ಯಾನ್‌ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಈಗ ಕರಾವಳಿ ಭಾಗದ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಕೇಸ್‌ ದಾಖಲು:
    ಇಡೀ ಘಟನೆಯ ವೀಡಿಯೋವನ್ನು ಮಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿ ಓರ್ವ ಬಾಲಕನ ತಂದೆ ರೈಲ್ವೇ ಸಿಬ್ಬಂದಿ ವಿರುದ್ಧ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದು ಈಗ ಪ್ರಕರಣ ದಾಖಲಾಗಿದೆ. ಪಡುಬಿದ್ರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

     

  • ಪಡುಬಿದ್ರೆ ಬೀಚ್ ಅಬ್ಬರ- ಗೃಹ ಸಚಿವರ ಮೇಲೆ ಅಪ್ಪಳಿಸಿದ ಸಮುದ್ರದಲೆ

    ಪಡುಬಿದ್ರೆ ಬೀಚ್ ಅಬ್ಬರ- ಗೃಹ ಸಚಿವರ ಮೇಲೆ ಅಪ್ಪಳಿಸಿದ ಸಮುದ್ರದಲೆ

    ಉಡುಪಿ: ರಾಜ್ಯ ಗೃಹ ಸಚಿವ ಉಡುಪಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಮೇಲೆ ಸಮುದ್ರ ರಾಜ ಎರಗಿದ್ದಾನೆ. ಉಡುಪಿಯ ನೆರೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡ ಸಂದರ್ಭ ಸಮುದ್ರದ ಅಲೆ ಸಚಿವ ಬೊಮ್ಮಾಯಿ ಅವರಿಗೆ ಬಡಿದಿದೆ.

    ಉಡುಪಿ ಜಿಲ್ಲೆ ಕಾಪು ತಾಲೂಕು ಪಡುಬಿದ್ರೆ ಕಡಲಕಿನಾರೆಗೆ ಬಸವರಾಜ್ ಬೊಮ್ಮಾಯಿ ಮೊದಲ ಭೇಟಿ ಕೊಟ್ಟರು. ಸಮುದ್ರ ಕೊರೆತ ವೀಕ್ಷಿಸಿದ ಬೊಮ್ಮಾಯಿ, ಅರಬ್ಬಿ ಸಮುದ್ರಕ್ಕೆ ಇಳಿದರು. ಈ ಸಂದರ್ಭ ಬೃಹತ್ ಗಾತ್ರದ ಅಲೆ ಗೃಹ ಸಚಿವ ಬೊಮ್ಮಾಯಿ ಮೇಲೆರಗಿದೆ. ಗೃಹಸಚಿವರ ಒಂದು ಚಪ್ಪಲಿಯನ್ನು ಅಲೆ ಕೊಚ್ಚಿಕೊಂಡು ಹೋಗಿದೆ. ಇನ್ನೊಂದು ದೊಡ್ಡ ಅಲೆ ಸಚಿವರ ಮೇಲೆ ಅಪ್ಪಳಿಸಿದೆ. ಸಚಿವರು ಅರ್ಧ ಒದ್ದೆಯಾದರು.

    ಸ್ಥಳದಲ್ಲಿದ್ದು ಬಿಜೆಪಿ ನಾಯಕರು ಬಸವರಾಜ್ ಬೊಮ್ಮಾಯಿ ರಕ್ಷಣೆಗೆ ಬಂದಿದ್ದಾರೆ. ಕ್ಷಣಾರ್ಧದಲ್ಲಿ ಉಡುಪಿ ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕಾಗಮಿಸಿ ಗೃಹ ಸಚಿವರ ರಕ್ಷಣೆ ಮಾಡಿದ್ದಾರೆ. ಗೃಹ ಸಚಿವರ ಚಪ್ಪಲಿಯನ್ನು ಎತ್ತಿಕೊಂಡು ಹೋಗಿದ್ದ ಸಮುದ್ರದ ಚಪ್ಪಲಿಯನ್ನು ದಡಕ್ಕೆ ಎಸೆದಿದೆ. ಬೊಮ್ಮಾಯಿ ಇಂದು ಕಾರ್ಕಳ, ಹೆಬ್ರಿ, ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನಲ್ಲಿ ನೆರೆ ಪ್ರವಾಸ ಮಾಡಲಿದ್ದಾರೆ.

  • ಹೈವೇ ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹಿಸಿದ್ದಕ್ಕೆ ಪಡುಬಿದ್ರೆ, ಸಾಸ್ತಾನದಲ್ಲಿ ಪ್ರತಿಭಟನೆ

    -ಮುಂಜಾಗ್ರತ ಕ್ರಮವಾಗಿ ಗೇಟ್ 2 ಕಿಮೀ ವ್ಯಾಪ್ತಿ ನಿಷೇಧಾಜ್ಞೆ ಜಾರಿ

    ಉಡುಪಿ: ಜಿಲ್ಲೆಯ ಪಡುಬಿದ್ರೆ ಹಾಗೂ ಸಾಸ್ತಾನ ಟೋಲ್ ಗೇಟ್ ಪ್ರತಿಭಟನೆಯ ಕಾವು ಏರಿದೆ. ಮುಂಜಾಗ್ರತಾ ಕ್ರಮವಾಗಿ ಹೆಜಮಾಡಿ ಹಾಗೂ ಕೋಟ ಟೋಲ್ ಗೇಟ್ ವ್ಯಾಪ್ತಿಯ 2 ಕಿಮಿ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

    ಉಡುಪಿಯಲ್ಲಿ ಹೈವೇ ಕಾಮಗಾರಿ ಪೂರ್ಣಗೊಂಡಿಲ್ಲ. ಈ ನಡುವೆಯೇ ಟೋಲ್ ಸಂಗ್ರಹ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದರ ವಿರುದ್ಧ ಸ್ಥಳೀಯ ಹೋರಾಟಗಾರರು ಸಿಡಿದೆದ್ದಿದ್ದಾರೆ. ಪರಿಸ್ಥಿತಿ ಕೈಮೀರಬಹುದು ಎಂಬ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ವ್ಯಾಪ್ತಿಯ ಸರಹದ್ದಿನ ಹೆಜಮಾಡಿ ಟೋಲ್ ಗೇಟ್ ಮತ್ತು ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನ ಗುಂಡ್ಮಿ ಟೋಲ್ ಗೇಟಿನಲ್ಲಿ ಫೆಬ್ರವರಿ 9 ರಿಂದ ಟೋಲ್ ಸಂಗ್ರಹ ಮಾಡಲು ಆರಂಭಿಸಿದ್ದು, ಈ ಸಂಬಂಧ ಪ್ರತಿಭಟನೆ, ಮುಷ್ಕರ, ಬಂದ್ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗವಾಗುವ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುವ ಸಾಧ್ಯತೆಯಿರುವುದರಿಂದ ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ಸರಹದ್ದಿನ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸೆಕ್ಷನ್ ಹಾಕಿರುವುದಾಗಿ ಹೇಳಿದ್ದಾರೆ.

    ಕುಂದಾಪುರ ಸಮೀಪದ ಸಾಸ್ತಾನ ಗುಂಡ್ಮಿ ಟೋಲ್ ಗೇಟಿನ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 10 ರ ಬೆಳಿಗ್ಗೆ 6 ರಿಂದ ಫೆಬ್ರವರಿ 15 ರ ಮಧ್ಯರಾತ್ರಿ 12 ಗಂಟೆಯವರಗೆ ಸೆಕ್ಷನ್ 144 ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೆಗೊಳಿಸುವಂತೆ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ.

    ಜಿಲ್ಲಾಧಿಕಾರಿಗಳ ಮನವಿಯಂತೆ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗೇಟ್ ಪ್ರದೇಶ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕ ಆಸ್ತಿ ಕಾಪಾಡುವ ಅವಶ್ಯಕತೆ ಕಂಡು ಬಂದಿರುವುದರಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಎಸ್.ಪಿ ಕೆ.ಟಿ ಬಾಲಕೃಷ್ಣ ಹೇಳಿದ್ದಾರೆ.